Ezequiel 23

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVT

Sair da comparação
NVT Nova Versão Transformadora
1 ಯೆಹೋವನ ಮಾತುಗಳು ನನಗೆ ಬಂದವು. ಆತನು ಹೇಳಿದ್ದೇನೆಂದರೆ,
1 Recebi esta mensagem do S enhor :
2 “ನರಪುತ್ರನೇ, ಸಮಾರ್ಯ ಮತ್ತು ಜೆರುಸಲೇಮಿನ ಈ ಕಥೆಯನ್ನು ಕೇಳು. ಇಬ್ಬರು ಅಕ್ಕತಂಗಿಯರು ಇದ್ದರು. ಅವರು ಒಂದೇ ತಾಯಿಯ ಮಕ್ಕಳಾಗಿದ್ದರು.
2 “Filho do homem, havia duas irmãs, filhas da mesma mãe.
3 ಅವರು ಈಜಿಪ್ಟಿನಲ್ಲಿ ಇನ್ನೂ ಎಳೆ ಪ್ರಾಯದಲ್ಲಿರುವಾಗಲೇ ಸೂಳೆಯರಾದರು. ಈಜಿಪ್ಟಿನಲ್ಲಿ ಅವರು ಮೊದಲ ಬಾರಿ ಸಂಭೋಗಿಸಿದರು. ಪುರುಷರು ತಮ್ಮ ಮೊಲೆತೊಟ್ಟುಗಳನ್ನು ಮುಟ್ಟಿ ಅವರ ಎಳೆಸ್ತನಗಳನ್ನು ಹಿಡಿಯಲು ಬಿಟ್ಟರು.
3 Elas se tornaram prostitutas no Egito. Quando ainda eram meninas, deixavam que homens acariciassem seus seios.
4 ಹಿರಿಯ ಅಕ್ಕನ ಹೆಸರು ಒಹೊಲ. ತಂಗಿಯ ಹೆಸರು ಒಹೊಲೀಬ. ಅವರಿಬ್ಬರೂ ನನ್ನ ಹೆಂಡತಿಯರಾದರು. ಅವರು ಗಂಡುಮಕ್ಕಳನ್ನು ಮತ್ತು ಹೆಣ್ಣುಮಕ್ಕಳನ್ನು ಹೆತ್ತರು. ಒಹೊಲ ಎಂದರೆ ಸಮಾರ್ಯ; ಮತ್ತು ಒಹೊಲೀಬ ಎಂದರೆ ಜೆರುಸಲೇಮ್.
4 A irmã mais velha se chamava Oolá, e a mais nova, Oolibá. Casei-me com elas, e me deram filhos e filhas. Refiro-me a Samaria e Jerusalém, pois Oolá é Samaria, e Oolibá, Jerusalém.
5 “ಒಹೊಲಳು ನನಗೆ ಅಪನಂಬಿಗಸ್ತಳಾದಳು. ಆಕೆ ಸೂಳೆಯಂತೆ ಜೀವಿಸತೊಡಗಿದಳು. ಆಕೆ ಪುರುಷರಿಗಾಗಿ ಆಸೆಪಟ್ಟಳು.
5 “Então, embora fosse minha, Oolá desejou ardentemente outros amantes e se entregou aos assírios.
6 ನೀಲಿ ಸಮವಸ್ತ್ರ ಧರಿಸಿದ್ಧ ಅಶ್ಶೂರದ ಸೈನಿಕರನ್ನು ನೋಡಿದಳು. ಅವರೆಲ್ಲಾ ಕುದುರೆ ಸವಾರಿ ಮಾಡುವ ಸುಂದರವಾದ ಯುವಕರು. ಅವರೆಲ್ಲಾ ನಾಯಕರೂ ಅಧಿಕಾರಿಗಳೂ ಆಗಿದ್ದರು.
6 Todos eles eram jovens atraentes, capitães e comandantes, com belas roupas azuis, montados a cavalo.
7 ಒಹೊಲಳು ಅವರೊಂದಿಗೆ ರಮಿಸತೊಡಗಿದಳು. ಅವರೆಲ್ಲರೂ ಅಶ್ಶೂರರ ಸೈನ್ಯದಿಂದ ಆರಿಸಿ ತೆಗೆದವರಾಗಿದ್ದರು. ಆಕೆಗೆ ಅವರೆಲ್ಲರ ಜೊತೆಯಲ್ಲೂ ಮಲಗಬೇಕಿತ್ತು. ಅವರ ಹೊಲಸು ವಿಗ್ರಹಗಳಿಂದ ಹೊಲಸಾದಳು.
7 Assim, ela se prostituiu com os homens mais desejáveis da Assíria, adorou seus ídolos e se contaminou.
8 ಇದರ ಜೊತೆಯಲ್ಲಿಯೇ ಈಜಿಪ್ಟಿನೊಂದಿಗೆ ತನ್ನ ಪ್ರಣಯ ಸಂಬಂಧವನ್ನು ಮುಂದುವರಿಸುತ್ತಿದ್ದಳು. ಆಕೆಯು ಇನ್ನೂ ಎಳೆಯ ಹುಡುಗಿಯಾಗಿದ್ದಾಗಲೇ ಈಜಿಪ್ಟ್ ಆಕೆಯೊಂದಿಗೆ ಸಂಭೋಗ ಮಾಡಿತ್ತು. ಅವಳ ಎಳೆ ಸ್ತನಗಳನ್ನು ಹಿಸುಕಿದವರಲ್ಲಿ ಮೊದಲನೆಯವರು ಈಜಿಪ್ಟಿನವರೇ. ಈಜಿಪ್ಟ್ ತನ್ನ ಅನೈತಿಕ ಪ್ರೀತಿಯನ್ನು ಆಕೆಯ ಮೇಲೆ ಸುರಿಯಿತು.
8 Pois, quando ela saiu do Egito, não deixou para trás a prostituição. Continuou depravada como em sua juventude, quando os egípcios dormiram com ela, acariciaram seus seios e a usaram como prostituta.
9 ಆಕೆಯ ಪ್ರಿಯತಮರಿಗೆ ನಾನು ಆಕೆಯನ್ನು ಬಿಟ್ಟುಕೊಟ್ಟೆನು. ಆಕೆಗೆ ಅಶ್ಶೂರದವರು ಬೇಕಾಯಿತು. ನಾನು ಆಕೆಯನ್ನು ಅವರಿಗೆ ಬಿಟ್ಟುಕೊಟ್ಟೆನು.
9 “Por isso eu a entreguei a seus amantes assírios, que ela tanto desejou.
10 ಅವರು ಬಲವಂತದಿಂದ ಆಕೆಯನ್ನು ಸಂಭೋಗಿಸಿದರು. ಆಕೆಯ ಮಕ್ಕಳನ್ನು ತೆಗೆದುಕೊಂಡರು. ಖಡ್ಗವನ್ನು ತೆಗೆದುಕೊಂಡು ಆಕೆಯನ್ನು ಕೊಂದುಹಾಕಿದರು. ಆಕೆಯನ್ನು ಶಿಕ್ಷಿಸಿದರು. ಸ್ತ್ರೀಯರು ಈಗಲೂ ಆಕೆಯ ವಿಷಯ ಮಾತನಾಡುತ್ತಿದ್ದಾರೆ.
10 Eles arrancaram suas roupas, levaram seus filhos e filhas e então a mataram. Depois que ela recebeu esse castigo, sua reputação tornou-se conhecida entre todas as mulheres da terra.
11 “ಆಕೆಯ ತಂಗಿಯಾದ ಒಹೊಲೀಬಳು ಆಕೆಗಾದದ್ದನ್ನೆಲ್ಲಾ ನೋಡಿದ್ದಳು. ಆದರೆ ಒಹೊಲೀಬಳು ಅಕ್ಕನಿಗಿಂತ ಹೆಚ್ಚು ಪಾಪ ಮಾಡಿದಳು. ಆಕೆ ಒಹೊಲಳಿಗಿಂತ ಹೆಚ್ಚು ಅಪನಂಬಿಗಸ್ತಿಕೆಯುಳ್ಳವಳಾಗಿದ್ದಳು.
11 “Contudo, embora Oolibá tenha visto o que aconteceu à sua irmã Oolá, seguiu pelo mesmo caminho. Na verdade, foi ainda mais depravada e se entregou ao desejo e à prostituição.
12 ಆಕೆಗೆ ಅಶ್ಶೂರದ ಅಧಿಕಾರಿಗಳೂ ನಾಯಕರುಗಳೂ ಬೇಕಾಗಿದ್ದರು. ಆಕೆಗೆ ನೀಲ ಸಮವಸ್ತ್ರ ಧರಿಸಿ ಕುದುರೆಸವಾರಿ ಮಾಡುವ ಸೈನಿಕರು ಬೇಕಾಗಿದ್ದರು. ಅವರೆಲ್ಲಾ ಮನೋಹರವಾದ ಯುವಕರು.
12 Cobiçou os assírios — os capitães e comandantes em belos uniformes, montados a cavalo —, todos eles jovens atraentes.
13 ಆಕೆಯು ತನ್ನನ್ನು ಹೊಲಸು ಮಾಡಿಕೊಂಡಿರುವುದನ್ನು ನಾನು ನೋಡಿದೆನು. ಆ ಸ್ತ್ರೀಯರಿಬ್ಬರೂ (ನಾಶನದ) ಒಂದೇ ಮಾರ್ಗವನ್ನು ಅನುಸರಿಸುತ್ತಿದ್ದರು.
13 Vi que estava se contaminando, como sua irmã mais velha.
14 “ಒಹೊಲೀಬಳು ನನಗೆ ಅಪನಂಬಿಗಸ್ತಳಾಗಿ ಮುಂದುವರಿದಳು. ಗೋಡೆಯ ಮೇಲೆ ಕೆತ್ತಲ್ಪಟ್ಟಿದ್ದ ಗಂಡಸರ ಚಿತ್ರಗಳನ್ನು ಆಕೆ ನೋಡಿದಳು. ಅವು ಕೆಂಪು ಸಮವಸ್ತ್ರ ಧರಿಸಿದ್ದ ಕಸ್ದೀಯ ಸೈನಿಕರ ಚಿತ್ರಗಳು.
14 “Então levou sua prostituição ainda mais longe e se apaixonou por figuras pintadas numa parede, figuras de oficiais babilônios, com uniformes vermelhos chamativos
15 ಅವರು ಸೊಂಟಕ್ಕೆ ಪಟ್ಟಿಯನ್ನು ಬಿಗಿದು, ಉದ್ದ ಮುಂಡಾಸವನ್ನು ಧರಿಸಿದ್ದರು. ಅವರೆಲ್ಲರೂ ಅಧಿಕಾರಿಗಳಂತೆ ಕಾಣುತ್ತಿದ್ದರು. ಅವರೆಲ್ಲರೂ ಬಾಬಿಲೋನಿನಲ್ಲಿಯೇ ಹುಟ್ಟಿ ಬೆಳೆದವರಾಗಿದ್ದರು.
15 e com belos cintos e turbantes de tecido fino. Estavam vestidos como oficiais da terra da Babilônia.
16 ಒಹೊಲೀಬಳು ಅವರನ್ನು ಕಂಡಕೂಡಲೇ ಅವರಿಗಾಗಿ ಆಸೆಪಟ್ಟು ಬಾಬಿಲೋನಿನಲ್ಲಿದ್ದ ಅವರ ಬಳಿಗೆ ಸಂದೇಶಕರನ್ನು ಕಳುಹಿಸಿದಳು.
16 Quando ela viu essas pinturas, desejou ardentemente entregar-se a eles, por isso enviou mensageiros à Babilônia para convidá-los para a visitarem.
17 ಆಗ ಆ ಬಾಬಿಲೋನಿನವರು ಬಂದು ಆಕೆಯ ರತಿಮಂಚವನ್ನೆರೀ ಆಕೆಯನ್ನು ಸಂಗಮಿಸಿದರು. ಆಕೆಯನ್ನು ಚೆನ್ನಾಗಿ ಅನುಭೋಗಿಸಿ ಮಲಿನವನ್ನಾಗಿ ಮಾಡಿದರು. ಆದ್ದರಿಂದ ಆಕೆಗೆ ಅವರು ಅಸಹ್ಯವೆನಿಸಿತು.
17 Eles vieram, cometeram adultério com ela e a contaminaram na cama do amor. Depois de ser contaminada, porém, teve nojo deles e os rejeitou.
18 “ತಾನು ಅಪನಂಬಿಗಸ್ತಳೆಂದು ಎಲ್ಲರೂ ತನ್ನನ್ನು ಗುರುತಿಸುವಂತೆ ಒಹೊಲೀಬಳು ಮಾಡಿದಳು. ಆಕೆಯು ತನ್ನ ನಗ್ನ ಶರೀರವನ್ನು ತೋರಿಸಿದಳು. ಆದ್ದರಿಂದ ಅವಳ ಅಕ್ಕ ನನಗೆ ಹೇಗೆ ಅಸಹ್ಯವಾದಳೋ ಅದೇ ರೀತಿ ಈಕೆಯೂ ನನಗೆ ಅಸಹ್ಯವಾದಳು. ನನಗೆ ಆಕೆಯ ಅಕ್ಕನ ಮೇಲಿದ್ದ ಅನುರಾಗ ಹೇಗೆ ತೊಲಗಿಹೋಯಿತೋ ಹಾಗೆಯೇ ಈಕೆಯ ಮೇಲಿನ ಅನುರಾಗವೂ ತೊಲಗಿಹೋಯಿತು.
18 “Da mesma forma, eu tive nojo de Oolibá e a rejeitei, como havia rejeitado sua irmã, porque ela se exibiu diante deles e a eles se entregou para satisfazer seus desejos.
19 ಮತ್ತೆಮತ್ತೆ ಒಹೊಲೀಬಳು ನನಗೆ ಅಪನಂಬಿಗಸ್ತಳಾದಳು. ಆಕೆಯು ಯುವತಿಯಾಗಿದ್ದಾಗ ಈಜಿಪ್ಟಿನಲ್ಲಿ ತಾನು ಮಾಡಿಕೊಂಡಿದ್ದ ಅನೈತಿಕ ಸಂಬಂಧಗಳನ್ನು ನೆನಪುಮಾಡಿಕೊಂಡಳು.
19 Entregou-se, porém, a prostituição ainda maior ao lembrar-se de sua juventude, quando era prostituta no Egito.
20 ಕತ್ತೆಗಳ ಲಿಂಗಗಳಂತಿದ್ದ ಲೈಂಗಿಕ ಲಿಂಗಗಳನ್ನು ಹೊಂದಿದ್ದ ಈಜಿಪ್ಟಿನ ಪ್ರಿಯರನ್ನು ಮತ್ತು ಕುದುರೆಯ ವೀರ್ಯದಂತೆ ಹರಿಯುವ ಅವರ ವೀರ್ಯವನ್ನು ಆಕೆ ನೆನಪುಮಾಡಿಕೊಂಡಳು.
20 Desejou amantes com genitais grandes como de jumentos e ejaculação como de cavalos.
21 “ಒಹೊಲೀಬಳೇ, ನಿನ್ನ ಯೌವನ ಕಾಲದಲ್ಲಿ ನೀನು ಅನುಭೋಗಿಸಿದ್ದನ್ನು ಕನಸು ಕಾಣುತ್ತಿ, ನಿನ್ನ ಈಜಿಪ್ಟಿನ ಪ್ರಿಯತಮರು ನಿನ್ನ ಸ್ತನದ ತೊಟ್ಟುಗಳನ್ನು ಮುಟ್ಟಿ ನಿನ್ನ ಎಳೆ ಸ್ತನಗಳನ್ನು ಹಿಸುಕಿದ್ದನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳುತ್ತಿರುವೆ.
21 E assim, Oolibá, você reviveu a depravação de sua juventude no Egito, quando permitiu que seus seios fossem acariciados.”
22 ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, ‘ಓಹೊಲೀಬಳೇ, ನಿನ್ನ ಪ್ರಿಯತಮರಲ್ಲಿ ಕೆಲವರು ನಿನಗೆ ಅಸಹ್ಯವಾಗಿದ್ದಾರೆ. ಆದರೆ ನಾನು ಆ ಪ್ರಿಯತಮರನ್ನು ಇಲ್ಲಿಗೆ ಕರೆದುಕೊಂಡು ಬರುವೆ. ಅವರು ನಿನ್ನನ್ನು ಸುತ್ತುವರಿಯುವರು.
22 “Portanto, Oolibá, assim diz o S enhor Soberano: De todas as partes, enviarei seus amantes contra você, as mesmas nações das quais você se afastou com nojo.
23 ನಾನು ಬಾಬಿಲೋನಿನ ಕಸ್ದೀಯ ಪುರುಷರನ್ನು ಬರಮಾಡುವೆನು. ನಾನು ಪೆಕೋದ್, ಷೋಯ ಮತ್ತು ಕೋಯ ಇಲ್ಲಿಂದಲೂ, ಅಶ್ಶೂರದ ಯೌವನಸ್ಥರನ್ನು ಬರಮಾಡುವೆನು. ಅಲ್ಲಿಯ ಎಲ್ಲಾ ಅಧಿಕಾರಿಗಳನ್ನೂ ನಾಯಕರನ್ನೂ ಬರಮಾಡುವೆನು. ಅವರೆಲ್ಲರೂ ಸುಂದರವಾದ ಯುವಕರು, ಅಧಿಕಾರಿಗಳು, ಆರಿಸಲ್ಪಟ್ಟ ಯೋಧರು. ಅಶಬರೂಢರೂ ಆಗಿರುವರು.
23 Os babilônios virão com todos os caldeus de Pecode, Soa e Coa. E todos os assírios virão com eles, jovens atraentes, capitães, comandantes, oficiais dos carros de guerra e outros oficiais de alto escalão, todos a cavalo.
24 ಅವರು ನಿನ್ನ ವಿರುದ್ಧವಾಗಿ ರಥಗಳಲ್ಲಿಯೂ ಅರಸರೂಢರಾಗಿಯೂ ಅಂತರಾಷ್ಟ್ರೀಯ ಸೈನ್ಯವಾಗಿ ಬರುವರು. ಅವರ ಕೈಯಲ್ಲಿ ಬರ್ಜಿ, ಗುರಾಣಿ, ಶಿರಸ್ತ್ರಾಣಗಳಿರುವವು. ಅವರು ನಿನ್ನನ್ನು ಸುತ್ತುವರಿಯುವರು. ನೀನು ನನಗೆ ಏನು ಮಾಡಿದ್ದೀ ಎಂದು ನಾನು ಹೇಳಿದಾಗ ಅವರು ತಮ್ಮ ಇಷ್ಟಪ್ರಕಾರ ನಿನ್ನನ್ನು ಶಿಕ್ಷಿಸುವರು.
24 Virão do norte contra você com carros de guerra, carroças e muitas armas, preparados para o ataque. Assumirão posições de batalha e a cercarão com soldados armados com escudos e capacetes. E eu a entregarei a eles para ser castigada, para que façam com você o que quiserem.
25 ನಾನು ನಿನ್ನ ವಿರುದ್ಧವಾಗಿ ನನ್ನ ಈರ್ಷೆಯ ಕೋಪವನ್ನು ನಿನ್ನ ಮೇಲೆ ಸುರಿಸುವೆನು. ಅವರಿಗೆ ಸಿಟ್ಟು ಬಂದು ನಿನ್ನನ್ನು ಹಿಂಸಿಸುವರು. ನಿನ್ನ ಕಿವಿ ಮೂಗುಗಳನ್ನು ಕತ್ತರಿಸಿಹಾಕುವರು. ತಮ್ಮ ಖಡ್ಗದಿಂದ ನಿನ್ನನ್ನು ಸಂಹರಿಸುವರು. ಆಮೇಲೆ ನಿನ್ನ ಮಕ್ಕಳನ್ನು ತೆಗೆದುಕೊಳ್ಳುವರು ಮತ್ತು ನಿನ್ನಲ್ಲಿ ಉಳಿದಿರುವುದನ್ನೆಲ್ಲ ಸುಟ್ಟುಹಾಕುವರು.
25 Voltarei contra você a ira do meu ciúme, e eles a tratarão com crueldade. Cortarão fora seu nariz e suas orelhas e matarão à espada os sobreviventes. Seus filhos serão levados como prisioneiros, e tudo que restar será queimado.
26 ನಿನ್ನಲ್ಲಿರುವ ಉತ್ಕೃಷ್ಟವಾದ ಬಟ್ಟೆ, ಆಭರಣಗಳನ್ನೆಲ್ಲಾ ಸುಲುಕೊಳ್ಳುವರು.
26 Arrancarão suas roupas e lindas joias.
27 ಬಳಿಕ, ಈಜಿಪ್ಟ್ ದೇಶದಲ್ಲಿ ಆರಂಭವಾದ ನಿನ್ನ ನೀಚತನಕ್ಕೆ ಮತ್ತು ಅನೈತಿಕ ಜೀವಿತಕ್ಕೆ ತಡೆಹಾಕುವೆನು. ನೀನು ನಿನ್ನ ಕಣ್ಣುಗಳನ್ನು ಅವರ ಕಡೆಗೆ ಇನ್ನೆಂದಿಗೂ ತಿರುಗಿಸುವದಿಲ್ಲ. ನೀನು ಅವರನ್ನು ಜ್ಞಾಪಿಸಿಕೊಳ್ಳುವುದಿಲ್ಲ.’”
27 Desse modo, acabarei com a depravação e a prostituição que você trouxe do Egito. Nunca mais você olhará com desejo para essas coisas, nem se lembrará mais com saudade de seu tempo no Egito.
28 ನನ್ನ ಒಡೆಯನಾದ ಯೆಹೋವನು ಇದನ್ನು ಹೇಳುತ್ತಾನೆ. “ನೀನು ದೆಬಷೀಸುವ ಜನರ ಕೈಗೆ ನಿನ್ನನ್ನು ಒಪ್ಪಿಸುವೆನು. ನೀನು ಜಿಗುಪ್ಸೆಗೊಂಡ ಜನರಿಗೆ ನಿನ್ನನ್ನು ಒಪ್ಪಿಸುವೆನು.
28 “Pois assim diz o S enhor Soberano: Certamente eu a entregarei a seus inimigos, àqueles que você detesta, àqueles que você rejeitou.
29 ಆಗ ಅವರು ನಿನ್ನನ್ನು ಎಷ್ಟು ದೆಬಷೀಸುವರೆಂದು ನಿನಗೆ ತೋರಿಸುವರು. ನೀನು ದುಡಿದವುಗಳನ್ನೆಲ್ಲ ಅವರು ಕಿತ್ತುಕೊಳ್ಳುವರು. ನಿನ್ನನ್ನು ಬೆತ್ತಲೆಮಾಡಿ ಬಿಟ್ಟುಬಿಡುವರು. ಜನರು ನಿನ್ನ ಪಾಪಗಳನ್ನು ಪರಿಪೂರ್ಣವಾಗಿ ನೋಡುವರು. ನೀನು ಸೂಳೆಯಂತೆ ವರ್ತಿಸಿದ್ದನ್ನು ಅವರು ನೋಡುವರು. ನಿನ್ನ ನೀಚತನವೂ ನಿನ್ನ ಸೂಳೆತನವೂ
29 Eles a tratarão com ódio, tomarão tudo que você possui e a deixarão completamente nua. A vergonha de sua prostituição ficará exposta para todo o mundo.
30 ನಿನ್ನ ಮೇಲೆ ಇವುಗಳನ್ನು ಬರಮಾಡಿದವು; ಯಾಕೆಂದರೆ ನೀನು ನನ್ನನ್ನು ತೊರೆದು ಜನಾಂಗಗಳನ್ನು ಹಿಂಬಾಲಿಸಿದೆ ಮತ್ತು ಅವರ ಕೊಳಕು ವಿಗ್ರಹಗಳಿಂದ ನಿನ್ನನ್ನು ಕೆಡಿಸಿಕೊಂಡೆ.
30 Você trouxe tudo isso sobre si mesma ao se prostituir com outras nações, ao se contaminar com seus ídolos.
31 ನೀನು ನಿನ್ನ ಅಕ್ಕನನ್ನು ಅನುಸರಿಸಿ ಆಕೆಯಂತೆ ಜೀವಿಸಿದೆ. ಆದ್ದರಿಂದ ಆಕೆಯ ದಂಡನೆಯ ಲೋಟವನ್ನು ನಾನು ನಿನ್ನ ಕೈಯಲ್ಲಿ ಇಡುತ್ತೇನೆ.
31 Porque você seguiu pelo mesmo caminho que sua irmã, eu a obrigarei a beber do mesmo cálice de terror do qual ela bebeu.
32 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ:
32 “Assim diz o S enhor Soberano: “Você beberá do cálice de terror de sua irmã, um copo grande e fundo. Ele está cheio até a borda de desprezo e zombaria.
33 ನೀನು ಅಮಲೇರಿದವನ ಹಾಗೆ ತೂರಾಡುವೆ.
33 Embriaguez e angústia se apossarão de você, pois seu cálice está cheio até a borda de desgraça e desolação, o mesmo copo do qual sua irmã, Samaria, bebeu.
34 ನೀನು ಆ ಲೋಟದಿಂದ ಕುಡಿಯುವೆ.
34 Você beberá desse cálice de terror até a última gota. Então o fará em pedaços e com os cacos mutilará seus seios. Eu, o S
35 “ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದನು: ‘ಜೆರುಸಲೇಮೇ, ನೀನು ನನ್ನನ್ನು ಮರೆತುಬಿಟ್ಟೆ. ನೀನು ನನ್ನನ್ನು ತೊರೆದುಬಿಟ್ಟೆ; ಆದ್ದರಿಂದ ನೀನು ನನ್ನನ್ನು ತೊರೆದ ಸೂಳೆಯಂತೆ ಜೀವಿಸಿದ್ದಕ್ಕೆ ಶಿಕ್ಷೆ ಅನುಭವಿಸಬೇಕು. ನಿನ್ನ ನೀಚ ನಡತೆಗಾಗಿ ನೀನು ಕಷ್ಟ ಅನುಭವಿಸಬೇಕು.’”
35 “E, porque você se esqueceu de mim e me deu as costas, assim diz o S enhor Soberano: Você sofrerá as consequências de sua depravação e prostituição”.
36 ನನ್ನ ಒಡೆಯನಾದ ಯೆಹೋವನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನೀನು ಒಹೊಲ ಮತ್ತು ಒಹೊಲೀಬಳನ್ನು ನ್ಯಾಯವಿಚಾರಣೆ ಮಾಡುವಿಯೋ? ಆಗ ನೀನು, ಗಾಬರಿಗೊಳಿಸುವ ಅವರ ದುಷ್ಟತನವನ್ನು ಅವರಿಗೆ ತಿಳಿಸು.
36 O S enhor me disse: “Filho do homem, pronuncie julgamento sobre Oolá e Oolibá por todos os seus pecados detestáveis.
37 ಅವರು ವ್ಯಭಿಚಾರ ಮಾಡಿದ್ದಾರೆ. ಅವರು ಕೊಲೆ ಮಾಡಿರುತ್ತಾರೆ. ಅವರು ಸೂಳೆಯಂತೆ ವರ್ತಿಸಿದ್ದಾರೆ. ಅವರು ತಮ್ಮ ಹೊಲಸು ವಿಗ್ರಹಗಳೊಂದಿಗೆ ಇರಲು ನನ್ನನ್ನು ತೊರೆದುಬಿಟ್ಟಿದ್ದಾರೆ. ಅವರಲ್ಲಿ ನನ್ನ ಮಕ್ಕಳು ಇದ್ದಾರೆ. ಆದರೆ ಅವರನ್ನು ಬಲವಂತದಿಂದ ಬೆಂಕಿಯ ಮೇಲೆ ದಾಟಿಸಿದರು. ತಮ್ಮ ಹೊಲಸು ವಿಗ್ರಹಗಳಿಗೆ ಆಹಾರ ಕೊಡುವಂತೆ ಅವರು ಹಾಗೆ ಮಾಡಿದರು.
37 Elas cometeram adultério e assassinato: adultério ao adorarem ídolos e assassinato ao queimarem como sacrifício os filhos que geraram para mim.
38 ಅಲ್ಲದೆ ನನ್ನ ಪವಿತ್ರ ಆಲಯವನ್ನೂ ನನ್ನ ಪವಿತ್ರವಾದ ವಿಶೇಷ ವಿಶ್ರಾಂತಿ ದಿವಸಗಳನ್ನೂ ಆಲಕ್ಷ್ಯ ಮಾಡಿ ಅದಕ್ಕೆ ಮಹತ್ವವನ್ನು ಕೊಡದೆ ಹೋದರು.
38 Além disso, contaminaram meu templo e profanaram meu sábado.
39 ಅವರ ವಿಗ್ರಹಗಳಿಗೋಸ್ಕರ ತಮ್ಮ ಮಕ್ಕಳನ್ನು ಕೊಂದರು. ಅನಂತರ ಅದೇ ದಿನದಲ್ಲೇ ನನ್ನ ಪವಿತ್ರ ಆಲಯದೊಳಕ್ಕೆ ಹೋಗಿ ಅದನ್ನು ಹೊಲೆ ಮಾಡಿದರು. ನನ್ನ ಆಲಯದೊಳಗೆ ಅವರು ಹಾಗೆ ಮಾಡಿದರು.
39 No mesmo dia em que sacrificaram seus filhos aos ídolos, tiveram a ousadia de vir ao meu templo para adorar; entraram em minha casa e a profanaram.
40 “ಅವರು ದೂರ ಪ್ರಾಂತ್ಯಗಳಿಂದ ಪುರುಷರನ್ನು ಕರಿಸಿದರು. ಅವರಿಗೆ ನೀನು ಸಂದೇಶ ಕಳುಹಿಸಿದೆ. ಅವರು ನಿನ್ನನ್ನು ನೋಡಲು ಬಂದರು. ಅವರಿಗಾಗಿ ನೀನು ಸಾಐನ ಮಾಡಿ, ನಿನ್ನ ಕಣ್ಣುಗಳಿಗೆ ಕಾಡಿಗೆ ಹಚ್ಚಿ, ನಿನ್ನ ಆಭರಣಗಳನ್ನು ಧರಿಸಿಕೊಂಡೆ.
40 “Vocês, irmãs, enviaram mensageiros a terras distantes para conseguir homens. Quando eles chegaram, vocês tomaram banho, pintaram os olhos e colocaram suas joias mais finas para recebê-los.
41 ನೀನು ಅಮೋಬವಾದ ಮಂಚದಲ್ಲಿ ಕುಳಿತುಕೊಂಡೆ. ಅದರ ಮುಂದೆ ಸಿದ್ಧಪಡಿಸಲ್ಪಟ್ಟಿದ್ದ ಮೇಜಿತ್ತು. ಆ ಮೇಜಿನ ಮೇಲೆ ನನ್ನ ಧೂಪ ಮತ್ತು ಎಣ್ಣೆಯನ್ನು ಇಟ್ಟಿರುವೆ.
41 Sentaram-se com eles num sofá com lindos bordados e colocaram meu incenso e meu óleo especial na mesa arrumada diante de vocês.
42 “ನಿಶ್ಚಿಂತೆಯುಳ್ಳ ಗುಂಪಿನ ಆನಂದಪೂರ್ಣವಾದ ಗದ್ದಲವು ಆಕೆಯ ಸುತ್ತಲೂ ಇತ್ತು. ಔತಣಕ್ಕೆ ಅನೇಕರು ಬಂದರು. ಮರುಭೂಮಿಯ ಕಡೆಯಿಂದ ಜನರು ಬರುತ್ತಿರುವಾಗಲೇ ಅಮಲೇರಿಕೊಂಡು ಬಂದರು. ಅವರು ಬಳೆಗಳನ್ನು, ಸುಂದರವಾದ ಕಿರೀಟಗಳನ್ನು ಹೆಂಗಸರಿಗೆ ಕೊಟ್ಟರು.
42 De seu quarto vinham sons de muitos homens bebendo e se divertindo. Eram homens do deserto, lascivos e beberrões, que colocaram pulseiras em seus braços e lindas coroas em sua cabeça.
43 ಆಗ ನಾನು ಅನೈತಿಕ ಜೀವಿತದಲ್ಲಿ ಬತ್ತಿಹೋದ ಒಬ್ಬ ಹೆಂಗಸಿನ ಬಗ್ಗೆ, (ನನ್ನೊಳಗೆ) ‘ಈಗಲೂ ಸಹ ಅವರು ಆಕೆಯೊಂದಿಗೆ ಲೈಂಗಿಕ ಪಾಪ ಮಾಡುವರೇ?’ ಎಂದುಕೊಂಡೆನು.
43 Então eu disse: ‘Se eles querem mesmo ter relações com prostitutas velhas e acabadas como essas, que tenham!’.
44 ಆದರೆ ಅವರು ಒಬ್ಬ ವೇಶ್ಯೆಯ ಬಳಿಗೆ ಹೋಗುವಂತೆಯೇ ಅವರ ಬಳಿಗೆ ಹೋದರು. ಹೌದು ಒಹೊಲ ಮತ್ತು ಒಹೊಲೀಬ ಎಂಬ ಕಾಮುಕ ಸ್ತ್ರೀಯರ ಬಳಿಗೆ ಅವರು ತಿರುಗಿ ಮತ್ತೆಮತ್ತೆ ಹೋದರು.
44 E foi o que fizeram. Tiveram relações com Oolá e Oolibá, prostitutas desavergonhadas.
45 “ನೀತಿವಂತರು ಅವರನ್ನು ವ್ಯಭಿಚಾರ ಮಾಡಿದ ಮತ್ತು ಕೊಲೆ ಮಾಡಿದ ಅಪರಾಧಿಗಳೆಂದು ತೀರ್ಪು ನೀಡುವರು. ಯಾಕೆಂದರೆ, ಒಹೊಲ ಮತ್ತು ಒಹೊಲೀಬಳ ವ್ಯಭಿಚಾರವನ್ನು ಆಚರಣೆ ಮಾಡುತ್ತಾರೆ ಮತ್ತು ರಕ್ತವು ಅವರ ಕೈಗಳ ಮೇಲಿದೆ.”
45 Mas os justos julgarão essas cidades irmãs de acordo com o que de fato são: adúlteras e assassinas.
46 ನನ್ನ ಒಡೆಯನಾದ ಯೆಹೋವನು ನನಗೆ ಹೀಗೆ ಹೇಳಿದನು, “ಜನರನ್ನು ಒಟ್ಟುಗೂಡಿಸು. ಅವರು ಒಟ್ಟಾಗಿ ಸೇರಿ ಒಹೊಲ ಮತ್ತು ಒಹೊಲೀಬರನ್ನು ಶಿಕ್ಷಿಸಲಿ. ಆ ಜನರು ಈ ಸ್ತ್ರೀಯರನ್ನು ಶಿಕ್ಷಿಸಿ ಗೇಲಿ ಮಾಡುವರು.
46 “Agora, assim diz o S enhor Soberano: Tragam um exército contra elas e entreguem-nas para serem aterrorizadas e saqueadas.
47 ಆ ಬಳಿಕ ಜನರ ಗುಂಪು ಅವರ ಮೇಲೆ ಕಲ್ಲೆಸೆದು ಅವರನ್ನು ಕೊಲ್ಲುವುದು. ಆಮೇಲೆ ತಮ್ಮ ಖಡ್ಗಗಳಿಂದ ಅವರನ್ನು ತುಂಡುತುಂಡು ಮಾಡುವರು. ಅವರ ಮಕ್ಕಳನ್ನು ಕೊಂದು ಅವರ ಮನೆಗಳನ್ನು ಸುಟ್ಟುಹಾಕುವರು.
47 Seus inimigos as apedrejarão e as golpearão com espadas. Matarão seus filhos e filhas e queimarão suas casas.
48 ಈ ರೀತಿ, ನಾನು ಅವರ ಅವಮಾನಕರವಾದ ನಡತೆಯನ್ನು ದೇಶದಿಂದ ತೆಗೆದುಹಾಕುವೆನು. ಬೇರೆ ಸ್ತ್ರೀಯರು ಇಂಥಾ ನಾಚಿಕೆಗೆಟ್ಟ ಕೆಲಸ ಮಾಡಬಾರದೆಂದು ಎಚ್ಚರಿಸುವರು.
48 Desse modo, acabarei com a depravação na terra, e meu julgamento servirá de advertência para que outras não sigam seu mau exemplo.
49 ನಿನ್ನ ನಾಚಿಕೆಕರವಾದ ಕಾರ್ಯಗಳಿಗಾಗಿ ಅವರು ನಿನ್ನನ್ನು ಶಿಕ್ಷಿಸುವರು. ನೀನು ಅಸಹ್ಯವಾದ ವಿಗ್ರಹಗಳನ್ನು ಪೂಜೆಮಾಡಿದ್ದಕ್ಕೆ ಶಿಕ್ಷಿಸಲ್ಪಡುವಿ. ಆಗ ನಾನೇ ಒಡೆಯನೂ ಯೆಹೋವನೂ ಎಂದು ನೀನು ತಿಳಿಯುವಿ.”
49 Vocês receberão o castigo merecido por sua prostituição e idolatria. Então saberão que eu sou o S enhor Soberano”.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Ezequiel 23, comparar traduções ou montar um estudo — tudo direto pelo WhatsApp.