Gênesis 33

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs VC

Sair da comparação
VC Versão Católica
1 ಯಾಕೋಬನು ಕಣ್ಣೆತ್ತಿ ನೋಡಿದಾಗ ಏಸಾವನು ನಾನೂರು ಜನರೊಂದಿಗೆ ಬರುವುದನ್ನು ಕಂಡನು. ಯಾಕೋಬನು ತನ್ನ ಕುಟುಂಬವನ್ನು ನಾಲ್ಕು ಗುಂಪುಗಳಾಗಿ ವಿಂಗಡಿಸಿದನು. ಲೇಯಾ ಮತ್ತು ಅವಳ ಮಕ್ಕಳು ಒಂದು ಗುಂಪಿನಲ್ಲಿದ್ದರು. ರಾಹೇಲಳು ಮತ್ತು ಯೋಸೇಫನು ಇನ್ನೊಂದು ಗುಂಪಿನಲ್ಲಿದ್ದರು. ಇಬ್ಬರು ದಾಸಿಯರು ಮತ್ತು ಅವರ ಮಕ್ಕಳು ಎರಡು ಗುಂಪುಗಳಲ್ಲಿದ್ದರು.
1 Jacó, levantando os olhos, viu Esaú que avançava com quatrocentos homens. Repartiu então os filhos entre Lia, Raquel e as duas servas.
2 ಯಾಕೋಬನು ದಾಸಿಯರನ್ನು ಮತ್ತು ಅವರ ಮಕ್ಕಳನ್ನು ಮುಂಭಾಗದಲ್ಲಿಯೂ ಲೇಯಳನ್ನು ಮತ್ತು ಅವಳ ಮಕ್ಕಳನ್ನು ಅವರ ಹಿಂಭಾಗದಲ್ಲಿಯೂ, ರಾಹೇಲಳನ್ನು ಮತ್ತು ಯೋಸೇಫನನ್ನು ಕೊನೆಯ ಸ್ಥಳದಲ್ಲೂ ಇರಿಸಿದನು.
2 Colocou as servas com seus filhos na frente, depois Lia com os seus, e, por último Raquel com José.
3 ಯಾಕೋಬನು ತಾನೇ ಮುಂದಾಗಿ ಏಸಾವನ ಬಳಿಗೆ ನಡೆದುಹೋಗುತ್ತಾ ಏಳು ಸಲ ನೆಲದ ತನಕ ಬಗ್ಗಿ ನಮಸ್ಕರಿಸಿದನು.
3 E ele, passando adiante, prostrou-se até a terra sete vezes antes de se aproximar do seu irmão.
4 ಏಸಾವನು ಯಾಕೋಬನನ್ನು ಕಂಡಾಗ, ಓಡಿಬಂದು ತನ್ನ ಕೈಗಳಿಂದ ತಬ್ಬಿಕೊಂಡು ಅವನ ಕೊರಳಿನ ಮೇಲೆ ಮುದ್ದಿಟ್ಟನು; ಅವರಿಬ್ಬರೂ ಕಣ್ಣೀರು ಸುರಿಸಿದರು.
4 Mas Esaú correu-lhe ao encontro e beijou-o; ele atirou-se ao seu pescoço e beijou-o; e puseram-se a chorar.
5 ಏಸಾವನು ಸ್ತ್ರೀಯರನ್ನು ಮತ್ತು ಮಕ್ಕಳನ್ನು ಕಣ್ಣೆತ್ತಿ ನೋಡಿ, “ನಿನ್ನೊಡನೆ ಇರುವ ಈ ಜನರು ಯಾರು?” ಎಂದು ಕೇಳಿದನು.
5 Levantando os olhos, Esaú viu as mulheres e as crianças: "Quem são estes que tens contigo?", perguntou ele. "São, respondeu Jacó, os filhos que aprouve a Deus dar ao teu servo."
6 ಆಮೇಲೆ ಇಬ್ಬರು ದಾಸಿಯರು ಮತ್ತು ಅವರೊಂದಿಗೆ ಇದ್ದ ಮಕ್ಕಳು ಏಸಾವನ ಬಳಿಗೆ ಹೋಗಿ ಅವನಿಗೆ ತಲೆಬಾಗಿ ನಮಸ್ಕರಿಸಿದರು.
6 Aproximaram-se então as servas com seus filhos e prostraram-se.
7 ಆಮೇಲೆ ಲೇಯಾ ಮತ್ತು ಅವಳೊಂದಿಗೆ ಇದ್ದ ಮಕ್ಕಳು ಏಸಾವನ ಬಳಿಗೆ ಹೋಗಿ ಅವನಿಗೆ ತಲೆಬಾಗಿ ನಮಸ್ಕರಿಸಿದರು. ತರುವಾಯ, ರಾಹೇಲಳು ಮತ್ತು ಯೋಸೇಫನು ಏಸಾವನ ಬಳಿಗೆ ಹೋಗಿ ತಲೆಬಾಗಿ ನಮಸ್ಕರಿಸಿದರು.
7 Lia com seus filhos adiantaram-se por sua vez e prostraram-se, e, enfim, José e Raquel, que se prostraram também.
8 ಏಸಾವನು, “ನಾನು ಬರುತ್ತಿರುವಾಗ ಕಂಡ ಆ ಜನರೆಲ್ಲಾ ಯಾರು? ಆ ಪಶುಗಳೆಲ್ಲಾ ಯಾತಕ್ಕೆ?” ಎಂದು ಕೇಳಿದನು.
8 Esaú disse: "Que significa todo esse acampamento que encontrei?" "E, disse Jacó, para ganhar o favor de meu senhor."
9 ಆದರೆ ಏಸಾವನು, “ತಮ್ಮನೇ, ನೀನು ನನಗೆ ಉಡುಗೊರೆಗಳನ್ನು ಕೊಡಬೇಕಾಗಿಲ್ಲ, ನನಗೆ ಬೇಕಾದಷ್ಟಿದೆ” ಎಂದು ಹೇಳಿದನು.
9 Esaú disse-lhe: "Possuo muitos bens, meu irmão, guarda o que te pertence."
10 ಯಾಕೋಬನು, “ಇಲ್ಲ! ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ; ನೀನು ನನ್ನನ್ನು ನಿಜವಾಗಿಯೂ ಸ್ವೀಕರಿಸಿಕೊಳ್ಳುವುದಾದರೆ, ನಾನು ಕೊಡುವ ಉಡುಗೊರೆಗಳನ್ನು ದಯವಿಟ್ಟು ಸ್ವೀಕರಿಸಬೇಕು. ನಿನ್ನ ಮುಖವನ್ನು ಮತ್ತೆ ನೋಡಿ ನನಗೆ ತುಂಬ ಸಂತೋಷವಾಗಿದೆ. ದೇವರ ಮುಖವನ್ನೇ ನೋಡಿದಂತಾಯಿತು. ನೀನು ನನ್ನನ್ನು ಸ್ವೀಕರಿಸಿಕೊಂಡದ್ದರಿಂದ ನನಗೆ ತುಂಬ ಸಂತೋಷವಾಗಿದೆ.
10 "Oh, suplico-te, replicou Jacó, se ganhei teu favor, aceita este presente de minhas mãos; porque te contemplei como se contempla Deus, e me fizeste bom acolhimento.
11 ಆದ್ದರಿಂದ ನಾನು ಕೊಡುವ ಈ ಉಡುಗೊರೆಗಳನ್ನು ಸ್ವೀಕರಿಸಿಕೊಳ್ಳಬೇಕೆಂದು ಬೇಡಿಕೊಳ್ಳುತ್ತಿರುವೆ. ದೇವರು ನನಗೆ ತುಂಬ ಒಳ್ಳೆಯವನಾಗಿದ್ದನು. ನನಗೆ ಬೇಕಾದದ್ದಕ್ಕಿಂತಲೂ ಹೆಚ್ಚಾಗಿ ನನ್ನಲ್ಲಿದೆ” ಎಂದು ಹೇಳಿದನು. ಹೀಗೆ ಯಾಕೋಬನು ಉಡುಗೊರೆಗಳನ್ನು ತೆಗೆದುಕೊಳ್ಳುವಂತೆ ಏಸಾವನನ್ನು ಬೇಡಿಕೊಂಡನು. ಆದ್ದರಿಂದ ಏಸಾವನು ಉಡುಗೊರೆಗಳನ್ನು ಸ್ವೀಕರಿಸಿದನು.
11 Aceita o presente que te ofereço; pois Deus cumulou-me de seus favores, e nada me falta." E tanto insistiu que Esaú aceitou.
12 ಆಮೇಲೆ ಏಸಾವನು, “ಈಗ ನೀನು ನಿನ್ನ ಪ್ರಯಾಣವನ್ನು ಮುಂದುವರಿಸಬಹುದು. ನಾನು ನಿನ್ನ ಜೊತೆಯಲ್ಲಿ ಬರುತ್ತೇನೆ” ಎಂದು ಹೇಳಿದನು.
12 Esaú disse: "Partamos, ponhamo-nos a caminho; eu te precederei."
13 ಆದರೆ ಯಾಕೋಬನು ಅವನಿಗೆ, “ನನ್ನ ಮಕ್ಕಳು ಬಲಹೀನರೆಂದು ನಿನಗೆ ಗೊತ್ತಿದೆ. ನಾನು ನನ್ನ ದನಕುರಿಗಳನ್ನೂ ಅವುಗಳ ಮರಿಗಳನ್ನೂ ಎಚ್ಚರಿಕೆಯಿಂದ ನೋಡಿಕೊಳ್ಳಬೇಕು. ಒಂದೇ ದಿನದಲ್ಲಿ ಬಹುದೂರದವರೆಗೆ ಎಡಬಿಡದೆ ನಡೆಸಿಕೊಂಡು ಹೋದರೆ, ಎಲ್ಲಾ ಪಶುಗಳು ಸತ್ತುಹೋಗುತ್ತವೆ.
13 Jacó disse-lhe: "Tu vês, meu senhor, que os meninos são delicados; e tenho de cuidar das ovelhas e vacas que amamentam; se os fizer caminhar ainda um só dia, morrerá todo o rebanho.
14 ಆದ್ದರಿಂದ ನೀನು ಮುಂದಾಗಿ ಹೋಗು. ನಾನು ನಿನ್ನನ್ನು ನಿಧಾನವಾಗಿ ಹಿಂಬಾಲಿಸುವೆನು. ದನಕುರಿಗಳು ಮತ್ತು ಇತರ ಪಶುಗಳು ಸುರಕ್ಷಿತವಾಗಿರುವಂತೆಯೂ ನನ್ನ ಮಕ್ಕಳು ತುಂಬ ಆಯಾಸಗೊಳ್ಳದಂತೆಯೂ ನಾನು ಸಾಕಷ್ಟು ನಿಧಾನವಾಗಿ ಬಂದು ನಿನ್ನನ್ನು ಸೇಯೀರ್‌ನಲ್ಲಿ ಭೇಟಿಯಾಗುವೆನು” ಎಂದು ಹೇಳಿದನು.
14 Que o meu senhor vá, pois, adiante de seu servo; eu seguirei devagar, ao passo do rebanho que vai adiante de mim, e ao passo dos meninos, até que chegue à casa de meu senhor em Seir."
15 ಅದಕ್ಕೆ ಏಸಾವನು, “ಹಾಗಾದರೆ ನನ್ನ ಜನರಲ್ಲಿ ಕೆಲವರನ್ನು ನಿನ್ನ ಸಹಾಯಕ್ಕಾಗಿ ಬಿಟ್ಟುಹೋಗುವೆನು” ಎಂದು ಹೇಳಿದನು.
15 "Permita-me ao menos, disse-lhe Esaú, deixar-te uma parte de meus homens." "Não é necessário, disse Jacó; basta-me ter achado graça aos olhos do meu senhor!"
16 ಆದ್ದರಿಂದ ಆ ದಿನ ಏಸಾವನು ಸೇಯೀರಿಗೆ ಮರಳಿ ಪ್ರಯಾಣ ಮಾಡಿದನು.
16 No mesmo dia, Esaú retomou o caminho de Seir.
17 ಆದರೆ ಯಾಕೋಬನು ಸುಕ್ಕೋತಿಗೆ ಹೋದನು. ಆ ಸ್ಥಳದಲ್ಲಿ ಅವನು ತನಗಾಗಿ ಒಂದು ಮನೆಯನ್ನೂ ತನ್ನ ದನಕುರಿಗಳಿಗಾಗಿ ಚಿಕ್ಕ ಕೊಟ್ಟಿಗೆಗಳನ್ನೂ ಕಟ್ಟಿಸಿದನು. ಆದ್ದರಿಂದ ಆ ಸ್ಥಳಕ್ಕೆ “ಸುಕ್ಕೋತ್” ಎಂದು ಹೆಸರಾಯಿತು.
17 Jacó partiu para Socot, onde, tendo edificado uma casa, construiu também cabanas para o seu rebanho. Daí o nome de Socot dado a esse lugar.
18 ಆಮೇಲೆ ಯಾಕೋಬನು ಕಾನಾನ್ ದೇಶದ ಶೆಕೆಮ್ ಪಟ್ಟಣಕ್ಕೆ ಬಂದು ತನ್ನ ಪಾಳೆಯನ್ನು ಪಟ್ಟಣದ ಸಮೀಪದಲ್ಲಿದ್ದ ಒಂದು ಹೊಲದಲ್ಲಿ ಹಾಕಿಸಿದನು.
18 De volta de Padã-Arã, Jacó chegou sem contratempos à cidade de Siquém, na terra de Canaã. E acampou diante da cidade.
19 ಯಾಕೋಬನು ನೂರು ಬೆಳ್ಳಿನಾಣ್ಯಗಳನ್ನು ಕೊಟ್ಟು ಶೆಕೆಮನ ತಂದೆಯಾದ ಹಮೋರನ ಕುಟುಂಬದಿಂದ ಆ ಹೊಲವನ್ನು ಕೊಂಡುಕೊಂಡನು.
19 Comprou por cem moedas de prata aos filhos de Hemor, pai de Siquém, o pedaço de terra onde havia levantado sua tenda.
20 ದೇವರನ್ನು ಆರಾಧಿಸುವುದಕ್ಕಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಸಿ ಆ ಸ್ಥಳಕ್ಕೆ “ಇಸ್ರೇಲರ ದೇವರಾದ ಏಲೆಲೋಹೇ” ಎಂದು ಹೆಸರಿಟ್ಟನು.
20 Levantou aí um altar, ao qual chamou El-Deus de Israel.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Gênesis 33, comparar traduções ou montar um estudo — tudo direto pelo WhatsApp.