Gênesis 40

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs VC

Sair da comparação
VC Versão Católica
1 ತರುವಾಯ ಫರೋಹನ ಇಬ್ಬರು ಸೇವಕರು ಫರೋಹನಿಗೆ ಯಾವುದೋ ತಪ್ಪುಮಾಡಿದರು. ಈ ಇಬ್ಬರು ಸೇವಕರುಗಳಲ್ಲಿ ಒಬ್ಬನು ಭಕ್ಷ್ಯಗಾರ ಮತ್ತೊಬ್ಬನು ಪಾನದಾಯಕ.
1 Depois disto, aconteceu que o copeiro e o padeiro do rei do Egito ofenderam o seu senhor.
2 ಫರೋಹನು ತನ್ನ ಭಕ್ಷ್ಯಗಾರನ ಮೇಲೆಯೂ ಪಾನದಾಯಕನ ಮೇಲೆಯೂ ಕೋಪಗೊಂಡನು.
2 O faraó, encolerizado contra os seus dois oficiais, o copeiro-mor e o padeiro-mor,
3 ಆದ್ದರಿಂದ ಅವರನ್ನು ಯೋಸೇಫನಿದ್ದ ಸೆರೆಮನೆಗೆ ಹಾಕಿಸಿದನು. ಪೋಟೀಫರನು ಫರೋಹನ ಕಾವಲುಗಾರ ಅಧಿಕಾರಿಯಾಗಿದ್ದು ಈ ಸೆರೆಮನೆಯ ಜವಾಬ್ದಾರಿಯನ್ನು ಹೊಂದಿದ್ದನು.
3 mandou-os encarcerar na casa do chefe da guarda, na prisão onde se encontrava detido José.
4 ಸೆರೆಮನೆಯ ಮುಖ್ಯಾಧಿಕಾರಿಯು ಈ ಇಬ್ಬರು ಕೈದಿಗಳನ್ನು ಯೋಸೇಫನ ವಶಕ್ಕೆ ಒಪ್ಪಿಸಿದನು. ಸ್ವಲ್ಪಕಾಲದವರೆಗೆ ಆ ಇಬ್ಬರು ಸೆರೆಮನೆಯೊಳಗೆ ಇದ್ದರು.
4 O chefe da guarda associou-lhes José para os servir. Havia já um certo tempo que estavam detidos,
5 ಒಂದು ರಾತ್ರಿ ಆ ಇಬ್ಬರು ಕೈದಿಗಳಿಗೆ ಅಂದರೆ ಭಕ್ಷ್ಯಗಾರನಿಗೂ ಪಾನದಾಯಕನಿಗೂ ಒಂದೊಂದು ಕನಸು ಬಿತ್ತು. ಮತ್ತು ಅವರಿಬ್ಬರ ಕನಸುಗಳು ತಮ್ಮದೇ ಆದ ಅರ್ಥವನ್ನು ಹೊಂದಿದ್ದವು.
5 quando os dois prisioneiros, o copeiro e o padeiro do rei do Egito, tiveram um sonho numa mesma noite, cada um o seu, com seu sentido particular.
6 ಮರುದಿನ ಮುಂಜಾನೆ ಯೋಸೇಫನು ಅವರ ಬಳಿಗೆ ಹೋದನು. ಅವರಿಬ್ಬರು ಚಿಂತೆಯಿಂದ ಇರುವುದನ್ನು ಯೋಸೇಫನು ಕಂಡು,
6 Quando José voltou junto deles no dia seguinte pela manhã, viu que estavam tristes.
7 “ಈ ದಿನ ನೀವು ತುಂಬ ಚಿಂತೆಯಿಂದ ಇರುವಂತೆ ಕಾಣುತ್ತಿದೆ, ಕಾರಣವೇನು?” ಎಂದು ಕೇಳಿದನು.
7 Perguntou então aos oficiais do faraó, detidos com ele na casa do seu senhor: "Por que tendes hoje um ar sombrio?"
8 ಆ ಇಬ್ಬರು, “ನಾವು ಕಳೆದ ರಾತ್ರಿ ಕನಸನ್ನು ಕಂಡೆವು; ಆದರೆ ನಾವು ಕಂಡ ಕನಸು ನಮಗೆ ಅರ್ಥವಾಗುತ್ತಿಲ್ಲ. ನಮಗೆ ಕನಸುಗಳ ಅರ್ಥವನ್ನು ತಿಳಿಸುವವರಾಗಲಿ ವಿವರಿಸುವವರಾಗಲಿ ಯಾರೂ ಇಲ್ಲ” ಎಂದು ಹೇಳಿದರು.
8 "Tivemos um sonho, responderam; e não há ninguém para no-los interpretar." "Porventura, não pertence a Deus, replicou José, a interpretação dos sonhos? Rogo-vos que mos conteis."
9 ಆಗ ಪಾನದಾಯಕನು ಯೋಸೇಫನಿಗೆ, “ನಾನು ಕನಸಿನಲ್ಲಿ ದ್ರಾಕ್ಷಾಲತೆಯನ್ನು ಕಂಡೆನು.
9 E o copeiro-mor contou seu sonho a José: "Em meu sonho, disse ele, vi uma cepa que estava diante de mim,
10 ಆ ದ್ರಾಕ್ಷಾಲತೆಯ ಮೇಲೆ ಮೂರು ಕವಲುಗಳಿದ್ದವು. ಆ ಕವಲುಗಳು ಚಿಗುರುತ್ತಲೇ ಹೂವುಗಳನ್ನು ಬಿಟ್ಟವು; ಆ ಹೂವುಗಳು ಹಣ್ಣುಗಳಾದವು.
10 e nesta cepa três varas, que pareciam brotar; saiu uma flor e seus cachos deram uvas maduras.
11 ನಾನು ಫರೋಹನ ಲೋಟವನ್ನು ಹಿಡಿದುಕೊಂಡಿದ್ದರಿಂದ ದ್ರಾಕ್ಷಿಹಣ್ಣುಗಳನ್ನು ತೆಗೆದುಕೊಂಡು ಲೋಟದೊಳಗೆ ರಸಹಿಂಡಿ ಲೋಟವನ್ನು ಫರೋಹನಿಗೆ ಕೊಟ್ಟೆನು” ಎಂದು ಹೇಳಿದನು.
11 Eu tinha na mão a taça do faraó; tomei as uvas e espremi-as na taça, que entreguei na mão do faraó."
12 ಅದಕ್ಕೆ ಯೋಸೇಫನು, “ನಾನು ಕನಸಿನ ಅರ್ಥವನ್ನು ನಿನಗೆ ತಿಳಿಸುವೆನು. ಆ ಮೂರು ಕವಲುಗಳು ಎಂದರೆ ಮೂರು ದಿನಗಳು.
12 José disse-lhe: "Eis o significado do teu sonho: as três varas são três dias.
13 ಮೂರುದಿನಗಳೊಳಗಾಗಿ ಫರೋಹನು ನಿನ್ನನ್ನು ಕ್ಷಮಿಸಿ ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳುವನು. ನೀನು ಮೊದಲಿನಂತೆ ಅವನಿಗೆ ಪಾನದಾಯಕನಾಗಿರುವೆ.
13 Dentro de três dias, o faraó te reabilitará em tuas funções. Apresentarás ao faraó sua taça, como o fazias antes, quando eras seu copeiro.
14 ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಸಿಕೊಂಡು ನನ್ನ ವಿಷಯವಾಗಿ ಫರೋಹನಿಗೆ ತಿಳಿಸಿ ನನಗೆ ಸೆರೆಮನೆಯಿಂದ ಬಿಡುಗಡೆಯಾಗುವಂತೆ ಮಾಡು.
14 Quando fores feliz, lembra-te de mim e faze-me o favor de recomendar-me ao faraó, para que ele me tire desta prisão.
15 ಇಬ್ರಿಯರ ದೇಶದವನಾದ ನನ್ನನ್ನು ಕೆಲವರು ಅಪಹರಿಸಿಕೊಂಡು ಬಂದರು. ಆದರೆ ಇಲ್ಲಿಯೂ ನಾನು ಯಾವ ತಪ್ಪನ್ನೂ ಮಾಡಲಿಲ್ಲ. ಆದ್ದರಿಂದ ನಾನು ಸೆರೆಮನೆಯಲ್ಲಿರಬಾರದು” ಎಂದು ಹೇಳಿದನು.
15 Porque é por um rapto que fui tirado da terra dos hebreus, e aqui, igualmente, eu nada fiz para merecer a prisão."
16 ಪಾನದಾಯಕನ ಕನಸಿನ ಅರ್ಥವು ಒಳ್ಳೆಯದಾಗಿರುವುದನ್ನು ಕಂಡ ಭಕ್ಷ್ಯಗಾರನು ಯೋಸೇಫನಿಗೆ, “ನನಗೂ ಒಂದು ಕನಸಾಯಿತು. ನನ್ನ ಕನಸಿನಲ್ಲಿ ನನ್ನ ತಲೆಯ ಮೇಲೆ ಮೂರು ಬುಟ್ಟಿಗಳಿದ್ದವು.
16 O padeiro-mor, vendo que José tinha dado uma boa interpretação, disse-lhe: "Eu também, em meu sonho, levava sobre minha cabeça três cestas de pão branco.
17 ಅವುಗಳಲ್ಲಿ ರಾಜನಿಗೋಸ್ಕರವಾಗಿ ಎಲ್ಲಾ ಬಗೆಯ ಭಕ್ಷ್ಯಗಳಿದ್ದವು. ಆದರೆ ಪಕ್ಷಿಗಳು ಆ ಆಹಾರವನ್ನು ತಿನ್ನುತ್ತಿದ್ದವು” ಎಂದು ಹೇಳಿದನು.
17 Nada de cima, havia toda a sorte de manjares para o faraó; mas as aves do céu comiam-nas na cesta que estava sobre minha cabeça."
18 ಯೋಸೇಫನು, “ಕನಸಿನ ಅರ್ಥವನ್ನು ನಾನು ನಿನಗೆ ತಿಳಿಸುತ್ತೇನೆ. ಮೂರು ಬುಟ್ಟಿಗಳ ಅರ್ಥ ಮೂರು ದಿನಗಳು.
18 "Eis, disse José, o que isto significa: as três cestas são três dias.
19 ಮೂರುದಿನಗಳೊಳಗಾಗಿ ರಾಜನು ನಿನ್ನನ್ನು ಸೆರೆಮನೆಯಿಂದ ಬಿಡಿಸಿ ನಿನ್ನ ಶಿರಚ್ಛೇದನ ಮಾಡಿಸುವನು; ನಿನ್ನ ದೇಹವನ್ನು ಕಂಬಕ್ಕೆ ನೇತುಹಾಕಿಸುವನು; ಪಕ್ಷಿಗಳು ನಿನ್ನ ದೇಹವನ್ನು ತಿಂದುಬಿಡುತ್ತವೆ” ಎಂದು ಹೇಳಿದನು.
19 Dentro de três dias, o faraó levantará a tua cabeça: ele te suspenderá numa forca, e as aves devorarão a tua carne."
20 ಮೂರನೆಯ ದಿನ ಬಂದಿತು. ಅದು ಫರೋಹನ ಜನ್ಮದಿನವಾಗಿತ್ತು. ಫರೋಹನು ತನ್ನ ಎಲ್ಲಾ ಸೇವಕರಿಗೆ ಔತಣಕೂಟವನ್ನು ಏರ್ಪಡಿಸಿದನು. ಔತಣಕೂಟದಲ್ಲಿ ಫರೋಹನು ಭಕ್ಷ್ಯಗಾರನನ್ನೂ ಮತ್ತು ಪಾನದಾಯಕನನ್ನೂ ಸೆರೆಮನೆಯಿಂದ ಬಿಡುಗಡೆ ಮಾಡಿದನು.
20 No terceiro dia, celebrava-se o aniversário natalício do faraó, e ele ofereceu um banquete todo o seu pessoal. Ele levantou a cabeça do copeiro-mor, no meio de todos os seus servos:
21 ಫರೋಹನು ಪಾನದಾಯಕನನ್ನು ಮತ್ತೆ ಅದೇ ಕೆಲಸಕ್ಕೆ ನೇಮಿಸಿದನು; ಅವನು ಪಾನಪಾತ್ರೆಯನ್ನು ಫರೋಹನ ಕೈಗೆ ಕೊಡುವವನಾದನು.
21 restabeleceu no seu cargo o copeiro-mor, que apresentou novamente a taça ao faraó,
22 ಆದರೆ ಫರೋಹನು ಭಕ್ಷ್ಯಗಾರನನ್ನು ಕೊಲ್ಲಿಸಿದನು. ಯೋಸೇಫನು ಹೇಳಿದಂತೆಯೇ ಪ್ರತಿಯೊಂದು ನಡೆಯಿತು.
22 e mandou suspender no patíbulo o padeiro-mor, segundo a interpretação que José lhes havia dado.
23 ಆದರೆ ಪಾನದಾಯಕನು ಯೋಸೇಫನಿಗೆ ಸಹಾಯ ಮಾಡಬೇಕೆಂಬುದನ್ನು ಮರೆತುಬಿಟ್ಟು ಯೋಸೇಫನ ಬಗ್ಗೆ ಫರೋಹನಿಗೆ ಏನೂ ತಿಳಿಸಲಿಲ್ಲ.
23 Mas o copeiro-mor não pensou mais em José; esqueceu-o.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Gênesis 40, comparar traduções ou montar um estudo — tudo direto pelo WhatsApp.