Gênesis 41

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs VC

Sair da comparação
VC Versão Católica
1 ಎರಡು ವರ್ಷಗಳ ನಂತರ ಫರೋಹನಿಗೆ ಒಂದು ಕನಸಾಯಿತು. ಫರೋಹನು ಕನಸಿನಲ್ಲಿ ನೈಲ್ ನದಿಯ ತೀರದಲ್ಲಿ ನಿಂತಿದ್ದನು.
1 Dois anos depois, o faraó teve um sonho: encontrava-se ele perto do Nilo,
2 ಆಗ ಕೊಬ್ಬಿದ ಮತ್ತು ಲಕ್ಷಣವಾಗಿದ್ದ ಏಳು ಹಸುಗಳು ನದಿಯೊಳಗಿಂದ ಬಂದು ಹುಲ್ಲನ್ನು ಮೇಯುತ್ತಿದ್ದವು.
2 de onde saíram sete vacas belas e gordas, que se puseram a pastar a verdura.
3 ಬಳಿಕ ಬಡಕಲಾಗಿದ್ದ ಮತ್ತು ಕುರೂಪವಾಗಿದ್ದ ಏಳು ಹಸುಗಳು ನದಿಯೊಳಗಿಂದ ಬಂದು ಲಕ್ಷಣವಾಗಿದ್ದ ಏಳು ಹಸುಗಳ ಪಕ್ಕದಲ್ಲಿ ನಿಂತುಕೊಂಡವು.
3 Mas, eis que saíram em seguida do mesmo Nilo sete outras vacas, feias e magras, que vieram e se puseram ao lado das outras na margem do rio.
4 ಕುರೂಪವಾಗಿದ್ದ ಏಳು ಹಸುಗಳು ಲಕ್ಷಣವಾಗಿದ್ದ ಏಳು ಹಸುಗಳನ್ನು ತಿಂದುಬಿಟ್ಟವು. ಆಗ ಫರೋಹನಿಗೆ ಎಚ್ಚರವಾಯಿತು.
4 As vacas feias e magras devoraram as sete vacas belas e gordas. E o faraó despertou.
5 ಫರೋಹನು ಮತ್ತೆ ಮಲಗಿಕೊಂಡನು. ಅವನಿಗೆ ಎರಡನೆಯ ಕನಸಾಯಿತು. ಪುಷ್ಟಿಯುಳ್ಳ ಏಳು ತೆನೆಗಳು ಒಂದೇ ಗಿಡದಲ್ಲಿ ಹುಟ್ಟಿದವು.
5 Adormeceu de novo e teve outro sonho: sete espigas grossas e belas saíam de uma mesma haste.
6 ಆಮೇಲೆ ಅದೇ ಸಸಿಯ ಮೇಲೆ ಬಿಸಿಗಾಳಿಯಿಂದ ಬತ್ತಿಹೋಗಿದ್ದ ಏಳು ತೆನೆಗಳು ಹುಟ್ಟಿದವು.
6 Mas eis que em seguida germinaram sete outras espigas, magras e ressequidas pelo vento do oriente.
7 ಬತ್ತಿಹೋಗಿದ್ದ ತೆನೆಗಳು ಪುಷ್ಟಿಯಾಗಿದ್ದ ತೆನೆಗಳನ್ನು ತಿಂದುಬಿಟ್ಟವು. ಫರೋಹನು ಎಚ್ಚರಗೊಂಡಾಗ ಅದು ಕೇವಲ ಕನಸೆಂದು ತಿಳಿದುಕೊಂಡನು.
7 E as espigas magras devoraram as sete espigas grossas e cheias. E o faraó despertou: era um sonho.
8 ಮರುದಿನ ಮುಂಜಾನೆ ಈ ಕನಸುಗಳ ಬಗ್ಗೆ ತುಂಬ ಚಿಂತೆಗೊಳಗಾಗಿ ಈಜಿಪ್ಟಿನಲ್ಲಿದ್ದ ಎಲ್ಲಾ ಮಂತ್ರಗಾರರನ್ನೂ ಎಲ್ಲಾ ವಿದ್ವಾಂಸರನ್ನೂ ಕರೆಯಿಸಿ ಕನಸುಗಳನ್ನು ತಿಳಿಸಿದನು. ಆದರೆ ಅವರಲ್ಲಿ ಯಾರಿಗೂ ಕನಸುಗಳ ಅರ್ಥವನ್ನು ತಿಳಿಸುವುದಕ್ಕಾಗಲಿ ವಿವರಿಸುವುದಕ್ಕಾಗಲಿ ಆಗಲಿಲ್ಲ.
8 Chegada a manhã, o faraó com o espírito preocupado, mandou chamar todos os mágicos e sábios do Egito. Contou-lhes seus sonhos, mas nenhum deles soube explicá-los.
9 ಆಗ ಪಾನದಾಯಕನು ಯೋಸೇಫನನ್ನು ಜ್ಞಾಪಿಸಿಕೊಂಡು ಫರೋಹನಿಗೆ, “ನನಗೆ ಸಂಭವಿಸಿದ್ದು ನನ್ನ ನೆನಪಿಗೆ ಬರುತ್ತಿದೆ.
9 Então o copeiro-mor disse-lhe: "Vou confessar a minha falta.
10 ನೀವು ನನ್ನ ಮೇಲೆ ಮತ್ತು ಭಕ್ಷ್ಯಗಾರನ ಮೇಲೆ ಕೋಪಗೊಂಡು ನಮ್ಮನ್ನು ಸೆರೆಮನೆಗೆ ಹಾಕಿಸಿದಿರಿ.
10 Um dia, tendo-se o faraó irado contra os seus servos, mandou-me meter na prisão em casa do chefe da guarda, com o padeiro-mor.
11 ಒಂದು ರಾತ್ರಿ ನಮ್ಮಿಬ್ಬರಿಗೂ ಕನಸಾಯಿತು. ಆ ಕನಸುಗಳಿಗೆ ಬೇರೆಬೇರೆಯ ಅರ್ಥಗಳಿದ್ದವು.
11 Eis que uma noite tivemos nós dois um sonho, cada um o seu.
12 ನಮ್ಮ ಜೊತೆಯಲ್ಲಿ ಒಬ್ಬ ಇಬ್ರಿಯ ಯುವಕನಿದ್ದನು. ಅವನು ಕಾವಲುಗಾರರ ಅಧಿಕಾರಿಯ ಸೇವಕನಾಗಿದ್ದನು. ನಾವು ಅವನಿಗೆ ನಮ್ಮ ಕನಸುಗಳನ್ನು ತಿಳಿಸಿದೆವು. ಅವನು ನಮಗೆ ಅವುಗಳನ್ನು ವಿವರಿಸಿ ನಮ್ಮ ಕನಸಿನ ಅರ್ಥವನ್ನು ತಿಳಿಸಿದನು.
12 Ora, estava lá conosco um jovem hebreu, escravo do chefe da guarda. Contamos-lhe nossos sonhos, e ele no-los interpretou, a cada um o seu.
13 ಅವನು ಹೇಳಿದ ಅರ್ಥಕ್ಕೆ ಸರಿಯಾಗಿ ನನಗೆ ಆಯಿತು; ಮೊದಲಿನ ಉದ್ಯೋಗವು ದೊರೆಯಿತು; ಅವನು ಭಕ್ಷ್ಯಗಾರನನ್ನು ಕುರಿತು ತಿಳಿಸಿದಂತೆಯೇ ಅವನಿಗೆ ಮರಣದಂಡನೆ ಆಯಿತು” ಎಂದು ಹೇಳಿದನು.
13 E os acontecimentos confirmaram sua interpretação: eu fui restabelecido no meu cargo, e o outro foi pendurado."
14 ಆಗ ಫರೋಹನು ಯೋಸೇಫನನ್ನು ಸೆರೆಮನೆಯಿಂದ ಕರೆಸಿದನು. ಯೋಸೇಫನು ಕ್ಷೌರಮಾಡಿಕೊಂಡು ಶುದ್ಧವಾದ ಬಟ್ಟೆಗಳನ್ನು ಹಾಕಿಕೊಂಡು ಹೋಗಿ ಫರೋಹನ ಮುಂದೆ ನಿಂತುಕೊಂಡನು.
14 O faraó mandou chamar José, o qual foi, imediatamente, tirado do cárcere. Ele barbeou-se, trocou de roupas e apresentou-se diante do faraó.
15 ಫರೋಹನು ಯೋಸೇಫನಿಗೆ, “ನನಗೆ ಒಂದು ಕನಸಾಯಿತು. ಆದರೆ ಅದರ ಅರ್ಥವನ್ನು ತಿಳಿಸಬಲ್ಲವರು ಇಲ್ಲಿ ಯಾರೂ ಇಲ್ಲ. ನೀನು ಕನಸುಗಳ ಅರ್ಥವನ್ನು ಹೇಳಬಲ್ಲೆ ಎಂಬುದಾಗಿ ನಿನ್ನ ಬಗ್ಗೆ ಕೇಳಿದೆ” ಎಂದು ಹೇಳಿದನು.
15 Este disse-lhe: "Tive um sonho que ninguém pôde interpretar. Mas ouvi dizer de ti, que basta contar-te um sonho para que tu o expliques."
16 ಯೋಸೇಫನು, “ಕನಸುಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ನನ್ನಲ್ಲಿಲ್ಲ. ಆ ಶಕ್ತಿಯನ್ನು ಹೊಂದಿರುವವನು ದೇವರೊಬ್ಬನೇ. ಆದರೆ ದೇವರು ಫರೋಹನಿಗೋಸ್ಕರ ಅರ್ಥವನ್ನು ತಿಳಿಸುವನು” ಎಂದು ಹೇಳಿದನು.
16 "Não sou eu, respondeu José, mas é Deus quem dará ao faraó uma explicação favorável."
17 ಆಗ ಫರೋಹನು ಯೋಸೇಫನಿಗೆ, “ನನ್ನ ಕನಸಿನಲ್ಲಿ, ನಾನು ನೈಲ್ ನದಿಯ ತೀರದಲ್ಲಿ ನಿಂತುಕೊಂಡಿದ್ದೆನು.
17 O faraó disse então a José: "Em meu sonho, eu estava à margem do Nilo,
18 ಕೊಬ್ಬಿದ ಮತ್ತು ಲಕ್ಷಣವಾಗಿದ್ದ ಏಳು ಹಸುಗಳು ನದಿಯೊಳಗಿಂದ ಬಂದು ಹುಲ್ಲನ್ನು ಮೇಯುತ್ತಿದ್ದವು.
18 e eis que do Nilo saíram sete vacas gordas e belas, que se puseram a pastar a verdura.
19 ಆಗ ಬಡಕಲಾಗಿದ್ದ ಮತ್ತು ಕುರೂಪವಾಗಿದ್ದ ಏಳು ಹಸುಗಳು ನದಿಯೊಳಗಿಂದ ಬಂದು ನಿಂತುಕೊಂಡವು. ಅಂಥಾ ಬಡಕಲು ಹಸುಗಳನ್ನು ನಾನು ಈಜಿಪ್ಟಿನಲ್ಲಿ ಎಂದೂ ನೋಡಿಲ್ಲ.
19 E saíram em seguida sete outras vacas magras, feias e disformes, como jamais vi em todo o Egito.
20 ಬಡಕಲಾಗಿದ್ದ ಆ ಹಸುಗಳು ಮೊದಲು ಬಂದ ಲಕ್ಷಣವಾದ ಏಳು ಹಸುಗಳನ್ನು ತಿಂದುಬಿಟ್ಟವು.
20 As vacas magras e feias devoraram as sete primeiras, as gordas,
21 ಅವು ಏಳು ಹಸುಗಳನ್ನು ತಿಂದ ಮೇಲೆಯೂ ತಿಂದಂತೆ ಕಾಣುತ್ತಿರಲಿಲ್ಲ; ಅವು ಮೊದಲಿನಂತೆಯೇ ಬಡಕಲಾಗಿದ್ದವು ಮತ್ತು ಕುರೂಪವಾಗಿದ್ದವು. ಆಗ ನನಗೆ ಎಚ್ಚರವಾಯಿತು.
21 que entraram em seu ventre como se nada fossem, pois ficaram tão macilentas e feias como antes. Nesta altura despertei.
22 “ನನಗಾದ ಎರಡನೆಯ ಕನಸು ಇಂತಿದೆ: ಒಂದೇ ಗಿಡದಲ್ಲಿ ಪುಷ್ಟಿಯಾದ ಏಳು ತೆನೆಗಳು ಹುಟ್ಟಿದವು.
22 E tive outro sonho: vi elevar-se de uma mesma haste sete espigas cheias e belas.
23 ಬಳಿಕ ಅದೇ ಗಿಡದಲ್ಲಿ ಮೇಲೆ ಬಿಸಿಗಾಳಿಯಿಂದ ಬತ್ತಿಹೋಗಿದ್ದ ಏಳು ತೆನೆಗಳು ಹುಟ್ಟಿದವು.
23 Mas eis que sete outras espigas medíocres, finas e queimadas pelo vento do oriente, germinaram em seguida;
24 ಬತ್ತಿಹೋಗಿದ್ದ ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ತಿಂದುಬಿಟ್ಟವು.
24 e as espigas magras engoliram as sete belas espigas. Em vão contei tudo isto aos mágicos; nenhum deles pôde dar-me a explicação".
25 ಆಗ ಯೋಸೇಫನು ಫರೋಹನಿಗೆ, “ಆ ಎರಡು ಕನಸುಗಳ ಅರ್ಥವು ಒಂದೇ. ಮುಂದೆ ನಡೆಯಲಿರುವುದನ್ನು ದೇವರು ತಮಗೆ ತಿಳಿಸಿದ್ದಾನೆ.
25 José disse ao faraó: "O {duplo} sonho do faraó reduz-se a um só. Deus revelou ao faraó o que ele vai fazer.
26 ಒಳ್ಳೆಯ ಏಳು ಹಸುಗಳೇ ಏಳು ವರ್ಷಗಳು. ಒಳ್ಳೆಯ ಏಳು ತೆನೆಗಳೇ ಏಳು ವರ್ಷಗಳು. ಎರಡು ಕನಸುಗಳೂ ಒಂದೇ ಅರ್ಥವನ್ನು ಹೊಂದಿವೆ.
26 As sete belas vacas são sete anos, e as sete belas espigas, igualmente, sete anos; o sonho é um só.
27 ಬಡಕಲಾದ ಮತ್ತು ಕುರೂಪವಾದ ಏಳು ಹಸುಗಳು ಮತ್ತು ಕೆಟ್ಟುಹೋದ ಕಾಳಿನ ಏಳು ತೆನೆಗಳು, ದೇಶಕ್ಕೆ ಬರುವ ಏಳು ವರ್ಷಗಳ ಬರಗಾಲವನ್ನು ಸೂಚಿಸುತ್ತವೆ. ಈ ಏಳು ವರ್ಷಗಳು ಒಳ್ಳೆಯ ವರ್ಷಗಳ ನಂತರ ಬರುತ್ತವೆ.
27 As sete vacas magras e feias que saíram em seguida são também sete anos; e as sete espigas vazias e queimadas pelo vento do oriente serão sete anos de miséria.
28 ಮುಂದೆ ನಡೆಯಲಿರುವುದನ್ನು ದೇವರು ನಿಮಗೆ ತಿಳಿಸಿದ್ದಾನೆ. ನಾನು ಹೇಳಿದಂತೆಯೇ ಸಂಭವಿಸುವುದು.
28 É como eu disse ao faraó: Deus lhe revela o que vai fazer.
29 ನಿಮಗೆ ಏಳು ವರ್ಷಗಳ ಕಾಲ ಒಳ್ಳೆಯ ಬೆಳೆಯಾಗುವುದು; ಈಜಿಪ್ಟ್ ದೇಶದಲ್ಲೆಲ್ಲಾ ಊಟಕ್ಕೆ ಬೇಕಾದಷ್ಟು ಆಹಾರವಿರುವುದು.
29 Haverá sete anos de grande abundância para todo o Egito.
30 ಆದರೆ ಆ ಏಳು ವರ್ಷಗಳಾದ ಮೇಲೆ ದೇಶದಲ್ಲೆಲ್ಲಾ ಏಳು ವರ್ಷಗಳವರೆಗೆ ಬರಗಾಲವಿರುವುದು. ಆಗ ಈಜಿಪ್ಟಿನ ಜನರು ತಾವು ಮೊದಲು ಬೆಳೆದ ಆಹಾರವನ್ನೆಲ್ಲಾ ಮರೆತುಬಿಡುವರು. ಈ ಕ್ಷಾಮವು ದೇಶವನ್ನು ನಾಶಮಾಡುವುದು.
30 Virão em seguida sete anos de miséria que farão esquecer toda a abundância no Egito. A fome devastará o país.
31 ಮೊದಲಿನ ಸಮೃದ್ಧಿಯ ಗುರುತೇ ಜನರಿಗೆ ಕಾಣಸಿಗದು.
31 E a abundância do país não será mais notada, por causa da fome que se seguirá, porque será violenta.
32 “ಫರೋಹನೇ, ಒಂದೇ ವಿಷಯದ ಮೇಲೆ ಎರಡು ಕನಸುಗಳಾಗಿರುವುದರಿಂದ ದೇವರು ಇದನ್ನು ನಿಶ್ಚಯವಾಗಿಯೂ ಬೇಗನೆ ಬರಮಾಡಲಿದ್ದಾನೆ.
32 Se o sonho se repetiu duas vezes ao faraó, é que a coisa está bem decretada da parte de Deus, que vai apressar-se em executá-la.
33 ಆದ್ದರಿಂದ ತಾವು ತುಂಬ ಬುದ್ಧಿವಂತನೂ ವಿವೇಕಿಯೂ ಆಗಿರುವ ಒಬ್ಬನನ್ನು ಆರಿಸಿಕೊಂಡು ಅವನನ್ನು ಈಜಿಪ್ಟ್ ದೇಶದ ಮೇಲೆ ಆಡಳಿತಾಧಿಕಾರಿಯನ್ನಾಗಿ ನೇಮಿಸಬೇಕು.
33 Agora, pois, escolha o rei um homem sábio e prudente para pô-lo à testa do país.
34 ಅಲ್ಲದೆ ಜನರಿಂದ ಆಹಾರವನ್ನು ಶೇಖರಿಸುವುದಕ್ಕಾಗಿ ತಾವು ಸಂಗ್ರಹಕರನ್ನು ನೇಮಿಸಿ ಒಳ್ಳೆಯ ಏಳು ವರ್ಷಗಳಲ್ಲಿ ಪ್ರತಿಯೊಬ್ಬ ಬೆಳೆಗಾರನಿಂದಲೂ ಬೆಳೆಯ ಐದನೆ ಒಂದು ಭಾಗವನ್ನು ಕಂದಾಯ ರೂಪದಲ್ಲಿ ವಸೂಲಿ ಮಾಡಬೇಕು.
34 Nomeie também o faraó administradores no país, que recolham a quinta parte das colheitas do Egito, durante os sete anos de abundância.
35 ಸಂಗ್ರಹಕಾರರ ಮೂಲಕ ಆಹಾರಪದಾರ್ಥಗಳನ್ನೂ ದವಸಧಾನ್ಯಗಳನ್ನೂ ಶೇಖರಿಸಿ ನಿಮ್ಮ ಉಗ್ರಾಣಗಳಲ್ಲಿಟ್ಟು ನೋಡಿಕೊಳ್ಳಬೇಕು.
35 Eles ajuntarão todos os produtos destes bons anos que vêm, e armazenarão o trigo nas cidades, à disposição do faraó como provisões a conservar.
36 ಉಗ್ರಾಣಗಳಲ್ಲಿ ಸಾಕಷ್ಟು ಆಹಾರವಿರುವುದರಿಂದ ಈಜಿಪ್ಟಿನವರು ಬರಗಾಲದ ಏಳು ವರ್ಷಗಳಲ್ಲಿ ಆಹಾರವಿಲ್ಲದೆ ಸಾಯುವುದಿಲ್ಲ” ಎಂದು ಹೇಳಿದನು.
36 Estes mantimentos formarão para o país uma reserva em previsão dos sete anos de fome que assolarão o Egito. Dessa forma o país não será arruinado pela fome."
37 ಇದು ಫರೋಹನಿಗೂ ಅವನ ಎಲ್ಲಾ ಸೇವಕರಿಗೂ ಒಳ್ಳೆಯದಾಗಿ ಕಂಡುಬಂತು.
37 Essas palavras agradaram o faraó e toda a sua gente.
38 ಫರೋಹನು ತನ್ನ ಸೇವಕರಿಗೆ, “ಈ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಯೋಸೇಫನಿಗಿಂತಲೂ ಉತ್ತಮನಾದ ವ್ಯಕ್ತಿಯನ್ನು ಕಂಡುಕೊಳ್ಳಲು ಸಾಧ್ಯವೇ? ದೇವರಾತ್ಮನೇ ಇವನ ಸಂಗಡವಿದ್ದಾನೆ” ಎಂದು ಹೇಳಿದನು.
38 "Poderíamos, disse-lhes ele, encontrar um homem que tenha, tanto como este, o espírito de Deus?"
39 ಫರೋಹನು ಯೋಸೇಫನಿಗೆ, “ದೇವರು ನಿನಗೆ ಈ ಎಲ್ಲಾ ವಿಷಯಗಳನ್ನು ತೋರಿಸಿರುವುದರಿಂದ ನಿನಗಿಂತ ಬುದ್ಧಿವಂತನೂ ವಿವೇಕಿಯೂ ಇಲ್ಲವೇ ಇಲ್ಲ.
39 E disse em seguida a José: "Pois que Deus te revelou tudo isto, não haverá ninguém tão prudente e tão sábio como tu.
40 ಆದ್ದರಿಂದ ನಾನು ನಿನ್ನನ್ನು ದೇಶದ ರಾಜ್ಯಪಾಲನನ್ನಾಗಿ ನೇಮಿಸುವೆನು; ಜನರು ನಿನ್ನ ಆಜ್ಞೆಗಳಿಗೆಲ್ಲಾ ವಿಧೇಯರಾಗುವರು. ಈ ದೇಶದಲ್ಲಿ ನಿನಗೆ ಅಧಿಪತಿಯಾಗಿರುವವನು ನಾನೊಬ್ಬನೇ” ಎಂದು ಹೇಳಿದನು.
40 Tu mesmo serás posto à frente de toda a minha casa, e todo o meu povo obedecerá à tua palavra: só o trono me fará maior do que tu."
41 ಫರೋಹನು ಯೋಸೇಫನಿಗೆ, “ನಾನು ನಿನ್ನನ್ನು ಈಜಿಪ್ಟ್ ದೇಶಕ್ಕೆಲ್ಲ ರಾಜ್ಯಪಾಲನನ್ನಾಗಿ ನೇಮಿಸುವೆನು” ಎಂದು ಹೇಳಿ
41 "Vês, disse-lhe ainda, eis que te ponho à testa de todo o Egito."
42 ರಾಜಮುದ್ರೆಯನ್ನು ಹೊಂದಿದ್ದ ತನ್ನ ಉಂಗುರವನ್ನು ಕೊಟ್ಟನು; ಧರಿಸಿಕೊಳ್ಳಲು ಒಳ್ಳೆಯ ನಾರುಬಟ್ಟೆಯ ನಿಲುವಂಗಿಯನ್ನು ಕೊಟ್ಟನು; ಕೊರಳಿಗೆ ಚಿನ್ನದ ಸರವನ್ನು ಹಾಕಿದನು.
42 E o faraó, tirando o anel de sua mão, pôs na mão de José; e o fez revestir-se de vestes de linho fino e meteu-lhe ao pescoço um colar de ouro.
43 ಫರೋಹನು ಯೋಸೇಫನಿಗೆ ಎರಡನೆಯ ರಾಜರಥವನ್ನು ಸಂಚಾರಕ್ಕಾಗಿ ಕೊಟ್ಟನು. ವಿಶೇಷಕಾವಲುಗಾರರು ಅವನ ರಥದ ಮುಂದೆ ನಡೆದುಹೋಗುತ್ತಾ “ಪ್ರಜೆಗಳೇ, ಯೋಸೇಫನಿಗೆ ತಲೆಬಾಗಿ ನಮಸ್ಕರಿಸಿರಿ” ಎಂದು ಪ್ರಕಟಿಸಿದರು. ಹೀಗೆ ಯೋಸೇಫನು ಈಜಿಪ್ಟಿಗೆಲ್ಲಾ ರಾಜ್ಯಪಾಲನಾದನು.
43 E, fazendo-o montar no segundo dos seus carros, mandou que se clamasse diante dele: "Ajoelhai-vos!" É assim que ele foi posto à frente de todo o Egito,
44 ಫರೋಹನು ಅವನಿಗೆ, “ನಾನು ರಾಜ ಫರೋಹ. ಆದ್ದರಿಂದ ನನಗೆ ಇಷ್ಟವಾದದ್ದನ್ನು ಮಾಡುವೆನು. ಆದರೆ ನಿನ್ನ ಅಪ್ಪಣೆಯಿಲ್ಲದೆ ಈಜಿಪ್ಟಿನ ಬೇರೆ ಯಾರೂ ಕೈಯೆತ್ತಲೂ ಸಾಧ್ಯವಿಲ್ಲ, ಕಾಲನ್ನು ಚಲಿಸಲೂ ಸಾಧ್ಯವಿಲ್ಲ” ಎಂದು ಹೇಳಿದನು.
44 e o faraó disse-lhe: "Sou eu o faraó: sem tua permissão não se moverá a mão nem o pé em toda a terra do Egito."
45 ಫರೋಹನು ಯೋಸೇಫನಿಗೆ, ಸಾಫ್ನತ್ಪನ್ನೇಹ ಎಂಬ ಹೆಸರನ್ನು ಕೊಟ್ಟನು. ಇದಲ್ಲದೆ ಫರೋಹನು ಯೋಸೇಫನಿಗೆ ಆಸನತ್ ಎಂಬಾಕೆಯನ್ನು ಮದುವೆ ಮಾಡಿಸಿದನು. ಆಕೆ ಓನ್ ನಗರದ ಆಚಾರ್ಯನಾಗಿದ್ದ ಫೋಟೀಫರನ ಮಗಳು. ಹೀಗೆ ಯೋಸೇಫನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನಾದನು.
45 O faraó chamou a José Tsafenat-Paneac, e deu-lhe por mulher Asenet, filha de Putifar, sacerdote de On.
46 ಯೋಸೇಫನು ಈಜಿಪ್ಟ್ ರಾಜನ ಸೇವೆಯನ್ನು ಪ್ರಾರಂಭಿಸಿದಾಗ ಮೂವತ್ತು ವರ್ಷದವನಾಗಿದ್ದನು. ಯೋಸೇಫನು ಈಜಿಪ್ಟ್ ದೇಶದಲ್ಲೆಲ್ಲಾ ಸಂಚರಿಸಿದನು.
46 José tinha trinta anos quando se apresentou diante do faraó, o rei do Egito. Ele retirou-se da casa do faraó e percorreu todo o país.
47 ಏಳು ಒಳ್ಳೆಯ ವರ್ಷಗಳಲ್ಲಿ ದೇಶದಲ್ಲಿ ಬೆಳೆಯು ಚೆನ್ನಾಗಿ ಬೆಳೆಯಿತು.
47 A terra produziu abundantemente durante os sete anos de fertilidade.
48 ಈಜಿಪ್ಟಿನಲ್ಲಿ ಯೋಸೇಫನು ಆ ಏಳು ವರ್ಷಗಳ ಕಾಲದಲ್ಲಿ ಆಹಾರವನ್ನು ಸಂಗ್ರಹಿಸಿ ನಗರಗಳ ಉಗ್ರಾಣಗಳಲ್ಲಿಟ್ಟನು. ಪ್ರತಿಯೊಂದು ನಗರದ ಸುತ್ತುಮುತ್ತಲಿನ ಹೊಲಗಳಲ್ಲಿ ಬೆಳೆದ ದವಸಧಾನ್ಯವನ್ನು ಆಯಾ ನಗರಗಳಲ್ಲಿ ಕೂಡಿಸಿಟ್ಟನು.
48 José ajuntou todo o produto destes sete anos no Egito e os pôs em reserva nas cidades, e os mantimentos dos campos que estavam ao redor de cada cidade, guardou-os na mesma cidade.
49 ಯೋಸೇಫನು ಬಹಳ ದವಸಧಾನ್ಯಗಳನ್ನು ಸಂಗ್ರಹಿಸಿದ್ದರಿಂದ ಸಮುದ್ರದ ಮರಳಿನ ರಾಶಿಯೆಂಬಂತೆ ತೋರಿತು; ಲೆಕ್ಕಿಸುವುದಕ್ಕೂ ಅಸಾಧ್ಯವಾಯಿತು.
49 José ajuntou trigo como a areia do mar, em tal quantidade que se não podia contar, pois que ela excedia a toda a medida.
50 ಯೋಸೇಫನ ಹೆಂಡತಿ ಆಸನತ್ ಓನ್ ನಗರದಲ್ಲಿ ಆಚಾರ್ಯನಾಗಿದ್ದ ಪೋಟೀಫೆರನ ಮಗಳು. ಬರಗಾಲದ ಮೊದಲನೆಯ ವರ್ಷ ಬರುವುದಕ್ಕಿಂತ ಮೊದಲೇ ಯೋಸೇಫನಿಗೆ ಆಸನತಳಲ್ಲಿ ಇಬ್ಬರು ಗಂಡುಮಕ್ಕಳು ಹುಟ್ಟಿದರು.
50 Antes que viesse o ano de fome, nasceram a José dois filhos, que lhe deu Asenet, filha de Putifar, sacerdote de On.
51 ಮೊದಲನೆಯ ಮಗನು ಹುಟ್ಟಿದಾಗ, “ನನ್ನ ಎಲ್ಲಾ ಕಷ್ಟಗಳನ್ನೂ ನನ್ನ ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ನನಗೆ ಸಹಾಯ ಮಾಡಿದನು” ಎಂದು ಹೇಳಿ ಯೋಸೇಫನು ಆ ಮಗುವಿಗೆ, “ಮನಸ್ಸೆ” ಎಂದು ಹೆಸರಿಟ್ಟನು.
51 José chamou ao primeiro Manassés, "porque, dizia ele, Deus fez-me esquecer de todo o meu trabalho e de toda a minha família."
52 ಎರಡನೆ ಮಗನು ಹುಟ್ಟಿದಾಗ, “ನನಗೆ ಕಷ್ಟ ಬಂದ ದೇಶದಲ್ಲೇ ದೇವರು ನನ್ನನ್ನು ಅಭಿವೃದ್ಧಿಪಡಿಸಿದನು” ಎಂದು ಹೇಳಿ, ಆ ಮಗುವಿಗೆ, “ಎಫ್ರಾಯೀಮ್” ಎಂದು ಹೆಸರಿಟ್ಟನು.
52 Chamou ao segundo Efraim, "porque, disse ele, Deus tornou-me fecundo na terra de minha aflição."
53 ಈಜಿಪ್ಟಿನಲ್ಲಿ ಸಮೃದ್ಧಿಕರವಾದ ಏಳು ವರ್ಷಗಳು ಮುಗಿದ ಮೇಲೆ
53 Tendo acabado os sete anos de abundância que houve no Egito,
54 ಯೋಸೇಫನು ಹೇಳಿದ್ದಂತೆಯೇ ಕ್ಷಾಮದ ಏಳು ವರ್ಷಗಳು ಆರಂಭಗೊಂಡವು. ಕ್ಷಾಮವು ಸುತ್ತಮುತ್ತಲಿನ ಪ್ರದೇಶಗಳಿಗೆಲ್ಲಾ ಹಬ್ಬಿಕೊಂಡಿತು. ಈಜಿಪ್ಟಿನಲ್ಲಿ ಮಾತ್ರ ಆಹಾರ ದೊರಕುತ್ತಿತ್ತು.
54 os sete anos de miséria começaram, assim como o tinha predito José. A fome assolou todos os países, mas havia pão em toda a terra do Egito.
55 ಬರಗಾಲವು ಪ್ರಾರಂಭವಾದಾಗ ಜನರು ಆಹಾರಕ್ಕಾಗಿ ಫರೋಹನನ್ನು ಬೇಡಿಕೊಂಡರು. ಫರೋಹನು ಈಜಿಪ್ಟಿನ ಜನರಿಗೆ, “ಯೋಸೇಫನನ್ನು ಕೇಳಿರಿ; ಅವನು ಹೇಳಿದಂತೆ ಮಾಡಿರಿ” ಎಂದು ಹೇಳಿದನು.
55 Em seguida houve fome também no Egito, e o povo clamou ao faraó pedindo pão. Este disse a todos os egípcios: "Ide a José, e fazei o que ele vos disser."
56 ಎಲ್ಲೆಲ್ಲಿಯೂ ಬರಗಾಲವಾದಾಗ, ಯೋಸೇಫನು ಉಗ್ರಾಣಗಳನ್ನು ತೆಗೆಸಿ ದವಸಧಾನ್ಯಗಳನ್ನು ಜನರಿಗೆ ಮಾರಾಟ ಮಾಡಿಸಿದನು. ಈಜಿಪ್ಟಿನಲ್ಲಿ ಬರವು ಭೀಕರವಾಗಿತ್ತು.
56 Como a fome assolasse toda a terra, José abriu todos os celeiros e vendeu víveres aos egípcios. Mas a penúria cresceu no Egito.
57 ಭೂಲೋಕದಲ್ಲೆಲ್ಲಾ ಕ್ಷಾಮವು ಭಯಂಕರವಾಗಿದ್ದುದರಿಂದ ಎಲ್ಲಾ ದೇಶಗಳವರು ಯೋಸೇಫನಿಂದ ಆಹಾರವನ್ನು ಪಡೆದುಕೊಳ್ಳುವುದಕ್ಕಾಗಿ ಈಜಿಪ್ಟಿಗೆ ಬಂದರು.
57 E de toda a terra vinha-se ao Egito comprar trigo a José, porque a fome era violenta em toda a terra.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Gênesis 41, comparar traduções ou montar um estudo — tudo direto pelo WhatsApp.