Deuteronômio 27
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ACF
1 ಮೋಶೆ ಮತ್ತು ಸಮೂಹದ ಹಿರಿಯರು ಜನರೊಂದಿಗೆ ಮಾತನಾಡಿದರು. ಮೋಶೆಯು ಹೇಳಿದ್ದೇನೆಂದರೆ: “ನಾನು ಆಜ್ಞಾಪಿಸಿದ ಎಲ್ಲಾ ವಿಧಿಗಳನ್ನು ಅನುಸರಿಸಿರಿ.
1 E deram ordem, Moisés e os anciãos, ao povo de Israel, dizendo: Guardai todos estes mandamentos que hoje vos ordeno;
2 ನೀವು ಬೇಗನೆ ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ಪ್ರವೇಶಿಸುವಿರಿ. ಆ ದಿವಸ ದೊಡ್ಡ ದೊಡ್ಡ ಕಲ್ಲುಗಳನ್ನು ರಾಶಿ ಹಾಕಿ ಅದನ್ನು ಗಾರೆ ಮಾಡಿರಿ.
2 Será, pois, que, no dia em que passares o Jordão à terra que te der o Senhor teu Deus, levantar-te-ás umas pedras grandes, e as caiarás.
3 ಅದರ ಮೇಲೆ ನಾನು ಆಜ್ಞಾಪಿಸಿದ್ದನ್ನೆಲ್ಲಾ ಬರೆಯಿರಿ. ನೀವು ನದಿಯನ್ನು ದಾಟಿದಾಗ ಈ ಕಾರ್ಯವನ್ನು ಮಾಡಬೇಕು. ಅನಂತರ, ಆತನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಸಮೃದ್ಧಿಯಾದ ದೇಶದೊಳಕ್ಕೆ ಹೋಗಿರಿ.
3 E, havendo-o passado, escreverás nelas todas as palavras desta lei, para entrares na terra que te der o Senhor teu Deus, terra que mana leite e mel, como te falou o Senhor Deus de teus pais.
4 “ನೀವು ಆ ದೇಶದೊಳಗೆ ಪ್ರವೇಶ ಮಾಡಿದ ನಂತರ ನಾನು ಹೇಳಿದ್ದೆಲ್ಲವನ್ನು ನೀವು ಪರಿಪಾಲಿಸಬೇಕು. ಏಬಾಲ್ ಬೆಟ್ಟದ ಮೇಲೆ ಸ್ಮಾರಕ ಸ್ತಂಭವನ್ನು ನಿಲ್ಲಿಸಬೇಕು. ಅದಕ್ಕೆ ಗಾರೆ ಮಾಡಿ.
4 Será, pois, que, quando houveres passado o Jordão, levantareis estas pedras, que hoje vos ordeno, no monte Ebal, e as caiarás.
5 ಮೇಲೆ ಅಲ್ಲಿಯೇ ಕಲ್ಲಿನಿಂದ ಒಂದು ಯಜ್ಞವೇದಿಕೆಯನ್ನು ಕಟ್ಟಿರಿ. ಆ ಕಲ್ಲುಗಳನ್ನು ಕೆತ್ತಲು ಕಬ್ಬಿಣದ ಸಾಧನಗಳನ್ನು ಉಪಯೋಗಿಸಬಾರದು.
5 E ali edificarás um altar ao Senhor teu Deus, um altar de pedras; não alçarás instrumento de ferro sobre elas.
6 ಕಡಿದ ಕಲ್ಲುಗಳಿಂದ ಯಜ್ಞವೇದಿಕೆಯನ್ನು ಕಟ್ಟಬಾರದು. ಆ ಯಜ್ಞವೇದಿಕೆಯ ಮೇಲೆ ನಿಮ್ಮ ದೇವರಾದ ಯೆಹೋವನಿಗೆ ಸರ್ವಾಂಗಹೋಮವನ್ನು ಅರ್ಪಿಸಿರಿ.
6 De pedras brutas edificarás o altar do Senhor teu Deus; e sobre ele oferecerás holocaustos ao Senhor teu Deus.
7 ನೀವು ಅಲ್ಲಿ ಯಜ್ಞವನ್ನರ್ಪಿಸಿ ಸಮಾಧಾನಯಜ್ಞದ ಭೋಜನವನ್ನು ಮಾಡಬೇಕು. ಅಲ್ಲಿ ದೇವರ ಸನ್ನಿಧಾನದಲ್ಲಿ ಊಟ ಮಾಡಿ ಸಂತೋಷಪಡಿರಿ.
7 Também sacrificarás ofertas pacíficas, e ali comerás perante o Senhor teu Deus, e te alegrarás.
8 ಆ ಕಲ್ಲುಗಳ ಮೇಲೆ ಈ ಉಪದೇಶಗಳನ್ನೆಲ್ಲ ಸ್ಪಷ್ಟವಾಗಿ ಓದಲು ಸುಲಭವಾದ ರೀತಿಯಲ್ಲಿ ಬರೆಯಬೇಕು.
8 E naquelas pedras escreverás todas as palavras desta lei, exprimindo-as nitidamente.
9 “ಮೋಶೆಯೂ ಯಾಜಕರೂ ಇಸ್ರೇಲ್ ಸಮೂಹದವರೊಂದಿಗೆ ಮಾತನಾಡಿದರು. ಆಗ ಮೋಶೆಯು, “ಇಸ್ರೇಲರೇ, ಮೌನವಾಗಿ ನನ್ನ ಮಾತುಗಳನ್ನು ಕೇಳಿರಿ. ಈ ದಿನ ನೀವು ದೇವರಾದ ಯೆಹೋವನ ಸ್ವಕೀಯ ಪ್ರಜೆಯಾಗಿರುತ್ತೀರಿ.
9 Falou mais Moisés, juntamente com os sacerdotes levitas, a todo o Israel, dizendo: Guarda silêncio e ouve, ó Israel! Hoje vieste a ser povo do Senhor teu Deus.
10 ಆದ್ದರಿಂದ ಆತನು ಹೇಳಿದ್ದೆಲ್ಲವನ್ನೂ ಮಾಡಿರಿ. ನಾನು ಈ ಹೊತ್ತು ನಿಮಗೆ ಹೇಳುವಂಥ ಆತನ ಅಪ್ಪಣೆಗಳಿಗೂ ವಿಧಿನಿಯಮಗಳಿಗೂ ವಿಧೇಯರಾಗಿರಿ” ಎಂದು ಹೇಳಿದನು.
10 Portanto obedecerás à voz do Senhor teu Deus, e cumprirás os seus mandamentos e os seus estatutos que hoje te ordeno.
11 ಅದೇ ದಿವಸ ಮೋಶೆಯು ಜನರಿಗೆ ಹೇಳಿದ್ದೇನೆಂದರೆ:
11 E Moisés deu ordem naquele dia ao povo, dizendo:
12 “ಜೋರ್ಡನ್ ನದಿ ದಾಟಿದ ನಂತರ, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್ ಮತ್ತು ಬೆನ್ಯಾಮೀನನ ಕುಲದವರು ಗೆರಿಜ್ಜೀಮ್ ಬೆಟ್ಟದ ಮೇಲೆ ನಿಂತು ದೇವರ ಆಶೀರ್ವಾದವನ್ನು ಓದಬೇಕು.
12 Quando houverdes passado o Jordão, estes estarão sobre o monte Gerizim, para abençoarem o povo: Simeão, e Levi, e Judá, e Issacar, e José, e Benjamim;
13 ಅದೇ ಪ್ರಕಾರ ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್ ಮತ್ತು ನಫ್ತಾಲಿ ಕುಲದವರು ಏಬಾಲ್ ಬೆಟ್ಟದ ಮೇಲೆ ನಿಂತು ದೇವರ ಶಾಪವಚನವನ್ನು ಓದಬೇಕು.
13 E estes estarão sobre o monte Ebal para amaldiçoar: Rúben, Gade, e Aser, e Zebulom, Dã e Naftali.
14 “ಲೇವಿಯರು ಗಟ್ಟಿಯಾದ ಸ್ವರದಲ್ಲಿ ಇಸ್ರೇಲರೆಲ್ಲರಿಗೆ ಹೀಗೆ ಹೇಳಬೇಕು:
14 E os levitas testificarão a todo o povo de Israel em alta voz, e dirão:
15 “‘ಸುಳ್ಳುದೇವರನ್ನು ಮಾಡಿ ಗುಪ್ತ ಸ್ಥಳದಲ್ಲಿಡುವವನು ಶಾಪಗ್ರಸ್ತನಾಗಲಿ; ಆ ದೇವರುಗಳು ಮನುಷ್ಯನ ಕೈಕೆಲಸವೇ; ಕಲ್ಲು, ಮರ, ಹಿತ್ತಾಳೆಗಳಿಂದ ಮಾಡಿದವುಗಳೇ. ಯೆಹೋವನು ಅವುಗಳನ್ನು ದ್ವೇಷಿಸುತ್ತಾನೆ.’
15 Maldito o homem que fizer imagem de escultura, ou de fundição, abominação ao Senhor, obra da mão do artífice, e a puser em um lugar escondido. E todo o povo, respondendo, dirá: Amém.
16 “ಲೇವಿಯರು, ‘ತಂದೆತಾಯಿಗಳನ್ನು ಸನ್ಮಾನಿಸದವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು.
16 Maldito aquele que desprezar a seu pai ou a sua mãe. E todo o povo dirá: Amém.
17 “ಲೇವಿಯರು, ‘ನೆರೆಯವನ ಗಡಿಕಲ್ಲಿನ ಸ್ಥಳ ಬದಲಾಯಿಸುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು.
17 Maldito aquele que remover os limites do seu próximo. E todo o povo dirá: Amém.
18 “ಲೇವಿಯರು, ‘ಕುರುಡರಿಗೆ ತಪ್ಪುದಾರಿ ತೋರಿಸುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.
18 Maldito aquele que fizer que o cego erre de caminho. E todo o povo dirá: Amém.
19 “ಲೇವಿಯರು, ‘ಪರದೇಶಸ್ಥರಿಗೆ, ಅನಾಥರಿಗೆ ಮತ್ತು ವಿಧವೆಯರಿಗೆ ನ್ಯಾಯವಾದ ತೀರ್ಪನ್ನು ಕೊಡದವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು.
19 Maldito aquele que perverter o direito do estrangeiro, do órfão e da viúva. E todo o povo dirá: Amém.
20 “ಲೇವಿಯರು, ‘ತಂದೆಯ ಹೆಂಡತಿಯೊಂದಿಗೆ ಲೈಂಗಿಕ ಸಂಬಂಧವಿಟ್ಟುಕೊಂಡವನು ಶಾಪಗ್ರಸ್ತನಾಗಲಿ. ಅವನು ತನ್ನ ತಂದೆಗೆ ಅವಮಾನ ಮಾಡಿದನು’ ಎಂದು ಹೇಳಬೇಕು.
20 Maldito aquele que se deitar com a mulher de seu pai, porquanto descobriu a nudez de seu pai. E todo o povo dirá: Amém.
21 “ಲೇವಿಯರು, ‘ಯಾವನಾದರೂ ಪ್ರಾಣಿಯೊಂದಿಗೆ ಸಂಭೋಗಿಸಿದರೆ ಅವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು.
21 Maldito aquele que se deitar com algum animal. E todo o povo dirá: Amém.
22 ಲೇವಿಯರು, ‘ತನ್ನ ತಂಗಿಯನ್ನಾಗಲಿ ಅಥವಾ ಮಲತಾಯಿಯನ್ನಾಗಲಿ ಕೂಡುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು.
22 Maldito aquele que se deitar com sua irmã, filha de seu pai, ou filha de sua mãe. E todo o povo dirá: Amém.
23 “ಲೇವಿಯರು, ‘ತನ್ನ ಅತ್ತೆಯೊಡನೆ ಲೈಂಗಿಕ ಸಂಬಂಧವನ್ನಿಟ್ಟುಕೊಂಡವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು.
23 Maldito aquele que se deitar com sua sogra. E todo o povo dirá: Amém.
24 “ಲೇವಿಯರು, ‘ಇನ್ನೊಬ್ಬ ವ್ಯಕ್ತಿಯನ್ನು ಕೊಲೆ ಮಾಡಿದವನು ಹಿಡಿಯಲ್ಪಡದಿದ್ದರೂ ಸಹ ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು.
24 Maldito aquele que ferir ao seu próximo em oculto. E todo o povo dirá: Amém.
25 “ಲೇವಿಯರು, ‘ನಿರಪರಾಧಿಯನ್ನು ಕೊಲ್ಲಲು ಹಣ ತೆಗೆದುಕೊಳ್ಳುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು.
25 Maldito aquele que aceitar suborno para ferir uma pessoa inocente. E todo o povo dirá: Amém.
26 “ಲೇವಿಯರು, ‘ಧರ್ಮಶಾಸ್ತ್ರವನ್ನು ಪ್ರೋತ್ಸಾಹಿಸುವದಕ್ಕೂ ಅವುಗಳನ್ನು ಅನುಸರಿಸುವದಕ್ಕೂ ನಿರಾಕರಿಸುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು.
26 Maldito aquele que não confirmar as palavras desta lei, não as cumprindo. E todo o povo dirá: Amém.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Deuteronômio 27, comparar traduções ou montar um estudo — tudo direto pelo WhatsApp.