Esdras 10
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NTLH
1 ದೇವಾಲಯದೆದುರು ಎಜ್ರನು ರೋಧಿಸುತ್ತಾ, ದೇವರಿಗೆ ಅಡ್ಡಬಿದ್ದು ಪ್ರಾರ್ಥಿಸುತ್ತಾ ಪಾಪದರಿಕೆ ಮಾಡುತ್ತಾ ಇರುವಾಗ ಅವನ ಸುತ್ತಲೂ ಅನೇಕ ಮಂದಿ ಇಸ್ರೇಲರ ಗಂಡಸರು, ಹೆಂಗಸರು, ಮಕ್ಕಳು ಸೇರಿಬಂದರು. ಅವರೂ ಗಟ್ಟಿಯಾಗಿ ಅಳಲು ಪ್ರಾರಂಭಿಸಿದರು.
1 Enquanto Esdras estava ajoelhado em frente do Templo, orando, chorando e confessando esses pecados, um grande grupo de israelitas — homens, mulheres e crianças — se reuniu em volta dele. E eles também choravam amargamente.
2 ಆಗ ಏಲಾಮನ ಸಂತತಿಯವನಾದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ ಹೀಗೆಂದನು: “ನಾವು ದೇವರಿಗೆ ನಂಬಿಗಸ್ತರಾಗಿರಲಿಲ್ಲ. ನಾವು ಅನ್ಯಜನರೊಂದಿಗೆ ಮದುವೆಯಾಗಿದ್ದೇವೆ. ಹಾಗಿದ್ದರೂ ಇಸ್ರೇಲರಿಗೆ ಒಂದು ನಿರೀಕ್ಷೆ ಇದೆ.
2 Então Secanias, filho de Jeiel, da família de Elão, disse a Esdras: — Nós pecamos contra o nosso Deus, casando com mulheres estrangeiras de nações pagãs. Porém mesmo assim ainda há esperança para o povo de Israel.
3 ಈಗ ನಾವು ದೇವರ ಮುಂದೆ ಅನ್ಯರಾದ ಹೆಂಡತಿಯರನ್ನೂ ಅವರ ಮಕ್ಕಳನ್ನೂ ತೊರೆದುಬಿಡುತ್ತೇವೆಂದು ಒಡಂಬಡಿಕೆ ಮಾಡೋಣ. ಹೀಗೆ ಮಾಡುವುದರಿಂದ ಎಜ್ರನ ಮತ್ತು ದೇವರ ಕಟ್ಟಳೆಗಳನ್ನು ಗೌರವಿಸುವವರ ಸಲಹೆಯನ್ನು ನಾವು ಅನುಸರಿಸುವವರಾಗಿರುತ್ತೇವೆ; ನಾವು ದೇವರ ಕಟ್ಟಳೆಗೆ ವಿಧೇಯರಾಗುತ್ತೇವೆ.
3 Agora prometamos solenemente ao nosso Deus que mandaremos embora essas mulheres e os seus filhos. Isso faremos seguindo o seu conselho e o dos outros que respeitam os mandamentos do nosso Deus. Assim estaremos fazendo o que a Lei de Deus manda.
4 ಎಜ್ರನೇ, ಎದ್ದೇಳು, ಇದು ನಿನ್ನ ಜವಾಬ್ದಾರಿಕೆ. ನಾವು ನಿನ್ನನ್ನು ಬೆಂಬಲಿಸುತ್ತೇವೆ; ಧೈರ್ಯದಿಂದ ಈ ಕೆಲಸವನ್ನು ಪ್ರಾರಂಭಿಸು.”
4 Levante-se, pois é o senhor quem deve fazer isso. Nós o apoiaremos. Portanto, anime-se e mãos à obra!
5 ಎಜ್ರನು ಎದ್ದುನಿಂತು ಮಹಾಯಾಜಕರೂ, ಲೇವಿಯರೂ ಮತ್ತು ಇಸ್ರೇಲಿನ ಜನರೂ ಅವನು ಹೇಳಿದ ಪ್ರಕಾರ ಮಾಡುತ್ತೇವೆ ಎಂಬ ಪ್ರತಿಜ್ಞೆಯನ್ನು ಅವರಿಂದ ತೆಗೆದುಕೊಂಡನು.
5 Então Esdras se levantou e fez com que os chefes dos sacerdotes, os chefes dos levitas e todo o resto do povo jurassem que fariam o que Secanias tinha dito. E eles juraram.
6 ಎಜ್ರನು ಅಲ್ಲಿಂದೆದ್ದು ಎಲ್ಯಾಷೀಬನ ಮಗನಾದ ಯೆಹೋಹಾನನ ಕೋಣೆಗೆ ಹೋಗಿ ಅಲ್ಲಿ ಅನ್ನನೀರಿಲ್ಲದೆ ದುಃಖತಪ್ತನಾಗಿದ್ದನು. ಯಾಕೆಂದರೆ ಸೆರೆಯಿಂದ ಜೆರುಸಲೇಮಿಗೆ ಬಂದಿದ್ದ ಯೆಹೂದ್ಯರ ದ್ರೋಹದ ಬಗ್ಗೆ ಅವನು ತುಂಬಾ ದುಃಖಿತನಾಗಿದ್ದನು.
6 Aí Esdras saiu da frente do Templo e foi para o quarto de Joanã, filho de Eliasibe. Ele passou a noite ali, sem comer nem beber, porque estava muito triste por causa da infidelidade dos que haviam voltado da Babilônia.
7 ಆಮೇಲೆ ಅವನು ಯೆಹೂದಪ್ರಾಂತ್ಯ ಮತ್ತು ಜೆರುಸಲೇಮಿನಲ್ಲಿರುವ ಎಲ್ಲಾ ಯೆಹೂದ್ಯರಿಗೆ ಸಂದೇಶ ಕಳುಹಿಸಿದನು. ಅದರಲ್ಲಿ, ಸೆರೆಯಿಂದ ಹಿಂದಿರುಗಿದ್ದ ಯೆಹೂದ್ಯರೆಲ್ಲರೂ ಜೆರುಸಲೇಮಿನಲ್ಲಿ ಬಂದು ಸೇರಬೇಕು.
7 Depois mandaram anunciar em Jerusalém e em Judá que todos os que haviam voltado do cativeiro na Babilônia deviam reunir-se em Jerusalém.
8 ಮೂರು ದಿನಗಳೊಳಗೆ ಯಾರಾದರೂ ಬಾರದೆ ಹೋದಲ್ಲಿ ಅವರು ತಮ್ಮ ಆಸ್ತಿಯನ್ನು ಕಳೆದುಕೊಳ್ಳುವರು. ಈ ತೀರ್ಮಾನವನ್ನು ಪ್ರಮುಖರೂ ಅಧಿಕಾರಿಗಳೂ ಮಾಡಿದ್ದಾರೆ; ಆ ಮನುಷ್ಯನು ತಾನು ವಾಸಮಾಡುವ ಜನರ ಅನ್ಯೋನ್ಯತೆಯಿಂದ ತೆಗೆಯಲ್ಪಡುವನು.
8 Avisaram também que, por ordem dos governadores e líderes do povo, qualquer pessoa que não chegasse no prazo de três dias perderia as suas propriedades e também o direito de fazer parte do povo de Israel.
9 ಮೂರು ದಿನಗಳೊಳಗೆ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳವರಿಂದ ಎಲ್ಲಾ ಗಂಡಸರು ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿವಸದಲ್ಲಿ ಜೆರುಸಲೇಮಿನ ದೇವಾಲಯದ ಅಂಗಳಕ್ಕೆ ಬಂದು ಸೇರಿದರು. ನಡೆಯಲಿಕ್ಕಿರುವ ಕೂಟದ ಉದ್ದೇಶದಿಂದಲೂ ಆ ದಿವಸ ಬಂದಿದ್ದ ಮಳೆಯ ದೆಸೆಯಿಂದಲೂ ನೆರೆದಿದ್ದ ಜನರು ನಡುಗುತ್ತಿದ್ದರು.
9 E assim, dentro de três dias, no dia vinte do nono mês, todos os homens que moravam na região de Judá e de Benjamim chegaram a Jerusalém e se reuniram no pátio do Templo. Estava caindo uma chuva forte e, por causa do tempo e da importância daquele assunto, todos tremiam.
10 ಆಗ ಎಜ್ರನು ಎದ್ದುನಿಂತು ಜನರನ್ನುದ್ದೇಶಿಸಿ ಹೇಳಿದ್ದೇನೆಂದರೆ: “ನೀವು ದೇವರಿಗೆ ವಿಧೇಯರಾಗಿರಲಿಲ್ಲ. ಅನ್ಯಮತದ ಹೆಂಗಸರನ್ನು ನೀವು ಮದುವೆಯಾಗಿರುತ್ತೀರಿ. ಹೀಗೆ ಇಸ್ರೇಲಿನ ಪಾಪವು ಹೆಚ್ಚುವಂತೆ ನೀವು ಮಾಡಿದಿರಿ.
10 Então o sacerdote Esdras se levantou e disse: — Vocês foram infiéis e aumentaram a culpa do povo de Israel por terem casado com mulheres estrangeiras.
11 ಈಗ ನೀವು ಯೆಹೋವನಿಗೆ ವಿರೋಧವಾಗಿ ಪಾಪ ಮಾಡಿರುವುದಾಗಿ ಅರಿಕೆ ಮಾಡಬೇಕು. ಆತನೇ ನಮ್ಮ ಪೂರ್ವಿಕರ ದೇವರಾದ ಯೆಹೋವನು. ಆತನ ಆಜ್ಞೆಗಳಿಗೆ ನೀವು ವಿಧೇಯರಾಗಬೇಕು. ನಿಮ್ಮ ಅನ್ಯಜಾತಿಯ ಹೆಂಡತಿಯರಿಂದಲೂ ನಿಮ್ಮ ಸುತ್ತಲು ವಾಸಿಸುವ ಅನ್ಯ ಜನಾಂಗದವರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ.”
11 Portanto, confessem agora os seus pecados ao Senhor , o Deus dos seus antepassados, e façam o que lhe agrada. Afastem-se dos estrangeiros que vivem na nossa terra e mandem embora as mulheres estrangeiras com quem vocês casaram.
12 ಆಗ ಅಲ್ಲಿ ನೆರೆದುಬಂದವರೆಲ್ಲರೂ ಗಟ್ಟಿಯಾಗಿ ಎಜ್ರನಿಗೆ ಉತ್ತರಿಸುತ್ತಾ, “ಎಜ್ರನೇ, ನೀನು ಸರಿಯಾಗಿ ಹೇಳಿರುವೆ! ನೀನು ಹೇಳಿದಂತೆಯೇ ನಾವು ಮಾಡಬೇಕು.
12 E todo o povo respondeu em voz alta: — Sim! Faremos tudo o que o senhor mandar!
13 ಆದರೆ ಇಲ್ಲಿ ಹೆಚ್ಚು ಜನರು ಸೇರಿಬಂದಿದ್ದಾರೆ. ಮಳೆ ಸುರಿಯುತ್ತಲಿದೆ. ನಾವು ಹೆಚ್ಚು ಸಮಯ ಮಳೆಯಲ್ಲಿರಲು ಸಾಧ್ಯವಿಲ್ಲ. ನಾವು ಬಹಳ ಘೋರವಾದ ಪಾಪಮಾಡಿರುವುದರಿಂದ ಈ ಸಮಸ್ಯೆಯು ಒಂದೆರಡು ದಿನಗಳಲ್ಲಿ ಮುಗಿಯುವಂಥದಲ್ಲ.
13 Porém somos muitos, e a chuva está forte. Não podemos continuar aqui fora. O que o senhor está mandando não é coisa que se possa fazer em um ou dois dias, pois os que são culpados desse pecado são muitos.
14 ಈ ಕೂಟದಲ್ಲಿ ನಮ್ಮ ಹಿರಿಯರು, ಪ್ರಧಾನರು ಒಂದು ತೀರ್ಮಾನಕ್ಕೆ ಬರಲಿ. ಆಮೇಲೆ ನಮ್ಮನಮ್ಮ ಊರಿನಲ್ಲಿ ಅನ್ಯಸ್ತ್ರೀಯರನ್ನು ಮದುವೆ ಆದವರು ತಮ್ಮ ಪ್ರಧಾನರೊಂದಿಗೆ ಒಂದು ನೇಮಿತ ಸಮಯದಲ್ಲಿ ಇಲ್ಲಿಗೆ ಬರಲಿ. ಆಗ ದೇವರು ನಮ್ಮ ಮೇಲಿರುವ ತನ್ನ ಕೋಪವನ್ನು ನಿವಾರಿಸುವನು” ಎಂದು ಹೇಳಿದರು.
14 Deixe que os nossos chefes fiquem em Jerusalém e se encarreguem do caso. Então cada homem que vive nas nossas cidades e que casou com uma mulher estrangeira virá num dia marcado, acompanhado dos líderes e juízes da sua cidade. Desta maneira a ira de Deus por causa dessa situação se desviará de nós.
15 ಕೆಲವೇ ಮಂದಿ ಈ ಯೋಜನೆಗೆ ಒಪ್ಪಲಿಲ್ಲ. ಅವರಲ್ಲಿ ಅಸಾಹೇಲನ ಮಗನಾದ ಯೋನಾತಾನನೂ, ತಿಕ್ವನ ಮಗನಾದ ಯೆಹ್ಜೆಯನೂ ಇದ್ದರು. ಮೆಷುಲ್ಲಾಮ್ ಮತ್ತು ಲೇವಿಯನಾದ ಶಬ್ಚೆತೈ ಸಹ ಈ ಯೋಜನೆಗೆ ವಿರುದ್ಧವಾಗಿದ್ದರು.
15 Ninguém foi contra o plano, a não ser Jônatas, filho de Asael, e Jazeias, filho de Ticva. E Mesulã e Sabetai, o levita, os apoiaram.
16 ಜೆರುಸಲೇಮಿಗೆ ಹಿಂತಿರುಗಿಬಂದ ಇಸ್ರೇಲರು ಈ ಯೋಜನೆಯನ್ನು ಒಪ್ಪಿದ ಬಳಿಕ ಎಜ್ರನು ಅವರವರ ವಂಶದ ನಾಯಕರನ್ನು ಆರಿಸಿದನು. ಒಂದೊಂದು ವಂಶಕ್ಕೆ ಒಬ್ಬೊಬ್ಬ ನಾಯಕನನ್ನು ಆರಿಸಿಕೊಂಡನು. ಪ್ರತಿಯೊಬ್ಬನು ಹೆಸರಿಗನುಸಾರವಾಗಿ ಆರಿಸಲ್ಪಟ್ಟನು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಆ ನಾಯಕರೆಲ್ಲಾ ಒಟ್ಟಾಗಿಸೇರಿ ಒಂದೊಂದೇ ಪ್ರಕರಣಗಳನ್ನು ವಿಚಾರಿಸಿದರು.
16 Os que haviam voltado da Babilônia aceitaram o plano. Então o sacerdote Esdras escolheu alguns homens entre os chefes dos grupos de famílias e anotou os nomes deles. Estes começaram a investigação no dia primeiro do décimo mês.
17 ಮೊದಲನೇ ತಿಂಗಳಿನ ಮೊದಲನೆಯ ದಿನದಲ್ಲಿ ಎಲ್ಲಾ ಅನ್ಯಸ್ತ್ರೀಯರನ್ನು ಮದುವೆಯಾದವರ ವಿಷಯವನ್ನು ಪರಿಶೀಲಿಸುವ ಕಾರ್ಯವನ್ನು ಮುಗಿಸಿದರು.
17 E, nos três meses seguintes, eles examinaram todos os casos de homens que haviam casado com mulheres estrangeiras.
18 ಯಾಜಕ ಸಂತತಿಯವರಲ್ಲಿ ಅನ್ಯಸ್ತ್ರೀಯರನ್ನು ಮದುವೆಯಾದವರು:
18 Esta é a lista dos que casaram com mulheres estrangeiras: Sacerdotes, por grupos de famílias: Maaseias, Eliézer, Jaribe e Gedalias, da família de Josué, e os seus irmãos, filhos de Jozadaque.
19 ಇವರೆಲ್ಲಾ ತಮ್ಮ ಹೆಂಡತಿಯರನ್ನು ಬಿಟ್ಟುಬಿಡಬೇಕೆಂದು ತೀರ್ಮಾನಿಸಿದರು. ಇವರಲ್ಲಿ ಪ್ರತಿಯೊಬ್ಬರು ದೋಷಪರಿಹಾರಕ್ಕಾಗಿ ಹಿಂಡಿನ ಟಗರನ್ನು ಯಜ್ಞ ಮಾಡಿದರು.
19 Eles prometeram se divorciar das suas mulheres e ofereceram um carneiro como sacrifício pelos seus pecados.
20 ಇಮ್ಮೇರನ ಸಂತತಿಯವರಲ್ಲಿ ಹನಾನೀ, ಜೆಬದ.
20 Da família de Imer: Hanani e Zebadias.
21 ಹಾರೀಮನ ಸಂತತಿಯವರಲ್ಲಿ ಮಾಸೇಯ, ಎಲೀಯ, ಶೆಮಾಯ, ಯೆಹೀಯೇಲ್ ಮತ್ತು ಉಜ್ಜೀಯ.
21 Da família de Harim: Maaseias, Elias, Semaías, Jeiel e Uzias.
22 ಪಷ್ಹೂರನ ಸಂತತಿಯವರಲ್ಲಿ ಎಲ್ಯೋವೇನೈ, ಮಾಸೇಯ, ಇಷ್ಮಾಯೇಲ್, ನೆತನೇಲ್, ಯೋಜಾಬಾದ್ ಮತ್ತು ಎಲ್ಲಾಸ.
22 Da família de Pasur: Elioenai, Maaseias, Ismael, Netanel, Jozabade e Elasa.
23 ಲೇವಿಯವರಲ್ಲಿ
23 Levitas : Jozabade, Simei, Quelaías (também chamado de Quelita), Petaías, Judá e Eliézer.
24 ಗಾಯಕರಲ್ಲಿ ಎಲ್ಯಾಷೀಬ್ ಎಂಬವನು ಅನ್ಯಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು. ದ್ವಾರಪಾಲಕರಲ್ಲಿ ಶಲ್ಲೂಮ್, ಟೆಲೆಮ್ ಮತ್ತು ಊರೀ.
24 Músico: Eliasibe. Guardas do Templo: Salum, Telém e Uri.
25 ಇಸ್ರೇಲ್ ಜನಾಂಗದವರಿಂದ
25 Outros: Da família de Parós: Ramias, Jezias, Malquias, Miamim, Eleazar, Malquias e Benaías.
26 ಏಲಾಮನ ಸಂತತಿಯವರಲ್ಲಿ ಮತ್ತನ್ಯ, ಜೆಕರ್ಯ, ಯೆಹೀಯೇಲ್, ಅಬ್ದೀ, ಯೆರೇಮೋತ್ ಮತ್ತು ಏಲೀಯ.
26 Da família de Elão: Matanias, Zacarias, Jeiel, Abdi, Jerimote e Elias.
27 ಜತ್ತೂವಿನ ಸಂತತಿಯವರಲ್ಲಿ ಎಲ್ಯೋವೇನೈ, ಎಲ್ಯಾಷೀಬ್, ಮತ್ತನ್ಯ, ಯೆರೇಮೋತ್, ಜಾಬಾದ್ ಮತ್ತು ಅಜೀಚಾ.
27 Da família de Zatu: Elioenai, Eliasibe, Matanias, Jerimote, Zabade e Aziza.
28 ಬೇಬೈಯ ಸಂತತಿಯಿಂದ ಯೆಹೋಹಾನಾನ್, ಹನನ್ಯ, ಜಬ್ಬೈ ಮತ್ತು ಅತ್ಲೈ.
28 Da família de Bebai: Jeoanã, Hananias, Zabai e Atlai.
29 ಬಾನೀ ಸಂತತಿಯಿಂದ ಮೆಷುಲ್ಲಾಮ್, ಮಲ್ಲೂಕ್, ಆದಾಯ, ಯಾಷೂಬ್, ಶೆಯಾಲ್ ಮತ್ತು ರಾಮೋತ್.
29 Da família de Bani: Mesulã, Maluque, Adaías, Jasube, Seal e Jerimote.
30 ಪಹತ್ ಮೋವಾಬನ ಸಂತತಿಯಿಂದ ಆದ್ನ, ಕೆಲಾಲ್, ಬೆನಾಯ, ಮಾಸೇಯ, ಮತ್ತನ್ಯ, ಬೆಚಲೇಲ್, ಬಿನ್ನೂಯ್ ಮತ್ತು ಮನಸ್ಸೆ.
30 Da família de Paate-Moabe: Adna, Quelal, Benaías, Maaseias, Matanias, Bezalel, Binui e Manassés.
31 ಹಾರೀಮ್‌ನ ಸಂತತಿಯಿಂದ ಎಲೀಯೆಜೆರ್, ಇಷ್ಷೀಯ, ಮಲ್ಕೀಯ, ಶೆಮಾಯ, ಸಿಮೆಯೋನ್,
31 — ausente —
32 ಬೆನ್ಯಾಮೀನ್, ಮಲ್ಲೂಕ್ ಮತ್ತು ಶೆಮರ್ಯ.
32 — ausente —
33 ಹಾಷುಮನ ಸಂತತಿಯಿಂದ ಮತ್ತೆನೈ, ಮತ್ತತ್ತ, ಜಾಬಾದ್, ಎಲಿಫೆಲೆಟ್, ಯೆರೇಮೈ, ಮನಸ್ಸೆ ಮತ್ತು ಶಿಮ್ಮೀ.
33 Da família de Hasum: Matenai, Matata, Zabade, Elifelete, Jeremai, Manassés e Simei.
34 ಬಾನೀಯ ಸಂತತಿಯಿಂದ ಮಾದೈ, ಅಮ್ರಾಮ್, ಊವೇಲ್,
34 — ausente —
35 ಬೆನಾಯ, ಬೇದೆಯ, ಕೆಲೂಹು,
35 — ausente —
36 ವನ್ಯಾಹ, ಮೆರೇಮೊತ್, ಎಲ್ಯಾಷೀಬ್,
36 — ausente —
37 ಮತ್ತನ್ಯ, ಮತ್ತನೈ ಮತ್ತು ಯಾಸೈ.
37 — ausente —
38 ಬಿನ್ನೂಯಿಯ ಸಂತತಿಯವರಿಂದ ಯಾರೆಂದರೆ: ಶಿಮ್ಮೀ,
38 — ausente —
39 ಶೆಲೆಮ್ಯ, ನಾತಾನ್, ಆದಾಯ,
39 — ausente —
40 ಮಕ್ನದೆಬೈ, ಶಾಷೈ, ಶಾರೈ.
40 — ausente —
41 ಅಜರೇಲ್, ಶೆಲೆಮ್ಯ, ಶೆಮರ್ಯ,
41 — ausente —
42 ಶಲ್ಲೂಮ್, ಅಮರ್ಯ ಮತ್ತು ಯೋಸೇಫ್.
42 — ausente —
43 ನೆಬೋನ ಸಂತತಿಯಿಂದ ಯೆಗೀಯೇಲ್, ಮತ್ತಿತ್ಯ, ಜಾಬಾದ್, ಜೆಬೀನ, ಯದ್ದೈ, ಯೋವೇಲ್ ಮತ್ತು ಬೆನಾಯ.
43 Da família de Nebo: Jeiel, Matitias, Zabade, Zebina, Jadai, Joel e Benaías.
44 ಇವರೆಲ್ಲಾ ಅನ್ಯಸ್ತ್ರೀಯರನ್ನು ಮದುವೆಯಾದವರು. ಕೆಲವರಿಗೆ ಆ ಸ್ತ್ರೀಯರಲ್ಲಿ ಮಕ್ಕಳೂ ಹುಟ್ಟಿದ್ದರು.
44 Todos estes tinham mulheres estrangeiras. Eles se divorciaram delas e as mandaram embora com os seus filhos.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Esdras 10, comparar traduções ou montar um estudo — tudo direto pelo WhatsApp.