Ezequiel 10
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVT
1 ಕೆರೂಬಿಯರ ತಲೆಗಳ ಮೇಲಿದ್ದ ಗುಮಟದ ಕಡೆಗೆ ನೋಡಿದೆನು. ಆ ಗುಮಟದ ಮೇಲೆ ಇಂದ್ರನೀಲಮಣಿಯಿಂದ ಮಾಡಿದ ಸಿಂಹಾಸನದಂತೆ ಕಾಣುತ್ತಿದ್ದ ಏನೋ ಇತ್ತು.
1 Olhei e vi algo que se parecia com um trono de safira sobre uma superfície de cristal acima da cabeça dos querubins.
2 ಆಗ ಸಿಂಹಾಸನದಲ್ಲಿ ಕೂತಿದ್ದಾತನು ನಾರುಮಡಿ ಧರಿಸಿದ್ದವನಿಗೆ, “ಕೆರೂಬಿದೂತರ ಕೆಳಗಿರುವ ಚಕ್ರಗಳ ನಡುವೆ ಹೋಗು. ಕೆರೂಬಿಗಳ ನಡುವೆ ಇರುವ ಉರಿಯುವ ಕೆಂಡಗಳನ್ನು ನಿನ್ನ ಅಂಗೈಗಳಲ್ಲಿ ತುಂಬಿಕೊಂಡು ಜೆರುಸಲೇಮ್ ನಗರದ ಮೇಲೆ ಹರಡು” ಎಂದು ಹೇಳಿದನು.
2 Então o S enhor disse ao homem vestido de linho: “Vá entre as rodas que estão debaixo dos querubins, pegue um punhado de brasas ardentes e espalhe-as sobre a cidade”. Ele assim fez enquanto eu observava.
3 ಆ ಮನುಷ್ಯನು ಚಕ್ರಗಳ ನಡುವೆ ಒಳಗೆ ಹೋದಾಗ ಕೆರೂಬಿದೂತರು ಆಲಯದ ದಕ್ಷಿಣಕ್ಕೆ ಇರುವ ಸ್ಥಳದಲ್ಲಿ ನಿಂತಿದ್ದರು. ಒಳಗಿನ ಅಂಗಳವು ಮೋಡದಿಂದ ತುಂಬಿತ್ತು.
3 Os querubins estavam na extremidade sul do templo quando o homem entrou, e a nuvem de glória encheu o pátio interno.
4 ಯೆಹೋವನ ಮಹಿಮೆಯು ಕೆರೂಬಿದೂತರ ಮೇಲಿನಿಂದ ಹೊರಟು ಆಲಯದ ಹೊಸ್ತಿಲಿಗೆ ಬಂದಿತು. ಆಗ ಮೋಡವು ಆಲಯದಲ್ಲಿ ತುಂಬಿಕೊಂಡಿತು. ಯೆಹೋವನ ಮಹಿಮೆಯ ಪ್ರಕಾಶವು ಇಡೀ ಅಂಗಳವನ್ನು ತುಂಬಿಕೊಂಡಿತು.
4 Então a glória do S enhor se elevou acima dos querubins e foi para a porta do templo. Essa nuvem encheu o templo, e o pátio resplandeceu com a glória do S enhor .
5 ಕೆರೂಬಿದೂತರ ರೆಕ್ಕೆಗಳ ಬಡಿತದ ಶಬ್ದವು ಹೊರಗಿನ ಪ್ರಾಕಾರದ ತನಕ ಕೇಳುತ್ತಿತ್ತು. ಅದು ತುಂಬಾ ಗಟ್ಟಿಯಾದ ಶಬ್ದವಾಗಿತ್ತು. ಸರ್ವಶಕ್ತನಾದ ದೇವರು ಮಾತನಾಡುವಾಗ ಆಗುವ ಗುಡುಗಿನ ಶಬ್ದದಂತಿತ್ತು.
5 O movimento das asas dos querubins fazia um som como a voz do Deus Todo-poderoso, e podia-se ouvi-lo até no pátio externo.
6 ನಾರುಮಡಿ ಧರಿಸಿಕೊಂಡಿದ್ದವನಿಗೆ ದೇವರು, “ಕೆರೂಬಿದೂತರ ಮಧ್ಯದೊಳಗಿಂದ, ಚಕ್ರಗಳ ಮಧ್ಯೆ ಪ್ರವೇಶಿಸಿ ಅಲ್ಲಿಂದ ಉರಿಯುವ ಕೆಂಡಗಳನ್ನು ತೆಗೆದುಕೊ” ಎಂದು ಆಜ್ಞಾಪಿಸಿದಾಗ, ಆ ಮನುಷ್ಯನು ಅಲ್ಲಿಗೆ ಹೋಗಿ ಚಕ್ರಗಳ ಸಮೀಪದಲ್ಲಿ ನಿಂತುಕೊಂಡನು.
6 O S enhor ordenou ao homem vestido de linho: “Vá entre os querubins e pegue algumas brasas ardentes que estão entre as rodas”. O homem foi e colocou-se ao lado das rodas.
7 ಕೆರೂಬಿದೂತರಲ್ಲೊಬ್ಬನು ಅವರ ಮಧ್ಯೆಯಿದ್ದ ಉರಿಯುವ ಕೆಂಡದಲ್ಲಿ ಸ್ವಲ್ಪವನ್ನು ಆ ಮನುಷ್ಯನ ಕೈಗೆ ಸುರಿದನು. ಆ ಮನುಷ್ಯನು ಅಲ್ಲಿಂದ ಹೊರಟನು.
7 Em seguida, um dos querubins estendeu a mão e pegou algumas brasas ardentes do fogo que estava entre os querubins. Colocou as brasas nas mãos do homem vestido de linho, e o homem as recebeu e saiu.
8 ಕೆರೂಬಿದೂತರ ರೆಕ್ಕೆಯ ಕೆಳಗೆ ಮನುಷ್ಯರ ಕೈಗಳಂತೆ ಕಾಣುತ್ತಿದ್ದ ಕೈಗಳಿದ್ದವು.
8 (Todos os querubins tinham debaixo das asas o que se parecia com mãos humanas.)
9 ಆಗ ನಾನು ಅಲ್ಲಿ ನಾಲ್ಕು ಚಕ್ರಗಳಿರುವದನ್ನು ಕಂಡೆನು. ಪ್ರತಿಯೊಬ್ಬ ಕೆರೂಬಿದೂತನ ಬಳಿ ಒಂದು ಚಕ್ರವಿತ್ತು. ಆ ಚಕ್ರಗಳು ಹೊಳೆಯುವ ಹಳದಿ ರತ್ನದಂತೆ ಕಂಡವು.
9 Olhei e vi que cada um dos quatro querubins tinha ao seu lado uma roda, e as rodas brilhavam como berilo.
10 ಅಲ್ಲಿದ್ದ ನಾಲ್ಕು ಚಕ್ರಗಳೂ ಒಂದೇ ಪ್ರಕಾರವಾಗಿದ್ದವು. ಅವು ಚಕ್ರದೊಳಗೆ ಚಕ್ರಗಳಿದ್ದಂತೆ ತೋರುತ್ತಿದ್ದವು.
10 As quatro rodas eram semelhantes e feitas da mesma forma; cada uma tinha dentro dela outra roda que girava na transversal.
11 ಅವು ಚಲಿಸುವಾಗ ನಾಲ್ಕು ದಿಕ್ಕುಗಳಲ್ಲಿ ಯಾವ ದಿಕ್ಕಿಗಾದರೂ ಅತ್ತಿತ್ತ ತಿರುಗದೆ ಚಲಿಸುತ್ತಿದ್ದವು.
11 Os querubins podiam se deslocar em qualquer uma das quatro direções, sem se virar enquanto se moviam. Deslocavam-se para a frente, sem se virar.
12 ಅವರ ಶರೀರದ ಮೇಲೆಲ್ಲಾ ಕಣ್ಣುಗಳಿದ್ದವು. ಅವರ ಬೆನ್ನಿನ ಮೇಲೆ, ಕೈಗಳ ಮೇಲೆ, ರೆಕ್ಕೆಗಳ ಮೇಲೆ, ಅವರ ಚಕ್ರಗಳ ಮೇಲೆ ಕಣ್ಣುಗಳಿದ್ದವು. ಹೌದು, ಅವರ ನಾಲ್ಕು ಚಕ್ರಗಳ ಮೇಲೂ ಕಣ್ಣುಗಳಿದ್ದವು.
12 Tanto os querubins como as rodas eram cobertos de olhos. Os querubins tinham olhos por todo o corpo, inclusive nas mãos, nas costas e nas asas.
13 ಈ ಚಕ್ರಗಳಿಗೆ “ಚರಕ ಚಕ್ರ” ಎಂಬುದಾಗಿ ಕರೆಯುತ್ತಾರೆಂದು ನನಗೆ ಕೇಳಿಸಿತು.
13 Ouvi alguém se referir às rodas como “rodas giratórias”.
14 ಪ್ರತೀ ಕೆರೂಬಿದೂತನಿಗೆ ನಾಲ್ಕು ಮುಖಗಳಿದ್ದವು. ಮೊದಲನೆಯ ಮುಖವು ಕೆರೂಬಿಯ ಮುಖ, ಎರಡನೆಯದು ಮನುಷ್ಯನ ಮುಖ, ಮೂರನೆಯ ಸಿಂಹದ ಮುಖ ಮತ್ತು ನಾಲ್ಕನೆಯ ಗರುಡನ ಮುಖ.
14 Cada um dos quatro querubins tinha quatro rostos: o primeiro era rosto de boi, o segundo, de homem, o terceiro, de leão, e o quarto, de águia.
15 ಈ ಜೀವಿಗಳು ಮೊದಲು ನಾನು ಕೆಬಾರ್ ನದಿಯ ಬಳಿ ಕಂಡ ದರ್ಶನದಲ್ಲಿದ್ದ ಕೆರೂಬಿಯರೇ ಆಗಿರಬೇಕು ಎಂದು ಆಗ ನನಗೆ ಮನದಟ್ಟಾಯಿತು. ಬಳಿಕ ಕೆರೂಬಿಗಳು ಮೇಲಕ್ಕೆ ಏರಿದವು.
15 Então os querubins se elevaram. Eram os mesmos seres vivos que eu tinha visto junto ao rio Quebar.
16 ಅವುಗಳೊಂದಿಗೆ ಚಕ್ರಗಳು ಎತ್ತಲ್ಪಟ್ಟವು. ಕೆರೂಬಿದೂತರು ರೆಕ್ಕೆಗಳನ್ನು ಚಾಚಿ ಗಾಳಿಯಲ್ಲಿ ಹಾರಿದಾಗ ಅವುಗಳ ಪಕ್ಕದಲ್ಲಿದ್ದ ಚಕ್ರಗಳು ತಮ್ಮ ಸ್ಥಳವನ್ನು ಬದಲಾಯಿಸಲಿಲ್ಲ.
16 Quando os querubins se moviam, as rodas se moviam com eles. Quando levantavam as asas para voar, as rodas os acompanhavam.
17 ಕೆರೂಬಿದೂತರು ಗಾಳಿಯಲ್ಲಿ ಹಾರಾಡಿದಾಗ ಚಕ್ರಗಳೂ ಅವರೊಂದಿಗೆ ಹೋದವು. ಅವು ನಿಂತಾಗ ಚಕ್ರಗಳೂ ನಿಂತುಬಿಡುತ್ತಿದ್ದವು. ಯಾಕೆಂದರೆ ಜೀವಿಗಳನ್ನು ಹತೋಟಿಯಲ್ಲಿಡುವ ಆತ್ಮವು ಚಕ್ರಗಳಲ್ಲಿತ್ತು.
17 Quando os querubins paravam, as rodas paravam. Quando voavam para cima, as rodas subiam, pois o espírito dos seres vivos estava nas rodas.
18 ಆಗ ಆಲಯದ ಹೊಸ್ತಿಲಿನ ಮೇಲಿನಿಂದ ಯೆಹೋವನ ಮಹಿಮೆಯು ಎದ್ದು ಕೆರೂಬಿದೂತರು ನಿಂತಿದ್ದ ಸ್ಥಳದ ಮೇಲೆ ನಿಂತುಕೊಂಡಿತು.
18 Então a glória do S enhor se afastou da porta do templo e parou sobre os querubins.
19 ಕೆರೂಬಿದೂತರು ರೆಕ್ಕೆಗಳನ್ನು ಚಾಚಿ ಹಾರಿದವು. ಅವು ಆಲಯವನ್ನು ಬಿಟ್ಟುಹೋಗುವದನ್ನು ನೋಡಿದೆನು. ಚಕ್ರಗಳು ಅವುಗಳೊಂದಿಗೆ ಹೋದವು. ಅವು ಯೆಹೋವನಾಲಯದ ಪೂರ್ವದ ಬಾಗಿಲ ಬಳಿ ನಿಂತವು. ಇಸ್ರೇಲಿನ ದೇವರ ಮಹಿಮೆಯು ಅವುಗಳ ಮೇಲೆ ಇತ್ತು.
19 E, enquanto eu observava, os querubins voaram, acompanhados de suas rodas, até a porta leste do templo do S enhor . E a glória do Deus de Israel pairava sobre eles.
20 ಆಗ ಕೆಬಾರ್ ನದಿಯ ಬಳಿ ನನಗಾದ ಇಸ್ರೇಲಿನ ದೇವರ ಮಹಿಮೆಯ ದರ್ಶನದಲ್ಲಿ ನಾನು ಕಂಡ ಜೀವಿಗಳು ಕೆರೂಬಿದೂತರೇ ಎಂದು ತಿಳಿಯಿತು.
20 Esses seres vivos eram os mesmos que eu tinha visto debaixo do Deus de Israel quando estava junto ao rio Quebar. Eu sabia que eram querubins,
21 ಪ್ರತಿಯೊಂದಕ್ಕೂ ನಾಲ್ಕು ಮುಖಗಳೂ, ನಾಲ್ಕು ರೆಕ್ಕೆಗಳೂ ಮತ್ತು ಅವುಗಳ ರೆಕ್ಕೆಗಳ ಕೆಳಗೆ ಮನುಷ್ಯನ ಕೈಗಳಂತಿದ್ದ ಕೈಗಳೂ ಇದ್ದವು.
21 pois cada um tinha quatro rostos, quatro asas e o que se parecia com mãos humanas debaixo das asas.
22 ನಾನು ಕೆಬಾರ್ ಕಾಲುವೆಯ ಪಕ್ಕದಲ್ಲಿ ಕಂಡ ಜೀವಿಗಳ ಮುಖಗಳಂತೆಯೇ ಕೆರೂಬಿದೂತರ ಮುಖಗಳಿದ್ದವು. ಪ್ರತಿಯೊಂದು ನೇರವಾಗಿ ಮುಂದೆ ಸಾಗಿದವು.
22 E seus rostos eram iguais aos dos seres que eu tinha visto no Quebar, e se deslocavam para a frente, como os outros.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Ezequiel 10, comparar traduções ou montar um estudo — tudo direto pelo WhatsApp.