Gênesis 32
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ACF
1 ಯಾಕೋಬನು ಅಲ್ಲಿಂದ ಹೊರಟು ಪ್ರಯಾಣ ಮಾಡುತ್ತಿರುವಾಗ ದೇವದೂತರನ್ನು ನೋಡಿದನು.
1 Jacó também seguiu o seu caminho, e encontraram-no os anjos de Deus.
2 ಆದ್ದರಿಂದ ಅವನು, “ಇದು ದೇವರ ಪಾಳೆಯ” ಎಂದು ಹೇಳಿ “ಮಹನಯಿಮ್” ಎಂದು ಹೆಸರಿಟ್ಟನು.
2 E Jacó disse, quando os viu: Este é o exército de Deus. E chamou aquele lugar Maanaim.
3 ಯಾಕೋಬನ ಅಣ್ಣನಾದ ಏಸಾವನು ಸೇಯೀರ್ ಎಂಬ ಸ್ಥಳದಲ್ಲಿ ವಾಸವಾಗಿದ್ದನು. ಈ ಸ್ಥಳವು ಎದೋಮಿನ ಗುಡ್ಡಗಾಡು ಪ್ರದೇಶವಾಗಿತ್ತು. ಯಾಕೋಬನು ತನ್ನ ಸಂದೇಶಕರ ಮೂಲಕ
3 E enviou Jacó mensageiros adiante de si a Esaú, seu irmão, à terra de Seir, território de Edom.
4 ಏಸಾವನಿಗೆ ಈ ಸಂಗತಿಗಳನ್ನು ತಿಳಿಸಿದನು: “ನಿನ್ನ ಸೇವಕನಾದ ಯಾಕೋಬನು ಹೇಳುವುದೇನೆಂದರೆ, ‘ನಾನು ಕಳೆದ ವರ್ಷಗಳೆಲ್ಲಾ ಲಾಬಾನನೊಡನೆ ಜೀವಿಸಿದೆನು.
4 E ordenou-lhes, dizendo: Assim direis a meu senhor Esaú: Assim diz Jacó, teu servo: Como peregrino morei com Labão, e me detive lá até agora;
5 ನನಗೆ ಅನೇಕ ದನಗಳೂ, ಕತ್ತೆಗಳೂ, ಆಡುಕುರಿಗಳೂ ಮತ್ತು ಸೇವಕಸೇವಕಿಯರೂ ಇದ್ದಾರೆ. ಸ್ವಾಮೀ, ನೀವು ನಮ್ಮನ್ನು ಸ್ವೀಕರಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತಿದ್ದೇನೆ.’”
5 E tenho bois e jumentos, ovelhas, e servos e servas; e enviei para o anunciar a meu senhor, para que ache graça em teus olhos.
6 ಸಂದೇಶಕರು ಯಾಕೋಬನ ಬಳಿಗೆ ಹಿಂತಿರುಗಿ ಬಂದು, “ನಾವು ನಿನ್ನ ಅಣ್ಣನಾದ ಏಸಾವನ ಬಳಿಗೆ ಹೋದೆವು. ಅವನು ನಿನ್ನನ್ನು ಭೇಟಿಯಾಗಲು ಬರುತ್ತಿದ್ದಾನೆ. ಅವನೊಡನೆ ನಾನೂರು ಮಂದಿ ಗಂಡಸರಿದ್ದಾರೆ” ಎಂದು ಹೇಳಿದರು.
6 E os mensageiros voltaram a Jacó, dizendo: Fomos a teu irmão Esaú; e também ele vem para encontrar-te, e quatrocentos homens com ele.
7 ಯಾಕೋಬನಿಗೆ ಭಯವಾಯಿತು. ಅವನು ತನ್ನೊಡನೆ ಇದ್ದ ಜನರನ್ನು ಎರಡು ಗುಂಪುಗಳನ್ನಾಗಿ ವಿಂಗಡಿಸಿದನು. ಅವನು ಎಲ್ಲಾ ಆಡುಕುರಿಗಳನ್ನೂ ದನಕರುಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳನ್ನಾಗಿ ವಿಂಗಡಿಸಿದನು.
7 Então Jacó temeu muito e angustiou-se; e repartiu o povo que com ele estava, e as ovelhas, e as vacas, e os camelos, em dois bandos.
8 “ಒಂದುವೇಳೆ ಏಸಾವನು ಬಂದು ಒಂದು ಗುಂಪನ್ನು ನಾಶಗೊಳಿಸಿದರೆ, ಮತ್ತೊಂದು ಗುಂಪು ಓಡಿಹೋಗಿ ತಪ್ಪಿಸಿಕೊಳ್ಳಬಹುದು” ಎಂಬುದು ಅವನ ಆಲೋಚನೆಯಾಗಿತ್ತು.
8 Porque dizia: Se Esaú vier a um bando e o ferir, o outro bando escapará.
9 ಯಾಕೋಬನು, “ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರಾಗಿರುವ ಯೆಹೋವನೇ, ನನ್ನ ದೇಶಕ್ಕೆ ಮತ್ತು ನನ್ನ ಕುಟುಂಬಕ್ಕೆ ಹಿಂತಿರುಗಿ ಬರುವಂತೆ ನೀನು ಹೇಳಿದೆ. ನೀನು ನನಗೆ ಒಳ್ಳೆಯದನ್ನು ಮಾಡುವುದಾಗಿ ಹೇಳಿದೆ.
9 Disse mais Jacó: Deus de meu pai Abraão, e Deus de meu pai Isaque, o Senhor, que me disseste: Torna-te à tua terra, e a tua parentela, e far-te-ei bem;
10 ನೀನು ನನಗೆ ತುಂಬ ಕರುಣೆ ತೋರಿದೆ. ನೀನು ನನಗೆ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡಿದೆ. ಮೊದಲನೆ ಸಲ ನಾನು ಜೋರ್ಡನ್ ನದಿಯನ್ನು ದಾಟಿ ಪ್ರಯಾಣ ಮಾಡಿದಾಗ, ಕೇವಲ ನನ್ನ ಊರುಗೋಲೇ ಹೊರತು ಬೇರೇನೂ ನನಗಿರಲಿಲ್ಲ. ಆದರೆ ಈಗ ಎರಡು ಗುಂಪುಗಳಿಗೆ ಬೇಕಾದ ವಸ್ತುಗಳನ್ನು ನಾನು ಪಡೆದಿದ್ದೇನೆ.
10 Menor sou eu que todas as beneficências, e que toda a fidelidade que fizeste ao teu servo; porque com meu cajado passei este Jordão, e agora me tornei em dois bandos.
11 ಇಂತಿರಲು, ದಯವಿಟ್ಟು ನನ್ನ ಅಣ್ಣನಿಂದ ನನ್ನನ್ನು ಕಾಪಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತಿರುವೆ. ಏಸಾವನಿಂದ ನನ್ನನ್ನು ಕಾಪಾಡು. ಅವನು ಬಂದು ನಮ್ಮೆಲ್ಲರನ್ನೂ ತಾಯಂದಿರನ್ನೂ ಮಕ್ಕಳನ್ನೂ ಕೊಲ್ಲುವನೆಂಬ ಭಯ ನನಗಿದೆ.
11 Livra-me, peço-te, da mão de meu irmão, da mão de Esaú; porque eu o temo; porventura não venha, e me fira, e a mãe com os filhos.
12 ‘ನಾನು ನಿನಗೆ ಒಳ್ಳೆಯದನ್ನು ಮಾಡುವೆ. ನಾನು ನಿನ್ನ ಕುಟುಂಬವನ್ನು ಹೆಚ್ಚಿಸಿ ನಿನ್ನ ಮಕ್ಕಳನ್ನು ಸಮುದ್ರದ ಮರಳಿನಷ್ಟು ವೃದ್ಧಿಗೊಳಿಸುವೆನು. ಅವರು ಲೆಕ್ಕಿಸಲಾಗದಷ್ಟು ಅಸಂಖ್ಯಾತವಾಗಿರುವರು’ ಎಂದು ನೀನು ನನಗೆ ವಾಗ್ದಾನ ಮಾಡಿದಿಯಲ್ಲವೇ” ಎಂದು ಪ್ರಾರ್ಥಿಸಿದನು.
12 E tu o disseste: Certamente te farei bem, e farei a tua descendência como a areia do mar, que pela multidão não se pode contar.
13 ಯಾಕೋಬನು ಆ ರಾತ್ರಿ ಅಲ್ಲಿಯೇ ಉಳಿದುಕೊಂಡು ಏಸಾವನಿಗೆ ಉಡುಗೊರೆಯಾಗಿ ಕೊಡಲು ಕೆಲವು ವಸ್ತುಗಳನ್ನು ಸಿದ್ಧಗೊಳಿಸಿದನು.
13 E passou ali aquela noite; e tomou do que lhe veio à sua mão, um presente para seu irmão Esaú:
14 ಯಾಕೋಬನು ಇನ್ನೂರು ಮೇಕೆಗಳನ್ನು, ಇಪ್ಪತ್ತು ಹೋತಗಳನ್ನು, ಇನ್ನೂರು ಕುರಿಗಳನ್ನು ಮತ್ತು ಇಪ್ಪತ್ತು ಟಗರುಗಳನ್ನು ತೆಗೆದುಕೊಂಡನು.
14 Duzentas cabras e vinte bodes; duzentas ovelhas e vinte carneiros;
15 ಯಾಕೋಬನು ಮೂವತ್ತು ಒಂಟೆಗಳನ್ನು ಮತ್ತು ಅವುಗಳ ಮರಿಗಳನ್ನು ನಲವತ್ತು ಹಸುಗಳನ್ನು ಮತ್ತು ಹತ್ತು ಹೋರಿಗಳನ್ನು, ಇಪ್ಪತ್ತು ಹೆಣ್ಣು ಕತ್ತೆಗಳನ್ನು ಮತ್ತು ಹತ್ತು ಗಂಡು ಕತ್ತೆಗಳನ್ನು ತೆಗೆದುಕೊಂಡನು.
15 Trinta camelas de leite com suas crias, quarenta vacas e dez novilhos; vinte jumentas e dez jumentinhos;
16 ಯಾಕೋಬನು ಪಶುಗಳ ಪ್ರತಿಯೊಂದು ಮಂದೆಯನ್ನೂ ತನ್ನ ಸೇವಕರ ವಶಕ್ಕೆ ಕೊಟ್ಟನು. ಆಮೇಲೆ ಯಾಕೋಬನು ಸೇವಕರಿಗೆ, “ಪಶುಗಳ ಪ್ರತಿಯೊಂದು ಗುಂಪನ್ನು ವಿಂಗಡಿಸಿ ನನ್ನ ಮುಂದೆ ಹೋಗಿರಿ; ಅಲ್ಲದೆ ಪ್ರತಿಯೊಂದು ಮಂದೆಯ ನಡುವೆಯೂ ಸ್ವಲ್ಪ ಅಂತರವಿರಲಿ” ಎಂದು ಹೇಳಿದನು.
16 E deu-os na mão dos seus servos, cada rebanho à parte, e disse a seus servos: Passai adiante de mim e ponde espaço entre rebanho e rebanho.
17 ಯಾಕೋಬನು ಅವರಿಗೆ ಅವರವರ ಕರ್ತವ್ಯಗಳನ್ನು ತಿಳಿಸಿದನು. ಯಾಕೋಬನು ಪಶುಗಳ ಮೊದಲನೆ ಗುಂಪಿನ ಸೇವಕನಿಗೆ, “ನನ್ನ ಅಣ್ಣನಾದ ಏಸಾವನು ನಿನ್ನ ಬಳಿಗೆ ಬಂದು, ‘ಇವು ಯಾರ ಪಶುಗಳು? ನೀನು ಎಲ್ಲಿಗೆ ಹೋಗುತ್ತಿರುವೆ? ನೀನು ಯಾರ ಸೇವಕನು?’ ಎಂದು ಕೇಳುವನು.
17 E ordenou ao primeiro, dizendo: Quando Esaú, meu irmão, te encontrar, e te perguntar, dizendo: De quem és, e para onde vais, e de quem são estes diante de ti?
18 ಆಗ ನೀನು, ‘ಪಶುಗಳು ನಿನ್ನ ಸೇವಕನಾದ ಯಾಕೋಬನವು. ನನ್ನ ಒಡೆಯನಾದ ಏಸಾವನೇ, ಯಾಕೋಬನು ಇವುಗಳನ್ನು ನಿನಗೆ ಉಡುಗೊರೆಯಾಗಿ ಕಳುಹಿಸಿದ್ದಾನೆ. ಅಲ್ಲದೆ ಅವನು ಸಹ ನಮ್ಮ ಹಿಂದೆ ಬರುತ್ತಿದ್ದಾನೆ’ ಎಂದು ತಿಳಿಸಬೇಕು” ಎಂದು ಹೇಳಿದನು.
18 Então dirás: São de teu servo Jacó, presente que envia a meu senhor, a Esaú; e eis que ele mesmo vem também atrás de nós.
19 ಇದೇ ರೀತಿ ಮಾಡುವಂತೆ ಯಾಕೋಬನು ಎರಡನೆಯ ಸೇವಕನಿಗೆ, ಮೂರನೆಯ ಸೇವಕನಿಗೆ ಮತ್ತು ಉಳಿದೆಲ್ಲಾ ಸೇವಕರಿಗೆ ಆಜ್ಞಾಪಿಸಿದನು. ಅವನು ಅವರಿಗೆ, “ನೀವು ಏಸಾವನನ್ನು ಭೇಟಿಯಾದಾಗ ಇದೇ ರೀತಿ ಮಾಡಬೇಕು.
19 E ordenou também ao segundo, e ao terceiro, e a todos os que vinham atrás dos rebanhos, dizendo: Conforme a esta mesma palavra falareis a Esaú, quando o achardes.
20 ನೀವು ಅವನಿಗೆ, ‘ಇದು ನಿನಗೆ ಕಳುಹಿಸಿರುವ ಉಡುಗೊರೆ. ಅಲ್ಲದೆ ನಿನ್ನ ಸೇವಕನಾದ ಯಾಕೋಬನು ನಮ್ಮ ಹಿಂದೆ ಬರುತ್ತಿದ್ದಾನೆ’ ಎಂದು ಹೇಳಬೇಕು” ಎಂದು ತಿಳಿಸಿದನು.
20 E direis também: Eis que o teu servo Jacó vem atrás de nós. Porque dizia: Eu o aplacarei com o presente, que vai adiante de mim, e depois verei a sua face; porventura ele me aceitará.
21 ಯಾಕೋಬನು ಏಸಾವನಿಗೆ ಉಡುಗೊರೆಗಳನ್ನು ಕಳುಹಿಸಿ ಆ ರಾತ್ರಿ ಪಾಳೆಯದಲ್ಲಿ ಉಳಿದುಕೊಂಡನು.
21 Assim, passou o presente adiante dele; ele, porém, passou aquela noite no arraial.
22 ಆ ರಾತ್ರಿ, ಯಾಕೋಬನು ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ತನ್ನ ಇಬ್ಬರು ದಾಸಿಯರನ್ನೂ ತನ್ನ ಹನ್ನೊಂದು ಮಂದಿ ಗಂಡುಮಕ್ಕಳನ್ನೂ ಕರೆದುಕೊಂಡು ಹೊರಟು ಯಬ್ಬೋಕ್ ಹೊಳೆಯನ್ನು ದಾಟತಕ್ಕ ಸ್ಥಳಕ್ಕೆ ಬಂದನು.
22 E levantou-se aquela mesma noite, e tomou as suas duas mulheres, e as suas duas servas, e os seus onze filhos, e passou o vau de Jaboque.
23 ಯಾಕೋಬನು ತನ್ನ ಕುಟುಂಬದವರನ್ನೂ ತನ್ನಲ್ಲಿದ್ದ ಪ್ರತಿಯೊಂದನ್ನೂ ಆಚೆದಡಕ್ಕೆ ಕಳುಹಿಸಿದನು.
23 E tomou-os e fê-los passar o ribeiro; e fez passar tudo o que tinha.
24 ಎಲ್ಲರನ್ನೂ ಹೊಳೆ ದಾಟಿಸಿದ ಮೇಲೆ ಕೊನೆಯವನಾಗಿ ತಾನೊಬ್ಬನೇ ಹೊಳೆದಾಟಲು ನಿಂತಿದ್ದಾಗ ಒಬ್ಬ ಪುರುಷನು ಬಂದು ಸೂರ್ಯೋದಯದವರೆಗೂ ಹೋರಾಡಿದನು.
24 Jacó, porém, ficou só; e lutou com ele um homem, até que a alva subiu.
25 ಯಾಕೋಬನನ್ನು ಸೋಲಿಸಲು ತನಗೆ ಸಾಧ್ಯವಾಗದಿರುವುದನ್ನು ಗಮನಿಸಿದ ಆ ಪುರುಷನು ಯಾಕೋಬನ ತೊಡೆಯನ್ನು ಮುಟ್ಟಿದನು. ಆಗ ಯಾಕೋಬನ ಕೀಲು ತಪ್ಪಿತು.
25 E vendo este que não prevalecia contra ele, tocou a juntura de sua coxa, e se deslocou a juntura da coxa de Jacó, lutando com ele.
26 ಆ ಪುರುಷನು ಯಾಕೋಬನಿಗೆ, “ನನ್ನನ್ನು ಬಿಡು, ಸೂರ್ಯೋದಯವಾಗುತ್ತಿದೆ” ಎಂದು ಹೇಳಿದನು.
26 E disse: Deixa-me ir, porque já a alva subiu. Porém ele disse: Não te deixarei ir, se não me abençoares.
27 ಆ ಪುರುಷನು ಅವನಿಗೆ, “ನಿನ್ನ ಹೆಸರೇನು?” ಎಂದು ಕೇಳಿದನು.
27 E disse-lhe: Qual é o teu nome? E ele disse: Jacó.
28 ಆಗ ಆ ಪುರುಷನು, “ಇನ್ನು ಮೇಲೆ ನಿನ್ನ ಹೆಸರು ‘ಯಾಕೋಬ’ ಎಂದಿರುವುದಿಲ್ಲ. ಇಂದಿನಿಂದ ನಿನ್ನ ಹೆಸರು ‘ಇಸ್ರೇಲ್’ ಎಂದಾಗುವುದು. ನಾನೇ ನಿನಗೆ ಈ ಹೆಸರನ್ನು ಕೊಟ್ಟಿದ್ದೇನೆ; ಯಾಕೆಂದರೆ ನೀನು ದೇವರೊಡನೆಯೂ ಮನುಷ್ಯರೊಡನೆಯೂ ಹೋರಾಡಿದೆ; ಆದರೂ ನೀನು ಸೋಲಲಿಲ್ಲ” ಎಂದು ಹೇಳಿದನು.
28 Então disse: Não te chamarás mais Jacó, mas Israel; pois como príncipe lutaste com Deus e com os homens, e prevaleceste.
29 ಯಾಕೋಬನು ಆತನಿಗೆ, “ದಯವಿಟ್ಟು ನಿನ್ನ ಹೆಸರನ್ನು ತಿಳಿಸು” ಎಂದು ಕೇಳಿದನು.
29 E Jacó lhe perguntou, e disse: Dá-me, peço-te, a saber o teu nome. E disse: Por que perguntas pelo meu nome? E abençoou-o ali.
30 ಆದ್ದರಿಂದ ಯಾಕೋಬನು, “ಈ ಸ್ಥಳದಲ್ಲಿ ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ ನನ್ನ ಜೀವ ಉಳಿಯಿತು” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.
30 E chamou Jacó o nome daquele lugar Peniel, porque dizia: Tenho visto a Deus face a face, e a minha alma foi salva.
31 ಆಮೇಲೆ ಅವನು ಪೆನೀಯೇಲ್‌ನಿಂದ ಹೊರಟುಹೋಗುತ್ತಿರುವಾಗ ಸೂರ್ಯೋದಯವಾಯಿತು. ಯಾಕೋಬನು ತನ್ನ ಕೀಲುನೋವಿನಿಂದ ಕುಂಟುತ್ತಾ ಹೋದನು.
31 E saiu-lhe o sol, quando passou a Peniel; e manquejava da sua coxa.
32 ಈ ಮಾಂಸಖಂಡದಲ್ಲಿ ಯಾಕೋಬನಿಗೆ ನೋವು ಉಂಟಾಗಿದ್ದರಿಂದ ಇಂದಿಗೂ ಇಸ್ರೇಲರು ತೊಡೆಯ ಕೀಲಿನ ಮೇಲಿರುವ ಸೊಂಟದ ಮಾಂಸವನ್ನು ತಿನ್ನುವುದಿಲ್ಲ.
32 Por isso os filhos de Israel não comem o nervo encolhido, que está sobre a juntura da coxa, até o dia de hoje; porquanto tocara a juntura da coxa de Jacó no nervo encolhido.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Gênesis 32, comparar traduções ou montar um estudo — tudo direto pelo WhatsApp.