Gênesis 27

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARA

Sair da comparação
ARA Almeida Revista e Atualizada 1993
1 ಇಸಾಕನು ಮುದುಕನಾದಾಗ ಅವನಿಗೆ ಕಣ್ಣುಗಳು ಸ್ಪಷ್ಟವಾಗಿ ಕಾಣುತ್ತಿರಲಿಲ್ಲ. ಒಂದು ದಿನ ಅವನು ತನ್ನ ಹಿರಿಮಗನಾದ ಏಸಾವನನ್ನು ತನ್ನ ಬಳಿಗೆ ಕರೆದು ಅವನಿಗೆ, “ಮಗನೇ” ಅಂದನು.
1 Tendo-se envelhecido Isaque e já não podendo ver, porque os olhos se lhe enfraqueciam, chamou a Esaú, seu filho mais velho, e lhe disse: Meu filho! Respondeu ele: Aqui estou!
2 ಇಸಾಕನು ಅವನಿಗೆ, “ನನಗೆ ವಯಸ್ಸಾಯಿತು. ನಾನು ಬಹುಬೇಗನೆ ಸಾಯಬಹುದು.
2 Disse-lhe o pai: Estou velho e não sei o dia da minha morte.
3 ಆದ್ದರಿಂದ ನಿನ್ನ ಬಿಲ್ಲುಬಾಣಗಳನ್ನು ತೆಗೆದುಕೊಂಡು ಬೇಟೆಗೆ ಹೋಗು. ನನಗೋಸ್ಕರ ಒಂದು ಪ್ರಾಣಿಯನ್ನು ಬೇಟೆಯಾಡಿಕೊಂಡು ಬಂದು
3 Agora, pois, toma as tuas armas, a tua aljava e o teu arco, sai ao campo, e apanha para mim alguma caça,
4 ನನಗೆ ಇಷ್ಟವಾದ ಅಡಿಗೆಯನ್ನು ತಯಾರಿಸಿ ತೆಗೆದುಕೊಂಡು ಬಾ. ನಾನು ಸಾಯುವ ಮೊದಲೇ ನಿನ್ನನ್ನು ಆಶೀರ್ವದಿಸುವೆನು” ಎಂದು ಹೇಳಿದನು.
4 e faze-me uma comida saborosa, como eu aprecio, e traze-ma, para que eu coma e te abençoe antes que eu morra.
5 ಆದ್ದರಿಂದ ಏಸಾವನು ಬೇಟೆಗಾಗಿ ಹೋದನು.
5 Rebeca esteve escutando enquanto Isaque falava com Esaú, seu filho. E foi-se Esaú ao campo para apanhar a caça e trazê-la.
6 ರೆಬೆಕ್ಕಳು ತನ್ನ ಮಗನಾದ ಯಾಕೋಬನಿಗೆ, “ಕೇಳು, ನಿನ್ನ ತಂದೆಯು ನಿನ್ನ ಅಣ್ಣನಾದ ಏಸಾವನೊಡನೆ ಮಾತಾಡುತ್ತಿರುವುದನ್ನು ನಾನು ಕೇಳಿಸಿಕೊಂಡೆ.
6 Então, disse Rebeca a Jacó, seu filho: Ouvi teu pai falar com Esaú, teu irmão, assim:
7 ನಿನ್ನ ತಂದೆ ಅವನಿಗೆ, ‘ನನಗೋಸ್ಕರ ಒಂದು ಪ್ರಾಣಿಯನ್ನು ಬೇಟೆಯಾಡಿಕೊಂಡು ಬಂದು ನನಗೆ ಇಷ್ಟವಾದ ಅಡಿಗೆಯನ್ನು ತಯಾರಿಸಿ ತೆಗೆದುಕೊಂಡು ಬಾ. ನಾನು ಸಾಯುವ ಮೊದಲೇ ನಿನ್ನನ್ನು ಆಶೀರ್ವದಿಸುವೆನು’ ಎಂದು ಹೇಳಿದನು.
7 Traze caça e faze-me uma comida saborosa, para que eu coma e te abençoe diante do Senhor , antes que eu morra.
8 ಆದ್ದರಿಂದ ಮಗನೇ, ನನ್ನ ಮಾತನ್ನು ಕೇಳು ಮತ್ತು ನಾನು ಹೇಳಿದ್ದನ್ನು ಮಾಡು.
8 Agora, pois, meu filho, atende às minhas palavras com que te ordeno.
9 ನಮ್ಮ ಆಡುಗಳ ಬಳಿಗೆ ಹೋಗಿ ಎರಡು ಆಡುಮರಿಗಳನ್ನು ತೆಗೆದುಕೊಂಡು ಬಾ. ನಿಮ್ಮ ತಂದೆಗೆ ಇಷ್ಟವಾದ ಅಡಿಗೆಯನ್ನು ನಾನು ಅವುಗಳ ಮಾಂಸದಿಂದ ಸಿದ್ಧಪಡಿಸುವೆ.
9 Vai ao rebanho e traze-me dois bons cabritos; deles farei uma saborosa comida para teu pai, como ele aprecia;
10 ನೀನು ಆ ಅಡಿಗೆಯನ್ನು ನಿನ್ನ ತಂದೆಗೆ ತೆಗೆದುಕೊಂಡು ಹೋಗು. ಆಗ ಅವನು ತಾನು ಸಾಯುವ ಮೊದಲೇ ನಿನ್ನನ್ನು ಆಶೀರ್ವದಿಸುವನು” ಅಂದಳು.
10 levá-la-ás a teu pai, para que a coma e te abençoe, antes que morra.
11 ಅದಕ್ಕೆ ಯಾಕೋಬನು ತನ್ನ ತಾಯಿಯಾದ ರೆಬೆಕ್ಕಳಿಗೆ, “ನನ್ನ ಅಣ್ಣನಾದ ಏಸಾವನಿಗೆ ಮೈತುಂಬ ರೋಮಗಳಿವೆ, ಆದರೆ ನನಗೆ ರೋಮಗಳಿಲ್ಲ.
11 Disse Jacó a Rebeca, sua mãe: Esaú, meu irmão, é homem cabeludo, e eu, homem liso.
12 ನನ್ನ ತಂದೆ ನನ್ನನ್ನು ಮುಟ್ಟಿದರೆ, ನಾನು ಏಸಾವನಲ್ಲವೆಂದು ತಿಳಿದುಕೊಳ್ಳುವನು. ಆಗ ಅವನು ನನ್ನನ್ನು ಆಶೀರ್ವದಿಸುವುದಿಲ್ಲ. ನಾನು ಅವನನ್ನು ಮೋಸಗೊಳಿಸಲು ಪ್ರಯತ್ನಿಸಿದ್ದರಿಂದ ಅವನು ನನ್ನನ್ನು ಶಪಿಸುವನು” ಎಂದು ಹೇಳಿದನು.
12 Dar-se-á o caso de meu pai me apalpar, e passarei a seus olhos por zombador; assim, trarei sobre mim maldição e não bênção.
13 ಅದಕ್ಕೆ ರೆಬೆಕ್ಕಳು ಅವನಿಗೆ, “ಅವನು ನಿನಗೆ ಶಾಪಕೊಟ್ಟರೆ, ಆ ಶಾಪವು ನನಗಾಗಲಿ. ನಾನು ಹೇಳಿದಂತೆ ಮಾಡು. ನನಗೋಸ್ಕರ ಆಡುಗಳನ್ನು ತೆಗೆದುಕೊಂಡು ಬಾ” ಎಂದು ಹೇಳಿದಳು.
13 Respondeu-lhe a mãe: Caia sobre mim essa maldição, meu filho; atende somente o que eu te digo, vai e traze-mos.
14 ಆದ್ದರಿಂದ ಯಾಕೋಬನು ಹೋಗಿ ಎರಡು ಆಡುಗಳನ್ನು ತೆಗೆದುಕೊಂಡು ಬಂದನು. ಇಸಾಕನಿಗೆ ಇಷ್ಟವಾದ ರುಚಿಕರವಾದ ಪದಾರ್ಥಗಳನ್ನು ಆಕೆ ಅವುಗಳ ಮಾಂಸದಿಂದ ತಯಾರಿಸಿದಳು.
14 Ele foi, tomou-os e os trouxe a sua mãe, que fez uma saborosa comida, como o pai dele apreciava.
15 ಅನಂತರ ರೆಬೆಕ್ಕಳು ತನ್ನ ಹಿರಿಯ ಮಗನಾದ ಏಸಾವನಿಗೆ ಇಷ್ಟವಾದ ಉಡುಪನ್ನು ತೆಗೆದುಕೊಂಡಳು. ರೆಬೆಕ್ಕಳು ಆ ಉಡುಪನ್ನು ತನ್ನ ಕಿರಿಮಗನಾದ ಯಾಕೋಬನಿಗೆ ತೊಡಿಸಿದಳು.
15 Depois, tomou Rebeca a melhor roupa de Esaú, seu filho mais velho, roupa que tinha consigo em casa, e vestiu a Jacó, seu filho mais novo.
16 ಆಡುಗಳ ಚರ್ಮವನ್ನು ಯಾಕೋಬನ ಕೈಗಳಿಗೂ ಕೊರಳಿಗೂ ಸುತ್ತಿದಳು.
16 Com a pele dos cabritos cobriu-lhe as mãos e a lisura do pescoço.
17 ಅನಂತರ ಆಕೆ ತಾನು ಸಿದ್ಧಪಡಿಸಿದ್ದ ಅಡಿಗೆಯನ್ನು ಯಾಕೋಬನಿಗೆ ಕೊಟ್ಟಳು.
17 Então, entregou a Jacó, seu filho, a comida saborosa e o pão que havia preparado.
18 ಯಾಕೋಬನು ತನ್ನ ತಂದೆಯ ಬಳಿಗೆ ಹೋಗಿ, “ಅಪ್ಪಾ” ಎಂದು ಕರೆದನು.
18 Jacó foi a seu pai e disse: Meu pai! Ele respondeu: Fala! Quem és tu, meu filho?
19 ಯಾಕೋಬನು ತನ್ನ ತಂದೆಗೆ, “ನಾನು ಏಸಾವ, ನಿನ್ನ ಮೊದಲನೆ ಮಗ. ನೀನು ಹೇಳಿದಂತೆ ನಾನು ಮಾಡಿಕೊಂಡು ಬಂದಿದ್ದೇನೆ. ನಾನು ನಿನಗೋಸ್ಕರ ಬೇಟೆಯಾಡಿದ ಪ್ರಾಣಿಯ ಮಾಂಸವನ್ನು ಕುಳಿತುಕೊಂಡು ತಿನ್ನು. ಅನಂತರ ನೀನು ನನ್ನನ್ನು ಆಶೀರ್ವದಿಸಬಹುದು” ಎಂದು ಹೇಳಿದನು.
19 Respondeu Jacó a seu pai: Sou Esaú, teu primogênito; fiz o que me ordenaste. Levanta-te, pois, assenta-te e come da minha caça, para que me abençoes.
20 ಆದರೆ ಇಸಾಕನು ತನ್ನ ಮಗನಿಗೆ, “ನೀನು ಇಷ್ಟು ಬೇಗನೆ ಬೇಟೆಯಾಡಿಕೊಂಡು ಬಂದೆಯಾ?” ಎಂದು ಕೇಳಿದನು.
20 Disse Isaque a seu filho: Como é isso que a pudeste achar tão depressa, meu filho? Ele respondeu: Porque o Senhor , teu Deus, a mandou ao meu encontro.
21 ಬಳಿಕ ಇಸಾಕನು ಯಾಕೋಬನಿಗೆ, “ನನ್ನ ಬಳಿಗೆ ಬಾ, ನನ್ನ ಮಗನನ್ನು ನಾನು ಮುಟ್ಟಿ ತಿಳಿದುಕೊಳ್ಳಬಲ್ಲೆ. ನಾನು ನಿನ್ನನ್ನು ಮುಟ್ಟಿದರೆ, ನೀನು ನಿಜವಾಗಿಯೂ ನನ್ನ ಮಗನಾದ ಏಸಾವನೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬಲ್ಲೆ” ಎಂದು ಹೇಳಿದನು.
21 Então, disse Isaque a Jacó: Chega-te aqui, para que eu te apalpe, meu filho, e veja se és meu filho Esaú ou não.
22 ಆದ್ದರಿಂದ ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಗೆ ಹೋದನು. ಇಸಾಕನು ಅವನನ್ನು ಮುಟ್ಟಿ, “ನಿನ್ನ ಸ್ವರ ಯಾಕೋಬನ ಸ್ವರವಿದ್ದಂತಿದೆ. ಆದರೆ ನಿನ್ನ ಕೈಗಳು ಏಸಾವನ ಕೈಗಳಂತೆ ರೋಮದಿಂದ ಕೂಡಿವೆ” ಅಂದನು.
22 Jacó chegou-se a Isaque, seu pai, que o apalpou e disse: A voz é de Jacó, porém as mãos são de Esaú.
23 ಅವನು ಯಾಕೋಬನೆಂಬುದು ಇಸಾಕನಿಗೆ ತಿಳಿಯಲಿಲ್ಲ. ಯಾಕೆಂದರೆ ಅವನ ಕೈಗಳು ಏಸಾವನ ಕೈಗಳಂತೆ ರೋಮದಿಂದ ಕೂಡಿದ್ದವು. ಆದ್ದರಿಂದ ಇಸಾಕನು ಯಾಕೋಬನನ್ನು ಆಶೀರ್ವದಿಸಿದನು.
23 E não o reconheceu, porque as mãos, com efeito, estavam peludas como as de seu irmão Esaú. E o abençoou.
24 ಇಸಾಕನು ಅವನಿಗೆ, “ನೀನು ನಿಜವಾಗಿಯೂ ನನ್ನ ಮಗನಾದ ಏಸಾವನೋ?” ಎಂದು ಕೇಳಿದನು.
24 E lhe disse: És meu filho Esaú mesmo? Ele respondeu: Eu sou.
25 ಆಗ ಇಸಾಕನು, “ಊಟವನ್ನು ತೆಗೆದುಕೊಂಡು ಬಾ. ನಾನು ಊಟಮಾಡಿ ನಿನ್ನನ್ನು ಆಶೀರ್ವದಿಸುವೆನು” ಎಂದು ಹೇಳಿದನು. ಅಂತೆಯೇ ಯಾಕೋಬನು ಊಟವನ್ನು ತಂದು ಕೊಟ್ಟಾಗ ಊಟಮಾಡಿದನು; ದ್ರಾಕ್ಷಾರಸವನ್ನು ಕುಡಿದನು.
25 Então, disse: Chega isso para perto de mim, para que eu coma da caça de meu filho; para que eu te abençoe. Chegou-lho, e ele comeu; trouxe-lhe também vinho, e ele bebeu.
26 ಬಳಿಕ ಇಸಾಕನು ಅವನಿಗೆ, “ಮಗನೇ, ನನ್ನ ಬಳಿಗೆ ಬಂದು ನನಗೆ ಮುದ್ದಿಡು” ಅಂದನು.
26 Então, lhe disse Isaque, seu pai: Chega-te e dá-me um beijo, meu filho.
27 ಅದರಂತೆಯೇ ಯಾಕೋಬನು ತಂದೆಯ ಬಳಿಗೆ ಹೋಗಿ ಅವನಿಗೆ ಮುದ್ದಿಟ್ಟನು. ಇಸಾಕನು ಏಸಾವನ ಉಡುಪಿನ ವಾಸನೆಯನ್ನು ನೋಡಿ ಅವನನ್ನು ಹೀಗೆ ಆಶೀರ್ವದಿಸಿದನು:
27 Ele se chegou e o beijou. Então, o pai aspirou o cheiro da roupa dele, e o abençoou, e disse: Eis que o cheiro do meu filho é como o cheiro do campo, que o
28 ಯೆಹೋವನು ನಿನಗೆ ಬೇಕಾದಷ್ಟು ಮಳೆಯನ್ನು ಕೊಡಲಿ;
28 Deus te dê do orvalho do céu, e da exuberância da terra, e fartura de trigo e de mosto.
29 ಎಲ್ಲಾ ಜನರು ನಿನ್ನ ಸೇವೆಮಾಡಲಿ;
29 Sirvam-te povos, e nações te reverenciem; sê senhor de teus irmãos, e os filhos de tua mãe se encurvem a ti; maldito seja o que te amaldiçoar, e abençoado o que te abençoar.
30 ಇಸಾಕನು ಯಾಕೋಬನನ್ನು ಆಶೀರ್ವದಿಸಿದ ಬಳಿಕ ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಯಿಂದ ಹೊರಟುಹೋಗುವಷ್ಟರಲ್ಲಿ ಏಸಾವನು ಬೇಟೆಯಿಂದ ಬಂದನು.
30 Mal acabara Isaque de abençoar a Jacó, tendo este saído da presença de Isaque, seu pai, chega Esaú, seu irmão, da sua caçada.
31 ಏಸಾವನು ಸಹ ತನ್ನ ತಂದೆಗೆ ಇಷ್ಟವಾದ ರೀತಿಯಲ್ಲಿ ವಿಶೇಷವಾದ ಆಹಾರವನ್ನು ಸಿದ್ಧಪಡಿಸಿ ತನ್ನ ತಂದೆಯ ಬಳಿಗೆ ತೆಗೆದುಕೊಂಡು ಬಂದನು. ಅವನು ತನ್ನ ತಂದೆಗೆ, “ಅಪ್ಪಾ ಎದ್ದೇಳು, ನಿನಗೋಸ್ಕರ ನಿನ್ನ ಮಗನು ಬೇಟೆಯಾಡಿದ ಪ್ರಾಣಿಯ ಮಾಂಸವನ್ನು ತಿನ್ನು, ನಂತರ ನೀನು ನನ್ನನ್ನು ಆಶೀರ್ವದಿಸಬಹುದು” ಎಂದು ಹೇಳಿದನು.
31 E fez também ele uma comida saborosa, a trouxe a seu pai e lhe disse: Levanta-te, meu pai, e come da caça de teu filho, para que me abençoes.
32 ಇಸಾಕನು ಅವನಿಗೆ, “ನೀನು ಯಾರು?” ಎಂದು ಕೇಳಿದನು.
32 Perguntou-lhe Isaque, seu pai: Quem és tu? Sou Esaú, teu filho, o teu primogênito, respondeu.
33 ಆಗ ಇಸಾಕನು ತುಂಬ ವ್ಯಸನಗೊಂಡು ಗಡಗಡನೆ ನಡುಗುತ್ತಾ ಅವನಿಗೆ, “ನೀನು ಬರುವುದಕ್ಕಿಂತ ಮೊದಲೇ ಅಡಿಗೆಯನ್ನು ಸಿದ್ಧಪಡಿಸಿ ನನಗೆ ತಂದುಕೊಟ್ಟವನು ಯಾರು? ನಾನು ಅದನ್ನೆಲ್ಲ ತಿಂದು ಅವನನ್ನು ಆಶೀರ್ವದಿಸಿದೆನು. ಈಗ ನನ್ನ ಆಶೀರ್ವಾದವನ್ನು ಹಿಂತೆಗೆದುಕೊಳ್ಳಲಾಗದು” ಎಂದು ಹೇಳಿದನು.
33 Então, estremeceu Isaque de violenta comoção e disse: Quem é, pois, aquele que apanhou a caça e ma trouxe? Eu comi de tudo, antes que viesses, e o abençoei, e ele será abençoado.
34 ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿ ತುಂಬ ಕೋಪಗೊಂಡನು; ವ್ಯಥೆಪಟ್ಟನು; ಗೋಳಾಡಿದನು. ಅವನು ತನ್ನ ತಂದೆಗೆ, “ಹಾಗಾದರೆ, ನನ್ನನ್ನೂ ಆಶೀರ್ವದಿಸಪ್ಪಾ” ಎಂದು ಹೇಳಿದನು.
34 Como ouvisse Esaú tais palavras de seu pai, bradou com profundo amargor e lhe disse: Abençoa-me também a mim, meu pai!
35 ಇಸಾಕನು, “ನಿನ್ನ ತಮ್ಮನು ನನ್ನನ್ನು ಮೋಸಗೊಳಿಸಿದನು; ಅವನು ಬಂದು ನಿನ್ನ ಆಶೀರ್ವಾದವನ್ನು ತೆಗೆದುಕೊಂಡನು” ಎಂದು ಹೇಳಿದನು.
35 Respondeu-lhe o pai: Veio teu irmão astuciosamente e tomou a tua bênção.
36 ಏಸಾವನು, “ಅವನ ಹೆಸರು ಯಾಕೋಬ (ಮೋಸಗಾರ). ಅದೇ ಅವನಿಗೆ ಸರಿಯಾದ ಹೆಸರು. ಅವನು ಎರಡು ಸಲ ನನಗೆ ಮೋಸಮಾಡಿದನು. ನನ್ನ ಚೊಚ್ಚಲತನದ ಹಕ್ಕನ್ನು ತೆಗೆದುಕೊಂಡನು. ಈಗ ನನ್ನ ಆಶೀರ್ವಾದವನ್ನೂ ತೆಗೆದುಕೊಂಡನು” ಎಂದು ಹೇಳಿದನು. ನಂತರ ಏಸಾವನು, “ನನಗೋಸ್ಕರ ಯಾವ ಆಶೀರ್ವಾದವೂ ಉಳಿದಿಲ್ಲವೆ?” ಎಂದು ಕೇಳಿದನು.
36 Disse Esaú: Não é com razão que se chama ele Jacó? Pois já duas vezes me enganou: tirou-me o direito de primogenitura e agora usurpa a bênção que era minha. Disse ainda: Não reservaste, pois, bênção nenhuma para mim?
37 ಇಸಾಕನು, “ಇಲ್ಲ, ತುಂಬ ತಡವಾಯಿತು. ನಿನ್ನ ಮೇಲೆ ಆಡಳಿತ ಮಾಡುವ ಅಧಿಕಾರವನ್ನು ನಾನು ಯಾಕೋಬನಿಗೆ ಕೊಟ್ಟಿದ್ದೇನೆ. ಅವನ ಸಹೋದರರೆಲ್ಲ ಅವನಿಗೆ ಸೇವಕರಾಗಿರುವರು ಎಂದು ನಾನು ಹೇಳಿದ್ದೇನೆ. ಅವನಿಗೆ ಬೇಕಾದಷ್ಟು ದವಸಧಾನ್ಯಗಳೂ ದ್ರಾಕ್ಷಾರಸವೂ ದೊರೆಯುವಂತೆ ಆಶೀರ್ವಾದ ಮಾಡಿದ್ದೇನೆ. ನಿನಗೆ ಕೊಡಲು ನನ್ನಲ್ಲಿ ಏನೂ ಉಳಿದಿಲ್ಲ ಮಗನೇ” ಎಂದು ಹೇಳಿದನು.
37 Então, respondeu Isaque a Esaú: Eis que o constituí em teu senhor, e todos os seus irmãos lhe dei por servos; de trigo e de mosto o apercebi; que me será dado fazer-te agora, meu filho?
38 ಆದರೆ ಏಸಾವನು ತನ್ನ ತಂದೆಯನ್ನು ಮತ್ತೆ ಬೇಡತೊಡಗಿದನು. “ಅಪ್ಪಾ ನನಗಾಗಿ ಒಂದಾದರೂ ಆಶೀರ್ವಾದವಿಲ್ಲವೇ? ಅಪ್ಪಾ, ನನ್ನನ್ನು ಸಹ ಆಶೀರ್ವದಿಸು” ಎಂದು ಏಸಾವನು ಅಳಲಾರಂಭಿಸಿದನು.
38 Disse Esaú a seu pai: Acaso, tens uma única bênção, meu pai? Abençoa-me, também a mim, meu pai. E, levantando Esaú a voz, chorou.
39 ಆಗ ಇಸಾಕನು ಅವನಿಗೆ ಹೀಗೆ ಹೇಳಿದನು:
39 Então, lhe respondeu Isaque, seu pai: Longe dos lugares férteis da terra será a tua habitação, e sem orvalho que cai do alto.
40 ನೀನು ಕತ್ತಿಯಿಂದಲೇ ಜೀವಿಸುವೆ.
40 Viverás da tua espada e servirás a teu irmão; quando, porém, te libertares, sacudirás o seu jugo da tua cerviz.
41 ಅಂದಿನಿಂದ ಏಸಾವನು ಯಾಕೋಬನನ್ನು ದ್ವೇಷಿಸಿದನು. ಏಸಾವನು ತನ್ನೊಳಗೆ, “ನನ್ನ ತಂದೆ ಬಹುಬೇಗನೆ ಸತ್ತುಹೋಗುವನು. ಆಗ ನಾನು ಅವನಿಗಾಗಿ ದುಃಖಿಸಿ ಆ ಬಳಿಕ ಯಾಕೋಬನನ್ನು ಕೊಲ್ಲುವೆನು” ಅಂದುಕೊಂಡನು.
41 Passou Esaú a odiar a Jacó por causa da bênção, com que seu pai o tinha abençoado; e disse consigo: Vêm próximos os dias de luto por meu pai; então, matarei a Jacó, meu irmão.
42 ಏಸಾವನು ಯಾಕೋಬನನ್ನು ಕೊಲ್ಲಬೇಕೆಂದಿರುವುದು ರೆಬೆಕ್ಕಳಿಗೆ ತಿಳಿಯಿತು. ಆಕೆ ಯಾಕೋಬನನ್ನು ಕರೆಸಿ ಅವನಿಗೆ, “ಕೇಳು, ನಿನ್ನ ಅಣ್ಣನಾದ ಏಸಾವನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ.
42 Chegaram aos ouvidos de Rebeca estas palavras de Esaú, seu filho mais velho; ela, pois, mandou chamar a Jacó, seu filho mais moço, e lhe disse: Eis que Esaú, teu irmão, se consola a teu respeito, resolvendo matar-te.
43 ಆದ್ದರಿಂದ ಮಗನೇ, ನಾನು ಹೇಳಿದಂತೆ ಮಾಡು. ನನ್ನ ಅಣ್ಣನಾದ ಲಾಬಾನನು ಹಾರಾನಿನಲ್ಲಿ ವಾಸವಾಗಿದ್ದಾನೆ. ಅವನ ಬಳಿಗೆ ಹೋಗಿ ಅಡಗಿಕೊ.
43 Agora, pois, meu filho, ouve o que te digo: retira-te para a casa de Labão, meu irmão, em Harã;
44 ನಿನ್ನ ಅಣ್ಣನ ಕೋಪ ತಣ್ಣಗಾಗುವವರೆಗೆ ನೀನು ಸ್ವಲ್ಪ ಕಾಲ ಅವನೊಂದಿಗಿರು.
44 fica com ele alguns dias, até que passe o furor de teu irmão,
45 ಸ್ವಲ್ಪ ಸಮಯದ ನಂತರ, ನೀನು ಮಾಡಿದ್ದನ್ನು ನಿನ್ನ ಅಣ್ಣನು ಮರೆತುಬಿಡುವನು. ಆಗ ನಿನ್ನನ್ನು ಅಲ್ಲಿಂದ ಕರೆದುಕೊಂಡು ಬರಲು ನಾನು ಒಬ್ಬ ಸೇವಕನನ್ನು ಅಲ್ಲಿಗೆ ಕಳುಹಿಸಿಕೊಡುವೆನು. ಒಂದೇ ದಿನದಲ್ಲಿ, ನನ್ನ ಇಬ್ಬರು ಗಂಡುಮಕ್ಕಳನ್ನು ಕಳೆದುಕೊಳ್ಳಲು ನನಗೆ ಇಷ್ಟವಿಲ್ಲ” ಎಂದು ಹೇಳಿದಳು.
45 e cesse o seu rancor contra ti, e se esqueça do que lhe fizeste. Então, providenciarei e te farei regressar de lá. Por que hei de eu perder os meus dois filhos num só dia?
46 ನಂತರ ರೆಬೆಕ್ಕಳು ಇಸಾಕನಿಗೆ, “ನಿನ್ನ ಮಗನಾದ ಏಸಾವನು ಹಿತ್ತಿಯರ ಸ್ತ್ರೀಯರನ್ನು ಮದುವೆ ಮಾಡಿಕೊಂಡಿದ್ದಾನೆ. ಆ ಸ್ತ್ರೀಯರಿಂದ ನನಗೆ ಸಾಕಾಗಿ ಹೋಗಿದೆ; ಯಾಕೆಂದರೆ ಅವರು ನಮ್ಮ ಜನರಲ್ಲ. ಯಾಕೋಬನು ಸಹ ಇಂಥ ಸ್ತ್ರೀಯರಲ್ಲಿ ಒಬ್ಬಳನ್ನು ಮದುವೆ ಮಾಡಿಕೊಂಡರೆ ನಾನು ಸಾಯುವುದೇ ಮೇಲು” ಎಂದು ಹೇಳಿದಳು.
46 Disse Rebeca a Isaque: Aborrecida estou da minha vida, por causa das filhas de Hete; se Jacó tomar esposa dentre as filhas de Hete, tais como estas, as filhas desta terra, de que me servirá a vida?

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Gênesis 27, comparar traduções ou montar um estudo — tudo direto pelo WhatsApp.