Êxodo 29
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARA
1 ಬಳಿಕ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಆರೋನನು ಮತ್ತು ಅವನ ಗಂಡುಮಕ್ಕಳು ಅಭಿಷೇಕಿಸಲ್ಪಟ್ಟ ಮತ್ತು ಪ್ರತ್ಯೇಕಿಸಲ್ಪಟ್ಟ ಯಾಜಕರಾಗಿ ವಿಶೇಷವಾದ ರೀತಿಯಲ್ಲಿ ನನ್ನ ಸೇವೆಮಾಡಲು ಅವರು ಮಾಡತಕ್ಕದ್ದೇನೆಂಬುದನ್ನು ನಾನೀಗ ಹೇಳುವೆನು. ಯಾವ ಅಂಗದೋಷವಿಲ್ಲದ ಒಂದು ಹೋರಿಮರಿಯನ್ನು ಮತ್ತು ಎರಡು ಟಗರುಗಳನ್ನು ತೆಗೆದುಕೊ.
1 Isto é o que lhes farás, para os consagrar, a fim de que me oficiem como sacerdotes: toma um novilho, e dois carneiros sem defeito,
2 ಬಳಿಕ ಹುಳಿಯಿಲ್ಲದ ರೊಟ್ಟಿಯನ್ನೂ ಆಲಿವ್ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನೂ ಎಣ್ಣೆ ಹಾಕಿದ ತೆಳುವಾದ ಕಡುಬುಗಳನ್ನೂ ಗೋಧಿಹಿಟ್ಟಿನಿಂದ ಮಾಡಿಸಿ ಒಂದೇ ಬುಟ್ಟಿಯಲ್ಲಿ ತುಂಬಿಸಬೇಕು.
2 e pães asmos, e bolos asmos, amassados com azeite, e obreias asmas untadas com azeite; de flor de farinha de trigo os farás,
3 ಬಳಿಕ ಆ ಬುಟ್ಟಿಯನ್ನು ಆರೋನನಿಗೂ ಮತ್ತು ಅವನ ಪುತ್ರರಿಗೂ ಕೊಡು. ಅದೇ ಸಮಯದಲ್ಲಿ ಹೋರಿಯನ್ನು ಮತ್ತು ಎರಡು ಟಗರುಗಳನ್ನು ಅವರಿಗೆ ಕೊಡು.
3 e os porás num cesto, e no cesto os trarás; trarás também o novilho e os dois carneiros.
4 “ತರುವಾಯ ಆರೋನನನ್ನೂ ಅವನ ಪುತ್ರರನ್ನೂ ದೇವದರ್ಶನಗುಡಾರದ ದ್ವಾರಕ್ಕೆ ಕರೆದುಕೊಂಡು ಬಾ. ಅವರನ್ನು ನೀರಿನಲ್ಲಿ ಸ್ನಾನಮಾಡಿಸು.
4 Então, farás que Arão e seus filhos se cheguem à porta da tenda da congregação e os lavarás com água;
5 ವಿಶೇಷವಾದ ಬಟ್ಟೆಗಳನ್ನು ಆರೋನನಿಗೆ ತೊಡಿಸು. ಹೆಣೆದ ಅಂಗಿಯನ್ನು ಮತ್ತು ಏಫೋದಿನೊಡನೆ ಧರಿಸತಕ್ಕ ದೈವನಿರ್ಣಯದ ಪದಕವನ್ನು ಅವನಿಗೆ ತೊಡಿಸು. ಬಳಿಕ ಅಂದವಾದ ನಡುಕಟ್ಟನ್ನು ಅವನಿಗೆ ಕಟ್ಟು.
5 depois, tomarás as vestes, e vestirás Arão da túnica, da sobrepeliz, da estola sacerdotal e do peitoral, e o cingirás com o cinto de obra esmerada da estola sacerdotal;
6 ಅವನ ತಲೆಗೆ ಮುಂಡಾಸನ್ನು ಇಡು ಮತ್ತು ಮುಂಡಾಸಕ್ಕೆ ವಿಶೇಷವಾದ ಕಿರೀಟವನ್ನು ಕಟ್ಟಿಸು.
6 pôr-lhe-ás a mitra na cabeça e sobre a mitra, a coroa sagrada.
7 ಅಭಿಷೇಕತೈಲವನ್ನು ತೆಗೆದುಕೊಂಡು ಆರೋನನ ತಲೆಯ ಮೇಲೆ ಸುರಿ.
7 Então, tomarás o óleo da unção e lho derramarás sobre a cabeça; assim o ungirás.
8 “ತರುವಾಯ ಆರೋನನ ಪುತ್ರರನ್ನು ಆ ಸ್ಥಳಕ್ಕೆ ಕರೆದುಕೊಂಡು ಬಾ. ಅವರಿಗೆ ಹೆಣೆದ ಅಂಗಿಗಳನ್ನು ತೊಡಿಸು.
8 Farás, depois, que se cheguem os filhos de Arão, e os vestirás de túnicas,
9 ಬಳಿಕ ಅವರ ಸೊಂಟಗಳಿಗೆ ನಡುಕಟ್ಟುಗಳನ್ನು ಸುತ್ತಿಸು. ಅಂದಿನಿಂದ ಅವರು ಯಾಜಕರಾಗಿರುವರು. ವಿಶೇಷವಾದ ಈ ಕಟ್ಟಳೆಯು ಶಾಶ್ವತವಾಗಿರುವುದರಿಂದ ಅವರು ಯಾಜಕರಾಗಿರುವರು. ಹೀಗೆ ಆರೋನನನ್ನೂ ಅವನ ಪುತ್ರರನ್ನೂ ನೀನು ಯಾಜಕರನ್ನಾಗಿ ಮಾಡುವೆ.
9 e os cingirás com o cinto, Arão e seus filhos, e lhes atarás as tiaras, para que tenham o sacerdócio por estatuto perpétuo, e consagrarás Arão e seus filhos.
10 “ತರುವಾಯ ನೀನು ಹೋರಿಯನ್ನು ದೇವದರ್ಶನಗುಡಾರದ ಎದುರಿಗೆ ತರಬೇಕು. ಆರೋನನು ಮತ್ತು ಅವನ ಪುತ್ರರು ತಮ್ಮ ಕೈಗಳನ್ನು ಹೋರಿಯ ತಲೆಯ ಮೇಲಿಡಬೇಕು.
10 Farás chegar o novilho diante da tenda da congregação, e Arão e seus filhos porão as mãos sobre a cabeça dele.
11 ಬಳಿಕ ದೇವದರ್ಶನಗುಡಾರದ ದ್ವಾರದಲ್ಲಿ ಹೋರಿಯನ್ನು ವಧಿಸು. ಯೆಹೋವನು ಇದನ್ನು ನೋಡುವನು.
11 Imolarás o novilho perante o Senhor , à porta da tenda da congregação.
12 ತರುವಾಯ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಕೆಯ ಬಳಿಗೆ ಹೋಗು. ವೇದಿಕೆಯ ಕೊಂಬುಗಳಿಗೆ ನಿನ್ನ ಬೆರಳಿನಿಂದ ರಕ್ತವನ್ನು ಹಚ್ಚು. ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಕೆಯ ಬುಡಕ್ಕೆ ಸುರಿದುಬಿಡು.
12 Depois, tomarás do sangue do novilho e o porás com o teu dedo sobre os chifres do altar; o restante do sangue derramá-lo-ás à base do altar.
13 ಬಳಿಕ ಹೋರಿಯ ಒಳಗಿನ ಕೊಬ್ಬನ್ನೂ ಪಿತ್ತಕೋಶದ ಸುತ್ತಲಿರುವ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಮತ್ತು ಅವುಗಳ ಸುತ್ತಲಿರುವ ಕೊಬ್ಬನ್ನೂ ತೆಗೆದುಬಿಡು. ಈ ಕೊಬ್ಬನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡು.
13 Também tomarás toda a gordura que cobre as entranhas, o redenho do fígado, os dois rins e a gordura que está neles e queimá-los-ás sobre o altar;
14 ಬಳಿಕ ಹೋರಿಯ ಮಾಂಸ, ಚರ್ಮ, ಇತರ ಭಾಗಗಳನ್ನು ತೆಗೆದುಕೊಂಡು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಟ್ಟುಬಿಡು. ಇದು ಯಾಜಕರ ಪಾಪಗಳನ್ನು ಪರಿಹರಿಸುವ ಕಾಣಿಕೆಯಾಗಿದೆ.
14 mas a carne do novilho, a pele e os excrementos, queimá-los-ás fora do arraial; é sacrifício pelo pecado.
15 “ತರುವಾಯ ಆರೋನನಿಗೂ ಅವನ ಪುತ್ರರಿಗೂ ತಮ್ಮ ಕೈಗಳನ್ನು ಒಂದು ಟಗರಿನ ತಲೆಯ ಮೇಲೆ ಇಡಬೇಕೆಂದು ಹೇಳು.
15 Depois, tomarás um carneiro, e Arão e seus filhos porão as mãos sobre a cabeça dele.
16 ಆ ಟಗರನ್ನು ವಧಿಸಿ ಅದರ ರಕ್ತವನ್ನು ಯಜ್ಞವೇದಿಕೆಯ ನಾಲ್ಕು ಕಡೆಗಳಿಗೆ ಚೆಲ್ಲು.
16 Imolarás o carneiro, e tomarás o seu sangue, e o jogarás sobre o altar ao redor;
17 ಬಳಿಕ ಟಗರನ್ನು ಅನೇಕ ತುಂಡುಗಳಾಗಿ ಕತ್ತರಿಸು. ಟಗರಿನ ಒಳಗಿನ ಎಲ್ಲಾ ಭಾಗಗಳನ್ನು ಮತ್ತು ಕಾಲುಗಳನ್ನು ತೊಳೆಯಬೇಕು. ಅವುಗಳನ್ನು ತಲೆಯ ಮತ್ತು ಟಗರಿನ ಇತರ ತುಂಡುಗಳೊಡನೆ ಇಡು.
17 partirás o carneiro em seus pedaços e, lavadas as entranhas e as pernas, pô-las-ás sobre os pedaços e sobre a cabeça.
18 ತರುವಾಯ ಯಜ್ಞವೇದಿಕೆಯ ಮೇಲೆ ಇಡೀ ಟಗರನ್ನು ಹೋಮಮಾಡು. ಇದು ವಿಶೇಷವಾದ ಸರ್ವಾಂಗಹೋಮವಾಗಿದೆ. ಇದು ಯೆಹೋವನಿಗೆ ಪರಿಮಳ ವಾಸನೆಯಾಗಿದ್ದು ಆತನಿಗೆ ಮೆಚ್ಚಿಕೆಕರವಾಗಿದೆ.
18 Assim, queimarás todo o carneiro sobre o altar; é holocausto para o Senhor , de aroma agradável, oferta queimada ao Senhor .
19 “ಮತ್ತೊಂದು ಟಗರಿನ ಮೇಲೆ ತಮ್ಮ ಕೈಗಳನ್ನಿಡಲು ಆರೋನನಿಗೂ ಅವನ ಪುತ್ರರಿಗೂ ಹೇಳು.
19 Depois, tomarás o outro carneiro, e Arão e seus filhos porão as mãos sobre a cabeça dele.
20 ಆ ಟಗರನ್ನು ವಧಿಸಿ ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊ. ಆ ರಕ್ತವನ್ನು ಆರೋನ ಮತ್ತು ಅವನ ಪುತ್ರರ ಬಲಗಿವಿಯ ತುದಿಗೆ ಹಚ್ಚು. ಅದಲ್ಲದೆ ಅವರ ಬಲಗೈಗಳ ಹೆಬ್ಬೆರಳುಗಳಿಗೂ ಸ್ವಲ್ಪ ರಕ್ತವನ್ನು ಹಚ್ಚು. ಸ್ವಲ್ಪ ರಕ್ತವನ್ನು ಅವರ ಬಲಗಾಲಿನ ಹೆಬ್ಬೊಟ್ಟಿಗೂ ಹಚ್ಚು. ಬಳಿಕ ಉಳಿದ ರಕ್ತವನ್ನು ಯಜ್ಞವೇದಿಕೆಯ ನಾಲ್ಕು ಕಡೆಗಳಿಗೆ ಚೆಲ್ಲು.
20 Imolarás o carneiro, e tomarás do seu sangue, e o porás sobre a ponta da orelha direita de Arão e sobre a ponta da orelha direita de seus filhos, como também sobre o polegar da sua mão direita e sobre o polegar do seu pé direito; o restante do sangue jogarás sobre o altar ao redor.
21 ತರುವಾಯ ಯಜ್ಞವೇದಿಕೆಯಿಂದ ಸ್ವಲ್ಪ ರಕ್ತವನ್ನು ತೆಗೆದುಕೊ. ಅದನ್ನು ವಿಶೇಷವಾದ ಅಭೀಷೇಕತೈಲದಲ್ಲಿ ಬೆರಸಿ ಆರೋನನ ಮೇಲೆಯೂ ಅವನ ಬಟ್ಟೆಗಳ ಮೇಲೆಯೂ ಚಿಮಿಕಿಸು. ಅವನ ಪುತ್ರರ ಮತ್ತು ಅವರ ಬಟ್ಟೆಗಳ ಮೇಲೆಯೂ ಚಿಮಿಕಿಸು. ಆಗ ಅವರು ಪರಿಶುದ್ಧಗೊಳ್ಳುವರು, ಅವರ ಬಟ್ಟೆಗಳೂ ಪರಿಶುದ್ಧಗೊಳ್ಳುವವು. ಆರೋನನು ಮತ್ತು ಅವನ ಪುತ್ರರು ವಿಶೇಷವಾದ ರೀತಿಯಲ್ಲಿ ನನ್ನ ಸೇವೆ ಮಾಡುತ್ತಾರೆಂದು ಇದು ತೋರಿಸುವುದು.
21 Tomarás, então, do sangue sobre o altar e do óleo da unção e os aspergirás sobre Arão e suas vestes e sobre seus filhos e as vestes de seus filhos com ele; para que ele seja santificado, e as suas vestes, e também seus filhos e as vestes de seus filhos com ele.
22 “ಬಳಿಕ ಟಗರಿನ ಕೊಬ್ಬನ್ನೂ ತೆಗೆದುಕೊ. (ಇದು ಆರೋನನನ್ನು ಪ್ರಧಾನಯಾಜಕನನ್ನಾಗಿ ಮಾಡುವ ಆಚಾರವಿಧಿಯಲ್ಲಿ ಉಪಯೋಗಿಸಲ್ಪಡುವ ಟಗರು.) ಬಾಲದ ಸುತ್ತಲಿರುವ ಕೊಬ್ಬನ್ನು, ದೇಹದ ಒಳಗಿನ ಅಂಗಗಳನ್ನು ಮುಚ್ಚಿಕೊಂಡಿರುವ ಕೊಬ್ಬನ್ನು, ಪಿತ್ತಕೋಶದ ಸುತ್ತಲಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು ಮತ್ತು ಬಲತೊಡೆಯನ್ನು ತೆಗೆದುಕೊ.
22 Depois, tomarás do carneiro a gordura, a cauda gorda, a gordura que cobre as entranhas, o redenho do fígado, os dois rins, a gordura que está neles e a coxa direita, porque é carneiro da consagração;
23 ಬಳಿಕ ನೀನು ಮಾಡಿದ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನು ತೆಗೆದುಕೊ. ಇದು ಯೆಹೋವನ ಮುಂದೆ ಇಟ್ಟ ಬುಟ್ಟಿಯಾಗಿದೆ. ಒಂದು ತುಂಡು ರೊಟ್ಟಿ, ಎಣ್ಣೆಯಿಂದ ಮಾಡಿದ ಒಂದು ಹೋಳಿಗೆ, ತೆಳುವಾದ ಒಂದು ಕಡುಬು ಇವುಗಳನ್ನು ಬುಟ್ಟಿಯಿಂದ ತೆಗೆದುಕೊ.
23 e também um pão, um bolo de pão azeitado e uma obreia do cesto dos pães asmos que estão diante do Senhor .
24 ಇವುಗಳನ್ನು ಆರೋನನಿಗೂ ಅವನ ಪುತ್ರರಿಗೂ ಕೊಡು. ಯೆಹೋವನ ಮುಂದೆ ಇವುಗಳನ್ನು ತಮ್ಮ ಕೈಯಲ್ಲಿ ಹಿಡಿದುಕೊಂಡು ನಿವಾಳಿಸಬೇಕೆಂದು ಅವರಿಗೆ ಹೇಳು. ಇದು ಯೆಹೋವನಿಗೆ ವಿಶೇಷವಾದ ನೈವೇದ್ಯಾರ್ಪಣೆಯಾಗಿದೆ.
24 Todas estas coisas porás nas mãos de Arão e nas de seus filhos e, movendo-as de um lado para outro, as oferecerás como ofertas movidas perante o Senhor .
25 ಬಳಿಕ ಈ ವಸ್ತುಗಳನ್ನು ಆರೋನನ ಮತ್ತು ಅವನ ಪುತ್ರರ ಕೈಯಿಂದ ತೆಗೆದುಕೊಂಡು ಟಗರಿನ ಜೊತೆ ಯಜ್ಞವೇದಿಕೆಯ ಮೇಲಿಡು. ಈ ಸರ್ವಾಂಗಹೋಮವು ಯೆಹೋವನಿಗೆ ಸುಗಂಧಹೋಮವಾಗಿದ್ದು ಆತನನ್ನು ಮೆಚ್ಚಿಸುವುದು.
25 Depois, as tomarás das suas mãos e as queimarás sobre o altar; é holocausto para o Senhor , de agradável aroma, oferta queimada ao Senhor .
26 “ತರುವಾಯ ಟಗರಿನ ಎದೆಯ ಭಾಗವನ್ನು ತೆಗೆದುಕೊ. (ಆರೋನನನ್ನು ಪ್ರಧಾನಯಾಜಕನನ್ನಾಗಿ ಮಾಡುವ ಆಚಾರವಿಧಿಯಲ್ಲಿ ಉಪಯೋಗಿಸಲ್ಪಡುವ ಟಗರು ಇದಾಗಿದೆ.) ಟಗರಿನ ಎದೆಯ ಭಾಗವನ್ನು ವಿಶೇಷ ಸಮರ್ಪಣೆಯಾಗಿ ಯೆಹೋವನ ಮುಂದೆ ನಿವಾಳಿಸಬೇಕು. ಪಶುವಿನ ಈ ಭಾಗವು ನಿನಗೆ ಸಲ್ಲತಕ್ಕ ಪಾಲು.
26 Tomarás o peito do carneiro da consagração, que é de Arão, e, movendo-o de um lado para outro, o oferecerás como oferta movida perante o Senhor ; e isto será a tua porção.
27 ಬಳಿಕ ಆರೋನನನ್ನು ಮಹಾಯಾಜಕನನ್ನಾಗಿ ಮಾಡಲು ನಿವಾಳಿಸಲ್ಪಟ್ಟ ಟಗರಿನ ಎದೆಯ ಭಾಗವನ್ನೂ ಯಾಜಕರ ಭಾಗವಾದ ನಿವಾಳಿಸಲ್ಪಟ್ಟ ಟಗರಿನ ತೊಡೆಯನ್ನೂ ತೆಗೆದುಕೊ. ಅವುಗಳನ್ನು ಆರೋನನಿಗೂ ಅವನ ಪುತ್ರರಿಗೂ ಕೊಡು. ಇದು ಕಾಣಿಕೆಯ ವಿಶೇಷ ಭಾಗವಾಗಿದೆ.
27 Consagrarás o peito da oferta movida e a coxa da porção que foi movida, a qual se tirou do carneiro da consagração, que é de Arão e de seus filhos.
28 ಇಸ್ರೇಲರು ಆರೋನನಿಗೂ ಅವನ ಪುತ್ರರಿಗೂ ಈ ಭಾಗಗಳನ್ನು ಯಾವಾಗಲೂ ಕೊಡುವರು. ಇಸ್ರೇಲರು ಯೆಹೋವನಿಗೆ ಅರ್ಪಿಸುವ ಕಾಣಿಕೆಗಳಲ್ಲಿ ಈ ಭಾಗಗಳು ಯಾವಾಗಲೂ ಯಾಜಕರಿಗೆ ಸೇರಿದ್ದಾಗಿವೆ. ಅವರು ಯಾಜಕರಿಗೆ ಕೊಡುವ ಈ ಭಾಗಗಳು ಯೆಹೋವನಿಗೆ ಸಮರ್ಪಿಸಲ್ಪಟ್ಟಂತಿರುತ್ತವೆ.
28 Isto será a obrigação perpétua dos filhos de Israel, devida a Arão e seus filhos, por ser a porção do sacerdote, oferecida, da parte dos filhos de Israel, dos sacrifícios pacíficos; é a sua oferta ao Senhor .
29 “ಆರೋನನಿಗೋಸ್ಕರ ಮಾಡಿಸಿದ ವಿಶೇಷವಾದ ವಸ್ತ್ರಗಳನ್ನು ಅವನ ತರುವಾಯ ಅವನ ವಂಶಸ್ಥರೂ ಯಾಜಕ ಉದ್ಯೋಗಕ್ಕೆ ಆರಿಸಲ್ಪಟ್ಟಾಗ, ಅವುಗಳನ್ನು ಧರಿಸಿಕೊಳ್ಳುವರು.
29 As vestes santas de Arão passarão a seus filhos depois dele, para serem ungidos nelas e consagrados nelas.
30 ಆರೋನನ ತರುವಾಯ ಅವನ ಮಗನು ಪ್ರಧಾನಯಾಜಕನಾಗುವನು. ಅವನು ಪವಿತ್ರಸ್ಥಳದಲ್ಲಿ ಸೇವೆಮಾಡಲು ದೇವದರ್ಶನಗುಡಾರಕ್ಕೆ ಪ್ರವೇಶಿಸಿದಂದಿನಿಂದ ಏಳು ದಿನಗಳವರೆಗೆ ಆ ವಸ್ತ್ರಗಳನ್ನು ಧರಿಸಿಕೊಂಡಿರುವನು.
30 Sete dias as vestirá o filho que for sacerdote em seu lugar, quando entrar na tenda da congregação para ministrar no santuário.
31 “ಆರೋನನನ್ನು ಪ್ರಧಾನಯಾಜಕನನ್ನಾಗಿ ಮಾಡಲು ಉಪಯೋಗಿಸಿದ ಟಗರಿನ ಮಾಂಸವನ್ನು ದೇವದರ್ಶನಗುಡಾರದ ಪ್ರಾಕಾರದಲ್ಲಿ ಬೇಯಿಸು.
31 Tomarás o carneiro da consagração e cozerás a sua carne no lugar santo;
32 ಬಳಿಕ ಆರೋನನು ಮತ್ತು ಅವನ ಪುತ್ರರು ದೇವದರ್ಶನಗುಡಾರದ ಮುಂಭಾಗದಲ್ಲಿ ಆ ಮಾಂಸವನ್ನೂ ಬುಟ್ಟಿಯಲ್ಲಿರುವ ರೊಟ್ಟಿಯನ್ನೂ ತಿನ್ನಬೇಕು.
32 e Arão e seus filhos comerão a carne deste carneiro e o pão que está no cesto à porta da tenda da congregação
33 ಅವರು ಯಾಜಕರಾಗಿ ಮಾಡಲ್ಪಟ್ಟಾಗ ಅವರ ಪಾಪನಿವಾರಣೆಗಾಗಿ ಇವುಗಳನ್ನು ಸಮರ್ಪಿಸಲಾಗಿತ್ತು. ಆದ್ದರಿಂದ ಆ ಸಮರ್ಪಣೆಗಳನ್ನು ಅವರು ಮಾತ್ರ ತಿನ್ನಬೇಕೇ ಹೊರತು ಬೇರೆಯವರು ತಿನ್ನಬಾರದು; ಯಾಕೆಂದರೆ ಅವು ಪರಿಶುದ್ಧವಾಗಿವೆ ಮತ್ತು ಪ್ರತ್ಯೇಕಿಸಲ್ಪಟ್ಟವುಗಳಾಗಿವೆ.
33 e comerão das coisas com que for feita a expiação, para consagrá-los e para santificá-los; o estranho não comerá delas, porque são santas.
34 ಟಗರಿನ ಮಾಂಸ ಅಥವಾ ರೊಟ್ಟಿಯೇನಾದರೂ ಮರುದಿನ ಮುಂಜಾನೆಯವರೆಗೆ ಉಳಿದರೆ, ಅದನ್ನು ಸುಟ್ಟುಬಿಡಬೇಕು. ನೀವು ಆ ರೊಟ್ಟಿಯನ್ನಾಗಲಿ ಮಾಂಸವನ್ನಾಗಲಿ ತಿನ್ನಬಾರದು. ಯಾಕೆಂದರೆ ಅದನ್ನು ವಿಶೇಷವಾದ ಸಂದರ್ಭದಲ್ಲಿ ವಿಶೇಷವಾದ ರೀತಿಯಲ್ಲಿ ಮಾತ್ರ ತಿನ್ನಬೇಕು.
34 Se sobrar alguma coisa da carne das consagrações ou do pão, até pela manhã, queimarás o que restar; não se comerá, porque é santo.
35 “ನಾನು ನಿನಗೆ ಆಜ್ಞಾಪಿಸಿದ ಇವುಗಳನ್ನೆಲ್ಲ ಆರೋನ ಮತ್ತು ಅವನ ಪುತ್ರರಿಗೋಸ್ಕರ ಮಾಡು. ಅವರನ್ನು ಯಾಜಕರನ್ನಾಗಿ ನೇಮಿಸುವ ಸಮಾರಂಭವು ಏಳು ದಿನಗಳವರೆಗೆ ನಡೆಯಬೇಕು.
35 Assim, pois, farás a Arão e a seus filhos, conforme tudo o que te hei ordenado; por sete dias, os consagrarás.
36 ಏಳು ದಿನಗಳವರೆಗೆ ಪ್ರತಿದಿನ ಒಂದು ಹೋರಿಯನ್ನು ವಧಿಸು. ಇದು ಆರೋನನ ಮತ್ತು ಅವನ ಪುತ್ರರ ಪಾಪನಿವಾರಣೆಯ ಸಮರ್ಪಣೆಯಾಗಿರುವುದು. ಅದಲ್ಲದೆ ಯಜ್ಞವೇದಿಕೆಯನ್ನು ಪರಿಶುದ್ಧಗೊಳಿಸಲು ಅದರ ಮೇಲೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಿ ಅದನ್ನು ದೇವರ ಸೇವೆಗೋಸ್ಕರ ಅಭಿಷೇಕಿಸಬೇಕು.
36 Também cada dia prepararás um novilho como oferta pelo pecado para as expiações; e purificarás o altar, fazendo expiação por ele mediante oferta pelo pecado; e o ungirás para consagrá-lo.
37 ಹೀಗೆ ಏಳು ದಿನಗಳವರೆಗೆ ಯಜ್ಞವೇದಿಕೆಯನ್ನು ಶುದ್ಧಗೊಳಿಸಿ ಪವಿತ್ರಗೊಳಿಸಬೇಕು. ಆ ಸಮಯದಲ್ಲಿ ಯಜ್ಞವೇದಿಕೆಯು ಮಹಾಪವಿತ್ರವಾಗಿರುವುದು. ಯಜ್ಞವೇದಿಕೆಗೆ ಸೋಂಕಿದ ವಸ್ತುಗಳೆಲ್ಲವೂ ಪವಿತ್ರವಾಗುವುದು.
37 Sete dias farás expiação pelo altar e o consagrarás; e o altar será santíssimo; tudo o que o tocar será santo.
38 “ಯಜ್ಞವೇದಿಕೆಯ ಮೇಲೆ ಪ್ರತಿದಿನ ಯಜ್ಞವನ್ನು ಸಮರ್ಪಿಸಬೇಕು. ಒಂದು ವರ್ಷದ ಎರಡು ಕುರಿಮರಿಗಳನ್ನು ನೀನು ವಧಿಸಬೇಕು.
38 Isto é o que oferecerás sobre o altar: dois cordeiros de um ano, cada dia, continuamente.
39 ಮುಂಜಾನೆ ಒಂದು ಕುರಿಮರಿಯನ್ನು ಮತ್ತು ಸಾಯಂಕಾಲ ಮತ್ತೊಂದು ಕುರಿಮರಿಯನ್ನು ಸಮರ್ಪಿಸಬೇಕು.
39 Um cordeiro oferecerás pela manhã e o outro, ao pôr do sol.
40 ನೀನು ಮೊದಲಿನ ಕುರಿಮರಿಯನ್ನು ವಧಿಸುವಾಗ ಮೂರು ಸೇರು ಶ್ರೇಷ್ಠ ಗೋಧಿ ಹಿಟ್ಟನ್ನೂ ಸಮರ್ಪಿಸು. ಆ ಹಿಟ್ಟನ್ನು ಒಂದೂವರೆ ಸೇರು ದ್ರಾಕ್ಷಾರಸದೊಂದಿಗೆ ಬೆರೆಸು.
40 Com um cordeiro, a décima parte de um efa de flor de farinha, amassada com a quarta parte de um him de azeite batido; e, para libação, a quarta parte de um him de vinho;
41 ನೀನು ಸಾಯಂಕಾಲದಲ್ಲಿ ಮತ್ತೊಂದು ಕುರಿಮರಿಯನ್ನು ವಧಿಸುವಾಗಲೂ ಮೂರು ಸೇರು ಶ್ರೇಷ್ಠ ಗೋಧಿಯನ್ನೂ ಅರ್ಧ ಸೇರು ದ್ರಾಕ್ಷಾರಸವನ್ನೂ ಸಮರ್ಪಿಸು. ಇದು ಯೆಹೋವನಿಗೆ ಸುಗಂಧಹೋಮವಾಗಿರುವುದು.
41 o outro cordeiro oferecerás ao pôr do sol, como oferta de manjares, e a libação como de manhã, de aroma agradável, oferta queimada ao Senhor .
42 “ನೀನು ಪ್ರತಿದಿನ ಈ ಸರ್ವಾಂಗಹೋಮವನ್ನು ಸಮರ್ಪಣೆಯಾಗಿ ಅರ್ಪಿಸಬೇಕು. ದೇವದರ್ಶನಗುಡಾರದ ದ್ವಾರದಲ್ಲಿ ಯೆಹೋವನ ಮುಂದೆ ಇದನ್ನು ಮಾಡು. ನೀನು ಸಮರ್ಪಣೆಯನ್ನು ಮಾಡುವಾಗ ಯೆಹೋವನಾದ ನಾನು ಅಲ್ಲಿ ನಿನ್ನನ್ನು ಸಂಧಿಸಿ ನಿನ್ನೊಡನೆ ಮಾತಾಡುವೆನು.
42 Este será o holocausto contínuo por vossas gerações, à porta da tenda da congregação, perante o Senhor , onde vos encontrarei, para falar contigo ali.
43 ಆ ಸ್ಥಳದಲ್ಲಿ ನಾನು ಇಸ್ರೇಲರನ್ನು ಸಂಧಿಸುವೆನು. ನನ್ನ ಪ್ರಭಾವದಿಂದ ಆ ಸ್ಥಳವು ಪವಿತ್ರವಾಗುವುದು.
43 Ali, virei aos filhos de Israel, para que, por minha glória, sejam santificados,
44 “ಅಲ್ಲದೆ ನಾನು ದೇವದರ್ಶನಗುಡಾರವನ್ನೂ ಯಜ್ಞವೇದಿಕೆಯನ್ನೂ ಪವಿತ್ರಗೊಳಿಸುವೆನು. ಆರೋನನನ್ನೂ ಅವನ ಪುತ್ರರನ್ನೂ ಪವಿತ್ರಗೊಳಿಸುವೆನು; ಆಗ ಅವರು ಯಾಜಕರಾಗಿ ನನಗೆ ಸೇವೆಮಾಡಲು ಶಕ್ತರಾಗುವರು.
44 e consagrarei a tenda da congregação e o altar; também santificarei Arão e seus filhos, para que me oficiem como sacerdotes.
45 ನಾನು ಇಸ್ರೇಲರ ಮಧ್ಯದಲ್ಲಿ ವಾಸಿಸುವೆನು ಮತ್ತು ಅವರ ದೇವರಾಗಿರುವೆನು.
45 E habitarei no meio dos filhos de Israel e serei o seu Deus.
46 ನಾನು ಅವರ ದೇವರಾದ ಯೆಹೋವನಾಗಿದ್ದೇನೆಂದು ಜನರು ತಿಳಿದುಕೊಳ್ಳುವರು. ಅವರ ಮಧ್ಯದಲ್ಲಿ ವಾಸಮಾಡುವುದಕ್ಕಾಗಿ ಈಜಿಪ್ಟಿನಿಂದ ಅವರನ್ನು ಕರೆದುಕೊಂಡು ಬಂದವನು ನಾನೇ ಎಂದು ಅವರು ತಿಳಿದುಕೊಳ್ಳುವರು. ನಾನು ಅವರ ದೇವರಾಗಿರುವ ಯೆಹೋವನೇ.”
46 E saberão que eu sou o Senhor , seu Deus, que os tirou da terra do Egito, para habitar no meio deles; eu sou o Senhor , seu Deus.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Êxodo 29, comparar traduções ou montar um estudo — tudo direto pelo WhatsApp.