Deuteronômio 2
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs VC
1 “ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಮರುಭೂಮಿಗೆ ತಿರುಗಿಹೋದೆವು. ಆ ಮಾರ್ಗವು ಕೆಂಪುಸಮುದ್ರದ ಕಡೆ ಹೋಗುತ್ತಿತ್ತು. ಸೇಯೀರ್ ಬೆಟ್ಟವನ್ನು ಸುತ್ತಿಕೊಂಡು ಹೋಗುವುದಕ್ಕೆ ನಮಗೆ ತುಂಬಾ ದಿವಸಗಳಾದವು.
1 Partindo dali, fomos para o deserto na direção do mar Vermelho, segundo a ordem do Senhor, e andamos muito tempo em torno do monte Seir.
2 ಆಗ ಯೆಹೋವನು ನನಗೆ ಹೀಗೆ ಹೇಳಿದನು:
2 O Senhor então me disse:
3 ‘ನೀವು ಬೆಟ್ಟದ ಸುತ್ತ ಸುತ್ತುತ್ತಾ ಬಹಳ ದಿವಸಗಳನ್ನು ಕಳೆದಿರಿ. ಈಗ ನೀವು ಉತ್ತರದಿಕ್ಕಿಗೆ ತಿರುಗಿರಿ.
3 basta de girar em volta deste monte; dirigi-vos para o norte.
4 ಇದನ್ನು ಜನರಿಗೆ ತಿಳಿಸು: ನೀವು ಸೇಯೀರ್ ದೇಶದ ಮೂಲಕ ದಾಟಿಹೋಗುವಿರಿ. ಇದು ನಿಮ್ಮ ಸಂಬಂಧಿಕರ ದೇಶ. ಇವರು ಏಸಾವನ ಸಂತತಿಯವರು. ಅವರು ನಿಮಗೆ ಭಯಪಡುವರು; ಆದರೆ ನೀವು ಅವರ ವಿಷಯದಲ್ಲಿ ಎಚ್ಚರಿಕೆಯಾಗಿರಿ.
4 Ordena ao povo: atravessareis o território de vossos irmãos, os filhos de Esaú, que habitam em Seir. Eles têm medo de vós;
5 ಅವರ ವಿರುದ್ಧ ಯುದ್ಧ ಮಾಡಬಾರದು. ನಾನು ನಿಮಗೆ ಅವರ ದೇಶದಲ್ಲಿ ಯಾವ ಪಾಲನ್ನೂ ಕೊಡುವುದಿಲ್ಲ. ಅದರ ಒಂದು ಅಡಿ ಜಾಗವನ್ನೂ ಕೊಡುವುದಿಲ್ಲ. ಯಾಕೆಂದರೆ ಸೇಯೀರ್ ಬೆಟ್ಟಪ್ರದೇಶವನ್ನು ಏಸಾವನ ಸ್ವಂತ ದೇಶವನ್ನಾಗಿ ಕೊಟ್ಟಿರುತ್ತೇನೆ.
5 mas guardai-vos de entrar em luta contra eles, porque não vos darei nada de sua terra, nem mesmo a medida de um pé; é a Esaú que dei a propriedade das montanhas de Seir.
6 ನೀವು ಅವರ ದೇಶವನ್ನು ದಾಟುವಾಗ ಅವರ ಆಹಾರಸಾಮಾಗ್ರಿಗಳಿಗೂ ನೀರಿಗೂ ಹಣವನ್ನು ಕೊಡಬೇಕು.
6 Comprar-lhes-eis a preço de dinheiro o necessário para alimentar-vos, e pagareis mesmo a água que beberdes,
7 ನಿಮ್ಮ ದೇವರಾದ ಯೆಹೋವನು ಪ್ರತಿಯೊಂದು ವಿಷಯದಲ್ಲಿ ನಿಮ್ಮನ್ನು ಆಶೀರ್ವದಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ. ಈ ಮಹಾ ಮರುಭೂಮಿಯ ಮೂಲಕ ನೀವು ನಡೆದುಹೋದದ್ದರ ಬಗ್ಗೆಯೂ ಆತನಿಗೆ ತಿಳಿದಿದೆ. ಕಳೆದ ನಲವತ್ತು ವರ್ಷಗಳಿಂದ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ನಡಿಸಿದ್ದಾನೆ. ನಿಮಗೆ ಬೇಕಾದವುಗಳನ್ನೆಲ್ಲಾ ಒದಗಿಸಿರುತ್ತಾನೆ.’
7 porque o Senhor teu Deu s te abençoou em todas as tuas empresas, e velou sobre ti durante a tua marcha através desse vasto deserto. Eis já quarenta anos que o Senhor teu Deus está contigo, e nada te faltou.
8 “ಹಾಗೆ ನಾವು ನಮ್ಮ ಸಂಬಂಧಿಕರಾದ ಏಸಾವನ ಜನರ ದೇಶದ ಮೂಲಕ ಪ್ರಯಾಣ ಬೆಳೆಸಿದೆವು. ಜೋರ್ಡನ್ ಕಣಿವೆಯಿಂದ ಏಲತ್ ಮತ್ತು ಎಚ್ಯೋನ್ಗೆಬೆರ್ ಪಟ್ಟಣಗಳಿಗೆ ಹೋಗುವ ಮಾರ್ಗವನ್ನು ಬಿಟ್ಟು, ನಾವು ಮೋವಾಬ್ ದೇಶದ ಮರುಭೂಮಿಗೆ ಹೋಗುವ ರಸ್ತೆಯಲ್ಲಿ ನಡೆದೆವು.
8 Passamos, pois, ao longe de nossos irmãos, os filhos de Esaú, que habitam em Seir, evitando o caminho da planície, assim como Elat e Asiongaber. Voltamos e tomamos o caminho na direção do deserto de Moab.
9 “ಯೆಹೋವನು ನನಗೆ ಹೀಗೆ ಹೇಳಿದನು: ‘ಮೋವಾಬಿನ ಜನರಿಗೆ ತೊಂದರೆ ಕೊಡಬೇಡ. ಅವರ ವಿರುದ್ಧ ಯುದ್ಧಕ್ಕೆ ಹೋಗಬೇಡ; ಅವರ ದೇಶದಲ್ಲಿ ನಿಮಗೆ ಯಾವ ಪಾಲೂ ಸಿಗದು. ಅವರು ಲೋಟನ ಸಂತತಿಯವರು. ನಾನು ಅವರಿಗೆ ಆರ್ ಪಟ್ಟಣವನ್ನು ಕೊಟ್ಟಿರುತ್ತೇನೆ.’”
9 Então o Senhor me disse: não ataques os moabitas e não entres em guerra contra eles, porque não te darei nada de sua terra; foi aos filhos de Lot que dei Ar como herança.
10 (ಹಿಂದಿನ ಕಾಲದಲ್ಲಿ, ಏಮಿಯ ಜನರು ಆರ್‌ನಲ್ಲಿ ವಾಸಮಾಡುತ್ತಿದ್ದರು. ಅವರು ಬಲಾಢ್ಯರೂ ಉನ್ನತ ಪುರುಷರೂ ಆಗಿದ್ದರು ಮತ್ತು ಅವರ ಸಂಖ್ಯೆ ಹೆಚ್ಚಾಗಿತ್ತು.
10 { Outrora habitavam os e mim nessa terra. Era uni povo grande, numeroso e de alta estatura, como os enacim.
11 ಅವರು ಅನಾಕ್ಯರಂತೆ ರೆಫಾಯರಿಗೆ ಸೇರಿದವರೆಂದು ಹೇಳಲಾಗುತ್ತಿತ್ತು. ಆದರೆ ಮೋವಾಬ್ಯರು ಅವರನ್ನು ಏಮಿಯರು ಎಂದೇ ಕರೆಯುತ್ತಿದ್ದರು.
11 Também eles eram considerados refaim, corno os enacim; irias os moabitas chamavam-nos emim.
12 ಹೋರಿಯರು ಕೂಡಾ ಸೇಯೀರ್ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದರು. ಆದರೆ ಏಸಾವನ ಜನರು ಅವರಿಂದ ದೇಶವನ್ನು ವಶಮಾಡಿಕೊಂಡು, ಹೋರಿಯರನ್ನು ಸಂಹರಿಸಿ ಆ ದೇಶದಲ್ಲಿ ನೆಲೆಸಿದರು. ಇಸ್ರೇಲರೂ ಅದೇ ರೀತಿಯಲ್ಲಿ ಯೆಹೋವನು ವಾಗ್ದಾನ ಮಾಡಿದ ದೇಶದಲ್ಲಿದ್ದ ನಿವಾಸಿಗಳನ್ನು ಸೋಲಿಸಿ ಅವರ ದೇಶವನ್ನು ಸ್ವಾಧೀನ ಮಾಡಿಕೊಂಡರು.)
12 Em Seir habitavam também os horreus, os quais foram expulsos pelos filhos de Esaú. Estes, após os haverem exterminado, estabeleceram-se em seu lugar, como o fez Israel na terra que o Senhor lhe deu em possessão.}
13 “ಯೆಹೋವನು ನನಗೆ, ‘ಜೆರೆದ್ ಕಣಿವೆಯ ಆಚೆಕಡೆಗೆ ಹೋಗು’ ಎಂದು ಹೇಳಿದನು. ಆದ್ದರಿಂದ ನಾವು ಜೆರೆದ್ ಕಣಿವೆಯನ್ನು ದಾಟಿದೆವು.
13 Vamos, pois! Passai a torrente de Zered. Passamos então a torrente de Zered.
14 ಕಾದೇಶ್‌ಬರ್ನೇಯದಿಂದ ಜೆರೆದ್ ಕಣಿವೆಯನ್ನು ದಾಟಿ ಆಗಲೇ ಮೂವತ್ತೆಂಟು ವರ್ಷಗಳು ದಾಟಿದ್ದವು. ನಮ್ಮ ಸಮೂಹದಲ್ಲಿದ್ದ ಯುದ್ಧಭಟರೆಲ್ಲಾ ಸತ್ತುಹೋಗಿದ್ದರು. ಹೀಗೆ ಆಗುವುದೆಂದು ದೇವರು ಪ್ರಮಾಣ ಮಾಡಿದ್ದನು.
14 Durou trinta e oito anos essa nossa viagem de Cades-Barne até a passagem da torrente de Zered. Entretanto, extinguiu-se do acampamento toda a geração dos homens de guerra, assim como o Senhor o tinha jurado.
15 ಯೆಹೋವನು ಅವರಿಗೆ ವಿರುದ್ಧವಾಗಿ ಇದ್ದುದರಿಂದ ಅವರೆಲ್ಲಾ ಸತ್ತು ಜನಸಮೂಹದಿಂದ ಇಲ್ಲವಾದರು.
15 A mão do Senhor pesou sobre eles, e foram cortados do acampamento até a sua completa extinção.
16 “ಯುದ್ಧಭಟರೆಲ್ಲಾ ಸತ್ತುಹೋದ ಬಳಿಕ
16 Depois que todos esses homens de guerra desapareceram do meio de seu povo, levados pela morte,
17 ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ:
17 o Senhor disse-me:
18 ‘ಈ ಹೊತ್ತು ಆರ್ ಎಂಬ ಪಟ್ಟಣದ ಗಡಿಯನ್ನು ದಾಟಿ ಮೋವಾಬ್ ದೇಶವನ್ನು ಪ್ರವೇಶಿಸಬೇಕು.
18 passarás hoje a fronteira de Moab, Ar,
19 ನೀನು ಅಮ್ಮೋನಿಯರ ಬಳಿಗೆ ಹೋಗಬೇಕು. ಆದರೆ ಅವರಿಗೆ ತೊಂದರೆ ಕೊಡಬೇಡ. ಅವರೊಂದಿಗೆ ಯುದ್ಧಮಾಡಬೇಡ. ಯಾಕೆಂದರೆ ಅವರ ದೇಶದಲ್ಲಿ ನಿನಗೆ ಪಾಲಿಲ್ಲ. ಅವರು ಲೋಟನ ಸಂತತಿಯವರು, ಆ ದೇಶವನ್ನು ನಾನು ಅವರಿಗೆ ಕೊಟ್ಟಿರುತ್ತೇನೆ.’”
19 e encontrar-te-ás em face dos amonitas. Não os ataques, nem lhes faças guerra, porque não te darei nada da sua terra; foi aos filhos de Lot que dei a possessão dessa terra.
20 (ಆ ಪ್ರದೇಶವನ್ನು ರೆಫಾಯ ದೇಶವೆಂದೂ ಕರೆಯುತ್ತಾರೆ. ಹಿಂದಿನ ಕಾಲದಲ್ಲಿ ರೆಫಾಯರು ಅಲ್ಲಿ ವಾಸಿಸುತ್ತಿದ್ದರು. ಅಮ್ಮೋನಿಯರು ಅವರನ್ನು ಜಮ್‌ಜುಮ್ಯರು ಎಂದು ಕರೆಯುತ್ತಿದ್ದರು.
20 {Também esta foi reputada terra dos refaim, chamados pelos amonitas de zanzomim,
21 ಜಮ್‌ಜುಮ್ಯರು ತುಂಬಾ ಬಲಶಾಲಿಗಳಾಗಿದ್ದರು; ಅನಾಕ್ಯರಂತೆ ಉನ್ನತ ಪುರುಷರಾಗಿದ್ದರು. ಆದರೆ ಯೆಹೋವನು ಜಮ್‌ಜುಮ್ಯರನ್ನು ಸೋಲಿಸಲು ಅಮೋರಿಯರಿಗೆ ಸಹಾಯ ಮಾಡಿದನು. ಅಮೋರಿಯರು ಆ ದೇಶವನ್ನು ತಮ್ಮ ಸ್ವಾಧೀನಕ್ಕೆ ತೆಗೆದುಕೊಂಡು ಈಗ ಅದರಲ್ಲಿ ನೆಲೆಸಿರುತ್ತಾರೆ.
21 povo grande, numeroso e de alta estatura como os enacim. Mas o Senhor exterminou-os diante dos amonitas, que os despojaram e habitaram em lugar deles.
22 ಏಸಾವನ ಜನರಿಗೂ ದೇವರು ಅದೇ ರೀತಿ ಮಾಡಿದನು. ಹಿಂದಿನ ಕಾಲದಲ್ಲಿ ಹೋರಿಯರು ಸೇಯೀರ್‌ನಲ್ಲಿ ವಾಸಿಸುತ್ತಿದ್ದರು. ಆದರೆ ಏಸಾವನ ಜನರು ಅವರನ್ನು ಸೋಲಿಸಿದರು. ಅವನ ಸಂತತಿಯವರು ಈಗಲೂ ಅಲ್ಲಿ ವಾಸಮಾಡುತ್ತಿದ್ದಾರೆ.
22 Foi o que o Senhor tinha feito pelos filhos de Esaú, que habitam em Seir, destruindo os horreus diante deles. Despojaram-nos e estabeleceram-se em seu lugar, onde estão ainda hoje.
23 ಕಫ್ತೋರ್ಯದವರಿಗೂ ದೇವರು ಅದೇ ರೀತಿ ಮಾಡಿದ್ದನು. ಗಾಜಾದ ಸುತ್ತಲಿನ ಪಟ್ಟಣಗಳಲ್ಲಿ ಅವ್ವಿಯ ಜನರು ವಾಸಿಸುತ್ತಿದ್ದರು. ಆದರೆ ಕಫ್ತೋರ್ಯದಿಂದ ಬಂದ ಜನರು ಅವ್ವಿಯರನ್ನು ನಾಶಮಾಡಿ ಅವರ ದೇಶದಲ್ಲಿ ಈಗಲೂ ಅವರು ವಾಸಿಸಿರುತ್ತಾರೆ.)
23 Da mesma sorte os heveus, que habitavam nas aldeias até Gaza, foram esmagados pelos caftorim, originários de Caftor, que se estabeleceram em seu lugar.}
24 “ಯೆಹೋವನು ನನಗೆ ಹೇಳಿದ್ದೇನೆಂದರೆ: ‘ಅರ್ನೋನ್ ಕಣಿವೆಯನ್ನು ದಾಟಲು ಸಿದ್ಧಪಡಿಸಿಕೊ. ಅಮೋರಿಯನೂ ಹೆಷ್ಬೋನಿನ ರಾಜನೂ ಆಗಿರುವ ಸೀಹೋನನನ್ನು ಸೋಲಿಸಲು ನಾನು ನಿನಗೆ ಸಹಾಯ ಮಾಡುವೆನು. ಅವನ ರಾಜ್ಯವನ್ನು ನಾನು ನಿನಗೆ ಕೊಡುವೆನು. ಆದುದರಿಂದ ಅವನಿಗೆ ವಿರುದ್ಧವಾಗಿ ಯುದ್ಧಮಾಡಿ ದೇಶವನ್ನು ಸ್ವಾಧೀನಪಡಿಸಿಕೊ.
24 Vamos! Desarmai as tendas e passai a torrente do Arnon. Vê: entrego-te nas mãos Seon, rei de Hesebon, o amorreu, com a sua terra. Começa a despojá-lo e faze-lhe guerra.
25 ಸುತ್ತಲಿರುವ ಜನಾಂಗಗಳು ನಿಮಗೆ ಹೆದರಿ ನಡುಗುವಂತೆ ನಾನು ಮಾಡುತ್ತಿದ್ದೇನೆ. ಅವರು ನಿಮ್ಮ ಬಗ್ಗೆ ಸುದ್ದಿಯನ್ನು ಕೇಳಿ ಹೆದರಿಕೊಳ್ಳುವರು ಮತ್ತು ಭಯದಿಂದ ನಡುಗುವರು.’
25 A partir de hoje começarei a derramar o temor e o terror de teu nome entre os povos que habitam debaixo de todos os céus, de sorte que só ao ouvir o teu nome eles tremerão e estarão em pânico por causa de ti.
26 “ನಾವು ಕೆದೇಮೋತಿನ ಮರುಭೂಮಿಯಲ್ಲಿರುವಾಗ ಹೆಷ್ಬೋನಿನ ಅರಸನಾದ ಸೀಹೋನನ ಬಳಿಗೆ ದೂತರನ್ನು ಸಮಾಧಾನದ ಸಂದೇಶದೊಂದಿಗೆ ಕಳುಹಿಸಿದೆನು. ಆ ದೂತರು ಸೀಹೋನನಿಗೆ ಸಮಾಧಾನವನ್ನು ತಂದಿದ್ದರು.
26 Então enviei do deserto de Cademot mensageiros a Seon, rei de Hesebon, com palavras de paz, dizendo:
27 ಅವರು ಸೀಹೋನನಿಗೆ, ‘ನಿನ್ನ ರಾಜ್ಯವನ್ನು ನಾವು ದಾಟುವಂತೆ ನಮಗೆ ಅಪ್ಪಣೆ ಕೊಡು. ನಾವು ಮಾರ್ಗದಲ್ಲಿ ಬಲಕ್ಕಾಗಲಿ ಎಡಕ್ಕಾಗಲಿ ಹೋಗುವುದಿಲ್ಲ.
27 Deixa-me atravessar a tua terra; seguirei pela estrada comum, e não me desviarei nem para a direita nem para a esquerda.
28 ನಾವೇನಾದರೂ ನಿನ್ನ ದೇಶದ ಆಹಾರಪದಾರ್ಥಗಳನ್ನು ತೆಗೆದುಕೊಂಡರೆ, ನೀರನ್ನು ಉಪಯೋಗಿಸಿದರೆ ಅದಕ್ಕೆ ಪ್ರತಿಯಾಗಿ ಬೆಳ್ಳಿಯನ್ನು ಪಾವತಿ ಮಾಡುವೆವು. ನಿಮ್ಮ ದೇಶದ ಮೂಲಕ ನಾವು ಹಾದುಹೋಗಬೇಕಾಗಿದೆಯಷ್ಟೇ.
28 Vender-me-ás por dinheiro o necessário para alimentar-me, e pagar-te-ei mesmo a água que eu beber. Deixa-me somente passar,
29 ನಾವು ಜೋರ್ಡನ್ ನದಿಯನ್ನು ದಾಟುವವರೆಗೆ ನಿಮ್ಮ ದೇಶದ ಮೂಲಕ ಹೋಗಿ, ನಮ್ಮ ದೇವರಾದ ಯೆಹೋವನು ಕೊಡಲಿರುವ ದೇಶವನ್ನು ಪ್ರವೇಶಿಸುತ್ತೇವೆ. ಸೇಯೀರ್‌ನಲ್ಲಿ ವಾಸಿಸುವ ಏಸಾವನ ಜನರೂ, ಆರ್‌ನಲ್ಲಿ ವಾಸಿಸುವ ಮೋವಾಬ್ಯರೂ ತಮ್ಮ ದೇಶಗಳ ಮೂಲಕ ಹೋಗಲು ನಮಗೆ ಅವಕಾಶ ಮಾಡಿಕೊಟ್ಟಿದ್ದಾರೆ’ ಎಂದು ಹೇಳಿದರು.
29 - como fizeram os filhos de Esaú que habitam em Seir, e os moabitas que habitam em Ar -, até que eu chegue ao Jordão e entre na terra que o Senhor nosso Deus nos dá.
30 “ಆದರೆ ಸೀಹೋನನು ನಮಗೆ ದಾಟಿಹೋಗಲು ಬಿಡಲಿಲ್ಲ. ನಮ್ಮ ದೇವರಾದ ಯೆಹೋವನು ಅವನ ಹೃದಯವನ್ನು ಕಠಿಣಗೊಳಿಸಿದನು. ನಾವು ಅವನನ್ನು ಸೋಲಿಸಿ ಅವನ ರಾಜ್ಯವನ್ನು ವಶಪಡಿಸಿಕೊಳ್ಳಬೇಕೆಂದು ಯೆಹೋವನು ಹಾಗೆ ಮಾಡಿದನು. ಆ ರಾಜ್ಯವು ಇಂದಿಗೂ ನಮ್ಮ ವಶದಲ್ಲಿದೆ.
30 Mas Seon, rei de Hesebon, não consentiu que passássemos por sua terra; o Senhor, teu Deus, obcecara-lhe o espírito e endurecera-lhe o coração, a fim de entregá-lo em tuas mãos, como de fato aconteceu.
31 “ಯೆಹೋವನು ನನಗೆ, ‘ನಾನು ನಿನಗೆ ಸೀಹೋನನನ್ನೂ ಅವನ ಎಲ್ಲಾ ಜನರನ್ನೂ ಅವನ ದೇಶವನ್ನೂ ನಿನಗೆ ಕೊಡುತ್ತೇನೆ. ಈಗ ಹೋಗಿ ಅವನ ದೇಶವನ್ನು ವಶಪಡಿಸಿಕೊ!’ ಎಂದು ಹೇಳಿದನು.
31 O Senhor disse-me então: vê: estou pronto a entregar-te imediatamente Seon com a sua terra. Empreende a conquista e ocupa-lhe o território.
32 “ಅನಂತರ ಸೀಹೋನ್ ಅರಸನೂ ಅವನ ಜನರೂ ನಮ್ಮೊಂದಿಗೆ ಕಾದಾಡಲು ಯಹಜಿ ಎಂಬ ಸ್ಥಳಕ್ಕೆ ಬಂದರು.
32 Seon saiu com todo o seu povo ao nosso encontro para pelejar contra nós em Jasa.
33 ಆದರೆ ನಮ್ಮ ದೇವರಾದ ಯೆಹೋವನು ಅವನನ್ನು ನಮ್ಮ ವಶಕ್ಕೆ ಕೊಟ್ಟನು. ನಾವು ಸೀಹೋನ್ ಅರಸನನ್ನೂ ಅವನ ಮಕ್ಕಳನ್ನೂ ಅವನ ಎಲ್ಲಾ ಜನರನ್ನೂ ಸದೆಬಡೆದು ಸೋಲಿಸಿದೆವು.
33 Mas o Senhor, nosso Deus, no-lo entregou e nós derrotamo-lo com os seus filhos e todo o seu povo.
34 ಅವನಿಗೆ ಒಳಪಟ್ಟ ಪಟ್ಟಣಗಳನ್ನೆಲ್ಲಾ ವಶಪಡಿಸಿಕೊಂಡೆವು. ಪ್ರತಿಯೊಂದು ಪಟ್ಟಣದಲ್ಲಿದ್ದ ಗಂಡಸರು, ಹೆಂಗಸರು, ಮಕ್ಕಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದೆವು. ಯಾರನ್ನೂ ಜೀವಂತವಾಗಿ ಉಳಿಸಲಿಲ್ಲ.
34 Tomamos-lhe então todas as suas cidades, que votamos ao interdito, com os homens, as mulheres e as crianças, sem deixar escapar ninguém.
35 ಅವರ ದನಕರುಗಳನ್ನು ಮತ್ತು ಅವರಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಸೂರೆಮಾಡಿದೆವು.
35 Só nos reservamos os animais e o espólio das cidades conquistadas.
36 ನಾವು ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಎಂಬ ಊರನ್ನು ಮತ್ತು ಆ ಕಣಿವೆಯ ಮಧ್ಯದಲ್ಲಿದ್ದ ಇನ್ನೊಂದು ಊರನ್ನು ವಶಪಡಿಸಿಕೊಂಡೆವು. ಅರ್ನೋನ್ ಕಣಿವೆ ಮತ್ತು ಗಿಲ್ಯಾದ್‌ಗಳ ನಡುವೆ ಇರುವ ಎಲ್ಲಾ ಪಟ್ಟಣಗಳನ್ನು ಸೋಲಿಸಲು ಯೆಹೋವನು ಅವಕಾಶ ಮಾಡಿಕೊಟ್ಟನು. ಯಾವ ಪಟ್ಟಣವೂ ನಮಗೆ ಅಸಾಧ್ಯವಾಗಿ ಕಂಡುಬರಲಿಲ್ಲ.
36 Desde Aroer, que está à margem da torrente do Arnon, e a cidade situada no vale, até Galaad, não houve lugar tão forte que nos pudesse resistir; o Senhor, nosso Deus, tudo nos entregou.
37 ಆದರೆ ಅಮ್ಮೋನಿಯರಿಗೆ ಸೇರಿದ ದೇಶದ ಸಮೀಪಕ್ಕೆ ನಾವು ಹೋಗಲಿಲ್ಲ: ಯಬ್ಬೋಕ್ ನದಿಯ ಬದಿಗೂ ನಾವು ಹೋಗಲಿಲ್ಲ: ಬೆಟ್ಟಪ್ರದೇಶಗಳ ಪಟ್ಟಣಗಳಿಗೂ ನಾವು ಹೋಗಲಿಲ್ಲ: ನಮ್ಮ ದೇವರಾದ ಯೆಹೋವನು ನಮಗೆ ಕೊಡದೆ ಇರುವ ದೇಶಗಳ ಬಳಿಗೆ ನಾವು ಹೋಗಲೇ ಇಲ್ಲ.
37 Somente não vos aproximastes da terra dos amonitas, nem de lugar algum situado às margens da torrente do Jaboc, nem das cidades da montanha, nem de nenhum dos lugares proibidos pelo Senhor, nosso Deus.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Deuteronômio 2, comparar traduções ou montar um estudo — tudo direto pelo WhatsApp.