Gênesis 26
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARA
1 ಅಬ್ರಹಾಮನ ಕಾಲದಲ್ಲಿ ಬಂದಿದ್ದ ಕ್ಷಾಮದಂತೆ ಮತ್ತೊಂದು ಕ್ಷಾಮವು ಕಾನಾನ್ ದೇಶಕ್ಕೆ ಬಂದಿತು. ಆದ್ದರಿಂದ ಇಸಾಕನು ಫಿಲಿಷ್ಟಿಯರ ರಾಜನಾದ ಅಬೀಮೆಲೆಕನ ಬಳಿಗೆ ಹೋದನು. ಅಬೀಮೆಲೆಕನು ಗೆರಾರ್ ನಗರದಲ್ಲಿದ್ದನು.
1 Sobrevindo fome à terra, além da primeira havida nos dias de Abraão, foi Isaque a Gerar, avistar-se com Abimeleque, rei dos filisteus.
2 ಯೆಹೋವನು ಇಸಾಕನಿಗೆ ಪ್ರತ್ಯಕ್ಷನಾಗಿ, “ನೀನು ಈಜಿಪ್ಟಿಗೆ ಹೋಗಬೇಡ. ನೀನು ಯಾವ ಪ್ರದೇಶದಲ್ಲಿರಬೇಕೆಂದು ನಾನು ಆಜ್ಞಾಪಿಸಿದೆನೋ ಆ ಪ್ರದೇಶದಲ್ಲಿ ವಾಸಿಸು.
2 Apareceu-lhe o Senhor e disse: Não desças ao Egito. Fica na terra que eu te disser;
3 ನಾನು ನಿನ್ನ ಸಂಗಡವಿದ್ದು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಕುಟುಂಬಕ್ಕೂ ಈ ಪ್ರದೇಶಗಳನ್ನೆಲ್ಲ ಕೊಡುವೆನು. ನಾನು ನಿನ್ನ ತಂದೆಯಾದ ಅಬ್ರಹಾಮನಿಗೆ ಪ್ರಮಾಣ ಮಾಡಿದ್ದನ್ನು ನೆರವೇರಿಸುವೆನು.
3 habita nela, e serei contigo e te abençoarei; porque a ti e a tua descendência darei todas estas terras e confirmarei o juramento que fiz a Abraão, teu pai.
4 ನಾನು ನಿನ್ನ ಸಂತಾನವನ್ನು ಆಕಾಶದಲ್ಲಿನ ನಕ್ಷತ್ರಗಳಷ್ಟು ಹೆಚ್ಚಿಸಿ ಅವರಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳವರು ನಿನ್ನ ಸಂತತಿಯಿಂದ ಆಶೀರ್ವಾದ ಹೊಂದುವರು.
4 Multiplicarei a tua descendência como as estrelas dos céus e lhe darei todas estas terras. Na tua descendência serão abençoadas todas as nações da terra;
5 ನಾನೇ ಇದನ್ನು ನೆರವೇರಿಸುವೆನು; ಯಾಕೆಂದರೆ ನಿನ್ನ ತಂದೆಯಾದ ಅಬ್ರಹಾಮನು ನನ್ನ ಮಾತುಗಳಿಗೆ ವಿಧೇಯನಾಗಿ ನಾನು ಹೇಳಿದಂತೆ ಮಾಡಿ ನನ್ನ ಆಜ್ಞೆಗಳನ್ನು, ಕಟ್ಟಳೆಗಳನ್ನು, ನಿಯಮಗಳನ್ನು ಕೈಕೊಂಡು ನಡೆದನು” ಎಂದು ಹೇಳಿದನು.
5 porque Abraão obedeceu à minha palavra e guardou os meus mandados, os meus preceitos, os meus estatutos e as minhas leis.
6 ಆದ್ದರಿಂದ ಇಸಾಕನು ಗೆರಾರಿನಲ್ಲಿ ಇಳಿದುಕೊಂಡು ವಾಸಿಸಿದನು.
6 Isaque, pois, ficou em Gerar.
7 ಇಸಾಕನ ಹೆಂಡತಿಯಾದ ರೆಬೆಕ್ಕಳು ತುಂಬ ಸೌಂದರ್ಯವತಿಯಾಗಿದ್ದಳು. ಆ ಸ್ಥಳದ ಗಂಡಸರು ರೆಬೆಕ್ಕಳ ಬಗ್ಗೆ ಇಸಾಕನನ್ನು ಕೇಳಿದರು. ಇಸಾಕನು ಅವರಿಗೆ, “ಆಕೆ ನನ್ನ ತಂಗಿ” ಎಂದು ಹೇಳಿದನು. ರೆಬೆಕ್ಕಳು ತನಗೆ ಹೆಂಡತಿಯಾಗಬೇಕೆಂದು ಅವರಿಗೆ ತಿಳಿದರೆ ಆಕೆಯನ್ನು ತೆಗೆದುಕೊಳ್ಳಲು ಅವರು ತನ್ನನ್ನು ಕೊಲ್ಲಬಹುದೆಂಬ ಹೆದರಿಕೆಯಿಂದ ಇಸಾಕನು ಹಾಗೆ ಹೇಳಿದನು.
7 Perguntando-lhe os homens daquele lugar a respeito de sua mulher, disse: É minha irmã; pois temia dizer: É minha mulher; para que, dizia ele consigo, os homens do lugar não me matem por amor de Rebeca, porque era formosa de aparência.
8 ಅಲ್ಲಿ ಇಸಾಕನು ಇದ್ದು ಬಹುಕಾಲವಾಗಿತ್ತು. ಒಮ್ಮೆ ಫಿಲಿಷ್ಟಿಯರ ರಾಜನಾದ ಅಬೀಮೆಲೆಕನು ತನ್ನ ಕಿಟಕಿಯಿಂದ ನೋಡಿದಾಗ, ಇಸಾಕನು ಮತ್ತು ಅವನ ಹೆಂಡತಿ ಸರಸವಾಡುತ್ತಿರುವುದನ್ನು ಕಂಡನು.
8 Ora, tendo Isaque permanecido ali por muito tempo, Abimeleque, rei dos filisteus, olhando da janela, viu que Isaque acariciava a Rebeca, sua mulher.
9 ಅಬೀಮೆಲೆಕನು ಇಸಾಕನನ್ನು ಕರೆದು, “ಈ ಸ್ತ್ರೀಯು ನಿನ್ನ ಹೆಂಡತಿ. ಅವಳು ನಿನ್ನ ತಂಗಿಯೆಂದು ಯಾಕೆ ನಮಗೆ ಹೇಳಿದೆ?” ಎಂದು ಕೇಳಿದನು.
9 Então, Abimeleque chamou a Isaque e lhe disse: É evidente que ela é tua esposa; como, pois, disseste: É minha irmã? Respondeu-lhe Isaque: Porque eu dizia: para que eu não morra por causa dela.
10 ಅಬೀಮೆಲೆಕನು ಅವನಿಗೆ, “ನೀನು ನಮಗೆ ಕೆಟ್ಟದ್ದನ್ನು ಮಾಡಿದೆ. ನಮ್ಮಲ್ಲಿರುವ ಯಾವ ಗಂಡಸಾದರೂ ನಿನ್ನ ಹೆಂಡತಿಯೊಡನೆ ಮಲಗಿಕೊಳ್ಳಲು ನೀನೇ ಆಸ್ಪದ ಮಾಡಿಕೊಟ್ಟಿದ್ದೆ. ಅಂಥದ್ದೇನಾದರೂ ನಡೆದಿದ್ದರೆ ಮಹಾ ಅಪರಾಧವಾಗುತ್ತಿತ್ತು” ಎಂದು ಹೇಳಿದನು.
10 Disse Abimeleque: Que é isso que nos fizeste? Facilmente algum do povo teria abusado de tua mulher, e tu, atraído sobre nós grave delito.
11 ಬಳಿಕ ಅಬೀಮೆಲೆಕನು ತನ್ನ ಪ್ರಜೆಗಳಿಗೆ, “ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಯಾರೂ ಕೇಡುಮಾಡಕೂಡದು. ಇವರಿಗೆ ಕೇಡುಮಾಡುವವನನ್ನು ಕೊಲ್ಲಲಾಗುವುದು” ಎಂದು ಆಜ್ಞಾಪಿಸಿದನು.
11 E deu esta ordem a todo o povo: Qualquer que tocar a este homem ou à sua mulher certamente morrerá.
12 ಇಸಾಕನು ಆ ಪ್ರದೇಶದಲ್ಲಿ ಬೀಜ ಬಿತ್ತಿದನು; ಅವನಿಗೆ ಅದೇ ವರ್ಷದಲ್ಲಿ ಮಹಾ ಸುಗ್ಗಿಯಾಯಿತು. ಯೆಹೋವನು ಅವನನ್ನು ಹೆಚ್ಚಾಗಿ ಆಶೀರ್ವದಿಸಿದನು.
12 Semeou Isaque naquela terra e, no mesmo ano, recolheu cento por um, porque o Senhor o abençoava.
13 ಅವನ ಐಶ್ವರ್ಯವು ಹೆಚ್ಚುತ್ತಾ ಬಂದದ್ದರಿಂದ ಅವನು ಬಹು ಐಶ್ವರ್ಯವಂತನಾದನು.
13 Enriqueceu-se o homem, prosperou, ficou riquíssimo;
14 ಅವನಿಗೆ ಅನೇಕ ದನಕುರಿಗಳ ಮಂದೆಗಳೂ ಪ್ರಾಣಿಗಳ ಹಿಂಡೂಗಳೂ ಇದ್ದವು. ಇದಲ್ಲದೆ ಅವನಿಗೆ ಅನೇಕ ಸೇವಕರು ಇದ್ದರು. ಇದನ್ನು ಕಂಡು ಫಿಲಿಷ್ಟಿಯರು ಅವನ ಬಗ್ಗೆ ಅಸೂಯೆಪಡುತ್ತಿದ್ದರು.
14 possuía ovelhas e bois e grande número de servos, de maneira que os filisteus lhe tinham inveja.
15 ಆದ್ದರಿಂದ ಅನೇಕ ವರ್ಷಗಳ ಹಿಂದೆ ಅಬ್ರಹಾಮ ಮತ್ತು ಅವನ ಸೇವಕರು ತೋಡಿದ್ದ ಬಾವಿಗಳಿಗೆ ಫಿಲಿಷ್ಟಿಯರು ಮಣ್ಣುಹಾಕಿ ಮುಚ್ಚಿದ್ದರು.
15 E, por isso, lhe entulharam todos os poços que os servos de seu pai haviam cavado, nos dias de Abraão, enchendo-os de terra.
16 ಅಬೀಮೆಲೆಕನು ಇಸಾಕನಿಗೆ, “ನಮ್ಮ ದೇಶವನ್ನು ಬಿಟ್ಟುಹೋಗು. ನೀನು ನಮಗಿಂತಲೂ ತುಂಬ ಬಲಿಷ್ಠನಾದೆ” ಎಂದು ಹೇಳಿದನು.
16 Disse Abimeleque a Isaque: Aparta-te de nós, porque já és muito mais poderoso do que nós.
17 ಆದ್ದರಿಂದ ಇಸಾಕನು ಆ ಸ್ಥಳದಿಂದ ಹೊರಟು ಗೆರಾರಿನ ಚಿಕ್ಕಹೊಳೆಯ ಸಮೀಪದಲ್ಲಿ ಪಾಳೆಯ ಮಾಡಿಕೊಂಡನು. ಇಸಾಕನು ಅಲ್ಲಿ ಇಳಿದುಕೊಂಡು ವಾಸಿಸಿದನು.
17 Então, Isaque saiu dali e se acampou no vale de Gerar, onde habitou.
18 ಇದಕ್ಕೂ ಬಹುಕಾಲದ ಹಿಂದೆ, ಅಬ್ರಹಾಮನು ಅನೇಕ ಬಾವಿಗಳನ್ನು ತೋಡಿಸಿದ್ದನು. ಅಬ್ರಹಾಮನು ಸತ್ತುಹೋದ ಮೇಲೆ, ಫಿಲಿಷ್ಟಿಯರು ಆ ಬಾವಿಗಳಿಗೆ ಮಣ್ಣುಹಾಕಿ ಮುಚ್ಚಿದ್ದರು. ಇಸಾಕನು ಆ ಬಾವಿಗಳನ್ನು ಮತ್ತೆ ತೋಡಿಸಿ, ತನ್ನ ತಂದೆ ಕೊಟ್ಟಿದ್ದ ಹೆಸರುಗಳನ್ನೇ ಅವುಗಳಿಗೆ ಕೊಟ್ಟನು.
18 E tornou Isaque a abrir os poços que se cavaram nos dias de Abraão, seu pai (porque os filisteus os haviam entulhado depois da morte de Abraão), e lhes deu os mesmos nomes que já seu pai lhes havia posto.
19 ಇಸಾಕನ ಸೇವಕರು ಚಿಕ್ಕ ಹೊಳೆಯ ಸಮೀಪದಲ್ಲಿ ಒಂದು ಬಾವಿಯನ್ನು ತೋಡಿದರು. ಆ ಬಾವಿಯಲ್ಲಿ ನೀರಿನ ಸೆಲೆ ಸಿಕ್ಕಿತು.
19 Cavaram os servos de Isaque no vale e acharam um poço de água nascente.
20 ಆದರೆ ಗೆರಾರಿನ ಕಣಿವೆಯಲ್ಲಿ ಕುರಿಕಾಯುತ್ತಿದ್ದ ಜನರು ಇಸಾಕನ ಸೇವಕರೊಡನೆ ವಾದಮಾಡಿ, “ಈ ನೀರು ನಮ್ಮದು” ಎಂದು ಹೇಳಿದರು. ಆದ್ದರಿಂದ ಇಸಾಕನು ಆ ಬಾವಿಗೆ “ಏಸೆಕ್” ಎಂದು ಹೆಸರಿಟ್ಟನು.
20 Mas os pastores de Gerar contenderam com os pastores de Isaque, dizendo: Esta água é nossa. Por isso, chamou o poço de Eseque, porque contenderam com ele.
21 ಆಮೇಲೆ ಇಸಾಕನ ಸೇವಕರು ಮತ್ತೊಂದು ಬಾವಿಯನ್ನು ತೋಡಿದರು. ಅಲ್ಲಿಯ ಜನರೂ ಆ ಬಾವಿಗಾಗಿ ವಾದಮಾಡಿದರು. ಆದ್ದರಿಂದ ಇಸಾಕನು ಆ ಬಾವಿಗೆ “ಸಿಟ್ನಾ” ಎಂದು ಹೆಸರಿಟ್ಟನು.
21 Então, cavaram outro poço e também por causa desse contenderam. Por isso, recebeu o nome de Sitna.
22 ಇಸಾಕನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನು ತೋಡಿಸಿದನು. ಆ ಬಾವಿಯ ಕುರಿತು ವಾದಮಾಡಲು ಯಾರೂ ಬರಲಿಲ್ಲ. ಆದ್ದರಿಂದ ಇಸಾಕನು, “ಈಗ ಯೆಹೋವನು ನಮಗೋಸ್ಕರ ಒಂದು ಸ್ಥಳವನ್ನು ತೋರಿಸಿದ್ದಾನೆ. ನಾವು ಈ ಸ್ಥಳದಲ್ಲಿ ಅಭಿವೃದ್ಧಿಯಾಗೋಣ” ಎಂದು ಹೇಳಿ ಆ ಬಾವಿಗೆ “ರೆಹೋಬೋತ್” ಎಂದು ಹೆಸರಿಟ್ಟನು.
22 Partindo dali, cavou ainda outro poço; e, como por esse não contenderam, chamou-lhe Reobote e disse: Porque agora nos deu lugar o Senhor , e prosperaremos na terra.
23 ಇಸಾಕನು ಆ ಸ್ಥಳದಿಂದ ಬೇರ್ಷೆಬಕ್ಕೆ ಹೋದನು.
23 Dali subiu para Berseba.
24 ಆ ರಾತ್ರಿ ಯೆಹೋವನು ಇಸಾಕನಿಗೆ ಪ್ರತ್ಯಕ್ಷನಾಗಿ, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು. ಭಯಪಡಬೇಡ, ನಾನು ನಿನ್ನ ಸಂಗಡವಿದ್ದೇನೆ. ನಾನು ನಿನ್ನನ್ನು ಆಶೀರ್ವದಿಸುವೆನು. ನಾನು ನಿನ್ನ ಕುಟುಂಬವನ್ನು ಉನ್ನತ ಸ್ಥಿತಿಗೆ ತರುವೆನು. ನನ್ನ ಸೇವಕನಾದ ಅಬ್ರಹಾಮನಿಗಾಗಿಯೇ ಇದನ್ನು ಮಾಡುತ್ತೇನೆ” ಎಂದು ಹೇಳಿದನು.
24 Na mesma noite, lhe apareceu o Senhor e disse: Eu sou o Deus de Abraão, teu pai. Não temas, porque eu sou contigo; abençoar-te-ei e multiplicarei a tua descendência por amor de Abraão, meu servo.
25 ಆದ್ದರಿಂದ ಆ ಸ್ಥಳದಲ್ಲಿ ಇಸಾಕನು ಯಜ್ಞವೇದಿಕೆಯನ್ನು ಕಟ್ಟಿ ಯೆಹೋವನನ್ನು ಆರಾಧಿಸಿದನು. ಇಸಾಕನು ಆ ಸ್ಥಳದಲ್ಲಿ ಪಾಳೆಯಮಾಡಿಕೊಂಡನು; ಅವನ ಸೇವಕರು ಅಲ್ಲಿ ಒಂದು ಬಾವಿಯನ್ನು ತೋಡಿದರು.
25 Então, levantou ali um altar e, tendo invocado o nome do Senhor , armou a sua tenda; e os servos de Isaque abriram ali um poço.
26 ಅಬೀಮೆಲೆಕನು ಇಸಾಕನನ್ನು ಕಾಣಲು ಗೆರಾರಿನಿಂದ ಬಂದನು. ಅಬೀಮೆಲೆಕನು ತನ್ನ ಸಲಹೆಗಾರನಾದ ಅಹುಜ್ಜತನನ್ನು ಮತ್ತು ಸೇನಾಪತಿಯಾದ ಫೀಕೋಲನನ್ನು ತನ್ನೊಡನೆ ಕರೆದುಕೊಂಡು ಬಂದಿದ್ದನು.
26 De Gerar foram ter com ele Abimeleque e seu amigo Ausate e Ficol, comandante do seu exército.
27 ಇಸಾಕನು, “ನೀನು ನನ್ನನ್ನು ನೋಡಲು ಬಂದದ್ದೇಕೆ? ಮೊದಲು, ನೀನು ನನ್ನೊಡನೆ ಸ್ನೇಹದಿಂದ ಇರಲಿಲ್ಲ. ಅಲ್ಲದೆ ನಿನ್ನ ದೇಶವನ್ನು ಬಿಟ್ಟುಹೋಗುವಂತೆ ನೀನು ನನ್ನನ್ನು ಬಲವಂತ ಮಾಡಿದೆ” ಎಂದು ಹೇಳಿದನು.
27 Disse-lhes Isaque: Por que viestes a mim, pois me odiais e me expulsastes do vosso meio?
28 ಅವರು ಅವನಿಗೆ, “ನಿನ್ನ ಜೊತೆಯಲ್ಲಿ ಯೆಹೋವನು ಇದ್ದಾನೆಂಬುದು ಈಗ ನಮಗೆ ತಿಳಿಯಿತು. ನಾವು ಒಂದು ಒಪ್ಪಂದ ಮಾಡಿಕೊಳ್ಳಬೇಕೆಂಬುದು ನಮ್ಮ ಆಲೋಚನೆ. ನೀನು ನಮಗೆ ಒಂದು ಪ್ರಮಾಣ ಮಾಡಬೇಕಾಗಿದೆ.
28 Eles responderam: Vimos claramente que o Senhor é contigo; então, dissemos: Haja agora juramento entre nós e ti, e façamos aliança contigo.
29 ನಾವು ನಿನಗೆ ಕೇಡುಮಾಡಲಿಲ್ಲ. ಅದೇ ರೀತಿಯಲ್ಲಿ ಈಗ ನೀನೂ ನಮಗೆ ಕೇಡುಮಾಡುವುದಿಲ್ಲವೆಂದು ಪ್ರಮಾಣಮಾಡಬೇಕು. ನಾವು ನಿನ್ನನ್ನು ದೂರ ಕಳುಹಿಸಿದರೂ ಸಮಾಧಾನದಿಂದ ಕಳುಹಿಸಿಕೊಟ್ಟೆವು. ಯೆಹೋವನು ನಿನ್ನನ್ನು ಆಶೀರ್ವದಿಸಿದ್ದಾನೆ ಎಂಬುದು ಈಗ ಸ್ಪಷ್ಟವಾಗಿದೆ” ಎಂದು ಹೇಳಿದರು.
29 Jura que nos não farás mal, como também não te havemos tocado, e como te fizemos somente o bem, e te deixamos ir em paz. Tu és agora o abençoado do Senhor .
30 ಆದ್ದರಿಂದ ಇಸಾಕನು ಅವರಿಗಾಗಿ ಒಂದು ಔತಣವನ್ನು ಮಾಡಿಸಿದನು. ಅವರೆಲ್ಲರೂ ಸಮೃದ್ಧಿಯಾಗಿ ಊಟಮಾಡಿದರು.
30 Então, Isaque lhes deu um banquete, e comeram e beberam.
31 ಮರುದಿನ ಮುಂಜಾನೆ, ಅವರು ಒಬ್ಬರಿಗೊಬ್ಬರು ಪ್ರಮಾಣ ಮಾಡಿಕೊಂಡು, ಸಮಾಧಾನದಿಂದ ಹೊರಟುಹೋದರು.
31 Levantando-se de madrugada, juraram de parte a parte; Isaque os despediu, e eles se foram em paz.
32 ಆ ದಿನ, ಇಸಾಕನ ಸೇವಕರು ಬಂದು, ತಾವು ತೋಡಿದ್ದ ಬಾವಿಯ ಬಗ್ಗೆ ಹೇಳುತ್ತಾ, “ಬಾವಿಯಲ್ಲಿ ನಮಗೆ ನೀರಿನ ಸೆಲೆ ಸಿಕ್ಕಿತು” ಎಂದು ಹೇಳಿದರು.
32 Nesse mesmo dia, vieram os servos de Isaque e, dando-lhe notícia do poço que tinham cavado, lhe disseram: Achamos água.
33 ಆದ್ದರಿಂದ ಇಸಾಕನು ಆ ಬಾವಿಗೆ ಷಿಬಾ ಎಂದು ಹೆಸರಿಟ್ಟನು. ಇಂದಿಗೂ ಆ ನಗರಕ್ಕೆ ಬೇರ್ಷೆಬ ಎಂದು ಕರೆಯುತ್ತಾರೆ.
33 Ao poço, chamou-lhe Seba; por isso, Berseba é o nome daquela cidade até ao dia de hoje.
34 ಏಸಾವನಿಗೆ ನಲವತ್ತು ವರ್ಷಗಳಾಗಿದ್ದಾಗ ಅವನು ಹಿತ್ತಿಯರ ಇಬ್ಬರು ಸ್ತ್ರೀಯರನ್ನು ಮದುವೆ ಮಾಡಿಕೊಂಡನು. ಒಬ್ಬಳು ಬೇರಿಯನ ಮಗಳಾದ ಯೆಹೂದೀತಳು, ಮತ್ತೊಬ್ಬಳು ಏಲೋನನ ಮಗಳಾದ ಬಾಸೆಮತಳು.
34 Tendo Esaú quarenta anos de idade, tomou por esposa a Judite, filha de Beeri, heteu, e a Basemate, filha de Elom, heteu.
35 ಈ ಮದುವೆಗಳಿಂದ ಇಸಾಕ ಮತ್ತು ರೆಬೆಕ್ಕಳಿಗೆ ತುಂಬ ದುಃಖವಾಯಿತು.
35 Ambas se tornaram amargura de espírito para Isaque e para Rebeca.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Gênesis 26, comparar traduções ou montar um estudo — tudo direto pelo WhatsApp.