Ezequiel 46
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARIB
1 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಒಳಗಿನ ಪ್ರಾಕಾರದ ಪೂರ್ವ ದಿಕ್ಕಿನ ದ್ವಾರವು ಆರು ಕೆಲಸದ ದಿವಸಗಳಲ್ಲಿ ಮುಚ್ಚಲ್ಪಡುವದು. ಅದು ಸಬ್ಬತ್ ದಿವಸಗಳಲ್ಲಿಯೂ ಅಮಾವಾಸ್ಯೆಯ ದಿವಸಗಳಲ್ಲಿಯೂ ತೆರೆಯಲ್ಪಡುವದು.
1 Assim diz o Senhor Deus: A porta do átrio interior, que dá para o oriente, estará fechada durante os seis dias que são de trabalho; mas no dia de sábado ela se abrirá; também no dia da lua nova se abrirá.
2 ಅಧಿಪತಿಯು ಆ ದ್ವಾರದ ಕೈಸಾಲೆಯೊಳಗೆ ಪ್ರವೇಶಿಸಿ ಅದರ ನಿಲುವು ಕಂಬದ ಬಳಿಯಲ್ಲಿ ನಿಲ್ಲುವನು. ಅಧಿಪತಿಯು ಕೊಡುವ ಸರ್ವಾಂಗಹೋಮವನ್ನು ಮತ್ತು ಸಮಾಧಾನಯಜ್ಞವನ್ನು ಆಗ ಯಾಜಕರು ಸಮರ್ಪಿಸುವರು. ಅಧಿಪತಿಯು ಆ ದ್ವಾರದ ಮುಂಭಾಗದಲ್ಲಿ ಆರಾಧಿಸುವನು. ಅನಂತರ ಅವನು ಹೊರಗೆ ಹೋಗುವನು. ಆ ದ್ವಾರದ ಕದಗಳು ಸಾಯಂಕಾಲದ ತನಕ ತೆರೆದೇ ಇರುವವು.
2 E o príncipe entrará pelo caminho do vestíbulo da porta, por fora, e ficará parado junto da ombreira da porta, enquanto os sacerdotes ofereçam o holocausto e as ofertas pacíficas dele; e ele adorará junto ao limiar da porta. Então sairá; mas a porta não se fechará até a tarde.
3 ಸಬ್ಬತ್ ಮತ್ತು ಅಮಾವಾಸ್ಯೆ ದಿವಸಗಳಲ್ಲಿ ಸಾಮಾನ್ಯ ಜನರೂ ಅದೇ ದ್ವಾರದ ಬಳಿ ಆರಾಧಿಸುವರು.
3 E o povo da terra adorará à entrada da mesma porta, nos sábados e nas luas novas, diante do Senhor.
4 “ಸಬ್ಬತ್ ದಿವಸದಲ್ಲಿ ರಾಜನು ಯೆಹೋವನಿಗೆ ಸರ್ವಾಂಗಹೋಮವನ್ನು ಸಮರ್ಪಿಸುವನು. ಅವನು ಅದಕ್ಕಾಗಿ ನಿಷ್ಕಳಂಕವಾದ ಆರು ಕುರಿಗಳನ್ನೂ ನಿಷ್ಕಳಂಕವಾದ ಒಂದು ಟಗರನ್ನೂ ಕೊಡಬೇಕು.
4 E o holocausto que o príncipe oferecer ao Senhor será, no dia de sábado, seis cordeiros sem mancha e um carneiro sem mancha;
5 ಟಗರಿನೊಂದಿಗೆ ಒಂದು ಏಫಾ ಧಾನ್ಯಸಮರ್ಪಣೆಗಾಗಿ ಕೊಡಬೇಕು. ಕುರಿಗಳೊಂದಿಗೆ ಧಾನ್ಯಸಮರ್ಪಣೆಗಾಗಿ ರಾಜನು ತನ್ನ ಇಷ್ಟಬಂದ ಹಾಗೆ ಕೊಡಬಹುದು. ಆದರೆ ಪ್ರತೀ ಒಂದು ಏಫಾ ಧಾನ್ಯದೊಂದಿಗೆ ಒಂದು ಹಿನ್ ಆಲಿವ್ ಎಣ್ಣೆಯನ್ನು ಕೊಡಬೇಕು.
5 e a oferta de cereais será uma efa para o carneiro; e para o cordeiro, a oferta de cereais será o que puder dar, com um him de azeite para cada efa.
6 “ಅಮಾವಾಸ್ಯೆ ದಿವಸ ಅವನು ಒಂದು ಎಳೇ ಪೂರ್ಣಾಂಗವಾದ ಹೋರಿಯನ್ನು ಸಮರ್ಪಿಸಬೇಕು. ಅದರ ಜೊತೆಗೆ ಆರು ಪೂರ್ಣಾಂಗವಾದ ಕುರಿಗಳನ್ನೂ ಒಂದು ಪೂರ್ಣಾಂಗವಾದ ಟಗರನ್ನೂ ಸಮರ್ಪಿಸಬೇಕು.
6 Mas no dia da lua nova será um bezerro sem mancha, e seis cordeiros e um carneiro; eles serão sem mancha.
7 ರಾಜನು ಒಂದು ಏಫಾ ಧಾನ್ಯವನ್ನು ಹೋರಿಯೊಂದಿಗೂ ಇನ್ನೊಂದು ಏಫಾ ಧಾನ್ಯವನ್ನು ಟಗರಿನೊಂದಿಗೂ ಕೊಡಬೇಕು. ಆದರೆ ಅಧಿಪತಿಯು ಕುರಿಗಳೊಂದಿಗೆ ತನಗಿಷ್ಟವಾದಷ್ಟು ಧಾನ್ಯಸಮರ್ಪಣೆಯನ್ನು ಕೊಡಬಹುದು. ಆದರೆ ಅವನು ಪ್ರತೀ ಒಂದು ಏಫಾ ಧಾನ್ಯಕ್ಕೆ ಒಂದು ಹಿನ್ ಆಲಿವ್ ಎಣ್ಣೆಯನ್ನು ಕೊಡಲೇಬೇಕು.
7 Também ele proverá, por oferta de cereais, uma efa para o novilho e uma efa para o carneiro, e para os cordeiros o que puder, com um him de azeite para cada efa.
8 “ಅಧಿಪತಿಯು ಆಲಯದ ಸಂಕೀರ್ಣ ಪ್ರವೇಶಿಸುವಾಗ ಅವನು ಪೂರ್ವದಿಕ್ಕಿನ ದ್ವಾರದಿಂದ ಪ್ರವೇಶಿಸಬೇಕು. ಮತ್ತು ಅದರ ಮೂಲಕವೇ ಅವನು ಹೊರಗೆ ಹೋಗಬೇಕು.
8 Quando entrar o príncipe, entrará pelo caminho do vestíbulo da porta, e sairá pelo mesmo caminho.
9 “ಸಾಮಾನ್ಯ ಜನರು ವಿಶೇಷ ಹಬ್ಬದ ದಿವಸಗಳಲ್ಲಿ ಯೆಹೋವನನ್ನು ಸಂಧಿಸಲು ಬರುವಾಗ ಉತ್ತರ ದ್ವಾರದಿಂದ ಬರುವವರು ದಕ್ಷಿಣ ದ್ವಾರದ ಮೂಲಕ ಹೊರಗೆ ಹೋಗಬೇಕು. ದಕ್ಷಿಣದ ದ್ವಾರದಿಂದ ಒಳ ಪ್ರವೇಶಿಸುವವನು ಉತ್ತರ ದ್ವಾರದ ಮೂಲಕ ಹೊರಗೆ ಹೋಗಬೇಕು. ಯಾರೂ ಬಂದ ದಾರಿಯಿಂದ ಹಿಂದೆ ಹೋಗಬಾರದು. ಪ್ರತಿಯೊಬ್ಬನೂ ನೇರವಾಗಿ ಮುಂದಕ್ಕೆ ಹೋಗಬೇಕು.
9 Mas, quando vier o povo da terra perante o Senhor nas festas fixas, aquele que entrar pelo caminho da porta do norte, para adorar, sairá pelo caminho da porta do sul; e aquele que entrar pelo caminho da porta do sul, sairá pelo caminho da porta do norte. Não tornará pelo caminho da porta pela qual entrou, mas sairá seguindo para a sua frente.
10 ರಾಜನು ತನ್ನ ಜನರೊಂದಿಗೆ ಇರಬೇಕು. ಜನರು ಒಳಗೆ ಪ್ರವೇಶ ಮಾಡುವಾಗ ಅವನೂ ಅವರ ಜೊತೆಯಲ್ಲಿರಬೇಕು. ಅವರು ಹೊರಗೆ ಹೋಗುವಾಗಲೂ ಅವನು ಅವರ ಜೊತೆಯಲ್ಲಿರಬೇಕು.
10 Ao entrarem eles, o príncipe entrará no meio deles; e, saindo eles, sairão juntos.
11 “ಹಬ್ಬದ ದಿವಸಗಳಲ್ಲಿ ಮತ್ತು ಬೇರೆ ವಿಶೇಷ ದಿವಸಗಳಲ್ಲಿ ಪ್ರತಿ ಎಳೇ ಹೋರಿಯೊಂದಿಗೆ ಒಂದು ಏಫಾ ಧಾನ್ಯಸಮರ್ಪಣೆಯನ್ನು ಸಮರ್ಪಿಸಬೇಕು. ಮತ್ತು ಪ್ರತಿ ಒಂದು ಟಗರಿನೊಂದಿಗೆ ಒಂದು ಏಫಾ ಧಾನ್ಯವನ್ನು ಸಮರ್ಪಿಸಬೇಕು. ಕುರಿಗಳೊಂದಿಗೆ ಸಮರ್ಪಿಸಬೇಕಾದ ಧಾನ್ಯವು ರಾಜನಿಗೆ ಇಷ್ಟದ ಪ್ರಕಾರ ಇರುವದು. ಅದರ ಜೊತೆಗೆ ಒಂದು ಏಫಾ ಧಾನ್ಯದೊಂದಿಗೆ ಒಂದು ಹಿನ್ ಎಣ್ಣೆಯನ್ನೂ ಕೊಡಬೇಕು.
11 Nas solenidades, inclusive nas festas fixas, a oferta de cereais será uma efa para um novilho, e uma efa para um carneiro, mas para os cordeiros será o que se puder dar; e de azeite um him para cada efa.
12 “ರಾಜನು ತನ್ನ ಇಚ್ಛೆಯ ಪ್ರಕಾರ ಯೆಹೋವನಿಗೆ ಸರ್ವಾಂಗಹೋಮ ಅಥವಾ ಸಮಾಧಾನಯಜ್ಞ ಅಥವಾ ಮನಃಪೂರ್ವಕವಾದ ಕಾಣಿಕೆಯನ್ನು ಸಮರ್ಪಿಸುವಾಗ ಅವನಿಗಾಗಿ ಪೂರ್ವದ ಬಾಗಿಲು ತೆಗೆಯಲ್ಪಡಬೇಕು. ಆದರೆ ಅವನು ಸಬ್ಬತ್ ದಿನದಂತೆ ತನ್ನ ಕಾಣಿಕೆಗಳನ್ನು ಸಮರ್ಪಿಸಿದ ನಂತರ ಅವನು ಹಿಂತಿರುಗಿದಾಗ ಪ್ರವೇಶ ದ್ವಾರವು ಮುಚ್ಚಲ್ಪಡಬೇಕು.
12 Quando o príncipe prover uma oferta voluntária, holocausto, ou ofertas pacíficas, como uma oferta voluntária ao Senhor, abrir-se-lhe-á a porta que dá para o oriente, e oferecerá o seu holocausto e as suas ofertas pacíficas, como houver feito no dia de sábado. Então sairá e, depois de ele ter saído, fechar-se-á a porta.
13 “ನೀನು ಪ್ರತಿದಿನ ಮುಂಜಾನೆ ಒಂದು ವರ್ಷದ ಪೂರ್ಣಾಂಗವಾದ ಕುರಿಯನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.
13 Proverá ele um cordeiro de um ano, sem mancha, em holocausto ao Senhor cada dia; de manhã em manhã o proverá.
14 ಪ್ರತಿ ಮುಂಜಾನೆ ನೀನು ಐದು ಸೇರು ಗೋಧಿಹಿಟ್ಟನ್ನೂ ಎರಡು ಸೇರು ಎಣ್ಣೆಯನ್ನೂ ಒಟ್ಟಾಗಿ ಬೆರೆಸಿ ಪ್ರತಿದಿನ ಯೆಹೋವನಿಗೆ ಧಾನ್ಯ ನೈವೇದ್ಯವಾಗಿ ಸಮರ್ಪಿಸಬೇಕು.
14 Juntamente com ele proverá de manhã em manhã uma oferta de cereais, a sexta parte duma efa de flor de farinha, com a terça parte de um him de azeite para umedecê-la, por oferta de cereais ao Senhor, continuamente, por estatuto perpétuo.
15 ಹೀಗೆ ಅವರು ಶಾಶ್ವತವಾಗಿ ಕುರಿ, ಧಾನ್ಯ ಮತ್ತು ಎಣ್ಣೆಯನ್ನು ಪ್ರತೀ ಮುಂಜಾನೆ ಸರ್ವಾಂಗಹೋಮವಾಗಿ ಸಮರ್ಪಿಸಬೇಕು.”
15 Assim se proverão o cordeiro, a oferta de cereais, e o azeite, de manhã em manhã, em holocausto contínuo.
16 ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ಒಬ್ಬ ರಾಜನು ತನ್ನ ಗಂಡುಮಕ್ಕಳಿಗೆ ತನ್ನ ಭೂಮಿಯ ಭಾಗವನ್ನು ಉಚಿತವಾಗಿ ಕೊಟ್ಟರೆ ಅದು ಅವನ ಗಂಡುಮಕ್ಕಳಿಗೆ ಸೇರುವದು. ಅದು ಅವರ ಆಸ್ತಿಯಾಗುವದು.
16 Assim diz o Senhor Deus: Se o príncipe der um presente a algum de seus filhos, é herança deste, pertencerá a seus filhos; será possessão deles por herança.
17 ಆದರೆ ಆ ರಾಜನು ತನ್ನ ಭೂಮಿಯ ಒಂದು ಭಾಗವನ್ನು ತನ್ನ ದಾಸನಿಗೆ ಉಚಿತವಾಗಿ ಕೊಟ್ಟರೆ, ಆ ಭೂಮಿಯು ಬಿಡುಗಡೆ ಸಂವತ್ಸರದ ತನಕ ಮಾತ್ರವೇ ದಾಸನದ್ದಾಗಿರುವದು. ಅನಂತರ ಅದು ರಾಜನಿಗೆ ಹಿಂದೆ ಹೋಗುವದು. ರಾಜನ ಗಂಡುಮಕ್ಕಳು ಮಾತ್ರ ರಾಜನಿಂದ ಹೊಂದಿದ ಭೂಮಿಯನ್ನು ನಿತ್ಯಕಾಲಕ್ಕೂ ಅನುಭೋಗಿಸುವರು.
17 Se, porém, der um presente da sua herança a algum dos seus servos, será deste até o ano da liberdade; então tornará para o príncipe; pois quanto à herança, será ela para seus filhos.
18 ರಾಜನು ತನ್ನ ಪ್ರಜೆಯ ಭೂಮಿಯನ್ನು ತನ್ನ ಉಪಯೋಗಕ್ಕೆಂದು ಬಲತ್ಕಾರದಿಂದ ಇಟ್ಟುಕೊಳ್ಳಬಾರದು ಅಥವಾ ತೆಗೆದುಕೊಳ್ಳಲೂಬಾರದು. ತನ್ನ ಸ್ವಂತ ಭೂಮಿಯಿಂದ ಪಾಲನ್ನು ತನ್ನ ಮಕ್ಕಳಿಗೆ ಕೊಡಬೇಕು. ಹೀಗೆ ನನ್ನ ಜನರು ತಮ್ಮ ಭೂಮಿಯನ್ನು ಕಳೆದುಕೊಳ್ಳುವದಿಲ್ಲ.”
18 O príncipe não tomará nada da herança do povo para o esbulhar da sua possessão; da sua própria possessão deixará herança a seus filhos, para que o meu povo não seja espalhado, cada um da sua possessão.
19 ಬಳಿಕ ಆ ಪುರುಷನು ನನ್ನನ್ನು ಮಹಾದ್ವಾರದ ಪಕ್ಕದಲ್ಲಿನ ಪ್ರವೇಶಮಾರ್ಗವಾಗಿ ಉತ್ತರದಲ್ಲಿರುವ ಯಾಜಕರ ಪವಿತ್ರ ಕೋಣೆಗಳಿಗೆ ಕರೆದುಕೊಂಡು ಹೋದನು.
19 Então me introduziu pela entrada que estava ao lado da porta nas câmaras santas para os sacerdotes, que olhavam para o norte; e eis que ali havia um lugar por detrás, para a banda do ocidente.
20 ಅವನು ನನಗೆ ಹೇಳಿದ್ದೇನೆಂದರೆ, “ಈ ಸ್ಥಳದಲ್ಲಿ ಯಾಜಕರು ದೋಷಪರಿಹಾರಕ ಮತ್ತು ಪಾಪಪರಿಹಾರಕಯಜ್ಞದ ಮಾಂಸಗಳನ್ನು ಬೇಯಿಸುವರು. ಇದೇ ಸ್ಥಳದಲ್ಲಿ ಧಾನ್ಯಸಮರ್ಪಣೆಯ ಹಿಟ್ಟಿನಿಂದ ರೊಟ್ಟಿಯನ್ನು ಸುಡುವರು. ಇದನ್ನು ಇಲ್ಲಿಯೇ ಯಾಕೆ ಮಾಡುತ್ತಾರೆಂದರೆ ಅವರು ಹೊರಗಿನ ಪ್ರಾಕಾರದೊಳಗೆ ಆ ಪವಿತ್ರ ವಸ್ತುವನ್ನು ತರುವ ಅವಶ್ಯಕತೆ ಇರುವದಿಲ್ಲ. ಸಾರ್ವಜನಿಕರು ಕೂಡುವ ಸ್ಥಳದಲ್ಲಿ ಆ ಪವಿತ್ರ ವಸ್ತುವನ್ನು ತರಬಾರದು.”
20 E ele me disse: Este é o lugar onde os sacerdotes cozerão a oferta pela culpa, e a oferta pelo pecado, e onde assarão a oferta de cereais, para que não as tragam ao átrio exterior, e assim transmitam a santidade ao povo.
21 ಆಮೇಲೆ ಅವನು ಹೊರಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಆ ಪ್ರಾಕಾರದ ನಾಲ್ಕು ಮೂಲೆಗಳಿಗೆ ನನ್ನನ್ನು ಕರೆದುಕೊಂಡು ಹೋದನು. ವಿಶಾಲವಾದ ಪ್ರಾಕಾರದ ಪ್ರತೀ ಮೂಲೆಗಳಲ್ಲಿ ಇನ್ನೊಂದು ಚಿಕ್ಕ ಪ್ರಾಕಾರವಿರುವದನ್ನು ಕಂಡೆನು.
21 Então me levou para fora, para o átrio exterior, e me fez passar pelos quatro cantos do átrio; e eis que em cada canto do átrio havia um átrio.
22 ಆ ನಾಲ್ಕು ಮೂಲೆಗಳಲ್ಲಿಯೂ ಗೋಡೆಗಳಿಂದ ಆವರಿಸಲ್ಪಟ್ಟಿದ್ದ ಒಂದು ಚಿಕ್ಕ ಪ್ರಾಕಾರವಿತ್ತು. ಈ ಪ್ರಾಕಾರದ ಉದ್ದ ನಲವತ್ತು ಮೊಳ ಮತ್ತು ಅಗಲ ಮೂವತ್ತು ಮೊಳ. ಈ ನಾಲ್ಕು ಚಿಕ್ಕ ಪ್ರಾಕಾರಗಳು ಒಂದೇ ಅಳತೆಯುಳ್ಳವುಗಳಾಗಿದ್ದವು.
22 Nos quatro cantos do átrio havia átrios fechados, de quarenta côvados de comprimento e de trinta de largura; estes quatro cantos tinham a mesma medida.
23 ಇವುಗಳ ಸುತ್ತಲೂ ಇಟ್ಟಿಗೆಯ ಗೋಡೆ ಕಟ್ಟಲ್ಪಟ್ಟಿತ್ತು. ಈ ಗೋಡೆಯೊಳಗೆ ಅಡಿಗೆ ಮಾಡುವದಕ್ಕಾಗಿ ಸ್ಥಳವನ್ನು ಏರ್ಪಡಿಸಲಾಗಿತ್ತು.
23 E neles havia por dentro uma série de projeções ao redor; e havia lugares para cozer, construídos por baixo delas ao redor.
24 ಅವನು ನನಗೆ ಹೇಳಿದ್ದೇನೆಂದರೆ, “ಆಲಯದ ಈ ಸ್ಥಳದಲ್ಲಿ ಸೇವೆಮಾಡುವ ಜನರು ಸಾಮಾನ್ಯ ಜನರ ಯಜ್ಞದ ಮಾಂಸವನ್ನು ಆ ಜನರಿಗಾಗಿ ಬೇಯಿಸುವರು.”
24 Então me disse: Estas são as cozinhas, onde os ministros da casa cozerão o sacrifício do povo.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Ezequiel 46, comparar traduções ou montar um estudo — tudo direto pelo WhatsApp.