Êxodo 32
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NAA
1 ಬಹಳ ಸಮಯ ದಾಟಿಹೋದರೂ ಮೋಶೆ ಬೆಟ್ಟದಿಂದ ಕೆಳಗಿಳಿಯಲಿಲ್ಲವಾದ್ದರಿಂದ ಇಸ್ರೇಲರು ಆರೋನನ ಬಳಿಗೆ ಒಟ್ಟಾಗಿ ಬಂದು, “ನೋಡು, ಮೋಶೆಯು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದನು. ಆದರೆ ಅವನಿಗೇನಾಯಿತೊ ನಮಗೆ ತಿಳಿಯದು. ಆದ್ದರಿಂದ ನಮ್ಮನ್ನು ಮುನ್ನಡೆಸಲು ಕೆಲವು ದೇವರುಗಳನ್ನು ಮಾಡಿಕೊಡು” ಎಂದು ಹೇಳಿದರು.
1 O povo viu que Moisés demorava para descer do monte. Então reuniu-se em volta de Arão e lhe disse: — Levante-se, faça para nós deuses que vão adiante de nós; pois, quanto a este Moisés, o homem que nos tirou do Egito, não sabemos o que lhe aconteceu.
2 ಆರೋನನು ಅವರಿಗೆ, “ನಿಮ್ಮ ಹೆಂಡತಿಯ ಮತ್ತು ಗಂಡು ಹೆಣ್ಣುಮಕ್ಕಳಲ್ಲಿರುವ ಚಿನ್ನದ ಓಲೆಗಳನ್ನು ತಂದು ನನಗೆ ಕೊಡಿರಿ” ಎಂದು ಹೇಳಿದನು.
2 Arão respondeu: — Tirem as argolas de ouro das orelhas de suas mulheres, de seus filhos e de suas filhas e tragam para mim.
3 ಆದ್ದರಿಂದ ಅವರೆಲ್ಲರೂ ತಮ್ಮ ಚಿನ್ನದ ಓಲೆಗಳನ್ನು ತಂದುಕೊಟ್ಟರು.
3 Então todo o povo tirou das orelhas as argolas e as trouxe a Arão.
4 ಆರೋನನು ಬಸವನ ಮೂರ್ತಿಯನ್ನು ಚಿನ್ನದಿಂದ ಎರಕಹೊಯ್ಯಿಸಿದನು.
4 Este, recebendo-as das mãos deles, trabalhou o ouro com buril e fez dele um bezerro de metal fundido. Então disseram: — São estes, ó Israel, os seus deuses, que tiraram você da terra do Egito.
5 ಆರೋನನು ಇವೆಲ್ಲವನ್ನು ನೋಡಿ, ಬಸವನ ಮುಂದೆ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ಬಳಿಕ, “ನಾಳೆ ಯೆಹೋವನನ್ನು ಸನ್ಮಾನಿಸಲು ಒಂದು ವಿಶೇಷ ಹಬ್ಬವಿರುವುದು” ಎಂದು ಪ್ರಕಟಿಸಿದನು.
5 Arão, vendo isso, edificou um altar diante do bezerro e fez a seguinte proclamação: — Amanhã haverá festa ao
6 ಮರುದಿನ ಮುಂಜಾನೆ ಜನರೆಲ್ಲರೂ ಬೇಗನೆ ಎದ್ದು ತಮ್ಮ ಪಶುಗಳನ್ನು ವಧಿಸಿ ಸರ್ವಾಂಗಹೋಮಗಳನ್ನಾಗಿಯೂ ಸಮಾಧಾನಯಜ್ಞಗಳನ್ನಾಗಿಯೂ ಅರ್ಪಿಸಿ ತಿನ್ನುವುದಕ್ಕೂ ಕುಡಿಯುವುದಕ್ಕೂ ಕುಳಿತುಕೊಂಡರು. ಬಳಿಕ ಎದ್ದು ಕುಣಿದಾಡಿದರು ಮತ್ತು ಕೂಗಾಡಿದರು.
6 No dia seguinte, madrugaram, ofereceram holocaustos e trouxeram ofertas pacíficas. E o povo sentou-se para comer e beber e levantou-se para se divertir.
7 ಅದೇ ಸಮಯದಲ್ಲಿ ಯೆಹೋವನು ಮೋಶೆಗೆ, “ಬೆಟ್ಟದಿಂದ ಇಳಿದುಹೋಗು. ನೀನು ಈಜಿಪ್ಟಿನಿಂದ ಕರೆದುಕೊಂಡು ಬಂದ ನಿನ್ನ ಜನರು ಭಯಂಕರವಾದ ಪಾಪ ಮಾಡಿದ್ದಾರೆ.
7 Então o Senhor disse a Moisés: — Vá, desça; porque o seu povo, o povo que você tirou do Egito, se corrompeu
8 ನಾನು ಅವರಿಗೆ ಆಜ್ಞಾಪಿಸಿದವುಗಳಿಗೆ ಬಹುಬೇಗನೆ ಅವಿಧೇಯರಾಗಿದ್ದಾರೆ. ಚಿನ್ನವನ್ನು ಕರಗಿಸಿ ಅದರಿಂದ ಬಸವನನ್ನು ಮಾಡಿಕೊಂಡು ಅದನ್ನು ಪೂಜಿಸುತ್ತಾ ಅದಕ್ಕೆ ಯಜ್ಞಗಳನ್ನು ಸಮರ್ಪಿಸುತ್ತಿದ್ದಾರೆ. ‘ಇಸ್ರೇಲರೇ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳು’ ಎಂದು ಜನರು ಹೇಳುತ್ತಿದ್ದಾರೆ” ಎಂದನು.
8 e depressa se desviou do caminho que eu lhe havia ordenado; fez para si um bezerro de metal fundido, o adorou e lhe ofereceu sacrifícios, dizendo: “São estes, ó Israel, os seus deuses, que tiraram você da terra do Egito.”
9 ಯೆಹೋವನು ಮೋಶೆಗೆ, “ನಾನು ಈ ಜನರನ್ನು ನೋಡಿದ್ದೇನೆ. ಅವರು ಬಹಳ ಮೊಂಡರೆಂದು ನಾನು ಬಲ್ಲೆನು. ಅವರು ಯಾವಾಗಲೂ ನಿನಗೆ ವಿರೋಧವಾಗಿ ದಂಗೆ ಏಳುವರು.
9 O Senhor disse ainda a Moisés: — Tenho visto este povo, e eis que é povo teimoso.
10 ಆದ್ದರಿಂದ ನಾನು ಅವರನ್ನು ಕೋಪದಿಂದ ನಾಶಮಾಡಿಬಿಡುತ್ತೇನೆ. ನನ್ನನ್ನು ತಡೆಯಬೇಡ. ಬಳಿಕ ನಾನು ನಿನ್ನಿಂದ ಒಂದು ಮಹಾಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು.
10 Agora, pois, deixe-me, para que se acenda contra eles o meu furor, e eu os consuma; e de você farei uma grande nação.
11 ಆದರೆ ಮೋಶೆಯು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ನಿನ್ನ ಕೋಪವು ನಿನ್ನ ಜನರನ್ನು ನಾಶಮಾಡದಿರಲಿ. ನಿನ್ನ ಮಹಾಶಕ್ತಿಯಿಂದಲೂ ಬಲದಿಂದಲೂ ಈ ಜನರನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದೆಯಲ್ಲಾ.
11 Porém Moisés suplicou ao Senhor , seu Deus, dizendo: — Ó
12 ಆದರೆ ನೀನು ನಿನ್ನ ಜನರನ್ನು ನಾಶಮಾಡಿದರೆ, ಈಜಿಪ್ಟಿನವರು, ‘ಯೆಹೋವನು ತನ್ನ ಜನರಿಗೆ ಕೇಡನ್ನು ಮಾಡುವುದಕ್ಕಾಗಿಯೇ ಈಜಿಪ್ಟಿನಿಂದ ಕರೆದುಕೊಂಡು ಹೋದನು. ಆತನು ಅವರನ್ನು ಬೆಟ್ಟಗಳಲ್ಲಿ ಕೊಲ್ಲಬೇಕೆಂದಿದ್ದನು; ತನ್ನ ಜನರನ್ನು ಭೂಮಿಯಿಂದ ನಿರ್ಮೂಲ ಮಾಡಬೇಕೆಂದಿದ್ದನು’ ಎಂದು ಹೇಳುವರು. ಆದ್ದರಿಂದ ನಿನ್ನ ಜನರ ಮೇಲೆ ಕೋಪಗೊಳ್ಳಬೇಡ. ನಿನ್ನ ಕೋಪವನ್ನು ಬಿಟ್ಟುಬಿಡು. ನಿನ್ನ ಜನರನ್ನು ನಾಶಮಾಡಬೇಡ.
12 Por que deixar que os egípcios digam: “Ele os tirou de lá com más intenções, para matá-los nos montes e para eliminá-los da face da terra”? Deixa de lado o furor da tua ira e muda de ideia quanto a este mal contra o teu povo.
13 ನಿನ್ನ ಸೇವೆಮಾಡಿದ ಅಬ್ರಹಾಮನನ್ನು, ಇಸಾಕನನ್ನು, ಇಸ್ರೇಲನನ್ನು ಜ್ಞಾಪಿಸಿಕೊ. ನೀನು ನಿನ್ನ ಹೆಸರನ್ನು ಉಪಯೋಗಿಸಿ ಆ ಜನರಿಗೆ ವಾಗ್ದಾನವನ್ನು ಮಾಡಿದೆ. ‘ನಾನು ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡುವೆನು. ನಾನು ವಾಗ್ದಾನ ಮಾಡಿದಂತೆ ಈ ದೇಶವನ್ನೆಲ್ಲಾ ನಿನ್ನ ಸಂತತಿಗಳವರಿಗೆ ಕೊಡುವೆನು. ಈ ದೇಶ ಎಂದೆಂದಿಗೂ ಅವರದಾಗಿರುವುದು’ ಎಂದು ನೀನು ನಿನ್ನ ಹೆಸರಿನಲ್ಲಿ ವಾಗ್ದಾನ ಮಾಡಿದೆಯಲ್ಲಾ” ಅಂದನು.
13 Lembra-te de Abraão, de Isaque e de Israel, teus servos, aos quais por ti mesmo juraste, dizendo: “Multiplicarei a descendência de vocês como as estrelas do céu, e toda esta terra de que tenho falado, eu a darei à sua descendência, para que a possuam por herança eternamente.”
14 ಆದ್ದರಿಂದ ಯೆಹೋವನು ಜನರಿಗಾಗಿ ಮರುಕಪಟ್ಟು ತನ್ನ ಮನಸ್ಸನ್ನು ಮಾರ್ಪಡಿಸಿಕೊಂಡನು; ತಾನು ಹೇಳಿದ್ದ ಕೇಡನ್ನು ಮಾಡಲಿಲ್ಲ; ತನ್ನ ಜನರನ್ನು ನಾಶಮಾಡಲಿಲ್ಲ.
14 Então o Senhor mudou de ideia quanto ao mal que ele tinha dito que traria sobre o povo.
15 ಬಳಿಕ ಮೋಶೆ ಬೆಟ್ಟದಿಂದಿಳಿದು ಹೋದನು. ಮೋಶೆಯೊಡನೆ ಆಜ್ಞಾಶಾಸನಗಳ ಎರಡು ಕಲ್ಲಿನ ಹಲಿಗೆಗಳಿದ್ದವು. ಈ ಆಜ್ಞಾಶಾಸನಗಳ ಕಲ್ಲುಗಳ ಮುಂದೆಯೂ ಹಿಂದೆಯೂ ಬರೆಯಲ್ಪಟ್ಟಿದ್ದವು.
15 Moisés voltou-se e desceu do monte com as duas tábuas do testemunho nas mãos, tábuas escritas de ambos os lados; de um e de outro lado estavam escritas.
16 ಯೆಹೋವನು ತಾನೇ ಆ ಕಲ್ಲುಗಳನ್ನು ಮಾಡಿ ಅವುಗಳ ಮೇಲೆ ಬರೆದಿದ್ದನು.
16 As tábuas eram obra de Deus; também o que estava escrito tinha sido escrito pelo próprio Deus, esculpido nas tábuas.
17 ಇಸ್ರೇಲರ ಗದ್ದಲವನ್ನೂ ಕೂಗಾಟವನ್ನೂ ಯೆಹೋಶುವನು ಕೇಳಿ ಮೋಶೆಗೆ, “ಪಾಳೆಯದ ಕಡೆಯಿಂದ ಯುದ್ಧದ ಧ್ವನಿ ಕೇಳಿಬರುತ್ತಿದೆ” ಅಂದನು.
17 Quando Josué ouviu a voz do povo que gritava, disse a Moisés: — Há um alarido de guerra no arraial.
18 ಅದಕ್ಕೆ ಮೋಶೆ, “ಅದು ಸೈನ್ಯದ ಜಯಧ್ವನಿಯಲ್ಲ. ಅದು ಸೋಲಿನಿಂದ ಕೂಗುವ ಸೈನ್ಯದ ಧ್ವನಿಯೂ ಅಲ್ಲ. ನಾನು ಕೇಳುತ್ತಿರುವುದು ಗೋಷ್ಠಿಯ ಧ್ವನಿ” ಎಂದು ಉತ್ತರಿಸಿದನು.
18 Moisés respondeu: — O que ouço não é alarido de vencedores nem de vencidos, mas o alarido de pessoas cantando.
19 ಮೋಶೆಯು ಪಾಳೆಯದ ಹತ್ತಿರಕ್ಕೆ ಬಂದನು. ಅವನು ಚಿನ್ನದ ಬಸವನನ್ನೂ ಜನರ ನರ್ತನವನ್ನೂ ನೋಡಿ ಬಹುಕೋಪಗೊಂಡು ಕಲ್ಲಿನ ಹಲಿಗೆಗಳನ್ನು ನೆಲದ ಮೇಲೆ ಬಿಸಾಡಿಬಿಟ್ಟನು; ಅವು ಚೂರುಚೂರಾಗಿ ಒಡೆದುಹೋದವು.
19 Logo que se aproximou do arraial e viu o bezerro e as danças, Moisés ficou muito irado. Arremessou as tábuas de pedra das suas mãos e quebrou-as ao pé do monte.
20 ಬಳಿಕ ಮೋಶೆಯು ಆ ಬಸವನ ಮೂರ್ತಿಯನ್ನು ಬೆಂಕಿಯಲ್ಲಿ ಕರಗಿಸಿ ಅದರ ಚಿನ್ನವನ್ನು ಧೂಳಿನಂತೆ ಅರೆದು ನೀರಿಗೆ ಹಾಕಿ ಆ ನೀರನ್ನು ಇಸ್ರೇಲರಿಗೆ ಕುಡಿಸಿದನು.
20 E, pegando o bezerro que tinham feito, queimou-o e o reduziu a pó, que espalhou sobre a água, e deu de beber aos filhos de Israel.
21 ಮೋಶೆಯು ಆರೋನನಿಗೆ, “ಈ ಜನರು ನಿನಗೇನು ಮಾಡಿದರು? ಇಂಥಾ ಕೆಟ್ಟ ಪಾಪವನ್ನು ಮಾಡುವಂತೆ ಯಾಕೆ ಅವರನ್ನು ನಡಿಸಿದೆ?” ಎಂದು ಹೇಳಿದನು.
21 Depois, Moisés perguntou a Arão: — O que foi que esse povo fez a você, para que você trouxesse sobre ele tão grande pecado?
22 ಆರೋನನು, “ಕೋಪಗೊಳ್ಳಬೇಡ. ಇವರು ಯಾವಾಗಲೂ ಪಾಪಮಾಡಲು ಸಿದ್ಧರಾಗಿರುವುದು ನಿನಗೆ ಗೊತ್ತೇ ಇದೆ.
22 Arão respondeu: — Não fique irado, meu senhor. Você sabe que este povo é propenso para o mal.
23 ಅವರು ನನಗೆ, ‘ಮೋಶೆಯು ನಮ್ಮನ್ನು ಈಜಿಪ್ಟಿನಿಂದ ಹೊರಗೆ ನಡೆಸಿದನು. ಆದರೆ ಅವನಿಗೇನಾಯಿತೊ ನಮಗೆ ತಿಳಿಯದು. ಆದ್ದರಿಂದ ನಮ್ಮನ್ನು ಮುನ್ನಡೆಸಲು ದೇವರುಗಳನ್ನು ಮಾಡಿಕೊಡು’ ಎಂದು ಕೇಳಿದರು.
23 Pois me disseram: “Faça para nós deuses que vão adiante de nós; pois, quanto a este Moisés, o homem que nos tirou da terra do Egito, não sabemos o que lhe aconteceu.”
24 ಆದ್ದರಿಂದ ನಾನು ಅವರಿಗೆ, ‘ನಿಮ್ಮಲ್ಲಿ ಚಿನ್ನದ ಆಭರಣಗಳಿದ್ದರೆ ನನಗೆ ಕೊಡಿರಿ’ ಎಂದು ಹೇಳಿದೆನು. ಅವರು ಆಭರಣಗಳನ್ನು ನನಗೆ ತಂದುಕೊಟ್ಟರು. ನಾನು ಅವುಗಳನ್ನು ಬೆಂಕಿಯಲ್ಲಿ ಕರಗಿಸಿ ಈ ಬಸವನ ಮೂರ್ತಿಯನ್ನು ಎರಕಹೊಯ್ದೆನು” ಎಂದು ಉತ್ತರಿಸಿದನು.
24 Então eu lhes disse: “Quem tem ouro, tire-o.” Eles o deram para mim, eu o lancei no fogo, e saiu este bezerro.
25 ಜನರು ಅಂಕೆತಪ್ಪಿ ತಮ್ಮ ಇಷ್ಟಬಂದಂತೆ ಮಾಡುವುದಕ್ಕೆ ಆರೋನನು ಅವರನ್ನು ಬಿಟ್ಟುಬಿಟ್ಟಿರುವುದು ಮೋಶೆಗೆ ತಿಳಿಯಿತು. ಜನರು ಕ್ರಮವಿಲ್ಲದೆ ಸ್ವೇಚ್ಛೆಯಿಂದ ನಡೆಯುತ್ತಿದ್ದರು; ಅವರ ಮೂರ್ಖತನವು ಅವರ ವಿರೋಧಿಗಳಿಗೆ ಎದ್ದುಕಾಣುತ್ತಿತ್ತು!
25 Quando Moisés viu que o povo estava sem controle, pois Arão o tinha deixado à solta para vergonha no meio dos seus inimigos,
26 ಆದ್ದರಿಂದ ಪಾಳೆಯದ ದ್ವಾರದಲ್ಲಿ ಮೋಶೆಯು ನಿಂತು, “ಯೆಹೋವನ ಪಕ್ಷದವರು ನನ್ನ ಬಳಿಗೆ ಬರಬೇಕು” ಎಂದು ಹೇಳಿದನು. ಲೇವಿ ಕುಲದವರೆಲ್ಲಾ ಮೋಶೆಯ ಬಳಿಗೆ ಬಂದರು.
26 pôs-se em pé à entrada do arraial e disse: — Quem é do Então se juntaram a ele todos os filhos de Levi,
27 ಆಗ ಮೋಶೆ ಅವರಿಗೆ, “ಇಸ್ರೇಲರ ದೇವರಾದ ಯೆಹೋವನು ಹೇಳುವುದನ್ನು ನಿಮಗೆ ತಿಳಿಸುತ್ತೇನೆ: ‘ನಿಮ್ಮಲ್ಲಿ ಪ್ರತಿಯೊಬ್ಬನು ಕತ್ತಿಯನ್ನು ತೆಗೆದುಕೊಂಡು ಪಾಳೆಯದ ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೆ ಹೋಗಿ ಜನರನ್ನು ಶಿಕ್ಷಿಸಬೇಕು. ನಿಮ್ಮ ಸಹೋದರರಾಗಿದ್ದರೂ ಸ್ನೇಹಿತರಾಗಿದ್ದರೂ ಅಥವಾ ನೆರೆಯವರಾಗಿದ್ದರೂ ಸರಿ, ಕೊಲ್ಲಿರಿ’” ಎಂದು ಹೇಳಿದನು.
27 aos quais ele disse: — Assim diz o
28 ಲೇವಿಕುಲದವರು ಮೋಶೆಯ ಮಾತಿಗೆ ವಿಧೇಯರಾದರು. ಅಂದು ಇಸ್ರೇಲರಲ್ಲಿ ಸುಮಾರು ಮೂರು ಸಾವಿರ ಮಂದಿ ಸತ್ತರು.
28 E os filhos de Levi fizeram segundo a palavra de Moisés e, naquele dia, morreram uns três mil homens.
29 ಆಗ ಮೋಶೆಯು ಅವರಿಗೆ, “ಇಂದು ನೀವು ಯೆಹೋವನಿಗೆ ಮೀಸಲಾದ ಜನರಾದಿರಿ; ಯಾಕೆಂದರೆ ನೀವು ನಿಮ್ಮ ಸ್ವಂತ ಗಂಡು ಮಗನಿಗೂ ಸಹೋದರನಿಗೂ ವಿರೋಧವಾದಿರಿ. ಇಂದು ಆತನು ನಿಮ್ಮನ್ನು ಆಶೀರ್ವದಿಸಿದ್ದಾನೆ” ಅಂದನು.
29 Pois Moisés tinha dito: “Consagrem-se hoje ao Senhor , cada um contra o seu filho e contra o seu irmão, para que hoje Deus lhes conceda uma bênção.”
30 ಮರುದಿನ ಮುಂಜಾನೆ ಮೋಶೆಯು ಜನರಿಗೆ, “ನೀವು ಭಯಂಕರವಾದ ಪಾಪವನ್ನು ಮಾಡಿದ್ದೀರಿ. ಆದರೆ ಈಗ ನಾನು ಯೆಹೋವನ ಬಳಿಗೆ ಹೋಗಿ, ಆತನು ನಿಮ್ಮ ಪಾಪಗಳನ್ನು ಕ್ಷಮಿಸುವಂತೆ ನಾನೇನಾದರೂ ಮಾಡಬಹುದೊ ಎಂದು ವಿಚಾರಿಸುತ್ತೇನೆ” ಎಂದನು.
30 No dia seguinte, Moisés disse ao povo: — Vocês cometeram um grande pecado. Agora, porém, subirei ao
31 ಅಂತೆಯೇ ಮೋಶೆಯು ಯೆಹೋವನ ಬಳಿಗೆ ಮರಳಿ ಹೋಗಿ, “ದಯವಿಟ್ಟು ಆಲಿಸು! ಈ ಜನರು ಬಹಳ ಕೆಟ್ಟ ಪಾಪವನ್ನು ಮಾಡಿದ್ದಾರೆ. ಚಿನ್ನದಿಂದ ಮೂರ್ತಿಯನ್ನು ಮಾಡಿಕೊಂಡಿದ್ದಾರೆ.
31 Moisés voltou ao Senhor e disse: — Ah! O povo cometeu grande pecado, fazendo para si deuses de ouro.
32 ಅವರ ಈ ಪಾಪವನ್ನು ಕ್ಷಮಿಸು. ನೀನು ಅವರನ್ನು ಕ್ಷಮಿಸುವುದಿಲ್ಲವಾದರೆ ನಿನ್ನ ಜೀವಭಾದ್ಯರ ಪಟ್ಟಿಯ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು” ಎಂದು ಪ್ರಾರ್ಥಿಸಿದನು.
32 Agora, pois, perdoa-lhe o pecado; ou, se não, peço-te que me risques do livro que escreveste.
33 ಆದರೆ ಯೆಹೋವನು ಮೋಶೆಗೆ, “ನನಗೆ ವಿರೋಧವಾಗಿ ಪಾಪಮಾಡುವ ಜನರ ಹೆಸರನ್ನು ಮಾತ್ರವೇ ನನ್ನ ಪುಸ್ತಕದಿಂದ ಅಳಿಸುತ್ತೇನೆ.
33 Então o Senhor disse a Moisés: — Riscarei do meu livro todo aquele que pecar contra mim.
34 ಆದ್ದರಿಂದ ಈಗ ಕೆಳಗಿಳಿದು ನಾನು ನಿನಗೆ ಹೇಳುವಲ್ಲಿಗೆ ಜನರನ್ನು ನಡಿಸು. ನನ್ನ ದೂತನು ನಿನ್ನ ಮುಂದೆ ಹೋಗಿ ನಿನ್ನನ್ನು ನಡಿಸುವನು. ಪಾಪಮಾಡಿದ ಜನರನ್ನು ಶಿಕ್ಷಿಸುವ ಸಮಯ ಬಂದಾಗ ಅವರು ಶಿಕ್ಷಿಸಲ್ಪಡುವರು” ಎಂದು ಹೇಳಿದನು.
34 Vá, pois, agora, e conduza o povo para o lugar do qual falei a você. Eis que o meu Anjo irá adiante de você. Porém, no dia da minha visitação, eu os castigarei pelo pecado que cometeram.
35 ಆದ್ದರಿಂದ ಯೆಹೋವನು ಜನರಿಗೆ ಭಯಂಕರವಾದ ವ್ಯಾದಿಯನ್ನು ಬರಮಾಡಿದನು. ಅವರು ಆರೋನನಿಂದ ಬಸವನನ್ನು ಮಾಡಿಸಿಕೊಂಡದ್ದೇ ಇದಕ್ಕೇ ಕಾರಣ.
35 Assim, o Senhor feriu o povo, porque fizeram o bezerro — aquele que Arão tinha feito.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Êxodo 32, comparar traduções ou montar um estudo — tudo direto pelo WhatsApp.