Gênesis 25

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NAA

Sair da comparação
NAA Nova Almeida Atualizada 2017
1 ಅಬ್ರಹಾಮನು ಮತ್ತೆ ಮದುವೆಯಾದನು. ಅವನ ಹೊಸ ಹೆಂಡತಿಯ ಹೆಸರು ಕೆಟೂರ.
1 Abraão casou com outra mulher, que se chamava Quetura.
2 ಆಕೆ ಅವನಿಗೆ; ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಎಂಬವರನ್ನು ಹೆತ್ತಳು.
2 Ela lhe deu à luz Zinrã, Jocsã, Medã, Midiã, Isbaque e Sua.
3 ಯೊಕ್ಷಾನನು ಶೆಬಾ ಮತ್ತು ದೆದಾನ್ ಎಂಬವರ ತಂದೆ. ದೆದಾನನ ಸಂತತಿಯವರು: ಅಶ್ಶೂರ್ಯರು ಲೆಟೂಶ್ಯರು ಮತ್ತು ಲೆಯುಮ್ಯರು.
3 Jocsã gerou Seba e Dedã. Os filhos de Dedã foram: Assurim, Letusim e Leumim.
4 ಮಿದ್ಯಾನನ ಗಂಡುಮಕ್ಕಳು: ಗೇಫಾ, ಗೇಫೆರ್, ಹನೋಕ್, ಅಬೀದಾ ಮತ್ತು ಎಲ್ದಾಗ. ಇವರೆಲ್ಲರೂ ಕೆಟೂರಳ ಸಂತತಿಯವರು.
4 Os filhos de Midiã foram: Efá, Éfer, Enoque, Abida e Elda. Todos estes foram filhos de Quetura.
5 — ausente —
5 Abraão deu tudo o que tinha a Isaque.
6 — ausente —
6 Porém, aos filhos das concubinas que tinha, Abraão deu presentes e, ainda em vida, os separou de seu filho Isaque, enviando-os para a terra do Oriente.
7 ಅಬ್ರಹಾಮನು ನೂರೆಪ್ಪತ್ತೈದು ವರ್ಷ ಜೀವಿಸಿದನು.
7 Os dias da vida de Abraão foram cento e setenta e cinco anos.
8 ಅವನು ಪೂರ್ಣಾಯುಷ್ಯದಿಂದ ದಿನತುಂಬಿದ ವೃದ್ಧನಾಗಿ ಪ್ರಾಣಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಿದನು.
8 Abraão expirou e morreu após uma longa velhice, e foi reunido ao seu povo.
9 ಅವನ ಗಂಡುಮಕ್ಕಳಾದ ಇಸಾಕ ಮತ್ತು ಇಷ್ಮಾಯೇಲರು ಅವನನ್ನು ಮಕ್ಪೇಲದ ಗವಿಯಲ್ಲಿ ಸಮಾಧಿಮಾಡಿದರು. ಈ ಗವಿಯು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಜಮೀನಿನಲ್ಲಿದೆ. ಅದು ಮಮ್ರೆಗೆ ಪೂರ್ವದಿಕ್ಕಿನಲ್ಲಿದೆ.
9 Os filhos dele, Isaque e Ismael, o sepultaram na caverna de Macpela, no campo de Efrom, filho de Zoar, o heteu, em frente de Manre,
10 ಅಬ್ರಹಾಮನು ಹಿತ್ತಿಯರಿಂದ ಕೊಂಡುಕೊಂಡ ಈ ಗವಿಯಲ್ಲೇ ಅಬ್ರಹಾಮನನ್ನು ಅವನ ಹೆಂಡತಿಯಾದ ಸಾರಳ ಜೊತೆಯಲ್ಲಿ ಸಮಾಧಿಮಾಡಲಾಯಿತು.
10 o campo que Abraão havia comprado dos filhos de Hete. Ali foram sepultados Abraão e Sara, sua mulher.
11 ಅಬ್ರಹಾಮನು ತೀರಿಕೊಂಡ ಮೇಲೆ, ದೇವರು ಇಸಾಕನನ್ನು ಆಶೀರ್ವದಿಸಿದನು; ಇಸಾಕನು ಬೀರ್‌ಲಹೈರೋಯಿಯಲ್ಲಿ ತನ್ನ ಜೀವನವನ್ನು ಮುಂದುವರೆಸಿದನು.
11 Depois da morte de Abraão, Deus abençoou Isaque, o filho dele. Isaque morava perto de Beer-Laai-Roi.
12 ಇದು ಇಷ್ಮಾಯೇಲನ ವಂಶಾವಳಿ: ಇಷ್ಮಾಯೇಲನು ಅಬ್ರಹಾಮನ ಮತ್ತು ಹಾಗರಳ ಮಗನು. (ಈಜಿಪ್ಟಿನವಳಾದ ಹಾಗರಳು ಸಾರಳ ಸೇವಕಿ.)
12 São estas as gerações de Ismael, filho de Abraão, que Agar, egípcia, serva de Sara, lhe deu à luz.
13 ಇಷ್ಮಾಯೇಲನ ಗಂಡುಮಕ್ಕಳ ಹೆಸರುಗಳು: ಮೊದಲನೆ ಮಗನು ನೆಬಾಯೋತ್. ಆಮೇಲೆ ಹುಟ್ಟಿದವರು: ಕೇದಾರ್, ಅದ್ಬಯೇಲ್, ಮಿಬ್ಸಾಮ್,
13 Estes são os nomes dos filhos de Ismael, por ordem de nascimento: o primogênito de Ismael foi Nebaiote; depois, Quedar, Abdeel, Mibsão,
14 ಮಿಷ್ಮಾ, ದೂಮಾ, ಮಸ್ಸಾ,
14 Misma, Dumá, Massá,
15 ಹದದ್, ತೇಮಾ, ಯಟೂರ್, ನಾಫೀಷ್ ಮತ್ತು ಕೇದ್ಮಾ.
15 Hadade, Tema, Jetur, Nafis e Quedemá.
16 ಪ್ರತಿಯೊಬ್ಬನೂ ತನ್ನದೇ ಆದ ಪಾಳೆಯವನ್ನು ಹೊಂದಿದ್ದನು. ಆ ಪಾಳೆಯಗಳೇ ಮುಂದೆ ಚಿಕ್ಕ ಪಟ್ಟಣಗಳಾದವು. ಈ ಹನ್ನೆರಡು ಮಂದಿ ಗಂಡುಮಕ್ಕಳು ತಮ್ಮ ಜನರಿಗೆ ಹನ್ನೆರಡು ಮಂದಿ ರಾಜರುಗಳಂತಿದ್ದರು.
16 Estes são os filhos de Ismael e estes são os seus nomes pelas suas aldeias e pelos seus acampamentos: doze príncipes de seus povos.
17 ಇಷ್ಮಾಯೇಲನು ನೂರ ಮೂವತ್ತೇಳು ವರ್ಷ ಬದುಕಿದನು. ಅವನು ಸತ್ತ ನಂತರ ಅವನನ್ನು ತನ್ನ ಪೂರ್ವಜರ ಸಮಾಧಿಯಲ್ಲಿ ಹೂಣಿಟ್ಟರು.
17 E os anos da vida de Ismael foram cento e trinta e sete; e morreu e foi reunido ao seu povo.
18 ಇಷ್ಮಾಯೇಲನ ಸಂತತಿಯವರು ಮರುಭೂಮಿ ಪ್ರದೇಶದ ಉದ್ದಕ್ಕೂ ಪಾಳೆಯಗಳನ್ನು ಮಾಡಿಕೊಂಡಿದ್ದರು. ಈ ಪ್ರದೇಶವು ಹವೀಲ ಮತ್ತು ಈಜಿಪ್ಟಿನ ಸಮೀಪದಲ್ಲಿರುವ ಶೂರಿನಿಂದ ಆರಂಭಗೊಂಡು ಅಶ್ಶೂರದವರೆಗೂ ಇತ್ತು. ಇಷ್ಮಾಯೇಲನ ಸಂತತಿಗಳವರು ಪದೇಪದೇ ತಮ್ಮ ಸಹೋದರನ ಜನರಿಗೆ ವಿರೋಧವಾಗಿ ಆಕ್ರಮಣ ಮಾಡುತ್ತಿದ್ದರು.
18 Os filhos de Ismael habitaram desde Havilá até Sur, nas imediações do Egito, no caminho para a Assíria. Ele se estabeleceu diante de todos os seus irmãos.
19 ಇದು ಇಸಾಕನ ಚರಿತ್ರೆ. ಅಬ್ರಹಾಮನಿಗೆ ಇಸಾಕ ಎಂಬ ಹೆಸರಿನ ಮಗನಿದ್ದನು.
19 São estas as gerações de Isaque, filho de Abraão. Abraão gerou Isaque.
20 ಇಸಾಕನು ನಲವತ್ತು ವರ್ಷದವನಾಗಿದ್ದಾಗ ರೆಬೆಕ್ಕಳನ್ನು ಮದುವೆಯಾದನು. ರೆಬೆಕ್ಕಳು ಪದ್ದನ್ ಅರಾಮಿನವಳು. ಆಕೆ ಬೆತೂವೇಲನ ಮಗಳು ಮತ್ತು ಅರಾಮ್ಯನಾದ ಲಾಬಾನನ ತಂಗಿ.
20 Ele tinha quarenta anos quando tomou por esposa Rebeca, filha de Betuel, o arameu de Padã-Arã, e irmã de Labão, o arameu.
21 ಇಸಾಕನ ಹೆಂಡತಿ ಮಕ್ಕಳನ್ನು ಪಡೆಯಲಾಗಲಿಲ್ಲ. ಆದ್ದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಯೆಹೋವನಲ್ಲಿ ಪ್ರಾರ್ಥಿಸಿದನು. ಯೆಹೋವನು ಇಸಾಕನ ಪ್ರಾರ್ಥನೆಯನ್ನು ಕೇಳಿ ರೆಬೆಕ್ಕಳಿಗೆ ಗರ್ಭಧಾರಣೆಯನ್ನು ಅನುಗ್ರಹಿಸಿದನು.
21 Isaque orou ao Senhor por sua mulher, porque ela era estéril. O Senhor ouviu as orações dele, e Rebeca, a mulher de Isaque, ficou grávida.
22 ರೆಬೆಕ್ಕಳು ಗರ್ಭಿಣಿಯಾಗಿದ್ದಾಗ, ಅವಳ ಗರ್ಭದಲ್ಲಿದ್ದ ಕೂಸುಗಳು ಒಂದನ್ನೊಂದು ನೂಕಾಡಿದ್ದರಿಂದ ಅವಳು ಬಹಳ ತೊಂದರೆಪಡಬೇಕಾಯಿತು. ರೆಬೆಕ್ಕಳು ಯೆಹೋವನಿಗೆ ಪ್ರಾರ್ಥಿಸಿ, “ನನಗೇಕೆ ಹೀಗೆ ಆಗುತ್ತಿದೆ?” ಎಂದು ಕೇಳಿದಳು.
22 Os filhos lutavam no ventre dela. Então ela disse: “Por que isso está acontecendo comigo?” E ela foi consultar o Senhor .
23 ಯೆಹೋವನು ಅವಳಿಗೆ,
23 E o Senhor lhe respondeu: “Duas nações estão no seu ventre, dois povos, nascidos de você, se dividirão: um povo será mais forte do que o outro, e o mais velho servirá o mais moço.”
24 ದಿನ ತುಂಬಿದ ಮೇಲೆ ರೆಬೆಕ್ಕಳು ಅವಳಿಜವಳಿ ಮಕ್ಕಳನ್ನು ಹೆತ್ತಳು.
24 Cumpridos os dias para que desse à luz, eis que havia gêmeos no seu ventre.
25 ಮೊದಲನೆಯ ಮಗುವು ಕೆಂಪಗಿತ್ತು. ಅವನ ಚರ್ಮವು ಕೂದಲಿನ ಉಡುಪಿನಂತಿತ್ತು. ಆದ್ದರಿಂದ ಅವನಿಗೆ “ಏಸಾವ್” ಎಂದು ಹೆಸರಿಡಲಾಯಿತು.
25 Nasceu o primeiro, ruivo, todo revestido de pelo; por isso, deram-lhe o nome de Esaú.
26 ಎರಡನೆಯ ಮಗು ಹುಟ್ಟಿದಾಗ ಅದು ಏಸಾವನ ಹಿಮ್ಮಡಿಯನ್ನು ಗಟ್ಟಿಯಾಗಿ ಹಿಡಿದುಕೊಂಡಿತ್ತು. ಆದ್ದರಿಂದ ಆ ಮಗುವಿಗೆ “ಯಾಕೋಬ” ಎಂದು ಹೆಸರಿಡಲಾಯಿತು. ಯಾಕೋಬ ಮತ್ತು ಏಸಾವ ಹುಟ್ಟಿದಾಗ ಇಸಾಕನಿಗೆ ಅರವತ್ತು ವರ್ಷ ವಯಸ್ಸಾಗಿತ್ತು.
26 Depois, nasceu o irmão. Com a mão segurava o calcanhar de Esaú, e por isso lhe deram o nome de Jacó. Isaque tinha sessenta anos quando Rebeca deu à luz.
27 ಆ ಬಾಲಕರು ಬೆಳೆದು ದೊಡ್ಡವರಾದರು. ಏಸಾವನು ಚತುರ ಬೇಟೆಗಾರನಾದನು. ಹೊಲದಲ್ಲಿರುವುದು ಅವನಿಗೆ ಪ್ರಿಯವಾಗಿತ್ತು. ಆದರೆ ಯಾಕೋಬನು ಸಾಧು ಮನುಷ್ಯನಾಗಿದ್ದನು. ಅವನು ತನ್ನ ಗುಡಾರದಲ್ಲಿರುತ್ತಿದ್ದನು.
27 Cresceram os meninos. Esaú tornou-se perito caçador, homem do campo; Jacó, porém, era homem pacato e morava em tendas.
28 ಇಸಾಕನು ಏಸಾವನನ್ನು ಪ್ರೀತಿಸಿದನು. ಏಸಾವನು ಬೇಟೆಯಾಡಿ ತಂದ ಪ್ರಾಣಿಗಳ ಮಾಂಸ ಅವನಿಗೆ ಇಷ್ಟವಾಗಿತ್ತು. ಆದರೆ ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು.
28 Isaque amava Esaú, porque se saboreava de sua caça; Rebeca, porém, amava Jacó.
29 ಒಂದು ಸಲ ಏಸಾವನು ಬೇಟೆಯಿಂದ ಹಿಂತಿರುಗಿ ಬಂದಾಗ ಹಸಿವೆಯಿಂದ ಆಯಾಸಗೊಂಡಿದ್ದನು ಮತ್ತು ಬಲಹೀನನಾಗಿದ್ದನು. ಯಾಕೋಬನು ಅಲಸಂಧಿ ಗುಗ್ಗರಿ ಮಾಡುತ್ತಿದ್ದನು.
29 Jacó tinha feito um ensopado, quando Esaú, exausto, veio do campo
30 ಆಗ ಏಸಾವನು ಯಾಕೋಬನಿಗೆ, “ಹಸಿವೆಯಿಂದ ನನಗೆ ಆಯಾಸವಾಗಿದೆ. ನನಗೆ ಕೆಂಪಾದ ಸ್ವಲ್ಪ ಅಲಸಂದಿ ಗುಗ್ಗರಿಯನ್ನು ಕೊಡು” ಎಂದು ಕೇಳಿದನು. (ಈ ಕಾರಣದಿಂದ ಜನರು ಅವನಿಗೆ “ಏದೋಮ್” ಎಂದು ಕರೆಯುತ್ತಾರೆ.)
30 e lhe disse: — Por favor, me deixe comer um pouco da coisa vermelha, essa coisa vermelha aí, pois estou exausto. (Por isso deram-lhe o nome de Edom.)
31 ಆದರೆ ಯಾಕೋಬನು, “ನಿನ್ನ ಚೊಚ್ಚಲತನದ ಹಕ್ಕನ್ನು ನೀನು ನನಗೆ ಈ ದಿನ ಮಾರಬೇಕು” ಎಂದು ಹೇಳಿದನು.
31 Jacó respondeu: — Primeiro me venda o seu direito de primogenitura.
32 ಏಸಾವನು, “ನನಗೆ ಹಸಿವೆಯಿಂದ ಸಾಯುವಂತಾಗಿದೆ. ನಾನು ಸತ್ತುಹೋದರೆ, ನನ್ನ ತಂದೆಯ ಐಶ್ವರ್ಯವೆಲ್ಲ ನನಗೆ ಸಹಾಯ ಮಾಡಲಾರದು. ಆದ್ದರಿಂದ ನಾನು ನನ್ನ ಹಕ್ಕನ್ನು ನಿನಗೆ ಕೊಡುವೆನು” ಎಂದು ಹೇಳಿದನು.
32 Ele respondeu: — Estou morrendo de fome; de que me vale o direito de primogenitura?
33 ಆದರೆ ಯಾಕೋಬನು, “ನೀನು ಅದನ್ನು ಕೊಡುವುದಾಗಿ ಪ್ರಮಾಣಮಾಡು” ಅಂದನು. ಆದ್ದರಿಂದ ಏಸಾವನು ಯಾಕೋಬನಿಗೆ ಪ್ರಮಾಣ ಮಾಡಿದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕನ್ನು ಯಾಕೋಬನಿಗೆ ಮಾರಿಕೊಂಡನು.
33 Então Jacó disse: — Primeiro jure. Esaú jurou e vendeu o seu direito de primogenitura a Jacó.
34 ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಕುದಿಸಿದ ಅಲಸಂಧಿ ಗುಗ್ಗರಿಯನ್ನೂ ಕೊಟ್ಟನು. ಏಸಾವನು ತಿಂದು ಕುಡಿದು ಅಲ್ಲಿಂದ ಹೊರಟುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕುಗಳ ಮೇಲೆ ತನಗೆ ಚಿಂತೆಯಿಲ್ಲದಿರುವುದನ್ನು ತೋರಿಸಿಕೊಂಡನು.
34 E Jacó deu a Esaú pão e o ensopado de lentilhas; ele comeu e bebeu, levantou-se e saiu. Assim, Esaú desprezou o seu direito de primogenitura.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Gênesis 25, comparar traduções ou montar um estudo — tudo direto pelo WhatsApp.