Ezequiel 40
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVI
1 ನಾವು ಸೆರೆಹಿಡಿಯಲ್ಪಟ್ಟ ಇಪ್ಪತ್ತೈದನೆ ವರ್ಷದ ಪ್ರಾರಂಭದ ತಿಂಗಳಿನ (ಅಕ್ಟೋಬರ್) ಹತ್ತನೇ ದಿವಸದಲ್ಲಿ ಯೆಹೋವನ ಆತ್ಮನಿಂದ ಪರವಶನಾದೆನು. ಬಾಬಿಲೋನಿಯರು ಜೆರುಸಲೇಮನ್ನು ವಶಪಡಿಸಿಕೊಂಡ ಹದಿನಾಲ್ಕನೇ ವರ್ಷದಲ್ಲಿ ಇದು ಸಂಭವಿಸಿತು. ಆ ದಿವಸದಲ್ಲಿ ಯೆಹೋವನ ಆತ್ಮನಿಂದ ನಾನು ಪರವಶನಾದೆನು. ಆತನು ನನ್ನನ್ನು ಅಲ್ಲಿಗೆ ದರ್ಶನದಲ್ಲಿ ಕೊಂಡೊಯ್ದನು.
1 No vigésimo quinto ano do exílio, no início do ano, no décimo dia do mês, no décimo quarto ano depois da queda da cidade, naquele exato dia a mão do Senhor esteve sobre mim e ele me levou para lá.
2 ದರ್ಶನವೊಂದರಲ್ಲಿ ಯೆಹೋವನು ನನ್ನನ್ನು ಇಸ್ರೇಲ್ ದೇಶಕ್ಕೆ ಒಯ್ದನು. ಆತನು ನನ್ನನ್ನು ಬಹಳ ಉನ್ನತ ಪರ್ವತದ ಬಳಿ ಇರಿಸಿದನು. ನನ್ನೆದುರಿಗಿದ್ದ ಆ ಪರ್ವತ ಒಂದು ನಗರದಂತೆ ಕಂಡಿತು.
2 Em visões de Deus ele me levou a Israel e me pôs num monte muito alto, em cujo lado sul estavam alguns prédios que tinham a aparência de uma cidade.
3 ಯೆಹೋವನು ನನ್ನನ್ನು ಅಲ್ಲಿಗೆ ಕರೆತಂದನು. ಅಲ್ಲಿ ಒಬ್ಬನು ತಾಮ್ರದಂತೆ ಹೊಳೆಯುತ್ತಿದ್ದನು. ಅವನ ಕೈಯಲ್ಲಿ ಅಳತೆಯ ನೂಲೂ, ಅಳತೆಯ ಕೋಲೂ ಇದ್ದವು. ಅವನು ದ್ವಾರದ ಬಳಿಯಲ್ಲಿ ನಿಂತಿದ್ದನು.
3 Ele me levou para lá, e eu vi um homem que parecia de bronze; ele estava de pé junto à entrada, com uma corda de linho e uma vara de medir na mão.
4 ಆಗ ಅವನು ಹೀಗೆ ಹೇಳಿದನು, “ನರಪುತ್ರನೇ, ನೀನು ನಿನ್ನ ಕಣ್ಣು, ಕಿವಿಗಳನ್ನು ಉಪಯೋಗಿಸು, ಇವೆಲ್ಲವನ್ನೂ ಗಮನಿಸಿ ನನ್ನ ಮಾತುಗಳನ್ನು ಕೇಳು. ನಾನು ತೋರಿಸುವ ಪ್ರತಿಯೊಂದು ವಸ್ತುಗಳ ಮೇಲೆ ಚೆನ್ನಾಗಿ ಲಕ್ಷ್ಯವಿಡು. ಯಾಕೆಂದರೆ ಈ ವಿಷಯಗಳನ್ನು ನಿನಗೆ ತೋರಿಸಬೇಕೆಂದೇ ನಿನ್ನನ್ನು ಇಲ್ಲಿಗೆ ತಂದಿರುವೆ. ನೀನು ನೋಡಿದ್ದೆಲ್ಲವನ್ನೂ ಇಸ್ರೇಲ್ ವಂಶದವರಿಗೆ ತಿಳಿಸಬೇಕು.”
4 E ele me disse: "Filho do homem, fixe bem os olhos e procure ouvir bem, e preste atenção a tudo o que vou lhe mostrar, pois por isso você foi trazido aqui. Conte à nação de Israel tudo o que você vai ver".
5 ಆಲಯದ ಹೊರಗಿನಿಂದ ಸುತ್ತಲೂ ಗೋಡೆ ಇರುವದನ್ನು ನಾನು ಕಂಡೆನು. ಅವನ ಕೈಯಲ್ಲಿ ಅಳತೆಯ ಕೋಲಿತ್ತು. ಅದು ಉದ್ದ ಅಳತೆಯಲ್ಲಿ ಆರು ಮೊಳ ಉದ್ದವಾಗಿತ್ತು. ಅವನು ಗೋಡೆಯ ಅಗಲವನ್ನು ಅಳತೆ ಮಾಡಿದಾಗ, ಅದು ಒಂದು ಕೋಲು ಅಗಲವಾಗಿತ್ತು. ಅವನು ಗೋಡೆಯ ಎತ್ತರವನ್ನು ಅಳತೆ ಮಾಡಿದಾಗ ಅದು ಒಂದು ಕೋಲು ಎತ್ತರವಾಗಿತ್ತು.
5 Vi um muro que cercava completamente a área do templo. O comprimento da vara de medir na mão do homem era de seis medidas longas, cada uma com meio metro. Ele mediu o muro, que tinha três metros de espessura e três de altura.
6 ಅವನು ಪೂರ್ವದ ದ್ವಾರಕ್ಕೆ ಹೋದನು. ಅವನು ಅದರ ಮೆಟ್ಟಿಲುಗಳ ಬಳಿಗೆ ಹೋಗಿ ದ್ವಾರದ ಅಗಲವನ್ನು ಅಳತೆಮಾಡಿದನು. ಅದು ಒಂದು ಅಳತೆಕೋಲು ಅಗಲವಾಗಿತ್ತು.
6 Depois ele foi até a porta que dá para o oriente. Subiu os seus degraus e mediu a soleira da porta, que tinha três metros de fundo.
7 ದ್ವಾರಪಾಲಕರ ಕೋಣೆಗಳ ಉದ್ದಗಲವು ಒಂದು ಅಳತೆಕೋಲಿನಷ್ಟಿತ್ತು. ಆ ಕೋಣೆಗಳ ನಡುವೆ ಇದ್ದ ಗೋಡೆಯ ಅಗಲ ಐದು ಮೊಳ ಆಲಯಕ್ಕೆ ಎದುರಾಗಿದ್ದ ಹೆಬ್ಬಾಗಿಲ ಕೈಸಾಲೆಯ ಹೊಸ್ತಿಲಿನ ಅಗಲವು ಕೂಡಾ ಒಂದು ಅಳತೆ ಕೋಲಿನಷ್ಟಿತ್ತು.
7 As salas dos guardas tinham três metros de comprimento e três metros de largura, e as paredes entre elas tinham dois metros e meio de espessura. E a soleira da porta junto ao pórtico, defronte ao templo, tinha três metros de fundo.
8 ಅವನು ಕೈಸಾಲೆಯನ್ನು ಅಳತೆ ಮಾಡಿದನು.
8 Depois ele mediu o pórtico,
9 ಅದು ಎಂಟು ಮೊಳ ಉದ್ದವಾಗಿತ್ತು. ದ್ವಾರದ ಎರಡು ಬದಿಗಳ ಗೋಡೆಯನ್ನು ಅವನು ಅಳತೆ ಮಾಡಿದನು. ಅವು ಎರಡು ಮೊಳ ಅಗಲವಿದ್ದವು. ಆಲಯಕ್ಕೆ ಎದುರಾಗಿದ್ದ ದ್ವಾರದ ಕೊನೆಯಲ್ಲಿ ಕೈಸಾಲೆಯಿತ್ತು.
9 que tinha quatro metros de fundo e seus batentes tinham um metro de espessura. O pórtico estava voltado para o templo.
10 ದ್ವಾರದ ಎರಡು ಬದಿಗಳಲ್ಲಿಯೂ ಮೂರು ಸಣ್ಣ ಕೋಣೆಗಳಿದ್ದವು. ಈ ಕೋಣೆಗಳೆಲ್ಲವೂ ಒಂದೇ ಅಳತೆಯುಳ್ಳವುಗಳಾಗಿದ್ದವು. ಅವುಗಳ ಗೋಡೆಗಳೂ ಸಮಾನ ಅಳತೆಯುಳ್ಳವುಗಳಾಗಿದ್ದವು.
10 Da porta oriental para dentro havia três salas de cada lado; as três tinham as mesmas medidas, e as faces das paredes salientes de cada lado tinham as mesmas medidas.
11 ಅವನು ದ್ವಾರದ ಪ್ರವೇಶ ಸ್ಥಳವನ್ನು ಅಳತೆಮಾಡಿದಾಗ ಅದು ಹತ್ತು ಮೊಳ ಅಗಲ ಮತ್ತು ಹದಿಮೂರು ಮೊಳ ಉದ್ದವಾಗಿತ್ತು.
11 A seguir ele mediu a largura da porta, à entrada; era de cinco metros, e seu comprimento era de seis metros e meio.
12 ಪ್ರತಿ ಕೋಣೆಯೆದುರು ತಗ್ಗಾದ ಗೋಡೆಯಿತ್ತು. ಅದು ಒಂದು ಮೊಳ ಎತ್ತರ, ಒಂದು ಮೊಳ ದಪ್ಪವಾಗಿತ್ತು. ಆ ಕೋಣೆಗಳು ಚೌಕವಾಗಿದ್ದು ಅದರ ಗೋಡೆಯು ಆರು ಮೊಳ ಉದ್ದವಾಗಿತ್ತು.
12 Defronte de cada sala havia um muro de meio metro de altura, e os nichos eram quadrados, com três metros em cada lado.
13 ಅವನು ಆ ಕೋಣೆಯ ಹೊರಭಾಗದ ತುದಿಯಿಂದ ಇನ್ನೊಂದು ಎದುರಿಗಿದ್ದ ಕೋಣೆಯ ಹೊರಭಾಗದ ತುದಿಯ ತನಕ ಅಳತೆ ಮಾಡಿದಾಗ ಅದು ಇಪ್ಪತ್ತೈದು ಮೊಳವಿತ್ತು. ಅದರ ಬಾಗಿಲುಗಳು ಎದುರು ಬಂದುರಾಗಿದ್ದವು.
13 Depois ele mediu a entrada a partir do alto da parte de trás do muro de uma sala até o alto da sala oposta; a distância era de doze metros e meio, da abertura de um parapeito até a abertura do parapeito oposto.
14 ಅವನು ಕೈಸಾಲೆಯ ಎರಡು ಬದಿಗಳ ಗೋಡೆಯನ್ನು ಅಳತೆ ಮಾಡಿದಾಗ ಅದರ ಒಟ್ಟು ಅಳತೆ ಅರವತ್ತು ಮೊಳದಷ್ಟಿತ್ತು.
14 E mediu ao longo das faces das paredes salientes por todo o interior da entrada; eram trinta metros. A medida era até ao pórtico que dá para o pátio.
15 ಹೊರಗಿನ ಬಾಗಿಲಿನ ಒಳಭಾಗದ ತುದಿಯಿಂದ ಹಿಡಿದು ಕೈಸಾಲೆಯ ಕೊನೆಯ ತುದಿಯ ತನಕ ಐವತ್ತು ಮೊಳವಿತ್ತು.
15 A distância desde a entrada da porta até a extremidade do seu pórtico era de vinte e cinco metros.
16 ಪ್ರತೀ ಕಾವಲು ಮನೆಯ ಮೇಲ್ಗಡೆ ಸಣ್ಣ ಕಿಟಕಿಗಳು, ಗೋಡೆ ಮತ್ತು ಜಗಲಿಗಳು ಇದ್ದವು. ಕಿಟಕಿಯ ಅಗಲದ ಭಾಗವು ಪ್ರವೇಶದ್ವಾರಕ್ಕೆ ಮುಖ ಮಾಡಿದ್ದವು. ಪ್ರವೇಶದ್ವಾರದ ಎರಡೂ ಪಕ್ಕದಲ್ಲಿದ್ದ ಗೋಡೆಗಳ ಮೇಲೆ ಖರ್ಜೂರ ವೃಕ್ಷದ ಚಿತ್ರವನ್ನು ಕೆತ್ತಲಾಗಿತ್ತು.
16 As salas e os muros salientes dentro da entrada eram guarnecidos de estreitas aberturas com parapeito ao redor, como o pórtico; as aberturas que os circundavam davam para o interior. As faces dos muros salientes eram decoradas com tamareiras.
17 ಆಮೇಲೆ ಅವನು ನನ್ನನ್ನು ಹೊರಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಆ ಪ್ರಾಕಾರದ ಸುತ್ತಲೂ ಮೂವತ್ತು ಕೋಣೆಗಳೂ ನೆಲಗಟ್ಟೂ ಇದ್ದವು. ಆ ಕೋಣೆಗಳು ಗೋಡೆಗೆ ತಾಗಿ ನೆಲಗಟ್ಟಿಗೆ ಮುಖ ಮಾಡಿದ್ದವು.
17 Depois ele me levou ao pátio externo. Ali eu vi alguns quartos e um piso que havia sido construído ao redor de todo o pátio; ali havia trinta quartos ao longo de todo o piso.
18 ದ್ವಾರದ ಉದ್ದ ಅಳತೆಯಷ್ಟು ನೆಲಗಟ್ಟಿನ ಅಗಲದ ಅಳತೆಯಾಗಿತ್ತು. ನೆಲಗಟ್ಟು ಪ್ರವೇಶ ದ್ವಾರದ ಒಳಗಿನ ತುದಿಯ ತನಕವಿತ್ತು. ಇದು ಕೆಳಗಣ ನೆಲಗಟ್ಟಾಗಿತ್ತು.
18 Era adjacente às laterais das entradas e sua largura era igual ao comprimento; esse era o piso inferior.
19 ಅವನು ಕೆಳಗಣ ಪ್ರವೇಶ ದ್ವಾರದ ಒಳಭಾಗದಿಂದ ಹಿಡಿದು ಒಳಗಿನ ಪ್ರಾಕಾರದ ಹೊರಭಾಗದ ತನಕ ಅಳತೆ ಮಾಡಿದಾಗ ಅದು ನೂರು ಮೊಳ ಉದ್ದ ಪೂರ್ವದಿಕ್ಕಿನಲ್ಲಿಯೂ, ಉತ್ತರದಿಕ್ಕಿನಲ್ಲಿಯೂ ಇತ್ತು.
19 A seguir ele mediu a distância do interior da entrada inferior até o exterior do pátio interno, o que deu cinqüenta metros, tanto no lado leste como no lado norte.
20 ಆಮೇಲೆ ಹೊರಗಿನ ಪ್ರಾಕಾರದ ಗೋಡೆಯಲ್ಲಿದ್ದ ಉತ್ತರ ಪ್ರವೇಶದ್ವಾರದ ಉದ್ದಗಲವನ್ನು ಅವನು ಅಳತೆ ಮಾಡಿದನು.
20 Mediu depois o comprimento e a largura da porta que dá para o norte, que dá para o pátio externo.
21 ಈ ಪ್ರವೇಶದ್ವಾರ, ಅಕ್ಕಪಕ್ಕದಲ್ಲಿದ್ದ ಮೂರು ಕೋಣೆಗಳು ಮತ್ತು ಅದರ ಕೈಸಾಲೆಗಳೆಲ್ಲವೂ ಮೊದಲಿನ ಪ್ರವೇಶದ್ವಾರದಂತೆಯೇ ಅಳತೆಯುಳ್ಳವುಗಳಾಗಿತ್ತು. ಪ್ರವೇಶ ದ್ವಾರವು ಐವತ್ತು ಮೊಳ ಉದ್ದ, ಇಪ್ಪತ್ತೈದು ಮೊಳ ಅಗಲವಿತ್ತು.
21 Seus compartimentos, três de cada lado, suas paredes salientes e seu pórtico tinham as mesmas medidas dos da primeira entrada. Tinham vinte e cinco metros de comprimento e doze metros e meio de largura.
22 ಅದರ ಕಿಟಕಿಗಳು, ಕೈಸಾಲೆ, ಖರ್ಜೂರ ವೃಕ್ಷದ ಕೆತ್ತನೆ ಕೆಲಸಗಳೆಲ್ಲವೂ ಪೂರ್ವದ ಪ್ರವೇಶದ್ವಾರದಂತೆಯೇ ಇದ್ದವು. ಹೊರಗಿನಿಂದ ಪ್ರವೇಶ ದ್ವಾರಕ್ಕೆ ಬರಲು ಏಳು ಮೆಟ್ಟಿಲುಗಳಿದ್ದವು. ಅದರ ಕೈಸಾಲೆಯು ಪ್ರವೇಶದ್ವಾರದ ಒಳಭಾಗದ ಕೊನೆಯಲ್ಲಿತ್ತು.
22 Suas aberturas, seu pórtico e sua decoração com tamareiras tinham as mesmas medidas dos da porta que dava para o oriente. Sete degraus subiam até ela, e o seu pórtico ficava no lado oposto a eles.
23 ಪ್ರಾಕಾರದ ಹೊರಗೆ ಉತ್ತರದ ಪ್ರವೇಶ ದ್ವಾರದಿಂದ ಒಳಗಿನ ಪ್ರಾಕಾರಕ್ಕೆ ಹೋಗಲು ದ್ವಾರವಿತ್ತು. ಇದು ಪೂರ್ವದಲ್ಲಿದ್ದ ದ್ವಾರದಂತಿತ್ತು. ಅವನು ಒಳಗೋಡೆಯ ದ್ವಾರದಿಂದ ಹೊರಗೋಡೆಯ ದ್ವಾರದ ತನಕ ಅಳೆದಾಗ, ದ್ವಾರದಿಂದ ದ್ವಾರಕ್ಕೆ ನೂರು ಮೊಳವಿತ್ತು.
23 Havia uma porta que abria o pátio interno e que dava para a porta norte, como também uma que dava para a porta leste. Ele mediu de uma porta à porta oposta; eram cinqüenta metros.
24 ಆಮೇಲೆ ಅವನು ದಕ್ಷಿಣದ ಗೋಡೆಗೆ ಕರೆದುಕೊಂಡು ಹೋದನು. ಅಲ್ಲಿ ಒಂದು ದ್ವಾರವಿರುವದನ್ನು ಕಂಡೆನು. ಅವನು ಒಳಗಿನ ಗೋಡೆಗಳನ್ನೂ ಕೈಸಾಲೆಯನ್ನೂ ಅಳತೆಮಾಡಿದನು. ಅದರ ಅಳತೆ ಬೇರೆ ಪ್ರವೇಶ ದ್ವಾರಗಳಂತೆ ಇದ್ದವು.
24 Depois ele me levou para o lado sul, e eu vi uma porta que dava para o sul. Ele mediu seus batentes e seu pórtico, e eles tinham as mesmas medidas das outras portas.
25 ಅದರಲ್ಲಿಯೂ ಅದರ ಕೈಸಾಲೆಯಲ್ಲಿಯೂ ಎಲ್ಲಾ ಕಡೆ ಅಂಥ ಕಿಟಕಿಗಳೇ ಇದ್ದವು. ಆ ಪ್ರವೇಶದ್ವಾರವು ಐವತ್ತು ಮೊಳ ಉದ್ದ ಮತ್ತು ಇಪ್ಪತ್ತೈದು ಮೊಳ ಅಗಲವಿತ್ತು.
25 A entrada e o pórtico tinham aberturas estreitas ao seu redor, como as aberturas das outras. Tinham vinte e cinco metros de comprimento e doze metros e meio de largura.
26 ಅದರ ಮೇಲೆ ಏರಲು ಏಳು ಮೆಟ್ಟಲುಗಳಿದ್ದವು. ಅದರ ಕೈಸಾಲೆಯು ದ್ವಾರದ ಒಳಗಿನ ಭಾಗದಲ್ಲಿತ್ತು. ಅದರ ಅಕ್ಕಪಕ್ಕದ ಗೋಡೆಗಳಲ್ಲಿ ಖರ್ಜೂರ ವೃಕ್ಷದ ಕೆತ್ತನೆ ಕೆಲಸವಿತ್ತು.
26 Sete degraus subiam até ela, e o seu pórtico ficava no lado oposto a eles; havia uma decoração de tamareiras nas faces dos muros salientes em cada lado.
27 ಒಳಗಿನ ಪ್ರಾಕಾರದ ದಕ್ಷಿಣದಲ್ಲಿ ಒಂದು ದ್ವಾರವಿತ್ತು. ಅವನು ಒಳಗಿನ ಪ್ರಾಕಾರದ ದ್ವಾರದಿಂದ ಹೊರಗಿನ ಪ್ರಾಕಾರದ ದ್ವಾರದ ತನಕ ಅಳತೆ ಮಾಡಿದನು. ದ್ವಾರದಿಂದ ದ್ವಾರಕ್ಕೆ ನೂರು ಮೊಳವಿತ್ತು.
27 O pátio interior também tinha uma porta que dava para o sul, e ele mediu desde essa porta até a porta externa no lado sul; eram cinqüenta metros.
28 ಆಮೇಲೆ ಅವನು ದಕ್ಷಿಣದ ದ್ವಾರದಿಂದ ಒಳಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಈ ಪ್ರವೇಶದ್ವಾರವನ್ನು ಅಳತೆ ಮಾಡಿದನು. ಇದು ಕೂಡಾ ಒಳಗಿನ ಪ್ರಾಕಾರದ ಬೇರೆ ದ್ವಾರಗಳಂತೆಯೇ ಉದ್ದಗಲವಿತ್ತು.
28 A seguir ele me levou ao pátio interno pela porta sul, e mediu a porta sul; e ela tinha as mesmas medidas das outras.
29 ಅದರ ಕೋಣೆಗಳು, ಅಕ್ಕಪಕ್ಕದ ಗೋಡೆಗಳು, ಕೈಸಾಲೆ ಎಲ್ಲವೂ ಬೇರೆ ಪ್ರವೇಶದ್ವಾರಗಳ ಪ್ರಕಾರವೇ ಅಳತೆಯಲ್ಲಿದ್ದವು. ದ್ವಾರದ ಸುತ್ತಲೂ ಕಿಟಕಿಗಳಿದ್ದವು. ಆ ದ್ವಾರವು ಐವತ್ತು ಮೊಳ ಉದ್ದ ಇಪ್ಪತ್ತೈದು ಮೊಳ ಅಗಲವಿತ್ತು.
29 Suas salas, seus muros salientes e seu pórtico tinham as mesmas medidas dos outros. A entrada e seu pórtico tinha aberturas ao seu redor. Tinham vinte e cinco metros de comprimento e doze metros e meio de largura.
30 ಕೈಸಾಲೆಯು ಇಪ್ಪತ್ತೈದು ಮೊಳ ಅಗಲ ಐವತ್ತು ಮೊಳ ಉದ್ದವಿತ್ತು.
30 ( Os pórticos das entradas ao redor do pátio interior tinham doze metros e meio de largura e dois metros e meio de fundo. )
31 ಹೊರಗಿನ ಪ್ರಾಕಾರದ ಪಕ್ಕದಲ್ಲಿರುವ ಪ್ರವೇಶ ದ್ವಾರದ ಕೊನೆಯಲ್ಲಿ ಕೈಸಾಲೆಯಿತ್ತು. ಖರ್ಜೂರ ವೃಕ್ಷದ ಕೆತ್ತನೆ ಕೆಲಸವು ಅದರ ಗೋಡೆಯ ಮೇಲಿತ್ತು. ಆ ಪ್ರವೇಶ ದ್ವಾರವನ್ನು ಹತ್ತಲು ಎಂಟು ಮೆಟ್ಟಿಲುಗಳಿದ್ದವು.
31 Seu pórtico dava para o pátio externo; tamareiras decoravam seus batentes, e oito degraus subiam até ele.
32 ಅನಂತರ ಅವನು ಪೂರ್ವದಲ್ಲಿದ್ದ ಒಳಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಅಲ್ಲಿದ್ದ ಪ್ರವೇಶದ್ವಾರವನ್ನು ಅಳತೆ ಮಾಡಿದನು. ಬೇರೆ ದ್ವಾರಗಳ ರೀತಿಯಲ್ಲಿ ಅದರ ಉದ್ದಳತೆಯಿತ್ತು.
32 Depois ele me levou ao pátio interno no lado leste, e mediu a entrada; e ela tinha as mesmas medidas das outras.
33 ಅದರ ಕೋಣೆಗಳು, ಗೋಡೆ, ಕೈಸಾಲೆ ಎಲ್ಲವೂ ಬೇರೆ ಪ್ರವೇಶದ್ವಾರದ ಅಳತೆಯಂತೆ ಇದ್ದವು. ದ್ವಾರದ ಸುತ್ತಲೂ ಕೈಸಾಲೆಯ ಮೇಲೂ ಕಿಟಕಿಗಳಿದ್ದವು. ಆ ಪ್ರವೇಶ ದ್ವಾರವು ಐವತ್ತು ಮೊಳ ಉದ್ದ ಇಪ್ಪತ್ತೈದು ಮೊಳ ಅಗಲವಿತ್ತು.
33 Suas salas, suas paredes salientes e seu pórtico tinham as mesmas medidas dos outros. A entrada e seu pórtico tinha aberturas ao seu redor. Tinham vinte e cinco metros de comprimento e doze metros e meio de largura.
34 ಅದರ ಕೈಸಾಲೆ ಹೊರ ಪ್ರಾಕಾರದ ಪಕ್ಕದಲ್ಲಿ ಪ್ರವೇಶ ದ್ವಾರದ ಕೊನೆಯಲ್ಲಿತ್ತು. ದ್ವಾರದ ಎರಡು ಪಕ್ಕಗಳ ಗೋಡೆಗಳಲ್ಲಿ ಖರ್ಜೂರ ವೃಕ್ಷದ ಕೆತ್ತನೆ ಕೆಲಸವಿತ್ತು. ಆ ದ್ವಾರಕ್ಕೇರಲು ಎಂಟು ಮೆಟ್ಟಿಲುಗಳಿದ್ದವು.
34 Seu pórtico dava para o pátio externo; tamareiras decoravam os batentes em cada lado, e oito degraus subiam até ela.
35 ಆಮೇಲೆ ಅವನು ನನ್ನನ್ನು ಉತ್ತರದ ಪ್ರವೇಶ ದ್ವಾರಕ್ಕೆ ಕರೆದುಕೊಂಡು ಹೋದನು. ಅವನು ಅದನ್ನು ಅಳತೆ ಮಾಡಿದನು. ಬೇರೆ ದ್ವಾರಗಳಂತೆಯೇ ಅದರ ಅಳತೆಯಿತ್ತು.
35 Depois ele me levou à porta norte e a mediu; e ela tinha as mesmas medidas das outras,
36 ಅದರ ಕೋಣೆಗಳು, ಗೋಡೆಗಳು ಮತ್ತು ಕೈಸಾಲೆ ಇವೆಲ್ಲವೂ ಬೇರೆ ದ್ವಾರದ ಅಳತೆಯಂತಿತ್ತು. ದ್ವಾರದ ಸುತ್ತಲೂ ಕಿಟಕಿಗಳಿದ್ದವು. ದ್ವಾರವು ಐವತ್ತು ಮೊಳ ಉದ್ದ, ಇಪ್ಪತ್ತೈದು ಮೊಳ ಅಗಲವಿತ್ತು.
36 como também as suas salas, as suas paredes salientes e o seu pórtico, e tinha aberturas ao seu redor. Tinha vinte e cinco metros de comprimento e doze metros e meio de largura.
37 ಕೈಸಾಲೆಯು ಹೊರ ಪ್ರಾಕಾರದಲ್ಲಿಯ ದ್ವಾರದ ಕೊನೆಯಲ್ಲಿತ್ತು. ಖರ್ಜೂರ ವೃಕ್ಷದ ಚಿತ್ರವು ಗೋಡೆಗಳ ಎರಡೂ ಕಡೆಯ ಮೇಲೆ ಕೆತ್ತಲ್ಪಟ್ಟಿತ್ತು. ದ್ವಾರವನ್ನು ಮುಟ್ಟಲು ಎಂಟು ಮೆಟ್ಟಿಲುಗಳಿದ್ದವು.
37 Seu pórtico dava para o pátio externo; tamareiras decoravam os batentes em ambos os lados, e oito degraus subiam até ela.
38 ಈ ದ್ವಾರದ ಕೈಸಾಲೆಗೆ ಮುಖಮಾಡಿ ಬಾಗಿಲಿದ್ದ ಒಂದು ಕೋಣೆಯಿತ್ತು. ಇದು ಯಾಜಕರು ಸರ್ವಾಂಗಹೋಮದ ಪ್ರಾಣಿಗಳನ್ನು ತೊಳೆಯುವ ಸ್ಥಳವಾಗಿತ್ತು.
38 Um quarto com sua entrada ficava junto do pórtico de cada uma das entradas internas, onde os holocaustos eram lavados.
39 ಬಾಗಿಲಿನ ಅಕ್ಕಪಕ್ಕದಲ್ಲಿ ಎರಡು ಮೇಜುಗಳಿದ್ದವು. ಸರ್ವಾಂಗಹೋಮ, ದೋಷಪರಿಹಾರಕಯಜ್ಞ, ಪಾಪಪರಿಹಾರಕಯಜ್ಞಗಳಿಗೆ ಅರ್ಪಿಸುವ ಪ್ರಾಣಿಗಳನ್ನು ಈ ಮೇಜುಗಳ ಮೇಲೆ ಕೊಲ್ಲುತ್ತಿದ್ದರು.
39 No pórtico da entrada havia duas mesas de cada lado, em que os holocaustos, as ofertas pelo pecado e as ofertas pela culpa eram abatidos.
40 ಈ ಕೈಸಾಲೆಯ ಬಾಗಿಲಿನ ಹೊರಗಿನ ಗೋಡೆಯ ಬದಿಯಲ್ಲಿಯೂ ಎರಡು ಮೇಜುಗಳಿದ್ದವು.
40 Junto à parede externa do pórtico da entrada, perto dos degraus da porta norte, ficavam duas mesas, e do outro lado dos degraus havia duas mesas.
41 ಹೀಗೆ ಒಳಭಾಗದ ಗೋಡೆಯಲ್ಲಿ ನಾಲ್ಕು ಮೇಜುಗಳೂ ಹೊರಭಾಗದ ಗೋಡೆಯ ಬದಿಯಲ್ಲಿ ನಾಲ್ಕು ಮೇಜುಗಳೂ ಇದ್ದವು. ಹೀಗೆ ಯಾಜಕರು ಎಂಟು ಮೇಜುಗಳಲ್ಲಿ ಯಜ್ಞದ ಪಶುಗಳನ್ನು ಸಿದ್ಧಪಡಿಸುತ್ತಿದ್ದರು.
41 Havia, pois, quatro mesas num lado da entrada e quatro no outro, onde os sacrifícios eram abatidos. Eram oito mesas ao todo.
42 ಸರ್ವಾಂಗಹೋಮಕ್ಕಾಗಿ ಕಲ್ಲಿನಿಂದ ಮಾಡಿದ ನಾಲ್ಕು ಮೇಜುಗಳಿದ್ದವು. ಈ ಮೇಜುಗಳು ಒಂದೂವರೆ ಮೊಳ ಉದ್ದ, ಒಂದೂವರೆ ಮೊಳ ಅಗಲ, ಒಂದು ಮೊಳ ಎತ್ತರ. ಈ ಮೇಜುಗಳ ಮೇಲೆ ಪಶುಗಳನ್ನು ವಧಿಸಲು ಉಪಯೋಗಿಸುವ ಉಪಕರಣಗಳನ್ನು ಯಾಜಕರು ಇಡುತ್ತಿದ್ದರು.
42 Também havia quatro mesas de pedra lavrada para os holocaustos, cada uma com setenta e cinco centímetros de comprimento e de largura, e cinqüenta centímetros de altura. Nelas eram colocados os utensílios para o abate dos holocaustos e dos outros sacrifícios.
43 ಈ ಸ್ಥಳದ ಗೋಡೆಯಲ್ಲಿ ಸುತ್ತಲೂ ಮೂರು ಇಂಚು ಉದ್ದದ ಮಾಂಸವನ್ನು ಸಿಕ್ಕಿಸುವ ಕೊಂಡಿಗಳಿದ್ದವು. ಯಜ್ಞದ ಮಾಂಸವು ಈ ಮೇಜುಗಳ ಮೇಲಿತ್ತು.
43 E ganchos de duas pontas, cada um com quatro dedos de comprimento, estavam presos à parede, em toda a sua extensão. As mesas eram para a carne das ofertas.
44 ಒಳಗಿನ ಪ್ರಾಕಾರದಲ್ಲಿ ಎರಡು ಕೋಣೆಗಳಿದ್ದವು. ಒಂದು ಉತ್ತರದ ದ್ವಾರದ ಬಳಿಯಲ್ಲಿ ದಕ್ಷಿಣಕ್ಕೆ ಅಭಿಮುಖವಾಗಿತ್ತು. ಇನ್ನೊಂದು ದಕ್ಷಿಣದ ದ್ವಾರದ ಬಳಿಯಲ್ಲಿದ್ದು ಉತ್ತರಕ್ಕೆ ಅಭಿಮುಖವಾಗಿತ್ತು.
44 Fora da porta interna, dentro do pátio interno, havia dois quartos, um ao lado da porta norte que dava para o sul, e outro ao lado da porta sul que dava para o norte.
45 ಅವನು, “ದಕ್ಷಿಣಕ್ಕೆ ಅಭಿಮುಖವಾಗಿದ್ದ ಕೋಣೆಯು, ಆಲಯದಲ್ಲಿ ಯಾಜಕ ಉದ್ಯೋಗ ಮಾಡುತ್ತಿರುವ ಯಾಜಕರಿಗಾಗಿ.
45 Ele me disse: "O quarto que dá para o sul é para os sacerdotes encarregados do templo,
46 ಆದರೆ ಉತ್ತರಕ್ಕೆ ಅಭಿಮುಖವಾಗಿರುವ ಕೋಣೆಯು ಯಜ್ಞವೇದಿಯಲ್ಲಿ ಕಾರ್ಯವಹಿಸುತ್ತಿರುವ ಯಾಜಕರಿಗಾಗಿ, ಯಾಜಕರೆಲ್ಲರೂ ಲೇವಿ ಕುಲದವರಾಗಿದ್ದಾರೆ. ಎರಡನೇ ಗುಂಪಿನ ಯಾಜಕರು ಚಾದೋಕನ ಸಂತತಿಯವರಾಗಿದ್ದರು. ಅವರು ಮಾತ್ರವೇ ಯಜ್ಞವೇದಿಯಲ್ಲಿ ಯಜ್ಞಾರ್ಪಣೆ ಮಾಡಬಹುದು” ಎಂದು ಹೇಳಿದನು.
46 e o quarto que dá para o norte é para os sacerdotes encarregados do altar. São eles os filhos de Zadoque, os únicos levitas que podem aproximar-se do Senhor para ministrarem diante dele".
47 ಅವನು ಒಳಗಿನ ಪ್ರಾಕಾರವನ್ನು ಅಳತೆ ಮಾಡಿದನು. ಅದು ಚೌಕವಾಗಿದ್ದು ನೂರು ಮೊಳ ಉದ್ದ, ನೂರು ಮೊಳ ಅಗಲವಿತ್ತು. ಈ ಯಜ್ಞವೇದಿಕೆಯು ಆಲಯದ ಮುಂಭಾಗದಲ್ಲಿತ್ತು.
47 Depois ele mediu o pátio: Era quadrado e tinha cinqüenta metros de comprimento e cinqüenta de largura. E o altar ficava em frente do templo.
48 ಆಮೇಲೆ ಅವನು ಆಲಯದ ಕೈಸಾಲೆಗೆ ನನ್ನನ್ನು ಕರೆದುಕೊಂಡು ಹೋದನು. ಅದರ ಇಕ್ಕೆಡೆಗಳಲ್ಲಿಯೂ ಇರುವ ಗೋಡೆಗಳನ್ನು ಅವನು ಅಳತೆ ಮಾಡಲಾಗಿ ಗೋಡೆಯು ಐದು ಮೊಳ ದಪ್ಪ, ಮೂರು ಮೊಳ ಅಗಲವಾಗಿತ್ತು. ಅದರ ಮಧ್ಯದ ಸ್ಥಳ ಹದಿನಾಲ್ಕು ಮೊಳವಿತ್ತು.
48 A seguir me levou ao pórtico do templo e mediu os batentes do pórtico; eles tinham dois metros e meio de largura em ambos os lados. A largura da entrada era de sete metros, e suas paredes salientes tinham um metro e meio de largura em cada lado.
49 ಕೈಸಾಲೆಯು ಇಪ್ಪತ್ತು ಮೊಳ ಅಗಲ ಮತ್ತು ಹನ್ನೆರಡು ಮೊಳ ಉದ್ದವಾಗಿತ್ತು. ಆ ಕೈಸಾಲೆಯನ್ನು ಹತ್ತಲು ಹತ್ತು ಮೆಟ್ಟಿಲುಗಳಿದ್ದವು. ಕೈಸಾಲೆಯ ಇಕ್ಕೆಡೆಗಳಲ್ಲಿಯೂ ಗೋಡೆಗಳಿಗೆ ಸ್ತಂಭಗಳಿದ್ದವು.
49 O pórtico tinha dez metros de largura e seis metros da frente aos fundos. O acesso a ele era por um lance de escadas, e havia três colunas em cada lado dos batentes.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Ezequiel 40, comparar traduções ou montar um estudo — tudo direto pelo WhatsApp.