Êxodo 35
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NAA
1 ಮೋಶೆಯು ಇಸ್ರೇಲರನ್ನು ಒಟ್ಟಾಗಿ ಸೇರಿಸಿದನು. ಮೋಶೆ ಅವರಿಗೆ, “ನೀವು ಅನುಸರಿಸಬೇಕೆಂದು ಯೆಹೋವನು ನಿಮಗೆ ಆಜ್ಞಾಪಿಸಿದ ಸಂಗತಿಗಳನ್ನು ನಾನು ಹೇಳುವೆನು:
1 Moisés convocou toda a congregação dos filhos de Israel e lhes disse: — São estas as palavras que o
2 “ಕೆಲಸ ಮಾಡುವುದಕ್ಕೆ ಆರು ದಿನಗಳಿವೆ. ಆದರೆ ಏಳನೆಯ ದಿನವು ನಿಮಗೆ ಬಹು ವಿಶೇಷವಾದ ವಿಶ್ರಾಂತಿ ದಿನವಾಗಿರುವುದು. ಆ ವಿಶೇಷ ದಿನದಲ್ಲಿ ವಿಶ್ರಮಿಸುವುದರ ಮೂಲಕ ನೀವು ಯೆಹೋವನನ್ನು ಸನ್ಮಾನಿಸುವಿರಿ. ಏಳನೆಯ ದಿನದಲ್ಲಿ ಕೆಲಸಮಾಡುವ ವ್ಯಕ್ತಿಯು ಸಂಹರಿಸಲ್ಪಡಬೇಕು.
2 Seis dias vocês trabalharão, mas o sétimo dia lhes será santo, o sábado do repouso solene ao Senhor ; quem nele trabalhar morrerá.
3 ನೀವು ವಾಸಿಸುವ ಯಾವ ಸ್ಥಳದಲ್ಲಿಯೂ ಸಬ್ಬತ್‌ದಿನದಂದು ಬೆಂಕಿಯನ್ನು ಹೊತ್ತಿಸಬಾರದು” ಎಂದು ಹೇಳಿದನು.
3 Não acendam fogo em nenhuma das suas moradas no dia do sábado.
4 ಮೋಶೆಯು ಇಸ್ರೇಲರಿಗೆ, “ಯೆಹೋವನು ಆಜ್ಞಾಪಿಸಿದ್ದು ಇದುವೇ.
4 Moisés disse a toda a congregação dos filhos de Israel: — Esta é a palavra que o
5 ಯೆಹೋವನಿಗಾಗಿ ಕಾಣಿಕೆಗಳನ್ನು ಕೂಡಿಸಿರಿ. ನಿಮ್ಮಲ್ಲಿ ಪ್ರತಿಯೊಬ್ಬನು ತಾನು ಕೊಡುವಂಥದ್ದನ್ನು ತನ್ನ ಹೃದಯದಲ್ಲಿ ತೀರ್ಮಾನಿಸಿಕೊಳ್ಳಬೇಕು. ಬಳಿಕ ಆ ಕಾಣಿಕೆಯನ್ನು ಯೆಹೋವನ ಸನ್ನಿಧಿಗೆ ತರಬೇಕು. ಚಿನ್ನ, ಬೆಳ್ಳಿ, ತಾಮ್ರ,
5 Separem do que vocês têm uma oferta ao Senhor . Cada um, de coração disposto, voluntariamente a trará por oferta ao Senhor : ouro, prata, bronze,
6 ನೀಲಿ, ನೇರಳೆ, ಕೆಂಪುದಾರ ಮತ್ತು ಶ್ರೇಷ್ಠ ನಾರುಬಟ್ಟೆ, ಆಡಿನ ಕೂದಲು,
6 pano azul, púrpura, carmesim, linho fino, pelos de cabra,
7 ಕೆಂಪುಬಣ್ಣದ ಕುರಿದೊಗಲು, ಕಡಲುಹಂದಿಯ ತೊಗಲು, ಜಾಲೀಮರ,
7 peles de carneiro tingidas de vermelho, peles finas, madeira de acácia,
8 ದೀಪಗಳಿಗೆ ಬೇಕಾದ ಎಣ್ಣೆ, ಅಭಿಷೇಕತೈಲ ಮತ್ತು ಪರಿಮಳಧೂಪವನ್ನು ತಯಾರಿಸಲು ಬೇಕಾದ ಸುಗಂಧದ್ರವ್ಯ ಇವುಗಳನ್ನು ತನ್ನಿರಿ.
8 azeite para a iluminação, especiarias para o óleo da unção e para o incenso aromático,
9 ಏಫೋದಿನಲ್ಲಿ ಮತ್ತು ದೈವನಿರ್ಣಯದ ಪದಕದಲ್ಲಿ ಹಾಕಬೇಕಾಗಿರುವ ಗೋಮೇಧಿಕ ರತ್ನಗಳು ಮತ್ತು ಇತರ ರತ್ನಗಳನ್ನು ತನ್ನಿರಿ.
9 pedras de ônix e pedras de engaste para a estola sacerdotal e para o peitoral.
10 “ಯೆಹೋವನು ಆಜ್ಞಾಪಿಸಿದ ವಸ್ತುಗಳನ್ನು ನಿಮ್ಮಲ್ಲಿ ನಿಪುಣರಾದ ಕೆಲಸಗಾರರೆಲ್ಲರೂ ಮಾಡಬೇಕು. ಅವು ಯಾವುವೆಂದರೆ,
10 — Venham todos os homens hábeis entre vocês e façam tudo o que o Senhor ordenou:
11 ಪವಿತ್ರಗುಡಾರ, ಅದರ ಹೊರಗಿನ ಡೇರೆ, ಅದರ ಮೇಲ್ಹೊದಿಕೆಗಳು, ಅದರ ಕೊಂಡಿಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೇಕಲ್ಲುಗಳು,
11 o tabernáculo com a sua tenda e a sua cobertura, os seus ganchos, as suas tábuas, as suas vigas superiores, as suas colunas e as suas bases;
12 ಪವಿತ್ರಪೆಟ್ಟಿಗೆ ಮತ್ತು ಅದನ್ನು ಹೊರುವ ಕೋಲುಗಳು, ಕೃಪಾಸನ ಮತ್ತು ಪೆಟ್ಟಿಗೆ ಇರುವ ಸ್ಥಳವನ್ನು ಮುಚ್ಚುವ ಪರದೆ,
12 a arca e os seus cabos, o propiciatório e o véu do cortinado;
13 ಮೇಜು ಮತ್ತು ಅದರ ಕೋಲುಗಳು, ಮೇಜಿನ ಮೇಲಿರುವ ಎಲ್ಲಾ ಉಪಕರಣಗಳು, ಮೇಜಿನ ಮೇಲಿರುವ ನೈವೇದ್ಯರೊಟ್ಟಿ,
13 a mesa e os seus cabos, todos os seus utensílios e os pães da proposição;
14 ದೀಪಸ್ತಂಭ ಮತ್ತು ಅದರ ಉಪಕರಣಗಳು, ದೀಪಗಳು, ದೀಪಕ್ಕೆ ಬೇಕಾದ ಎಣ್ಣೆ,
14 o candelabro da iluminação, os seus utensílios, as suas lâmpadas e o azeite para a iluminação;
15 ಧೂಪವೇದಿ ಮತ್ತು ಅದರ ಕೋಲುಗಳು, ಅಭಿಷೇಕತೈಲ, ಪರಿಮಳಧೂಪ, ಪವಿತ್ರ ಗುಡಾರದ ಬಾಗಿಲಿನ ಪರದೆ,
15 o altar do incenso e os seus cabos, o óleo da unção, o incenso aromático e o cortinado da porta à entrada do tabernáculo;
16 ಸರ್ವಾಂಗಹೋಮ ಮಾಡಲು ಯಜ್ಞವೇದಿಕೆ ಮತ್ತು ಅದರ ತಾಮ್ರದ ಜಾಳಿಗೆ, ಕೋಲುಗಳು, ಯಜ್ಞವೇದಿಕೆಗೆ ಬೇಕಾಗುವ ಎಲ್ಲಾ ಉಪಕರಣಗಳು, ಗಂಗಾಳ ಮತ್ತು ಅದರ ಪೀಠ,
16 o altar do holocausto e a sua grelha de bronze, os seus cabos e todos os seus utensílios, a bacia e o seu suporte;
17 ಅಂಗಳದ ಸುತ್ತಲಿನ ಪರದೆಗಳು, ಕಂಬಗಳು, ಗದ್ದಿಗೇಕಲ್ಲುಗಳು, ಅಂಗಳದ ಬಾಗಿಲಿನ ಪರದೆ,
17 as cortinas do átrio, as suas colunas, as suas bases e o cortinado da porta do átrio;
18 ಗುಡಾರದ ಗೂಟಗಳು, ಅಂಗಳದ ಗೂಟಗಳು ಮತ್ತು ಹಗ್ಗಗಳು,
18 as estacas do tabernáculo, as estacas do átrio e as suas cordas;
19 ಮತ್ತು ಪವಿತ್ರಸ್ಥಳದಲ್ಲಿ ಯಾಜಕರು ಧರಿಸತಕ್ಕ ವಿಶೇಷವಾದ ಹೆಣೆದ ಬಟ್ಟೆಗಳು. ಈ ಬಟ್ಟೆಗಳನ್ನು ಯಾಜಕನಾದ ಆರೋನನು ಮತ್ತು ಅವನ ಪುತ್ರರು ಯಾಜಕ ಸೇವೆ ಮಾಡುವಾಗ ಧರಿಸಿಕೊಳ್ಳುವರು” ಎಂದು ಹೇಳಿದನು.
19 as vestes do ministério para ministrar no santuário, as vestes santas do sacerdote Arão e as vestes de seus filhos, para oficiarem como sacerdotes.
20 ಬಳಿಕ ಇಸ್ರೇಲರೆಲ್ಲರೂ ಮೋಶೆಯ ಬಳಿಯಿಂದ ಹೊರಟುಹೋದರು.
20 Então toda a congregação dos filhos de Israel saiu da presença de Moisés.
21 ಕಾಣಿಕೆ ಕೊಡುವುದಕ್ಕೆ ಯಾರ್ಯಾರು ಬಯಸಿದರೋ ಅವರೆಲ್ಲರೂ ಬಂದು ಯೆಹೋವನಿಗೆ ಕಾಣಿಕೆಯನ್ನು ಅರ್ಪಿಸಿದರು. ಈ ಕಾಣಿಕೆಗಳು ದೇವದರ್ಶನಗುಡಾರ, ಅದರ ಎಲ್ಲಾ ವಸ್ತುಗಳು ಮತ್ತು ವಿಶೇಷ ಬಟ್ಟೆಗಳನ್ನು ಮಾಡಲು ಉಪಯೋಗಿಸಲ್ಪಟ್ಟವು.
21 Todo aquele cujo coração o moveu e cujo espírito o impeliu veio e trouxe a oferta ao Senhor para a obra da tenda do encontro, para todo o seu serviço e para as vestes sagradas.
22 ಕಾಣಿಕೆ ಕೊಡುವುದಕ್ಕೆ ಬಯಸಿದ ಎಲ್ಲಾ ಗಂಡಸರು, ಹೆಂಗಸರು ಎಲ್ಲಾ ವಿಧದ ಚಿನ್ನದ ಆಭರಣಗಳನ್ನು ತಂದರು. ಅವರು ತಮ್ಮ ಕಡಗ, ಮೂಗುತಿ, ಉಂಗುರ, ಕಂಠಮಾಲೆ ಮತ್ತು ಇತರ ಚಿನ್ನದ ಆಭರಣಗಳನ್ನು ತಂದರು. ಅವರೆಲ್ಲರು ತಮ್ಮ ಎಲ್ಲಾ ಕೊಡುಗೆಗಳನ್ನು ಯೆಹೋವನಿಗೆ ಕೊಟ್ಟರು. ಇದು ಯೆಹೋವನಿಗೆ ಕೊಟ್ಟ ವಿಶೇಷವಾದ ಕಾಣಿಕೆಯಾಗಿತ್ತು.
22 Vieram homens e mulheres, todos dispostos de coração. Trouxeram fivelas, pendentes, anéis, braceletes, todos os objetos de ouro; todo homem fazia oferta de ouro ao Senhor .
23 ಪ್ರತಿಯೊಬ್ಬನು ತನ್ನಲ್ಲಿದ್ದ ಶ್ರೇಷ್ಠ ನಾರುಬಟ್ಟೆಯನ್ನು, ನೀಲಿ, ನೇರಳೆ ಮತ್ತು ಕೆಂಪುದಾರಗಳನ್ನು ಯೆಹೋವನಿಗಾಗಿ ತಂದನು. ಯಾರಲ್ಲಿ ಕೆಂಪುಬಣ್ಣದ ಕುರಿದೊಗಲಾಗಲಿ ಕಡಲುಹಂದಿಯ ತೊಗಲಾಗಲಿ ಇದ್ದವೋ ಅವರು ಅವುಗಳನ್ನು ಯೆಹೋವನಿಗಾಗಿ ತಂದುಕೊಟ್ಟರು.
23 E todos os que tinham pano azul, púrpura, carmesim, linho fino, pelos de cabra, peles de carneiro tingidas de vermelho e peles de animais marinhos trouxeram isso também.
24 ಬೆಳ್ಳಿಯನ್ನಾಗಲಿ ತಾಮ್ರವನ್ನಾಗಲಿ ಕೊಡಲು ಬಯಸಿದವರು ಅದನ್ನು ಕೆಲಸಕ್ಕೋಸ್ಕರ ಯೆಹೋವನಿಗೆ ಕಾಣಿಕೆಯಾಗಿ ತಂದರು. ಜಾಲೀಮರವನ್ನು ಹೊಂದಿದವರು ಅದನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಟ್ಟರು.
24 Todo aquele que fazia oferta de prata ou de bronze trazia isso como oferta ao Senhor ; e todo aquele que possuía madeira de acácia para toda obra do serviço a trazia também.
25 ನಿಪುಣರಾದ ಸ್ತ್ರೀಯರು ಶ್ರೇಷ್ಠ ನಾರುಬಟ್ಟೆಯನ್ನು, ನೀಲಿ, ನೇರಳೆ, ಕೆಂಪುದಾರಗಳನ್ನು ಮಾಡಿದರು.
25 Todas as mulheres hábeis traziam o que, por suas próprias mãos, tinham fiado: pano azul, púrpura, carmesim e linho fino.
26 ನಿಪುಣರಾಗಿದ್ದ ಇತರ ಸ್ತ್ರೀಯರು ಆಡುಕೂದಲಿನಿಂದ ಬಟ್ಟೆಯನ್ನು ತಯಾರಿಸಿದರು.
26 E todas as mulheres cujo coração as moveu em habilidade fiavam os pelos de cabra.
27 ನಾಯಕರು ಗೋಮೇಧಿಕ ರತ್ನಗಳನ್ನು ಮತ್ತು ಇತರ ರತ್ನಗಳನ್ನು ತಂದುಕೊಟ್ಟರು. ಅವುಗಳನ್ನು ಯಾಜಕನ ಏಫೋದಿಗೂ ಮತ್ತು ದೈವನಿರ್ಣಯದ ಪದಕಕ್ಕೂ ಉಪಯೋಗಿಸಲಾಯಿತು.
27 Os chefes traziam pedras de ônix, pedras de engaste para a estola sacerdotal e para o peitoral,
28 ಜನರು ಸುಗಂಧದ್ರವ್ಯಗಳನ್ನೂ ಆಲಿವ್ ಎಣ್ಣೆಯನ್ನೂ ತಂದುಕೊಟ್ಟರು. ಈ ವಸ್ತುಗಳು ಪರಿಮಳಧೂಪ, ಅಭಿಷೇಕತೈಲ ಮತ್ತು ದೀಪಗಳಿಗೆ ಬೇಕಾದ ಎಣ್ಣೆ ಇವುಗಳನ್ನು ಮಾಡಲು ಉಪಯೋಗಿಸಲ್ಪಟ್ಟವು.
28 as especiarias e o azeite para a iluminação, para o óleo da unção e para o incenso aromático.
29 ಸಹಾಯ ಮಾಡುವುದಕ್ಕೆ ಬಯಸಿದ ಇಸ್ರೇಲರೆಲ್ಲರೂ ಯೆಹೋವನಿಗೆ ಕಾಣಿಕೆಗಳನ್ನು ತಂದುಕೊಟ್ಟರು. ಈ ಕಾಣಿಕೆಗಳನ್ನು ಗಂಡಸರು ಮತ್ತು ಹೆಂಗಸರು ಕೊಡುವುದಕ್ಕೆ ಬಯಸಿದ್ದರಿಂದ ಉದಾರವಾಗಿ ಕೊಟ್ಟರು. ಯೆಹೋವನು ಮೋಶೆಗೆ ಮತ್ತು ಜನರಿಗೆ ಆಜ್ಞಾಪಿಸಿದ ಎಲ್ಲಾ ವಸ್ತುಗಳನ್ನು ಮಾಡುವುದಕ್ಕೆ ಈ ಕಾಣಿಕೆಗಳು ಉಪಯೋಗಿಸಲ್ಪಟ್ಟವು.
29 Os filhos de Israel trouxeram oferta voluntária ao Senhor , a saber, todo homem e mulher cujo coração os dispôs para trazerem uma oferta para toda a obra que o Senhor havia ordenado que se fizesse por meio de Moisés.
30 ಬಳಿಕ ಮೋಶೆಯು ಇಸ್ರೇಲರಿಗೆ ಹೀಗೆಂದನು: “ನೋಡಿರಿ, ಯೆಹೋವನು ಯೆಹೂದ ಕುಲದಿಂದ ಊರಿಯ ಮಗನಾದ ಬೆಚಲೇಲನನ್ನು ಆರಿಸಿಕೊಂಡಿದ್ದಾನೆ. ಊರಿಯು ಹೂರನ ಮಗ.
30 Moisés disse aos filhos de Israel: — Eis que o
31 ಯೆಹೋವನು ಬೆಚಲೇಲನನ್ನು ದೇವರಾತ್ಮಭರಿತನನ್ನಾಗಿ ಮಾಡಿ, ಎಲ್ಲಾ ವಸ್ತುಗಳನ್ನು ಮಾಡುವುದಕ್ಕೆ ಬೇಕಾದ ವಿಶೇಷ ನಿಪುಣತೆಯನ್ನೂ ಜ್ಞಾನವನ್ನೂ ಅನುಗ್ರಹಿಸಿದ್ದಾನೆ.
31 e o Espírito de Deus o encheu de habilidade, inteligência e conhecimento em todo artifício,
32 ಅವನು ಅಂದವಾಗಿ ನಕ್ಷೆಮಾಡಿ, ಚಿನ್ನ, ಬೆಳ್ಳಿ ಮತ್ತು ತಾಮ್ರಗಳಿಂದ ವಸ್ತುಗಳನ್ನು ಮಾಡಬಲ್ಲನು.
32 para elaborar desenhos e trabalhar em ouro, em prata, em bronze,
33 ಅವನು ಕಲ್ಲುಗಳನ್ನು, ರತ್ನಗಳನ್ನು ಕತ್ತರಿಸಿ ಜೋಡಿಸಬಲ್ಲನು. ಬೆಚಲೇಲನು ಮರಗೆಲಸವನ್ನು ಮಾಡಿ ಎಲ್ಲಾ ವಿಧದ ಕುಶಲ ವಸ್ತುಗಳನ್ನು ತಯಾರಿಸಬಲ್ಲನು.
33 para lapidação de pedras de engaste, para entalho de madeira e para todo tipo de trabalho artesanal.
34 ಇತರರಿಗೆ ಕಲಿಸುವುದಕ್ಕೆ ಬೇಕಾದ ವಿಶೇಷ ನಿಪುಣತೆಯನ್ನು ಯೆಹೋವನು ಬೆಚಲೇಲನಿಗೂ ಒಹೊಲೀಯಾಬನಿಗೂ ಅನುಗ್ರಹಿಸಿದ್ದಾನೆ. ಒಹೊಲೀಯಾಬನು ದಾನ್ ಕುಲದ ಅಹೀಸಾಮಾಕನ ಮಗನು.
34 Também lhe dispôs o coração para ensinar os outros, tanto a ele como a Aoliabe, filho de Aisamaque, da tribo de Dã.
35 ಯೆಹೋವನು ಇವರಿಬ್ಬರಿಗೆ ಎಲ್ಲಾ ವಿಧದ ಕೆಲಸಗಳನ್ನು ಮಾಡಲು ವಿಶೇಷ ನಿಪುಣತೆಯನ್ನು ಅನುಗ್ರಹಿಸಿದ್ದಾನೆ. ಅವರು ಮರಗೆಲಸವನ್ನೂ ಲೋಹದ ಕೆಲಸವನ್ನೂ ಮಾಡಬಲ್ಲರು. ಅವರು ನೀಲಿ, ನೇರಳೆ ಕೆಂಪುದಾರಗಳಿಂದ ಮತ್ತು ಶ್ರೇಷ್ಠ ನಾರುಬಟ್ಟೆಯಿಂದ ಅಲಂಕೃತವಾದ ಬಟ್ಟೆಗಳನ್ನು ನೇಯಿಗೆ ಮಾಡಬಲ್ಲರು; ಅವರು ಉಣ್ಣೆ ಬಟ್ಟೆಗಳನ್ನು ನೇಯಲು ಶಕ್ತರಾಗಿದ್ದಾರೆ.
35 Encheu-os de habilidade para fazer toda obra de mestre, até a mais engenhosa, e a do bordador em pano azul, em púrpura, em carmesim e em linho fino, e a do tecelão, sim, todo tipo de trabalho e a elaborar desenhos.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Êxodo 35, comparar traduções ou montar um estudo — tudo direto pelo WhatsApp.