Êxodo 40
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NTLH
1 ತರುವಾಯ ಯೆಹೋವನು ಮೋಶೆಗೆ,
1 O Senhor Deus disse a Moisés:
2 “ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ದೇವದರ್ಶನಗುಡಾರವಾದ ಪವಿತ್ರಗುಡಾರವನ್ನು ಎತ್ತಿನಿಲ್ಲಿಸು.
2 — No dia primeiro do primeiro mês, arme a Tenda da Presença de Deus .
3 ಪವಿತ್ರ ಗುಡಾರದಲ್ಲಿ ಒಡಂಬಡಿಕೆಯ ಪೆಟ್ಟಿಗೆಯನ್ನು ಇಡು. ಪೆಟ್ಟಿಗೆಯನ್ನು ಪರದೆಯಿಂದ ಮುಚ್ಚಿಸು.
3 Coloque na Tenda a arca da aliança , onde estão guardadas as placas com os dez mandamentos; e ponha a cortina na frente da arca.
4 ಬಳಿಕ ಮೇಜನ್ನು ಒಳಗೆ ತರಿಸಿ ಮೇಜಿನ ಮೇಲಿರಬೇಕಾದ ವಸ್ತುಗಳನ್ನು ಅದರ ಮೇಲಿರಿಸು. ದೀಪಸ್ತಂಭವನ್ನು ಗುಡಾರದಲ್ಲಿ ಇರಿಸು. ದೀಪಸ್ತಂಭದಲ್ಲಿ ಸರಿಯಾದ ಜಾಗಗಳಲ್ಲಿ ಹಣತೆಗಳನ್ನು ಇರಿಸು.
4 Ponha dentro da Tenda a mesa e coloque em ordem as coisas que estão sobre ela. Ponha dentro da Tenda o candelabro e monte as lamparinas.
5 ಗುಡಾರದೊಳಗೆ ಧೂಪವನ್ನು ಅರ್ಪಿಸಲು ಬಂಗಾರದ ವೇದಿಕೆಯನ್ನು ಇಡು. ವೇದಿಕೆಯನ್ನು ಒಡಂಬಡಿಕೆಯ ಪೆಟ್ಟಿಗೆಯ ಮುಂದಿರಿಸು. ಬಳಿಕ ಪವಿತ್ರಗುಡಾರದ ಪ್ರವೇಶದಲ್ಲಿ ಪರದೆಯನ್ನು ಇರಿಸು.
5 Ponha o altar de ouro para queimar incenso na frente da arca da aliança e pendure a cortina na entrada da Tenda.
6 “ದೇವದರ್ಶನಗುಡಾರವಾದ ಪವಿತ್ರಗುಡಾರದ ಪ್ರವೇಶದ್ವಾರದ ಮುಂದೆ ಯಜ್ಞವೇದಿಕೆಯನ್ನು ಇರಿಸು.
6 E na frente da Tenda coloque o altar de queimar os sacrifícios .
7 ಗಂಗಾಳವನ್ನು ದೇವದರ್ಶನಗುಡಾರ ಮತ್ತು ವೇದಿಕೆಯ ನಡುವೆ ಇರಿಸು. ಗಂಗಾಳದಲ್ಲಿ ನೀರನ್ನು ಹಾಕಿಸು.
7 Ponha a pia entre a Tenda e o altar e encha com água.
8 ಅಂಗಳದ ಸುತ್ತಲೂ ಪರದೆಗಳ ಗೋಡೆಯನ್ನು ನಿಲ್ಲಿಸು. ಬಳಿಕ ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಬೇಕು.
8 Depois arme o pátio ao redor da Tenda e pendure a cortina na sua entrada.
9 “ಅಭಿಷೇಕತೈಲವನ್ನು ಉಪಯೋಗಿಸಿ ಪವಿತ್ರಗುಡಾರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಅಭಿಷೇಕಿಸು. ನೀನು ತೈಲವನ್ನು ಈ ವಸ್ತುಗಳ ಮೇಲೆ ಹಾಕುವಾಗ, ಅವುಗಳನ್ನು ಪವಿತ್ರಗೊಳಿಸುವೆ.
9 — Então pegue o azeite de ungir e unja a Tenda e tudo o que estiver nela; desse modo, você a separará para mim, e ela ficará sagrada.
10 ಯಜ್ಞವೇದಿಕೆಯನ್ನು ಅಭಿಷೇಕಿಸು. ವೇದಿಕೆಯ ಮೇಲಿರುವ ಪ್ರತಿಯೊಂದನ್ನು ಅಭಿಷೇಕಿಸಿ ಪ್ರತಿಷ್ಠಿಸು. ಆಗ ಅದು ಬಹು ಪವಿತ್ರವಾಗುವುದು.
10 Depois você ungirá o altar das ofertas a ser completamente queimadas e todos os seus utensílios; assim o altar ficará separado para mim e será muito sagrado.
11 ಬಳಿಕ ಗಂಗಾಳವನ್ನೂ ಅದರ ಕೆಳಗಿರುವ ಪೀಠವನ್ನೂ ಅಭಿಷೇಕಿಸಿ ಪವಿತ್ರಗೊಳಿಸು.
11 Do mesmo jeito você ungirá a pia com o seu suporte e a separará para mim.
12 “ಆರೋನನನ್ನೂ ಅವನ ಪುತ್ರರನ್ನೂ ದೇವದರ್ಶನಗುಡಾರದ ಬಾಗಿಲಿಗೆ ಕರೆಸು. ಅವರಿಗೆ ನೀರಿನಿಂದ ಸ್ನಾನ ಮಾಡಿಸು.
12 — Leve Arão e os filhos dele para a entrada da Tenda e mande que se lavem.
13 ಬಳಿಕ ಆರೋನನಿಗೆ ವಿಶೇಷ ಬಟ್ಟೆಯನ್ನು ತೊಡಿಸು. ತೈಲದಿಂದ ಅವನನ್ನು ಅಭಿಷೇಕಿಸಿ ಪವಿತ್ರಗೊಳಿಸು. ಆಗ ಅವನು ಯಾಜಕನಾಗಿ ನನ್ನ ಸೇವೆ ಮಾಡಬಹುದು.
13 Vista Arão com as suas roupas de sacerdote, unja-o e o separe para mim a fim de que me sirva como sacerdote.
14 ಬಳಿಕ ಅವನ ಪುತ್ರರಿಗೆ ಬಟ್ಟೆಗಳನ್ನು ತೊಡಿಸು.
14 Traga os filhos dele e vista neles as túnicas .
15 ಅವರ ತಂದೆಯನ್ನು ಅಭಿಷೇಕಿಸಿದಂತೆ ಪುತ್ರರನ್ನೂ ಅಭಿಷೇಕಿಸು. ಆಗ ಅವರು ಯಾಜಕರಾಗಿ ತಲೆತಲೆಮಾರುಗಳವರೆಗೆ ನನ್ನ ಸೇವೆ ಮಾಡಬಹುದು. ನೀನು ಅವರನ್ನು ಅಭಿಷೇಕಿಸಿದಾಗ, ಅವರು ಯಾಜಕರಾಗುವರು. ಇನ್ನು ಮುಂದೆ ಆ ಕುಟುಂಬವು ಯಾಜಕರಾಗಿ ಮುಂದುವರಿಯುವುದು” ಎಂದು ಹೇಳಿದನು.
15 Em seguida você os ungirá, como ungiu o pai deles, para que me sirvam como sacerdotes. Isso fará com que sejam sacerdotes para sempre.
16 ಯೆಹೋವನು ಆಜ್ಞಾಪಿಸಿದಂತೆಯೇ ಪ್ರತಿಯೊಂದನ್ನೂ ಮೋಶೆಯು ಮಾಡಿದನು.
16 Moisés fez tudo como o Senhor havia ordenado.
17 ಆದ್ದರಿಂದ ಪವಿತ್ರಗುಡಾರವು, ಅವರು ಈಜಿಪ್ಟನ್ನು ಬಿಟ್ಟಕಾಲದಿಂದ ಎರಡನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸ್ಥಾಪಿಸಲ್ಪಟ್ಟಿತು.
17 E assim, no dia primeiro do primeiro mês, quase um ano depois que os israelitas saíram do Egito, a Tenda da Presença de Deus foi armada.
18 ಯೆಹೋವನು ಹೇಳಿದಂತೆಯೇ ಮೋಶೆಯು ಪವಿತ್ರಗುಡಾರವನ್ನು ನಿಲ್ಲಿಸಿದನು. ಅವನು ಮೊದಲು ಗದ್ದಿಗೇಕಲ್ಲುಗಳನ್ನು ಕೆಳಗೆ ಇರಿಸಿದನು. ಬಳಿಕ ಅವನು ಗದ್ದಿಗೇಕಲ್ಲುಗಳ ಮೇಲೆ ಚೌಕಟ್ಟುಗಳನ್ನು ಇರಿಸಿದನು. ಬಳಿಕ ಅವನು ಅಗುಳಿಗಳನ್ನಿರಿಸಿ ಕಂಬಗಳನ್ನು ನಿಲ್ಲಿಸಿದನು.
18 Moisés colocou as bases, as armações e as travessas e levantou os postes.
19 ನಂತರ, ಮೋಶೆಯು ಪವಿತ್ರಗುಡಾರದ ಮೇಲೆ ಹೊರಗಣ ಡೇರೆಯನ್ನು ಹಾಕಿಸಿದನು. ಬಳಿಕ ಅವನು ಹೊರಗಿನ ಡೇರೆಗೆ ಮೇಲ್ಹೊದಿಕೆಯನ್ನು ಹಾಕಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಅವನು ಈ ಕಾರ್ಯಗಳನ್ನು ಮಾಡಿದನು.
19 Ele estendeu a cobertura sobre a Tenda e colocou a cobertura de fora por cima dela, como o Senhor havia ordenado.
20 ಮೋಶೆಯು ಒಡಂಬಡಿಕೆಯ ಆಜ್ಞಾಶಾಸನಗಳನ್ನು ತೆಗೆದುಕೊಂಡು ಪವಿತ್ರ ಪೆಟ್ಟಿಗೆಯಲ್ಲಿಟ್ಟನು. ಮೋಶೆಯು ಪೆಟ್ಟಿಗೆಯ ಎರಡು ಕಡೆಗಳಲ್ಲಿ ಕೋಲುಗಳನ್ನು ಇರಿಸಿದನು. ಬಳಿಕ ಅವನು ಪೆಟ್ಟಿಗೆಯ ಮೇಲೆ ಕೃಪಾಸನವನ್ನು ಇಟ್ಟನು.
20 Depois pegou as duas placas de pedra e as colocou dentro da arca da aliança. Enfiou os cabos nas argolas da arca e colocou a tampa nela.
21 ಬಳಿಕ ಮೋಶೆಯು ಪವಿತ್ರಪೆಟ್ಟಿಗೆಯನ್ನು ಪವಿತ್ರಗುಡಾರದೊಳಗೆ ತಂದನು. ಅದನ್ನು ಸಂರಕ್ಷಿಸುವುದಕ್ಕಾಗಿ ಸರಿಯಾದ ಸ್ಥಳದಲ್ಲಿ ಪರದೆಯನ್ನು ಹಾಕಿದನು. ಹೀಗೆ ಒಡಂಬಡಿಕೆ ಪೆಟ್ಟಿಗೆಯನ್ನು ಪರದೆಯ ಹಿಂಭಾಗದಲ್ಲಿರಿಸಿ ಸಂರಕ್ಷಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇದನ್ನು ಮಾಡಿದನು.
21 Então pôs a arca na Tenda e, como o Senhor havia ordenado, pendurou a cortina entre o Lugar Santo e o Lugar Santíssimo para que ninguém pudesse ver a arca.
22 ತರುವಾಯ ಮೋಶೆಯು ದೇವದರ್ಶನಗುಡಾರದಲ್ಲಿ ಮೇಜನ್ನು ಇರಿಸಿದನು. ಪವಿತ್ರಗುಡಾರದ ಉತ್ತರಭಾಗದಲ್ಲಿ ಅದನ್ನು ಇರಿಸಿದನು. ಅವನು ಅದನ್ನು ಪವಿತ್ರಸ್ಥಳದಲ್ಲಿ ಪರದೆಯ ಮುಂಭಾಗದಲ್ಲಿ ಇರಿಸಿದನು.
22 Moisés pôs a mesa na Tenda, no lado norte, do lado de fora da cortina,
23 ಬಳಿಕ ಅವನು ಯೆಹೋವನ ಸನ್ನಿಧಿಯಲ್ಲಿ ಮೇಜಿನ ಮೇಲೆ ನೈವೇದ್ಯದ ರೊಟ್ಟಿಯನ್ನಿರಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಅವನು ಇದನ್ನು ಮಾಡಿದನು.
23 e colocou sobre ela os pães oferecidos a Deus, o Senhor , como ele havia ordenado.
24 ಬಳಿಕ ಮೋಶೆಯು ದೀಪಸ್ತಂಭವನ್ನು ಪವಿತ್ರಗುಡಾರದೊಳಗೆ ಇರಿಸಿದನು. ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನಿರಿಸಿದನು.
24 Moisés pôs o candelabro na Tenda, no lado sul, em frente da mesa
25 ತರುವಾಯ ಮೋಶೆಯು ಯೆಹೋವನ ಮುಂದಿರುವ ದೀಪಸ್ತಂಭದಲ್ಲಿ ಹಣತೆಗಳನ್ನು ಇರಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಅವನು ಇದನ್ನು ಮಾಡಿದನು.
25 e ali, na presença do Senhor , ele acendeu as lamparinas, como o Senhor havia ordenado.
26 ಬಳಿಕ ಮೋಶೆಯು ಚಿನ್ನದ ವೇದಿಕೆಯನ್ನು ದೇವದರ್ಶನಗುಡಾರದೊಳಗೆ ಇರಿಸಿದನು. ಅವನು ವೇದಿಕೆಯನ್ನು ಪರದೆಯ ಮುಂಭಾಗದಲ್ಲಿ ಇರಿಸಿದನು.
26 Pôs o altar de ouro na Tenda, em frente da cortina,
27 ಬಳಿಕ ಅವನು ವೇದಿಕೆಯ ಮೇಲೆ ಸುಗಂಧವಾಸನೆಯುಳ್ಳ ಧೂಪವನ್ನು ಉರಿಸಿದನು. ಯೆಹೋವನು ಅವನಿಗೆ ಆಜ್ಞಾಪಿಸಿದಂತೆಯೇ ಇದನ್ನು ಮಾಡಿದನು.
27 e queimou o incenso cheiroso, como o Senhor havia ordenado.
28 ಬಳಿಕ ಮೋಶೆಯು ಪವಿತ್ರಗುಡಾರದ ಬಾಗಿಲಿಗೆ ಪರದೆಯನ್ನು ಹಾಕಿಸಿದನು.
28 Pendurou a cortina na entrada da Tenda
29 ಪವಿತ್ರಗುಡಾರದ ಪ್ರವೇಶದ್ವಾರದ ಬಳಿಯಲ್ಲಿ ಯಜ್ಞವೇದಿಕೆಯನ್ನು ಇರಿಸಿದನು. ಅವನು ಯೆಹೋವನಿಗಾಗಿ ಆ ವೇದಿಕೆಯ ಮೇಲೆ ಸರ್ವಾಂಗಹೋಮವನ್ನೂ ಧಾನ್ಯಸಮರ್ಪಣೆಯನ್ನೂ ಮಾಡಿದನು. ಯೆಹೋವನು ಆಜ್ಞಾಪಿಸಿದಂತೆ ಅವನು ಇದನ್ನು ಮಾಡಿದನು.
29 e ali, em frente da cortina, colocou o altar para as ofertas que seriam completamente queimadas. Em cima do altar ele apresentou as ofertas a serem queimadas e as ofertas de cereais, como o Senhor havia ordenado.
30 ತರುವಾಯ ಮೋಶೆಯು ಗಂಗಾಳವನ್ನು ದೇವದರ್ಶನಗುಡಾರ ಮತ್ತು ವೇದಿಕೆಯ ನಡುವೆ ಇಟ್ಟನು. ತೊಳೆದುಕೊಳ್ಳುವುದಕ್ಕಾಗಿ ನೀರನ್ನು ಗಂಗಾಳದಲ್ಲಿ ಹಾಕಿಸಿದನು.
30 Pôs a pia entre a Tenda e o altar e a encheu com água.
31 ಮೋಶೆ, ಆರೋನ ಮತ್ತು ಆರೋನನ ಪುತ್ರರು ತಮ್ಮ ಕೈಕಾಲುಗಳನ್ನು ತೊಳೆದುಕೊಳ್ಳುವುದಕ್ಕಾಗಿ ಈ ಗಂಗಾಳವನ್ನು ಉಪಯೋಗಿಸಿದರು.
31 Nela Moisés, Arão e os filhos de Arão lavavam os pés
32 ಅವರು ದೇವದರ್ಶನಗುಡಾರವನ್ನು ಪ್ರವೇಶಿಸುವಾಗಲೆಲ್ಲಾ ಮತ್ತು ಯಜ್ಞವೇದಿಕೆಯ ಸಮೀಪ ಹೋಗುವಾಗಲೆಲ್ಲಾ ತಮ್ಮನ್ನು ತೊಳೆದುಕೊಳ್ಳುತ್ತಿದ್ದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಇದನ್ನು ಮಾಡಿದರು.
32 todas as vezes que entravam na Tenda ou iam até o altar, como o Senhor havia ordenado.
33 ತರುವಾಯ ಮೋಶೆಯು ಪವಿತ್ರಗುಡಾರದ ಅಂಗಳದ ಸುತ್ತಲೂ ಪರದೆಗಳನ್ನು ನಿಲ್ಲಿಸಿದನು. ಮೋಶೆಯು ವೇದಿಕೆಯನ್ನು ಅಂಗಳದಲ್ಲಿರಿಸಿದನು. ಬಳಿಕ ಅವನು ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿಸಿದನು. ಹೀಗೆ ಮೋಶೆ ಯೆಹೋವನು ತನಗೆ ಕೊಟ್ಟ ಎಲ್ಲಾ ಕೆಲಸವನ್ನು ಮಾಡಿ ಮುಗಿಸಿದನು.
33 Moisés armou o pátio em volta da Tenda e do altar e pendurou a cortina na entrada do pátio. E assim ele terminou todo o trabalho.
34 ತರುವಾಯ ಮೋಡವು ದೇವದರ್ಶನಗುಡಾರವನ್ನು ಕವಿಯಿತು. ಯೆಹೋವನ ಮಹಿಮೆಯು ಪವಿತ್ರಗುಡಾರವನ್ನು ತುಂಬಿಕೊಂಡಿತು.
34 Então a nuvem cobriu a Tenda , e ela ficou cheia da glória de Deus, o Senhor ;
35 ಮೋಡವು ದೇವದರ್ಶನಗುಡಾರದ ಮೇಲೆ ನಿಂತಿತು. ಯೆಹೋವನ ಮಹಿಮೆಯು ಪವಿತ್ರಗುಡಾರವನ್ನು ತುಂಬಿಕೊಂಡಿದ್ದರಿಂದ ಮೋಶೆಯು ಒಳಗೆ ಪ್ರವೇಶಿಸಲಾಗಲಿಲ್ಲ.
35 por isso Moisés não pôde entrar nela.
36 ಜನರು ಯಾವಾಗ ಚಲಿಸಬೇಕೆಂದು ಮೋಡವು ತೋರಿಸುತ್ತಿತ್ತು. ಮೋಡವು ಪವಿತ್ರಗುಡಾರವನ್ನು ಬಿಟ್ಟು ಮೇಲೆದ್ದಾಗ, ಜನರು ಪ್ರಯಾಣ ಮಾಡತೊಡಗುತ್ತಿದ್ದರು.
36 Os israelitas levavam o seu acampamento de um lugar para outro somente quando a nuvem se levantava de cima da Tenda.
37 ಆದರೆ ಮೋಡವು ಪವಿತ್ರಗುಡಾರದ ಮೇಲಿದ್ದಾಗ ಜನರು ಪ್ರಯಾಣ ಮಾಡುತ್ತಿರಲಿಲ್ಲ. ಮೋಡವು ಮೇಲೇಳುವವರೆಗೆ ಅವರು ಅಲ್ಲೇ ಇರುತ್ತಿದ್ದರು.
37 Mas, se a nuvem não se levantava, os israelitas não saíam dali até o dia em que ela se levantava.
38 ಹೀಗೆ ಯೆಹೋವನ ಮೋಡವು ಹಗಲಿನಲ್ಲಿ ಪವಿತ್ರಗುಡಾರದ ಮೇಲೆ ನಿಂತಿತು. ರಾತ್ರಿಯಲ್ಲಿ ಮೋಡದಲ್ಲಿ ಅಗ್ನಿಯು ಪ್ರಕಾಶಿಸುತ್ತಿತ್ತು. ಆದ್ದರಿಂದ ಇಸ್ರೇಲ್ ಜನರೆಲ್ಲರೂ ತಾವು ಪ್ರಯಾಣ ಮಾಡುವಾಗ, ಮೋಡವನ್ನು ನೋಡಬಹುದಾಗಿತ್ತು.
38 Em todas as suas viagens, eles podiam ver, durante o dia, a nuvem da presença do Senhor em cima da Tenda; e, durante a noite, viam o fogo queimando em cima dela.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Êxodo 40, comparar traduções ou montar um estudo — tudo direto pelo WhatsApp.