Êxodo 27
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs BKJ
1 ಯೆಹೋವನು ಮೋಶೆಗೆ, “ಜಾಲೀಮರದಿಂದ ಯಜ್ಞವೇದಿಕೆಯನ್ನು ಮಾಡಿಸಬೇಕು. ಈ ಯಜ್ಞವೇದಿಕೆಯು ಚೌಕವಾಗಿರಬೇಕು. ಅದು ಐದು ಮೊಳ ಉದ್ದ, ಐದು ಮೊಳ ಅಗಲ ಮತ್ತು ಮೂರು ಮೊಳ ಎತ್ತರ ಇರಬೇಕು.
1 E farás um altar de madeira de acácia, com cinco côvados de comprimento, e cinco côvados de largura; o altar será quadrado, e a sua altura será de três côvados.
2 ಈ ಯಜ್ಞವೇದಿಕೆಯ ನಾಲ್ಕು ಮೂಲೆಗಳಿಗೆ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಪ್ರತಿಯೊಂದು ಕೊಂಬೂ ಯಜ್ಞವೇದಿಕೆಗೆ ಜೋಡಿಸಲ್ಪಟ್ಟಿರಬೇಕು. ಹೀಗೆ ಅವು ಯಜ್ಞವೇದಿಕೆಯ ಅವಿಭಾಜ್ಯ ಭಾಗವಾಗಿರಬೇಕು. ಬಳಿಕ ಯಜ್ಞವೇದಿಕೆಯನ್ನು ತಾಮ್ರದ ತಗಡಿನಿಂದ ಹೊದಿಸಬೇಕು.
2 E farás os seus chifres sobre os seus quatro cantos; os seus chifres serão do mesmo, e o revestirás de bronze.
3 “ಯಜ್ಞವೇದಿಕೆಯ ಉಪಕರಣಗಳನ್ನೆಲ್ಲಾ ತಾಮ್ರದಿಂದ ಮಾಡಿಸಬೇಕು. ಬಟ್ಟಲುಗಳನ್ನು, ಸಲಿಕೆಗಳನ್ನು, ಬೋಗುಣಿಗಳನ್ನು, ಮುಳ್ಳುಗಳನ್ನು ಮತ್ತು ಅಗ್ಗಿಷ್ಟಿಕೆಗಳನ್ನು ಮಾಡಿಸಬೇಕು. ಇವುಗಳನ್ನು ಯಜ್ಞವೇದಿಕೆಯಿಂದ ಬೂದಿಯನ್ನು ತೆಗೆದು ಶುಚಿಗೊಳಿಸುವುದಕ್ಕೆ ಉಪಯೋಗಿಸಬೇಕು.
3 E lhe farás seus recipientes para recolher suas cinzas, e suas pás, e suas bacias, e os seus ganchos de carne, e os seus braseiros; todos os seus utensílios farás de bronze.
4 ಯಜ್ಞವೇದಿಕೆಗೆ ಹೆಣಿಗೇ ಕೆಲಸದಿಂದ ತಾಮ್ರದ ಜಾಳಿಗೆ ಮಾಡಿಸಬೇಕು. ಈ ಜಾಳಿಗೆಯ ನಾಲ್ಕುಮೂಲೆಗಳಲ್ಲಿ ನಾಲ್ಕು ತಾಮ್ರದ ಬಳೆಗಳನ್ನು ಮಾಡಿಸಬೇಕು.
4 E lhe farás uma grade de bronze em forma de grelha, e sobre a rede farás quatro argolas de bronze nos seus quatro cantos.
5 ಆ ಜಾಳಿಗೆಯು ಯಜ್ಞವೇದಿಕೆಯ ಸುತ್ತಲಿರುವ ಕಟ್ಟೆಯ ಕೆಳಗೆ ಇದ್ದು ಯಜ್ಞವೇದಿಕೆಯ ಬುಡದಿಂದ ಅರ್ಧದಷ್ಟು ಮೇಲಕ್ಕೆ ಇರಬೇಕು.
5 E os colocarás debaixo do altar em volta, para que a rede chegue até o meio do altar.
6 “ಯಜ್ಞವೇದಿಕೆಗೆ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ತಾಮ್ರದ ತಗಡನ್ನು ಹೊದಿಸಬೇಕು.
6 E farás varas para o altar, varas de madeira de acácia, e as revestirás com bronze.
7 ಯಜ್ಞವೇದಿಕೆಯ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಕೋಲುಗಳನ್ನು ಸೇರಿಸಬೇಕು. ಈ ಕೋಲುಗಳಿಂದ ಯಜ್ಞವೇದಿಕೆಯನ್ನು ಹೊತ್ತುಕೊಂಡು ಹೋಗಬೇಕು.
7 E as varas serão colocadas nas argolas, e as varas estarão sobre os dois lados do altar, para carregá-lo.
8 ಯಜ್ಞವೇದಿಕೆಯ ಪಾರ್ಶ್ವಗಳನ್ನು ಹಲಗೆಗಳಿಂದ ಮಾಡಿಸಬೇಕು. ನಾನು ಬೆಟ್ಟದ ಮೇಲೆ ನಿನಗೆ ತೋರಿಸಿದ ಪ್ರಕಾರವೇ ಯಜ್ಞವೇದಿಕೆಯನ್ನು ಮಾಡಿಸಬೇಕು.
8 Oco e de tábuas o farás; como te foi mostrado no monte, assim o farão.
9 “ಪವಿತ್ರಗುಡಾರಕ್ಕೆ ಅಂಗಳವನ್ನು ಮಾಡಿಸಬೇಕು. ದಕ್ಷಿಣ ದಿಕ್ಕಿನಲ್ಲಿ ನೂರು ಮೊಳ ಉದ್ದದ ಪರದೆಗಳ ಗೋಡೆಯಿರಬೇಕು. ಈ ಪರದೆಗಳನ್ನು ಉತ್ತಮ ನಾರುಬಟ್ಟೆಯಿಂದ ಮಾಡಿಸಬೇಕು.
9 E farás o pátio do tabernáculo; do lado sul em direção ao sul haverá cortinas para o pátio de linho fino torcido de cem côvados de comprimento para um lado,
10 ಇಪ್ಪತ್ತು ಕಂಬಗಳನ್ನು ಮತ್ತು ಆ ಕಂಬಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳನ್ನು ಮಾಡಿಸಬೇಕು. ಕಂಬಗಳಿಗೆ ಬೆಳ್ಳಿಯ ಕೊಂಡಿಗಳನ್ನು ಮತ್ತು ಪರದೆಯ ಕೋಲುಗಳಿಗೆ ಬೆಳ್ಳಿಯ ಕಂಬಿಗಳನ್ನು ಮಾಡಿಸಬೇಕು.
10 e as suas vinte colunas e suas vinte bases serão de bronze. Os colchetes das colunas e suas faixas serão de prata.
11 ಉತ್ತರ ದಿಕ್ಕಿನಲ್ಲಿ ಸಹ ನೂರು ಮೊಳ ಉದ್ದದ ಪರದೆಗಳ ಗೋಡೆಯಿರಬೇಕು. ಅದಕ್ಕೆ ಇಪ್ಪತ್ತು ಕಂಬಿಗಳು ಮತ್ತು ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳು ಇರಬೇಕು. ಕಂಬಗಳ ಕೊಂಡಿಗಳನ್ನು ಮತ್ತು ಪರದೆಯ ಕಟ್ಟುಗಳನ್ನು ಬೆಳ್ಳಿಯಿಂದ ಮಾಡಿಸಬೇಕು.
11 E da mesma forma ao longo do lado do norte haverá cortinas de cem côvados de comprimento, e suas vinte colunas e vinte bases de bronze. Os colchetes dos pilares e suas faixas de prata.
12 “ಪಶ್ಚಿಮದಿಕ್ಕಿನಲ್ಲಿ ಅಂಗಳದ ಅಗಲಕ್ಕೆ ಐವತ್ತು ಮೊಳ ಉದ್ದದ ಪರದೆಗಳೂ ಹತ್ತು ಕಂಬಗಳೂ ಮತ್ತು ಹತ್ತು ಗದ್ದಿಗೇಕಲ್ಲುಗಳೂ ಇರಬೇಕು.
12 E na largura do pátio no lado oeste haverá cortinas de cinquenta côvados; suas colunas dez, e as suas bases dez.
13 ಅಂಗಳದ ಪೂರ್ವದಿಕ್ಕಿನಲ್ಲಿ ಐವತ್ತು ಮೊಳ ಉದ್ದ ಇರಬೇಕು.
13 E a largura do pátio no lado leste em direção ao leste será de cinquenta côvados.
14 ಈ ಪೂರ್ವದಿಕ್ಕಿನಲ್ಲಿ ಅಂಗಳದ ಪ್ರವೇಶದ್ವಾರವಿರುತ್ತದೆ. ಪ್ರವೇಶದ್ವಾರದ ಒಂದು ಕಡೆಯಲ್ಲಿ ಹದಿನೈದು ಮೊಳ ಉದ್ದದ ಪರದೆಗಳು, ಮೂರು ಕಂಬಗಳು ಮತ್ತು ಮೂರು ಗದ್ದಿಗೇಕಲ್ಲುಗಳು ಇರಬೇಕು.
14 As cortinas de um lado da porta serão de quinze côvados; suas colunas, três, e suas bases, três.
15 ಇನ್ನೊಂದು ಕಡೆಯಲ್ಲಿ ಹದಿನೈದು ಮೊಳ ಉದ್ದದ ಪರದೆಗಳು, ಮೂರು ಕಂಬಗಳು; ಮೂರು ಗದ್ದಿಗೇಕಲ್ಲುಗಳು ಇರಬೇಕು.
15 E do outro lado haverá cortinas de quinze côvados; suas colunas, três, e suas bases, três.
16 “ಅಂಗಳದ ದ್ವಾರವನ್ನು ಮುಚ್ಚುವುದಕ್ಕೆ ಇಪ್ಪತ್ತು ಮೊಳ ಉದ್ದದ ಪರದೆಯನ್ನು ಮಾಡಿಸಬೇಕು. ಪರದೆಯನ್ನು ಉತ್ತಮ ನಾರಿನ ಬಟ್ಟೆಯಿಂದ ಮತ್ತು ನೀಲಿ, ನೇರಳೆ ಮತ್ತು ಕೆಂಪು ದಾರಗಳಿಂದ ಮಾಡಿಸಬೇಕು. ಆ ಪರದೆಯಲ್ಲಿ ಅಲಂಕೃತವಾದ ಚಿತ್ರಗಳನ್ನು ಬುಟೇದಾರೀ ಕೆಲಸದವರಿಂದ ಮಾಡಿಸಬೇಕು. ಆ ಪರದೆಗೆ ನಾಲ್ಕು ಕಂಬಗಳು ಮತ್ತು ನಾಲ್ಕು ಗದ್ದಿಗೇಕಲ್ಲುಗಳು ಇರಬೇಕು.
16 E para a porta do pátio haverá uma cortina de quinze côvados, de azul, e púrpura, e escarlate, e linho fino torcido, obra de bordador. E suas colunas serão quatro, e suas bases, quatro.
17 ಅಂಗಳದ ಸುತ್ತಲಿರುವ ಕಂಬಗಳನ್ನೆಲ್ಲ ಬೆಳ್ಳಿಯ ಪರದೆ ಕೋಲುಗಳೊಡನೆ ಜೋಡಿಸಬೇಕು. ಕಂಬಗಳ ಕೊಂಡಿಗಳನ್ನು ಬೆಳ್ಳಿಯಿಂದಲೂ ಕಂಬಗಳ ಗದ್ದಿಗೇಕಲ್ಲುಗಳನ್ನು ತಾಮ್ರದಿಂದಲೂ ಮಾಡಿಸಬೇಕು.
17 Todas as colunas ao redor do pátio terão faixas de prata; seus colchetes serão de prata, e suas bases de bronze.
18 ಅಂಗಳವು ನೂರು ಮೊಳ ಉದ್ದ ಮತ್ತು ಐವತ್ತು ಮೊಳ ಅಗಲ ಇರಬೇಕು. ಅಂಗಳದ ಸುತ್ತಲಿರುವ ಪರದೆಗಳ ಗೋಡೆಯು ಐದು ಮೊಳ ಎತ್ತರವಿರಬೇಕು. ಪರದೆಗಳನ್ನು ಉತ್ತಮ ನಾರುಬಟ್ಟೆಯಿಂದ ಮಾಡಿಸಬೇಕು. ಕಂಬಗಳ ಕೆಳಗಿರುವ ಗದ್ದಿಗೇಕಲ್ಲುಗಳನ್ನು ತಾಮ್ರದಿಂದ ಮಾಡಿಸಬೇಕು.
18 O comprimento do pátio será de cem côvados, e a largura de cada lado será de cinquenta, e a altura de cinco côvados de linho fino torcido, e suas bases de bronze.
19 ಪವಿತ್ರಗುಡಾರದ ಉಪಕರಣಗಳನ್ನೂ ಗುಡಾರದ ಗೂಟಗಳನ್ನೂ ಗುಡಾರದ ಸುತ್ತಲೂ ಇರುವ ಪರದೆಯ ಗೂಟಗಳನ್ನೂ ತಾಮ್ರದಿಂದ ಮಾಡಿಸಬೇಕು.
19 Todos os utensílios do tabernáculo em todo o seu serviço, e todas as suas estacas, e todas as estacas do pátio, serão de bronze.
20 “ಉತ್ತಮವಾದ ಆಲಿವ್‌ಎಣ್ಣೆಯನ್ನು ತರಬೇಕೆಂದು ಇಸ್ರೇಲರಿಗೆ ಆಜ್ಞಾಪಿಸು. ಪ್ರತಿ ಸಾಯಂಕಾಲ ಉರಿಸುವ ದೀಪಕ್ಕೆ ಈ ಎಣ್ಣೆಯನ್ನು ಉಪಯೋಗಿಸು.
20 E ordenarás aos filhos de Israel para que tragam óleo puro de oliva, batido, para a luz, para fazer a lâmpada arder continuamente.
21 ಆರೋನ ಮತ್ತು ಅವನ ಗಂಡುಮಕ್ಕಳಿಗೆ ದೀಪವನ್ನು ನೋಡಿಕೊಳ್ಳುವ ಕೆಲಸವಿರುವುದು. ಅವರು ದೇವದರ್ಶನಗುಡಾರದ ಮೊದಲಿನ ಕೋಣೆಯೊಳಗೆ ಹೋಗುವರು. ಇದು ಎರಡು ಕೋಣೆಗಳನ್ನು ಪ್ರತ್ಯೇಕಿಸುವ ಪರದೆಯ ಹಿಂದೆ ಒಪ್ಪಂದವಿರುವ ಕೋಣೆಯ ಹೊರಗೆ ಇರುತ್ತದೆ. ಈ ಸ್ಥಳದಲ್ಲಿ ದೀಪವು ಯೆಹೋವನ ಮುಂದೆ ಸಾಯಂಕಾಲದಿಂದ ಮುಂಜಾನೆಯವರೆಗೆ ಯಾವಾಗಲೂ ಉರಿಯುತ್ತಿರುವಂತೆ ಅವರು ನೋಡಿಕೊಳ್ಳುವರು. ಇಸ್ರೇಲರು ಮತ್ತು ಅವರ ಸಂತತಿಯವರು ಈ ನಿಯಮಕ್ಕೆ ಶಾಶ್ವತವಾಗಿ ವಿಧೇಯರಾಗಬೇಕು” ಎಂದು ಹೇಳಿದನು.
21 No tabernáculo da congregação fora do véu, que está diante do Testemunho, Arão e seus filhos as porão em ordem desde a tarde até a manhã diante do SENHOR. Será um estatuto para sempre para as suas gerações para os filhos de Israel.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Êxodo 27, comparar traduções ou montar um estudo — tudo direto pelo WhatsApp.