Êxodo 16
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NAA
1 ಬಳಿಕ ಅವರು ಏಲೀಮಿನಿಂದ ಪ್ರಯಾಣಮಾಡಿ ಸಿನ್ ಅರಣ್ಯಕ್ಕೆ ಬಂದರು. ಈ ಸ್ಥಳವು ಏಲೀಮಿನ ಮತ್ತು ಸೀನಾಯ್ ಬೆಟ್ಟದ ನಡುವೆ ಇತ್ತು. ಈಜಿಪ್ಟನ್ನು ಬಿಟ್ಟ ನಂತರ ಎರಡನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಅವರು ಈ ಸ್ಥಳಕ್ಕೆ ಬಂದರು.
1 Partiram de Elim, e toda a congregação dos filhos de Israel veio para o deserto de Sim, que está entre Elim e Sinai, aos quinze dias do segundo mês, depois que saíram da terra do Egito.
2 ಆಗ ಇಸ್ರೇಲರು ಮತ್ತೆ ಮರುಭೂಮಿಯಲ್ಲಿ ಮೋಶೆ ಆರೋನರ ಮೇಲೆ ಗುಣುಗುಟ್ಟಿದರು.
2 Toda a congregação dos filhos de Israel murmurou contra Moisés e Arão no deserto.
3 ಅವರು, “ಯೆಹೋವನು ನಮ್ಮನ್ನು ಈಜಿಪ್ಟಿನಲ್ಲಿ ಕೊಂದಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ನಮಗೆ ಈಜಿಪ್ಟಿನಲ್ಲಿ ಮಾಂಸವೂ ರೊಟ್ಟಿಯೂ ಇತ್ತು. ನಮಗೆ ಬೇಕಿದ್ದ ಆಹಾರವೆಲ್ಲಾ ನಮ್ಮಲ್ಲಿತ್ತು. ಆದರೆ ಈಗ ನೀವು ನಮ್ಮನ್ನು ಈ ಅರಣ್ಯಕ್ಕೆ ಕರೆದುಕೊಂಡು ಬಂದಿರಿ. ನಾವೆಲ್ಲರೂ ಇಲ್ಲಿ ಹಸಿವೆಯಿಂದ ಸಾಯುವೆವು” ಎಂದು ಹೇಳಿದರು.
3 Os filhos de Israel disseram a Moisés e Arão: — Quem nos dera tivéssemos morrido pela mão do
4 ಆಗ ಯೆಹೋವನು ಮೋಶೆಗೆ, “ಆಕಾಶದಿಂದ ನಿಮಗೋಸ್ಕರ ರೊಟ್ಟಿ ಸುರಿಯುವಂತೆ ಮಾಡುವೆನು. ಪ್ರತಿದಿನ ಅವರು ಹೊರಗೆ ಹೋಗಿ, ತಮಗೆ ಆ ದಿನದಲ್ಲಿ ತಿನ್ನಲು ಬೇಕಾದ ಆಹಾರವನ್ನು ಕೂಡಿಸಿಕೊಳ್ಳಬೇಕು. ನಾನು ಹೇಳುವುದನ್ನು ಅವರು ಮಾಡುತ್ತಾರೊ ಇಲ್ಲವೊ ಎಂದು ನೋಡಲು ನಾನು ಇದನ್ನು ಮಾಡುವೆನು.
4 Então o Senhor disse a Moisés: — Eis que farei chover do céu pão para vocês, e o povo sairá e recolherá diariamente a porção para cada dia. Eu os porei à prova para ver se andam na minha lei ou não.
5 ಪ್ರತಿದಿನವು ಅವರು ಒಂದು ದಿನಕ್ಕೆ ಬೇಕಾದಷ್ಟು ಆಹಾರವನ್ನು ಕೂಡಿಸಿಕೊಳ್ಳಬೇಕು. ಆದರೆ ಶುಕ್ರವಾರ ಅವರು ತಮ್ಮ ಆಹಾರವನ್ನು ಸಿದ್ಧಪಡಿಸುವಾಗ ಎರಡು ದಿನಗಳಿಗೆ ಬೇಕಾದಷ್ಟು ಆಹಾರವಿರುವುದನ್ನು ಅವರು ನೋಡುವರು” ಎಂದು ಹೇಳಿದನು.
5 No sexto dia prepararão o que recolherem, e será o dobro do que recolhem nos outros dias.
6 ಆದ್ದರಿಂದ ಮೋಶೆಯು ಮತ್ತು ಆರೋನನು ಇಸ್ರೇಲರಿಗೆ, “ಈ ರಾತ್ರಿ ನೀವು ಯೆಹೋವನ ಶಕ್ತಿಯನ್ನು ನೋಡುವಿರಿ. ನಿಮ್ಮನ್ನು ಈಜಿಪ್ಟಿನಿಂದ ರಕ್ಷಿಸಿದವನು ಆತನೇ ಎಂದು ತಿಳಿದುಕೊಳ್ಳುವಿರಿ.
6 Então Moisés e Arão disseram a todos os filhos de Israel: — Hoje à tarde vocês saberão que foi o
7 ನಾಳೆ ಬೆಳಿಗ್ಗೆ ನೀವು ಯೆಹೋವನ ಮಹಿಮೆಯನ್ನು ನೋಡುವಿರಿ. ನೀವು ಯೆಹೋವನ ಮೇಲೆ ಗುಣುಗುಟ್ಟಿದ್ದೀರಿ. ಆತನು ನಿಮ್ಮ ಗುಣುಗುಟ್ಟುವಿಕೆಯನ್ನು ಕೇಳಿದ್ದಾನೆ; ಆತನೇ ನಿಮಗೆ ಸಹಾಯ ಮಾಡುವನು. ನಮ್ಮ ಮೇಲೆ ನೀವು ಗುಣುಗುಟ್ಟುತ್ತಾ ಬರಲು ನಾವೆಷ್ಟರವರು? ನಿಮ್ಮನ್ನು ಈಜಿಪ್ಟಿನಿಂದ ಕರೆತಂದವನು ಯೆಹೋವನೇ. ಆತನೇ ನಿಮ್ಮ ಅಗತ್ಯತೆಗಳನ್ನು ಪೂರೈಸುವನು” ಎಂದು ಹೇಳಿದರು.
7 e, pela manhã, vocês verão a glória do Senhor , porque ele ouviu as murmurações de vocês contra o Senhor . Pois quem somos nós, para que vocês fiquem murmurando contra nós?
8 ಅಲ್ಲದೆ ಮೋಶೆಯು, “ನೀವು ಗುಣುಗುಟ್ಟುತ್ತಿರುವುದನ್ನು ಯೆಹೋವನು ಕೇಳಿದ್ದಾನೆ. ಆದ್ದರಿಂದ ರಾತ್ರಿಯಲ್ಲಿ ಆತನು ನಿಮಗೆ ಮಾಂಸವನ್ನು ಕೊಡುವನು. ಪ್ರತಿ ಮುಂಜಾನೆ ನಿಮಗೆ ಬೇಕಾದಷ್ಟು ರೊಟ್ಟಿಯು ದೊರಕುವುದು. ನೀವು (ಆರೋನನ ಮೇಲೂ ನನ್ನ ಮೇಲೂ) ಗುಣುಗುಟ್ಟುತ್ತಿದ್ದೀರಿ? ಆದರೆ ನಮಗೆ ದೂರು ಹೇಳಲು ನಾವೆಷ್ಟರವರು? ನೀವು ಯೆಹೋವನ ವಿರುದ್ಧವಾಗಿ ದೂರು ಹೇಳುತ್ತಿದ್ದೀರೆಂಬುದು ನಿಮ್ಮ ಜ್ಞಾಪಕದಲ್ಲಿರಲಿ” ಎಂದು ಹೇಳಿದನು.
8 Moisés continuou: — Isso acontecerá quando o
9 ಬಳಿಕ ಮೋಶೆ ಆರೋನನಿಗೆ, “ಇಸ್ರೇಲರೊಂದಿಗೆ ಮಾತಾಡು. ಅವರಿಗೆ, ‘ಯೆಹೋವನ ಮುಂದೆ ಒಟ್ಟಾಗಿ ನೆರೆದು ಬನ್ನಿ: ಯಾಕೆಂದರೆ ಆತನು ನಿಮ್ಮ ಗುಣುಗುಟ್ಟುವಿಕೆಗಳನ್ನು ಕೇಳಿದ್ದಾನೆ’ ಎಂದು ಹೇಳು” ಅಂದನು.
9 Então Moisés disse a Arão: — Diga a toda a congregação dos filhos de Israel: “Cheguem-se à presença do
10 ಅರೋನನು ಇಸ್ರೇಲರೆಲ್ಲರೊಂದಿಗೆ ಮಾತಾಡಿದನು. ಅವರೆಲ್ಲರೂ ಒಂದು ಸ್ಥಳದಲ್ಲಿ ಕೂಡಿಬಂದರು. ಆರೋನನು ಅವರೊಂದಿಗೆ ಮಾತಾಡುತ್ತಿದ್ದಾಗ ಅವರೆಲ್ಲರೂ ಅರಣ್ಯದ ಕಡೆಗೆ ತಿರುಗಿನೋಡಿದರು. ಮೇಘದಲ್ಲಿ ಯೆಹೋವನ ಮಹಿಮೆಯು ಪ್ರತ್ಯಕ್ಷವಾದದ್ದನ್ನು ಅವರೆಲ್ಲರೂ ಕಂಡರು.
10 Enquanto Arão falava a toda a congregação dos filhos de Israel, olharam para o deserto, e eis que a glória do Senhor apareceu na nuvem.
11 ಯೆಹೋವನು ಮೋಶೆಗೆ,
11 E o Senhor disse a Moisés:
12 “ನಾನು ಇಸ್ರೇಲರ ಗುಣುಗುಟ್ಟುವಿಕೆಗಳನ್ನು ಕೇಳಿದ್ದೇನೆ. ಆದ್ದರಿಂದ ಅವರಿಗೆ ಹೀಗೆ ಹೇಳು: ‘ಸೂರ್ಯಾಸ್ತ್ತಮದ ಮುನ್ನ ನೀವು ಮಾಂಸವನ್ನು ತಿನ್ನುವಿರಿ; ಪ್ರತಿ ಮುಂಜಾನೆ ಸೂರ್ಯೋದಯದ ಮುನ್ನ ನಿಮಗೆ ಬೇಕಾದಷ್ಟು ರೊಟ್ಟಿಯನ್ನು ತಿನ್ನುವಿರಿ. ಆಗ ನಾನೇ ದೇವರಾದ ಯೆಹೋವನೆಂಬುದನ್ನು ನೀವು ತಿಳಿದುಕೊಳ್ಳುವಿರಿ; ನನ್ನಲ್ಲಿ ಭರವಸೆ ಇಡುವಿರಿ’” ಎಂದು ಹೇಳಿದನು.
12 — Tenho ouvido as murmurações dos filhos de Israel. Diga-lhes: “Ao crepúsculo da tarde, vocês comerão carne, e, pela manhã, vocês comerão pão à vontade, e saberão que eu sou o Senhor , seu Deus.”
13 ಸಾಯಂಕಾಲ ಲಾವಕ್ಕಿಗಳು ಪಾಳೆಯದ ಸುತ್ತಲೂ ಬಂದವು. ಜನರು ಮಾಂಸಕ್ಕಾಗಿ ಈ ಪಕ್ಷಿಗಳನ್ನು ಹಿಡಿದರು ಮತ್ತು ಪ್ರತಿ ಮುಂಜಾನೆ ಅವರ ಪಾಳೆಯದ ಸುತ್ತಲೂ ಮಂಜು ನೆಲದ ಮೇಲೆ ಬಿದ್ದಿತ್ತು.
13 À tarde, apareceram codornizes e cobriram o arraial. Pela manhã, havia orvalho ao redor do arraial.
14 ಸೂರ್ಯನು ಮೇಲಕ್ಕೇರಿದ ನಂತರ ಮಂಜು ಕರಗಿ ಇಲ್ಲವಾಯಿತು. ಆದರೆ ಮಂಜು ಕರಗಿ ಹೋದನಂತರ ನೆಲದ ಮೇಲೆ ಮಂಜಿನ ಹನಿಗಳಂತಿದ್ದ ತೆಳುವಾದ ಕಾಳುಗಳು ಬಿದ್ದಿದ್ದವು.
14 E, quando o orvalho que havia caído se evaporou, na superfície do deserto restava uma coisa fina e semelhante a escamas, fina como a geada sobre a terra.
15 ಇಸ್ರೇಲರು ಅದನ್ನು ನೋಡಿ “ಏನದು” ಎಂಬುದಾಗಿ ಒಬ್ಬರನ್ನೊಬ್ಬರು ಕೇಳಿದರು. ಅದು ಏನೆಂದು ಅವರಿಗೆ ಗೊತ್ತಿಲ್ಲದ ಕಾರಣ ಅವರು ಈ ಪ್ರಶ್ನೆಯನ್ನು ಕೇಳಿದರು. ಆದ್ದರಿಂದ ಮೋಶೆ ಅವರಿಗೆ, “ಇದು ಯೆಹೋವನು ನಿಮಗೆ ಕೊಟ್ಟಿರುವ ಆಹಾರ.
15 Quando os filhos de Israel viram aquilo, perguntaram uns aos outros: — Que é isso? Pois não sabiam o que era. Moisés respondeu: — Isso é o pão que o
16 ಯೆಹೋವನು ಆಜ್ಞಾಪಿಸುವುದೇನೆಂದರೆ, ‘ಪ್ರತಿಯೊಬ್ಬನು ತನಗೆ ಬೇಕಾದಷ್ಟನ್ನು ಮಾತ್ರ ಕೂಡಿಸಿಕೊಳ್ಳಬೇಕು. ನಿಮ್ಮಲ್ಲಿ ಪ್ರತಿಯೊಬ್ಬನು ನಿಮ್ಮ ಕುಟುಂಬದಲ್ಲಿರುವ ಪ್ರತಿಯೊಬ್ಬನಿಗೆ ಸುಮಾರು ಮೂರು ಸೇರಿನಷ್ಟು ಕೂಡಿಸಿಕೊಳ್ಳಬೇಕು’” ಎಂದು ಹೇಳಿದನು.
16 Isto é o que o Senhor ordenou: “Que cada um recolha o que se consegue comer: dois litros por cabeça, segundo o número de pessoas. Cada um pegará para todos os que vivem em sua tenda.”
17 ಅಂತೆಯೇ ಇಸ್ರೇಲರು ಮಾಡಿದರು. ಪ್ರತಿಯೊಬ್ಬನೂ ತನ್ನ ಆಹಾರವನ್ನು ಕೂಡಿಸಿಕೊಂಡನು. ಕೆಲವರು ಇತರರಿಗಿಂತ ಹೆಚ್ಚಾಗಿ ಕೂಡಿಸಿಕೊಂಡರು.
17 Assim o fizeram os filhos de Israel. E recolheram, uns, mais, outros, menos,
18 ಅವರು ತಮ್ಮ ಕುಟುಂಬದಲ್ಲಿದ್ದ ಪ್ರತಿಯೊಬ್ಬರ ಆಹಾರವನ್ನು ಒಟ್ಟಾಗಿ ಸೇರಿಸಿ ಅಳತೆಮಾಡಿದಾಗ ಅಲ್ಲಿ ಯಾವಾಗಲೂ ಪ್ರತಿಯೊಬ್ಬನಿಗೆ ಬೇಕಾದಷ್ಟು ಮಾತ್ರ ಆಹಾರವಿರುತ್ತಿತ್ತು. ಅದು ಹೆಚ್ಚಾಗಿಯೂ ಇರುತ್ತಿರಲಿಲ್ಲ; ಕಡಿಮೆಯಾಗಿಯೂ ಇರುತ್ತಿರಲಿಲ್ಲ. ಹೀಗೆ ಪ್ರತಿಯೊಬ್ಬನು ತನಗೆ ಮತ್ತು ತನ್ನ ಕುಟುಂಬಕ್ಕೆ ಬೇಕಾದಷ್ಟನ್ನು ಮಾತ್ರ ಕೂಡಿಸಿಕೊಂಡನು.
18 conforme a medida fixada. E não sobrava para quem havia recolhido muito, nem faltava para quem havia recolhido pouco, pois cada um recolhia o quanto conseguia comer.
19 ಮೋಶೆಯು ಅವರಿಗೆ, “ಆಹಾರವನ್ನು ಮರುದಿನಕ್ಕಾಗಿ ಉಳಿಸಿಕೊಳ್ಳಬೇಡಿರಿ” ಎಂದು ಹೇಳಿದನು.
19 Então Moisés disse: — Ninguém deixe nada para a manhã seguinte.
20 ಆದರೆ ಅವರು ಮೋಶೆಯ ಮಾತಿಗೆ ವಿಧೇಯರಾಗಲಿಲ್ಲ. ಕೆಲವು ಜನರು ಮರುದಿನ ತಿನ್ನುವುದಕ್ಕಾಗಿ ಆಹಾರವನ್ನು ಉಳಿಸಿಕೊಂಡರು; ಹೀಗೆ ಉಳಿಸಿಟ್ಟ ಆಹಾರವು ಹುಳಗಳಿಂದ ತುಂಬಿ ಕೊಳೆಯತೊಡಗಿತು. ಮೋಶೆಯು ಹೀಗೆ ಮಾಡಿದ ಜನರ ಮೇಲೆ ಕೋಪಗೊಂಡನು.
20 Eles, porém, não deram ouvidos a Moisés, e alguns deixaram do maná para a manhã seguinte, mas deu bichos e cheirava mal. E Moisés se indignou contra eles.
21 ಪ್ರತಿ ಮುಂಜಾನೆ ಅವರು ಆಹಾರವನ್ನು ಕೂಡಿಸಿಕೊಂಡರು. ಪ್ರತಿಯೊಬ್ಬನು ತಾನು ಎಷ್ಟು ತಿನ್ನಬಹುದೋ ಅಷ್ಟನ್ನೇ ಕೂಡಿಸಿಕೊಂಡನು. ಆದರೆ ಬಿಸಿಲೇರಿದಾಗ ಆಹಾರವು ಕರಗಿಹೋಯಿತು.
21 Colhiam-no, pois, manhã após manhã, cada um quanto conseguia comer; porque, vindo o calor do sol, o maná se derretia.
22 ಆರನೆಯ ದಿನವಾದ ಶುಕ್ರವಾರದಲ್ಲಿ ಜನರು ಎರಡರಷ್ಟನ್ನು ಕೂಡಿಸಿಕೊಂಡರು. ಅವರು ಪ್ರತಿಯೊಬ್ಬನಿಗೆ ಆರು ಸೇರಿನಷ್ಟು ಕೂಡಿಸಿಕೊಂಡರು. ಆದ್ದರಿಂದ ಜನನಾಯಕರೆಲ್ಲರೂ ಬಂದು ಮೋಶೆಗೆ ಇದನ್ನು ತಿಳಿಸಿದರು.
22 No sexto dia, colheram alimento em dobro, quatro litros para cada um. E os principais da congregação vieram e contaram isso a Moisés.
23 ಮೋಶೆಯು ಅವರಿಗೆ, “ಯೆಹೋವನೇ ಇದರ ಬಗ್ಗೆ ತಿಳಿಸಿದ್ದನು. ನಾಳೆ ಮುಂಜಾನೆ ಯೆಹೋವನನ್ನು ಸನ್ಮಾನಿಸತಕ್ಕ ವಿಶೇಷ ವಿಶ್ರಾಂತಿ ದಿನವಾದ ಸಬ್ಬತ್ತಾಗಿದೆ. ಆದ್ದರಿಂದ ಇದು ಹೀಗೆ ಸಂಭವಿಸಿತು. ಈ ದಿನಕ್ಕೆ ಬೇಕಾದ ಅಡಿಗೆಯನ್ನು ನೀವು ತಯಾರಿಸಿಕೊಳ್ಳಿರಿ. ಆದರೆ ಈ ಆಹಾರದಲ್ಲಿ ಉಳಿದದ್ದನ್ನು ನಾಳೆ ಪ್ರಾತಃಕಾಲಕ್ಕಾಗಿ ಉಳಿಸಿಕೊಳ್ಳಿರಿ” ಎಂದು ಹೇಳಿದನು.
23 Ele respondeu: — Isto é o que disse o
24 ಆದ್ದರಿಂದ ಉಳಿದ ಆಹಾರವನ್ನು ಜನರು ಮರುದಿನಕ್ಕಾಗಿ ಉಳಿಸಿದರು; ಆದರೆ ಆ ಆಹಾರವು ಕೆಡಲಿಲ್ಲ ಮತ್ತು ಹುಳಗಳು ಆ ಆಹಾರಕ್ಕೆ ಬರಲಿಲ್ಲ.
24 E guardaram-no até a manhã seguinte, como Moisés havia ordenado; e não cheirou mal, nem deu bichos.
25 ಶನಿವಾರದಲ್ಲಿ ಮೋಶೆಯು ಜನರಿಗೆ, “ಈ ದಿನ ಸಬ್ಬತ್ತಾಗಿದೆ. ಇದು ಯೆಹೋವನನ್ನು ಸನ್ಮಾನಿಸುವುದಕ್ಕಿರುವ ವಿಶೇಷವಾದ ವಿಶ್ರಾಂತಿ ದಿನವಾಗಿದೆ. ನೀವು ನಿನ್ನೆಯಿಂದ ಇಟ್ಟುಕೊಂಡಿದ್ದ ಆಹಾರವನ್ನು ಊಟಮಾಡಿರಿ. ಇಂದು ನೀವು ಹೊಲದಲ್ಲಿ ಯಾವ ಆಹಾರವನ್ನೂ ಕಾಣುವುದಿಲ್ಲ.
25 Então Moisés disse: — Comam isto hoje, pois hoje é o sábado dedicado ao
26 ನೀವು ಆರು ದಿನಗಳಲ್ಲಿ ಆಹಾರವನ್ನು ಕೂಡಿಸಬೇಕು. ಆದರೆ ವಾರದ ಏಳನೆಯ ದಿನವು ಸಬ್ಬತ್ ದಿನವಾಗಿದೆ, ಅಂದರೆ ವಿಶ್ರಾಂತಿಯ ದಿನವಾಗಿದೆ. ಆದ್ದರಿಂದ ಆ ದಿನದಲ್ಲಿ ನೆಲದ ಮೇಲೆ ಯಾವ ಆಹಾರವೂ ಇರುವುದಿಲ್ಲ” ಅಂದನು.
26 Seis dias vocês o recolherão, mas o sétimo dia é o sábado; nele, não haverá nada a recolher.
27 ಏಳನೆಯ ದಿನದಲ್ಲಿ ಕೆಲವು ಜನರು ಆಹಾರವನ್ನು ಕೂಡಿಸಿಕೊಳ್ಳಲು ಹೊರಗೆ ಹೋದರು. ಆದರೆ ಅವರಿಗೆ ಏನೂ ಸಿಕ್ಕಲಿಲ್ಲ.
27 No sétimo dia algumas pessoas saíram para o recolher, porém não o acharam.
28 ಆಗ ಯೆಹೋವನು ಮೋಶೆಗೆ, “ಜನರೇ, ನೀವು ಇನ್ನೆಷ್ಟರವರೆಗೆ ನನ್ನ ಆಜ್ಞೆಗಳಿಗೆ ಮತ್ತು ಬೋಧನೆಗಳಿಗೆ ವಿಧೇಯರಾಗುವುದಿಲ್ಲ?
28 Então o Senhor disse a Moisés: — Até quando vocês se recusarão a guardar os meus mandamentos e as minhas leis?
29 ನೋಡಿರಿ, ಯೆಹೋವನು ಸಬ್ಬತ್ ದಿನವನ್ನು ನಿಮಗೆ ವಿಶ್ರಾಂತಿ ದಿನವನ್ನಾಗಿ ಮಾಡಿದ್ದಾನೆ. ಆದ್ದರಿಂದ ಯೆಹೋವನು ಶುಕ್ರವಾರದಂದು ನಿಮಗೆ ಎರಡು ದಿನಗಳಿಗೆ ಬೇಕಾದಷ್ಟು ಆಹಾರವನ್ನು ಕೊಡುವನು. ಆದ್ದರಿಂದ ಸಬ್ಬತ್ತಿನಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬನು ಕುಳಿತುಕೊಂಡು ವಿಶ್ರಮಿಸಿಕೊಳ್ಳಬೇಕು. ನೀವು ಇರುವಲ್ಲೇ ಇರಿ” ಎಂದು ಹೇಳಿದನು.
29 Vejam! O Senhor deu a vocês o sábado; por isso, ele, no sexto dia, lhes dá alimento para dois dias; cada um fique onde está, ninguém saia do seu lugar no sétimo dia.
30 ಆದ್ದರಿಂದ ಜನರು ಸಬ್ಬತ್ತಿನಲ್ಲಿ ವಿಶ್ರಮಿಸಿಕೊಂಡರು.
30 Assim, o povo descansou no sétimo dia.
31 ಜನರು ಈ ವಿಶೇಷ ಆಹಾರವನ್ನು ಮನ್ನ ಎಂದು ಕರೆಯತೊಡಗಿದರು. ಮನ್ನವು ಚಿಕ್ಕದಾದ ಬಿಳಿ ಕೊತ್ತಂಬರಿ ಬೀಜಗಳಂತಿದ್ದವು ಮತ್ತು ಜೇನುತುಪ್ಪದಿಂದ ಮಾಡಿದ ತೆಳುವಾದ ರೊಟ್ಟಿಯಂತೆ ರುಚಿಯಾಗಿತ್ತು.
31 A casa de Israel deu àquele alimento o nome de maná. Ele era como semente de coentro, branco e com gosto de bolo de mel.
32 ಮೋಶೆಯು, “ಯೆಹೋವನು ಆಜ್ಞಾಪಿಸಿದ್ದೇನೆಂದರೆ, ‘ಮೂರು ಸೇರಿನಷ್ಟು ಮನ್ನವನ್ನು ನಿಮ್ಮ ಮುಂದಿನ ಸಂತತಿಯವರಿಗಾಗಿ ಉಳಿಸಿರಿ. ನಾನು ನಿಮ್ಮನ್ನು ಈಜಿಪ್ಟಿನಿಂದ ಹೊರಗೆ ನಡೆಸಿದಾಗ ಅರಣ್ಯದಲ್ಲಿ ನಾನು ನಿಮಗೆ ಕೊಟ್ಟ ಈ ಆಹಾರವನ್ನು ನೋಡುವರು’” ಎಂದು ಹೇಳಿದನು.
32 Moisés disse: — Esta é a palavra que o
33 ಆದ್ದರಿಂದ ಮೋಶೆಯು ಆರೋನನಿಗೆ, “ಒಂದು ಭರಣಿಯನ್ನು ತೆಗೆದುಕೊಂಡು ಅದರಲ್ಲಿ ಮೂರು ಸೇರಿನಷ್ಟು ಮನ್ನವನ್ನು ತುಂಬಿಸು. ನಿಮ್ಮ ಮುಂದಿನ ಸಂತತಿಯವರು ನೋಡುವುದಕೋಸ್ಕರ ಇದನ್ನು ಉಳಿಸಿ ಯೆಹೋವನ ಮುಂದೆ ಇಡು” ಎಂದು ಹೇಳಿದನು.
33 Então Moisés disse a Arão: — Pegue um vaso, ponha nele dois litros de maná e coloque-o diante do
34 (ನಂತರ ಆರೋನನು, ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಮಾಡಿದನು. ಆರೋನನು ಮನ್ನದ ಭರಣಿಯನ್ನು ಒಡಂಬಡಿಕೆಯ ಮುಂದುಗಡೆಯಲ್ಲಿ ಇಟ್ಟನು.)
34 Como o Senhor havia ordenado a Moisés, assim Arão o colocou diante da arca do testemunho para o guardar.
35 ನಲವತ್ತು ವರ್ಷಗಳವರೆಗೆ ಜನರು ಮನ್ನವನ್ನು ತಿಂದರು. ಅವರು ವಿಶ್ರಾಂತಿಯ ದೇಶಕ್ಕೆ ಬರುವ ತನಕ, ಅಂದರೆ ಕಾನಾನಿನ ಗಡಿಗೆ ಬರುವವರೆಗೆ ಮನ್ನವನ್ನು ತಿಂದರು.
35 E os filhos de Israel comeram maná durante quarenta anos, até que entraram em terra habitada. Comeram maná até que chegaram aos limites da terra de Canaã.
36 (ಅವರು ಮನ್ನವನ್ನು ಅಳೆಯುವುದಕ್ಕೆ ಗೋಮೆರ್ ಎಂಬ ಅಳತೆಯನ್ನು ಉಪಯೋಗಿಸಿದರು.)
36 A porção de maná para cada pessoa era um décimo da medida padrão, que tinha vinte litros.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Êxodo 16, comparar traduções ou montar um estudo — tudo direto pelo WhatsApp.