Êxodo 28
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVI
1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಇಸ್ರೇಲರಿಂದ ನಿನ್ನ ಬಳಿಗೆ ಬರಲು ನಿನ್ನ ಅಣ್ಣನಾದ ಆರೋನನಿಗೂ ಅವನ ಗಂಡುಮಕ್ಕಳಾದ ನಾದ್ವಾ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರಿಗೂ ಹೇಳು. ಇವರು ಯಾಜಕರಾಗಿ ನನ್ನ ಸೇವೆ ಮಾಡುವರು.
1 "Chame seu irmão Arão e separe-o dentre os israelitas, e também os seus filhos Nadabe e Abiú, Eleazar e Itamar, para que me sirvam como sacerdotes.
2 “ನಿನ್ನ ಅಣ್ಣನಾದ ಆರೋನನಿಗೆ ವಿಶೇಷ ಬಟ್ಟೆಗಳನ್ನು ಮಾಡಿಸು. ಈ ಬಟ್ಟೆಗಳು ಅವನಿಗೆ ಘನತೆಯನ್ನೂ ಗೌರವವನ್ನೂ ನೀಡುತ್ತವೆ.
2 Para o seu irmão Arão, faça vestes sagradas que lhe confiram dignidade e honra.
3 ಈ ಬಟ್ಟೆಗಳನ್ನು ಮಾಡುವಂಥ ಕೆಲವು ನಿಪುಣರಿದ್ದಾರೆ. ನಾನು ಅವರಿಗೆ ವಿಶೇಷ ಜ್ಞಾನವನ್ನು ಕೊಟ್ಟಿದ್ದೇನೆ. ಆರೋನನಿಗೆ ಬೇಕಾದ ಬಟ್ಟೆಗಳನ್ನು ಮಾಡಲು ಅವರಿಗೆ ಹೇಳು. ಅವನು ವಿಶೇಷವಾದ ರೀತಿಯಲ್ಲಿ ನನ್ನ ಸೇವೆಮಾಡುತ್ತಾನೆಂದು ಈ ಬಟ್ಟೆಗಳು ತೋರಿಸುತ್ತವೆ. ಆಗ ಅವನು ಯಾಜಕನಾಗಿ ನನ್ನ ಸೇವೆ ಮಾಡಬಹುದು.
3 Diga a todos os homens capazes, aos quais dei habilidade, que façam vestes para a consagração de Arão, para que me sirva como sacerdote.
4 ಅವರು ಮಾಡತಕ್ಕ ಬಟ್ಟೆಗಳು ಯಾವುವೆಂದರೆ: ದೈವನಿರ್ಣಯಕ ಪದಕ, ಏಫೋದು, ನೀಲಿಯ ನಿಲುವಂಗಿ, ಹೆಣೆದ ಬಿಳಿಯ ನಿಲುವಂಗಿ, ಮುಂಡಾಸು ಮತ್ತು ನಡುಕಟ್ಟು. ನಿನ್ನ ಅಣ್ಣನಾದ ಆರೋನನಿಗೂ ಅವನ ಗಂಡುಮಕ್ಕಳಿಗೂ ಈ ವಿಶೇಷ ಬಟ್ಟೆಗಳನ್ನು ಅವರು ಮಾಡಬೇಕು. ಆಗ ಆರೋನನೂ ಅವನ ಗಂಡುಮಕ್ಕಳೂ ಯಾಜಕರಾಗಿ ನನ್ನ ಸೇವೆಮಾಡಬಹುದು.
4 São estas as vestes que farão: um peitoral, um colete sacerdotal, um manto, uma túnica bordada, um turbante e um cinturão. Para que o sacerdote Arão e seus filhos me sirvam como sacerdotes, eles farão essas vestes sagradas
5 ಚಿನ್ನದ ದಾರಗಳು, ನಾರುಬಟ್ಟೆ, ನೀಲಿ, ನೇರಳೆ ಮತ್ತು ಕೆಂಪುದಾರಗಳನ್ನು ಉಪಯೋಗಿಸಲು ಅವರಿಗೆ ಹೇಳು.
5 e usarão linho fino, fios de ouro e fios de tecido azul, roxo e vermelho.
6 “ಏಫೋದನ್ನು ಚಿನ್ನದ ದಾರಗಳು, ನಾರಿನಬಟ್ಟೆ, ನೀಲಿ, ನೇರಳೆ ಮತ್ತು ಕೆಂಪುದಾರಗಳನ್ನು ಉಪಯೋಗಿಸಿ ಚಾಣಾಕ್ಷತೆಯಿಂದ ಹೆಣೆದು ತಯಾರಿಸಬೇಕು.
6 "Faça o colete sacerdotal de linho fino trançado e de fios de ouro e de fios de tecido azul, roxo e vermelho, trabalho artesanal.
7 ಏಫೋದಿನ ಪ್ರತಿಭುಜದಲ್ಲಿ ಭುಜದ ಪಟ್ಟಿಯಿರಬೇಕು. ಭುಜದ ಈ ಪಟ್ಟಿಗಳು ಏಫೋದಿನ ಎರಡು ಕೊನೆಗಳಿಗೆ ಕಟ್ಟಿರಬೇಕು.
7 Terá duas ombreiras atadas às suas duas extremidades para uni-lo bem.
8 “ಇವರು ಏಫೋದಿಗೆ ಸೇರಿಸಲ್ಪಟ್ಟಿರುವ ನಡುಕಟ್ಟನ್ನು ಬಹಳ ಎಚ್ಚರಿಕೆಯಿಂದ ಹೆಣೆಯಬೇಕು. ಏಫೋದನ್ನು ತಯಾರಿಸಿದಂತೆಯೇ ಈ ನಡುಕಟ್ಟನ್ನು ತಯಾರಿಸಬೇಕು. ಚಿನ್ನದ ದಾರಗಳು, ನಾರುಬಟ್ಟೆ, ನೀಲಿ, ನೇರಳೆ ಮತ್ತು ಕೆಂಪುದಾರಗಳನ್ನು ಉಪಯೋಗಿಸಿ ಇದನ್ನು ಮಾಡಬೇಕು.
8 O cinturão e o colete que por ele é preso serão feitos da mesma peça. O cinturão também será de linho fino trançado, de fios de ouro e de fios de tecido azul, roxo e vermelho.
9 “ಎರಡು ಗೋಮೇಧಕ ರತ್ನಗಳನ್ನು ತೆಗೆದುಕೊ. ಈ ರತ್ನಗಳ ಮೇಲೆ ಇಸ್ರೇಲನ ಹನ್ನೆರಡು ಗಂಡುಮಕ್ಕಳ ಹೆಸರನ್ನು ಬರೆಸು.
9 "Grave em duas pedras de ônix os nomes dos filhos de Israel,
10 ಒಂದು ರತ್ನದ ಮೇಲೆ ಆರು ಹೆಸರುಗಳನ್ನೂ ಇನ್ನೊಂದು ರತ್ನದ ಮೇಲೆ ಆರು ಹೆಸರುಗಳನ್ನೂ ಬರೆಸು. ಹಿರಿಮಗನಿಂದ ಹಿಡಿದು ಕಿರಿ ಮಗನವರೆಗೆ ಕ್ರಮಾನುಸಾರವಾಗಿ ಹೆಸರುಗಳನ್ನು ಬರೆಸು.
10 por ordem de nascimento: seis nomes numa pedra e seis na outra.
11 ಈ ಕಲ್ಲುಗಳ ಮೇಲೆ ಇಸ್ರೇಲನ ಗಂಡುಮಕ್ಕಳ ಹೆಸರನ್ನು ಕೆತ್ತಿಸು. ಒಬ್ಬ ಕೆಲಸಗಾರನು ಮುದ್ರೆಯನ್ನು ಮಾಡುವ ರೀತಿಯಲ್ಲಿ ಇದನ್ನು ಮಾಡಿಸು. ಚಿನ್ನದ ಕುಂದಣದಲ್ಲಿ ರತ್ನಗಳನ್ನಿಡು.
11 Grave os nomes dos filhos de Israel nas duas pedras como o lapidador grava um selo. Em seguida prenda-as com filigranas de ouro,
12 ಬಳಿಕ ಈ ಎರಡು ರತ್ನಗಳನ್ನು ಏಫೋದಿನ ಪ್ರತಿಭುಜದ ಪಟ್ಟಿಯಲ್ಲಿಡು. ಆರೋನನು ಯೆಹೋವನ ಮುಂದೆ ನಿಲ್ಲುವಾಗ ಈ ವಿಶೇಷ ಅಂಗಿಯನ್ನು ಧರಿಸಿಕೊಂಡಿರುವನು. ಇಸ್ರೇಲನ ಗಂಡುಮಕ್ಕಳ ಹೆಸರುಗಳುಳ್ಳ ಎರಡು ರತ್ನಗಳು ಏಫೋದಿನ ಮೇಲಿರುತ್ತವೆ. ದೇವರು ಇಸ್ರೇಲರನ್ನು ಜ್ಞಾಪಿಸಿಕೊಳ್ಳುವಂತೆ ಈ ರತ್ನಗಳು ಮಾಡುವವು.
12 costurando-as nas ombreiras do colete sacerdotal, como pedras memoriais para os filhos de Israel. Assim Arão levará os nomes em seus ombros como memorial diante do Senhor.
13 ಏಫೋದಿನಲ್ಲಿ ಕಲ್ಲುಗಳು ಬಿಗಿಯಾಗಿ ಹಿಡಿದುಕೊಂಡಿರಲು ಉತ್ತಮ ಚಿನ್ನವನ್ನು ಉಪಯೋಗಿಸು.
13 Faça filigranas de ouro
14 ಹೆಣಿಗೆ ಕೆಲಸದಿಂದ ಶುದ್ಧಬಂಗಾರದ ಎರಡು ಸರಪಣಿಗಳನ್ನು ಮಾಡಿಸಿ ಚಿನ್ನದ ಗೂಡುಗಳಿಗೆ ಬಿಗಿಯಾಗಿ ಸಿಕ್ಕಿಸಬೇಕು.
14 e duas correntes de ouro puro, entrelaçadas como uma corda; e prenda as correntes às filigranas.
15 “ಮಹಾಯಾಜಕನಿಗೆ ದೈವನಿರ್ಣಯದ ಪದಕವನ್ನು ಮಾಡಿಸು. ಏಫೋದನ್ನು ಮಾಡಿಸಿದಂತೆ ನಿಪುಣರಾದ ಕೆಲಸಗಾರರಿಂದ ಇದನ್ನು ಮಾಡಿಸಬೇಕು. ಚಿನ್ನದ ದಾರಗಳು, ಉತ್ಕೃಷ್ಟವಾದ ನಾರುಬಟ್ಟೆ, ನೀಲಿ, ನೇರಳೆ ಮತ್ತು ಕೆಂಪು ದಾರಗಳನ್ನು ಉಪಯೋಗಿಸಿ ಇದನ್ನು ಮಾಡಬೇಕು.
15 "Faça um peitoral de decisões, trabalho artesanal. Faça-o como o colete sacerdotal: de linho fino trançado e de fios de ouro e de fios de tecido azul, roxo e vermelho.
16 ಅದು ಚೌಕವಾಗಿದ್ದು ಒಂಭತ್ತು ಇಂಚು ಉದ್ದವಾಗಿಯೂ ಒಂಭತ್ತು ಇಂಚು ಅಗಲವಾಗಿಯೂ ಇರಬೇಕು.
16 Será quadrado, com um palmo de comprimento e um palmo de largura, e dobrado em dois.
17 ಅದರ ಮೇಲೆ ಅಂದವಾದ ರತ್ನಗಳನ್ನು ನಾಲ್ಕು ಸಾಲುಗಳಾಗಿ ಹಾಕಿಸಬೇಕು. ರತ್ನಗಳ ಮೊದಲಿನ ಸಾಲಿನಲ್ಲಿ ಮಾಣಿಕ್ಯ, ಪುಷ್ಪರಾಗ, ಸ್ಪಟಿಕಗಳಿರಬೇಕು.
17 Em seguida, fixe nele quatro fileiras de pedras preciosas. Na primeira fileira haverá um rubi, um topázio e um berilo;
18 ಎರಡನೆಯ ಸಾಲಿನಲ್ಲಿ ಕೆಂಪರಲು, ನೀಲ, ಪಚ್ಚೆಗಳಿರಬೇಕು.
18 na segunda, uma turquesa, uma safira e um diamante;
19 ಮೂರನೆಯ ಸಾಲಿನಲ್ಲಿ ಸುವರ್ಣರತ್ನ, ಗೋಮೇಧಕ ಮತ್ತು ಧೂಮ್ರಮಣಿಗಳಿರಬೇಕು.
19 na terceira, um jacinto, uma ágata e uma ametista;
20 ನಾಲ್ಕನೆಯ ಸಾಲಿನಲ್ಲಿ ಪೀತ ರತ್ನ, ಗೋಮೇಧಕರತ್ನ, ವೈಡೂರ್ಯಗಳಿರಬೇಕು. ಈ ಎಲ್ಲಾ ರತ್ನಗಳನ್ನು ಚಿನ್ನದ ಜವೆಯ ಕಲ್ಲುಗಳಲ್ಲಿ ಸೇರಿಸಬೇಕು.
20 na quarta, um crisólito, um ônix e um jaspe.
21 ಇಸ್ರೇಲನ ಗಂಡುಮಕ್ಕಳಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ರತ್ನದಂತೆ ದೈವನಿರ್ಣಯ ಪದಕದಲ್ಲಿ ಹನ್ನೆರಡು ರತ್ನಗಳಿರಬೇಕು. ಪ್ರತಿಯೊಂದು ಕಲ್ಲುಗಳಲ್ಲಿ ಇಸ್ರೇಲನ ಗಂಡುಮಕ್ಕಳ ಒಬ್ಬೊಬ್ಬರ ಹೆಸರನ್ನು ಬರೆಸಬೇಕು. ಒಬ್ಬ ಕೆಲಸಗಾರನು ಮುದ್ರೆಯನ್ನು ಕೆತ್ತುವಂತೆ ಈ ಹೆಸರುಗಳನ್ನು ಪ್ರತಿ ರತ್ನದ ಮೇಲೆ ಕೆತ್ತಿಸಬೇಕು.
21 Serão doze pedras, uma para cada um dos nomes dos filhos de Israel, cada uma gravada como um selo, com o nome de uma das doze tribos.
22 “ದೈವನಿರ್ಣಯ ಪದಕದಲ್ಲಿ ಶುದ್ಧಬಂಗಾರದ ಸರಪಣಿಗಳನ್ನು ಮಾಡಿಸು. ಈ ಸರಪಣಿಗಳು ಹುರಿಗಳಂತಿರುವ ಹಗ್ಗದಂತೆ ಇರಬೇಕು.
22 "Faça para o peitoral correntes de ouro puro trançadas como cordas.
23 ಬಂಗಾರದ ಎರಡು ಬಳೆಗಳನ್ನು ಮಾಡಿಸಿ ಅದರ ಎರಡು ಕೊನೆಗಳಲ್ಲಿ ಸಿಕ್ಕಿಸಬೇಕು.
23 Faça também duas argolas de ouro e prenda-as às duas extremidades do peitoral.
24 ಅದರ ಕೊನೆಯಲ್ಲಿರುವ ಎರಡು ಬಳೆಗಳ ಮೂಲಕ ಚಿನ್ನದ ಎರಡು ಸರಪಣಿಗಳನ್ನು ಸಿಕ್ಕಿಸಬೇಕು.
24 Prenda as duas correntes de ouro às argolas nas extremidades do peitoral,
25 ಚಿನ್ನದ ಸರಪಣಿಗಳ ಇನ್ನೊಂದು ಕೊನೆಗಳನ್ನು ಎರಡು ಪಟ್ಟಿಗಳಿಗೆ ಬಿಗಿಯಾಗಿ ಕಟ್ಟಿಸಬೇಕು. ಇದು ಮುಂಬದಿಯಲ್ಲಿರುವ ಏಫೋದಿನ ಎರಡು ಭುಜದ ಪಟ್ಟಿಗಳಿಗೆ ಬಿಗಿಯಾಗಿ ಹಿಡಿದುಕೊಂಡಿರುವಂತೆ ಮಾಡುವುದು.
25 e as outras extremidades das correntes, às duas filigranas, unindo-as às peças das ombreiras do colete sacerdotal, na parte da frente.
26 ಇನ್ನೂ ಎರಡು ಚಿನ್ನದ ಬಳೆಗಳನ್ನು ಮಾಡಿಸಿ, ಅವುಗಳನ್ನು ದೈವನಿರ್ಣಯದ ಪದಕದ ಬೇರೆ ಎರಡು ಕೊನೆಗಳಿಗೆ ಸಿಕ್ಕಿಸು. ಇದು ದೈವನಿರ್ಣಯದ ಪದಕದ ಒಳಗಣ ಅಂಚಿನಲ್ಲಿರುವುದು.
26 Faça outras duas argolas de ouro e prenda-as às outras duas extremidades do peitoral, na borda interna, próxima ao colete sacerdotal.
27 ಇನ್ನೆರಡು ಚಿನ್ನದ ಬಳೆಗಳನ್ನು ಮಾಡಿಸಿ ಅವುಗಳನ್ನು ಏಫೋದಿನ ಭುಜಪಟ್ಟಿಗಳ ಮುಂಭಾಗದ ಕೆಳಗೆ ಸಿಕ್ಕಿಸು. ಈ ಚಿನ್ನದ ಬಳೆಗಳನ್ನು ಏಫೋದಿನ ನಡುಕಟ್ಟಿನ ಮೇಲ್ಗಡೆ ಇರಿಸು.
27 Faça mais duas argolas de ouro e prenda-as na parte inferior das ombreiras, na frente do colete sacerdotal, próximas da costura, logo acima do cinturão do colete sacerdotal.
28 ದೈವನಿರ್ಣಯದ ಪದಕದ ಬಳೆಗಳನ್ನು ಏಫೋದಿನ ಬಳೆಗಳಿಗೆ ಜೋಡಿಸಲು ನೀಲಿದಾರವನ್ನು ಉಪಯೋಗಿಸು. ಈ ರೀತಿಯಲ್ಲಿ ದೈವನಿರ್ಣಯದ ಪದಕವು ನಡುಕಟ್ಟಿಗೆ ಹತ್ತಿರವಾಗಿದ್ದು ಏಫೋದಿಗೆ ಬಿಗಿಯಾಗಿ ಅಂಟಿಕೊಂಡಿರುವುದು.
28 As argolas do peitoral serão amarradas às argolas do colete com um cordão azul, ligando-o ao cinturão, para que o peitoral não se separe do colete sacerdotal.
29 “ಆರೋನನು ಪವಿತ್ರಸ್ಥಳವನ್ನು ಪ್ರವೇಶಿಸುವಾಗ, ದೈವನಿರ್ಣಯದ ಪದಕವನ್ನು ಧರಿಸಿಕೊಳ್ಳಬೇಕು. ಈ ರೀತಿ ಎದೆಯ ಮೇಲೆ ಇಸ್ರೇಲನ ಗಂಡುಮಕ್ಕಳ ಹೆಸರುಗಳಿರಬೇಕು. ಅವನು ನ್ಯಾಯತೀರಿಸಲು ಧರಿಸಿಕೊಂಡಿರುವ ದೈವನಿರ್ಣಯದ ಪದಕದ ಮೇಲೆ ಈ ಹೆಸರುಗಳಿರುತ್ತವೆ. ಈ ರೀತಿಯಲ್ಲಿ ಇಸ್ರೇಲನ ಹನ್ನೆರಡು ಮಂದಿ ಗಂಡುಮಕ್ಕಳನ್ನು ಯೆಹೋವನಿಗೆ ಯಾವಾಗಲೂ ಜ್ಞಾಪಿಸಲಾಗುವುದು.
29 "Toda vez que Arão entrar no Lugar Santo, levará os nomes dos filhos de Israel sobre o seu coração no peitoral de decisões, como memorial permanente perante o Senhor.
30 ದೈವನಿರ್ಣಯದ ಪದಕದೊಳಗೆ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳನ್ನು ಇಡು. ಆರೋನನು ಯೆಹೋವನ ಮುಂದೆ ಹೋಗುವಾಗ ಅವುಗಳು ಅವನ ಎದೆಯ ಮೇಲಿರುವವು. ಹೀಗೆ ಆರೋನನು ಯೆಹೋವನ ಮುಂದೆ ನಿಲ್ಲುವಾಗಲೆಲ್ಲಾ, ಜನರಿಗೆ ತೀರ್ಪು ನೀಡತಕ್ಕದ್ದನ್ನು ಯಾವಾಗಲೂ ತನ್ನ ಎದೆಯ ಮೇಲೆ ಹೊತ್ತುಕೊಂಡಿರುವನು.
30 Ponha também o Urim e o Tumim no peitoral das decisões, para que estejam sobre o coração de Arão sempre que ele entrar na presença do Senhor. Assim, Arão levará sempre sobre o coração, na presença do Senhor, os meios para tomar decisões em Israel. "
31 “ಏಫೋದಿನ ಒಳಗೆ ಹಾಕಿಕೊಳ್ಳಲು ಒಂದು ನಿಲುವಂಗಿಯನ್ನು ನೀಲಿಬಟ್ಟೆಯಿಂದ ಮಾಡಿಸಬೇಕು.
31 "Faça o manto do colete sacerdotal inteiramente de fios de tecido azul,
32 ತಲೆಯನ್ನು ತೂರಿಸುವುದಕ್ಕೆ ಮಧ್ಯದಲ್ಲಿ ಒಂದು ಸಂದು ಮಾಡಿಸು. ಈ ಸಂದಿನ ಸುತ್ತಲೂ ಹೆಣೆದ ಬಟ್ಟೆಯನ್ನು ಹೊಲಿಸು. ಈ ಬಟ್ಟೆಯು ಸಂದು ಹರಿದುಹೋಗದಂತೆ ಕಾಪಾಡುವುದು.
32 com uma abertura para a cabeça no centro. Ao redor dessa abertura haverá uma dobra tecida, como uma gola, para que não se rasgue.
33 ಬಟ್ಟೆಯ ಅಂಚಿನ ಸುತ್ತಲೂ ದಾಳಿಂಬೆ ಹಣ್ಣುಗಳನ್ನು ಮಾಡಲು ನೀಲಿ, ನೇರಳೆ ಮತ್ತು ಕೆಂಪುದಾರಗಳನ್ನು ಉಪಯೋಗಿಸಬೇಕು. ಆ ದಾಳಿಂಬೆ ಹಣ್ಣಿನ ಚೆಂಡುಗಳನ್ನು ನಿಲುವಂಗಿಯ ಕೆಳಅಂಚಿನಲ್ಲಿ ಸುತ್ತಲೂ ನೇತಾಡುವಂತೆ ಸಿಕ್ಕಿಸಬೇಕು. ದಾಳಿಂಬೆ ಹಣ್ಣಿನ ಚೆಂಡುಗಳ ನಡುವೆ ಚಿನ್ನದ ಗೆಜ್ಜೆಗಳನ್ನು ಸಿಕ್ಕಿಸಬೇಕು.
33 Faça romãs de fios de tecido azul, roxo e vermelho em volta da borda do manto, intercaladas com pequenos sinos de ouro.
34 ಹೀಗೆ ನಿಲುವಂಗಿಯ ಕೆಳಅಂಚಿನಲ್ಲಿ ಸುತ್ತಲೂ ಗೆಜ್ಜೆಗಳು ಮತ್ತು ದಾಳಿಂಬೆ ಹಣ್ಣುಗಳು ಇರಬೇಕು. ಪ್ರತಿ ಎರಡು ದಾಳಿಂಬೆ ಹಣ್ಣಿನ ನಡುವೆ ಗೆಜ್ಜೆ ಇರಬೇಕು.
34 Os sinos de ouro e as romãs se alternarão por toda a volta da borda do manto.
35 ಆರೋನನು ಯಾಜಕನಾಗಿ ಸೇವೆಮಾಡುವಾಗ ಈ ನಿಲುವಂಗಿಯನ್ನು ಧರಿಸಿಕೊಂಡಿರುವನು. ಯೆಹೋವನ ಮುಂದೆ ನಿಲ್ಲುವುದಕ್ಕೆ ಆರೋನನು ಪವಿತ್ರಸ್ಥಳವನ್ನು ಪ್ರವೇಶಿಸುವಾಗ ಗೆಜ್ಜೆಗಳು ಶಬ್ದ ಮಾಡುತ್ತಿರುತ್ತವೆ. ಅವನು ಪವಿತ್ರಸ್ಥಳವನ್ನು ಬಿಡುವಾಗಲೂ ಗೆಜ್ಜೆಗಳು ಶಬ್ಧ ಮಾಡುತ್ತಿರುತ್ತವೆ. ಹೀಗಾಗಿ ಆರೋನನು ಸಾಯುವುದಿಲ್ಲ.
35 Arão o vestirá quando ministrar. O som dos sinos será ouvido quando ele entrar no Lugar Santo diante do Senhor e quando sair, para que não morra.
36 “ಶುದ್ಧಬಂಗಾರದ ಪಟ್ಟಿಯನ್ನು ಮಾಡಿಸಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಯೆಹೋವನಿಗೆ ಮೀಸಲು ಎಂಬ ಮಾತುಗಳನ್ನು ಚಿನ್ನದಲ್ಲಿ ಕೆತ್ತಿಸಬೇಕು.
36 "Faça um diadema de ouro puro e grave nele como se grava um selo: Consagrado ao Senhor.
37 ಚಿನ್ನದ ಪಟ್ಟಿಯನ್ನು ನೀಲಿದಾರಕ್ಕೆ ಬಿಗಿಯಾಗಿ ಕಟ್ಟಿಸಬೇಕು. ನೀಲಿದಾರವನ್ನು ಮುಂಡಾಸದ ಸುತ್ತಲೂ ಅದರಲ್ಲಿ ಕೆತ್ತಿಸಬೇಕು. ಚಿನ್ನದ ಪಟ್ಟಿಯು ಮುಂಡಾಸದ ಮುಂಭಾಗದಲ್ಲಿರಬೇಕು.
37 Prenda-o na parte da frente do turbante com uma fita azul.
38 ಆರೋನನು ಇದನ್ನು ತನ್ನ ಹಣೆಯ ಮೇಲೆ ಧರಿಸಿಕೊಳ್ಳುವನು. ಹೀಗೆ, ಇಸ್ರೇಲರು ಅರ್ಪಿಸಿದ ಕಾಣಿಕೆಗಳಲ್ಲಿ ದೋಷವೇನಾದರೂ ಇದ್ದರೆ ಅವನು ಅದನ್ನು ತನ್ನ ಮೇಲೆ ತೆಗೆದುಕೊಂಡು ತಾನೇ ಅದನ್ನು ವಹಿಸಿಕೊಳ್ಳುವನು. ಇವು ಜನರು ಯೆಹೋವನಿಗೆ ಸಮರ್ಪಿಸುವ ಕಾಣಿಕೆಗಳಾಗಿವೆ. ಜನರ ಕಾಣಿಕೆಗಳನ್ನು ಯೆಹೋವನು ಅಂಗೀಕರಿಸುವಂತೆ ಆರೋನನು ಇದನ್ನು ಯಾವಾಗಲೂ ತನ್ನ ಶಿರದಲ್ಲಿ ಧರಿಸಿಕೊಂಡಿರುವನು.
38 Estará sobre a testa de Arão; assim ele levará a culpa de qualquer pecado que os israelitas cometerem em relação às coisas sagradas, ao fazerem todas as suas ofertas. Estará sempre sobre a testa de Arão, para que as ofertas sejam aceitas pelo Senhor.
39 “ಹೆಣೆದ ಅಂಗಿಯನ್ನು ಮತ್ತು ಮುಂಡಾಸವನ್ನು ಮಾಡಲು ಉತ್ಕೃಷ್ಠವಾದ ನಾರಿನ ಬಟ್ಟೆಯನ್ನು ಉಪಯೋಗಿಸು. ನಡುಕಟ್ಟನ್ನು ಬುಟ್ಟೀದಾರಿ ಕೆಲಸದಿಂದ ಮಾಡಿಸಬೇಕು.
39 "Teça a túnica e o turbante com linho fino. O cinturão será feito por um bordador.
40 ಆರೋನನ ಗಂಡುಮಕ್ಕಳಿಗೂ ಅಂಗಿಗಳನ್ನು, ನಡುಕಟ್ಟುಗಳನ್ನು ಮತ್ತು ಮುಂಡಾಸಗಳನ್ನು ಮಾಡಿಸು. ಇವು ಅವರಿಗೆ ಘನತೆ ಮತ್ತು ಗೌರವಗಳನ್ನು ಕೊಡುತ್ತವೆ.
40 Faça também túnicas, cinturões e gorros para os filhos de Arão, para conferir-lhes honra e dignidade.
41 ನಿನ್ನ ಸಹೋದರನಾದ ಆರೋನನಿಗೆ ಮತ್ತು ಅವನ ಗಂಡುಮಕ್ಕಳಿಗೆ ಬಟ್ಟೆಗಳನ್ನು ತೊಡಿಸು. ಬಳಿಕ ಅವರನ್ನು ಯಾಜಕರನ್ನಾಗಿ ಮಾಡಲು ವಿಶೇಷ ತೈಲದಿಂದ ಅಭಿಷೇಕಿಸು. ಇದು ಅವರನ್ನು ಪ್ರತಿಷ್ಠಿಸುವುದು ಮತ್ತು ಪವಿತ್ರರನ್ನಾಗಿ ಮಾಡುವುದು. ಅವರು ಯಾಜಕರಾಗಿ ನನ್ನ ಸೇವೆ ಮಾಡುವರು.
41 Depois de vestir seu irmão Arão e os filhos dele, unja-os e consagre-os, para que me sirvam como sacerdotes.
42 “ಯಾಜಕರಿಗೆ ಒಳಗಿನ ಉಡುಪುಗಳನ್ನು ಮಾಡಲು ನಾರುಬಟ್ಟೆಯನ್ನು ಉಪಯೋಗಿಸು. ಈ ಒಳಗಿನ ಉಡುಪುಗಳು ಅವರನ್ನು ಸೊಂಟದಿಂದ ತೊಡೆಯವರೆಗೆ ಮುಚ್ಚುವುದು.
42 "Faça-lhes calções de linho que vão da cintura até a coxa, para cobrirem a sua nudez.
43 ಆರೋನನು ಮತ್ತು ಅವನ ಗಂಡುಮಕ್ಕಳು ದೇವದರ್ಶನ ಗುಡಾರದೊಳಗೆ ಪ್ರವೇಶಿಸುವಾಗಲೆಲ್ಲಾ ಈ ಉಡುಪುಗಳನ್ನು ಧರಿಸಿಕೊಳ್ಳಬೇಕು. ಪವಿತ್ರಸ್ಥಳದಲ್ಲಿ ಯಾಜಕರಾಗಿ ಸೇವೆಮಾಡಲು ಯಜ್ಞವೇದಿಕೆಯ ಬಳಿಗೆ ಬರುವಾಗ ಅವರು ಈ ಬಟ್ಟೆಗಳನ್ನು ಧರಿಸಿಕೊಂಡಿರಬೇಕು. ಅವರು ಈ ಉಡುಪುಗಳನ್ನು ಧರಿಸಿಕೊಳ್ಳದಿದ್ದರೆ, ದೋಷಿಗಳಾಗಿ ಸಾಯುವರು. ಇವುಗಳೆಲ್ಲಾ ಆರೋನನಿಗೂ ಅವನ ನಂತರ ಅವನ ಕುಟುಂಬಸ್ಥರೆಲ್ಲರಿಗೂ ಶಾಶ್ವತವಾದ ಕಟ್ಟಳೆಯಾಗಿವೆ.”
43 Arão e seus filhos terão que vesti-los sempre que entrarem na Tenda do Encontro ou quando se aproximarem do altar para ministrar no Lugar Santo, para que não incorram em culpa e morram. "Este é um decreto perpétuo para Arão e para os seus descendentes. "
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Êxodo 28, comparar traduções ou montar um estudo — tudo direto pelo WhatsApp.