Êxodo 38
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs VC
1 ತರುವಾಯ ಬೆಚಲೇಲನು ಯಜ್ಞವೇದಿಕೆಯನ್ನು ಜಾಲೀಮರದಿಂದ ಮಾಡಿದನು. ಈ ವೇದಿಕೆಯು ಸರ್ವಾಂಗಹೋಮಗಳನ್ನು ಅರ್ಪಿಸುವುದಕ್ಕೆ ಕಟ್ಟಲ್ಪಟ್ಟಿತ್ತು. ವೇದಿಕೆಯು ಚೌಕವಾಗಿತ್ತು. ಅದು ಐದು ಮೊಳ ಉದ್ದ, ಐದು ಮೊಳ ಅಗಲ ಮತ್ತು ಮೂರು ಮೊಳ ಎತ್ತರ ಇತ್ತು.
1 Fez o altar dos holocaustos de madeira de acácia. Seu comprimento foi de cinco côvados, sua largura de cinco côvados {era quadrado}, e sua altura de três côvados.
2 ಅವನು ಯಜ್ಞವೇದಿಕೆಯ ನಾಲ್ಕು ಮೂಲೆಗಳಲ್ಲಿ ಒಂದೊಂದು ಕೊಂಬುಗಳನ್ನು ಇಟ್ಟು ಪ್ರತಿಯೊಂದೂ ಕೊಂಬನ್ನು ಅದರ ಮೂಲೆಗೆ ಸೇರಿಸಿದನು. ಹೀಗಾಗಿ ಪ್ರತಿಯೊಂದೂ ಅಖಂಡವಾದ ಒಂದೇ ವಸ್ತುವಿನಂತಾಯಿತು. ಅವನು ಯಜ್ಞವೇದಿಕೆಯನ್ನು ತಾಮ್ರದಿಂದ ಹೊದಿಸಿದನು.
2 Em seus quatro ângulos pôs cornos, que faziam corpo com o altar; e cobriu-o de bronze.
3 ಬಳಿಕ ವೇದಿಕೆಯಲ್ಲಿ ಉಪಯೋಗಿಸುವ ಎಲ್ಲಾ ಉಪಕರಣಗಳನ್ನು ಅಂದರೆ ಮಡಿಕೆಗಳು, ಸಲಿಕೆಗಳು, ಬೋಗುಣಿಗಳು, ಮುಳ್ಳುಗಳು ಮತ್ತು ಅಗ್ಗಿಷ್ಟಿಗೆಗಳನ್ನು ತಾಮ್ರದಿಂದ ಮಾಡಿದನು.
3 Fez todos os utensílios do altar: os cinzeiros, as pás, as bacias, os garfos e os braseiros; tudo de bronze.
4 ಬಳಿಕ ಅವನು ವೇದಿಕೆಗೆ ತಾಮ್ರದ ಜಾಳಿಗೆಯನ್ನು ಮಾಡಿದನು. ಜಾಳಿಗೆಯು ಹೆಣಿಗೇ ಕೆಲಸದಿಂದ ಮಾಡಲಾಗಿತ್ತು. ಜಾಳಿಗೆಯು ವೇದಿಕೆಯ ಕೆಳಭಾಗದಲ್ಲಿರುವ ಕಟ್ಟೆಯ ಕೆಳಗೆ ಇಡಲ್ಪಟ್ಟಿತ್ತು. ಅದು ಕೆಳಗಿನಿಂದ ವೇದಿಕೆಯ ಅರ್ಧಭಾಗದಷ್ಟು ಮೇಲಕ್ಕೆ ಹೋಯಿತು.
4 Fez no altar uma grelha de bronze em forma de gelosia, que colocou embaixo, sob o rebordo saliente do altar, até a metade de sua altura.
5 ಬಳಿಕ ಅವನು ತಾಮ್ರದ ಬಳೆಗಳನ್ನು ಮಾಡಿದನು. ಈ ಬಳೆಗಳು ವೇದಿಕೆಯನ್ನು ಕೋಲುಗಳಿಂದ ಹೊರುವುದಕ್ಕೆ ಉಪಯುಕ್ತವಾಗಿದ್ದವು. ಅವನು ಬಳೆಗಳನ್ನು ಜಾಳಿಗೆಯ ನಾಲ್ಕು ಮೂಲೆಗಳಲ್ಲಿ ಇಟ್ಟನು.
5 Para os quatro cantos da grelha de bronze, fundiu quatro argolas destinadas a receber os varais.
6 ಬಳಿಕ ಅವನು ಜಾಲೀಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ತಾಮ್ರದಿಂದ ಹೊದಿಸಿದನು.
6 Fez os varais de madeira de acácia, revestidos de bronze.
7 ಅವನು ವೇದಿಕೆಯ ಪಾರ್ಶ್ವಗಳಲ್ಲಿದ್ದ ಬಳೆಗಳಲ್ಲಿ ಕೋಲುಗಳನ್ನು ಸೇರಿಸಿದನು. ಕೋಲುಗಳು ವೇದಿಕೆಯನ್ನು ಹೊರುವುದಕ್ಕಾಗಿ ಉಪಯುಕ್ತವಾಗಿದ್ದವು. ಅವನು ವೇದಿಕೆಯನ್ನು ಪೆಟ್ಟಿಗೆಯಂತೆ ಮಾಡಲು ಹಲಗೆಗಳನ್ನು ಉಪಯೋಗಿಸಿದನು. ಅದು ಟೊಳ್ಳಾಗಿತ್ತು.
7 Introduziu-os nas argolas ao longo do altar para poder transportá-lo. E fez o altar oco, de tábuas.
8 ಅವನು ತಾಮ್ರದಿಂದ ಗಂಗಾಳವನ್ನೂ ಅದರ ಪೀಠವನ್ನೂ ಮಾಡಿದನು. ದೇವದರ್ಶನಗುಡಾರದ ಬಾಗಿಲಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರು ಕೊಟ್ಟ ತಾಮ್ರದ ದರ್ಪಣಗಳನ್ನು ಅದಕ್ಕೆ ಉಪಯೋಗಿಸಿದನು.
8 Fez a bacia de bronze e seu pedestal de bronze, com os espelhos das mulheres que faziam o serviço à entrada da tenda de reunião.
9 ಬಳಿಕ ಅವನು ಅಂಗಳವನ್ನು ಮಾಡಿದನು. ದಕ್ಷಿಣ ಭಾಗದಲ್ಲಿ ನೂರು ಮೊಳ ಉದ್ದದ ಪರದೆಯ ಗೋಡೆಯನ್ನು ಮಾಡಿದನು. ಪರದೆಗಳು ಶ್ರೇಷ್ಠ ನಾರುಬಟ್ಟೆಯಿಂದ ಮಾಡಲಾಗಿದ್ದವು.
9 Depois fez o átrio. Do lado meridional, ao sul, fez cortinas de linho retorcido, numa extensão de cem côvados,
10 ದಕ್ಷಿಣ ಭಾಗದಲ್ಲಿದ್ದ ಪರದೆಗಳಿಗೆ ಇಪ್ಪತ್ತು ಕಂಬಗಳಿದ್ದವು. ಕಂಬಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳಿದ್ದವು. ಕಂಬಗಳ ಕೊಂಡಿಗಳು ಮತ್ತು ಪರದೆಯ ಕೋಲುಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು.
10 bem como vinte colunas sobre vinte pedestais de bronze; os pregos das colunas e suas vergas eram de prata.
11 ಅಂಗಳದ ಉತ್ತರ ಭಾಗದಲ್ಲಿಯೂ ನೂರು ಮೊಳ ಉದ್ದದ ಪರದೆಗಳ ಗೋಡೆಯಿತ್ತು. ಅವುಗಳಿಗೆ ಇಪ್ಪತ್ತು ಕಂಬಗಳು, ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳು ಇದ್ದವು. ಕಂಬಗಳ ಕೊಂಡಿಗಳು ಮತ್ತು ಪರದೆಯ ಕೋಲುಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು.
11 Do lado norte, as cortinas tinham cem côvados de extensão, e havia vinte colunas com seus pedestais de bronze; os pregos das colunas e suas vergas eram de prata.
12 ಅಂಗಳದ ಪಶ್ಚಿಮ ಭಾಗದಲ್ಲಿ ಪರದೆಗಳ ಗೋಡೆಯು ಐವತ್ತು ಮೊಳ ಉದ್ದವಾಗಿತ್ತು. ಅಲ್ಲಿ ಹತ್ತು ಕಂಬಗಳೂ ಹತ್ತು ಗದ್ದಿಗೇಕಲ್ಲುಗಳೂ ಇದ್ದವು. ಕಂಬಗಳ ಕೊಂಡಿಗಳು ಮತ್ತು ಪರದೆಯ ಕೋಲುಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು.
12 Do lado do ocidente, elas tinham cinqüenta côvados, com dez colunas e seus dez pedestais.
13 ಅಂಗಳದ ಪೂರ್ವ ಭಾಗವು ಐವತ್ತು ಮೊಳ ಅಗಲವಾಗಿತ್ತು. ಅಂಗಳದ ಪ್ರವೇಶದ್ವಾರವು ಈ ಭಾಗದಲ್ಲಿತ್ತು.
13 Pela frente, do lado oriental, cinqüenta côvados;
14 ಬಾಗಿಲಿನ ಒಂದು ಕಡೆಯಲ್ಲಿ ಪರದೆಗಳ ಗೋಡೆಯು ಹದಿನೈದು ಮೊಳ ಉದ್ದವಾಗಿತ್ತು. ಆ ಕಡೆಯಲ್ಲಿ ಮೂರು ಕಂಬಗಳೂ ಮೂರು ಗದ್ದಿಗೇಕಲ್ಲುಗಳೂ ಇದ್ದವು.
14 havia de um lado quinze côvados de cortina, com três colunas e três pedestais,
15 ಬಾಗಿಲಿನ ಇನ್ನೊಂದು ಕಡೆಯಲ್ಲೂ ಪರದೆಗಳ ಗೋಡೆಯು ಹದಿನೈದು ಮೊಳ ಉದ್ದವಾಗಿತ್ತು. ಆ ಕಡೆಯಲ್ಲಿ ಮೂರು ಕಂಬಗಳೂ ಮೂರು ಗದ್ದೀಗೆಕಲ್ಲುಗಳೂ ಇದ್ದವು.
15 e do outro lado, isto é, de um e outro lado da porta do átrio, quinze côvados de cortinas com três colunas e três pedestais.
16 ಅಂಗಳದ ಸುತ್ತಲಿದ್ದ ಪರದೆಗಳೆಲ್ಲಾ ಶ್ರೇಷ್ಠ ನಾರುಬಟ್ಟೆಯಿಂದ ಮಾಡಲ್ಪಟ್ಟಿದ್ದವು.
16 Todas as cortinas do recinto do átrio eram de linho retorcido.
17 ಕಂಬಗಳ ಗದ್ದಿಗೇಕಲ್ಲುಗಳನ್ನು ತಾಮ್ರದಿಂದ ಮಾಡಲಾಗಿತ್ತು. ಕೊಂಡಿಗಳನ್ನು ಮತ್ತು ಪರದೆಯ ಕೋಲುಗಳನ್ನು ಬೆಳ್ಳಿಯಿಂದ ಮಾಡಲಾಗಿತ್ತು. ಕಂಬಗಳ ತುದಿಗಳನ್ನೂ ಬೆಳ್ಳಿಯಿಂದ ಹೊದಿಸಲಾಗಿತ್ತು. ಅಂಗಳದಲ್ಲಿದ್ದ ಕಂಬಗಳಿಗೆಲ್ಲಾ ಬೆಳ್ಳಿಯಿಂದ ಮಾಡಿದ ಪರದೆಯ ಕೋಲುಗಳಿದ್ದವು.
17 Os pedestais das colunas eram de bronze, os pregos das colunas e suas vergas, de prata, e seus capitéis, recobertos de prata. Todas as colunas do átrio eram ligadas entre si por vergas de prata.
18 ಅಂಗಳದ ಬಾಗಿಲಿನ ಪರದೆಯು ಶ್ರೇಷ್ಠ ನಾರುಬಟ್ಟೆಯಿಂದಲೂ, ನೀಲಿ, ನೇರಳೆ, ಕೆಂಪುದಾರಗಳಿಂದಲೂ ಮಾಡಲಾಗಿತ್ತು. ಪರದೆಯಲ್ಲಿ ನಕಾಸಿ ಕೆಲಸ ಮಾಡಲಾಗಿತ್ತು. ಪರದೆಯು ಇಪ್ಪತ್ತು ಮೊಳ ಉದ್ದ ಮತ್ತು ಐದು ಮೊಳ ಅಗಲವಾಗಿತ್ತು. ಅಂಗಳದ ಸುತ್ತಲಿದ್ದ ಎಲ್ಲಾ ಪರದೆಗಳ ಎತ್ತರ ಒಂದೇ ಆಗಿತ್ತು.
18 A cortina da porta do átrio era uma obra bordada, de púrpura violeta e escarlate, de carmesim e linho retorcido; seu comprimento era de vinte côvados, e tinha cinco côvados de altura, segundo a largura das cortinas do átrio.
19 ಪರದೆಗಳಿಗೆ ನಾಲ್ಕು ಕಂಬಗಳು ಮತ್ತು ನಾಲ್ಕು ತಾಮ್ರದ ಗದ್ದಿಗೇಕಲ್ಲುಗಳು ಇದ್ದವು. ಕಂಬಗಳ ಕೊಂಡಿಗಳನ್ನು ಬೆಳ್ಳಿಯಿಂದ ಮಾಡಲಾಗಿತ್ತು. ಕಂಬಗಳ ತುದಿಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು.
19 Suas quatro colunas e seus quatro pedestais eram de bronze, os pregos e as vergas, de prata, e seus capitéis, revestidos de prata.
20 ಪವಿತ್ರಗುಡಾರದ ಎಲ್ಲಾ ಗೂಟಗಳು ಮತ್ತು ಅಂಗಳದ ಸುತ್ತಲಿದ್ದ ಪರದೆಗಳ ಗೂಟಗಳು ತಾಮ್ರದಿಂದ ಮಾಡಲ್ಪಟ್ಟಿದ್ದವು.
20 Todas as estacas para o tabernáculo e para o recinto do átrio eram de bronze.
21 ಒಡಂಬಡಿಕೆಯ ಗುಡಾರವಾದ ಪವಿತ್ರಗುಡಾರವನ್ನು ಮಾಡಲು ಉಪಯೋಗಿಸಿದ ಎಲ್ಲಾ ವಸ್ತುಗಳನ್ನು ಬರೆದಿಡಬೇಕೆಂದು ಮೋಶೆಯು ಲೇವಿಯರಿಗೆ ಆಜ್ಞಾಪಿಸಿದನು. ಈ ಪಟ್ಟಿಯು ಆರೋನನ ಮಗನಾದ ಈತಾಮಾರನ ವಶದಲ್ಲಿ ಇತ್ತು.
21 Eis a soma dos materiais utilizados para o tabernáculo, o tabernáculo do testemunho, soma feita por ordem de Moisés e aos cuidados dos levitas, sob a direção de Itamar, filho do sacerdote Aarão.
22 ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರತಿಯೊಂದನ್ನೂ ಯೆಹೂದಕುಲದ ಹೂರನ ಮೊಮ್ಮಗನೂ ಊರಿಯ ಮಗನೂ ಆದ ಬೆಚಲೇಲನು ಮಾಡಿದನು.
22 Beseleel, filho de Uri, filho de Hur, da tribo de Judá, fez tudo o que o Senhor tinha ordenado a Moisés,
23 ದಾನ್‌ಕುಲದ ಅಹೀಸಾಮಾಕನ ಮಗನಾದ ಒಹೊಲೀಯಾಬನು ಅವನಿಗೆ ಸಹಾಯ ಮಾಡಿದನು. ಒಹೊಲೀಯಾಬನು ನಿಪುಣನಾದ ಕೆಲಸಗಾರನೂ ನಕಾಸಿ ಕೆಲಸ ಮಾಡುವವನೂ ಆಗಿದ್ದನು. ಅವನು ಶ್ರೇಷ್ಠ ನಾರುಬಟ್ಟೆಯಲ್ಲಿ ನೀಲಿ, ನೇರಳೆ, ಕೆಂಪುದಾರಗಳಿಂದ ಬುಟೇದಾರೀ ಕೆಲಸ ಮಾಡಲು ನಿಪುಣನಾಗಿದ್ದನು.
23 com a ajuda de Ooliab, filho de Aquisamec, da tribo de Dã, perito em escultura, em invenções e em bordados de púrpura violeta e escarlate, de carmesim e linho fino.
24 ಪವಿತ್ರಸ್ಥಳಕ್ಕಾಗಿ ಎರಡು ಟನ್‌ಗಿಂತ ಹೆಚ್ಚು ಬಂಗಾರವು ಯೆಹೋವನಿಗೆ ಕಾಣಿಕೆಯಾಗಿ ಕೊಡಲ್ಪಟ್ಟಿತು. (ಅಧಿಕೃತ ಅಳತೆಯನ್ನು ಉಪಯೋಗಿಸಿ ಇದನ್ನು ತೂಕ ಮಾಡಲಾಯಿತು.)
24 Total do ouro utilizado para todos os trabalhos do santuário: o ouro das ofertas subiu a vinte e nove talentos e setecentos e trinta siclos {siclo do santuário}.
25 ಲೆಕ್ಕಿಸಲ್ಪಟ್ಟ ಒಟ್ಟು ಗಂಡಸರು ಮೂರುಮುಕ್ಕಾಲು ಟನ್‌ಗಿಂತ ಹೆಚ್ಚು ಬೆಳ್ಳಿಯನ್ನು ಕೊಟ್ಟರು. (ಅಧಿಕೃತ ಅಳತೆಯನ್ನು ಉಪಯೋಗಿಸಿ ಇದನ್ನು ತೂಕ ಮಾಡಲಾಯಿತು.)
25 A prata recolhida dos membros da assembléia que foram recenseados elevou-se a cem talentos e mil setecentos e setenta e cinco siclos {siclo do santuário}.
26 ಇಪ್ಪತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ಎಲ್ಲಾ ಗಂಡಸರನ್ನು ಲೆಕ್ಕಿಸಲಾಯಿತು. ಅಲ್ಲಿ ಆರು ಲಕ್ಷದ ಮೂರು ಸಾವಿರದ ಐನೂರೈವತ್ತು ಮಂದಿ ಗಂಡಸರಿದ್ದರು ಮತ್ತು ಪ್ರತಿಯೊಬ್ಬನು ತಲಾ ಒಂದು ಬೆಕಾ ಬೆಳ್ಳಿಯನ್ನು ತೆರಿಗೆಯಾಗಿ ಕೊಡಬೇಕಾಯಿತು. (ಅಧಿಕೃತ ಅಳತೆಯ ಪ್ರಕಾರ ಒಂದು ಬೆಕಾ ಅಂದರೆ ಅರ್ಧ ಶೆಕೆಲ್.)
26 Isto vinha a ser uma beca por cabeça {ou seja, meio siclo, peso do santuário}, de todos os que foram recenseados, da idade de vinte anos para cima, ou seja, de seiscentos e três mil quinhentos e cinqüenta homens.
27 ಯೆಹೋವನ ಪವಿತ್ರಸ್ಥಳ ಮತ್ತು ಪರದೆಗಳಿಗೆ ಬೇಕಾದ ನೂರು ಗದ್ದಿಗೇಕಲ್ಲುಗಳನ್ನು ಮಾಡಲು ಅವರು ಮೂರುಮುಕ್ಕಾಲು ಟನ್ ಬೆಳ್ಳಿಯನ್ನು ಉಪಯೋಗಿಸಿದರು. ಅವರು ಪ್ರತಿ ಗದ್ದಿಗೇಕಲ್ಲಿಗೆ ಎಪ್ಪತ್ತೈದು ಪೌಂಡು ಬೆಳ್ಳಿಯನ್ನು ಉಪಯೋಗಿಸಿದರು.
27 Os cem talentos de prata serviram para fundir os suportes do santuário e os da cortina, cem pedestais para os cem talentos, ou seja, um talento por pedestal.
28 ಉಳಿದ ಐವತ್ತು ಪೌಂಡು ಬೆಳ್ಳಿಯನ್ನು, ಕೊಂಡಿಗಳನ್ನೂ ಪರದೆಯ ಕೋಲುಗಳನ್ನೂ ಮಾಡುವುದಕ್ಕೂ ಕಂಬಗಳಿಗೆ ಹೊದಿಸುವುದಕ್ಕೂ ಉಪಯೋಗಿಸಿದರು.
28 Com os mil setecentos e setenta e cinco siclos, fizeram-se os pregos para as colunas, o revestimento dos capitéis e as vergas de junção.
29 ಇಪ್ಪತ್ತಾರುವರೆ ಟನ್‌ಗಿಂತ ಹೆಚ್ಚು ತಾಮ್ರವನ್ನು ಯೆಹೋವನಿಗಾಗಿ ಕೊಡಲಾಯಿತು.
29 O bronze das ofertas subiu a setenta talentos e dois mil e quatrocentos siclos.
30 ಆ ತಾಮ್ರವನ್ನು ದೇವದರ್ಶನಗುಡಾರದ ಬಾಗಿಲಿನ ಗದ್ದಿಗೇಕಲ್ಲುಗಳನ್ನು ಮಾಡಲು ಉಪಯೋಗಿಸಲಾಯಿತು. ಯಜ್ಞವೇದಿಕೆಯನ್ನು ಮತ್ತು ತಾಮ್ರದ ಜಾಳಿಗೆಯನ್ನು ಮಾಡಲು ಅವರು ತಾಮ್ರವನ್ನು ಉಪಯೋಗಿಸಿದರು. ಯಜ್ಞವೇದಿಕೆಯ ಎಲ್ಲಾ ಉಪಕರಣಗಳನ್ನು ಮತ್ತು ಬಟ್ಟಲುಗಳನ್ನು ಮಾಡಲು ತಾಮ್ರವನ್ನು ಉಪಯೋಗಿಸಲಾಯಿತು.
30 Com ele fizeram-se os pedestais colocados à entrada da tenda de reunião, o altar de bronze com sua grelha de bronze e todos os utensílios do altar,
31 ಅದನ್ನು ಅಂಗಳದ ಸುತ್ತಲಿರುವ ಪರದೆಗಳ ಮತ್ತು ಬಾಗಿಲಿನ ಪರದೆಗಳ ಗದ್ದಿಗೇಕಲ್ಲುಗಳಿಗೂ ಉಪಯೋಗಿಸಲಾಯಿತು. ತಾಮ್ರವನ್ನು ಪವಿತ್ರಗುಡಾರದ ಮತ್ತು ಅಂಗಳದ ಸುತ್ತಲಿರುವ ಪರದೆಗಳ ಗೂಟಗಳನ್ನು ಮಾಡಲು ಉಪಯೋಗಿಸಲಾಯಿತು.
31 os pedestais do recinto e da porta do átrio, todas as estacas do tabernáculo e todas as estacas do recinto do átrio.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Êxodo 38, comparar traduções ou montar um estudo — tudo direto pelo WhatsApp.