Êxodo 37
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NTLH
1 ಬೆಚಲೇಲನು ಜಾಲೀಮರದಿಂದ ಪವಿತ್ರ ಪೆಟ್ಟಿಗೆಯನ್ನು ಮಾಡಿದನು. ಪೆಟ್ಟಿಗೆಯು ಎರಡೂವರೆ ಮೊಳ ಉದ್ದ ಒಂದೂವರೆ ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರವಿತ್ತು.
1 Bezalel fez a arca da aliança de madeira de acácia; a arca media um metro e dez de comprimento por sessenta e seis centímetros de largura e sessenta e seis de altura.
2 ಪೆಟ್ಟಿಗೆಯ ಹೊರಗಿನ ಮತ್ತು ಒಳಗಿನ ಭಾಗವನ್ನು ಅಪ್ಪಟ ಬಂಗಾರದಿಂದ ಹೊದಿಸಿದನು. ಬಳಿಕ ಪೆಟ್ಟಿಗೆಯ ಸುತ್ತಲೂ ಚಿನ್ನದ ಗೋಟು ಕಟ್ಟಿಸಿದನು.
2 Ele a revestiu de ouro puro por dentro e por fora e pôs em toda a volta um remate de ouro.
3 ಅವನು ಚಿನ್ನದ ನಾಲ್ಕು ಬಳೆಗಳನ್ನು ಮಾಡಿಸಿ ಪೆಟ್ಟಿಗೆಯ ನಾಲ್ಕು ಮೂಲೆಗಳಲ್ಲಿ ಇರಿಸಿದನು. ಈ ಬಳೆಗಳು ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಉಪಯೋಗಿಸಲ್ಪಡುತ್ತಿದ್ದವು. ಪ್ರತಿಯೊಂದು ಬದಿಯಲ್ಲೂ ಎರಡು ಬಳೆಗಳಿದ್ದವು.
3 Fez quatro argolas de ouro e as colocou nos quatro pés da arca, ficando duas argolas de cada lado.
4 ಬಳಿಕ ಪೆಟ್ಟಿಗೆಯನ್ನು ಹೊರುವುದಕ್ಕಾಗಿ ಕೋಲುಗಳನ್ನು ಜಾಲೀಮರದಿಂದ ಮಾಡಿಸಿದನು. ಅದನ್ನು ಅಪ್ಪಟ ಬಂಗಾರದಿಂದ ಹೊದಿಸಿದನು.
4 Ele fez cabos de madeira de acácia e os revestiu de ouro.
5 ಪೆಟ್ಟಿಗೆಯ ಪಾರ್ಶ್ವಗಳಲ್ಲಿರುವ ಬಳೆಗಳಲ್ಲಿ ಅವನು ಕೋಲುಗಳನ್ನು ಸೇರಿಸಿದನು.
5 Depois enfiou os cabos nas argolas nos dois lados da arca, para que pudesse ser carregada.
6 ಬಳಿಕ ಅವನು ಅಪ್ಪಟ ಬಂಗಾರದ ಕೃಪಾಸನವನ್ನು ಮಾಡಿಸಿದನು. ಅದು ಎರಡೂವರೆ ಮೊಳ ಉದ್ದ ಮತ್ತು ಒಂದೂವರೆ ಮೊಳ ಅಗಲ ಇತ್ತು.
6 Bezalel fez uma tampa de ouro puro de um metro e dez de comprimento por sessenta e seis centímetros de largura.
7 ಬಳಿಕ ಬೆಚಲೇಲನು ಬಂಗಾರವನ್ನು ಸುತ್ತಿಗೆಯಿಂದ ಕೆತ್ತಿ ಎರಡು ಕೆರೂಬಿಗಳ ಆಕಾರಗಳನ್ನು ಮಾಡಿದನು. ಅವನು ಕೆರೂಬಿದೂತರನ್ನು ಕೃಪಾಸನದ ಕೊನೆಗಳಲ್ಲಿ ಇಟ್ಟನು.
7 Ele fez dois querubins de ouro batido,
8 ಒಂದು ಕೆರೂಬಿಯನ್ನು ಕೃಪಾಸನದ ಒಂದು ಕೊನೆಯಲ್ಲೂ ಇನ್ನೊಂದನ್ನು ಮತ್ತೊಂದು ಕೊನೆಯಲ್ಲೂ ಇಟ್ಟನು. ಅವುಗಳನ್ನು ಒಟ್ಟಾಗಿ ಕೃಪಾಸನಕ್ಕೆ ಜೋಡಿಸಿ ಒಂದೇ ವಸ್ತುವನ್ನಾಗಿ ಮಾಡಿದನು.
8 um para cada ponta da tampa. Ele os fez de tal modo, que formavam uma só peça com a tampa.
9 ಕೆರೂಬಿಗಳ ರೆಕ್ಕೆಗಳು ಆಕಾಶದ ಕಡೆಗೆ ಚಾಚಿದ್ದವು. ಅವುಗಳು ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚಿದ್ದವು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿದ್ದವು.
9 Os querubins ficavam de frente um para o outro, olhando para a tampa, e as suas asas abertas cobriam a tampa.
10 ತರುವಾಯ, ಅವನು ಜಾಲೀಮರದಿಂದ ಮೇಜನ್ನು ಮಾಡಿದನು. ಮೇಜು ಎರಡು ಮೊಳ ಉದ್ದ, ಒಂದು ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರ ಇತ್ತು.
10 Bezalel fez uma mesa de madeira de acácia, com as seguintes medidas: oitenta e oito centímetros de comprimento por quarenta e quatro de largura e sessenta e seis de altura.
11 ಅವನು ಮೇಜನ್ನು ಅಪ್ಪಟ ಬಂಗಾರದಿಂದ ಹೊದಿಸಿದನು; ಮೇಜಿನ ಸುತ್ತಲೂ ಚಿನ್ನದ ಗೋಟನ್ನು ಕಟ್ಟಿಸಿದನು.
11 Ele revestiu de ouro puro a mesa e colocou um remate de ouro em volta dela.
12 ಬಳಿಕ ಅವನು ಮೇಜಿನ ಸುತ್ತಲೂ ಮೂರು ಇಂಚು ಅಗಲದ ಚೌಕಟ್ಟನ್ನು ಮಾಡಿದನು; ಆ ಚೌಕಟ್ಟಿಗೆ ಚಿನ್ನದ ಗೋಟನ್ನು ಕಟ್ಟಿಸಿದನು.
12 Também fez em volta da mesa um friso de quatro dedos de largura e pôs um remate de ouro em volta do friso.
13 ಬಳಿಕ ಅವನು ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಿರುವ ನಾಲ್ಕು ಮೂಲೆಗಳಲ್ಲಿ ಅವುಗಳನ್ನು ಇರಿಸಿದನು.
13 Fez quatro argolas de ouro e as pôs nos quatro cantos, perto dos quatro pés.
14 ಅವನು ಬಳೆಗಳನ್ನು ಮೇಜಿನ ತುದಿಯಲ್ಲಿರುವ ಚೌಕಟ್ಟಿಗೆ ಹತ್ತಿರವಾಗಿ ಇರಿಸಿದನು. ಕೋಲುಗಳಿಂದ ಮೇಜನ್ನು ಹೊರುವುದಕ್ಕಾಗಿ ಈ ಬಳೆಗಳು ಇದ್ದವು.
14 Perto do friso estavam as argolas por onde passavam os cabos que eram usados para se carregar a mesa.
15 ಬಳಿಕ ಮೇಜನ್ನು ಹೊರುವುದಕ್ಕಾಗಿ ಉಪಯೋಗಿಸಲ್ಪಡುತ್ತಿದ್ದ ಕೋಲುಗಳನ್ನು ಜಾಲೀಮರದಿಂದ ಮಾಡಿದನು. ಕೋಲುಗಳನ್ನು ಅಪ್ಪಟ ಬಂಗಾರದಿಂದ ಹೊದಿಸಿದನು.
15 Ele fez os cabos de madeira de acácia e os revestiu de ouro.
16 ಬಳಿಕ ಅವನು ಮೇಜಿನಲ್ಲಿ ಉಪಯೋಗಿಸಲ್ಪಡುತ್ತಿದ್ದ ಎಲ್ಲಾ ವಸ್ತುಗಳನ್ನು ಮಾಡಿದನು. ಅವನು ಅಪ್ಪಟ ಬಂಗಾರದ ತಟ್ಟೆ, ಚಮಚ, ಬೋಗುಣಿ ಮತ್ತು ಹೂಜೆಗಳನ್ನು ಮಾಡಿದನು. ಬೋಗುಣಿ ಮತ್ತು ಹೂಜೆಗಳು ಪಾನದ್ರವ್ಯ ಸಮರ್ಪಣೆಗಳನ್ನು ಅರ್ಪಿಸುವುದಕ್ಕೆ ಉಪಯುಕ್ತವಾಗಿದ್ದವು.
16 Fez também de ouro puro as vasilhas para a mesa, isto é, os pratos, os copos, as taças e as jarras que eram usados para as ofertas de vinho.
17 ಬಳಿಕ ಅವನು ದೀಪಸ್ತಂಭವನ್ನು ಮಾಡಿದನು. ಅವನು ಅಪ್ಪಟ ಬಂಗಾರದಿಂದ ಕಂಬವನ್ನು ಮಾಡಿದನು. ತರುವಾಯ ಹೂವು, ಮೊಗ್ಗು ಮತ್ತು ದಳಗಳನ್ನು ಮಾಡಿ ಜೋಡಿಸಿದನು. ಹೀಗೆ ಅವು ಪುಷ್ಪಾಲಂಕಾರವಾದ ಒಂದೇ ವಸ್ತುವಾಯಿತು.
17 Bezalel fez de ouro puro batido o candelabro , a sua base e a sua haste. As flores que enfeitavam o candelabro, com os seus botões e as suas pétalas, formavam uma só peça com ele.
18 ದೀಪಸ್ತಂಭಕ್ಕೆ ಆರು ಕೊಂಬೆಗಳಿದ್ದವು. ಮೂರು ಕೊಂಬೆಗಳು ಒಂದು ಕಡೆಯಲ್ಲೂ ಇನ್ನು ಮೂರು ಕೊಂಬೆಗಳು ಇನ್ನೊಂದು ಕಡೆಯಲ್ಲಿಯೂ ಇದ್ದವು.
18 Dos seus lados saíam seis braços, três de um lado e três do outro.
19 ಪ್ರತಿಯೊಂದು ಕೊಂಬೆಗಳಲ್ಲಿ ಮೂರುಮೂರು ಹೂವುಗಳಿದ್ದವು. ಈ ಹೂವುಗಳು ಮೊಗ್ಗು, ದಳಗಳಿಂದ ಕೂಡಿದ ಬಾದಾಮಿಹೂವುಗಳಂತೆ ಮಾಡಲ್ಪಟ್ಟವು.
19 Cada um dos seis braços tinha três flores com o formato de flor de amendoeira, com os seus botões e as suas pétalas.
20 ದೀಪಸ್ತಂಭದ ಕಂಬದಲ್ಲಿ ಇನ್ನೂ ನಾಲ್ಕು ಹೂವುಗಳಿದ್ದವು. ಅವುಗಳು ಸಹ ಮೊಗ್ಗು, ದಳಗಳಿಂದ ಕೂಡಿದ ಬಾದಾಮಿಯ ಹೂವುಗಳಂತೆ ಮಾಡಲ್ಪಟ್ಟವು.
20 A haste do candelabro tinha quatro flores com o formato de flor de amendoeira, com os seus botões e as suas pétalas.
21 ಕಂಬದ ಪ್ರತಿಯೊಂದು ಕಡೆಯಲ್ಲಿ ಮೂರುಮೂರು ಕೊಂಬೆಗಳಂತೆ ಆರು ಕೊಂಬೆಗಳಿದ್ದವು. ಕೊಂಬೆಗಳು ಕವಲೊಡೆದಿರುವ ಮೂರು ಸ್ಥಳಗಳಲ್ಲೂ ಒಂದೊಂದು ಹೂವು ಇತ್ತು. ಆ ಹೂವಿಗೆ ಮೊಗ್ಗುಗಳು ಮತ್ತು ದಳಗಳು ಇದ್ದವು.
21 Havia um botão de amendoeira debaixo de cada um dos três pares de braços.
22 ಹೂವು ಮತ್ತು ಕೊಂಬೆಗಳಿಂದ ಕೂಡಿದ ಇಡೀ ದೀಪಸ್ತಂಭವು ಅಪ್ಪಟ ಬಂಗಾರದಿಂದ ಅಖಂಡವಾಗಿ ಮಾಡಲ್ಪಟ್ಟಿತ್ತು.
22 Os botões, os braços e o candelabro formavam uma só peça de ouro puro batido.
23 ಅವನು ಈ ದೀಪಸ್ತಂಭಕ್ಕೆ ಏಳು ಹಣತೆಗಳನ್ನು ಮಾಡಿದನು; ಬಳಿಕ ಅಪ್ಪಟ ಬಂಗಾರದಿಂದ ಬತ್ತಿಗಳನ್ನು ಸರಿಪಡಿಸುವ ಕತ್ತರಿಗಳನ್ನೂ ಹರಿವಾಣಗಳನ್ನೂ ಮಾಡಿದನು.
23 Bezalel também fez sete lamparinas para o candelabro; as tesouras de cortar os pavios das lamparinas e os cinzeiros eram de ouro puro.
24 ದೀಪಸ್ತಂಭವನ್ನು ಮತ್ತು ಅದರ ಉಪಕರಣಗಳನ್ನು ಮಾಡಲು ಎಪ್ಪತ್ತೈದು ಪೌಂಡು ಅಪ್ಪಟ ಬಂಗಾರವನ್ನು ಉಪಯೋಗಿಸಿದನು.
24 Ele usou trinta e quatro quilos de ouro puro para fazer o candelabro e todas as peças que o acompanhavam.
25 ಅವನು ಧೂಪವೇದಿಕೆಯನ್ನು ಜಾಲೀಮರದಿಂದ ಮಾಡಿದನು. ಧೂಪವೇದಿಕೆಯು ಚೌಕವಾಗಿತ್ತು. ಅದು ಒಂದು ಮೊಳ ಉದ್ದ, ಒಂದು ಮೊಳ ಅಗಲ ಮತ್ತು ಎರಡು ಮೊಳ ಎತ್ತರ ಇತ್ತು. ಧೂಪವೇದಿಕೆಯಲ್ಲಿ ನಾಲ್ಕು ಕೊಂಬುಗಳಿದ್ದವು. ಪ್ರತಿ ಮೂಲೆಯಲ್ಲಿಯೂ ಒಂದೊಂದು ಕೊಂಬುಗಳಿದ್ದವು. ಈ ಕೊಂಬುಗಳು ಒಟ್ಟಾಗಿ ಧೂಪವೇದಿಕೆಗೆ ಜೋಡಿಸಲ್ಪಟ್ಟು ಅವಿಭಾಜ್ಯವಾಗಿತ್ತು.
25 Bezalel fez um altar de madeira de acácia para queimar incenso em cima dele. O altar era quadrado, medindo quarenta e cinco centímetros de comprimento por quarenta e cinco de largura; e tinha noventa centímetros de altura. As pontas, nos quatro cantos, formavam uma só peça com o altar.
26 ಅವನು ಅಪ್ಪಟ ಬಂಗಾರದಿಂದ ಮೇಲ್ಭಾಗವನ್ನೂ ಎಲ್ಲಾ ಪಾರ್ಶ್ವಗಳನ್ನೂ ಕೊಂಬುಗಳನ್ನೂ ಹೊದಿಸಿದನು. ಬಳಿಕ ಅವನು ಧೂಪವೇದಿಕೆಯ ಸುತ್ತಲೂ ಚಿನ್ನದ ಗೋಟನ್ನು ಕಟ್ಟಿಸಿದನು.
26 Bezalel revestiu de ouro puro a tampa, os quatro lados e as pontas e colocou um remate de ouro em volta do altar.
27 ಅವನು ಧೂಪವೇದಿಕೆಗೆ ಎರಡು ಚಿನ್ನದ ಬಳೆಗಳನ್ನು ಮಾಡಿಸಿ ಗೋಟಿನ ಕೆಳಗೆ ವೇದಿಕೆಯ ಪ್ರತಿಯೊಂದು ಬದಿಯಲ್ಲಿ ಇರಿಸಿದನು. ಈ ಚಿನ್ನದ ಬಳೆಗಳು ವೇದಿಕೆಯನ್ನು ಕೋಲುಗಳ ಮೂಲಕ ಹೊರುವುದಕ್ಕೆ ಉಪಯುಕ್ತವಾಗಿದ್ದವು.
27 Também fez duas argolas de ouro e as colocou debaixo do remate, uma de cada lado. Por dentro das argolas passavam os cabos que eram usados para carregar o altar.
28 ಅವನು ಜಾಲೀಮರದಿಂದ ಕೋಲುಗಳನ್ನು ಮಾಡಿಸಿ ಚಿನ್ನದಿಂದ ಅವುಗಳನ್ನು ಹೊದಿಸಿದನು.
28 Os cabos foram feitos de madeira de acácia e revestidos de ouro.
29 ತರುವಾಯ ಅವನು ಪವಿತ್ರವಾದ ಅಭಿಷೇಕತೈಲವನ್ನು ಮಾಡಿದನು. ಅವನು ಶುದ್ಧವಾದ ಪರಿಮಳಧೂಪವನ್ನು ಮಾಡಿದನು. ಸುಗಂಧದ್ರವ್ಯಕಾರರ ವಿದ್ಯೆಯ ಮೇರೆಗೆ ಈ ವಸ್ತುಗಳನ್ನು ಮಾಡಲಾಯಿತು.
29 Bezalel preparou o azeite sagrado de ungir e o incenso puro de cheiro agradável, misturado como perfume.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Êxodo 37, comparar traduções ou montar um estudo — tudo direto pelo WhatsApp.