Êxodo 25

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs VC

Sair da comparação
VC Versão Católica
1 ಯೆಹೋವನು ಮೋಶೆಗೆ,
1 O Senhor disse a Moisés:
2 “ಇಸ್ರೇಲರು ನನಗೆ ಕಾಣಿಕೆಗಳನ್ನು ತರಬೇಕೆಂದು ಅವರಿಗೆ ಹೇಳು. ಪ್ರತಿಯೊಬ್ಬನು ನನಗೆ ಕೊಡುವುದರ ಬಗ್ಗೆ ತನ್ನ ಹೃದಯದಲ್ಲಿ ತೀರ್ಮಾನಿಸಿಕೊಳ್ಳಬೇಕು. ಈ ಕಾಣಿಕೆಗಳನ್ನು ನನಗಾಗಿ ಸ್ವೀಕರಿಸು.
2 "Dize aos israelitas que me façam uma oferta. Aceitareis essa oferenda de todo homem que a fizer de bom coração.
3 ಜನರಿಂದ ನೀನು ಸ್ವೀಕರಿಸಬೇಕಾದ ವಸ್ತುಗಳ ಪಟ್ಟಿ ಇಲ್ಲಿದೆ: ಚಿನ್ನ, ಬೆಳ್ಳಿ, ತಾಮ್ರ,
3 Eis o que aceitareis à guisa de oferta: ouro, prata, cobre,
4 ನೀಲಿ, ನೇರಳೆ, ಕೆಂಪುದಾರ, ನಾರುಬಟ್ಟೆ, ಆಡು ಕೂದಲಿನ ಬಟ್ಟೆ,
4 púrpura violeta e escarlate, carmesim, linho fino, peles de cabra,
5 ಕೆಂಪುಬಣ್ಣದ ಕುರಿದೊಗಲು, ಉತ್ತಮ ತೊಗಲುಗಳು, ಜಾಲೀಮರ,
5 peles de carneiro tintas de vermelho, peles de golfinho, madeira de acácia,
6 ದೀಪಗಳಿಗೆ ಬೇಕಾದ ಎಣ್ಣೆ, ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳು,
6 azeite para candeeiro, aromas para o óleo de unção e para os incensos odoríferos,
7 ಏಪೋದಿಗೆ ದೈವನಿರ್ಣಯದ ಪದಕಚೀಲಕ್ಕೆ ಬೇಕಾದ ಗೋಮೇಧಕ ರತ್ನಗಳು ಮತ್ತು ಇತರ ರತ್ನಗಳು” ಎಂದು ಹೇಳಿದನು.
7 pedras de ônix e outras pedras para os cabochões do efod e do peitoral.
8 ಇದಲ್ಲದೆ ದೇವರು ಮೋಶೆಗೆ, “ಜನರು ನನಗೋಸ್ಕರವಾಗಿ ಒಂದು ಪವಿತ್ರ ಗುಡಾರವನ್ನು ಕಟ್ಟಬೇಕು. ಆಗ ನಾನು ಅವರ ನಡುವೆ ಅದರಲ್ಲಿ ವಾಸಿಸುವೆನು.
8 Far-me-ão um santuário e habitarei no meio deles.
9 ಪವಿತ್ರ ಗುಡಾರ ಮತ್ತು ಅದರಲ್ಲಿರುವ ಪ್ರತಿಯೊಂದು ವಸ್ತುವೂ ಹೇಗಿರಬೇಕೆಂದು ನಾನು ನಿನಗೆ ತೋರಿಸುವೆನು. ನಾನು ನಿನಗೆ ತೋರಿಸುವ ಮಾದರಿಯ ಪ್ರಕಾರವೇ ಪ್ರತಿಯೊಂದನ್ನು ಮಾಡು.
9 Construireis o tabernáculo e todo o seu mobiliário exatamente segundo o modelo que vou mostrar-vos".
10 “ಜಾಲೀಮರದಿಂದ ಒಂದು ವಿಶೇಷ ಪೆಟ್ಟಿಗೆಯನ್ನು ಮಾಡಿಸು. ಈ ಪವಿತ್ರ ಪೆಟ್ಟಿಗೆಯು ಎರಡೂವರೆ ಮೊಳ ಉದ್ದ, ಒಂದೂವರೆ ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರ ಇರಬೇಕು.
10 "Farão uma arca de madeira de acácia; seu comprimento será de dois côvados e meio, sua largura de um côvado e meio, e sua altura de um côvado e meio.
11 ಅದರ ಹೊರಮೈಯನ್ನು ಮತ್ತು ಒಳಮೈಯನ್ನು ಅಪ್ಪಟ ಬಂಗಾರದಿಂದ ಹೊದಿಸಬೇಕು. ಪೆಟ್ಟಿಗೆಯ ಅಂಚುಗಳ ಸುತ್ತಲೂ ಚಿನ್ನದ ಗೋಟು ಕಟ್ಟಿಸಬೇಕು.
11 Tu a recobrirás de ouro puro por dentro, e farás por fora, em volta dela, uma bordadura de ouro.
12 ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಅನುಕೂಲವಾಗುವಂತೆ ನಾಲ್ಕು ಚಿನ್ನದ ಬಳೆಗಳನ್ನು ಎರಕಹೊಯ್ಯಬೇಕು. ನಾಲ್ಕು ಮೂಲೆಗಳಲ್ಲಿ ಅಂದರೆ ಒಂದೊಂದು ಕಡೆಯಲ್ಲಿ ಎರಡೆರಡು ಬಳೆಗಳನ್ನು ಇಡಬೇಕು.
12 Fundirás para a arca quatro argolas de ouro, que porás nos seus quatro pés, duas de um lado e duas de outro.
13 ಬಳಿಕ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಅನುಕೂಲವಾಗುವಂತೆ ಕಂಬಗಳನ್ನು ಮಾಡಬೇಕು. ಈ ಕಂಬಗಳನ್ನು ಜಾಲೀಮರದಿಂದ ಮಾಡಿ ಬಂಗಾರದಿಂದ ಹೊದಿಸಬೇಕು.
13 Farás dois varais de madeira de acácia, revestidos de ouro,
14 ಕಂಬಗಳನ್ನು ಪೆಟ್ಟಿಗೆ ಕೊನೆಗಳಲ್ಲಿರುವ ಬಳೆಗಳಲ್ಲಿ ಸೇರಿಸಿ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಬೇಕು.
14 que passarás nas argolas fixadas dos lados da arca, para se poder transportá-la.
15 ಕಂಬಗಳು ಯಾವಾಗಲೂ ಪೆಟ್ಟಿಗೆಯ ಬಳೆಗಳಲ್ಲಿ ಇರಬೇಕು. ಕಂಬಗಳನ್ನು ಅವುಗಳಿಂದ ಹೊರಗೆ ತೆಗೆಯಬಾರದು.
15 Uma vez passados os varais nas argolas, delas não serão mais removidos.
16 “ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಅದರೊಳಗೆ ಇಡು” ಎಂದು ಹೇಳಿದನು.
16 Porás na arca o testemunho que eu te der.
17 ಇದಲ್ಲದೆ ದೇವರು ಮೋಶೆಗೆ, “ಅಪ್ಪಟ ಬಂಗಾರದಿಂದ ಕೃಪಾಸನವನ್ನು ಮಾಡಿಸಬೇಕು. ಅದು ಎರಡೂವರೆ ಮೊಳ ಉದ್ದವಾಗಿರಬೇಕು. ಒಂದೂವರೆ ಮೊಳ ಅಗಲವಾಗಿರಬೇಕು.
17 Farás também uma tampa de ouro puro, cujo comprimento será de dois côvados e meio, e a largura de um côvado e meio.
18 ಬಳಿಕ ಕೆರೂಬಿಯರ ಎರಡು ಬಂಗಾರದ ಆಕಾರಗಳನ್ನು ಮಾಡಿಸಿ ಕೃಪಾಸನದ ಎರಡು ಕೊನೆಗಳಲ್ಲಿ ಇಡಬೇಕು.
18 Farás dois querubins de ouro; e os farás de ouro batido, nas duas extremidades da tampa, um de um lado e outro de outro,
19 ಕೃಪಾಸನದ ಒಂದು ಕೊನೆಯಲ್ಲಿ ಒಂದು ಕೆರೂಬಿಯನ್ನೂ ಇನ್ನೊಂದು ಕೊನೆಯಲ್ಲಿ ಇನ್ನೊಂದು ಕೆರೂಬಿಯನ್ನೂ ಜೋಡಿಸಬೇಕು.
19 fixando-os de modo a formar uma só peça com as extremidades da tampa.
20 ಅವುಗಳ ರೆಕ್ಕೆಗಳು ಆಕಾಶದ ಕಡೆಗೆ ಚಾಚಿರಬೇಕು; ಪೆಟ್ಟಿಗೆಯನ್ನು ಮುಚ್ಚಿಕೊಂಡಿರಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿರಬೇಕು.
20 Terão esses querubins suas asas estendidas para o alto, e protegerão com elas a tampa, sobre a qual terão a face inclinada.
21 “ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಪೆಟ್ಟಿಗೆಯಲ್ಲಿಡಬೇಕು; ಕೃಪಾಸನವನ್ನು ಆ ಪೆಟ್ಟಿಗೆಯ ಮೇಲಿಡಬೇಕು.
21 Colocarás a tampa sobre a arca e porás dentro da arca o testemunho que eu te der.
22 ನಾನು ನಿನಗೆ ದರ್ಶನ ಕೊಡುವಾಗ ಒಡಂಬಡಿಕೆ ಪೆಟ್ಟಿಗೆಯ ಮೇಲಿರುವ ಕೆರೂಬಿಗಳ ಮಧ್ಯದಿಂದ ನಿನ್ನ ಸಂಗಡ ಮಾತಾಡುವೆನು; ಇಸ್ರೇಲರಿಗೆ ಆಜ್ಞಾಪಿಸಬೇಕಾದವುಗಳನ್ನು ನಿನಗೆ ತಿಳಿಸುವೆನು.
22 Ali virei ter contigo, e é de cima da tampa, do meio dos querubins que estão sobre a arca da aliança, que te darei todas as minhas ordens para os israelitas."
23 “ನೀನು ಜಾಲೀಮರದಿಂದ ಮೇಜನ್ನು ಮಾಡಬೇಕು. ಮೇಜು ಎರಡು ಮೊಳ ಉದ್ದ, ಒಂದು ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರ ಇರಬೇಕು.
23 "Farás uma mesa de madeira de acácia, cujo comprimento será de dois côvados, a largura de um côvado e a altura de um côvado e meio.
24 ಶುದ್ಧಬಂಗಾರದ ತಗಡುಗಳನ್ನು ಮೇಜಿಗೆ ಹೊದಿಸಿ ಅದರ ಸುತ್ತಲೂ ಚಿನ್ನದ ಗೋಟು ಕಟ್ಟಿಸಬೇಕು.
24 Recobri-la-ás de ouro puro e farás em volta dela uma bordadura de ouro.
25 ಬಳಿಕ ಮೇಜಿನ ಸುತ್ತಲೂ ಮೂರು ಇಂಚು ಅಗಲದ ಚೌಕಟ್ಟನ್ನು ಮಾಡಿಸಿ ಅದಕ್ಕೂ ಚಿನ್ನದ ಗೋಟು ಕಟ್ಟಿಸಬೇಕು.
25 Farás em volta dela uma orla de um palmo de largura com uma bordadura de ouro corrente ao redor.
26 ಬಳಿಕ ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಿಗೆ ಜೋಡಿಸಬೇಕು.
26 Farás para essa mesa quatro argolas de ouro, que fixarás nos quatro ângulos de seus pés.
27 ಆ ಬಳೆಗಳು ಅಡ್ಡಪಟ್ಟಿಗೆ ಜೋಡಿಸಿಕೊಂಡಿರಬೇಕು. ಮೇಜನ್ನು ಹೊತ್ತುಕೊಂಡು ಹೋಗುವುದಕ್ಕೆ ಉಪಯೋಗಿಸುವ ಕೋಲುಗಳನ್ನು ಅವುಗಳಲ್ಲಿ ಸೇರಿಸಬೇಕು.
27 Essas argolas, colocadas à altura da orla, receberão os varais destinados a transportar a mesa.
28 ಆ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡನ್ನು ಹೊದಿಸಬೇಕು.
28 Farás, de madeira de acácia, varais revestidos de ouro, que servirão para o transporte da mesa.
29 ತಟ್ಟೆಗಳನ್ನು, ಚಮಚಗಳನ್ನು, ಹೂಜಿಗಳನ್ನು ಮತ್ತು ಬೋಗುಣಿಗಳನ್ನು ಶುದ್ಧಬಂಗಾರದಿಂದ ಮಾಡಬೇಕು. ಹೂಜಿಗಳನ್ನು ಮತ್ತು ಬೋಗುಣಿಗಳನ್ನು ಪಾನದ್ರವ್ಯಗಳನ್ನು ಅರ್ಪಿಸಲು ಉಪಯೋಗಿಸಬೇಕು.
29 Farás de ouro puro os seus pratos, seus incensários, seus copos e suas taças, que servirão para as libações.
30 ನೈವೇದ್ಯದ ರೊಟ್ಟಿಗಳನ್ನು ಮೇಜಿನ ಮೇಲೆ ನನ್ನ ಮುಂದೆ ಇಡು. ಅವು ಅಲ್ಲಿ ನನ್ನ ಮುಂದೆ ಯಾವಾಗಲೂ ಇರಬೇಕು.
30 Porás sobre essa mesa os pães da proposição, que ficarão constantemente diante de mim."
31 “ಬಳಿಕ ಒಂದು ದೀಪಸ್ತಂಭವನ್ನು ಶುದ್ಧಬಂಗಾರದಿಂದ ಮಾಡಿಸಬೇಕು. ಅದರ ಬುಡವನ್ನೂ ಕಂಬವನ್ನೂ ಕಸೂತಿ ಕೆಲಸದಿಂದ ಮಾಡಿಸಬೇಕು. ಆ ದೀಪಸ್ತಂಭವೆಲ್ಲಾ ಅಖಂಡವಾಗಿದ್ದು ಪುಷ್ಪಪಾತ್ರೆಗಳಂತೆಯೂ ಅಲಂಕಾರವಾಗಿ ಕೆತ್ತಲ್ಪಡಬೇಕು.
31 "Farás um candelabro de ouro puro; e o farás de ouro batido, com o seu pedestal e sua haste: seus cálices, seus botões e suas flores formarão uma só peça com ele.
32 “ದೀಪಸ್ತಂಭಕ್ಕೆ ಒಂದೊಂದು ಪಾರ್ಶ್ವದಲ್ಲಿ ಮೂರುಮೂರು ಕೊಂಬೆಗಳಂತೆ ಆರು ಕೊಂಬೆಗಳಿರಬೇಕು.
32 Seis braços sairão dos seus lados, três de um lado e três de outro.
33 ಪ್ರತಿಯೊಂದು ಕೊಂಬೆಯಲ್ಲಿ ಬಾದಾಮಿ ಹೂವುಗಳಂತಿರುವ ಮೂರುಮೂರು ಪುಷ್ಪಾಲಂಕಾರಗಳಿರಬೇಕು. ಒಂದೊಂದು ಅಲಂಕಾರಕ್ಕೆ ಒಂದು ಪುಷ್ಪಪಾತ್ರೆಯೂ ಒಂದು ಪುಷ್ಪವೂ ಇರಬೇಕು. ಆರು ಕೊಂಬೆಗಳನ್ನೂ ಹಾಗೇ ಮಾಡಿಸಬೇಕು.
33 Num braço haverá três cálices em forma de flor de amendoeira, com um botão e uma flor; noutro haverá três cálices em forma de flor de amendoeira, com um botão e uma flor e assim por diante para os seis braços do candelabro.
34 ದೀಪದ ಸ್ತಂಭದಲ್ಲಿ ಪುಷ್ಪಪಾತ್ರೆಗಳೂ ಪುಷ್ಪಗಳೂ ಇರುವ ಬಾದಾಮಿ ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳು ಇರಬೇಕು.
34 No próprio candelabro haverá quatro cálices em forma de flor de amendoeira, com seus botões e suas flores:
35 ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಪುಷ್ಪಪಾತ್ರೆಯಿರಬೇಕು.
35 um botão sob os dois primeiros braços do candelabro, um botão sob os dois braços seguintes e um botão sob os dois últimos: e assim será com os seis braços que saem do candelabro.
36 ಪುಷ್ಪಪಾತ್ರೆಗಳನ್ನೂ ಕೊಂಬೆಗಳನ್ನೂ ಒಳಗೊಂಡಿರುವ ದೀಪಸ್ತಂಭವು ಅಖಂಡವಾಗಿದ್ದು ಅಪ್ಪಟ ಬಂಗಾರದಿಂದಲೂ ನಕಾಸಿ ಕೆಲಸದಿಂದಲೂ ಮಾಡಿದ್ದಾಗಿರಬೇಕು.
36 Esses botões e esses braços formarão um todo com o candelabro, tudo formando uma só peça de ouro puro batido.
37 ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಈ ಹಣತೆಗಳು ದೀಪಸ್ತಂಭದ ಮುಂದಿರುವ ಪ್ರದೇಶಕ್ಕೆ ಬೆಳಕು ಕೊಡುವುದು.
37 Farás sete lâmpadas, que serão colocadas em cima, de maneira a alumiar a frente do candelabro.
38 ಅದರ ಬತ್ತಿಗಳನ್ನು ಕತ್ತರಿಸುವ ಕತ್ತರಿಯನ್ನು ಮತ್ತು ಹರಿವಾಣಗಳನ್ನು ಅಪ್ಪಟ ಬಂಗಾರದಿಂದ ಮಾಡಿಸಬೇಕು.
38 Seus espevitadores e seus cinzeiros serão de ouro puro.
39 ದೀಪಸ್ತಂಭವನ್ನು ಮತ್ತು ಅದರ ಎಲ್ಲಾ ಉಪಕರಣಗಳನ್ನು ಎಪ್ಪತ್ತೈದು ಪೌಂಡು
39 Empregar-se-á um talento de ouro puro para confeccionar o candelabro e seus acessórios.
40 ನಾನು ನಿನಗೆ ಬೆಟ್ಟದ ಮೇಲೆ ತೋರಿಸಿದ ಮಾದರಿಯಂತೆಯೇ ಪ್ರತಿಯೊಂದನ್ನು ಮಾಡಬೇಕು” ಎಂದು ಹೇಳಿದನು.
40 Cuida para que se execute esse trabalho segundo o modelo que te mostrei no monte."

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Êxodo 25, comparar traduções ou montar um estudo — tudo direto pelo WhatsApp.