Gênesis 3

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVI

Sair da comparação
NVI Nova Versão Internacional
1 ದೇವರಾದ ಯೆಹೋವನು ಸೃಷ್ಟಿಸಿದ ಪ್ರಾಣಿಗಳಲ್ಲೆಲ್ಲಾ ಹಾವು ಅತಿ ಬುದ್ಧಿವಂತವಾದ ಮತ್ತು ಕುತಂತ್ರವುಳ್ಳ ಜಂತುವಾಗಿತ್ತು. ಹಾವು ಸ್ತ್ರೀಯನ್ನು ಮೋಸಗೊಳಿಸಬೇಕೆಂದಿತ್ತು. ಹಾವು ಅವಳಿಗೆ, “ಅಮ್ಮಾ, ಈ ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ನೀವು ತಿನ್ನಕೂಡದೆಂದು ದೇವರು ನಿಮಗೆ ಹೇಳಿರುವುದು ನಿಜವೇ?” ಎಂದು ಕೇಳಿತು.
1 Ora, a serpente era o mais astuto de todos os animais selvagens que o Senhor Deus tinha feito. E ela perguntou à mulher: "Foi isto mesmo que Deus disse: ‘Não comam de nenhum fruto das árvores do jardim’? "
2 ಸ್ತ್ರೀಯು ಹಾವಿಗೆ, “ಇಲ್ಲ! ದೇವರು ಹಾಗೆ ಹೇಳಲಿಲ್ಲ! ತೋಟದಲ್ಲಿರುವ ಮರಗಳ ಹಣ್ಣುಗಳನ್ನು ನಾವು ತಿನ್ನಬಹುದು.
2 Respondeu a mulher à serpente: "Podemos comer do fruto das árvores do jardim,
3 ಆದರೆ ಒಂದು ಮರದ ಹಣ್ಣನ್ನು ಮಾತ್ರ ನಾವು ತಿನ್ನಕೂಡದು. ದೇವರು ನಮಗೆ, ‘ತೋಟದ ಮಧ್ಯದಲ್ಲಿರುವ ಮರದ ಹಣ್ಣನ್ನು ನೀವು ತಿನ್ನಕೂಡದು; ಆ ಮರವನ್ನು ಮುಟ್ಟಕೂಡದು, ಇಲ್ಲವಾದರೆ ನೀವು ಸಾಯುವಿರಿ’ ಎಂದು ಹೇಳಿದ್ದಾನೆ” ಎಂಬುದಾಗಿ ಉತ್ತರಕೊಟ್ಟಳು.
3 mas Deus disse: ‘Não comam do fruto da árvore que está no meio do jardim, nem toquem nele; do contrário vocês morrerão’ ".
4 ಅದಕ್ಕೆ ಹಾವು ಸ್ತ್ರೀಗೆ, “ನೀವು ಸಾಯುವುದಿಲ್ಲ.
4 Disse a serpente à mulher: "Certamente não morrerão!
5 ನೀವು ಆ ಮರದ ಹಣ್ಣನ್ನು ತಿಂದರೆ ನಿಮಗೆ ಒಳ್ಳೆಯದರ ಮತ್ತು ಕೆಟ್ಟದ್ದರ ಬಗ್ಗೆ ಜ್ಞಾನ ಬರುತ್ತದೆಯೆಂದು ದೇವರಿಗೆ ಗೊತ್ತಿದೆ. ಅಲ್ಲದೆ ನೀವು ದೇವರಿಗೆ ಸರಿಸಮಾನರಾಗುವಿರಿ” ಎಂದು ಹೇಳಿತು.
5 Deus sabe que, no dia em que dele comerem, seus olhos se abrirão, e vocês serão como Deus, conhecedores do bem e do mal".
6 ಸ್ತ್ರೀಗೆ ಆ ಮರವು ಸುಂದರವಾಗಿ ಕಂಡಿತು. ಅದರ ಹಣ್ಣು ಆಕೆಗೆ ತಿನ್ನಲು ಯೋಗ್ಯವಾಗಿ ಕಂಡಿತು. ಆ ಮರವು ತನ್ನನ್ನು ಜ್ಞಾನಿಯನ್ನಾಗಿ ಮಾಡುತ್ತದೆಯೆಂದು ಆಕೆ ಉತ್ಸಾಹಗೊಂಡಳು. ಆದ್ದರಿಂದ ಸ್ತ್ರೀಯು ಆ ಮರದ ಹಣ್ಣನ್ನು ಕಿತ್ತುಕೊಂಡು ತಿಂದಳು; ತನ್ನೊಂದಿಗಿದ್ದ ಗಂಡನಿಗೂ ಸ್ವಲ್ಪ ಹಣ್ಣನ್ನು ಕೊಟ್ಟಳು. ಅವನು ಸಹ ಅದನ್ನು ತಿಂದನು.
6 Quando a mulher viu que a árvore parecia agradável ao paladar, era atraente aos olhos e, além disso, desejável para dela se obter discernimento, tomou do seu fruto, comeu-o e o deu a seu marido, que comeu também.
7 ಕೂಡಲೇ ಪುರುಷನಲ್ಲಿಯೂ ಸ್ತ್ರೀಯಲ್ಲಿಯೂ ಬದಲಾವಣೆಗಳಾದವು. ಅವರ ಕಣ್ಣುಗಳು ತೆರೆದವು. ಅವರಿಗೆ ಎಲ್ಲವೂ ವಿಚಿತ್ರವಾಗಿ ಕಂಡವು. ತಾವು ಬೆತ್ತಲೆಯಿಂದಿರುವುದನ್ನು ಕಂಡು ಅಂಜೂರದ ಎಲೆಗಳನ್ನು ಕಿತ್ತು ಒಂದಕ್ಕೊಂದು ಜೋಡಿಸಿ ಸುತ್ತಿಕೊಂಡರು.
7 Os olhos dos dois se abriram, e perceberam que estavam nus; então juntaram folhas de figueira para cobrir-se.
8 ಅಂದು ಸಂಜೆ ತಂಗಾಳಿ ಬೀಸುತ್ತಿರಲು ದೇವರಾದ ಯೆಹೋವನು ತೋಟದಲ್ಲಿ ತಿರುಗಾಡುತ್ತಿದ್ದನು. ಆತನ ಸಪ್ಪಳವನ್ನು ಕೇಳಿದ ಪುರುಷನು ಮತ್ತು ಅವನ ಹೆಂಡತಿಯು ತೋಟದ ಮರಗಳ ಮರೆಯಲ್ಲಿ ಅಡಗಿಕೊಂಡರು.
8 Ouvindo o homem e sua mulher os passos do Senhor Deus que andava pelo jardim quando soprava a brisa do dia, esconderam-se da presença do Senhor Deus entre as árvores do jardim.
9 ದೇವರಾದ ಯೆಹೋವನು ಪುರುಷನಿಗೆ, “ನೀನು ಎಲ್ಲಿರುವೆ?” ಎಂದು ಕೂಗಿ ಕೇಳಿದನು.
9 Mas o Senhor Deus chamou o homem, perguntando: "Onde está você? "
10 ಅದಕ್ಕೆ ಪುರುಷನು, “ನೀನು ತೋಟದಲ್ಲಿ ತಿರುಗಾಡುತ್ತಿರುವ ಸಪ್ಪಳವನ್ನು ನಾನು ಕೇಳಿದೆನು. ಆದರೆ ನಾನು ಬೆತ್ತಲೆಯಾಗಿದ್ದರಿಂದ ಭಯದಿಂದ ಅಡಗಿಕೊಂಡೆನು” ಎಂದು ಹೇಳಿದನು.
10 E ele respondeu: "Ouvi teus passos no jardim e fiquei com medo, porque estava nu; por isso me escondi".
11 ದೇವರು ಪುರುಷನಿಗೆ, “ನೀನು ಬೆತ್ತಲೆಯಾಗಿರುವೆ ಎಂದು ನಿನಗೆ ಹೇಳಿದವರು ಯಾರು? ವಿಶೇಷವಾದ ಆ ಮರದ ಹಣ್ಣನ್ನು ನೀನು ತಿಂದೆಯಾ? ಆ ಮರದ ಹಣ್ಣನ್ನು ತಿನ್ನಕೂಡದೆಂದು ನಾನು ನಿನಗೆ ಆಜ್ಞಾಪಿಸಿದ್ದೆನಲ್ಲಾ!” ಎಂದು ಹೇಳಿದನು.
11 E Deus perguntou: "Quem lhe disse que você estava nu? Você comeu do fruto da árvore da qual lhe proibi comer? "
12 ಅದಕ್ಕೆ ಪುರುಷನು, “ನೀನು ನನಗಾಗಿ ಕೊಟ್ಟ ಸ್ತ್ರೀಯು ಆ ಮರದ ಹಣ್ಣನ್ನು ನನಗೆ ಕೊಟ್ಟಳು; ಆದ್ದರಿಂದ ನಾನು ತಿಂದೆ” ಅಂದನು.
12 Disse o homem: "Foi a mulher que me deste por companheira que me deu do fruto da árvore, e eu comi".
13 ಆಗ ದೇವರಾದ ಯೆಹೋವನು ಸ್ತ್ರೀಗೆ, “ನೀನು ಮಾಡಿದ್ದೇನು?” ಎಂದು ಕೇಳಿದನು.
13 O Senhor Deus perguntou então à mulher: "Que foi que você fez? " Respondeu a mulher: "A serpente me enganou, e eu comi".
14 ಆಗ ದೇವರಾದ ಯೆಹೋವನು ಹಾವಿಗೆ,
14 Então o Senhor Deus declarou à serpente: "Já que você fez isso, maldita é você entre todos os rebanhos domésticos e entre todos os animais selvagens! Sobre o seu ventre você rastejará, e pó comerá todos os dias da sua vida.
15 ನೀನು ಮತ್ತು ಸ್ತ್ರೀಯು ಒಬ್ಬರಿಗೊಬ್ಬರು ವೈರಿಗಳಾಗಿರುವಂತೆ ಮಾಡುವೆನು.
15 Porei inimizade entre você e a mulher, entre a sua descendência e o descendente dela; este lhe ferirá a cabeça, e você lhe ferirá o calcanhar".
16 ಬಳಿಕ ದೇವರಾದ ಯೆಹೋವನು ಸ್ತ್ರೀಗೆ,
16 À mulher, ele declarou: "Multiplicarei grandemente o seu sofrimento na gravidez; com sofrimento você dará à luz filhos. Seu desejo será para o seu marido, e ele a dominará".
17 ಆಮೇಲೆ ದೇವರಾದ ಯೆಹೋವನು ಪುರುಷನಿಗೆ,
17 E ao homem declarou: "Visto que você deu ouvidos à sua mulher e comeu do fruto da árvore da qual eu lhe ordenara que não comesse, maldita é a terra por sua causa; com sofrimento você se alimentará dela todos os dias da sua vida.
18 ಭೂಮಿಯು ನಿನಗೋಸ್ಕರ ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸುವುದು.
18 Ela lhe dará espinhos e ervas daninhas, e você terá que alimentar-se das plantas do campo.
19 ನಿನ್ನ ಮುಖದಲ್ಲಿ ಬೆವರು ಹರಿಯುವ ತನಕ
19 Com o suor do seu rosto você comerá o seu pão, até que volte à terra, visto que dela foi tirado; porque você é pó e ao pó voltará".
20 ಆದಾಮನು ತನ್ನ ಹೆಂಡತಿಗೆ ಹವ್ವ ಎಂದು ಹೆಸರಿಟ್ಟನು. ಆದಾಮನು ಹವ್ವ ಎಂದು ಹೆಸರಿಡಲು ಕಾರಣವೇನೆಂದರೆ ಈ ಲೋಕದಲ್ಲಿ ಹುಟ್ಟಿದ ಪ್ರತಿಯೊಬ್ಬರಿಗೂ ಆಕೆಯೇ ಮೂಲ ತಾಯಿ.
20 Adão deu à sua mulher o nome de Eva, pois ela seria mãe de toda a humanidade.
21 ದೇವರಾದ ಯೆಹೋವನು ಪ್ರಾಣಿಯ ಚರ್ಮದಿಂದ ಉಡುಪುಗಳನ್ನು ಮಾಡಿ ಆದಾಮನಿಗೆ ಮತ್ತು ಅವನ ಹೆಂಡತಿಗೆ ತೊಡಿಸಿದನು.
21 O Senhor Deus fez roupas de pele e com elas vestiu Adão e sua mulher.
22 ದೇವರಾದ ಯೆಹೋವನು, “ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬಗ್ಗೆ ತಿಳಿದುಕೊಂಡು ನಮ್ಮಂತಾದನು. ಈಗ ಮನುಷ್ಯನು ಜೀವದಾಯಕ ಮರದ ಹಣ್ಣನ್ನೇನಾದರೂ ತೆಗೆದುಕೊಂಡು ತಿಂದರೆ ಅವನು ಸದಾಕಾಲ ಬದುಕುವನು” ಅಂದುಕೊಂಡನು.
22 Então disse o Senhor Deus: "Agora o homem se tornou como um de nós, conhecendo o bem e o mal. Não se deve, pois, permitir que ele também tome do fruto da árvore da vida e o coma, e viva para sempre".
23 ಆದ್ದರಿಂದ ಆತನು ಆದಾಮನನ್ನು ಅವನು ಉತ್ಪತ್ತಿಗೊಂಡಿದ್ದ ನೆಲದಲ್ಲಿ ವ್ಯವಸಾಯ ಮಾಡಲು ಬಲವಂತವಾಗಿ ಏದೆನ್ ತೋಟದಿಂದ ಹೊರಡಿಸಿಬಿಟ್ಟನು.
23 Por isso o Senhor Deus o mandou embora do jardim do Éden para cultivar o solo do qual fora tirado.
24 ಅಲ್ಲದೆ ಏದೆನ್ ತೋಟವನ್ನು ಸಂರಕ್ಷಿಸುವುದಕ್ಕಾಗಿ ಆತನು ಕೆರೂಬಿದೂತರನ್ನು ತೋಟದ ಪೂರ್ವಭಾಗದಲ್ಲಿ ಇರಿಸಿದನು. ಇದಲ್ಲದೆ ಆತನು ಬೆಂಕಿಯ ಖಡ್ಗವನ್ನು ಅಲ್ಲಿಟ್ಟನು. ಈ ಖಡ್ಗವು ಎಲ್ಲಾ ದಿಕ್ಕುಗಳತ್ತ ತಿರುಗುತ್ತಾ ಧಗಧಗನೆ ಪ್ರಜ್ವಲಿಸುತ್ತಾ ಜೀವದಾಯಕ ಮರದ ಮಾರ್ಗವನ್ನು ಕಾಯುತ್ತಿತ್ತು.
24 Depois de expulsar o homem, colocou a leste do jardim do Éden querubins e uma espada flamejante que se movia, guardando o caminho para a árvore da vida.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Gênesis 3, comparar traduções ou montar um estudo — tudo direto pelo WhatsApp.