Gênesis 38

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARA

Sair da comparação
ARA Almeida Revista e Atualizada 1993
1 ಆ ಕಾಲದಲ್ಲಿ ಯೆಹೂದನು ತನ್ನ ಸಹೋದರರನ್ನು ಬಿಟ್ಟು ಹೀರಾ ಎಂಬುವನೊಂದಿಗೆ ವಾಸಿಸಲು ಹೋದನು. ಅವನು ಅದುಲ್ಲಾಮ್ ಊರಿನವನು.
1 Aconteceu, por esse tempo, que Judá se apartou de seus irmãos e se hospedou na casa de um adulamita, chamado Hira.
2 ಯೆಹೂದನು ಅಲ್ಲಿ ಒಬ್ಬ ಕಾನಾನ್ಯನ ಮಗಳನ್ನು ಕಂಡು ಆಕೆಯನ್ನು ಮದುವೆಮಾಡಿಕೊಂಡನು. ಆ ಹುಡುಗಿಯ ತಂದೆಯ ಹೆಸರು ಶೂಗ.
2 Ali viu Judá a filha de um cananeu, chamado Sua; ele a tomou por mulher e a possuiu.
3 ಆಕೆಯು ಒಬ್ಬ ಮಗನನ್ನು ಹೆತ್ತಳು. ಅವರು ಅವನಿಗೆ ಏರ ಎಂದು ಹೆಸರಿಟ್ಟರು.
3 E ela concebeu e deu à luz um filho, e o pai lhe chamou Er.
4 ಬಳಿಕ ಆಕೆ ಮತ್ತೊಬ್ಬ ಮಗನಿಗೆ ಜನನವಿತ್ತಳು. ಅವರು ಆ ಮಗನಿಗೆ ಓನಾನ ಎಂದು ಹೆಸರಿಟ್ಟರು.
4 Tornou a conceber e deu à luz um filho; a este deu a mãe o nome de Onã.
5 ಆಕೆಗೆ ಮೂರನೆಯ ಮಗನು ಹುಟ್ಟಿದಾಗ ಆಕೆ ಅದಕ್ಕೆ ಶೇಲಹ ಎಂದು ಹೆಸರಿಟ್ಟಳು. ಆ ಮಗು ಹುಟ್ಟಿದಾಗ ಯೆಹೂದನು ಕಜೀಬೂರಿನಲ್ಲಿ ವಾಸಿಸುತ್ತಿದ್ದನು.
5 Continuou ainda e deu à luz outro filho, cujo nome foi Selá; ela estava em Quezibe quando o teve.
6 ಯೆಹೂದನು ತನ್ನ ಮೊದಲನೆ ಮಗನಾದ ಏರನಿಗಾಗಿ ಒಬ್ಬ ಕನ್ನಿಕೆಯನ್ನು ಆಯ್ಕೆಮಾಡಿದನು. ಆಕೆಯ ಹೆಸರು ತಾಮಾರ.
6 Judá, pois, tomou esposa para Er, o seu primogênito; o nome dela era Tamar.
7 ಆದರೆ ಏರನು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ಯೆಹೋವನು ಅವನನ್ನು ಸಾಯಿಸಿದನು.
7 Er, porém, o primogênito de Judá, era perverso perante o Senhor , pelo que o Senhor o fez morrer.
8 ಆಗ ಯೆಹೂದನು ಏರನ ತಮ್ಮನಾದ ಓನಾನನಿಗೆ, “ಹೋಗು, ಸತ್ತುಹೋದ ನಿನ್ನ ಅಣ್ಣನ ಹೆಂಡತಿಗೆ ಗಂಡನಂತಿರು. ನಿನ್ನ ಮೂಲಕ ಆಕೆಯಲ್ಲಿ ಹುಟ್ಟುವ ಮಕ್ಕಳು ನಿನ್ನ ಅಣ್ಣನಾದ ಏರನ ಮಕ್ಕಳಾಗಿರಲಿ” ಎಂದು ಹೇಳಿದನು.
8 Então, disse Judá a Onã: Possui a mulher de teu irmão, cumpre o levirato e suscita descendência a teu irmão.
9 ತಾಮಾರಳಲ್ಲಿ ತನಗೆ ಹುಟ್ಟುವ ಮಕ್ಕಳು ತನ್ನವರಾಗುವುದಿಲ್ಲವೆಂದು ಅರಿತುಕೊಂಡು ಓನಾನನು ಆಕೆಯನ್ನು ಕೂಡಿದರೂ ವೀರ್ಯವನ್ನು ನೆಲದ ಪಾಲು ಮಾಡುತ್ತಿದ್ದನು.
9 Sabia, porém, Onã que o filho não seria tido por seu; e todas as vezes que possuía a mulher de seu irmão deixava o sêmen cair na terra, para não dar descendência a seu irmão.
10 ಇದು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿದ್ದರಿಂದ ಆತನು ಓನಾನನನ್ನು ಸಹ ಸಾಯಿಸಿದನು.
10 Isso, porém, que fazia, era mau perante o Senhor , pelo que também a este fez morrer.
11 ಆಗ ಯೆಹೂದನು ತನ್ನ ಸೊಸೆಯಾದ ತಾಮಾರಳಿಗೆ, “ನಿನ್ನ ತಂದೆಯ ಮನೆಗೆ ಹಿಂತಿರುಗಿ ಹೋಗಿ ಅಲ್ಲಿರು. ನನ್ನ ಮಗನಾದ ಶೇಲಹನು ದೊಡ್ಡವನಾಗುವ ತನಕ ಮದುವೆಯಾಗಬೇಡ” ಎಂದು ಹೇಳಿದನು. ಶೇಲಹನು ಸಹ ತನ್ನ ಅಣ್ಣಂದಿರಂತೆ ಸಾಯಬಹುದೆಂದು ಯೆಹೂದನು ಹೆದರಿಕೊಂಡಿದ್ದನು. ಆದ್ದರಿಂದ ತಾಮಾರಳು ತನ್ನ ತಂದೆಯ ಮನೆಗೆ ಹಿಂತಿರುಗಿ ಹೋದಳು.
11 Então, disse Judá a Tamar, sua nora: Permanece viúva em casa de teu pai, até que Selá, meu filho, venha a ser homem. Pois disse: Para que não morra também este, como seus irmãos. Assim, Tamar se foi, passando a residir em casa de seu pai.
12 ಆಮೇಲೆ ಬಹುದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ತೀರಿಕೊಂಡಳು. ಯೆಹೂದನು ತನ್ನ ದುಃಖದ ಸಮಯ ತೀರಿದ ಮೇಲೆ ಅದುಲ್ಲಾಮ್ಯದವನಾದ ತನ್ನ ಸ್ನೇಹಿತ ಹೀರಾನೊಂದಿಗೆ ತನ್ನ ಕುರಿಗಳ ಉಣ್ಣೆ ಕತ್ತರಿಸುವುದಕ್ಕಾಗಿ ತಿಮ್ನಾ ಊರಿಗೆ ಹೋದನು.
12 No correr do tempo morreu a filha de Sua, mulher de Judá; e, consolado Judá, subiu aos tosquiadores de suas ovelhas, em Timna, ele e seu amigo Hira, o adulamita.
13 ಮಾವನು ಉಣ್ಣೆ ಕತ್ತರಿಸುವುದಕ್ಕಾಗಿ ತಿಮ್ನಾ ಊರಿಗೆ ಹೋಗುತ್ತಿರುವುದು ತಾಮಾರಳಿಗೆ ತಿಳಿಯಿತು.
13 E o comunicaram a Tamar: Eis que o teu sogro sobe a Timna, para tosquiar as ovelhas.
14 ತಾಮಾರಳು ಯಾವಾಗಲೂ ವಿಧವೆಯ ವಸ್ತ್ರಗಳನ್ನು ಧರಿಸಿಕೊಂಡಿರುತ್ತಿದ್ದಳು. ಆದರೆ ಈಗ ಆಕೆ ಬೇರೆ ಬಟ್ಟೆಗಳನ್ನು ಧರಿಸಿಕೊಂಡು ತನ್ನ ಮುಖವನ್ನು ಮುಸುಕಿನಿಂದ ಮುಚ್ಚಿಕೊಂಡು ತಿಮ್ನಾ ಊರಿನ ಸಮೀಪದಲ್ಲಿರುವ ಏನಯಿಮೂರಿನ ದಾರಿಯಲ್ಲಿ ಕುಳಿತುಕೊಂಡಳು. ಯೆಹೂದನ ಚಿಕ್ಕಮಗನಾದ ಶೇಲಹನು ಬೆಳೆದು ದೊಡ್ಡವನಾಗಿರುವುದು ತಾಮಾರಳಿಗೆ ತಿಳಿದಿತ್ತು. ಆದರೆ ಆಕೆಗೆ ಅವನನ್ನು ಮದುವೆ ಮಾಡಿಸಲು ಯೆಹೂದನು ಆಲೋಚಿಸಿರಲಿಲ್ಲ.
14 Então, ela despiu as vestes de sua viuvez, e, cobrindo-se com um véu, se disfarçou, e se assentou à entrada de Enaim, no caminho de Timna; pois via que Selá já era homem, e ela não lhe fora dada por mulher.
15 ಯೆಹೂದನು ಆ ದಾರಿಯಲ್ಲಿ ಪ್ರಯಾಣ ಮಾಡುತ್ತಿರಲು ಆಕೆಯನ್ನು ಕಂಡು ವೇಶ್ಯೆಯೆಂದು ಭಾವಿಸಿದನು. (ಆಕೆಯು ವೇಶ್ಯೆಯಂತೆ ಮುಸುಕು ಹಾಕಿಕೊಂಡಿದ್ದಳು.)
15 Vendo-a Judá, teve-a por meretriz; pois ela havia coberto o rosto.
16 ಆದ್ದರಿಂದ ಯೆಹೂದನು ಆಕೆಯ ಬಳಿಗೆ ಹೋಗಿ, “ನಾನು ನಿನ್ನನ್ನು ಕೂಡಬಹುದೇ?” ಎಂದು ಕೇಳಿದನು. (ಆಕೆ ತನ್ನ ಸೊಸೆಯಾದ ತಾಮಾರಳೆಂದು ಯೆಹೂದನಿಗೆ ತಿಳಿದಿರಲಿಲ್ಲ.)
16 Então, se dirigiu a ela no caminho e lhe disse: Vem, deixa-me possuir-te; porque não sabia que era a sua nora. Ela respondeu: Que me darás para coabitares comigo?
17 ಯೆಹೂದನು, “ನನ್ನ ಮಂದೆಯಿಂದ ನಿನಗೆ ಒಂದು ಆಡುಮರಿಯನ್ನು ಕಳುಹಿಸಿಕೊಡುವೆ” ಎಂದು ಉತ್ತರಿಸಿದನು.
17 Ele respondeu: Enviar-te-ei um cabrito do rebanho. Perguntou ela: Dar-me-ás penhor até que o mandes?
18 ಯೆಹೂದನು, “ಏನು ಒತ್ತೆಯಿಡಲಿ?” ಎಂದು ಕೇಳಿದನು.
18 Respondeu ele: Que penhor te darei? Ela disse: O teu selo, o teu cordão e o cajado que seguras. Ele, pois, lhos deu e a possuiu; e ela concebeu dele.
19 ತಾಮಾರಳು ಮನೆಗೆ ಹೋಗಿ ಮುಸುಕನ್ನು ತೆಗೆದುಹಾಕಿ ಮತ್ತೆ ವಿಧವಾವಸ್ತ್ರಗಳನ್ನು ಧರಿಸಿಕೊಂಡಳು.
19 Levantou-se ela e se foi; tirou de sobre si o véu e tornou às vestes da sua viuvez.
20 ಯೆಹೂದನು ಮಾತು ಕೊಟ್ಟಿದ್ದಂತೆಯೇ ಒಂದು ಆಡುಮರಿಯನ್ನು ತನ್ನ ಸ್ನೇಹಿತನಾದ ಹೀರಾನ ಮೂಲಕ ಏನಯಿಮಿಗೆ ಕಳುಹಿಸಿ ಆ ಮುದ್ರೆಯನ್ನೂ ಊರುಗೋಲನ್ನೂ ತೆಗೆದುಕೊಂಡು ಬರುವಂತೆ ಅವನಿಗೆ ತಿಳಿಸಿದನು. ಆದರೆ ಅವನು ಅವಳನ್ನು ಕಂಡುಹಿಡಿಯಲಾಗಲಿಲ್ಲ.
20 Enviou Judá o cabrito, por mão do adulamita, seu amigo, para reaver o penhor da mão da mulher; porém não a encontrou.
21 ಅವನು ಏನಯಿಮ್ ಊರಿನ ಕೆಲವು ಗಂಡಸರಿಗೆ, “ಇಲ್ಲಿಯ ದಾರಿಯ ಸಮೀಪದಲ್ಲಿರುತ್ತಿದ್ದ ವೇಶ್ಯೆಯು ಎಲ್ಲಿದ್ದಾಳೆ?” ಎಂದು ಕೇಳಿದನು.
21 Então, perguntou aos homens daquele lugar: Onde está a prostituta cultual que se achava junto ao caminho de Enaim? Responderam: Aqui não esteve meretriz nenhuma.
22 ಆದ್ದರಿಂದ ಅವನು ಯೆಹೂದನ ಬಳಿಗೆ ಹಿಂತಿರುಗಿ ಬಂದು, “ನಾನು ಆ ವೇಶ್ಯೆಯನ್ನು ಕಂಡುಹಿಡಿಯಲಾಗಲಿಲ್ಲ. ಅದಲ್ಲದೆ ಆ ಸ್ಥಳದ ಗಂಡಸರು ಅಲ್ಲಿ ಒಬ್ಬ ವೇಶ್ಯೆಯೂ ಇಲ್ಲ ಎಂದು ಹೇಳಿದರು” ಅಂದನು.
22 Tendo voltado a Judá, disse: Não a encontrei; e também os homens do lugar me disseram: Aqui não esteve prostituta cultual nenhuma.
23 ಅದಕ್ಕೆ ಯೆಹೂದನು, “ಆಕೆ ಆ ವಸ್ತುಗಳನ್ನು ಇಟ್ಟುಕೊಳ್ಳಲಿ. ಜನರು ನಮ್ಮನ್ನು ಕಂಡು ನಗುವುದು ನನಗೆ ಇಷ್ಟವಿಲ್ಲ. ನಾನು ಅವಳಿಗೆ ಆಡನ್ನು ಕೊಡಲು ಪ್ರಯತ್ನಿಸಿದೆ. ಆದರೆ ಅವಳು ನಿನಗೆ ಸಿಕ್ಕಲಿಲ್ಲವಷ್ಟೇ” ಎಂದು ಹೇಳಿದನು.
23 Respondeu Judá: Que ela o guarde para si, para que não nos tornemos em opróbrio; mandei-lhe, com efeito, o cabrito, todavia, não a achaste.
24 ಮೂರು ತಿಂಗಳಾದ ಬಳಿಕ, ಯಾರೋ ಒಬ್ಬನು ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಗರ್ಭಿಣಿಯಾಗಿದ್ದಾಳೆ” ಎಂದು ತಿಳಿಸಿದನು.
24 Passados quase três meses, foi dito a Judá: Tamar, tua nora, adulterou, pois está grávida. Então, disse Judá: Tirai-a fora para que seja queimada.
25 ಆ ಗಂಡಸರು ತಾಮಾರಳನ್ನು ಕೊಲ್ಲಲು ಆಕೆಯ ಬಳಿಗೆ ಹೋದರು. ಆದರೆ ಆಕೆ ತನ್ನ ಮಾವನಿಗೆ, “ನನ್ನನ್ನು ಗರ್ಭಿಣಿ ಮಾಡಿದವನು ಈ ವಸ್ತುಗಳ ಒಡೆಯ. ಈ ವಸ್ತುಗಳನ್ನು ನೋಡು! ಇವು ಯಾರವು? ಈ ಮುದ್ರೆಯೂ ದಾರವೂ ಯಾರವು? ಇದು ಯಾರ ಕೈಕೋಲು?” ಎಂಬ ಸಂದೇಶವನ್ನು ಹೇಳಿ ಕಳುಹಿಸಿದಳು.
25 Em tirando-a, mandou ela dizer a seu sogro: Do homem de quem são estas coisas eu concebi. E disse mais: Reconhece de quem é este selo, e este cordão, e este cajado.
26 ಯೆಹೂದನು ಆ ವಸ್ತುಗಳನ್ನು ಗುರುತಿಸಿ, “ಆಕೆ ಸರಿಯಾದದ್ದನ್ನೇ ಮಾಡಿದ್ದಾಳೆ. ನಾನೇ ತಪ್ಪು ಮಾಡಿದೆ. ನಾನು ಆಕೆಗೆ ಮಾತುಕೊಟ್ಟಂತೆ ನನ್ನ ಮಗನಾದ ಶೇಲಹನನ್ನು ಆಕೆಗೆ ಕೊಡಬೇಕಿತ್ತು” ಎಂದು ಹೇಳಿದನು. ಆದರೆ ಯೆಹೂದನು ಆಕೆಯೊಡನೆ ಮತ್ತೆ ಮಲಗಿಕೊಳ್ಳಲಿಲ್ಲ.
26 Reconheceu-os Judá e disse: Mais justa é ela do que eu, porquanto não a dei a Selá, meu filho. E nunca mais a possuiu.
27 ತಾಮಾರಳಿಗೆ ಹೆರಿಗೆಕಾಲ ಬಂತು. ಆಕೆಗೆ ಅವಳಿಜವಳಿ ಮಕ್ಕಳಾಗುವುದನ್ನು ದಾದಿಯು ಗಮನಿಸಿದಳು.
27 E aconteceu que, estando ela para dar à luz, havia gêmeos no seu ventre.
28 ಆಕೆಗೆ ಹೆರಿಗೆಯಾಗುವಾಗ ಒಂದು ಮಗು ತನ್ನ ಕೈಚಾಚಿತು. ದಾದಿಯು ಆ ಮಗುವಿನ ಕೈಗೆ ಕೆಂಪುದಾರವನ್ನು ಕಟ್ಟಿ, “ಮೊದಲನೆಯವನು” ಅಂದಳು.
28 Ao nascerem, um pôs a mão fora, e a parteira, tomando-a, lhe atou um fio encarnado e disse: Este saiu primeiro.
29 ಆದರೆ ಆ ಮಗು ತನ್ನ ಕೈಯನ್ನು ಹಿಂದಕ್ಕೆ ಎಳೆದುಕೊಂಡಿತು. ಆಮೇಲೆ ಮತ್ತೊಂದು ಮಗುವು ಮೊದಲು ಹುಟ್ಟಿತು. ಆದ್ದರಿಂದ ದಾದಿಯು, “ನೀನು ಮೊದಲನೆಯವನನ್ನು ಛೇದಿಸಿಕೊಂಡು ಬಂದೆ” ಅಂದಳು. ಆದ್ದರಿಂದ ಅವರು ಆ ಮಗುವಿಗೆ “ಪೆರೆಚ್” ಎಂದು ಹೆಸರಿಟ್ಟರು.
29 Mas, recolhendo ele a mão, saiu o outro; e ela disse: Como rompeste saída? E lhe chamaram Perez.
30 ಆ ಬಳಿಕ ಮತ್ತೊಂದು ಮಗುವು ಹೊರಬಂದಿತು. ಆ ಮಗುವಿನ ಕೈಯಲ್ಲಿ ಕೆಂಪುದಾರವಿತ್ತು. ಅವರು ಅವನಿಗೆ “ಜೆರಹ” ಎಂದು ಹೆಸರಿಟ್ಟರು.
30 Depois, lhe saiu o irmão, em cuja mão estava o fio encarnado; e lhe chamaram Zera.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Gênesis 38, comparar traduções ou montar um estudo — tudo direto pelo WhatsApp.