Êxodo 11
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVI
1 ಬಳಿಕ ಯೆಹೋವನು ಮೋಶೆಗೆ, “ನಾನು ಫರೋಹನಿಗೂ ಈಜಿಪ್ಟಿಗೂ ಮತ್ತೊಂದು ವಿಪತ್ತನ್ನು ಬರಮಾಡುತ್ತೇನೆ. ಆಗ ಅವನು ನಿಮ್ಮನ್ನು ಈಜಿಪ್ಟಿನಿಂದ ಕಳುಹಿಸುವನು; ನಿಮ್ಮನ್ನು ಬಲವಂತದಿಂದ ಕಳುಹಿಸಿಬಿಡುವನು.
1 Disse então o Senhor a Moisés: "Enviarei ainda mais uma praga sobre o faraó e sobre o Egito. Somente depois desta ele os deixará sair daqui e até os expulsará totalmente.
2 ನೀನು ಇಸ್ರೇಲರಿಗೆ ಈ ಸಂದೇಶವನ್ನು ತಿಳಿಸು: ‘ಸ್ತ್ರೀಯರೂ ಪುರುಷರೂ ತಮ್ಮ ನೆರೆಯವರಿಂದ ಬೆಳ್ಳಿಬಂಗಾರಗಳ ವಸ್ತುಗಳನ್ನು ಕೇಳಿಕೊಳ್ಳಬೇಕು.’
2 Diga ao povo, tanto aos homens como às mulheres, que peça aos seus vizinhos objetos de prata e de ouro".
3 ಈಜಿಪ್ಟಿನವರು ನಿಮಗೆ ದಯೆತೋರುವಂತೆ ಯೆಹೋವನು ಅವರನ್ನು ಪ್ರೇರೇಪಿಸುವನು. ಈಜಿಪ್ಟಿನ ಜನರು ಮತ್ತು ಫರೋಹನ ಅಧಿಕಾರಿಗಳು ಮೋಶೆಯನ್ನು ಮಹಾಪುರುಷನೆಂದು ತಿಳಿದುಕೊಂಡಿದ್ದಾರೆ” ಎಂದು ಹೇಳಿದನು.
3 O Senhor tornou os egípcios favoráveis ao povo, e o próprio Moisés era tido em alta estima no Egito pelos conselheiros do faraó e pelo povo.
4 ಮೋಶೆಯು ಜನರಿಗೆ, “ಯೆಹೋವನು ಹೀಗೆನ್ನುತ್ತಾನೆ: ‘ಇಂದು ಮಧ್ಯರಾತ್ರಿ ನಾನು ಈಜಿಪ್ಟಿನ ಮೂಲಕ ಹಾದುಹೋಗುವೆನು.
4 Disse, pois, Moisés ao faraó: "Assim diz o Senhor: ‘Por volta da meia-noite, passarei por todo o Egito.
5 ಈಜಿಪ್ಟಿನ ಚೊಚ್ಚಲು ಮಕ್ಕಳೆಲ್ಲರೂ ಅಂದರೆ ಫರೋಹನ ಚೊಚ್ಚಲು ಮಗನಿಂದಿಡಿದು ಧಾನ್ಯವನ್ನು ಬೀಸುವ ಸೇವಕಿಯ ಚೊಚ್ಚಲು ಮಗನವರೆಗೂ ಇರುವ ಚೊಚ್ಚಲು ಮಕ್ಕಳೆಲ್ಲರೂ ಸಾಯುವರು. ಇದಲ್ಲದೆ ಚೊಚ್ಚಲು ಪಶುಗಳೂ ಸಾಯುತ್ತವೆ.
5 Todos os primogênitos do Egito morrerão, desde o filho mais velho do faraó, herdeiro do trono, até o filho mais velho da escrava que trabalha no moinho, e também todas as primeiras crias do gado.
6 ಈಜಿಪ್ಟಿನಲ್ಲೆಲ್ಲಾ ದೊಡ್ಡ ಗೋಳಾಟ ಉಂಟಾಗುವುದು, ಅಂಥ ಗೋಳಾಟ ಈವರೆಗೂ ಆಗಿಲ್ಲ; ಮುಂದೆಯೂ ಆಗುವುದಿಲ್ಲ.
6 Haverá grande pranto em todo o Egito, como nunca houve antes nem jamais haverá.
7 ಆದರೆ ಇಸ್ರೇಲರಲ್ಲಿ ಯಾರಿಗೂ ಕೇಡಾಗುವುದಿಲ್ಲ. ಒಂದು ನಾಯಿಯೂ ಅವರಿಗೆ ಬೊಗಳುವುದಿಲ್ಲ. ಇಸ್ರೇಲಿನ ಜನರಿಗಾಗಲಿ ಪಶುಗಳಿಗಾಗಲಿ ಕೇಡಾಗುವುದಿಲ್ಲ. ಇಸ್ರೇಲರಿಗೂ ಮತ್ತು ಈಜಿಪ್ಟಿನವರಿಗೂ ನಾನು ವ್ಯತ್ಯಾಸ ಮಾಡಿದ್ದೇನೆಂದು ಆಗ ನೀವು ತಿಳಿದುಕೊಳ್ಳುವಿರಿ.
7 Entre os israelitas, porém, nem sequer um cão latirá contra homem ou animal’. Então vocês saberão que o Senhor faz distinção entre o Egito e Israel!
8 ಆಗ ನಿಮ್ಮ ಈ ಗುಲಾಮರೆಲ್ಲರೂ (ಈಜಿಪ್ಟಿನ ಅಧಿಕಾರಿಗಳು) ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನ್ನನ್ನು ಆರಾಧಿಸುವರು.’ ಅವರು, ‘ಹೊರಟುಹೋಗಿ, ನಿಮ್ಮ ಜನರೆಲ್ಲರನ್ನು ನಿಮ್ಮೊಂದಿಗೆ ಕರೆದುಕೊಂಡು ಹೋಗಿರಿ’ ಎಂದು ಹೇಳುವರು. ಆಗ ನಾನು ಫರೋಹನ ಬಳಿಯಿಂದ ಬಿಟ್ಟುಹೋಗುವೆನು” ಅಂದನು.
8 Todos esses seus conselheiros virão a mim e se ajoelharão diante de mim, suplicando: ‘Saiam você e todo o povo que o segue! ’ Só então eu sairei". E, com grande ira, Moisés saiu da presença do faraó.
9 ಬಳಿಕ ಯೆಹೋವನು ಮೋಶೆಗೆ, “ಫರೋಹನು ನಿನ್ನ ಮಾತಿಗೆ ಕಿವಿಗೊಡುವುದಿಲ್ಲ. ಯಾಕೆಂದರೆ ನಾನು ನನ್ನ ಮಹಾಶಕ್ತಿಯನ್ನು ಈಜಿಪ್ಟಿನಲ್ಲಿ ತೋರಿಸಬೇಕಾಗಿದೆ” ಅಂದನು.
9 O Senhor tinha dito a Moisés: "O faraó não lhes dará ouvidos, a fim de que os meus prodígios se multipliquem no Egito".
10 ಯೆಹೋವನು ಫರೋಹನ ಹೃದಯವನ್ನು ಕಠಿಣಗೊಳಿಸಿದ್ದರಿಂದ ಫರೋಹನು ಇಸ್ರೇಲರನ್ನು ಕಳುಹಿಸಿಕೊಡಲಿಲ್ಲ; ಆದ್ದರಿಂದ ಮೋಶೆ ಆರೋನರು ಈ ಅದ್ಭುತಕಾರ್ಯಗಳನ್ನೆಲ್ಲಾ ಮಾಡಿದರು.
10 Moisés e Arão realizaram todos esses prodígios diante do faraó, mas o Senhor lhe endureceu o coração, e ele não quis deixar os israelitas saírem do país.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Êxodo 11, comparar traduções ou montar um estudo — tudo direto pelo WhatsApp.