Deuteronômio 25
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARIB
1 “ನಿಮ್ಮಲ್ಲಿ ಯಾರಿಗಾದರೂ ಇಬ್ಬರಿಗೆ ವಾಗ್ವಾದವಿದ್ದಲ್ಲಿ ಅವರು ಅದನ್ನು ನ್ಯಾಯಸ್ಥಾನಕ್ಕೆ ತೆಗೆದುಕೊಂಡು ಹೋಗಲಿ. ಅಲ್ಲಿ ನ್ಯಾಯಾಧೀಶರು ಯಾರು ಸರಿ ಯಾರು ತಪ್ಪು ಎಂದು ತೀರ್ಮಾನಿಸುವರು.
1 Se houver contenda entre alguns, e vierem a juízo para serem julgados, justificar-se-á ao inocente, e ao culpado condenar-se-á.
2 ನ್ಯಾಯಾಧೀಶರು ಒಬ್ಬನಿಗೆ ಕೊರಡೆ ಏಟು ಕೊಡಬೇಕೆಂದು ತೀರ್ಮಾನಿಸಿದರೆ ಅವನು ಆ ಶಿಕ್ಷೆ ಹೊಂದುವವನನ್ನು ಬೋರಲು ಮಲಗಿಸಿ ನ್ಯಾಯಾಧೀಶನ ಕಣ್ಣು ಮುಂದೆ ಅವನಿಗೆ ಕೊರಡೆ ಏಟು ಹೊಡಿಸಬೇಕು. ಅವನ ಅಪರಾಧಕ್ಕನುಸಾರವಾಗಿ ಕೊರಡೆ ಏಟುಗಳ ಸಂಖ್ಯೆಯು ಏರುವದು.
2 E se o culpado merecer açoites, o juiz fará que ele se deite e seja açoitado na sua presença, de acordo com a gravidade da sua culpa.
3 ಒಬ್ಬನಿಗೆ ನಲವತ್ತು ಕೊರಡೆ ಏಟುಗಳಿಗಿಂತ ಹೆಚ್ಚಾಗಿ ಹೊಡೆಯಬಾರದು. ಅದಕ್ಕಿಂತ ಹೆಚ್ಚು ಹೊಡೆದರೆ ಅವನ ಪ್ರಾಣವು ನಿಮ್ಮ ದೃಷ್ಟಿಗೆ ಅಮೂಲ್ಯವಾಗಿಲ್ಲವೆಂದು ತಿಳಿದುಬರುತ್ತದೆ.
3 Até quarenta açoites lhe poderá dar, não mais; para que, porventura, se lhe der mais açoites do que estes, teu irmão não fique envilecido aos teus olhos.
4 “ಕಣವನ್ನು ತುಳಿಯಲು ಎತ್ತುಗಳನ್ನು ಉಪಯೋಗಿಸುವಾಗ ಅವುಗಳು ಧಾನ್ಯ ತಿನ್ನುತ್ತವೆ ಎಂದು ಅವುಗಳ ಬಾಯಿಗಳನ್ನು ಕಟ್ಟಬಾರದು.
4 Não atarás a boca ao boi quando estiver debulhando.
5 “ಇಬ್ಬರು ಅಣ್ಣತಮ್ಮಂದಿರು ಜೀವಿಸುತ್ತಿರುವಾಗ ಒಬ್ಬನು ಮಕ್ಕಳಿಲ್ಲದೆ ಸತ್ತುಹೋದರೆ ಅವನ ಹೆಂಡತಿಯು ಕುಟುಂಬದಿಂದ ಹೊರಗೆ ಮದುವೆಯಾಗಬಾರದು. ಅವಳ ಮೈದುನ ಆಕೆಯನ್ನು ಮದುವೆಯಾಗಿ, ತನ್ನ ಮೈದುನ ಧರ್ಮವನ್ನು ನೆರವೇರಿಸಬೇಕು.
5 Se irmãos morarem juntos, e um deles morrer sem deixar filho, a mulher do falecido não se casará com homem estranho, de fora; seu cunhado estará com ela, e a tomará por mulher, fazendo a obrigação de cunhado para com ela.
6 ಅವಳಿಗೆ ಅವನಿಂದ ಹುಟ್ಟುವ ಮೊದಲನೆಯ ಮಗು ಅವಳ ಮೊದಲನೆಯ ಗಂಡನಿಗೆ ಸೇರಿದ್ದೆಂದು ಪರಿಗಣಿಸಲ್ಪಡಬೇಕು. ಹೀಗೆ ಸತ್ತುಹೋದ ಅಣ್ಣನ ವಂಶವು ಮುಂದುವರಿಯುವುದು.
6 E o primogênito que ela lhe der sucederá ao nome do irmão falecido, para que o nome deste não se apague de Israel.
7 ಆದರೆ ಮೈದುನನು, ಸತ್ತುಹೋದ ತನ್ನ ಅಣ್ಣನ ಸ್ಥಾನವನ್ನು ತೆಗೆದುಕೊಳ್ಳಲು ಇಷ್ಟಪಡದೆಹೋದಲ್ಲಿ, ಆಕೆಯು ಊರಿನ ಹಿರಿಯರ ಬಳಿಗೆ ಹೋಗಿ ಹಿರಿಯರಿಗೆ ಹೀಗೆ ಹೇಳಬೇಕು: ‘ನನ್ನ ಮೈದುನನು ತನ್ನ ಅಣ್ಣನ ಹೆಸರನ್ನು ಇಸ್ರೇಲಿನಲ್ಲಿ ಉಳಿಸಲು ಇಷ್ಟಪಡುವುದಿಲ್ಲ.’
7 Mas, se o homem não quiser tomar sua cunhada, esta subirá à porta, aos anciãos, e dirá: Meu cunhado recusa suscitar a seu irmão nome em Israel; não quer cumprir para comigo o dever de cunhado.
8 ಆಗ ಊರಿನ ಹಿರಿಯರು ಆ ಮೈದುನನನ್ನು ಕರಿಸಿ ಅವನೊಂದಿಗೆ ಮಾತನಾಡಬೇಕು. ಅವನು ತನ್ನ ನಿರ್ಧಾರವನ್ನು ಬದಲಾಯಿಸದೆ, ‘ನನಗೆ ಅವಳನ್ನು ಹೆಂಡತಿಯಾಗಿ ತೆಗೆದುಕೊಳ್ಳಲು ಇಷ್ಟವಿಲ್ಲ’ ಎಂದು ಹೇಳಿದರೆ,
8 Então os anciãos da sua cidade o chamarão, e falarão com ele. Se ele persistir, e disser: Não quero tomá-la;
9 ಅವನ ಅಣ್ಣನ ಹೆಂಡತಿಯು ಮುಂದೆ ಬಂದು ಹಿರಿಯರ ಸಮ್ಮುಖದಲ್ಲಿ ಅವನ ಕಾಲಿನಿಂದ ಚಪ್ಪಲಿಗಳನ್ನು ತೆಗೆದು ಅವನ ಮುಖಕ್ಕೆ ಉಗಿಯಬೇಕು. ‘ತನ್ನ ಮೈದುನ ಧರ್ಮವನ್ನು ನೆರವೇರಿಸದೆ ತನ್ನ ಅಣ್ಣನಿಗೆ ವಂಶವನ್ನು ಕೊಡದವನಿಗೆ ಇದೇ ಗತಿ’ ಎಂದು ಹೇಳಬೇಕು.
9 sua cunhada se chegará a ele, na presença dos anciãos, e lhe descalçará o sapato do pé, e lhe cuspirá ao rosto, e dirá: Assim se fará ao homem que não edificar a casa de seu irmão.
10 ಆಗ ಅವನ ಸಂತಾನವು, ‘ಚಪ್ಪಲಿ ತೆಗೆಯಲ್ಪಟ್ಟ ಸಂತಾನ’ ಎಂದು ಕರೆಯಲ್ಪಡುವುದು.
10 E sua casa será chamada em Israel a casa do descalçado.
11 “ಇಬ್ಬರು ಗಂಡಸರು ಜಗಳವಾಡುತ್ತಿರುವಾಗ ಒಬ್ಬನ ಹೆಂಡತಿಯು ಗಂಡನಿಗೆ ಸಹಾಯಮಾಡಲಿಕ್ಕೆ ಬಂದು ಜಗಳವಾಡುವ ಇನ್ನೊಬ್ಬ ಗಂಡಸಿನ ಗುಪ್ತಾಂಗವನ್ನು ಹಿಡಿಯಬಾರದು.
11 Quando pelejarem dois homens, um contra o outro, e a mulher de um chegar para livrar a seu marido da mão daquele que o fere, e ela, estendendo a mão, lhe pegar pelas suas vergonhas,
12 ಅಂಥವಳ ಕೈಯನ್ನು ಕಡಿದುಹಾಕಿರಿ; ದಯೆ ತೋರಿಸಬೇಡಿ.
12 decepar-lhe-á a mão; o teu olho não terá piedade dela.
13 “ಮೋಸದ ತೂಕದ ಕಲ್ಲುಗಳನ್ನು ಉಪಯೋಗಿಸಬೇಡಿ.
13 Não terás na tua bolsa pesos diferentes, um grande e um pequeno.
14 ನಿಮ್ಮ ಮನೆಯೊಳಗೆ ಮೋಸದ ತೂಕದ ಕಲ್ಲುಗಳನ್ನಿಡಬೇಡಿ.
14 Não terás na tua casa duas efas, uma grande e uma pequena.
15 ನೀವು ಸರಿಯಾದ ತೂಕದ ಕಲ್ಲುಗಳನ್ನು ಉಪಯೋಗಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಬಹುಕಾಲ ಬಾಳುವಿರಿ.
15 Terás peso inteiro e justo; terás efa inteira e justa; para que se prolonguem os teus dias na terra que o Senhor teu Deus te dá.
16 ಮೋಸವುಳ್ಳ ತೂಕದ ಕಲ್ಲುಗಳನ್ನು ಉಪಯೋಗಿಸುವವರನ್ನು ದೇವರಾದ ಯೆಹೋವನು ದ್ವೇಷಿಸುತ್ತಾನೆ. ಹೌದು, ಆತನು ಮೋಸ ಮಾಡುವವರನ್ನು ದ್ವೇಷಿಸುತ್ತಾನೆ.
16 Porque é abominável ao Senhor teu Deus todo aquele que faz tais coisas, todo aquele que pratica a injustiça.
17 “ನೀವು ಈಜಿಪ್ಟಿನಿಂದ ಹೊರಬರುವಾಗ ಅಮಾಲೇಕ್ಯರು ನಿಮಗೆ ಏನು ಮಾಡಿದರೆಂಬುದನ್ನು ನೆನಪಿನಲ್ಲಿಡಿರಿ.
17 Lembra-te do que te fez Amaleque no caminho, quando saías do Egito;
18 ಅಮಾಲೇಕ್ಯರು ದೇವರನ್ನು ಗೌರವಿಸಲಿಲ್ಲ. ನೀವು ಆಯಾಸಗೊಂಡು ಬಲಹೀನರಾಗಿದ್ದಾಗ ಅವರು ನಿಮ್ಮ ಮೇಲೆ ಬಿದ್ದರು. ನಿಮ್ಮ ಗುಂಪಿನಲ್ಲಿ ಹಿಂದೆ ಉಳಿದವರನ್ನೆಲ್ಲಾ ಕೊಂದರು.
18 como te saiu ao encontro no caminho e feriu na tua retaguarda todos os fracos que iam após ti, estando tu cansado e afadigado; e não temeu a Deus.
19 ಆದ್ದರಿಂದಲೇ ಅಮಾಲೇಕ್ಯರನ್ನು ಈ ಭೂಮುಖದಲ್ಲಿರದಂತೆ ಮಾಡಬೇಕು. ನೀವು ನಿಮ್ಮ ದೇಶವನ್ನು ಪ್ರವೇಶಿಸುವಾಗ ನೀವು ಹಾಗೆ ಮಾಡಬೇಕು. ನಿಮ್ಮ ಸುತ್ತಮುತ್ತಲಿರುವ ವೈರಿಗಳಿಂದ ದೇವರು ನಿಮಗೆ ಶಾಂತಿಯನ್ನು ಅನುಗ್ರಹಿಸುವನು. ಆದರೆ ಅಮಾಲೇಕ್ಯರನ್ನು ನಾಶಮಾಡುವ ಕಾರ್ಯವನ್ನು ಮರೆಯಬೇಡಿರಿ.
19 Quando, pois, o Senhor teu Deus te houver dado repouso de todos os teus inimigos em redor, na terra que o Senhor teu Deus te dá por herança para a possuíres, apagarás a memória de Amaleque de debaixo do céu; não te esquecerás.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Deuteronômio 25, comparar traduções ou montar um estudo — tudo direto pelo WhatsApp.