Êxodo 13
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARC
1 ಬಳಿಕ ಯೆಹೋವನು ಮೋಶೆಗೆ,
1 Então, falou o Senhor a Moisés, dizendo:
2 “ಇಸ್ರೇಲರಲ್ಲಿ ಹುಟ್ಟಿದ ಚೊಚ್ಚಲು ಗಂಡುಮಕ್ಕಳೆಲ್ಲಾ ನನಗೆ ಮೀಸಲಾಗಿರಬೇಕು; ಪ್ರತಿಯೊಬ್ಬ ಚೊಚ್ಚಲು ಮಗನು ನನ್ನವನೇ. ಪ್ರತಿಯೊಂದು ಚೊಚ್ಚಲು ಪಶುವು ನನ್ನದೇ” ಎಂದು ಹೇಳಿದನು.
2 Santifica-me todo primogênito, o que abrir toda madre entre os filhos de Israel, de homens e de animais; porque meu é.
3 ಮೋಶೆಯು ಜನರಿಗೆ, “ನೀವು ಈಜಿಪ್ಟಿನ ಗುಲಾಮತನದಿಂದ ಬಿಡುಗಡೆಯಾದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಆದರೆ ಈ ದಿನದಲ್ಲಿ ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ನೀವು ಹುಳಿಯಿರುವ ರೊಟ್ಟಿಯನ್ನು ತಿನ್ನಬಾರದು.
3 E Moisés disse ao povo: Lembrai-vos deste mesmo dia, em que saístes do Egito, da casa da servidão; pois, com mão forte, o Senhor vos tirou daqui; portanto, não comereis pão levedado.
4 ಅಬೀಬ್ ತಿಂಗಳಿನ ಈ ದಿನದಲ್ಲಿ ನೀವು ಈಜಿಪ್ಟನ್ನು ಬಿಟ್ಟು ಹೊರಟಿರಿ.
4 Hoje, no mês de abibe, vós saís.
5 ಆಗ ಯೆಹೋವನು ಒಂದು ವಿಶೇಷ ವಾಗ್ದಾನವನ್ನು ನಿಮ್ಮ ಪೂರ್ವಿಕರಿಗೆ ಮಾಡಿದನು. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸಿಸುವ ಸಮೃದ್ಧಿಕರವಾದ ದೇಶವನ್ನು ನಿಮಗೆ ಕೊಡುವುದಾಗಿ ಯೆಹೋವನು ವಾಗ್ದಾನ ಮಾಡಿದನು. ಆತನು ನಿಮಗೆ ಆ ದೇಶವನ್ನು ಕೊಟ್ಟಾಗ ಪ್ರತಿವರ್ಷದ ಮೊದಲನೆಯ ತಿಂಗಳ ಈ ದಿನವನ್ನು ಆರಾಧನೆಯ ವಿಶೇಷ ದಿನವನ್ನಾಗಿ ಇಟ್ಟುಕೊಳ್ಳಬೇಕು.
5 E acontecerá que, quando o Senhor te houver metido na terra dos cananeus, e dos heteus, e dos amorreus, e dos heveus, e dos jebuseus, a qual jurou a teus pais que ta daria, terra que mana leite e mel, guardarás este culto neste mês.
6 “ಏಳು ದಿನಗಳವರೆಗೆ ನೀವು ಕೇವಲ ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು. ಏಳನೆಯ ದಿನದಲ್ಲಿ ಯೊಹೋವನ ಘನತೆಗಾಗಿ ಒಂದು ದೊಡ್ಡ ಹಬ್ಬ ಮಾಡಬೇಕು.
6 Sete dias comerás pães asmos; e ao sétimo dia haverá festa ao Senhor .
7 ಆದ್ದರಿಂದ ಹುಳಿಯಿರುವ ರೊಟ್ಟಿಯನ್ನು ಏಳು ದಿನಗಳವರೆಗೆ ತಿನ್ನಬಾರದು. ನಿಮ್ಮ ದೇಶದಲ್ಲಿ ಹುಳಿಯಿರುವ ರೊಟ್ಟಿ ಇರಲೇಕೂಡದು.
7 Sete dias se comerão pães asmos, e o levedado não se verá contigo, nem ainda fermento será visto em todos os teus termos.
8 ಈ ದಿನದಲ್ಲಿ ನೀವು ನಿಮ್ಮ ಮಕ್ಕಳಿಗೆ, ‘ಯೆಹೋವನು ನಮ್ಮನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದದ್ದರಿಂದ ನಾವು ಈ ಹಬ್ಬವನ್ನು ಮಾಡುತ್ತಿದ್ದೇವೆ’ ಎಂದು ಹೇಳಬೇಕು.
8 E, naquele mesmo dia, farás saber a teu filho, dizendo: Isto é pelo que o Senhor me tem feito, quando eu saí do Egito.
9 “ಈ ಹಬ್ಬವು ನಿಮ್ಮ ಕೈಗಳಲ್ಲಿ ಜ್ಞಾಪಕಪಟ್ಟಿಯಂತಿದ್ದು ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದ್ದನ್ನು ಮತ್ತು ನಿಮಗೆ ಆತನು ನೀಡಿದ ಉಪದೇಶಗಳನ್ನು ನೆನಪಿಗೆ ತರುತ್ತದೆ.
9 E te será por sinal sobre tua mão e por lembrança entre teus olhos; para que a lei do Senhor esteja em tua boca; porquanto, com mão forte, o Senhor te tirou do Egito.
10 ಆದ್ದರಿಂದ ಪ್ರತಿವರ್ಷ ನಿಯಮಿತವಾದ ಕಾಲದಲ್ಲಿ ನೀವು ಈ ಹಬ್ಬವನ್ನು ಆಚರಿಸಬೇಕು.
10 Portanto, tu guardarás este estatuto a seu tempo, de ano em ano.
11 “ಯೆಹೋವನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶಕ್ಕೆ ನಿಮ್ಮನ್ನು ನಡಿಸುವನು. ಈಗ ಅಲ್ಲಿ ಕಾನಾನ್ಯರು ವಾಸವಾಗಿದ್ದಾರೆ. ಆದರೆ ದೇವರು ಆ ದೇಶವನ್ನು ನಿಮಗೆ ಕೊಡುವುದಾಗಿ ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದನು. ದೇವರು ಆ ದೇಶವನ್ನು ನಿಮಗೆ ಕೊಟ್ಟನಂತರ
11 Também acontecerá que, quando o Senhor te houver metido na terra dos cananeus, como jurou a ti e a teus pais, quando te houver dado,
12 ನೀವು ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ಆತನಿಗಾಗಿ ಮೀಸಲಿಡಬೇಕು.
12 apartarás para o Senhor tudo o que abrir a madre e tudo o que abrir a madre do fruto dos animais que tiveres; os machos serão do Senhor .
13 ಚೊಚ್ಚಲು ಕತ್ತೆಮರಿಯನ್ನು ನೀವು ಯೆಹೋವನಿಂದ ಬಿಡಿಸಿಕೊಳ್ಳಬೇಕೆಂದಿದ್ದರೆ ಅದಕ್ಕೆ ಬದಲಾಗಿ ಒಂದು ಕುರಿಮರಿಯನ್ನು ಕೊಡಬೇಕು. ಕತ್ತೆಮರಿಯನ್ನು ಬಿಡಿಸಿಕೊಳ್ಳಲು ಇಷ್ಟಪಡದಿದ್ದರೆ, ಅದರ ಕುತ್ತಿಗೆಯನ್ನು ಮುರಿದು ಕೊಲ್ಲಬೇಕು. ಆದರೆ ಚೊಚ್ಚಲು ಗಂಡುಮಕ್ಕಳನ್ನೆಲ್ಲಾ ಯೆಹೋವನಿಂದ ಬಿಡಿಸಿಕೊಳ್ಳಲೇಬೇಕು.
13 Porém tudo o que abrir a madre da jumenta resgatarás com cordeiro; e, se o não resgatares, cortar-lhe-ás a cabeça; mas todo primogênito do homem entre teus filhos resgatarás.
14 “ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು, ‘ನೀವು ಹೀಗೇಕೆ ಮಾಡುತ್ತೀರಿ?’ ಎಂದು ಕೇಳುವಾಗ ನೀವು, ‘ಯೆಹೋವನು ನಮ್ಮನ್ನು ಈಜಿಪ್ಟಿನಿಂದ ತನ್ನ ಮಹಾಶಕ್ತಿಯಿಂದ ರಕ್ಷಿಸಿದನು. ನಾವು ಅಲ್ಲಿ ಗುಲಾಮರಾಗಿದ್ದೆವು, ಆದರೆ ಯೆಹೋವನು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದನು.
14 Se acontecer que teu filho no tempo futuro te pergunte, dizendo: Que é isto? Dir-lhe-ás: O Senhor nos tirou com mão forte do Egito, da casa da servidão.
15 ಈಜಿಪ್ಟಿನಲ್ಲಿ ಫರೋಹನು ತನ್ನ ಹೃದಯವನ್ನು ಕಠಿಣಪಡಿಸಿಕೊಂಡು ನಮ್ಮನ್ನು ಕಳುಹಿಸಿಕೊಡಲಿಲ್ಲ. ಆಗ ಯೆಹೋವನು ಆ ದೇಶದ ಚೊಚ್ಚಲು ಗಂಡುಮಕ್ಕಳನ್ನೆಲ್ಲಾ ಸಂಹರಿಸಿದನು. (ಯೆಹೋವನು ಚೊಚ್ಚಲು ಪಶುಗಳನ್ನು ಮತ್ತು ಚೊಚ್ಚಲು ಗಂಡುಮಕ್ಕಳನ್ನು ಕೊಂದನು.) ಆದ್ದರಿಂದ ನಾವು ಚೊಚ್ಚಲಾದ ಪ್ರತಿಯೊಂದು ಗಂಡುಪಶುವನ್ನು ಯೆಹೋವನಿಗೆ ಯಜ್ಞವಾಗಿ ಅರ್ಪಿಸುತ್ತೇವೆ. ಈ ಕಾರಣದಿಂದಲೇ, ನಮ್ಮ ಪ್ರತಿಯೊಂದು ಗಂಡುಮಗುವನ್ನು ಯೆಹೋವನಿಂದ ಮತ್ತೆ ಖರೀದಿ ಮಾಡುತ್ತೇವೆ’ ಎಂದು ಹೇಳುವಿರಿ.
15 Porque sucedeu que, endurecendo-se Faraó, para não nos deixar ir, o Senhor matou todos os primogênitos na terra do Egito, desde o primogênito do homem até ao primogênito dos animais; por isso, eu sacrifico ao Senhor os machos de tudo o que abre a madre; porém, a todo primogênito de meus filhos, eu resgato.
16 ಇದು ನಿಮ್ಮ ಕೈಗೆ ದಾರ ಕಟ್ಟಿದಂತಿರುತ್ತದೆ; ನಿಮ್ಮ ಕಣ್ಣುಗಳ ಮುಂದೆ ಒಂದು ಚಿಹ್ನೆಯಂತೆ ಇರುತ್ತದೆ. ಯೆಹೋವನು ತನ್ನ ಮಹಾಶಕ್ತಿಯಿಂದ ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದನೆಂಬುದನ್ನು ಜ್ಞಾಪಿಸಿಕೊಳ್ಳಲು ಇದು ಸಹಾಯ ಮಾಡುತ್ತದೆ.”
16 E será por sinal sobre tua mão e por frontais entre os teus olhos; porque o Senhor nos tirou do Egito com mão forte.
17 ಇಸ್ರೇಲರು ಈಜಿಪ್ಟನ್ನು ಬಿಟ್ಟುಹೋಗುವಂತೆ ಫರೋಹನು ಅನುಮತಿ ನೀಡಿದನು. ಇಸ್ರೇಲರು ಫಿಲಿಷ್ಟಿಯರ ದೇಶದ ಮೂಲಕ ಹಾದುಹೋಗುವ ರಸ್ತೆಯಲ್ಲಿ ಹೋಗಲು ಯೆಹೋವನು ಅನುಮತಿ ನೀಡಲಿಲ್ಲ. ಸಮುದ್ರದ ಮೂಲಕ ಹಾದುಹೋಗುವ ಆ ರಸ್ತೆ ಬಹಳ ಹತ್ತಿರವಾಗಿತ್ತು. ಆದರೆ ಯೆಹೋವನು, “ಇಸ್ರೇಲರು ಆ ದಾರಿಯಲ್ಲಿ ಹೋದರೆ, ಯುದ್ಧಮಾಡಬೇಕಾಗುವುದು. ಆಗ ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿ ಈಜಿಪ್ಟಿಗೆ ಹಿಂತಿರುಗಬಹುದು” ಅಂದುಕೊಂಡನು.
17 E aconteceu que, quando Faraó deixou ir o povo, Deus não os levou pelo caminho da terra dos filisteus, que estava mais perto; porque Deus disse: Para que, porventura, o povo não se arrependa, vendo a guerra, e tornem ao Egito.
18 ಆದ್ದರಿಂದ ಯೆಹೋವನು ಅವರನ್ನು ಕೆಂಪು ಸಮುದ್ರದ ಅರಣ್ಯದ ಮೂಲಕ ನಡೆಸಿದನು. ಇಸ್ರೇಲರು ಈಜಿಪ್ಟನ್ನು ಬಿಟ್ಟಾಗ ಯುದ್ಧವಸ್ತ್ರಗಳನ್ನು ಧರಿಸಿಕೊಂಡಿದ್ದರು.
18 Mas Deus fez rodear o povo pelo caminho do deserto perto do mar Vermelho; e subiram os filhos de Israel da terra do Egito armados.
19 ಮೋಶೆಯು ತನ್ನೊಡನೆ ಯೋಸೇಫನ ಎಲುಬುಗಳನ್ನು ತೆಗೆದುಕೊಂಡು ಹೋದನು. (ಯೋಸೇಫನು ಸಾಯುವ ಮೊದಲು, ತನಗಾಗಿ ಈ ಕಾರ್ಯವನ್ನು ಮಾಡುವಂತೆ ಇಸ್ರೇಲನ ಪುತ್ರರಿಂದ ಪ್ರಮಾಣ ಮಾಡಿಸಿದ್ದನು. ಯೋಸೇಫನು ಅವರಿಗೆ, “ಯೆಹೋವನು ನಿಮ್ಮನ್ನು ರಕ್ಷಿಸುವಾಗ, ಈಜಿಪ್ಟಿನಿಂದ ನನ್ನ ಎಲುಬುಗಳನ್ನು ತೆಗೆದುಕೊಂಡು ಹೋಗಲು ಮರೆಯಬೇಡಿ” ಎಂದು ಹೇಳಿದ್ದನು.)
19 E tomou Moisés os ossos de José consigo, porquanto havia este estreitamente ajuramentado aos filhos de Israel, dizendo: Certamente Deus vos visitará; fazei, pois, subir daqui os meus ossos convosco.
20 ಇಸ್ರೇಲರು ಸುಕ್ಕೋತನ್ನು ಬಿಟ್ಟು ಏತಾಮಿನಲ್ಲಿ ಪಾಳೆಯ ಹಾಕಿದರು. ಏತಾಮು ಮರುಭೂಮಿಗೆ ಹತ್ತಿರವಾಗಿತ್ತು.
20 Assim, partiram de Sucote e acamparam em Etã, à entrada do deserto.
21 ಯೆಹೋವನು ದಾರಿಯನ್ನು ತೋರಿಸಿದನು. ಹಗಲಿನಲ್ಲಿ ಜನರನ್ನು ನಡಿಸಲು ಯೆಹೋವನು ಎತ್ತರವಾದ ಮೇಘಸ್ತಂಭವನ್ನು ಉಪಯೋಗಿಸಿದನು; ರಾತ್ರಿ ವೇಳೆಯಲ್ಲಿ ದಾರಿಯನ್ನು ತೋರಿಸಲು ಯೆಹೋವನು ಎತ್ತರವಾದ ಅಗ್ನಿಸ್ತಂಭವನ್ನು ಉಪಯೋಗಿಸಿದನು. ಈ ಬೆಂಕಿಯು ಅವರಿಗೆ ಬೆಳಕು ಕೊಟ್ಟಿದ್ದರಿಂದ ಅವರು ರಾತ್ರಿಯಲ್ಲಿ ಪ್ರಯಾಣ ಮಾಡಲು ಸಾಧ್ಯವಾಯಿತು.
21 E o Senhor ia adiante deles, de dia numa coluna de nuvem, para os guiar pelo caminho, e de noite numa coluna de fogo, para os alumiar, para que caminhassem de dia e de noite.
22 ಹಗಲಿನಲ್ಲಿ ಎತ್ತರವಾದ ಮೇಘಸ್ತಂಭವೂ ರಾತ್ರಿವೇಳೆಯಲ್ಲಿ ಅಗ್ನಿಸ್ತಂಭವೂ ಯಾವಾಗಲೂ ಅವರ ಮುಂಭಾಗದಲ್ಲಿ ಅವರೊಂದಿಗಿದ್ದವು.
22 Nunca tirou de diante da face do povo a coluna de nuvem, de dia, nem a coluna de fogo, de noite.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Êxodo 13, comparar traduções ou montar um estudo — tudo direto pelo WhatsApp.