Ezequiel 22

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs BKJ

Sair da comparação
1 ಯೆಹೋವನ ಸಂದೇಶವು ನನಗೆ ಬಂತು. ಆತನು ಹೇಳಿದ್ದೇನೆಂದರೆ,
1 Além disso, a palavra do SENHOR veio a mim, dizendo:
2 “ನರಪುತ್ರನೇ, ನೀನು ಹಂತಕರ ನಗರಕ್ಕೆ ನ್ಯಾಯತೀರಿಸುವೆಯಾ? ಆಕೆಯ ಭಯಂಕರ ದುಷ್ಟತನದ ಬಗ್ಗೆ ಆಕೆಗೆ ತಿಳಿಸು.
2 Tu, pois, ó filho do homem, porventura julgarás, julgarás a cidade sanguinária? Sim, tu mostrarás a ela todas as suas abominações.
3 ನೀನು ಹೀಗೆ ಹೇಳಬೇಕು: ‘ನನ್ನ ಒಡೆಯನಾದ ಯೆಹೋವನ ಮಾತುಗಳಿವು. ಈ ನಗರವು ಕೊಲೆಗಾರರಿಂದ ತುಂಬಿದೆ. ಆದ್ದರಿಂದ ಆಕೆಯ ಶಿಕ್ಷೆಯ ದಿನವು ಬಂದಿದೆ. ಆಕೆ ತನಗೋಸ್ಕರ ಹೊಲಸು ವಿಗ್ರಹಗಳನ್ನು ಮಾಡಿ ತನ್ನನ್ನು ಹೊಲಸು ಮಾಡಿಕೊಂಡಿದ್ದಾಳೆ.
3 Então, dize: Assim diz o Senhor DEUS: A cidade que derrama sangue no seu meio, para que seu tempo possa vir, e fazer ídolos contra si mesma para se contaminar!
4 “‘ಜೆರುಸಲೇಮಿನ ನಿವಾಸಿಗಳೇ, ನೀವು ಅನೇಕರನ್ನು ಕೊಂದಿದ್ದೀರಿ. ಆದ್ದರಿಂದ ನೀವು ದೋಷಿಗಳು. ನೀವು ಹೊಲಸು ವಿಗ್ರಹಗಳನ್ನು ಮಾಡಿಕೊಂಡಿದ್ದೀರಿ. ಆದ್ದರಿಂದ ನೀವು ಅಶುದ್ಧರು. ನಿಮ್ಮನ್ನು ಶಿಕ್ಷಿಸುವ ಸಮಯ ಈಗ ಬಂದಿದೆ. ನಿಮ್ಮ ಅಂತ್ಯವು ಬಂದಿದೆ. ಆದ್ದರಿಂದಲೇ ಇತರ ಜನಾಂಗಗಳವರು ನಿನ್ನನ್ನು ಗೇಲಿಮಾಡುವರು. ಎಲ್ಲಾ ದೇಶಗಳು ನಿಮ್ಮನ್ನು ನೋಡಿ ನಗುವವು.
4 Tu te tornaste culpada em teu sangue que derramaste; e contaminaste a ti mesma em teus ídolos que fabricaste, e fizeste com que seus dias se aproximassem, e chegaste até mesmo aos teus anos; portanto, eu te fiz uma vergonha para os pagãos, e um escárnio para todos os países.
5 ದೂರ ಮತ್ತು ಹತ್ತಿರದಲ್ಲಿರುವ ಎಲ್ಲರೂ ನಿನ್ನನ್ನು ಹಾಸ್ಯ ಮಾಡುವರು. ನಿನ್ನ ಹೆಸರನ್ನು ನೀನು ಕೆಡಿಸಿದ್ದೀ. ನೀನು ಗದ್ದಲದಿಂದ ತುಂಬಿಹೋಗಿರುವೆ.
5 Aqueles que estiverem perto, e aqueles que estiverem longe de ti, te escarnecerão, que és infame, e muito aborrecida.
6 “‘ಇಗೋ, ಜೆರುಸಲೇಮಿನಲ್ಲಿ ಇತರರನ್ನು ಕೊಲ್ಲುವದಕ್ಕಾಗಿಯೇ ತಮ್ಮನ್ನು ಬಲಿಷ್ಠರನ್ನಾಗಿ ಮಾಡಿಕೊಂಡಿರುವ ಇಸ್ರೇಲಿನ ಅಧಿಪತಿಗಳು ಇದ್ದಾರೆ.
6 Eis os príncipes de Israel, cada um estavam em ti com o poder de derramar sangue.
7 ಜೆರುಸಲೇಮಿನ ಜನರು ತಮ್ಮನ್ನು ಹೆತ್ತವರನ್ನು ಸನ್ಮಾನಿಸುವುದಿಲ್ಲ. ಪರದೇಶಸ್ಥರನ್ನು ಹಿಂಸಿಸುವರು. ಆ ಸ್ಥಳದಲ್ಲಿ ವಿಧೆವೆಯರಿಗೂ ಅನಾಥರಿಗೂ ಮೋಸ ಮಾಡುವರು.
7 Em ti eles colocaram a luz, pelo pai e pela mãe; no meio de ti eles trataram com opressão o estrangeiro; em ti eles aborreceram o órfão e a viúva.
8 ನೀವು ನನ್ನ ಪವಿತ್ರ ವಸ್ತುಗಳನ್ನು ಕಡೆಗಾಣಿಸಿರುವಿರಿ. ನಾನು ನೇಮಿಸಿರುವ ವಿಶೇಷ ವಿಶ್ರಾಂತಿಯ ದಿವಸಗಳನ್ನು ಅಲಕ್ಷ್ಯ ಮಾಡುತ್ತೀರಿ.
8 Tu desprezaste as minhas coisas santas, e profanaste os meus shabats.
9 ಜೆರುಸಲೇಮ್ ನಿವಾಸಿಗಳು ಇತರರ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಾರೆ. ಆ ನಿರಪರಾಧಿ ಜನರನ್ನು ಹತ್ಯೆ ಮಾಡಲು ಹಾಗೆ ಮಾಡುತ್ತಾರೆ. ಆ ಜನರು ಬೆಟ್ಟದ ಮೇಲೆ ಹೋಗಿ ಸುಳ್ಳುದೇವರುಗಳನ್ನು ಸನ್ಮಾನಿಸುವುದಕ್ಕಾಗಿ ಊಟಮಾಡುತ್ತಾರೆ.
9 Em ti há homens que carregam contos para derramarem sangue; e em ti eles comem sobre os montes; no meio de ti cometem lascívia.
10 ತಮ್ಮ ತಂದೆಯ ಹೆಂಡತಿಯರೊಂದಿಗೆ ಅನೈತಿಕ ಸಂಬಂಧವಿಟ್ಟುಕೊಳ್ಳುತ್ತಾರೆ. ಸ್ತ್ರೀಯರ ಮೇಲೆ ಅತ್ಯಾಚಾರ ಮಾಡುತ್ತಾರೆ; ಮುಟ್ಟಾಗಿ ಅಶುದ್ಧರಾಗಿರುವ ಸ್ತ್ರೀಯರ ಮೇಲೂ ಅವರು ಅತ್ಯಾಚಾರ ಮಾಡುತ್ತಾರೆ.
10 Em ti eles descobriram a nudez do pai; em ti eles humilharam aquela que estava separada por poluição.
11 ಇಂತಹ ಪಾಪಗಳನ್ನು ತಮ್ಮ ನೆರೆಯವನ ಹೆಂಡತಿಯೊಂದಿಗೆ ನಡಿಸುತ್ತಾರೆ. ಒಬ್ಬನು ತನ್ನ ಸ್ವಂತ ಸೊಸೆಯೊಂದಿಗೆ ಮಲಗಿ ಆಕೆಯನ್ನು ಅಶುದ್ಧಳನ್ನಾಗಿ ಮಾಡಿದನು. ಮತ್ತೊಬ್ಬನು ತನ್ನ ತಂದೆಯ ಮಗಳು, ತನ್ನ ತಂಗಿಯನ್ನೆ ಬಲವಂತದಿಂದ ಕೆಡಿಸಿರುತ್ತಾನೆ.
11 Um cometeu abominação com a mulher do seu vizinho, e outro lascivamente contaminou sua nora; e outro em ti humilhou sua irmã, filha de seu pai.
12 ಜೆರುಸಲೇಮಿನಲ್ಲಿ ನೀವು ಕೊಲೆ ಮಾಡುವದಕ್ಕಾಗಿ ಹಣ ತೆಗೆದುಕೊಳ್ಳುತ್ತೀರಿ. ಸಾಲಕೊಟ್ಟು ಅದಕ್ಕೆ ಬಡ್ಡಿ ತೆಗೆದುಕೊಳ್ಳುತ್ತೀರಿ. ಸ್ವಲ್ಪ ಹಣ ಮಾಡುವದಕ್ಕಾಗಿ ನಿಮ್ಮ ನೆರೆಯವನನ್ನೆ ಮೋಸ ಮಾಡುತ್ತೀರಿ. ನನ್ನನ್ನು ನೀವು ಮರೆತುಬಿಟ್ಟಿರುವಿರಿ.’” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ.
12 Em ti eles tomaram presentes para derramarem sangue; tu tomaste a usura e o aumento, e gananciosamente ganhaste de teus vizinhos pela extorsão, e me esqueceste, diz o Senhor DEUS.
13 ದೇವರು ಹೀಗೆ ಹೇಳಿದನು: “‘ನೋಡಿರಿ, ನಾನು ಕೈಯನ್ನು ಬಡಿದು ನಿಮ್ಮನ್ನು ನಿಲ್ಲಿಸಿ ಬಿಡುವೆನು. ನೀವು ಮೋಸ ಮಾಡಿದ್ದಕ್ಕಾಗಿಯೂ, ಜನರನ್ನು ಕೊಲೆ ಮಾಡಿದ್ದಕ್ಕಾಗಿಯೂ ನಿಮ್ಮನ್ನು ಶಿಕ್ಷಿಸುವೆನು.
13 Eis que, portanto, eu bati minha mão no teu ganho desonesto que fizeste, e no teu sangue que está no meio de ti.
14 ನಾನು ನಿಮ್ಮನ್ನು ಶಿಕ್ಷಿಸಲು ಬಂದಾಗ ನೀವು ಧೈರ್ಯಶಾಲಿಗಳಾಗುವಿರಾ? ನಿಮ್ಮಲ್ಲಿ ಬಲವಿರುವದೊ? ನಾನೇ ಯೆಹೋವನು. ನಾನು ಹೇಳಿದ ಪ್ರಕಾರ ಮಾಡುವೆನು.
14 Pode teu coração suportar, ou podem tuas mãos estar fortes nos dias em que eu tratar contigo? Eu, o SENHOR, o disse, e o farei.
15 ನಾನು ನಿಮ್ಮನ್ನು ಜನಾಂಗಗಳ ಮಧ್ಯೆ ಚದರಿಸಿಬಿಡುವೆನು. ನಿಮ್ಮನ್ನು ಬಹುದೇಶಗಳ ಮಧ್ಯೆ ಅಟ್ಟಿಬಿಡುವೆನು. ಈ ನಗರದಲ್ಲಿರುವ ಅಸಹ್ಯ ವಸ್ತುಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡುವೆನು.
15 E espalhar-te-ei entre os pagãos, e dispersar-te-ei nos países, e consumirei tua imundície de ti.
16 ಜೆರುಸಲೇಮೇ, ನಿನಗೆ ಸಂಭವಿಸುವ ಸಂಗತಿಗಳಿಂದ ಜನಾಂಗಗಳ ಮುಂದೆ ನಿನ್ನ ಕೀರ್ತಿಯು ಹಾಳಾಗುವುದು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವೆ.’”
16 E tu tomarás a tua herança em ti mesmo à vista dos pagãos, e saberás que eu sou o SENHOR.
17 ಯೆಹೋವನ ವಾಕ್ಯವು ನನಗೆ ಬಂತು. ಆತನು ಹೀಗೆಂದನು:
17 E a palavra do SENHOR veio a mim, dizendo:
18 “ನರಪುತ್ರನೇ, ಇಸ್ರೇಲ್ ಜನಾಂಗವು ನನ್ನ ಪಾಲಿಗೆ ನಿಷ್ಪ್ರಯೋಜಕವಾಗಿದೆ. ಅವರು ತಾಮ್ರದಂತೆ, ತವರದಂತೆ, ಕಬ್ಬಿಣದಂತೆ ಮತ್ತು ಸೀಸದಂತೆ ಮತ್ತು ಬೆಳ್ಳಿಯನ್ನು ಕುಲುಮೆಯಲ್ಲಿ ಕರಗಿಸಿ ಶುದ್ಧೀಕರಿಸಿದಾಗ ಉಳಿಯುವ ಕಂದುಬೆಳ್ಳಿಯಂತೆ ಇದ್ದಾರೆ.
18 Filho do homem, a casa de Israel está para se tornar escória; todos eles são bronze, e estanho, e ferro, e chumbo no meio da fornalha; eles são a escória da prata.
19 ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ. ‘ನೀವೆಲ್ಲರೂ ಪ್ರಯೋಜನವಿಲ್ಲದ ಲೋಹವಾಗಿದ್ದೀರಿ. ಆದ್ದರಿಂದ ನಾನು ನಿಮ್ಮನ್ನು ಜೆರುಸಲೇಮಿನೊಳಗೆ ಒಟ್ಟುಗೂಡಿಸುತ್ತೇನೆ.
19 Portanto, assim diz o Senhor DEUS: Porque vós todos vos tornastes em escória, por isso, eis que eu vos ajuntarei no meio de Jerusalém.
20 ಕೆಲಸಗಾರರು ಬೆಳ್ಳಿ, ತಾಮ್ರ, ಸೀಸ, ತವರ, ಕಬ್ಬಿಣ ಇವುಗಳನ್ನೆಲ್ಲಾ ಬೆಂಕಿಗೆ ಹಾಕುವರು. ಬೆಂಕಿಯನ್ನೂದಿ ಶಾಖ ಹೆಚ್ಚು ಮಾಡುವರು. ಆಗ ಲೋಹಗಳು ಕರಗಲು ಪ್ರಾರಂಭವಾಗುವವು. ಅದೇ ರೀತಿಯಲ್ಲಿ ನಾನು ನಿಮ್ಮನ್ನು ನನ್ನ ಬೆಂಕಿಯಲ್ಲಿ ಹಾಕಿ ಕರಗಿಸುವೆನು. ನನ್ನ ರೌದ್ರವೇ ಆ ಬೆಂಕಿ.
20 Como eles juntam a prata, e o bronze, e o ferro, e o chumbo, e o estanho, no meio da fornalha, para assoprar o fogo sobre eles, para os derreter; assim eu vos juntarei na minha ira e na minha fúria, e vos deixarei lá e vos derreterei.
21 ನಾನು ನಿಮ್ಮನ್ನು ಆ ಬೆಂಕಿಯಲ್ಲಿ ಹಾಕುವೆನು. ನನ್ನ ರೌದ್ರವೆಂಬ ಬೆಂಕಿಯನ್ನು ಉದಿ ಶಾಖ ಹೆಚ್ಚಿಸುವೆನು. ಆಗ ನೀವು ಕರಗಲು ಪ್ರಾರಂಭಿಸುವಿರಿ.
21 Sim, eu vos juntarei, e vos assoprarei no fogo da minha ira, e sereis derretidos no seu meio.
22 ಬೆಳ್ಳಿಯು ಕುಲುಮೆಯಲ್ಲಿ ಕರಗಿಹೋಗುವಂತೆಯೇ ನೀವು ಪಟ್ಟಣದಲ್ಲಿ ಕರಗಿಹೋಗುವಿರಿ. ಯೆಹೋವನಾದ ನಾನೇ ನನ್ನ ಕೋಪವನ್ನು ನಿಮ್ಮ ಮೇಲೆ ಸುರಿದೆನೆಂದು ಆಗ ನೀವು ಅರ್ಥಮಾಡಿಕೊಳ್ಳುವಿರಿ.’”
22 Como a prata é derretida no meio da fornalha, assim sereis fundidos no meio dela; e sabereis que eu, o SENHOR, derramei a minha fúria sobre vós.
23 ಯೆಹೋವನ ವಾಕ್ಯವು ನನಗೆ ಬಂದಿತು. ಆತನು,
23 E a palavra do SENHOR veio a mim, dizendo:
24 “ನರಪುತ್ರನೇ, ಇದನ್ನು ಜೆರುಸಲೇಮಿಗೆ ಹೇಳು. ಮಳೆಯನ್ನೆ ಪಡೆದಿಲ್ಲದ ಭೂಮಿಯಂತೆ ಆಕೆ ಇದ್ದಾಳೆಂದು ಆಕೆಗೆ ತಿಳಿಸು. ನನ್ನ ಕೋಪದ ಸಮಯದಲ್ಲಿ ಆಕೆಯ ಮೇಲೆ ಮಳೆಯೇ ಸುರಿದಿಲ್ಲ.
24 Filho do homem, dize-lhe: Tu és a terra que não está purificada, sem chuva no dia da indignação.
25 ಜೆರುಸಲೇಮಿನ ಪ್ರವಾದಿಗಳು ತಾನು ಬೇಟೆಯಾಡಿ ಕೊಂದ ಪ್ರಾಣಿಯನ್ನು ತಿನ್ನುವ ಗರ್ಜಿಸುವ ಸಿಂಹದಂತಿದ್ದಾರೆ. ಆ ಪ್ರವಾದಿಗಳು ಅನೇಕ ಪ್ರಾಣಗಳನ್ನು ತೆಗೆದುಕೊಂಡಿದ್ದಾರೆ. ಅವರಿಂದ ಬೆಲೆಬಾಳುವ ವಸ್ತುಗಳನ್ನು ಕದ್ದುಕೊಂಡಿದ್ದಾರೆ. ಜೆರುಸಲೇಮಿನಲ್ಲಿ ಅನೇಕ ಸ್ತ್ರೀಯರು ವಿಧವೆಯರಾಗಲು ಅವರೇ ಕಾರಣರಾಗಿದ್ದಾರೆ.
25 Há uma conspiração dos seus profetas no meio dela, como um leão que ruge, devorando a presa; eles devoraram as almas; tomaram o tesouro e coisas preciosas, fizeram muitas viúvas no meio dela.
26 “ಯಾಜಕರು ನನ್ನ ಉಪದೇಶವನ್ನು ನಿರಾಕರಿಸಿರುತ್ತಾರೆ; ಪರಿಶುದ್ಧ ವಸ್ತುಗಳನ್ನು ಸರಿಯಾಗಿ ಲಕ್ಷ್ಯ ಮಾಡುತ್ತಿಲ್ಲ; ಅವುಗಳಿಗೆ ಮಹತ್ವವನ್ನು ಕೊಡುತ್ತಿಲ್ಲ. ಅವರು ಪವಿತ್ರ ವಸ್ತುಗಳನ್ನು ಅಪವಿತ್ರ ವಸ್ತುಗಳಂತೆ ನೋಡುತ್ತಿದ್ದಾರೆ. ಯಾವುದು ಶುದ್ಧ, ಯಾವುದು ಅಶುದ್ಧ ಎಂಬುದರ ಬಗ್ಗೆ ಅವರು ಜನರಿಗೆ ಸರಿಯಾಗಿ ಉಪದೇಶಿಸುತ್ತಿಲ್ಲ. ನನ್ನ ವಿಶೇಷ ವಿಶ್ರಾಂತಿ ದಿವಸಗಳನ್ನು ಮಾನ್ಯ ಮಾಡುತ್ತಿಲ್ಲ. ನಾನು ಏನೂ ಅಲ್ಲವೆಂಬಂತೆ ನನ್ನನ್ನು ಅವರು ನೋಡುತ್ತಾರೆ.
26 Os seus sacerdotes transgridem a minha lei, e profanam as minhas coisas santas; eles não põem diferença entre o santo e o profano, nem mostram diferença entre o imundo e o limpo; e eles escondem seus olhos dos meus shabats, e eu sou profanado no meio deles.
27 “ಜೆರುಸಲೇಮಿನ ನಾಯಕರು ತಾನು ಹಿಡಿದ ಪ್ರಾಣಿಯನ್ನು ತಿನ್ನುವ ತೋಳಕ್ಕೆ ಸಮಾನರಾಗಿದ್ದಾರೆ. ಅವರು ಧನಿಕರಾಗುವದಕ್ಕಾಗಿ ಜನರನ್ನು ಹಿಡಿದು ಕೊಲ್ಲುವರು.
27 Os seus príncipes no meio dela são como lobos devorando a presa, para derramarem sangue, e para destruírem as almas, para conseguirem o ganho desonesto.
28 “ಪ್ರವಾದಿಗಳು ಜನರನ್ನು ಎಚ್ಚರಿಸುವದಿಲ್ಲ. ಸತ್ಯವನ್ನು ಮುಚ್ಚಿಡುತ್ತಾರೆ. ಒಂದು ಗೋಡೆಯನ್ನು ದುರಸ್ತಿ ಮಾಡದೆ ಅದರ ರಂಧ್ರಗಳನ್ನು ಗಾರೆಯಿಂದ ಮುಚ್ಚುವ ಕೆಲಸಗಾರರಂತಿದ್ದಾರೆ. ಅವರು ಸುಳ್ಳುದರ್ಶನಗಳನ್ನೆ ನೋಡುತ್ತಾರೆ. ತಮ್ಮ ಭವಿಷ್ಯದ ಬಗ್ಗೆ ಶಕುನದ ಮೂಲಕ ತಿಳಿದುಕೊಳ್ಳುವುದೆಲ್ಲ ಸುಳ್ಳಾಗಿರುತ್ತದೆ. ಅವರು, ‘ನನ್ನ ಒಡೆಯನಾದ ಯೆಹೋವನು ಹೇಳಿದನು’ ಎಂಬುದಾಗಿ ಸುಳ್ಳು ಹೇಳುವರು. ಆದರೆ ನಿಜವಾಗಿಯೂ ಯೆಹೋವನು ಅವರ ಕೂಡ ಮಾತನಾಡಲಿಲ್ಲ.
28 E os seus profetas os cobriram com argamassa de lodo, vendo a vaidade, e adivinhando-lhes mentiras, dizendo: Assim diz o Senhor DEUS; quando o SENHOR não falou.
29 “ಸಾಮಾನ್ಯ ಜನರು ಮೋಸ ಮಾಡುತ್ತಾರೆ ಮತ್ತು ದರೋಡೆ ಮಾಡುತ್ತಾರೆ. ತಾವು ಧನಿಕರಾಗುವದಕ್ಕೆ ನಿಸ್ಸಹಾಯಕರಾದ ಭಿಕ್ಷೆಗಾರರನ್ನು ಸುಲುಕೊಳ್ಳುವರು. ಅವರು ಪರದೇಶಿಗಳಿಗೆ ಮೋಸಮಾಡಿ ಅವರಿಗೆ ಅನ್ಯಾಯ ಮಾಡುವರು.
29 O povo da terra usou de opressão, exercitou o roubo, e aborreceu o pobre e o necessitado; sim, eles oprimiram o estranho injustamente.
30 “ನನ್ನ ಕೋಪದಿಂದ ದೇಶವು ನಾಶವಾಗದಂತೆ ಅದನ್ನು ರಕ್ಷಿಸಲು ಗೋಡೆಯನ್ನು ಸರಿಪಡಿಸುವುದಕ್ಕಾಗಿಯೂ ಗೋಡೆಯು ಒಡೆದುಹೋಗಿದ್ದ ಸ್ಥಳದಲ್ಲಿ ನಿಂತುಕೊಳ್ಳುವುದಕ್ಕಾಗಿ ಅವರಲ್ಲಿ ನಾನು ಒಬ್ಬನನ್ನು ಎದುರುನೋಡಿದೆ. ಆದರೆ ಯಾರೂ ನನಗೆ ಸಿಗಲಿಲ್ಲ.
30 E eu busquei por um homem entre eles, que fizesse o cerco, e que se pusesse na brecha diante de mim pela terra, para que eu não a destruísse; mas eu não encontrei nenhum.
31 ಅದಕ್ಕಾಗಿ ನಾನು ಅವರಿಗೆ ನನ್ನ ಕೋಪವನ್ನು ತೋರಿಸುವೆನು. ಅವರ ದುಷ್ಟತನಕ್ಕಾಗಿ ನಾನು ಅವರನ್ನು ಶಿಕ್ಷಿಸುವೆನು. ಅವರೇ ಅದಕ್ಕೆ ಜವಾಬ್ದಾರರು.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.
31 Portanto, eu derramei a minha indignação sobre eles; eu os consumi com o fogo da minha ira; seu próprio caminho eu recompensei sobre suas cabeças, diz o Senhor DEUS.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Ezequiel 22, comparar traduções ou montar um estudo — tudo direto pelo WhatsApp.