Êxodo 36

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs VC

Sair da comparação
VC Versão Católica
1 “ಆದ್ದರಿಂದ ಬೆಚಲೇಲನೂ ಒಹೊಲೀಯಾಬನೂ ಮತ್ತು ಇತರ ಎಲ್ಲಾ ನಿಪುಣರೂ ಯೆಹೋವನು ಆಜ್ಞಾಪಿಸಿದ ಕೆಲಸವನ್ನು ಮಾಡಬೇಕು. ಈ ಪವಿತ್ರಸ್ಥಳವನ್ನು ಕಟ್ಟುವುದಕ್ಕಾಗಿ ಅವಶ್ಯವಿರುವ ಎಲ್ಲಾ ಸೂಕ್ಷ್ಮವಾದ ಕೆಲಸವನ್ನು ಮಾಡುವುದಕ್ಕೆ ಯೆಹೋವನು ಈ ಜನರಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಅನುಗ್ರಹಿಸಿದ್ದಾನೆ.”
1 Beseleel, Ooliab e todos os homens prudentes que o Senhor dotou de inteligência e habilidade, para saberem executar todos os trabalhos necessários ao serviço do santuário, conformaram-se inteiramente às instruções recebidas do Senhor.
2 ಬಳಿಕ ಮೋಶೆಯು ಬೆಚಲೇಲನನ್ನೂ ಒಹೊಲೀಯಾಬನನ್ನೂ ಮತ್ತು ಯೆಹೋವನಿಂದ ವಿಶೇಷ ಜ್ಞಾನ ಹೊಂದಿದ ಇತರ ಎಲ್ಲಾ ನಿಪುಣರನ್ನೂ ಕರೆದನು. ಕೆಲಸದಲ್ಲಿ ಸಹಾಯಮಾಡಲು ಇವರು ಬಯಸಿದ್ದರಿಂದ ಬಂದರು.
2 Moisés chamou Beseleel, Ooliab e todos os homens prudentes que o Senhor tinha dotado de inteligência, todos os que eram impelidos pelo seu coração a empreender a execução desse trabalho.
3 ಇಸ್ರೇಲರು ಕಾಣಿಕೆಗಳಾಗಿ ತಂದ ವಸ್ತುಗಳನ್ನೆಲ್ಲಾ ಮೋಶೆಯು ಅವರಿಗೆ ಕೊಟ್ಟನು. ಅವರು ದೇವರ ಪವಿತ್ರಸ್ಥಳವನ್ನು ಕಟ್ಟುವುದಕ್ಕಾಗಿ ಈ ವಸ್ತುಗಳನ್ನು ಉಪಯೋಗಿಸಿದರು. ಪ್ರತಿ ಮುಂಜಾನೆ ಜನರು ಕಾಣಿಕೆಗಳನ್ನು ತರುತ್ತಲೇ ಇದ್ದರು.
3 Levaram todas as ofertas que os israelitas haviam trazido a Moisés para a execução dos trabalhos necessários ao serviço do santuário. E, como o povo continuasse, cada manhã, a trazer espontaneamente ofertas,
4 ಆಗ ಆ ನಿಪುಣರೆಲ್ಲಾ ತಾವು ಮಾಡುತ್ತಿದ್ದ ಪವಿತ್ರಸ್ಥಳದ ಕೆಲಸವನ್ನು ಬಿಟ್ಟು ಮೋಶೆಯೊಡನೆ ಮಾತಾಡಲು ಹೋದರು. ಅವರು,
4 os homens prudentes que executavam os trabalhos do santuário deixaram cada um a obra que estava fazendo, e vieram dizer a Moisés:
5 “ಜನರು ಬಹಳ ಹೆಚ್ಚಾಗಿ ತಂದಿದ್ದಾರೆ! ಗುಡಾರದ ಕೆಲಸವನ್ನು ಮುಗಿಸುವುದಕ್ಕೆ ನಮಗೆ ಬೇಕಾಗಿರುವುದಕ್ಕಿಂತ ಹೆಚ್ಚಾಗಿ ನಮ್ಮಲ್ಲಿ ಇವೆ!” ಎಂದು ಹೇಳಿದರು.
5 "O povo traz muito mais do que é necessário para a execução do trabalho que o Senhor ordenou".
6 ಆಗ ಮೋಶೆಯು, “ಪವಿತ್ರಸ್ಥಳದ ಕೆಲಸಕ್ಕಾಗಿ ಯಾವ ಪುರುಷನಾಗಲಿ ಸ್ತ್ರೀಯಾಗಲಿ ಇನ್ನು ಮುಂದೆ ಯಾವುದನ್ನೂ ಕಾಣಿಕೆಯಾಗಿ ಸಿದ್ಧಮಾಡಬಾರದು” ಎಂಬ ಸಂದೇಶವನ್ನು ಪಾಳೆಯದಲ್ಲೆಲ್ಲಾ ಕಳುಹಿಸಿದನು. ಆದ್ದರಿಂದ ಜನರು ಹೆಚ್ಚಾಗಿ ಕೊಡುವುದನ್ನು ನಿಲ್ಲಿಸಬೇಕಾಯಿತು.
6 Então, por ordem de Moisés, fez-se no acampamento esta proclamação: "Que ninguém, nem homem nem mulher, traga mais ofertas para o santuário". Assim, o povo foi proibido de trazer mais.
7 ದೇವರ ಪವಿತ್ರಸ್ಥಳವನ್ನು ಕಟ್ಟುವ ಕೆಲಸವನ್ನು ಮುಗಿಸುವುದಕ್ಕೆ ಬೇಕಾಗಿರುವುದಕ್ಕಿಂತಲೂ ಹೆಚ್ಚಾಗಿ ಜನರು ತಂದಿದ್ದರು.
7 O material trazido era mais que suficiente para tudo o que havia a fazer.
8 ತರುವಾಯ ನಿಪುಣರು ಪವಿತ್ರಗುಡಾರವನ್ನು ಮಾಡಲು ಪ್ರಾರಂಭಿಸಿದರು. ಅವರು ಶ್ರೇಷ್ಠ ನಾರುಬಟ್ಟೆಯಿಂದಲೂ ನೀಲಿ, ನೇರಳೆ, ಕೆಂಪು ದಾರಗಳಿಂದಲೂ ಹತ್ತು ಪರದೆಗಳನ್ನು ಮಾಡಿದರು. ಅವರು ಕೆರೂಬಿಗಳ ಚಿತ್ರಗಳನ್ನು ಪರದೆಗಳಲ್ಲಿ ಕಸೂತಿ ಹಾಕಿದರು.
8 Os mais hábeis entre os operários construíram o tabernáculo: dez cortinas de linho fino retorcido, púrpura violeta e escarlate, e carmesim com querubins artisticamente bordados.
9 ಪ್ರತಿ ಪರದೆಯೂ ಒಂದೇ ಅಳತೆಯುಳ್ಳದ್ದಾಗಿ ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇತ್ತು.
9 O comprimento de cada cortina era de vinte e oito côvados, sua largura de quatro côvados; e tinham todas as mesmas dimensões.
10 ಕೆಲಸಗಾರರು ಪರದೆಗಳನ್ನು ಒಟ್ಟಾಗಿ ಜೋಡಿಸಿ ಪರದೆಗಳ ಎರಡು ಭಾಗಗಳನ್ನಾಗಿ ಮಾಡಿದರು. ಒಂದು ಭಾಗದಲ್ಲಿ ಐದು ಪರದೆಗಳನ್ನೂ ಇನ್ನೊಂದು ಭಾಗದಲ್ಲಿ ಐದು ಪರದೆಗಳನ್ನೂ ಒಟ್ಟಾಗಿ ಜೋಡಿಸಿದರು.
10 Juntaram as cortinas cinco por cinco.
11 ಬಳಿಕ ಅವರು ಒಂದು ಗುಂಪಿನ ಕೊನೆಯ ಪರದೆಯ ಅಂಚಿನಲ್ಲಿ ಕುಣಿಕೆಗಳನ್ನು ಮಾಡಲು ನೀಲಿಬಟ್ಟೆಯನ್ನು ಉಪಯೋಗಿಸಿದರು. ಇನ್ನೊಂದು ಗುಂಪಿನಲ್ಲಿದ್ದ ಕೊನೆಯ ಪರದೆಯಲ್ಲೂ ಹಾಗೆಯೇ ಮಾಡಿದರು.
11 Laços de púrpura violeta foram colocados na orla da cortina que rematava esses dois grupos.
12 ಒಂದು ಗುಂಪಿನ ಕೊನೆಯ ಪರದೆಯಲ್ಲೂ ಐವತ್ತು ಕುಣಿಕೆಗಳಿದ್ದವು. ಇನ್ನೊಂದು ಗುಂಪಿನ ಕೊನೆಯ ಪರದೆಯಲ್ಲೂ ಐವತ್ತು ಕುಣಿಕೆಗಳಿದ್ದವು. ಕುಣಿಕೆಗಳನ್ನು ಒಂದಕ್ಕೊಂದು ಎದುರಾಗಿ ಇರಿಸಿದರು.
12 Foram postos cinqüenta laços na primeira cortina, e cinqüenta na extremidade da última cortina do segundo grupo, situadas bem em face umas das outras.
13 ಬಳಿಕ ಅವರು ಐವತ್ತು ಚಿನ್ನದ ಬಳೆಗಳನ್ನು ಮಾಡಿ ಎರಡು ಪರದೆಗಳನ್ನು ಒಟ್ಟಾಗಿ ಸೇರಿಸಿದರು. ಹೀಗೆ ಪವಿತ್ರಗುಡಾರವು ಜೋಡಿಸಲ್ಪಟ್ಟು ಒಂದೇ ಗುಡಾರವಾಯಿತು.
13 As cortinas foram presas urnas às outras por meio de cinqüenta colchetes de ouro, de modo que o tabernáculo formou um todo.
14 ಬಳಿಕ ಕೆಲಸಗಾರರು ಪವಿತ್ರಗುಡಾರವನ್ನು ಹೊದಿಸುವುದಕ್ಕೆ ಇನ್ನೊಂದು ಗುಡಾರವನ್ನು ಮಾಡಿದರು. ಈ ಗುಡಾರವನ್ನು ಮಾಡಲು ಹನ್ನೊಂದು ಪರದೆಗಳನ್ನು ಉಪಯೋಗಿಸಿದರು. ಅವರು ಆಡುಕೂದಲಿನಿಂದ ಈ ಪರದೆಗಳನ್ನು ಮಾಡಿದರು.
14 Fizeram-se, em seguida, cortinas de peles de cabra, para formar uma tenda sobre o tabernáculo; foram feitas onze dessas cortinas.
15 ಈ ಎಲ್ಲಾ ಪರದೆಗಳು ಒಂದೇ ಅಳತೆಯುಳ್ಳದ್ದಾಗಿ ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇದ್ದವು.
15 O comprimento de uma delas era de trinta côvados, e sua largura de quarenta côvados; e tinham todas as mesmas dimensões.
16 ಕೆಲಸಗಾರರು ಐದು ಪರದೆಗಳನ್ನು ಒಟ್ಟಾಗಿ ಸೇರಿಸಿ ಒಂದು ಭಾಗವನ್ನಾಗಿ ಮಾಡಿದರು. ಬಳಿಕ ಅವರು ಇತರ ಆರು ಪರದೆಗಳನ್ನು ಒಟ್ಟಾಗಿ ಸೇರಿಸಿ ಇನ್ನೊಂದು ಭಾಗವನ್ನಾಗಿ ಮಾಡಿದರು.
16 Cinco dessas cortinas foram juntadas de um lado, e seis de outro.
17 ಅವರು ಒಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನು ಇಟ್ಟರು. ಇನ್ನೊಂದು ಭಾಗದ ಕೊನೆಯ ಪರದೆಯಲ್ಲಿಯೂ ಅದೇ ರೀತಿಯಾಗಿ ಮಾಡಿದರು.
17 Cinqüenta colchetes foram colocados na orla da última cortina de um desses grupos e cinqüenta na orla da última cortina do segundo.
18 ಕೆಲಸಗಾರರು ಎರಡು ಪರದೆಗಳನ್ನು ಒಟ್ಟಾಗಿ ಜೋಡಿಸಲು ಐವತ್ತು ತಾಮ್ರದ ಬಳೆಗಳನ್ನು ಮಾಡಿದರು. ಇದು ಸಮಸ್ತವನ್ನು ಒಂದೇ ಗುಡಾರವಾಗುವಂತೆ ಮಾಡಿತು.
18 Depois fizeram cinqüenta colchetes de bronze para unir as peças, de modo que a tenda formasse um só todo.
19 ಬಳಿಕ ಅವರು ಪವಿತ್ರಗುಡಾರಕ್ಕೆ ಎರಡು ಮೇಲ್ಹೊದಿಕೆಗಳನ್ನು ಮಾಡಿದರು. ಒಂದು ಮೇಲ್ಹೊದಿಕೆಯನ್ನು ಕೆಂಪು ಬಣ್ಣದ ಕುರಿದೊಗಲುಗಳಿಂದ ಮಾಡಿದರು; ಮತ್ತೊಂದು ಮೇಲ್ಹೊದಿಕೆಯನ್ನು ಕಡಲುಹಂದಿಯ ತೊಗಲುಗಳಿಂದ ಮಾಡಿದರು.
19 Foi feita a cobertura da tenda de peles de carneiros tintas de vermelho, sobre as quais se meteu uma cobertura de peles de golfinhos.
20 ಬಳಿಕ ಕೆಲಸಗಾರರು ಪವಿತ್ರಗುಡಾರದ ಚೌಕಟ್ಟುಗಳನ್ನು ಜಾಲೀಮರದಿಂದ ಮಾಡಿದರು.
20 As tábuas do tabernáculo foram feitas de madeira de acácia, colocadas verticalmente.
21 ಪ್ರತಿಯೊಂದು ಚೌಕಟ್ಟು ಹತ್ತು ಮೊಳ ಉದ್ದವಾಗಿಯೂ ಒಂದು ಮೊಳ ಅಗಲವಾಗಿಯೂ ಇತ್ತು.
21 As tábuas tinham dez côvados de comprimento e um côvado e meio de largura.
22 ಎರಡು ಕಂಬಗಳಿಗೆ ಎರಡು ಅಡ್ಡಕಂಬಗಳನ್ನು ಜೋಡಿಸಿ ಚೌಕಟ್ಟನ್ನು ಮಾಡಲಾಗಿತ್ತು. ಪವಿತ್ರಗುಡಾರದ ಪ್ರತಿ ಚೌಕಟ್ಟನ್ನು ಅದೇ ರೀತಿಯಲ್ಲಿ ಮಾಡಲಾಗಿತ್ತು.
22 Cada tábua tinha dois encaixes ligados um ao outro: assim se fez com todas as tábuas do tabernáculo.
23 ಪವಿತ್ರಗುಡಾರದ ದಕ್ಷಿಣ ಭಾಗದಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಮಾಡಿದರು.
23 Fizeram para o lado meridional do tabernáculo, ao sul, vinte tábuas.
24 ಬಳಿಕ ಅವರು ಚೌಕಟ್ಟುಗಳಿಗೆ ನಲವತ್ತು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿದರು. ಒಂದು ನಿಲುವುಪೆಟ್ಟಿಗೆಗೆ ಒಂದರಂತೆ ಪ್ರತಿ ಚೌಕಟ್ಟಿಗೆ ಎರಡು ಗದ್ದಿಗೇಕಲ್ಲುಗಳಿದ್ದವು.
24 Meteram sob essas vinte tábuas quarenta suportes de prata, dois sob cada tábua, para seus dois encaixes.
25 ಅವರು ಪವಿತ್ರಗುಡಾರದ ಇನ್ನೊಂದು ಕಡೆಯ ಉತ್ತರ ಭಾಗದಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಮಾಡಿದರು.
25 Para o segundo lado do tabernáculo, ao norte, fizeram vinte tábuas,
26 ಅವರು ಪ್ರತಿ ಚೌಕಟ್ಟಿಗೆ ಎರಡು ಗದ್ದಿಗೇಕಲ್ಲುಗಳಂತೆ ನಲವತ್ತು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿದರು.
26 com quarenta suportes de prata, à razão de dois por tábua.
27 ಅವರು ಪವಿತ್ರಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮ ಭಾಗಕ್ಕೆ ಇನ್ನೂ ಆರು ಚೌಕಟ್ಟುಗಳನ್ನು ಮಾಡಿದರು.
27 Para o fundo do tabernáculo, ao ocidente, fizeram seis tábuas.
28 ಪವಿತ್ರಗುಡಾರದ ಹಿಂಭಾಗದಲ್ಲಿನ ಮೂಲೆಗಳಿಗೂ ಎರಡು ಚೌಕಟ್ಟುಗಳನ್ನು ಮಾಡಿದರು.
28 Para os ângulos do tabernáculo, ao fundo, fizeram duas tábuas.
29 ಈ ಚೌಕಟ್ಟುಗಳು ಕೆಳಭಾಗಕ್ಕೆ ಒಟ್ಟಾಗಿ ಸೇರಿಸಲ್ಪಟ್ಟಿದ್ದವು; ತುದಿಯಲ್ಲಿ ಒಂದು ಬಳೆಯು ಮೂಲೆ ಚೌಕಟ್ಟುಗಳನ್ನು ಒಟ್ಟಿಗೆ ಹಿಡಿದುಕೊಂಡಿತ್ತು. ಅವರು ಎರಡೂ ಮೂಲೆಗಳಿಗೆ ಹಾಗೆಯೇ ಮಾಡಿದರು.
29 Elas eram emparelhadas desde a base, formando juntas um só todo até o alto, na primeira argola. O mesmo se fez com as duas tábuas colocadas nos ângulos.
30 ಪವಿತ್ರಗುಡಾರದ ಪಶ್ಚಿಮ ದಿಕ್ಕಿನಲ್ಲಿ ಒಟ್ಟು ಎಂಟು ಚೌಕಟ್ಟುಗಳಿದ್ದವು. ಪ್ರತಿ ಚೌಕಟ್ಟಿಗೆ ಎರಡು ಗದ್ದಿಗೇಕಲ್ಲುಗಳಂತೆ ಹದಿನಾರು ಬೆಳ್ಳಿಯ ಗದ್ದಿಗೇಕಲ್ಲುಗಳಿದ್ದವು.
30 Havia, pois, oito tábuas com seus suportes de prata, em número de dezesseis, dois sob cada tábua.
31 ಬಳಿಕ ಕೆಲಸಗಾರರು ಚೌಕಟ್ಟುಗಳಿಗೆ ಅಗುಳಿಗಳನ್ನು ಮಾಡಲು ಜಾಲೀಮರವನ್ನು ಉಪಯೋಗಿಸಿದರು. ಪವಿತ್ರಗುಡಾರದ ಮೊದಲಿನ ಕಡೆಯಲ್ಲಿ ಐದು ಅಗುಳಿಗಳೂ
31 Fizeram em seguida cinco travessas de madeira de acácia para as tábuas de um dos lados do tabernáculo,
32 ಇನ್ನೊಂದು ಕಡೆಯಲ್ಲಿ ಐದು ಅಗುಳಿಗಳೂ ಪವಿತ್ರಗುಡಾರದ ಹಿಂಭಾಗದಲ್ಲಿ ಅಂದರೆ ಪಶ್ಚಿಮ ಭಾಗದಲ್ಲಿ ಐದು ಅಗುಳಿಗಳೂ ಇದ್ದವು.
32 cinco para as tábuas do segundo lado e cinco para as que estavam do lado posterior do tabernáculo, ao ocidente.
33 ಚೌಕಟ್ಟುಗಳನ್ನು ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೂ ಹಾದುಹೋಗುವಂತೆ ಅವರು ಮಧ್ಯದ ಅಗುಳಿಯನ್ನು ಮಾಡಿದರು.
33 A travessa central estendia-se ao longo das tábuas, de uma extremidade à outra.
34 ಅವರು ಈ ಚೌಕಟ್ಟುಗಳನ್ನು ಚಿನ್ನದಿಂದ ಹೊದಿಸಿದರು. ಅಗುಳಿಗಳಿಗಾಗಿ ಚಿನ್ನದ ಕೊಂಡಿಗಳನ್ನು ಮಾಡಿದರು; ಅಗುಳಿಗಳನ್ನು ಚಿನ್ನದಿಂದ ಹೊದಿಸಿದರು.
34 Recobriram de ouro essas tábuas e se lhes puseram argolas de ouro, pelas quais passaram as travessas, recobertas também elas de ouro.
35 ಮಹಾಪವಿತ್ರಸ್ಥಳದ ದ್ವಾರಕ್ಕೆ ವಿಶೇಷ ಪರದೆಯನ್ನು ಮಾಡಲು ಅವರು ಶ್ರೇಷ್ಠ ನಾರುಬಟ್ಟೆಯನ್ನು, ನೀಲಿ, ನೇರಳೆ, ಕೆಂಪುದಾರಗಳನ್ನು ಉಪಯೋಗಿಸಿದರು. ಅವರು ಕೆರೂಬಿಗಳ ಚಿತ್ರಗಳನ್ನು ಪರದೆಯಲ್ಲಿ ಕಸೂತಿ ಹಾಕಿದರು.
35 Foi feito o véu de púrpura violeta e escarlate, de carmesim e linho retorcido, onde foram bordados artisticamente alguns querubins.
36 ಅವರು ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿದರು ಮತ್ತು ಕಂಬಗಳನ್ನು ಚಿನ್ನದಿಂದ ಹೊದಿಸಿದರು. ಬಳಿಕ ಅವರು ಕಂಬಗಳಿಗೆ ಚಿನ್ನದ ಕೊಂಡಿಗಳನ್ನು ಮಾಡಿದರು. ಅವರು ಕಂಬಗಳಿಗೆ ನಾಲ್ಕು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿದರು.
36 Fizeram para ele quatro colunas de madeira de acácia revestidas de ouro, com pregos de ouro, e fundiram para elas quatro pedestais de prata.
37 ಬಳಿಕ ಗುಡಾರದ ಬಾಗಿಲಿಗೆ ಪರದೆಯನ್ನು ಮಾಡಿದರು. ಅವರು ಈ ಪರದೆಯನ್ನು ಮಾಡಲು ನೀಲಿ, ನೇರಳೆ, ಕೆಂಪುದಾರವನ್ನು, ಶ್ರೇಷ್ಠ ನಾರುಬಟ್ಟೆಯನ್ನು ಉಪಯೋಗಿಸಿದರು ಮತ್ತು ಅವರು ಚಿತ್ರಗಳನ್ನು ಅದರಲ್ಲಿ ಹೆಣೆದರು.
37 Para a entrada da tenda foi feito o véu de púrpura violeta e escarlate, de carmesim e linho retorcido, artisticamente bordado.
38 ಬಳಿಕ ಅವರು ಐದು ಕಂಬಗಳನ್ನೂ ಬಾಗಿಲಿನ ಪರದೆಗೆ ಕೊಂಡಿಗಳನ್ನೂ ಮಾಡಿದರು. ಅವರು ಕಂಬಗಳ ತುದಿಯನ್ನು ಮತ್ತು ಪರದೆಯ ಕೋಲುಗಳನ್ನು ಚಿನ್ನದಿಂದ ಹೊದಿಸಿದರು. ಅವರು ಕಂಬಗಳಿಗೆ ಐದು ತಾಮ್ರದ ಗದ್ದಿಗೇಕಲ್ಲುಗಳನ್ನು ಮಾಡಿದರು.
38 Fizeram, para suspender esse véu, cinco colunas munidas de ganchos; recobriram de ouro seus capitéis e suas vergas; seus cinco pedestais foram feitos de bronze.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Êxodo 36, comparar traduções ou montar um estudo — tudo direto pelo WhatsApp.