Êxodo 21

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs VC

Sair da comparação
VC Versão Católica
1 ಬಳಿಕ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನೀನು ಜನರಿಗೆ ನೇಮಿಸಬೇಕಾದ ಇತರ ಕಟ್ಟಳೆಗಳು ಯಾವುವೆಂದರೆ:
1 "Estas são as leis que exporás {aos israelitas}:
2 “ನೀವು ಇಬ್ರಿಯ ಗುಲಾಮನನ್ನು ಕೊಂಡುಕೊಂಡರೆ, ಆ ಗುಲಾಮನು ಆರು ವರ್ಷಗಳವರೆಗೆ ಮಾತ್ರ ನಿಮ್ಮ ಸೇವೆಮಾಡುವನು. ಆರು ವರ್ಷಗಳ ನಂತರ, ಅವನು ಬಿಡುಗಡೆಯಾಗುವನು, ಅವನು ಏನೂ ಕೊಡಬೇಕಾಗಿರುವುದಿಲ್ಲ.
2 quando comprares um escravo hebreu, ele servirá seis anos; no sétimo sairá livre, sem pagar nada.
3 ಅವನು ನಿಮ್ಮ ಗುಲಾಮನಾಗುವಾಗ ಮದುವೆಯಾಗಿಲ್ಲದಿದ್ದರೆ, ಅವನು ಬಿಡುಗಡೆ ಹೊಂದುವಾಗಲೂ ಹೆಂಡತಿಯಿಲ್ಲದವನಾಗಿ ಹೋಗುವನು. ಆದರೆ ಅವನು ನಿಮ್ಮ ಗುಲಾಮನಾಗುವಾಗ ಮದುವೆಯಾಗಿದ್ದರೆ ಅವನು ಬಿಡುಗಡೆ ಹೊಂದುವಾಗ ತನ್ನ ಹೆಂಡತಿಯನ್ನು ಕರೆದುಕೊಂಡು ಹೋಗುವನು.
3 Se entrou sozinho, sozinho sairá; se tiver mulher, sua mulher partirá com ele.
4 ಗುಲಾಮನು ಮದುವೆಯಾಗಿಲ್ಲದಿದ್ದರೆ, ಅವನ ಯಜಮಾನನು ಅವನಿಗೆ ಮದುವೆ ಮಾಡಿಸಬಹುದು. ಆ ಸ್ತ್ರೀಯು ಮಕ್ಕಳನ್ನು ಹೆತ್ತರೆ, ಆಕೆಯೂ ಆಕೆಯ ಮಕ್ಕಳೂ ಯಜಮಾನನ ಸ್ವತ್ತಾಗುವರು. ಗುಲಾಮನು ತನ್ನ ಸೇವಾ ವರ್ಷಗಳನ್ನು ಮುಗಿಸಿದ ತರುವಾಯ ಬಿಡುಗಡೆ ಹೊಂದುವನು.
4 Mas, se foi o seu senhor que lhe deu uma mulher, e esta deu à luz filhos e filhas, a mulher e seus filhos serão propriedade do senhor, e ele partirá sozinho.
5 “ಆದರೆ ಒಂದುವೇಳೆ ಆ ಗುಲಾಮನು ತನ್ನ ಯಜಮಾನನ ಸಂಗಡವಿರಲು ದೃಢವಾಗಿ ಬಯಸಿದರೆ ಅವನು, ‘ನಾನು ನನ್ನ ಯಜಮಾನನನ್ನು ಪ್ರೀತಿಸುತ್ತೇನೆ. ನಾನು ನನ್ನ ಹೆಂಡತಿಯನ್ನೂ ಮಕ್ಕಳನ್ನೂ ಪ್ರೀತಿಸುತ್ತೇನೆ. ನಾನು ಬಿಡುಗಡೆ ಹೊಂದದೆ ಇಲ್ಲೇ ಇರುವೆನು’ ಎಂದು ಹೇಳಬೇಕು.
5 Porém, se o escravo disser: 'Eu amo meu senhor, minha mulher e meus filhos; não quero ser alforriado',
6 ಹೀಗಾದರೆ ಯಜಮಾನನು ಆ ಗುಲಾಮನನ್ನು ದೇವರ ಸನ್ನಿಧಿಗೆ ಕರೆದುಕೊಂಡು ಬರುವನು. ಯಜಮಾನನು ಗುಲಾಮನನ್ನು ಬಾಗಿಲ ಬಳಿಗೆ ಅಥವಾ ಬಾಗಿಲಿನ ಮರದ ನಿಲುವುಪಟ್ಟಿಗಳ ಬಳಿಗೆ ಕರೆದುಕೊಂಡು ಬರುವನು. ಯಜಮಾನನು ಗುಲಾಮನ ಕಿವಿಗೆ ಚೂಪಾದ ಸಲಾಕೆಯಿಂದ ರಂಧ್ರ ಮಾಡುವನು. ಆಗ ಗುಲಾಮನು ತನ್ನ ಜೀವಮಾನಪರ್ಯಂತ ಆ ಯಜಮಾನನಿಗೆ ಸೇವೆ ಮಾಡುವನು.
6 seu senhor o levará então diante de Deus e o fará aproximar-se do batente ou da ombreira da porta, e furar-lhe-á a orelha com uma sovela; desta sorte o escravo estará para sempre a seu serviço.
7 “ಒಬ್ಬನು ತನ್ನ ಮಗಳನ್ನು ಗುಲಾಮಳನ್ನಾಗಿ ಮಾರಲು ತೀರ್ಮಾನಿಸಿದರೆ, ಆಕೆಯನ್ನು ಬಿಡುಗಡೆಗೊಳಿಸುವ ನಿಯಮಗಳು ಗುಲಾಮರಾದ ಪುರುಷರನ್ನು ಬಿಡುಗಡೆಗೊಳಿಸುವ ನಿಯಮಗಳ ಪ್ರಕಾರ ಇರುವುದಿಲ್ಲ.
7 Se um homem tiver vendido sua filha para ser escrava, ela não sairá em liberdade nas mesmas condições que o escravo.
8 ಯಜಮಾನನು ತನಗಾಗಿ ಆರಿಸಿಕೊಂಡ ಗುಲಾಮಳನ್ನು ಇಷ್ಟಪಡದಿದ್ದರೆ, ಅವಳನ್ನು ಬಿಡುಗಡೆ ಮಾಡಬಹುದು. (ಅವಳ ತಂದೆಗೆ ಅವಳನ್ನು ಮಾರಬಹುದು.) ಅವಳನ್ನು ವಿದೇಶಿಯರಿಗೆ ಮಾರುವ ಹಕ್ಕನ್ನು ಯಜಮಾನನು ಕಳೆದುಕೊಳ್ಳುತ್ತಾನೆ; ಯಾಕೆಂದರೆ ಆಕೆಯಲ್ಲಿ ಅವನಿಗಿದ್ದ ನಂಬಿಕೆಯು ಮುರಿದುಹೋಯಿತು.
8 Se desagradar ao seu senhor, que a havia destinado para si, ele a fará resgatar; mas não poderá vendê-la a estrangeiros depois de lhe ter sido infiel.
9 ಯಜಮಾನನು ಗುಲಾಮಳನ್ನು ತನ್ನ ಸ್ವಂತ ಮಗನಿಗೆ ಮದುವೆ ಮಾಡಿಸುವುದಾಗಿ ವಾಗ್ದಾನ ಮಾಡಿದರೆ, ಅವಳನ್ನು ಗುಲಾಮಳನ್ನಾಗಿ ನೋಡಿಕೊಳ್ಳದೆ ಸೊಸೆಯಾಗಿ ನೋಡಿಕೊಳ್ಳಬೇಕು.
9 Se a destinar ao seu filho, tratá-la-á segundo o direito das filhas.
10 “ಯಜಮಾನನು ಇನ್ನೊಬ್ಬ ಸ್ತ್ರೀಯನ್ನು ಮದುವೆಯಾದರೆ, ಅವನು ತನ್ನ ಮೊದಲನೆಯ ಹೆಂಡತಿಗೆ ಅವನು ಕೊಡುವ ಆಹಾರ ಅಥವಾ ಬಟ್ಟೆಬರೆಗಳಲ್ಲಿ ಏನೂ ಕಡಿಮೆ ಮಾಡಬಾರದು; ಮದುವೆಯ ಮೂಲಕ ಆಕೆಯು ಯಾವ್ಯಾವ ವಸ್ತುಗಳನ್ನು ಹೊಂದಲು ಹಕ್ಕು ಪಡೆದಿರುತ್ತಾಳೊ ಅವೆಲ್ಲವನ್ನು ಅವನು ಆಕೆಗೆ ಕೊಡಬೇಕು.
10 Se tomar outra mulher, não diminuirá nada à primeira, quanto à alimentação, aos vestidos e ao direito conjugal.
11 ಅವನು ಆಕೆಗಾಗಿ ಈ ಮೂರು ಸಂಗತಿಗಳನ್ನು ಮಾಡಬೇಕು. ಇಲ್ಲವಾದರೆ ಅವಳು ಬಿಡುಗಡೆಯಾಗಿದ್ದಾಳೆ. ಅವಳು ಅವನಿಗೆ ಯಾವ ಸಾಲವನ್ನೂ ತೀರಿಸಬೇಕಾಗಿಲ್ಲ.
11 Se lhe recusar uma destas três coisas, ela poderá partir livre, gratuitamente, sem pagar nada."
12 “ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದರೆ, ಅವನೂ ಕೊಲ್ಲಲ್ಪಡಬೇಕು.
12 "Aquele que ferir mortalmente um homem, será morto.
13 ಆದರೆ ಕೊಲ್ಲಬೇಕೆಂಬ ಉದ್ದೇಶವಿಲ್ಲದೆ ಹೊಡೆದಾಗ ಸತ್ತುಹೋದರೆ ಅದು ದೇವರ ಸಂಕಲ್ಪವೆಂದು ಪರಿಗಣಿಸಬೇಕು. ನಾನು ನೇಮಿಸಲಿರುವ ಆಶ್ರಯಸ್ಥಳಗಳಿಗೆ ಹೊಡೆದವನು ಓಡಿಹೋಗಿ ಸುರಕ್ಷಿತವಾಗಿ ಬದುಕಲಿ.
13 Porém, se nada premeditou, e Deus o fez cair em suas mãos, eu lhe fixarei um lugar onde possa refugiar-se.
14 ಆದರೆ ಒಬ್ಬನು ಕೋಪದಿಂದಾಗಲಿ ದ್ವೇಷದಿಂದಾಗಲಿ ಇನ್ನೊಬ್ಬನನ್ನು ಕೊಂದರೆ, ಆ ಕೊಲೆಗಾರನಿಗೆ ದಂಡನೆಯಾಗಬೇಕು. ನನ್ನ ಯಜ್ಞವೇದಿಕೆಯಿಂದ ಅವನನ್ನು ದೂರಕ್ಕೆ ತೆಗೆದುಕೊಂಡು ಹೋಗಿ ಕೊಲ್ಲಬೇಕು.
14 Mas, se alguém, por maldade, armar ciladas para matar o seu próximo, tirá-lo-ás até mesmo do meu altar, para matá-lo.
15 “ತಂದೆಯನ್ನಾಗಲಿ ತಾಯಿಯನ್ನಾಗಲಿ ಹೊಡೆಯುವವನನ್ನು ಕೊಲ್ಲಬೇಕು.
15 Aquele que ferir seu pai ou sua mãe, será morto.
16 “ಯಾವನಾದರೂ ಮತ್ತೊಬ್ಬನನ್ನು ಕದ್ದು ಗುಲಾಮನನ್ನಾಗಿ ಮಾರಿದರೆ ಅಥವಾ ತನ್ನ ಗುಲಾಮನನ್ನಾಗಿ ಮಾಡಿಕೊಂಡರೆ ಅವನಿಗೆ ಮರಣಶಿಕ್ಷೆಯಾಗಬೇಕು.
16 Aquele que furtar um homem, e o tiver vendido, ou se este for encontrado em suas mãos, será morto.
17 “ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವವನನ್ನೂ ಕೊಲ್ಲಬೇಕು.
17 Quem amaldiçoar seu pai ou sua mãe, será punido de morte.
18 “ಇಬ್ಬರು ಜಗಳವಾಡುತ್ತಿರುವಾಗ ಒಬ್ಬನನ್ನು ಕಲ್ಲಿನಿಂದಾಗಲಿ ಮುಷ್ಟಿಯಿಂದಾಗಲಿ ಹೊಡೆದಾಗ, ಪೆಟ್ಟಾದ ಮನುಷ್ಯನು ಸಾಯದಿದ್ದರೆ, ಹೊಡೆದವನನ್ನು ಕೊಲ್ಲಬಾರದು.
18 Quando, em uma contenda entre dois homens, um dos dois ferir o outro com uma pedra ou com o punho, sem matá-lo, mas o obrigar a ficar de cama,
19 ಗಾಯಗೊಂಡವನು ಕೆಲವು ಕಾಲದವರೆಗೆ ಹಾಸಿಗೆಯಲ್ಲಿರಬೇಕಾದರೆ, ಬಳಿಕ ಅವನು ಎದ್ದು ಊರುಗೋಲಿನ ಸಹಾಯದಿಂದ ನಡೆಯಬಲ್ಲವನಾದರೆ, ಹೊಡೆದವನು ಅವನನ್ನು ಆರೈಕೆ ಮಾಡಬೇಕು. ಗಾಯಗೊಂಡವನು ಕೆಲಸಮಾಡಲಾರದೆ ಹೋದ ಸಮಯಕ್ಕೆ ಹೊಡೆದವನು ಹಣ ಕೊಡಬೇಕು; ಅವನು ಸಂಪೂರ್ಣ ವಾಸಿಯಾಗುವವರೆಗೆ ಆರೈಕೆ ಮಾಡಬೇಕು.
19 aquele que feriu não será punido, se o outro se levantar e puder passear fora com seu bastão. Mas indenizá-lo-á pelo tempo que perdeu e os remédios que gastou.
20 “ಕೆಲವು ಸಲ ಯಜಮಾನರು ಗುಲಾಮನನ್ನಾಗಲಿ ಗುಲಾಮಳನ್ನಾಗಲಿ ಹೊಡೆಯುತ್ತಾರೆ. ಹೊಡೆದಾಗ ಆ ವ್ಯಕ್ತಿಯು ಸತ್ತರೆ, ಯಜಮಾನನಿಗೆ ಶಿಕ್ಷೆಯಾಗಬೇಕು.
20 Se um homem ferir seu escravo ou sua escrava com um bastão, de modo que ele morra sob sua mão, será punido.
21 ಆದರೆ ಆ ವ್ಯಕ್ತಿಯು ಸಾಯದೆ ಕೆಲವು ದಿನಗಳ ನಂತರ ಗುಣವಾದರೆ ಯಜಮಾನನಿಗೆ ಶಿಕ್ಷೆಯಾಗಬಾರದು. ಯಾಕೆಂದರೆ ಯಜಮಾನನು ಹಣವನ್ನು ಕೊಟ್ಟು ಆ ವ್ಯಕ್ತಿಯನ್ನು ಕೊಂಡುಕೊಂಡಿದ್ದಾನೆ ಮತ್ತು ಆ ವ್ಯಕ್ತಿಯು ಅವನ ಸ್ವತ್ತಾಗಿದ್ದಾನೆ.
21 Se o escravo, porém, sobreviver um dia ou dois, não será punido, porque ele é propriedade do seu senhor.
22 “ಇಬ್ಬರು ಜಗಳವಾಡುವಾಗ ಗರ್ಭಿಣೆ ಸ್ತ್ರೀಗೆ ಪೆಟ್ಟಾಗಿ ಗರ್ಭಸ್ರಾವವಾದರೆ ಅದಕ್ಕೆ ಕಾರಣನಾದ ವ್ಯಕ್ತಿಯು ಅವಳಿಗೆ ದಂಡ ಕೊಡಬೇಕು. ಅವನು ಎಷ್ಟು ದಂಡ ಕೊಡಬೇಕೆಂಬುದನ್ನು ಅವಳ ಗಂಡನು ನ್ಯಾಯಾಧಿಪತಿಗಳ ಸಹಾಯದಿಂದ ತೀರ್ಮಾನಿಸುವನು.
22 Se homens brigarem, e acontecer que venham a ferir uma mulher grávida, e esta der à luz sem nenhum dano, eles serão passíveis de uma indenização imposta pelo marido da mulher, e que pagarão diante dos juízes.
23 ಆದರೆ ಆ ಸ್ತ್ರೀಯು ತೀರಿಕೊಂಡರೆ ಅದಕ್ಕೆ ಕಾರಣನಾದವನಿಗೆ ಮರಣದಂಡನೆಯಾಗಬೇಕು. ನೀವು ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನು ಕೊಡಿಸಬೇಕು.
23 Mas, se houver outros danos, urge dar vida por vida,
24 ಕಣ್ಣಿಗೆ ಪ್ರತಿಯಾಗಿ ಕಣ್ಣು, ಹಲ್ಲಿಗೆ ಪ್ರತಿಯಾಗಿ ಹಲ್ಲು, ಕೈಗೆ ಪ್ರತಿಯಾಗಿ ಕೈ, ಕಾಲಿಗೆ ಪ್ರತಿಯಾಗಿ ಕಾಲು,
24 olho por olho, dente por dente, mão por mão, pé por pé,
25 ಬರೆಗೆ ಪ್ರತಿಯಾಗಿ ಬರೆ, ಗಾಯಕ್ಕೆ ಪ್ರತಿಯಾಗಿ ಗಾಯ, ಏಟಿಗೆ ಪ್ರತಿಯಾಗಿ ಏಟು, ಈ ಮೇರೆಗೆ ಪ್ರತಿದಂಡನೆಯಾಗಬೇಕು.
25 queimadura por queimadura, ferida por ferida, golpe por golpe.
26 “ಯಜಮಾನನು ಗುಲಾಮನಿಗೆ ಹೊಡೆದಾಗ ಗುಲಾಮನು ಕುರುಡನಾದರೆ, ಆ ಗುಲಾಮನು ಬಿಡುಗಡೆ ಹೊಂದಿದ್ದಾನೆ. ಅವನು ತನ್ನ ಬಿಡುಗಡೆಗೆ ತನ್ನ ಕಣ್ಣನ್ನೇ ಪ್ರತಿಯಾಗಿ ಕೊಟ್ಟಿದ್ದಾನೆ. ಗುಲಾಮನ ಅಥವಾ ಗುಲಾಮಳ ವಿಷಯದಲ್ಲಿಯೂ ಇದೇ ನಿಯಮ ಅನ್ವಯಿಸುತ್ತದೆ.
26 Se um homem, ferindo seu escravo ou sua escrava, atinge-lhe o olho e o faz perdê-lo, deixá-lo-á ir livre em compensação de seu olho.
27 ಯಜಮಾನನು ಗುಲಾಮನ ಬಾಯಿಗೆ ಹೊಡೆದದ್ದರಿಂದ, ಗುಲಾಮನು ತನ್ನ ಹಲ್ಲನ್ನು ಕಳೆದುಕೊಂಡರೆ, ಆ ಗುಲಾಮನ ಹಲ್ಲು ಅವನ ಬಿಡುಗಡೆಗೆ ಕೊಟ್ಟ ಹಣವಾಗಿದೆ. ಗುಲಾಮನ ಅಥವಾ ಗುಲಾಮಳ ವಿಷಯದಲ್ಲಿ ಇದೇ ನಿಯಮವು ಅನ್ವಯಿಸುತ್ತದೆ.
27 E, se lhe deitar fora um dente, deixá-lo-á ir livre em compensação do dente.
28 “ಒಬ್ಬನ ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಕೊಂದರೆ, ಆಗ ನೀವು ಕಲ್ಲುಗಳಿಂದ ಆ ಎತ್ತನ್ನು ಕೊಲ್ಲಬೇಕು. ನೀವು ಅದರ ಮಾಂಸವನ್ನು ತಿನ್ನಬಾರದು. ಆದರೆ ಎತ್ತಿನ ಮಾಲಿಕನು ತಪ್ಪಿಸಸ್ಥನಲ್ಲ.
28 Se um boi ferir mortalmente um homem ou uma mulher com as pontas dos chifres, será apedrejado e não se comerá a sua carne; mas o dono do boi não será punido.
29 ಆದರೆ ಹಿಂದೊಮ್ಮೆ ಆ ಎತ್ತು ಜನರಿಗೆ ತಿವಿದಿದ್ದು, ಅದರ ಮಾಲಿಕನಿಗೆ ಇದರ ವಿಷಯದಲ್ಲಿ ಎಚ್ಚರಿಕೆ ನೀಡಿದ್ದರೆ ಆಗ ಆ ಮಾಲಿಕನು ತಪ್ಪಿತಸ್ಥನಾಗಿದ್ದಾನೆ. ಯಾಕೆಂದರೆ ಅವನು ಆ ಎತ್ತನ್ನು ಕಟ್ಟಿಹಾಕಲಿಲ್ಲ ಅಥವಾ ಅದರ ಸ್ಥಳದಲ್ಲಿ ಬಂಧಿಸಿರಲಿಲ್ಲ. ಆದ್ದರಿಂದ ಎತ್ತನ್ನು ಕಟ್ಟಿಹಾಕದೆ ಇದ್ದುದರಿಂದ, ಅದು ಯಾರನ್ನಾದರೂ ಕೊಂದರೆ, ಆಗ ಆ ಮಾಲಿಕನು ತಪ್ಪಿತಸ್ಥನಾಗಿದ್ದಾನೆ. ನೀವು ಎತ್ತನ್ನು ಕಲ್ಲೆಸೆದು ಕೊಲ್ಲಬೇಕಲ್ಲದೆ ಅದರ ಮಾಲಿಕನನ್ನೂ ಕೊಲ್ಲಬೇಕು.
29 Porém, se o boi era já acostumado a dar chifradas, e o dono, tendo sido avisado, não o vigiou, o boi será apedrejado, se matar um homem ou uma mulher, e seu dono também morrerá.
30 ಆದರೆ ಸತ್ತವನ ಕುಟುಂಬದವರು ಅವನಿಂದ ಹಣವನ್ನು ಕೇಳಿದರೆ ಮತ್ತು ಅವನು ಹಣವನ್ನು ಕೊಟ್ಟರೆ, ಅವನು ತನ್ನ ಜೀವವನ್ನು ಬಿಡಿಸಿಕೊಂಡಂತಾಗುವುದು. ಆಗ ಆ ಎತ್ತಿನ ಮಾಲಿಕನನ್ನು ಕೊಲ್ಲಬಾರದು. ಆದರೆ ನ್ಯಾಯಾಧಿಪತಿಗಳು ತೀರ್ಮಾನಿಸುವಷ್ಟು ಹಣವನ್ನು ಅವನು ಕೊಡಬೇಕು.
30 Se, para resgatar sua vida, lhe for imposta uma quitação, ele deverá dar todo o preço que lhe tiver sido imposto.
31 “ಎತ್ತು ಒಬ್ಬನ ಮಗನನ್ನಾಗಲಿ ಅಥಲಾ ಮಗಳನ್ನಾಗಲಿ ಕೊಂದರೆ ಇದೇ ನಿಯಮವನ್ನು ಪಾಲಿಸಬೇಕು.
31 Se o boi ferir um filho ou uma filha, aplicar-se-á a mesma lei.
32 ಆದರೆ ಎತ್ತು ಗುಲಾಮನನ್ನು ಕೊಂದರೆ, ಆಗ ಆ ಪಶುವಿನ ಮಾಲಿಕನು ಗುಲಾಮನ ಯಜಮಾನನಿಗೆ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಕೊಡಬೇಕು ಮತ್ತು ಎತ್ತನ್ನು ಕಲ್ಲುಗಳಿಂದ ಹೊಡೆದು ಕೊಲ್ಲಬೇಕು. ಗುಲಾಮನ ಅಥವಾ ಗುಲಾಮಳ ವಿಷಯದಲ್ಲಿ ಇದೇ ನಿಯಮವನ್ನು ಪಾಲಿಸಬೇಕು.
32 Mas, se ferir um escravo ou uma escrava, pagar-se-á ao seu senhor trinta siclos de prata, e o boi será apedrejado.
33 “ಒಬ್ಬ ಮನುಷ್ಯನು ಕುಣಿಯೊಂದನ್ನು ತೋಡಿ ಅದನ್ನು ಮುಚ್ಚಿಲ್ಲದಿದ್ದರೆ ಮತ್ತು ಆ ಕುಣಿಯಲ್ಲಿ ಬೇರೊಬ್ಬನ ಪಶುವು ಬಿದ್ದು ಸತ್ತುಹೋದರೆ,
33 Se alguém deixar uma cisterna aberta ou cavar uma sem cobri-la, e nela cair um boi ou um jumento, o proprietário da cisterna pagará uma indenização:
34 ಕುಣಿಯನ್ನು ತೋಡಿದವನು ಆ ಪಶುವಿಗೆ ಪ್ರತಿಯಾಗಿ ಈಡುಕೊಡಬೇಕು. ಅವನು ಈಡುಕೊಟ್ಟ ನಂತರ ಆ ಸತ್ತ ಪಶುವು ಅವನದಾಗುತ್ತದೆ.
34 reembolsará em dinheiro o proprietário do animal morto, e este será seu.
35 “ಒಬ್ಬನ ಎತ್ತು ಇನ್ನೊಬ್ಬನ ಎತ್ತನ್ನು ಹಾದು ಕೊಂದರೆ ಆಗ ಜೀವಂತವಾಗಿರುವ ಎತ್ತನ್ನು ಮಾರಬೇಕು. ಆ ಎತ್ತನ್ನು ಮಾರಿದ್ದರಿಂದ ಬಂದ ಹಣವನ್ನು ಸಮವಾಗಿ ಹಂಚಿಕೊಳ್ಳಬೇಕು. ಕೊಲ್ಲಲ್ಪಟ್ಟ ಎತ್ತನ್ನು ಸಮವಾಗಿ ಹಂಚಿಕೊಳ್ಳಬೇಕು.
35 Se o boi de alguém der uma chifrada no boi de um outro, e este vier a morrer, venderão o boi vivo e repartirão o valor: repartirão igualmente o boi morto.
36 ಆದರೆ ಒಬ್ಬನ ಎತ್ತು ಮೊದಲೊಮ್ಮೆ ಇತರ ಪಶುಗಳಿಗೆ ಗಾಯಮಾಡಿದ್ದರೆ, ಅದರ ಮಾಲಿಕನು ಅದನ್ನು ಕಟ್ಟಿಹಾಕದೆ ಇದ್ದುದರ ನಿಮಿತ್ತ ತಪ್ಪಿತಸ್ಥನಾಗಿದ್ದಾನೆ. ಅವನು ಸತ್ತ ಎತ್ತಿಗೆ ಪ್ರತಿಯಾಗಿ ಸ್ವಂತ ಎತ್ತನ್ನು ಕೊಡಬೇಕು. ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬೇಕು.
36 Mas, se o boi era já acostumado a dar chifradas, seu dono, que não o vigiou, pagará boi por boi, e receberá o animal morto."

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Êxodo 21, comparar traduções ou montar um estudo — tudo direto pelo WhatsApp.