Daniel 3
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVI
1 ಅರಸನಾದ ನೆಬೂಕದ್ನೆಚ್ಚರನು ಒಂದು ಬಂಗಾರದ ವಿಗ್ರಹವನ್ನು ಮಾಡಿಸಿದ್ದನು. ಆ ವಿಗ್ರಹವು ಅರವತ್ತು ಮೊಳ ಎತ್ತರವಾಗಿತ್ತು. ಆರು ಮೊಳ ಅಗಲವಾಗಿತ್ತು. ಆ ವಿಗ್ರಹವನ್ನು ಬಾಬಿಲೋನ್ ಪ್ರಾಂತ್ಯದ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.
1 O rei Nabucodonosor fez uma imagem de ouro de vinte e sete metros de altura e dois metros e setenta centímetros de largura, e a ergueu na planície de Dura, na província da Babilônia.
2 ಅರಸನು ಆ ವಿಗ್ರಹದ ಪ್ರತಿಷ್ಠಾಪನೆಯ ಮಹೋತ್ಸವಕ್ಕೆ ಉಪರಾಜರನ್ನು, ನಾಯಕರನ್ನು, ದೇಶಾಧಿಪತಿಗಳನ್ನು, ಮಂತ್ರಿಗಳನ್ನು, ಕೋಶಾಧ್ಯಕ್ಷರನ್ನು, ನ್ಯಾಯಾಧಿಪತಿಗಳನ್ನು ಮತ್ತು ಉಳಿದೆಲ್ಲ ಅಧಿಕಾರಿಗಳನ್ನು ಕರೆಸಿದನು.
2 Depois convocou os sátrapas, os prefeitos, os governadores, os conselheiros, os tesoureiros, os juízes, os magistrados e todas as autoridades provinciais para assistirem à dedicação da imagem que mandara erguer.
3 ಅವರೆಲ್ಲರು ಬಂದು ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ವಿಗ್ರಹದ ಎದುರಿಗೆ ನಿಂತುಕೊಂಡರು.
3 Assim todos eles, sátrapas, prefeitos, governadores, conselheiros, tesoureiros, juízes, magistrados e todas as autoridades provinciais se reuniram para a dedicação da imagem que o rei Nabucodonosor mandara erguer, e ficaram de pé diante dela.
4 ಆಗ ಸಾರುವವನು ದೊಡ್ಡ ಧ್ವನಿಯಲ್ಲಿ, “ವಿವಿಧ ಜನಾಂಗ, ಕುಲ, ಭಾಷೆಗಳ ಜನರೇ, ನಾನು ಹೇಳುವುದನ್ನು ಕೇಳಿರಿ.
4 Então o arauto proclamou em alta voz: "Esta é a ordem que lhes é dada, ó homens de todas nações, povos e línguas:
5 ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೇ ನೀವು ಅಡ್ಡಬೀಳಬೇಕು. ಇದು ರಾಜಾಜ್ಞೆ. ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಬಂಗಾರದ ವಿಗ್ರಹವನ್ನು ಪೂಜಿಸಬೇಕು. ಅರಸನಾದ ನೆಬೂಕದ್ನೆಚ್ಚರನು ಈ ವಿಗ್ರಹವನ್ನು ನಿಲ್ಲಿಸಿದ್ದಾನೆ.
5 Quando ouvirem o som da trombeta, do pífaro, da cítara, da harpa, do saltério, da flauta dupla e de toda espécie de música, prostrem-se em terra e adorem a imagem de ouro que o rei Nabucodonosor ergueu.
6 ಯಾರಾದರೂ ಈ ಬಂಗಾರದ ವಿಗ್ರಹಕ್ಕೆ ಅಡ್ಡಬೀಳದಿದ್ದರೆ ಮತ್ತು ಪೂಜಿಸದಿದ್ದರೆ ತಕ್ಷಣ ಅವರನ್ನು ಬೆಂಕಿಯ ಕೊಂಡಕ್ಕೆ ಎಸೆಯಲಾಗುವುದು” ಎಂದು ಸಾರಿದನು.
6 Quem não se prostrar em terra e não adorá-la será imediatamente atirado numa fornalha em chamas".
7 ಆದ್ದರಿಂದ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅವರು ಅಡ್ಡಬಿದ್ದು ಬಂಗಾರದ ವಿಗ್ರಹವನ್ನು ಪೂಜಿಸಿದರು. ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ವಿಗ್ರಹವನ್ನು ಎಲ್ಲ ಜನಾಂಗಗಳ, ಭಾಷೆಗಳ ಜನರು ಪೂಜಿಸಿದರು.
7 Por isso, logo que ouviram o som da trombeta, do pífaro, da cítara, da harpa, do saltério e de toda espécie de música, os homens de todas nações, povos e línguas prostraram-se em terra e adoraram a imagem de ouro que o rei Nabucodonosor mandara erguer.
8 ಆಗ ಕೆಲವು ಜನ ಕಲ್ದೀಯರು ಅರಸನ ಬಳಿಗೆ ಬಂದು ಅವರು ಯೆಹೂದ್ಯರ ವಿರುದ್ಧ ಮಾತನಾಡತೊಡಗಿದರು.
8 Nesse momento alguns astrólogos se aproximaram e denunciaram os judeus,
9 ಅರಸನಾದ ನೆಬೂಕದ್ನೆಚ್ಚರನಿಗೆ ಅವರು, “ಮಹಾರಾಜನೇ, ಚಿರಂಜೀವಿಯಾಗಿರು!
9 dizendo ao rei Nabucodonosor: "Ó rei, vive para sempre!
10 ಅರಸನೇ, ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಪ್ರತಿಯೊಬ್ಬನೂ ಅಡ್ಡಬಿದ್ದು ಬಂಗಾರದ ವಿಗ್ರಹವನ್ನು ಪೂಜಿಸಬೇಕು ಎಂದು ತಾವು ಆಜ್ಞೆ ಕೊಟ್ಟಿದ್ದೀರಿ.
10 Tu emitiste um decreto, ó rei, ordenando que todo o que ouvisse o som da trombeta, do pífaro, da cítara, da harpa, do saltério, da flauta dupla e de toda espécie de música se prostrasse em terra e adorasse a imagem de ouro,
11 ಯಾರಾದರೂ ಅಡ್ಡಬಿದ್ದು ಬಂಗಾರದ ವಿಗ್ರಹವನ್ನು ಪೂಜಿಸದಿದ್ದರೆ ಅವರನ್ನು ಉರಿಯುವ ಬೆಂಕಿಯ ಕೊಂಡದಲ್ಲಿ ಎಸೆಯಲಾಗುವುದೆಂದು ಕೂಡ ತಾವು ಹೇಳಿದ್ದೀರಿ.
11 e que todo o que não se prostrasse em terra e não a adorasse seria atirado numa fornalha em chamas.
12 ಅರಸನೇ, ಕೆಲವು ಜನ ಯೆಹೂದ್ಯರು ತಮ್ಮ ಆಜ್ಞೆಯನ್ನು ಪಾಲಿಸಲಿಲ್ಲ. ಆ ಯೆಹೂದ್ಯರನ್ನು ತಾವು ಬಾಬಿಲೋನ್ ಪ್ರಾಂತ್ಯದಲ್ಲಿ ಪ್ರಮುಖ ಅಧಿಕಾರಿಗಳನ್ನಾಗಿ ನೇಮಿಸಿದ್ದೀರಿ. ಅವರ ಹೆಸರುಗಳು, ಶದ್ರಕ್, ಮೇಶಕ್, ಅಬೇದ್‌ನೆಗೋ ಎಂದು. ಅವರು ನಿಮ್ಮ ದೇವರುಗಳನ್ನು ಪೂಜಿಸುವುದಿಲ್ಲ. ನೀವು ನಿಲ್ಲಿಸಿದ ಬಂಗಾರದ ವಿಗ್ರಹಕ್ಕೆ ಅಡ್ಡಬಿದ್ದು ಪೂಜಿಸುವದಿಲ್ಲ” ಎಂದು ಚಾಡಿ ಹೇಳಿದರು.
12 Mas há alguns judeus que nomeaste para administrar a província da Babilônia, Sadraque, Mesaque e Abede-Nego, que não te dão ouvidos, ó rei. Não prestam culto aos teus deuses nem adoram a imagem de ouro que mandaste erguer".
13 ನೆಬೂಕದ್ನೆಚ್ಚರನಿಗೆ ಬಹಳ ಕೋಪ ಬಂತು. ಅವನು ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಕರೆಸಿದನು. ಅವರನ್ನು ಅರಸನ ಬಳಿಗೆ ಕರೆದುತರಲಾಯಿತು.
13 Furioso, Nabucodonosor mandou chamar Sadraque, Mesaque e Abede-Nego. E assim que eles foram conduzidos à presença do rei,
14 ನೆಬೂಕದ್ನೆಚ್ಚರನು ಅವರಿಗೆ, “ಶದ್ರಕ್, ಮೇಶಕ್, ಅಬೆದ್‌ನೆಗೋ, ನೀವು ನನ್ನ ದೇವರುಗಳನ್ನು ಪೂಜಿಸುವುದಿಲ್ಲವಂತೆ, ಇದು ನಿಜವೇ? ನಾನು ನಿಲ್ಲಿಸಿದ ಬಂಗಾರದ ವಿಗ್ರಹವನ್ನು ನೀವು ಅಡ್ಡಬಿದ್ದು ಪೂಜಿಸಲಿಲ್ಲವಂತೆ, ಇದು ನಿಜವೇ?
14 Nabucodonosor lhes disse: "É verdade, Sadraque, Mesaque e Abede-Nego, que vocês não prestam culto aos meus deuses nem adoram a imagem de ouro que mandei erguer?
15 ಈಗಲಾದರೋ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ಚಿನ್ನದ ವಿಗ್ರಹವನ್ನು ಪೂಜಿಸಬೇಕು. ನಾನು ಮಾಡಿಸಿದ ಈ ವಿಗ್ರಹವನ್ನು ಪೂಜಿಸಲು ನೀವು ಸಿದ್ಧರಾಗಿದ್ದರೆ ಸರಿ. ನೀವು ಅದನ್ನು ಪೂಜಿಸದಿದ್ದರೆ ತಕ್ಷಣ ನಿಮ್ಮನ್ನು ಉರಿಯುವ ಕೊಂಡದಲ್ಲಿ ಎಸೆಯಲಾಗುವುದು. ಆಗ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವುದು ಯಾವ ದೇವರಿಗೂ ಸಾಧ್ಯವಾಗಲಾರದು” ಎಂದು ಹೇಳಿದನು.
15 Agora, porém, quando vocês ouvirem o som da trombeta, do pífaro, da cítara, da harpa, do saltério, da flauta dupla e de toda espécie de música, se vocês se dispuserem a prostrar-se em terra e a adorar a imagem que eu fiz, será melhor para vocês. Mas, se não a adorarem, serão imediatamente atirados numa fornalha em chamas. E que deus poderá livrá-los das minhas mãos? "
16 ಇದನ್ನು ಕೇಳಿ ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವವರು ಅರಸನಿಗೆ, “ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಏನೂ ಹೇಳಬೇಕಾಗಿಲ್ಲ.
16 Sadraque, Mesaque e Abede-Nego responderam ao rei: "Ó Nabucodonosor, não precisamos defender-nos diante de ti.
17 ನೀನು ನಮ್ಮನ್ನು ಉರಿಯುವ ಕೊಂಡದಲ್ಲಿ ಎಸೆದರೆ ನಾವು ಆರಾಧಿಸುವ ದೇವರು ನಮ್ಮನ್ನು ರಕ್ಷಿಸಬಲ್ಲನು. ಆತನು ಇಚ್ಛಿಸಿದರೆ ನಮ್ಮನ್ನು ನಿನ್ನ ಕೈಯಿಂದ ಬಿಡಿಸಬಲ್ಲನು.
17 Se formos atirados na fornalha em chamas, o Deus a quem prestamos culto pode livrar-nos, e ele nos livrará das suas mãos, ó rei.
18 ಅರಸನೇ, ಒಂದುವೇಳೆ ದೇವರು ನಮ್ಮನ್ನು ರಕ್ಷಿಸದಿದ್ದರೂ ನಾವು ನಿನ್ನ ದೇವರುಗಳನ್ನು ಪೂಜಿಸುವುದಿಲ್ಲ. ನೀನು ನಿಲ್ಲಿಸಿದ ಬಂಗಾರದ ವಿಗ್ರಹವನ್ನು ಪೂಜಿಸುವುದಿಲ್ಲ. ಇದು ನಿನಗೆ ತಿಳಿದಿರಲಿ” ಎಂದು ಖಂಡಿತವಾಗಿ ಹೇಳಿದರು.
18 Mas, se ele não nos livrar, saiba, ó rei, que não prestaremos culto aos seus deuses nem adoraremos a imagem de ouro que mandaste erguer".
19 ಆಗ ನೆಬೂಕದ್ನೆಚ್ಚರನಿಗೆ ಬಹಳ ಕೋಪ ಬಂತು. ಶದ್ರಕ್, ಮೇಶಕ್, ಅಬೇದ್‌ನೆಗೋ ಅವರ ವಿರುದ್ಧವಾಗಿ ಅವನ ಮುಖಭಾವವು ಕೆರಳಿತು. ಕುಲುಮೆಯನ್ನು ಏಳರಷ್ಟು ಹೆಚ್ಚಾಗಿ ಉರಿಸಬೇಕೆಂದು ಆಜ್ಞಾಪಿಸಿದನು.
19 Nabucodonosor ficou tão furioso com Sadraque, Mesaque e Abede-Nego, que o seu semblante mudou. Deu ordens para que a fornalha fosse aquecida sete vezes mais do que de costume
20 ಆಮೇಲೆ ನೆಬೂಕದ್ನೆಚ್ಚರನು, ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಬಂಧಿಸಿ ಉರಿಯುವ ಕೊಂಡದಲ್ಲಿ ಎಸೆಯಬೇಕೆಂದು ತನ್ನ ಸೈನ್ಯದಲ್ಲಿದ್ದ ಅತಿ ಬಲಶಾಲಿಗಳಾದ ಕೆಲವರಿಗೆ ಆಜ್ಞಾಪಿಸಿದನು.
20 e ordenou que alguns dos soldados mais fortes do seu exército amarrassem Sadraque, Mesaque e Abede-Nego e os atirassem na fornalha em chamas.
21 ಅವರು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರನ್ನು ಚೆನ್ನಾಗಿ ಬಿಗಿದುಕಟ್ಟಿ ಉರಿಯುವ ಕೊಂಡದಲ್ಲಿ ಎಸೆದರು. ಅವರು ತಮ್ಮ ಶಲ್ಯ, ಇಜಾರು, ಟೊಪ್ಪಿಗೆ ಮೊದಲಾದ ಉಡುಪನ್ನು ಧರಿಸಿಕೊಂಡಿದ್ದರು.
21 E os três homens, vestidos com seus mantos, calções, turbantes e outras roupas, foram amarrados e atirados na fornalha extraordinariamente quente.
22 ಆಜ್ಞೆಯನ್ನು ಕೊಟ್ಟಾಗ ಅರಸನು ತುಂಬ ಕೋಪದಲ್ಲಿದ್ದನು. ಆದ್ದರಿಂದ ತಕ್ಷಣ ಕುಲುಮೆಯಲ್ಲಿ ಅತಿ ಹೆಚ್ಚು ಬೆಂಕಿಯನ್ನು ಉರಿಸಲಾಯಿತು. ಆ ಜ್ವಾಲೆ ಎಷ್ಟು ಭಯಂಕರವಾಗಿತ್ತೆಂದರೆ ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಕುಲುಮೆಯಲ್ಲಿ ಎಸೆಯಲು ಹೋದ ಶಕ್ತಿಶಾಲಿಗಳಾದ ಸೈನಿಕರೇ ಅದರ ತಾಪಕ್ಕೆ ಸತ್ತುಹೋದರು.
22 A ordem do rei era tão urgente e a fornalha estava tão quente que as chamas mataram os soldados que levaram Sadraque, Mesaque e Abede-Nego,
23 ಶದ್ರಕ್, ಮೇಶಕ್, ಅಬೇದ್‌ನೆಗೋ ಈ ಮೂವರು ಕಟ್ಟಲ್ಪಟ್ಟವರಾಗಿ ಧಗಧಗನೆ ಉರಿಯುವ ಬೆಂಕಿಯಲ್ಲಿ ಬಿದ್ದುಬಿಟ್ಟರು.
23 os quais caíram amarrados dentro da fornalha em chamas.
24 ಅರಸನಾದ ನೆಬೂಕದ್ನೆಚ್ಚರನು ಬೆಚ್ಚಿ ತಟ್ಟನೆ ಎದ್ದುನಿಂತನು. ಅವನು ಆಶ್ಚರ್ಯಚಕಿತನಾಗಿ ತನ್ನ ಮಂತ್ರಿಗಳನ್ನು, “ನಾವು ಕೇವಲ ಮೂರು ಜನರನ್ನು ಕಟ್ಟಿದೆವು, ಕೇವಲ ಮೂರು ಜನರನ್ನು ಬೆಂಕಿಯಲ್ಲಿ ಎಸೆದೆವು. ಹೌದಲ್ಲವೇ?” ಎಂದು ಕೇಳಿದನು.
24 Mas, logo depois o rei Nabucodonosor, alarmado, levantou-se e perguntou aos seus conselheiros: "Não foram três homens amarrados que nós atiramos no fogo? " Eles responderam: "Sim, ó rei".
25 ಆಗ ಅರಸನು, “ನೋಡಿರಿ, ನಾಲ್ಕು ಜನರು ಬೆಂಕಿಯಲ್ಲಿ ತಿರುಗಾಡುತ್ತಿರುವುದು ನನಗೆ ಕಾಣುತ್ತಿದೆ. ಅವರು ಕಟ್ಟಲ್ಪಟ್ಟಿಲ್ಲ. ಅವರನ್ನು ಬೆಂಕಿಯು ಸುಟ್ಟಿಲ್ಲ. ನಾಲ್ಕನೆಯವನು ದೇವಕುಮಾರನಂತೆ ಕಾಣುತ್ತಾನೆ” ಎಂದು ಹೇಳಿದನು.
25 E o rei exclamou: "Olhem! Estou vendo quatro homens, desamarrados e ilesos, andando pelo fogo, e o quarto se parece com um filho dos deuses".
26 ಆಗ ನೆಬೂಕದ್ನೆಚ್ಚರನು ಉರಿಯುವ ಕೊಂಡದ ಬಾಯಿಯ ಬಳಿಗೆ ಹೋಗಿ, “ಮಹೋನ್ನತನಾದ ದೇವರ ಸೇವಕರಾದ ಶದ್ರಕ್, ಮೇಶಕ್, ಅಬೆದ್‌ನೆಗೋ ಎಂಬವರೇ ಬನ್ನಿ, ಹೊರಗೆ ಬನ್ನಿ” ಎಂದು ಕೂಗಿದನು.
26 Então Nabucodonosor aproximou-se da entrada da fornalha em chamas e gritou: "Sadraque, Mesaque e Abede-Nego, servos do Deus Altíssimo, saiam! Venham aqui! " E Sadraque, Mesaque e Abede-Nego saíram do fogo.
27 ಅವರು ಹೊರಗೆ ಬಂದ ಮೇಲೆ ಉಪರಾಜರು, ನಾಯಕರು, ದೇಶಾಧಿಪತಿಗಳು, ಮಂತ್ರಿಗಳು ಮತ್ತು ಇತರರು ಅವರ ಸುತ್ತಲೂ ನೆರೆದರು. ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಬೆಂಕಿಯು ಸುಟ್ಟಿಲ್ಲ. ಅವರ ದೇಹಕ್ಕೆ ಬೆಂಕಿಯು ಮುಟ್ಟಿಲ್ಲ. ಅವರ ಕೂದಲಿಗೂ ವಸ್ತ್ರಗಳಿಗೂ ಬೆಂಕಿಯು ತಾಕಿಲ್ಲ. ಬೆಂಕಿಯ ಸಮೀಪಕ್ಕೆ ಹೋದ ವಾಸನೆಯೂ ಅವರಿಗೆ ಮುಟ್ಟಿಲ್ಲ ಎಂಬುದನ್ನು ಅವರು ತಿಳಿದುಕೊಂಡರು.
27 Os sátrapas, os prefeitos, os governadores e os conselheiros do rei se ajuntaram em torno deles e comprovaram que o fogo não tinha ferido o corpo deles. Nem um só fio do cabelo tinha sido chamuscado, os seus mantos não estavam queimados, e não havia cheiro de fogo neles.
28 ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳ ದೇವರಿಗೆ ಸ್ತೋತ್ರವಾಗಲಿ. ಅವರ ದೇವರು ತನ್ನ ದೂತನನ್ನು ಕಳುಹಿಸಿ ತನ್ನ ಸೇವಕರನ್ನು ಬೆಂಕಿಯಿಂದ ರಕ್ಷಿಸಿದ್ದಾನೆ. ಈ ಮೂರು ಜನರು ತಮ್ಮ ದೇವರ ಮೇಲೆ ವಿಶ್ವಾಸವಿಟ್ಟರು. ಅವರು ನನ್ನ ಆಜ್ಞೆಯನ್ನು ಪಾಲಿಸಲು ಒಪ್ಪಲಿಲ್ಲ. ಬೇರೆ ಯಾವ ದೇವರನ್ನೂ ಪೂಜಿಸುವುದಕ್ಕೆ ಅಥವಾ ಸೇವಿಸುವುದಕ್ಕೆ ಬದಲಾಗಿ ಸಾಯಲು ಅವರು ಸಿದ್ಧರಾಗಿದ್ದರು.
28 Disse então Nabucodonosor: "Louvado seja o Deus de Sadraque, Mesaque e Abede-Nego, que enviou o seu anjo e livrou os seus servos! Eles confiaram nele, desafiaram a ordem do rei, preferindo abrir mão de suas vidas a que prestar culto e adorar a outro deus, que não fosse o seu próprio Deus.
29 ನಾನು ಈಗ ಸಕಲ ಜನಾಂಗ, ಕುಲ, ಭಾಷೆಗಳ ಜನರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್‌ನೆಗೋ ಇವರ ದೇವರ ವಿರುದ್ಧವಾಗಿ ಮಾತನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ. ಬೇರೆ ಯಾವ ದೇವರೂ ತನ್ನ ಭಕ್ತರನ್ನು ಈ ರೀತಿ ರಕ್ಷಿಸಲಾರನು” ಎಂದು ಹೇಳಿದನು.
29 Por isso eu decreto que todo homem de qualquer povo, nação e língua que disser alguma coisa contra o Deus de Sadraque, Mesaque e Abede-Nego seja despedaçado e sua casa seja transformada em montes de entulho, pois nenhum outro deus é capaz de livrar ninguém dessa maneira".
30 ಬಳಿಕ ರಾಜನು ಶದ್ರಕ್, ಮೇಶಕ್ ಮತ್ತು ಅಬೇದ್‌ನೆಗೋ ಈ ಮೂವರಿಗೆ ಬಾಬಿಲೋನ್ ಸಂಸ್ಥಾನದಲ್ಲಿ ಹೆಚ್ಚು ಮಹತ್ವದ ಪದವಿಗಳನ್ನು ಕೊಟ್ಟನು.
30 Então o rei promoveu Sadraque, Mesaque e Abede-Nego a melhores posições na província da Babilônia.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Daniel 3, comparar traduções ou montar um estudo — tudo direto pelo WhatsApp.