Êxodo 12
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARIB
1 ಮೋಶೆ ಆರೋನರು ಇನ್ನೂ ಈಜಿಪ್ಟಿನಲ್ಲಿದ್ದಾಗ ಯೆಹೋವನು ಅವರೊಡನೆ ಮಾತಾಡಿ,
1 Ora, o Senhor falou a Moisés e a Arão na terra do Egito, dizendo:
2 “ಈ ತಿಂಗಳು ನಿಮಗೆ ವರ್ಷದ ಮೊದಲನೆ ತಿಂಗಳಾಗಿರುವುದು.
2 Este mês será para vós o princípio dos meses; este vos será o primeiro dos meses do ano.
3 ಈ ಆಜ್ಞೆಯು ಇಡೀ ಇಸ್ರೇಲರ ಸಮೂಹಕ್ಕೆ ಅನ್ವಯಿಸುತ್ತದೆ. ಈ ತಿಂಗಳ ಹತ್ತನೆಯ ದಿನದಲ್ಲಿ ಪ್ರತಿಯೊಬ್ಬನು ತನ್ನ ಮನೆಯಲ್ಲಿರುವ ಜನರಿಗಾಗಿ ಒಂದು ಕುರಿಮರಿಯನ್ನು ಅಥವಾ ಒಂದು ಆಡುಮರಿಯನ್ನು ಕೊಯ್ಯಬೇಕು.
3 Falai a toda a congregação de Israel, dizendo: Ao décimo dia deste mês tomará cada um para si um cordeiro, segundo as casas dos pais, um cordeiro para cada família.
4 ಅದನ್ನು ಸಂಪೂರ್ಣವಾಗಿ ತಿನ್ನಲು ಅವನ ಮನೆಯಲ್ಲಿ ಸಾಕಷ್ಟು ಜನರಿಲ್ಲದಿದ್ದರೆ ಅವನು ತನ್ನ ನೆರೆಯವರನ್ನು ಆಮಂತ್ರಿಸಿ ಅವರೊಂದಿಗೆ ಅದರ ಮಾಂಸವನ್ನು ಹಂಚಿಕೊಳ್ಳಬೇಕು. ಪ್ರತಿಯೊಬ್ಬನಿಗೂ ತಿನ್ನಲು ಸಾಕಷ್ಟು ಮಾಂಸವಿರಬೇಕು.
4 Mas se a família for pequena demais para um cordeiro, tomá-lo-á juntamente com o vizinho mais próximo de sua casa, conforme o número de almas; conforme ao comer de cada um, fareis a conta para o cordeiro.
5 ಅದು ಒಂದು ವರ್ಷದ ಗಂಡು ಕುರಿಯಾಗಿರಬೇಕು ಅಥವಾ ಆಡಾಗಿರಬೇಕು. ಅಲ್ಲದೆ ಕಳಂಕ ರಹಿತವಾಗಿರಬೇಕು.
5 O cordeiro, ou cabrito, será sem defeito, macho de um ano, o qual tomareis das ovelhas ou das cabras,
6 ಈ ತಿಂಗಳ ಹದಿನಾಲ್ಕನೆಯ ದಿನದವರೆಗೆ ನೀವು ಆ ಪಶುವನ್ನು ಸಾಕಬೇಕು. ಅಂದು ಸಂಜೆ ಇಸ್ರೇಲರೆಲ್ಲರೂ ಆ ಪಶುಗಳನ್ನು ಕೊಯ್ಯಬೇಕು.
6 e o guardareis até o décimo quarto dia deste mês; e toda a assembléia da congregação de Israel o matará à tardinha:
7 ಈ ಪಶುಗಳ ರಕ್ತವನ್ನು ತೆಗೆದಿಟ್ಟು ಜನರು ಭೋಜನಮಾಡುವ ಮನೆಗಳ ಬಾಗಿಲಿನ ಎರಡು ನಿಲುವು ಕಂಬಗಳಿಗೂ ಮೇಲಿನ ಪಟ್ಟಿಗಳಿಗೂ ಆ ರಕ್ತವನ್ನು ಹಚ್ಚಬೇಕು.
7 Tomarão do sangue, e pô-lo-ão em ambos os umbrais e na verga da porta, nas casas em que o comerem.
8 “ಅಂದು ರಾತ್ರಿ ಆ ಪಶುವಿನ ಮಾಂಸವನ್ನು ಸುಟ್ಟು ಸಂಪೂರ್ಣವಾಗಿ ತಿನ್ನಬೇಕು. ಅದರೊಡನೆ ಕಹಿಯಾದ ಪಲ್ಯಗಳನ್ನೂ ಹುಳಿಯಿಲ್ಲದ ರೊಟ್ಟಿಯನ್ನೂ ತಿನ್ನಬೇಕು.
8 E naquela noite comerão a carne assada ao fogo, com pães ázimos; com ervas amargosas a comerão.
9 ನೀವು ಆ ಪಶುವಿನ ಮಾಂಸವನ್ನು ಹಸಿಯಾಗಲಿ ನೀರಿನಲ್ಲಿ ಬೇಯಿಸಿಯಾಗಲಿ ತಿನ್ನಬಾರದು; ಅದರ ಮಾಂಸವನ್ನು ಬೆಂಕಿಯ ಮೇಲಿಟ್ಟು ಬೇಯಿಸಬೇಕು. ಅದರ ತಲೆ, ಕಾಲುಗಳನ್ನೂ ಒಳಗಿನ ಭಾಗಗಳನ್ನೂ ಬೆಂಕಿಯ ಮೇಲೆ ಬೇಯಿಸಬೇಕು.
9 Não comereis dele cru, nem cozido em água, mas sim assado ao fogo; a sua cabeça com as suas pernas e com a sua fressura.
10 ಅದರ ಮಾಂಸವನ್ನೆಲ್ಲಾ ಆ ರಾತ್ರಿಯಲ್ಲಿಯೇ ತಿನ್ನಬೇಕು. ಬೆಳಗಾಗುವವರೆಗೆ ಮಾಂಸವೇನಾದರೂ ಉಳಿದರೆ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
10 Nada dele deixareis até pela manhã; mas o que dele ficar até pela manhã, queimá-lo-eis no fogo.
11 “ನೀವು ಭೋಜನ ಮಾಡುವಾಗ ಪ್ರಯಾಣ ಮಾಡುತ್ತಿರುವಂತೆ ಬಟ್ಟೆ ಧರಿಸಿಕೊಂಡಿರಬೇಕು; ಕೆರಗಳನ್ನು ಹಾಕಿಕೊಂಡು ನಿಮ್ಮ ಊರುಗೋಲನ್ನು ಕೈಯಲ್ಲಿ ಹಿಡಿದಿರಬೇಕು. ನೀವು ಅವಸವಸರವಾಗಿ ತಿನ್ನಬೇಕು. ಯಾಕೆಂದರೆ ಇದು ಯೆಹೋವನ ಪಸ್ಕಹಬ್ಬ.
11 Assim pois o comereis: Os vossos lombos cingidos, os vossos sapatos nos pés, e o vosso cajado na mão; e o comereis apressadamente; esta é a páscoa do Senhor.
12 “ಆ ರಾತ್ರಿ ನಾನು ಈಜಿಪ್ಟಿನ ಮೂಲಕ ಹಾದುಹೋಗಿ ಈಜಿಪ್ಟಿನ ಚೊಚ್ಚಲು ಪಶುಗಳನ್ನೂ ಚೊಚ್ಚಲು ಗಂಡುಮಕ್ಕಳನ್ನೂ ಕೊಲ್ಲುವೆನು; ಈಜಿಪ್ಟಿನ ಎಲ್ಲಾ ದೇವರುಗಳಿಗೆ ತೀರ್ಪು ಮಾಡುವೆನು. ನಾನೇ ಯೆಹೋವನೆಂದು ತೋರಿಸಿಕೊಡುವೆನು.
12 Porque naquela noite passarei pela terra do Egito, e ferirei todos os primogênitos na terra do Egito, tanto dos homens como dos animais; e sobre todos os deuses do Egito executarei juízos; eu sou o Senhor.
13 ಆದರೆ ನಿಮ್ಮ ಮನೆಗಳಿಗೆ ಹಚ್ಚಿರುವ ರಕ್ತವು ಒಂದು ವಿಶೇಷ ಸೂಚನೆಯಾಗಿದೆ. ನಾನು ಆ ರಕ್ತವನ್ನು ನೋಡಿದಾಗ ನಿಮ್ಮ ಮನೆಯನ್ನು ದಾಟಿಹೋಗುವೆನು. ಈಜಿಪ್ಟಿನ ಜನರಿಗೆ ಕೇಡುಗಳಾಗುವಂತೆ ಮಾಡುವೆನು. ಆದರೆ ಆ ವ್ಯಾಧಿಗಳು ನಿಮಗೆ ಹಾನಿ ಮಾಡುವುದಿಲ್ಲ.
13 Mas o sangue vos será por sinal nas casas em que estiverdes; vendo eu o sangue, passarei por cima de vós, e não haverá entre vós praga para vos destruir, quando eu ferir a terra do Egito. :
14 “ಆದ್ದರಿಂದ ನೀವು ಆ ರಾತ್ರಿಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವಿರಿ. ಅದು ನಿಮಗೆ ವಿಶೇಷವಾದ ಹಬ್ಬವಾಗಿರುವುದು. ನಿಮ್ಮ ಸಂತತಿಯವರು ಈ ಹಬ್ಬದಿಂದ ಯೆಹೋವನನ್ನು ಎಂದೆಂದಿಗೂ ಸನ್ಮಾನಿಸುವರು.
14 E este dia vos será por memorial, e celebrá-lo-eis por festa ao Senhor; através das vossas gerações o celebrareis por estatuto perpétuo.
15 ಈ ಹಬ್ಬದಲ್ಲಿ ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನುವಿರಿ. ಹಬ್ಬದ ಪ್ರಥಮ ದಿನದಲ್ಲಿ ನೀವು ನಿಮ್ಮ ಮನೆಯಿಂದ ಎಲ್ಲಾ ಹುಳಿಯನ್ನು ತೆಗೆದುಹಾಕುವಿರಿ. ಈ ಹಬ್ಬದ ಏಳು ದಿನಗಳಲ್ಲಿ ಯಾವುದೇ ಹುಳಿಯನ್ನು ತಿನ್ನಬಾರದು. ಯಾವನಾದರೂ ಹುಳಿಯನ್ನು ತಿಂದರೆ, ನೀವು ಅವನನ್ನು ಇಸ್ರೇಲಿನಿಂದ ಬಹಿಷ್ಕರಿಸಬೇಕು.
15 Por sete dias comereis pães ázimos; logo ao primeiro dia tirareis o fermento das vossas casas, porque qualquer que comer pão levedado, entre o primeiro e o sétimo dia, esse será cortado de Israel.
16 ಈ ಹಬ್ಬದ ಪ್ರಥಮ ಮತ್ತು ಕೊನೆಯ ದಿನಗಳಲ್ಲಿ ಪವಿತ್ರ ಸಭೆಯಾಗಿ ಕೂಡಿಬರಬೇಕು. ಈ ಹಬ್ಬದ ದಿನಗಳಲ್ಲಿ ನೀವು ಯಾವ ಕೆಲಸವನ್ನೂ ಮಾಡಬಾರದು. ಆದರೆ ನಿಮ್ಮ ಭೋಜನಕ್ಕಾಗಿ ಆಹಾರ ಸಿದ್ಧಪಡಿಸಬಹುದು.
16 E ao primeiro dia haverá uma santa convocação; também ao sétimo dia tereis uma santa convocação; neles não se fará trabalho algum, senão o que diz respeito ao que cada um houver de comer; somente isso poderá ser feito por vós.
17 ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಲೇಬೇಕು. ಯಾಕೆಂದರೆ ಆ ದಿನದಲ್ಲಿಯೇ ನಾನು ನಿಮ್ಮ ಎಲ್ಲಾ ಜನರ ಗುಂಪುಗಳನ್ನು ಈಜಿಪ್ಟಿನಿಂದ ಬಿಡಿಸಿ ಕರೆದುಕೊಂಡು ಹೋದೆನು. ಆದ್ದರಿಂದ ನಿಮ್ಮ ಸಂತತಿಯವರೆಲ್ಲರೂ ಆ ದಿನವನ್ನು ಜ್ಞಾಪಕಮಾಡಿಕೊಳ್ಳಬೇಕು. ಇದು ಶಾಶ್ವತವಾದ ಕಟ್ಟಳೆಯಾಗಿದೆ.
17 Guardareis, pois, a festa dos pães ázimos, porque nesse mesmo dia tirei vossos exércitos da terra do Egito; pelo que guardareis este dia através das vossas gerações por estatuto perpétuo.
18 ಆದ್ದರಿಂದ ಪ್ರಥಮ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಲು ಆರಂಭಿಸಿ ಅದೇ ತಿಂಗಳ ಇಪ್ಪತ್ತೊಂದನೇ ದಿನದ ಸಾಯಂಕಾಲದವರೆಗೂ ತಿನ್ನುವಿರಿ.
18 No primeiro mês, aos catorze dias do mês, à tarde, comereis pães ázimos até vinte e um do mês à tarde.
19 ಏಳು ದಿನಗಳವರೆಗೆ ನಿಮ್ಮ ಮನೆಗಳಲ್ಲಿ ಯಾವ ಹುಳಿಯೂ ಇರಬಾರದು. ಯಾವ ಇಸ್ರೇಲಿಯಾದರೂ ಯಾವ ವಿದೇಶಿಯನಾದರೂ ಈ ಹಬ್ಬದಲ್ಲಿ ಹುಳಿಯನ್ನು ತಿಂದರೆ, ಅವನನ್ನು ಇಸ್ರೇಲರ ಸಮುದಾಯದಿಂದ ಬಹಿಷ್ಕರಿಸಬೇಕು.
19 Por sete dias não se ache fermento algum nas vossas casas; porque qualquer que comer pão levedado, esse será cortado da congregação de Israel, tanto o peregrino como o natural da terra.
20 ಈ ಹಬ್ಬದಲ್ಲಿ ನೀವು ಹುಳಿಯನ್ನು ತಿನ್ನಬಾರದು. ನೀವು ಎಲ್ಲೇ ವಾಸವಾಗಿದ್ದರೂ ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು” ಎಂದು ಹೇಳಿದನು.
20 Nenhuma coisa levedada comereis; em todas as vossas habitações comereis pães ázimos.
21 ಆದ್ದರಿಂದ ಮೋಶೆಯು ಹಿರಿಯರ ಸಭೆ ಸೇರಿಸಿ, “ನಿಮ್ಮ ಕುಟುಂಬಗಳಿಗೆ ಬೇಕಾದ ಪಶುಗಳನ್ನು ತೆಗೆದುಕೊಂಡು ಪಸ್ಕಕ್ಕಾಗಿ ಅವುಗಳನ್ನು ಕೊಯ್ಯಿರಿ.
21 Chamou, pois, Moisés todos os anciãos de Israel, e disse-lhes: Ide e tomai-vos cordeiros segundo as vossas famílias, e imolai a páscoa.
22 ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ರಕ್ತ ತುಂಬಿರುವ ಪಾತ್ರೆಯಲ್ಲಿ ಅದ್ದಿರಿ. ರಕ್ತವನ್ನು ಬಾಗಿಲಿನ ನಿಲುವು ಕಂಬಗಳಿಗೆ ಮತ್ತು ಮೇಲಿನ ಪಟ್ಟಿಗಳಿಗೆ ಹಚ್ಚಿರಿ. ಮುಂಜಾನೆಯಾಗುವವರೆಗೆ ಯಾರೂ ತಮ್ಮ ಮನೆಯನ್ನು ಬಿಟ್ಟು ಹೊರಗೆ ಹೋಗಬಾರದು.
22 Então tomareis um molho de hissopo, embebê-lo-eis no sangue que estiver na bacia e marcareis com ele a verga da porta e os dois umbrais; mas nenhum de vós sairá da porta da sua casa até pela manhã.
23 ಆ ಸಮಯದಲ್ಲಿ ಚೊಚ್ಚಲಾದವುಗಳನ್ನು ಸಂಹರಿಸಲು ಯೆಹೋವನು ಈಜಿಪ್ಟಿನ ಮೂಲಕ ಹಾದುಹೋಗುವನು. ಬಾಗಿಲಿನ ನಿಲುವು ಕಂಬಗಳಿಗೆ ಮತ್ತು ಮೇಲಿನ ಪಟ್ಟಿಗಳಿಗೆ ಹಚ್ಚಿದ ರಕ್ತವನ್ನು ಯೆಹೋವನು ನೋಡಿ ಆ ಮನೆಯನ್ನು ಸಂರಕ್ಷಿಸುವನು. ಸಂಹಾರಕನು ನಿಮ್ಮ ಮನೆಯೊಳಗೆ ಬಂದು ಸಂಹರಿಸಲು ಯೆಹೋವನು ಬಿಡುವುದಿಲ್ಲ.
23 Porque o Senhor passará para ferir aos egípcios; e, ao ver o sangue na verga da porta e em ambos os umbrais, o Senhor passará aquela porta, e não deixará o destruidor entrar em vossas casas para vos ferir.
24 ನೀವು ಈ ಆಜ್ಞೆಯನ್ನು ಜ್ಞಾಪಕದಲ್ಲಿಡಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮವಾಗಿದೆ.
24 Portanto guardareis isto por estatuto para vós e para vossos filhos, para sempre.
25 ಯೆಹೋವನು ನಿಮಗೆ ಕೊಡಲಿರುವ ದೇಶಕ್ಕೆ ನೀವು ಹೋದಾಗಲೂ ಈ ಹಬ್ಬವನ್ನು ಆಚರಿಸಬೇಕು.
25 Quando, pois, tiverdes entrado na terra que o Senhor vos dará, como tem prometido, guardareis este culto.
26 ‘ಈ ಹಬ್ಬವನ್ನು ಮಾಡುವುದೇಕೆ?’ ಎಂದು ನಿಮ್ಮ ಮಕ್ಕಳು ನಿಮ್ಮನ್ನು ಕೇಳುವಾಗ,
26 E quando vossos filhos vos perguntarem: Que quereis dizer com este culto?
27 ‘ಇದು ಯೆಹೋವನನ್ನು ಸನ್ಮಾನಿಸಲು ಮಾಡುವ ಪಸ್ಕಹಬ್ಬವಾಗಿದೆ. ಯಾಕೆಂದರೆ ನಾವು ಈಜಿಪ್ಟಿನಲ್ಲಿದ್ದಾಗ ಯೆಹೋವನು ಇಸ್ರೇಲರ ಮನೆಗಳನ್ನು ಬಿಟ್ಟು ದಾಟಿಹೋದನು; ಈಜಿಪ್ಟಿನವರನ್ನು ಸಂಹರಿಸಿದನು; ಆದರೆ ಆತನು ನಮ್ಮ ಮನೆಗಳಲ್ಲಿದ್ದವರನ್ನು ರಕ್ಷಿಸಿದನು’ ಎಂದು ಹೇಳಬೇಕು.
27 Respondereis: Este é o sacrifício da páscoa do Senhor, que passou as casas dos filhos de Israel no Egito, quando feriu os egípcios, e livrou as nossas casas. Então o povo inclinou-se e adorou.
28 ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ್ದಂತೆಯೇ ಇಸ್ರೇಲರು ಮಾಡಿದರು.
28 E foram os filhos de Israel, e fizeram isso; como o Senhor ordenara a Moisés e a Arão, assim fizeram.
29 ಮಧ್ಯರಾತ್ರಿಯಲ್ಲಿ ಯೆಹೋವನು ಈಜಿಪ್ಟಿನಲ್ಲಿದ್ದ ಚೊಚ್ಚಲು ಗಂಡುಮಕ್ಕಳನ್ನೆಲ್ಲಾ ಸಂಹರಿಸಿದನು. ಫರೋಹನ ಚೊಚ್ಚಲು ಮಗನಿಂದಿಡಿದು ಸೆರೆಮನೆಯಲ್ಲಿದ್ದ ಕೈದಿಯ ಚೊಚ್ಚಲು ಮಗನವರೆಗೆ ಇರುವ ಎಲ್ಲಾ ಚೊಚ್ಚಲು ಮಕ್ಕಳನ್ನು ಆತನು ಸಂಹರಿಸಿದನು. ಚೊಚ್ಚಲು ಪಶುಗಳೂ ಸಂಹರಿಸಲ್ಪಟ್ಟವು.
29 E aconteceu que à meia-noite o Senhor feriu todos os primogênitos na terra do Egito, desde o primogênito de Faraó, que se assentava em seu trono, até o primogênito do cativo que estava no cárcere, e todos os primogênitos dos animais.
30 ಆ ರಾತ್ರಿಯಲ್ಲಿ ಫರೋಹನೂ ಅವನ ಅಧಿಕಾರಿಗಳೂ ಈಜಿಪ್ಟಿನ ಜನರೆಲ್ಲರೂ ಎದ್ದರು. ಈಜಿಪ್ಟಿನಲ್ಲಿ ಮಹಾ ಗೋಳಾಟ ಉಂಟಾಯಿತು. ಯಾಕೆಂದರೆ ಸಾವಿಲ್ಲದ ಮನೆಯೇ ಇರಲಿಲ್ಲ.
30 E Faraó levantou-se de noite, ele e todos os seus servos, e todos os egípcios; e fez-se grande clamor no Egito, porque não havia casa em que não houvesse um morto.
31 ಆದ್ದರಿಂದ ಆ ರಾತ್ರಿ, ಫರೋಹನು ಮೋಶೆ ಆರೋನರನ್ನು ಕರೆಸಿ, “ನನ್ನ ಜನರನ್ನು ಬಿಟ್ಟುಹೋಗಿರಿ. ನೀವು ಕೇಳಿಕೊಂಡಂತೆ ನೀವು ಮತ್ತು ನಿಮ್ಮ ಜನರು ಹೊರಟುಹೋಗಿ ಯೆಹೋವನನ್ನು ಆರಾಧಿಸಿರಿ.
31 Então Faraó chamou Moisés e Arão de noite, e disse: Levantai-vos, saí do meio do meu povo, tanto vós como os filhos de Israel; e ide servir ao Senhor, como tendes dito.
32 ನೀವು ಕೇಳಿಕೊಂಡಂತೆ ನಿಮ್ಮ ಕುರಿಗಳನ್ನೂ ದನಕರುಗಳನ್ನೂ ನಿಮ್ಮೊಂದಿಗೆ ತೆಗೆದುಕೊಂಡು ಹೋಗಿರಿ! ನನ್ನನ್ನು ಆಶೀರ್ವಾದಿಸಿರಿ!” ಎಂದು ಹೇಳಿದನು.
32 Levai também convosco os vossos rebanhos e o vosso gado, como tendes dito; e ide, e abençoai-me também a mim.
33 ಈಜಿಪ್ಟಿನ ಜನರು ಸಹ ತಮ್ಮನ್ನು ಬೇಗನೆ ಬಿಟ್ಟು ಹೋಗಬೇಕೆಂದು ಇಸ್ರೇಲರನ್ನು ಬೇಡಿಕೊಂಡು, “ನೀವು ಬಿಟ್ಟು ಹೋಗದಿದ್ದರೆ, ನಾವೆಲ್ಲಾ ಸಾಯುವೆವು” ಎಂದು ಹೇಳಿದರು.
33 E os egípcios apertavam ao povo, e apressando-se por lançá-los da terra; porque diziam: Estamos todos mortos.
34 ತಮ್ಮ ರೊಟ್ಟಿಗೆ ಹುಳಿಹಾಕಲು ಇಸ್ರೇಲರಿಗೆ ಸಮಯವಿರಲಿಲ್ಲ. ಅವರು ಹಿಟ್ಟಿನ ಮುದ್ದೆಯನ್ನು ಬಟ್ಟೆಯಲ್ಲಿ ಸುತ್ತಿ ಹೆಗಲಿನ ಮೇಲೆ ಹೊತ್ತುಕೊಂಡು ಹೋದರು.
34 Ao que o povo tomou a massa, antes que ela levedasse, e as amassadeiras atadas e em seus vestidos, sobre os ombros.
35 ಅಲ್ಲದೆ ಮೋಶೆಯು ಹೇಳಿದಂತೆಯೇ ಇಸ್ರೇಲರು ತಮ್ಮ ನೆರೆಮನೆಯವರ ಬಳಿಗೆ ಹೋಗಿ ಬಟ್ಟೆಗಳನ್ನೂ ಬೆಳ್ಳಿಬಂಗಾರಗಳ ವಸ್ತುಗಳನ್ನೂ ಕೇಳಿಕೊಂಡರು.
35 Fizeram, pois, os filhos de Israel conforme a palavra de Moisés, e pediram aos egípcios jóias de prata, e jóias de ouro, e vestidos.
36 ಈಜಿಪ್ಟಿನವರು ಇಸ್ರೇಲರಿಗೆ ದಯೆ ತೋರಿಸುವಂತೆ ಯೆಹೋವನು ಪ್ರೇರೇಪಿಸಿದ್ದರಿಂದ ಈಜಿಪ್ಟಿನವರು ತಮ್ಮ ಸ್ವತ್ತುಗಳನ್ನು ಇಸ್ರೇಲರಿಗೆ ಕೊಟ್ಟುಬಿಟ್ಟರು.
36 E o Senhor deu ao povo graça aos olhos dos egípcios, de modo que estes lhe davam o que pedia; e despojaram aos egípcios.
37 ಇಸ್ರೇಲರು ರಮ್ಸೇಸ್‌ನಿಂದ ಸುಕ್ಕೋತಿಗೆ ಪ್ರಯಾಣ ಮಾಡಿದರು. ಅವರಲ್ಲಿ ಸುಮಾರು ಆರು ಲಕ್ಷಮಂದಿ ಗಂಡಸರಿದ್ದರು. (ಈ ಸಂಖ್ಯೆಯಲ್ಲಿ ಮಕ್ಕಳು ಮತ್ತು ಹೆಂಗಸರು ಸೇರಿಲ್ಲ.)
37 Assim viajaram os filhos de Israel de a Ramessés a Sucote, cerca de seiscentos mil homens de pé, sem contar as crianças.
38 ಲೆಕ್ಕವಿಲ್ಲದಷ್ಟು ಕುರಿಗಳೂ ದನಕರುಗಳೂ ಇವರೊಂದಿಗಿದ್ದವು. ಇಸ್ರೇಲರಲ್ಲದ ಬೇರೆ ಜನರು ಸಹ ಇಸ್ರೇಲರೊಂದಿಗೆ ಈಜಿಪ್ಟಿನಿಂದ ಹೊರಟರು.
38 Também subiu com eles uma grande mistura de gente; e, em rebanhos e manadas, uma grande quantidade de gado.
39 ರೊಟ್ಟಿಗೆ ಹುಳಿಹಾಕುವಷ್ಟು ಸಮಯವೂ ಜನರಿಗೆ ಇರಲಿಲ್ಲ; ಅವರು ತಮ್ಮ ಪ್ರಯಾಣಕ್ಕಾಗಿ ವಿಶೇಷ ಆಹಾರವನ್ನು ತಯಾರಿಸುವುದಕ್ಕೂ ಆಗಲಿಲ್ಲ. ಆದ್ದರಿಂದ ಅವರು ಹುಳಿಯಿಲ್ಲದ ರೊಟ್ಟಿ ಮಾಡಿ ತಮ್ಮೊಡನೆ ತೆಗೆದುಕೊಂಡು ಹೋದರು.
39 E cozeram bolos ázimos da massa que levaram do Egito, porque ela não se tinha levedado, porquanto foram lançados do Egito; e não puderam deter-se, nem haviam preparado comida.
40 ಇಸ್ರೇಲರು ಈಜಿಪ್ಟಿನಲ್ಲಿ ನಾನೂರಮೂವತ್ತು ವರ್ಷ ವಾಸಿಸಿದರು.
40 Ora, o tempo que os filhos de Israel moraram no Egito foi de quatrocentos e trinta anos.
41 ನಾನೂರಮೂವತ್ತು ವರ್ಷಗಳಾದ ನಂತರ, ಅದೇ ದಿನದಂದು ಯೆಹೋವನ ಸೈನ್ಯಗಳೆಲ್ಲಾ ಈಜಿಪ್ಟನ್ನು ಬಿಟ್ಟು ಹೊರಟವು.
41 E aconteceu que, ao fim de quatrocentos e trinta anos, naquele mesmo dia, todos os exércitos do Senhor saíram da terra do Egito.
42 ಆದ್ದರಿಂದ ಯೆಹೋವನು ಅವರನ್ನು ಸಂರಕ್ಷಿಸಿ ಈಜಿಪ್ಟಿನಿಂದ ಹೊರತಂದದ್ದನ್ನು ಜ್ಞಾಪಕಮಾಡುವ ಆ ರಾತ್ರಿ ಬಹು ವಿಶೇಷವಾದ ರಾತ್ರಿಯಾಗಿದೆ. ಇಸ್ರೇಲರೆಲ್ಲರೂ ಆ ರಾತ್ರಿಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವರು.
42 Esta é uma noite que se deve guardar ao Senhor, porque os tirou da terra do Egito; esta é a noite do Senhor, que deve ser guardada por todos os filhos de Israel através das suas gerações.
43 ಯೆಹೋವನು ಮೋಶೆ ಆರೋನರಿಗೆ, “ಪಸ್ಕಹಬ್ಬದ ನಿಯಮಗಳು ಇಂತಿವೆ: ಯಾವ ಪರದೇಶಿಯೂ ಪಸ್ಕಹಬ್ಬದ ಊಟವನ್ನು ಮಾಡಬಾರದು.
43 Disse mais o Senhor a Moisés e a Arão: Esta é a ordenança da páscoa; nenhum, estrangeiro comerá dela;
44 ಆದರೆ ಸುನ್ನತಿ ಮಾಡಿಸಿಕೊಂಡಿರುವ ಗುಲಾಮನು ಪಸ್ಕಹಬ್ಬದ ಊಟವನ್ನು ಮಾಡಬಹುದು.
44 mas todo escravo comprado por dinheiro, depois que o houveres circuncidado, comerá dela.
45 ಆದರೆ ನಿಮ್ಮ ದೇಶದಲ್ಲಿ ಕೇವಲ ವಾಸವಾಗಿರುವವರಾಗಲಿ ಕೂಲಿಯಾಳಾಗಲಿ ಪಸ್ಕಹಬ್ಬದ ಊಟ ಮಾಡಬಾರದು.
45 O forasteiro e o assalariado não comerão dela.
46 “ಪಸ್ಕಹಬ್ಬದ ಊಟವನ್ನು ಮನೆಯೊಳಗೆ ತಿನ್ನಬೇಕು. ಪಸ್ಕದ ಮಾಂಸವನ್ನು ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಕೂಡದು. ಕುರಿಮರಿಯ ಎಲುಬುಗಳಲ್ಲಿ ಯಾವುದನ್ನೂ ಮುರಿಯಬಾರದು.
46 Numa só casa se comerá o cordeiro; não levareis daquela carne fora da casa nem lhe quebrareis osso algum.
47 ಇಸ್ರೇಲರ ಇಡೀ ಸಮೂಹವು ಈ ಹಬ್ಬವನ್ನು ಆಚರಿಸಬೇಕು.
47 Toda a congregação de Israel a observará.
48 ನಿಮ್ಮ ಮಧ್ಯದಲ್ಲಿ ವಾಸವಾಗಿರುವ ಪರದೇಶದವನು ಯೆಹೋವನ ಪಸ್ಕ ಭೋಜನದಲ್ಲಿ ಪಾಲುಗಾರನಾಗಬೇಕೆಂದು ಬಯಸಿದರೆ ಅವನು ಸುನ್ನತಿ ಮಾಡಿಸಿಕೊಳ್ಳಬೇಕು. ಆಗ ಅವನು ಇಸ್ರೇಲಿನವನಾಗುವುದರಿಂದ ಭೋಜನದಲ್ಲಿ ಪಾಲುಗಾರನಾಗಬಹುದು. ಆದರೆ ಸುನ್ನತಿಯಾಗಿಲ್ಲದವನು ಪಸ್ಕದ ಊಟ ಮಾಡಕೂಡದು.
48 Quando, porém, algum estrangeiro peregrinar entre vós e quiser celebrar a páscoa ao Senhor, circuncidem-se todos os seus varões; então se chegará e a celebrará, e será como o natural da terra; mas nenhum incircunciso comerá dela.
49 ಪ್ರತಿಯೊಬ್ಬರಿಗೂ ಇದೇ ನಿಯಮ ಅನ್ವಯಿಸುತ್ತದೆ. ಸ್ವದೇಶದವನಿಗೂ ನಿಮ್ಮಲ್ಲಿ ವಾಸವಾಗಿರುವ ಪರದೇಶದವನಿಗೂ ಒಂದೇ ನಿಯಮವಿರಬೇಕು” ಅಂದನು.
49 Haverá uma mesma lei para o natural e para o estrangeiro que peregrinar entre vós.
50 ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದಂತೆಯೇ ಇಸ್ರೇಲರೆಲ್ಲರೂ ಮಾಡಿದರು.
50 Assim, pois, fizeram todos os filhos de Israel; como o Senhor ordenara a Moisés e a Arão, assim fizeram.
51 ಆದ್ದರಿಂದ ಅದೇ ದಿನದಲ್ಲಿ ಯೆಹೋವನು ಇಸ್ರೇಲರನ್ನು ಈಜಿಪ್ಟ್ ದೇಶದಿಂದ ಜನರನ್ನು ಗುಂಪುಗುಂಪುಗಳಾಗಿ ಹೊರತಂದನು.
51 E naquele mesmo dia o Senhor tirou os filhos de Israel da terra do Egito, segundo os seus exércitos.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Êxodo 12, comparar traduções ou montar um estudo — tudo direto pelo WhatsApp.