Gênesis 24
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs BKJ
1 ಅಬ್ರಹಾಮನು ಬಹಳ ವೃದ್ಧನಾದನು. ಯೆಹೋವನು ಅಬ್ರಹಾಮನನ್ನೂ ಅವನು ಮಾಡಿದ ಪ್ರತಿಯೊಂದನ್ನೂ ಆಶೀರ್ವದಿಸಿದನು.
1 E Abraão era velho e bem avançado em idade; e o SENHOR havia abençoado Abraão em todas as coisas.
2 ಅಬ್ರಹಾಮನ ಆಸ್ತಿಯನ್ನೆಲ್ಲಾ ನೋಡಿಕೊಳ್ಳಲು ಒಬ್ಬ ಸೇವಕನಿದ್ದನು. ಅಬ್ರಹಾಮನು ಆ ಸೇವಕನನ್ನು ಕರೆದು, “ನನ್ನ ತೊಡೆಯ ಕೆಳಗೆ ನಿನ್ನ ಕೈಯಿಟ್ಟು ನನಗೆ ಪ್ರಮಾಣಮಾಡು.
2 E Abraão disse ao servo mais velho de sua casa, que governava sobre tudo o que ele tinha: Rogo-te que ponhas tua mão debaixo da minha coxa;
3 ಕಾನಾನ್ ದೇಶದ ಕನ್ನಿಕೆಯನ್ನು ನನ್ನ ಮಗನು ಮದುವೆಯಾಗದಂತೆ ನೀನು ನೋಡಿಕೊಳ್ಳುವುದಾಗಿಯೂ
3 e eu te farei jurar pelo SENHOR, o Deus do céu, e o Deus da terra, que tu não tomarás mulher para meu filho dentre as filhas dos cananeus, entre os quais eu habito;
4 ನನ್ನ ಸ್ವದೇಶದಲ್ಲಿರುವ ನನ್ನ ಸ್ವಜನರ ಬಳಿಗೆ ಹೋಗಿ ನನ್ನ ಮಗನಾದ ಇಸಾಕನಿಗೆ ಕನ್ನಿಕೆಯನ್ನು ಹುಡುಕಿ ಕರೆದುಕೊಂಡು ಬರುವುದಾಗಿಯೂ ಭೂಪರಲೋಕಗಳ ದೇವರಾದ ಯೆಹೋವನ ಮೇಲೆ ಪ್ರಮಾಣಮಾಡು” ಎಂದು ಹೇಳಿದನು.
4 mas irás à minha terra, e à minha parentela, e tomarás uma mulher para meu filho Isaque.
5 ಸೇವಕನು ಅವನಿಗೆ, “ಆ ಕನ್ಯೆಯು ನನ್ನೊಡನೆ ಈ ದೇಶಕ್ಕೆ ಬರಲು ಒಪ್ಪದಿದ್ದರೆ, ನಾನು ನಿನ್ನ ಮಗನನ್ನು ನಿನ್ನ ಸ್ವದೇಶಕ್ಕೆ ಕರೆದುಕೊಂಡು ಹೋಗಬೇಕೇ?” ಎಂದು ಕೇಳಿದನು.
5 E o servo lhe disse: Se porventura a mulher não quiser seguir-me para esta terra, eu deixarei levar teu filho novamente para a terra de onde tu vieste?
6 ಅಬ್ರಹಾಮನು ಅವನಿಗೆ, “ಇಲ್ಲ, ಆ ದೇಶಕ್ಕೆ ನನ್ನ ಮಗನನ್ನು ಕರೆದುಕೊಂಡು ಹೋಗಬೇಡ.
6 E Abraão lhe disse: Cuida para que não leves meu filho para lá novamente.
7 ಪರಲೋಕದ ದೇವರಾದ ಯೆಹೋವನು ನನ್ನನ್ನು ಸ್ವದೇಶದಿಂದ ಈ ಸ್ಥಳಕ್ಕೆ ಕರೆದುಕೊಂಡು ಬಂದನು. ಆ ದೇಶ ನನ್ನ ತಂದೆಗೂ ನನ್ನ ಕುಟುಂಬಕ್ಕೂ ಸೇರಿದೆ. ಆದರೆ ಯೆಹೋವನು ಈ ದೇಶವನ್ನು ನನ್ನ ಸಂತತಿಗೆ ಕೊಡುವುದಾಗಿ ವಾಗ್ದಾನ ಮಾಡಿದನು. ನೀನು ನನ್ನ ಮಗನಿಗೆ ಕನ್ಯೆಯನ್ನು ಹುಡುಕಿ ಕರೆದುಕೊಂಡು ಬರಲು ಸಾಧ್ಯವಾಗುವಂತೆ ಯೆಹೋವನು ತನ್ನ ದೂತನನ್ನು ನಿನ್ನ ಮುಂದೆ ಕಳುಹಿಸಲಿ.
7 O SENHOR Deus do céu, que me tirou da casa de meu pai, e da terra de minha parentela, e que falou comigo, e que jurou para mim, dizendo: À tua semente eu darei esta terra, ele enviará o seu anjo adiante de ti, e tu tomarás para o meu filho uma mulher de lá.
8 ಆದರೆ ಆ ಕನ್ಯೆಯು ನಿನ್ನೊಡನೆ ಬರಲು ಇಷ್ಟಪಡದಿದ್ದರೆ, ಈ ಪ್ರಮಾಣದಿಂದ ನೀನು ಬಿಡುಗಡೆಯಾಗುವೆ. ಆದರೆ ನೀನು ನನ್ನ ಮಗನನ್ನು ನನ್ನ ಸ್ವದೇಶಕ್ಕೆ ಕರೆದುಕೊಂಡು ಹೋಗಕೂಡದು” ಎಂದು ಹೇಳಿದನು.
8 E se a mulher não quiser te seguir, então tu estarás livre deste meu juramento; somente não leves o meu filho para lá novamente.
9 ಆಗ ಆ ಸೇವಕನು ತನ್ನ ಒಡೆಯನಾದ ಅಬ್ರಹಾಮನ ತೊಡೆಯ ಕೆಳಗೆ ಕೈಯಿಟ್ಟು ಪ್ರಮಾಣ ಮಾಡಿದನು.
9 E o servo colocou sua mão debaixo da coxa de Abraão, seu senhor, e jurou a ele acerca deste assunto.
10 ಆ ಸೇವಕನು ಅಬ್ರಹಾಮನ ಹತ್ತು ಒಂಟೆಗಳನ್ನು ಸಿದ್ಧಮಾಡಿ ಶ್ರೇಷ್ಠವಾದ ಅನೇಕ ಉಡುಗೊರೆಗಳನ್ನು ತೆಗೆದುಕೊಂಡು ಮೆಸೊಪೋಟೊಮಿಯಕ್ಕೆ ಬಂದು ನಾಹೋರನು ವಾಸವಾಗಿದ್ದ ಊರನ್ನು ತಲುಪಿದನು.
10 E o servo tomou dez camelos dos camelos do seu senhor, e partiu; pois todos os bens de seu senhor estavam em suas mãos. E ele se levantou, e foi à Mesopotâmia, para a cidade de Naor.
11 ಅವನು ಊರ ಹೊರಗಿದ್ದ ಬಾವಿಯ ಬಳಿಯಲ್ಲಿ ಒಂಟೆಗಳನ್ನು ಮಲಗಿಸಿದನು; ಪ್ರತಿಸಾಯಂಕಾಲ ಸ್ತ್ರೀಯರು ನೀರನ್ನು ತೆಗೆದುಕೊಂಡು ಹೋಗುವುದಕ್ಕಾಗಿ ಆ ಬಾವಿಗೆ ಬರುತ್ತಿದ್ದರು.
11 E ele fez seus camelos se ajoelharem fora da cidade, junto a um poço de água na hora da tarde, a hora em que as mulheres saem para tirar água.
12 ಆ ಸೇವಕನು, “ಯೆಹೋವನೇ, ನೀನು ನನ್ನ ಒಡೆಯನಾದ ಅಬ್ರಹಾಮನ ದೇವರು. ಈ ದಿನ ಅವನ ಮಗನಿಗಾಗಿ ಕನ್ಯೆಯನ್ನು ಕಂಡುಕೊಳ್ಳಲು ಸಹಾಯಮಾಡು. ನನ್ನ ಒಡೆಯನಾದ ಅಬ್ರಹಾಮನಿಗೋಸ್ಕರವಾಗಿಯೇ ಈ ಉಪಕಾರ ಮಾಡು.
12 E ele disse: Ó SENHOR Deus de meu senhor Abraão, rogo-te, dá-me bom êxito neste dia, e mostra bondade para com meu senhor Abraão.
13 ನಾನು ಈ ನೀರಿನ ಬಾವಿಯ ಬಳಿಯಲ್ಲಿ ನಿಂತಿರುತ್ತೇನೆ; ಈ ಊರಿನ ಯುವತಿಯರು ನೀರನ್ನು ತೆಗೆದುಕೊಳ್ಳಲು ಇಲ್ಲಿಗೆ ಬರುತ್ತಾರೆ.
13 Eis que eu estou em pé aqui junto ao poço de água; e as filhas dos homens da cidade saem para tirar água;
14 ಇಸಾಕನಿಗೆ ಯೋಗ್ಯಳಾದ ಕನ್ಯೆಯನ್ನು ಕಂಡುಕೊಳ್ಳಲು ನಾನು ಒಬ್ಬಳಿಗೆ, ‘ದಯವಿಟ್ಟು ನಿನ್ನ ಕೊಡವನ್ನು ಕೆಳಗಿಳಿಸಿ ಕುಡಿಯಲು ನೀರು ಕೊಡು’ ಎನ್ನುವೆ. ಆಕೆ ನನಗೆ, ‘ನೀನೂ ಕುಡಿ, ನಿನ್ನ ಒಂಟೆಗಳಿಗೂ ನೀರು ಕೊಡುತ್ತೇನೆ’ ಎಂದರೆ ಆಕೆಯೇ ನಿನ್ನಿಂದ ಆಯ್ಕೆಗೊಂಡ ಯೋಗ್ಯ ಕನ್ಯೆಯೆಂದೂ ನೀನು ನನ್ನ ಒಡೆಯನಿಗೆ ಕರುಣೆ ತೋರಿದೆಯೆಂದೂ ನಾನು ತಿಳಿದುಕೊಳ್ಳುವೆ” ಎಂದು ಪ್ರಾರ್ಥಿಸಿದನು.
14 E seja, pois, que a donzela a quem eu disser: Inclina o teu cântaro e beberei, e ela responder: Bebe, e também darei de beber aos teus camelos, essa seja a que designaste para o teu servo Isaque, e por ela saberei que tens misericórdia para com meu senhor.
15 ಆ ಸೇವಕನು ಪ್ರಾರ್ಥನೆ ಮಾಡಿ ಮುಗಿಸುವುದಕ್ಕಿಂತ ಮೊದಲೇ ರೆಬೆಕ್ಕ ಎಂಬ ಯುವತಿಯು ಬಾವಿಯ ಬಳಿಗೆ ಬಂದಳು. ರೆಬೆಕ್ಕಳು ಬೆತೂವೇಲನ ಮಗಳು. ಬೆತೂವೇಲನು ಮಿಲ್ಕಳ ಮತ್ತು ನಾಹೋರನ ಮಗನು. ನಾಹೋರನು ಅಬ್ರಹಾಮನ ತಮ್ಮ. ರೆಬೆಕ್ಕಳು ತನ್ನ ಹೆಗಲ ಮೇಲೆ ನೀರಿನ ಕೊಡವನ್ನು ತೆಗೆದುಕೊಂಡು ಬಾವಿಗೆ ಬಂದಳು.
15 E aconteceu que, antes que ele terminasse de falar, eis que saiu Rebeca, que era nascida a Betuel, filho de Milca, esposa de Naor, irmão de Abraão, com seu cântaro sobre seu ombro.
16 ಆಕೆ ಬಹು ಸುಂದರಿಯಾಗಿಯೂ ಕನ್ನಿಕೆಯಾಗಿಯೂ ಇದ್ದಳು. ಆಕೆ ಬಾವಿಯ ಬಳಿಗೆ ಹೋಗಿ ಕೊಡದಲ್ಲಿ ನೀರನ್ನು ತುಂಬಿಸಿಕೊಂಡಳು.
16 E a donzela era muito formosa à vista, uma virgem, nem homem algum a conhecia, e ela desceu ao poço, e encheu seu cântaro, e subiu.
17 ಆಗ ಆ ಸೇವಕನು ಅವಳ ಬಳಿಗೆ ಓಡಿಹೋಗಿ, “ದಯವಿಟ್ಟು ಕುಡಿಯಲು ನಿನ್ನ ಕೊಡದಿಂದ ಸ್ವಲ್ಪ ನೀರನ್ನು ಕೊಡು” ಎಂದು ಕೇಳಿದನು.
17 E o servo correu para encontrá-la, e disse: Permite-me, rogo-te, beber um pouco da água de teu cântaro.
18 ರೆಬೆಕ್ಕಳು ಕೂಡಲೇ ತನ್ನ ಕೊಡವನ್ನು ಹೆಗಲ ಮೇಲಿಂದ ಕೆಳಗಿಳಿಸಿ ಅವನಿಗೆ ಕುಡಿಯಲು ನೀರನ್ನು ಕೊಟ್ಟು, “ಅಯ್ಯಾ, ನೀರನ್ನು ಕುಡಿ” ಅಂದಳು.
18 E ela disse: Bebe, meu senhor; e ela se apressou e abaixou seu cântaro sobre sua mão, e lhe deu de beber.
19 ಅವನು ನೀರು ಕುಡಿದಾದ ಮೇಲೆ ಆಕೆ ಅವನಿಗೆ, “ನಿನ್ನ ಒಂಟೆಗಳಿಗೂ ಬೇಕಾದಷ್ಟು ನೀರನ್ನು ತಂದುಕೊಡುತ್ತೇನೆ” ಎಂದು ಹೇಳಿ,
19 E, acabando ela de lhe dar de beber, disse: Eu também tirarei água para os teus camelos, até que tenham bebido.
20 ನೀರನ್ನೆಲ್ಲ ತೊಟ್ಟಿಯಲ್ಲಿ ಸುರಿದು ಮತ್ತೆ ನೀರನ್ನು ತೆಗೆದುಕೊಂಡು ಬರಲು ಬಾವಿಯ ಬಳಿಗೆ ಬೇಗಬೇಗನೆ ಹೋದಳು. ಹೀಗೆ ಅವನ ಒಂಟೆಗಳಿಗೆಲ್ಲಾ ನೀರನ್ನು ಕೊಟ್ಟಳು.
20 E ela se apressou e esvaziou o seu cântaro no cocho, e correu novamente para o poço para tirar água, e tirou para todos os seus camelos.
21 ಆ ಸೇವಕನು ಆಕೆಯನ್ನೇ ಗಮನಿಸುತ್ತಾ, ಯೆಹೋವನು ತನ್ನ ಪ್ರಾರ್ಥನೆಗೆ ಉತ್ತರ ಕೊಟ್ಟನೋ ಇಲ್ಲವೋ ಎಂದು ಖಚಿತಪಡಿಸಿಕೊಳ್ಳಲು ಕಾದುಕೊಂಡಿದ್ದನು.
21 E o homem estava admirado de vê-la, e ficou em paz, para saber se o SENHOR havia feito prosperar sua viagem ou não.
22 ಒಂಟೆಗಳು ನೀರನ್ನು ಕುಡಿದಾದ ಮೇಲೆ ಅವನು ರೆಬೆಕ್ಕಳಿಗೆ ಅರ್ಧತೊಲೆಯ ಒಂದು ಚಿನ್ನದ ಉಂಗುರವನ್ನು ಕೊಟ್ಟನು. ಇದಲ್ಲದೆ ಅವನು ಆಕೆಗೆ ಹತ್ತು ತೊಲೆಯ ಎರಡು ಚಿನ್ನದ ಬಳೆಗಳನ್ನು ಕೊಟ್ಟನು.
22 E aconteceu que, quando os camelos haviam acabado de beber, que o homem tomou um brinco de ouro de meio shekel de peso, e dois braceletes para as mãos dela, do peso de dez shekels de ouro.
23 ಆ ಸೇವಕನು, “ನಿನ್ನ ತಂದೆ ಯಾರು? ನನ್ನ ಜನರು ಇಳಿದುಕೊಳ್ಳಲು ನಿನ್ನ ತಂದೆಯ ಮನೆಯಲ್ಲಿ ಸ್ಥಳವಿದೆಯೋ?” ಎಂದು ಕೇಳಿದನು.
23 E disse: De quem tu és filha? Dize-me, suplico-te. Há lugar na casa de teu pai para nos alojarmos?
24 ರೆಬೆಕ್ಕಳು ಅವನಿಗೆ, “ನನ್ನ ತಂದೆಯ ಹೆಸರು ಬೆತೂವೇಲ. ಅವನು ಮಿಲ್ಕಳ ಮತ್ತು ನಾಹೋರನ ಮಗನು” ಎಂದು ಹೇಳಿದಳು.
24 E ela lhe disse: Eu sou a filha de Betuel, filho de Milca, o que deu à luz a Naor.
25 ಬಳಿಕ, “ಹೌದು, ನಿನ್ನ ಒಂಟೆಗಳಿಗೆ ಹುಲ್ಲೂ ಮೇವೂ ನಮ್ಮಲ್ಲಿವೆ ಮತ್ತು ನೀವು ಇಳಿದುಕೊಳ್ಳಲೂ ಸ್ಥಳವಿದೆ” ಎಂದಳು.
25 E ela disse além disso a ele: Nós temos tanto palha quanto forragem suficientes, e lugar para se alojar.
26 ಆಗ ಆ ಸೇವಕನು ತಲೆಬಾಗಿ ಯೆಹೋವನನ್ನು ಆರಾಧಿಸಿದನು.
26 E o homem curvou sua cabeça, e adorou ao SENHOR.
27 ಬಳಿಕ ಆಕೆಗೆ, “ನನ್ನ ಒಡೆಯನಾದ ಅಬ್ರಹಾಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನ ಒಡೆಯನಿಗೆ ದಯಾಳುವೂ ನಂಬಿಗಸ್ತನೂ ಆಗಿದ್ದಾನೆ. ನನ್ನ ಒಡೆಯನ ಮಗನಿಗಾಗಿ ಯೆಹೋವನು ನನ್ನನ್ನು ನನ್ನ ಒಡೆಯನ ಕುಟುಂಬಕ್ಕೆ ನಡೆಸಿದ್ದಾನೆ” ಎಂದು ಹೇಳಿದನು.
27 E ele disse: Bendito seja o SENHOR Deus de meu senhor Abraão, que não deixou desamparado meu senhor sem misericórdia e verdade. Eu estando no caminho, o SENHOR me conduziu à casa dos irmãos de meu senhor.
28 ಆಗ ರೆಬೆಕ್ಕಳು ಬೇಗನೆ ಹೋಗಿ ಈ ಸಂಗತಿಗಳನ್ನೆಲ್ಲಾ ತನ್ನ ಕುಟುಂಬದವರಿಗೆ ತಿಳಿಸಿದಳು.
28 E a donzela correu, e contou aos da casa de sua mãe estas coisas.
29 — ausente —
29 E Rebeca tinha um irmão, e seu nome era Labão; e Labão correu até o homem, junto ao poço.
30 — ausente —
30 E aconteceu que, quando ele viu o brinco e os braceletes nas mãos de sua irmã, e quando ele ouviu as palavras de Rebeca, sua irmã, dizendo: Assim falou o homem comigo, que ele veio ao homem, e eis que ele estava em pé junto aos camelos diante do poço.
31 ಲಾಬಾನನು ಅವನಿಗೆ, “ಯೆಹೋವನ ಆಶೀರ್ವಾದ ಹೊಂದಿದವನೇ, ಒಳಗೆ ಬಾ. ನೀನು ಹೊರಗಡೆ ನಿಂತುಕೊಳ್ಳಬೇಕಾಗಿಲ್ಲ. ನೀನು ಇಳಿದುಕೊಳ್ಳುವುದಕ್ಕಾಗಿ ಕೋಣೆಯನ್ನೂ ನಿನ್ನ ಒಂಟೆಗಳಿಗಾಗಿ ಸ್ಥಳವನ್ನೂ ಸಿದ್ಧಪಡಿಸಿದ್ದೇನೆ” ಎಂದು ಹೇಳಿದನು.
31 E ele disse: Vem, bendito do SENHOR. Por que estás em pé aí fora? Pois eu preparei a casa, e lugar para os camelos.
32 ಆದ್ದರಿಂದ ಅಬ್ರಹಾಮನ ಸೇವಕನು ಲಾಬಾನನ ಮನೆಗೆ ಹೋದನು. ಒಂಟೆಗಳ ಮೇಲಿದ್ದ ಹೊರೆಗಳನ್ನು ಇಳಿಸಲು ಲಾಬಾನನು ಸಹಾಯಮಾಡಿದನು; ಒಂಟೆಗಳಿಗೆ ಸ್ಥಳಮಾಡಿಕೊಟ್ಟು ಮೇವನ್ನು ಕೊಡಿಸಿದನು; ಆಮೇಲೆ ಆ ಸೇವಕನಿಗೆ ಮತ್ತು ಅವನ ಸಂಗಡ ಇದ್ದವರಿಗೆ, ಕಾಲು ತೊಳೆದುಕೊಳ್ಳಲು ನೀರು ಕೊಟ್ಟನು.
32 E o homem entrou na casa, e ele desatou os seus camelos, e deu palha e forragem aos camelos, e água para lavar seus pés, e os pés dos homens que estavam com ele.
33 ನಂತರ ಲಾಬಾನನು ಅವನಿಗೆ ಊಟವನ್ನು ಕೊಟ್ಟನು. ಆದರೆ ಆ ಸೇವಕನು ಊಟಮಾಡದೆ ಅವರಿಗೆ, “ನಾನು ಬಂದ ಉದ್ದೇಶವನ್ನು ತಿಳಿಸದೆ ಊಟಮಾಡುವುದಿಲ್ಲ” ಎಂದು ಹೇಳಿದನು.
33 E foi posto alimento diante dele para comer, mas ele disse: Não comerei, até que eu tenha dito a minha incumbência. E ele disse: Fala.
34 ಆ ಸೇವಕನು “ನಾನು ಅಬ್ರಹಾಮನ ಸೇವಕನು.
34 E ele disse: Eu sou o servo de Abraão.
35 ಯೆಹೋವನು ನನ್ನ ಒಡೆಯನನ್ನು ಪ್ರತಿಯೊಂದರಲ್ಲಿಯೂ ಬಹಳವಾಗಿ ಆಶೀರ್ವದಿಸಿದ್ದಾನೆ. ನನ್ನ ಒಡೆಯನು ಮಹಾವ್ಯಕ್ತಿಯಾಗಿದ್ದಾನೆ. ಯೆಹೋವನು ಅಬ್ರಹಾಮನಿಗೆ ಅನೇಕ ಕುರಿಹಿಂಡುಗಳನ್ನೂ ದನಕರುಗಳ ಮಂದೆಗಳನ್ನೂ ಕೊಟ್ಟಿದ್ದಾನೆ. ಅಬ್ರಹಾಮನಿಗೆ ಬೇಕಾದಷ್ಟು ಬೆಳ್ಳಿಬಂಗಾರಗಳಿವೆ. ಅನೇಕ ಸೇವಕರಿದ್ದಾರೆ. ಅನೇಕ ಒಂಟೆಗಳೂ ಕತ್ತೆಗಳೂ ಇವೆ.
35 E o SENHOR abençoou meu senhor grandemente, e ele tornou-se grande; e ele lhe deu rebanhos, e gado, e prata, e ouro, e servos, e servas, e camelos e jumentos.
36 ಸಾರಳು ನನ್ನ ಒಡೆಯನ ಹೆಂಡತಿ. ಆಕೆ ತುಂಬಾ ವಯಸ್ಸಾಗಿರುವಾಗ ಒಬ್ಬ ಗಂಡುಮಗನನ್ನು ಹೆತ್ತಳು. ನನ್ನ ಒಡೆಯನು ತನ್ನ ಆಸ್ತಿಯನ್ನೆಲ್ಲ ಆ ಮಗನಿಗೇ ಕೊಟ್ಟಿದ್ದಾನೆ.
36 E Sara, esposa de meu senhor, deu um filho a meu senhor quando ela já estava velha, e a ele deu ele tudo que possui.
37 ನನ್ನ ಒಡೆಯನ್ನು ನನ್ನಿಂದ ಒಂದು ಪ್ರಮಾಣವನ್ನು ಬಲವಂತವಾಗಿ ಮಾಡಿಸಿದನು. ನನ್ನ ಒಡೆಯನು ನನಗೆ, ‘ನನ್ನ ಮಗನಿಗೆ ಕಾನಾನಿನ ಹುಡುಗಿಯೊಡನೆ ಮದುವೆಯಾಗದಂತೆ ನೀನು ನೋಡಿಕೊಳ್ಳಬೇಕು; ನಾವು ಈ ಜನರೊಡನೆ ವಾಸಿಸುತ್ತಿದ್ದೇವೆ. ಆದರೆ ಕಾನಾನಿನ ಹುಡುಗಿಯೊಂದಿಗೆ ನನ್ನ ಮಗನಿಗೆ ಮದುವೆಯಾಗುವುದು ನನಗೆ ಇಷ್ಟವಿಲ್ಲ.
37 E meu senhor me fez jurar, dizendo: Tu não tomarás mulher para meu filho dentre as filhas dos cananeus, em cuja terra eu habito;
38 ಆದ್ದರಿಂದ ನೀನು ನನ್ನ ಸ್ವದೇಶಕ್ಕೆ ಹೋಗಿ ನನ್ನ ಸ್ವಜನರಿಂದಲೇ ನನ್ನ ಮಗನಿಗೆ ಕನ್ಯೆಯನ್ನು ತೆಗೆದುಕೊಳ್ಳಬೇಕು’ ಎಂದು ಹೇಳಿದನು.
38 mas tu irás à casa de meu pai, e à minha parentela, para tomar uma mulher para meu filho.
39 ನಾನು ನನ್ನ ಒಡೆಯನಿಗೆ, ‘ಆ ಕನ್ಯೆಯು ಈ ದೇಶಕ್ಕೆ ನನ್ನೊಂದಿಗೆ ಬರಲು ಒಪ್ಪದಿರಬಹುದು’ ಎಂದು ಹೇಳಿದೆ.
39 E eu disse ao meu senhor: E se porventura a mulher não quiser me seguir.
40 ಆದರೆ ನನ್ನ ಒಡೆಯನು ನನಗೆ, ‘ನಾನು ಯೆಹೋವನ ಸೇವೆ ಮಾಡುತ್ತಿದ್ದೇನೆ. ಆದ್ದರಿಂದ ಯೆಹೋವನು ತನ್ನ ದೂತನನ್ನು ನಿನ್ನೊಂದಿಗೆ ಕಳುಹಿಸಿ ನಿನಗೆ ಸಹಾಯ ಮಾಡುವನು. ಅಲ್ಲಿರುವ ನನ್ನ ತಂದೆಯ ಕುಟುಂಬದವರಲ್ಲಿ ನೀನು ನನ್ನ ಮಗನಿಗಾಗಿ ಒಬ್ಬ ಕನ್ಯೆಯನ್ನು ಕಂಡುಕೊಳ್ಳುವೆ.
40 E ele me disse: O SENHOR, diante de quem eu ando, enviará seu anjo contigo, e prosperará o teu caminho; e tu tomarás uma mulher para meu filho da minha parentela, e da casa de meu pai.
41 ಆದರೆ ನೀನು ನನ್ನ ತಂದೆಯ ನಾಡಿಗೆ ಹೋದಾಗ ಅವರು ನನ್ನ ಮಗನಿಗೆ ಒಬ್ಬ ಕನ್ಯೆಯನ್ನು ಕೊಡಲು ಒಪ್ಪದಿದ್ದರೆ ನೀನು ಈ ಪ್ರಮಾಣದಿಂದ ಬಿಡುಗಡೆಯಾಗಿರುವೆ’ ಎಂದು ಹೇಳಿದನು.
41 Então tu estarás livre deste meu juramento, quando fores à minha parentela; e se eles não te derem uma, estarás livre do meu juramento.
42 “ಇಂದು ನಾನು ಈ ಬಾವಿಯ ಬಳಿಗೆ ಬಂದು, ‘ನನ್ನ ಒಡೆಯನಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ದಯವಿಟ್ಟು ನನ್ನ ಪ್ರವಾಸವನ್ನು ಯಶಸ್ವಿಗೊಳಿಸು.
42 E eu vim neste dia para este poço, e disse: Ó SENHOR Deus de meu senhor Abraão, se agora tu fizeres prosperar o caminho em que eu ando,
43 ನಾನು ಬಾವಿಯ ಬಳಿಯಲ್ಲಿ ನಿಂತುಕೊಂಡು ನೀರನ್ನು ತೆಗೆದುಕೊಳ್ಳಲು ಬರುವ ಒಬ್ಬ ಯುವತಿಗಾಗಿ ಕಾದಿರುತ್ತೇನೆ. ಆಮೇಲೆ ನಾನು ಆಕೆಗೆ, “ದಯವಿಟ್ಟು ಕುಡಿಯಲು ನಿನ್ನ ಕೊಡದಿಂದ ನೀರನ್ನು ಕೊಡು” ಎಂದು ಕೇಳುತ್ತೇನೆ.
43 eis que estou em pé junto ao poço de água, e acontecerá que, quando uma virgem vier para tirar água, e eu disser a ela: Dá-me, rogo-te, um pouco de água de teu cântaro para beber,
44 ಅವಳು ನನಗೆ, “ನೀನೂ ನೀರನ್ನು ಕುಡಿ, ನಿನ್ನ ಒಂಟೆಗಳಿಗೂ ನೀರನ್ನು ತಂದುಕೊಡುವೆ” ಎಂದು ಹೇಳಿದರೆ, ನನ್ನ ಒಡೆಯನ ಮಗನಿಗೆ ಯೆಹೋವನು ಆರಿಸಿಕೊಂಡಿರುವ ಕನ್ನಿಕೆ ಇವಳೇ ಎಂಬುದಾಗಿ ತಿಳಿದುಕೊಳ್ಳುವೆ’ ಎಂದು ಪ್ರಾರ್ಥಿಸಿದೆ.
44 e ela me disser: Bebe tu, e eu tirarei também para teus camelos, seja esta a mulher que o SENHOR designou para o filho de meu senhor.
45 “ನಾನು ಪ್ರಾರ್ಥನೆ ಮುಗಿಸುವಷ್ಟರಲ್ಲಿ ರೆಬೆಕ್ಕಳು ನೀರಿಗಾಗಿ ಬಾವಿಗೆ ಬಂದಳು. ಆಕೆ ಹೆಗಲ ಮೇಲೆ ಕೊಡವನ್ನು ಹೊತ್ತುಕೊಂಡಿದ್ದಳು. ಆಕೆ ಬಾವಿಗೆ ಹೋಗಿ ನೀರನ್ನು ತೆಗೆದುಕೊಂಡಳು. ನಾನು ಆಕೆಗೆ, ದಯವಿಟ್ಟು ಸ್ವಲ್ಪ ನೀರನ್ನು ಕೊಡು ಎಂದು ಕೇಳಿದೆ.
45 E antes que eu tivesse acabado de falar em meu coração, eis que Rebeca veio com seu cântaro no seu ombro, e ela desceu ao poço e tirou água. E eu lhe disse: Permite-me que eu beba, rogo-te.
46 ಆ ಕೂಡಲೆ ಆಕೆಯು ಕೊಡವನ್ನು ಹೆಗಲಿನಿಂದ ಕೆಳಗಿಳಿಸಿ, ನನಗೆ ನೀರನ್ನು ಕೊಟ್ಟು, ‘ನೀರನ್ನು ಕುಡಿ; ನಿನ್ನ ಒಂಟೆಗಳಿಗೂ ನೀರನ್ನು ತಂದುಕೊಡುವೆ’ ಎಂದು ಹೇಳಿದಳು. ನಾನು ನೀರನ್ನು ಕುಡಿದ ಮೇಲೆ ಆಕೆ ನನ್ನ ಒಂಟೆಗಳಿಗೂ ನೀರನ್ನು ತಂದುಕೊಟ್ಟಳು.
46 E ela se apressou, e baixou seu cântaro de seu ombro, e disse: Bebe, e eu darei de beber também aos teus camelos. Assim eu bebi, e ela fez os camelos beberem também.
47 ಆಮೇಲೆ ನಾನು ಆಕೆಗೆ, ‘ನಿನ್ನ ತಂದೆ ಯಾರು?’ ಎಂದು ಕೇಳಿದೆ, ಆಕೆ ‘ನನ್ನ ತಂದೆಯ ಹೆಸರು ಬೆತೂವೇಲ. ಅವನು ಮಿಲ್ಕಳ ಮತ್ತು ನಾಹೋರನ ಮಗನು’ ಎಂದು ಹೇಳಿದಳು. ಆಗ ನಾನು ಆಕೆಗೆ ಉಂಗುರವನ್ನೂ ಕೈಬಳೆಗಳನ್ನೂ ಕೊಟ್ಟೆನು.
47 E eu lhe perguntei, e disse: De quem tu és filha? E ela disse: A filha de Betuel, filho de Naor, que Milca lhe deu, e eu coloquei o brinco sobre a sua face, e os braceletes nas suas mãos.
48 ಆ ಸಮಯದಲ್ಲಿ ನಾನು ತಲೆಬಾಗಿ ಯೆಹೋವನಿಗೆ ವಂದನೆ ಸಲ್ಲಿಸಿದೆನು. ನನ್ನ ಒಡೆಯನಾದ ಅಬ್ರಹಾಮನ ದೇವರಾದ ಯೆಹೋವನನ್ನು ಸ್ತುತಿಸಿ ಕೊಂಡಾಡಿದೆನು; ಯಾಕೆಂದರೆ ಆತನು ನನ್ನನ್ನು ನನ್ನ ಒಡೆಯನ ತಮ್ಮನ ಮೊಮ್ಮಗಳ ಬಳಿಗೆ ನೇರವಾಗಿ ನಡೆಸಿದನು.
48 E eu curvei a minha cabeça, e adorei ao SENHOR, e bendisse ao SENHOR, Deus do meu senhor Abraão, que havia me conduzido no caminho certo para tomar a filha do irmão de meu senhor para seu filho.
49 ಈಗ ನಿಮ್ಮ ಅಭಿಪ್ರಾಯವನ್ನು ತಿಳಿಸಿರಿ. ನೀವು ನನ್ನ ಒಡೆಯನಿಗೆ ಪ್ರೀತಿಯಿಂದಲೂ ನಂಬಿಕೆಯಿಂದಲೂ ನಿಮ್ಮ ಮಗಳನ್ನು ಕೊಡುವಿರಾ? ಅಥವಾ ಕೊಡುವುದಿಲ್ಲವೇ? ನಿಮ್ಮ ಉತ್ತರಕ್ಕನುಸಾರವಾಗಿ ನಾನು ಮುಂದಿನ ಕಾರ್ಯದ ಬಗ್ಗೆ ಆಲೋಚಿಸುವೆ” ಎಂದು ಹೇಳಿದನು.
49 E agora, se quiserdes agir de forma bondosa e verdadeira com meu senhor, dizei-mo; e se não, dizei-mo, para que eu possa tornar para a direita ou para a esquerda.
50 ಅದಕ್ಕೆ ಲಾಬಾನನು ಮತ್ತು ಬೆತೂವೇಲನು, “ನಿನ್ನನ್ನು ಯೆಹೋವನೇ ಕಳುಹಿಸಿದ್ದಾನೆ. ನಡೆಯತಕ್ಕದ್ದನ್ನು ಬದಲಾಯಿಸಲು ನಮಗೆ ಸಾಧ್ಯವಿಲ್ಲ.
50 Então Labão e Betuel responderam e disseram: A coisa procede do SENHOR; não podemos falar-te mal ou bem.
51 ರೆಬೆಕ್ಕಳು ನಿಮ್ಮವಳು. ನೀನು ಆಕೆಯನ್ನು ಕರೆದುಕೊಂಡು ಹೋಗಿ ಯೆಹೋವನ ಇಷ್ಟಕ್ಕನುಸಾರವಾಗಿ ನಿನ್ನ ಒಡೆಯನ ಮಗನಿಗೆ ಮದುವೆ ಮಾಡಿಸು” ಎಂದು ಹೇಳಿದರು.
51 Eis que Rebeca está diante de ti, toma-a e vai. E deixa que ela seja a mulher do filho de teu senhor, como o SENHOR disse.
52 ಅಬ್ರಹಾಮನ ಸೇವಕನು ಈ ಮಾತುಗಳನ್ನು ಕೇಳಿ ಯೆಹೋವನಿಗೆ ನೆಲದವರೆಗೂ ತಲೆಬಾಗಿ ನಮಸ್ಕರಿಸಿದನು.
52 E aconteceu que, quando o servo de Abraão ouviu as palavras deles, adorou ao SENHOR, curvando-se à terra.
53 ಆಮೇಲೆ ಆ ಸೇವಕನು ತಾನು ತಂದಿದ್ದ ಉಡುಗೊರೆಗಳನ್ನು ರೆಬೆಕ್ಕಳಿಗೆ ಕೊಟ್ಟನು. ಅವನು ರೆಬೆಕ್ಕಳಿಗೆ ಬೆಳ್ಳಿಬಂಗಾರಗಳ ಒಡವೆಗಳನ್ನೂ ಶ್ರೇಷ್ಠವಾದ ಬಟ್ಟೆಗಳನ್ನೂ ಕೊಟ್ಟನು. ಇದಲ್ಲದೆ ಅವನು ಬೆಲೆಬಾಳುವ ಉಡುಗೊರೆಗಳನ್ನು ಆಕೆಯ ಅಣ್ಣನಿಗೂ ತಾಯಿಗೂ ಕೊಟ್ಟನು.
53 E o servo trouxe joias de prata, e joias de ouro, e vestes e os deu a Rebeca, e ele deu coisas preciosas também ao seu irmão e à sua mãe.
54 ಆ ಸೇವಕನು ಮತ್ತು ಅವನ ಸಂಗಡಿಗರು ಅಲ್ಲಿ ಇಳಿದುಕೊಂಡು ಊಟಮಾಡಿದರು. ಅವರು ಮರುದಿನ ಮುಂಜಾನೆ ಎದ್ದು, “ಈಗ ನಾವು ನಮ್ಮ ಒಡೆಯನ ಬಳಿಗೆ ಹೋಗುತ್ತೇವೆ” ಎಂದು ಹೇಳಿದರು.
54 E eles comeram e beberam, ele e os homens que estavam com ele, e passaram toda a noite. E se levantaram de manhã, e ele disse: Enviai-me a meu senhor.
55 ರೆಬೆಕ್ಕಳ ತಾಯಿ ಮತ್ತು ಅಣ್ಣನು ಅವರಿಗೆ, “ರೆಬೆಕ್ಕಳು ಸ್ವಲ್ಪ ದಿನಗಳವರೆಗೆ ನಮ್ಮ ಜೊತೆ ಇರಲಿ. ಹತ್ತು ದಿನಗಳವರೆಗಾದರೂ ನಮ್ಮೊಡನೆ ಇರಲಿ. ಆಮೇಲೆ ಆಕೆಯನ್ನು ಕರೆದುಕೊಂಡು ಹೋಗು” ಎಂದು ಹೇಳಿದರು.
55 E o irmão dela e a sua mãe disseram: Deixa que a donzela fique conosco alguns dias, pelo menos dez, e depois disso, ela irá.
56 ಆದರೆ ಆ ಸೇವಕನು ಅವರಿಗೆ, “ನನ್ನನ್ನು ತಡೆಯಬೇಡಿ. ಯೆಹೋವನು ನನ್ನ ಪ್ರಯಾಣವನ್ನು ಯಶಸ್ವಿಗೊಳಿಸಿದ್ದಾನೆ. ಈಗ ನನ್ನನ್ನು ನನ್ನ ಒಡೆಯನ ಬಳಿಗೆ ಕಳುಹಿಸಿಕೊಡಿ” ಎಂದು ಹೇಳಿದನು.
56 E ele lhes disse: Não me detenhais, vendo que o SENHOR tem prosperado o meu caminho. Enviai-me para que eu possa ir ao meu senhor.
57 ರೆಬೆಕ್ಕಳ ಅಣ್ಣ ಮತ್ತು ತಾಯಿ ಅವನಿಗೆ, “ನಾವು ರೆಬೆಕ್ಕಳನ್ನು ಕರೆದು ಆಕೆಯ ಇಷ್ಟವನ್ನು ಕೇಳುತ್ತೇವೆ” ಅಂದರು.
57 E eles disseram: Chamaremos a donzela, e perguntaremos de sua boca.
58 ಅವರು ರೆಬೆಕ್ಕಳನ್ನು ಕರೆದು, “ಈಗಲೇ ಈ ಮನುಷ್ಯನೊಡನೆ ಹೋಗಲು ನಿನಗೆ ಇಷ್ಟವಿದೆಯೋ?” ಎಂದು ಕೇಳಿದರು.
58 E eles chamaram Rebeca, e lhe disseram: Tu queres ir com este homem? E ela disse: Eu irei.
59 ಆದ್ದರಿಂದ ಅವರು ರೆಬೆಕ್ಕಳನ್ನು ಅಬ್ರಹಾಮನ ಸೇವಕನೊಂದಿಗೂ ಅವನ ಸಂಗಡಿಗರೊಂದಿಗೂ ಕಳುಹಿಸಿಕೊಟ್ಟರು. ರೆಬೆಕ್ಕಳ ಸೇವಕಿ ಸಹ ಅವರೊಂದಿಗೆ ಹೋದಳು.
59 E eles enviaram Rebeca, sua irmã, e sua ama, e o servo de Abraão, e seus homens.
60 ಅವರು ಹೊರಡಲು ಸಿದ್ಧರಾಗಿದ್ದಾಗ ಅವರು ರೆಬೆಕ್ಕಳಿಗೆ,
60 E eles abençoaram Rebeca, e lhe disseram: Tu és nossa irmã, seja a mãe de milhares de milhões, e que a tua semente possua o portão dos que te odeiam.
61 ಆಮೇಲೆ ರೆಬೆಕ್ಕಳು ಮತ್ತು ಆಕೆಯ ಸೇವಕಿಯರು ಒಂಟೆಯ ಮೇಲೆ ಹತ್ತಿ ಕುಳಿತುಕೊಂಡು ಆ ಸೇವಕನನ್ನೂ ಅವನ ಸಂಗಡಿಗರನ್ನೂ ಹಿಂಬಾಲಿಸಿದರು. ಹೀಗೆ ಆ ಸೇವಕನು ರೆಬೆಕ್ಕಳನ್ನು ಕರೆದುಕೊಂಡು ಮನೆಗೆ ಮರಳಿ ಪ್ರಯಾಣಮಾಡಿದನು.
61 E Rebeca se levantou, e suas donzelas, e montaram em seus camelos, e seguiram o homem. E o servo tomou Rebeca, e foi pelo seu caminho.
62 ಆ ಸಮಯದಲ್ಲಿ, ಇಸಾಕನು ಬೀರ್‌ಲಹೈರೋಯಿಗೆ ಹೋಗಿ ಬಂದಿದ್ದನು; ಯಾಕೆಂದರೆ ಅವನು ನೆಗವ್‌ನಲ್ಲಿ ವಾಸವಾಗಿದ್ದನು.
62 E Isaque veio do caminho do poço Beer-Laai-Rói, pois ele habitava na terra do sul.
63 ಸಾಯಂಕಾಲದಲ್ಲಿ ಇಸಾಕನು ಧ್ಯಾನಮಾಡಲು ಹೊಲಕ್ಕೆ ಹೋದನು. ಇಸಾಕನು ಕಣ್ಣೆತ್ತಿ ನೋಡಿದಾಗ ಬಹುದೂರದಲ್ಲಿ ಒಂಟೆಗಳು ಬರುತ್ತಿರುವುದನ್ನು ಕಂಡನು.
63 E Isaque saiu para meditar no campo ao anoitecer. E ele levantou seus olhos, e viu, e eis que os camelos estavam vindo.
64 ರೆಬೆಕ್ಕಳು ಕಣ್ಣೆತ್ತಿ ನೋಡಿದಾಗ ಇಸಾಕನನ್ನು ಕಂಡಳು. ಆಮೇಲೆ ಆಕೆ ಒಂಟೆಯಿಂದ ಬೇಗನೆ ಇಳಿದು ಬಂದಳು.
64 E Rebeca levantou seus olhos, e quando ela viu Isaque, desceu do camelo,
65 ಆಕೆ, ಆ ಸೇವಕನಿಗೆ, “ನಮ್ಮನ್ನು ಭೇಟಿಯಾಗಲು ಹೊಲದಲ್ಲಿ ಬರುತ್ತಿರುವ ಆ ಯೌವನಸ್ಥನು ಯಾರು?” ಎಂದು ಕೇಳಿದಳು.
65 pois ela havia dito ao servo: Que homem é este que anda no campo ao nosso encontro? E o servo havia dito: É meu senhor. Por isso, ela tomou um véu e se cobriu.
66 ಆ ಸೇವಕನು ನಡೆದ ಸಂಗತಿಯನ್ನೆಲ್ಲಾ ಇಸಾಕನಿಗೆ ತಿಳಿಸಿದನು.
66 E o servo contou a Isaque todas as coisas que ele havia feito.
67 ನಂತರ ಇಸಾಕನು ಆಕೆಯನ್ನು ಕರೆದುಕೊಂಡು ತನ್ನ ತಾಯಿಯ ಗುಡಾರಕ್ಕೆ ಬಂದನು. ಅಂದು ರೆಬೆಕ್ಕಳು ಇಸಾಕನ ಹೆಂಡತಿಯಾದಳು. ಇಸಾಕನು ಅವಳನ್ನು ಬಹಳವಾಗಿ ಪ್ರೀತಿಸಿದನು. ತಾಯಿಯ ಸಾವಿನಿಂದ ಉಂಟಾಗಿದ್ದ ದುಃಖವು ಕಡಿಮೆಯಾಗಿ ಇಸಾಕನಿಗೆ ಆದರಣೆಯಾಯಿತು.
67 E Isaque a levou para a tenda de Sara, sua mãe, e tomou Rebeca, e ela se tornou sua esposa. E ele a amou, e Isaque foi confortado após a morte de sua mãe.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Gênesis 24, comparar traduções ou montar um estudo — tudo direto pelo WhatsApp.