Gênesis 42
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARIB
1 ಈಜಿಪ್ಟಿನಲ್ಲಿ ದವಸಧಾನ್ಯಗಳಿರುವುದಾಗಿ ಕಾನಾನಿನಲ್ಲಿದ್ದ ಯಾಕೋಬನಿಗೆ ತಿಳಿಯಿತು. ಆದ್ದರಿಂದ ಯಾಕೋಬನು ತನ್ನ ಗಂಡುಮಕ್ಕಳಿಗೆ, “ನಾವು ಇಲ್ಲಿ ಏನೂ ಮಾಡದೆ ಕುಳಿತುಕೊಂಡಿರುವುದೇಕೆ?
1 Ora, Jacó soube que havia trigo no Egito, e disse a seus filhos: Por que estais olhando uns para os outros?
2 ಈಜಿಪ್ಟಿನಲ್ಲಿ ದವಸಧಾನ್ಯಗಳಿರುವುದಾಗಿ ನಾನು ಕೇಳಿದ್ದೇನೆ. ಆದ್ದರಿಂದ ನಾವು ಅಲ್ಲಿಗೆ ಹೋಗಿ ನಮ್ಮ ಆಹಾರವನ್ನು ಕೊಂಡುಕೊಳ್ಳೋಣ. ಆಗ ನಾವು ಸಾಯದೆ ಬದುಕಿಕೊಳ್ಳುವೆವು” ಎಂದು ಹೇಳಿದನು.
2 Disse mais: Tenho ouvido que há trigo no Egito; descei até lá, e de lá comprai-o para nós, a fim de que vivamos e não morramos.
3 ಆದ್ದರಿಂದ ಯೋಸೇಫನ ಹತ್ತು ಮಂದಿ ಸಹೋದರರು ದವಸಧಾನ್ಯಗಳನ್ನು ಕೊಂಡುಕೊಳ್ಳಲು ಈಜಿಪ್ಟಿಗೆ ಹೋದರು.
3 Então desceram os dez irmãos de José, para comprarem trigo no Egito.
4 ಯಾಕೋಬನು ಬೆನ್ಯಾಮೀನನನ್ನು ಕಳುಹಿಸಲಿಲ್ಲ. (ಬೆನ್ಯಾಮೀನನು ಯೋಸೇಫನ ಒಡಹುಟ್ಟಿದ ಒಬ್ಬನೇ ತಮ್ಮನಾಗಿದ್ದನು.) ಬೆನ್ಯಾಮೀನನಿಗೆ ಏನಾದರೂ ಕೇಡಾಗಬಹುದೆಂಬ ಭಯ ಯಾಕೋಬನಿಗಿತ್ತು.
4 Mas a Benjamim, irmão de José, não enviou Jacó com os seus irmãos, pois disse: Para que, porventura, não lhe suceda algum desastre.
5 ಕಾನಾನಿನಲ್ಲಿ ಬರಗಾಲ ಭೀಕರವಾಗಿತ್ತು. ಆದ್ದರಿಂದ ದವಸಧಾನ್ಯಗಳನ್ನು ಕೊಂಡುಕೊಳ್ಳಲು ಅನೇಕ ಜನರು ಕಾನಾನಿನಿಂದ ಈಜಿಪ್ಟಿಗೆ ಹೋದರು; ಇಸ್ರೇಲನ ಗಂಡುಮಕ್ಕಳೂ ಅವರೊಂದಿಗೆ ಹೋದರು.
5 Assim entre os que iam lá, foram os filhos de Israel para comprar, porque havia fome na terra de Canaã.
6 ಯೋಸೇಫನು ಈಜಿಪ್ಟಿನ ರಾಜ್ಯಪಾಲನಾಗಿದ್ದರಿಂದ ಅವನ ಅನುಮತಿಯಿಲ್ಲದೆ ದವಸಧಾನ್ಯಗಳನ್ನು ಕೊಂಡುಕೊಳ್ಳಲು ಯಾರಿಗೂ ಸಾಧ್ಯವಿರಲಿಲ್ಲ. ಯೋಸೇಫನ ಸಹೋದರರು ಬಂದು ಅವನ ಮುಂದೆ ಅಡ್ಡಬಿದ್ದರು.
6 José era o governador da terra; era ele quem vendia a todo o povo da terra; e vindo os irmãos de José, prostraram-se diante dele com o rosto em terra.
7 ಯೋಸೇಫನು ಅವರನ್ನು ಕಂಡು, ತನ್ನ ಅಣ್ಣಂದಿರೆಂದು ತಿಳಿದುಕೊಂಡನು. ಆದರೂ ಅವನು ತನಗೆ ಅವರು ಗೊತ್ತೇ ಇಲ್ಲದಂತೆ ಅವರೊಂದಿಗೆ ಕಟುವಾಗಿ ಮಾತಾಡಿ, ಅವರಿಗೆ, “ನೀವು ಎಲ್ಲಿಂದ ಬಂದಿರುವಿರಿ?” ಎಂದು ಕೇಳಿದನು. ಸಹೋದರರು, “ಆಹಾರವನ್ನು ಕೊಂಡುಕೊಳ್ಳಲು ಕಾನಾನ್ ದೇಶದಿಂದ ಬಂದಿದ್ದೇವೆ” ಎಂದು ಉತ್ತರಿಸಿದರು.
7 José, vendo seus irmãos, reconheceu-os; mas portou-se como estranho para com eles, falou-lhes asperamente e perguntou-lhes: Donde vindes? Responderam eles: Da terra de Canaã, para comprarmos mantimento.
8 ಯೋಸೇಫನು ತನ್ನ ಅಣ್ಣಂದಿರನ್ನು ಗುರುತಿಸಿದರೂ ಅವನ ಅಣ್ಣಂದಿರು ಯೋಸೇಫನನ್ನು ಗುರುತಿಸಲಿಲ್ಲ.
8 José, pois, reconheceu seus irmãos, mas eles não o reconheceram.
9 ಆಗ ಯೋಸೇಫನು ತನ್ನ ಅಣ್ಣಂದಿರ ಬಗ್ಗೆ ತಾನು ಕಂಡಿದ್ದ ಕನಸುಗಳ ಬಗ್ಗೆ ಜ್ಞಾಪಿಸಿಕೊಂಡು
9 Lembrou-se então José dos sonhos que tivera a respeito deles, e disse-lhes: Vós sois espias, e viestes para ver a nudez da terra.
10 ಸಹೋದರರು ಅವನಿಗೆ, “ಇಲ್ಲ! ಸ್ವಾಮೀ, ನಿಮ್ಮ ಸೇವಕರಾದ ನಾವು ಆಹಾರವನ್ನು ಕೊಂಡುಕೊಳ್ಳಲು ಬಂದಿದ್ದೇವೆ.
10 Responderam-lhe eles: Não, senhor meu; mas teus servos vieram comprar mantimento.
11 ನಾವೆಲ್ಲರೂ ಸಹೋದರರು. ನಮ್ಮೆಲ್ಲರಿಗೂ ಒಬ್ಬನೇ ತಂದೆ. ನಾವು ಯಥಾರ್ಥವಾಗಿ ಬಂದವರೇ ಹೊರತು ಗೂಢಚಾರರಲ್ಲ” ಎಂದು ಹೇಳಿದರು.
11 Nós somos todos filhos de um mesmo homem; somos homens de retidão; os teus servos não são espias.
12 ಯೋಸೇಫನು ಅವರಿಗೆ, “ಇಲ್ಲ! ನಮ್ಮ ದುರ್ಬಲ ಸ್ಥಳಗಳನ್ನು ಕಂಡುಕೊಳ್ಳುವುದಕ್ಕೆ ನೀವು ಬಂದಿದ್ದೀರಿ” ಎಂದು ಹೇಳಿದನು.
12 Replicou-lhes: Não; antes viestes para ver a nudez da terra.
13 ಅದಕ್ಕೆ ಅವರು, “ಇಲ್ಲ, ನಾವೆಲ್ಲಾ ಸಹೋದರರು. ನಮ್ಮ ಕುಟುಂಬದಲ್ಲಿ ಹನ್ನೆರಡು ಮಂದಿ ಅಣ್ಣತಮ್ಮಂದಿರು. ನಮ್ಮೆಲ್ಲರಿಗೂ ಒಬ್ಬನೇ ತಂದೆ. ನಮ್ಮ ಕಿರಿಯ ತಮ್ಮನು ನಮ್ಮ ತಂದೆಯೊಂದಿಗೆ ಮನೆಯಲ್ಲಿದ್ದಾನೆ; ಇನ್ನೊಬ್ಬ ತಮ್ಮನು ಹೊರಟುಹೋದನು. ತಮ್ಮ ಸೇವಕರಾದ ನಾವು ಕಾನಾನ್ ದೇಶದಿಂದ ಬಂದವರು” ಎಂದು ಹೇಳಿದರು.
13 Mas eles disseram: Nós, teus servos, somos doze irmãos, filhos de um homem da terra de Canaã; o mais novo está hoje com nosso pai, e outro já não existe.
14 ಯೋಸೇಫನು ಅವರಿಗೆ, “ಇಲ್ಲ, ನಾನು ಹೇಳಿದಂತೆ ನೀವು ಗೂಢಚಾರರೇ.
14 Respondeu-lhe José: É assim como vos disse; sois espias.
15 ಆದರೆ ನೀವು ಹೇಳುತ್ತಿರುವುದು ಸತ್ಯವಾಗಿದ್ದರೆ ನಿಮ್ಮ ಚಿಕ್ಕ ತಮ್ಮನು ಇಲ್ಲಿಗೆ ಬರಬೇಕು; ಇಲ್ಲವಾದರೆ ಫರೋಹನ ಜೀವದಾಣೆ, ಅಲ್ಲಿಯವರೆಗೂ ನೀವು ಈ ಸ್ಥಳದಿಂದ ಹೋಗಕೂಡದು.
15 Nisto sereis provados: Pela vida de Faraó, não saireis daqui, a menos que venha para cá vosso irmão mais novo.
16 ಆದ್ದರಿಂದ ನಿಮ್ಮಲ್ಲೊಬ್ಬನು ಹಿಂತಿರುಗಿ ಹೋಗಿ ನಿಮ್ಮ ಚಿಕ್ಕ ತಮ್ಮನನ್ನು ಇಲ್ಲಿಗೆ ಕರೆದುಕೊಂಡು ಬರಬೇಕು. ಅಲ್ಲಿಯವರೆಗೆ ಉಳಿದವರೆಲ್ಲರೂ ಇಲ್ಲಿ ಸೆರೆಮನೆಯಲ್ಲಿರಬೇಕು. ನೀವು ಹೇಳುತ್ತಿರುವುದು ಸತ್ಯವೋ ಸುಳ್ಳೋ ಆಗ ನನಗೆ ಗೊತ್ತಾಗುವುದು. ಆದರೆ ನೀವಂತೂ ಗೂಢಚಾರರೆಂದು ತಿಳಿದುಕೊಂಡಿದ್ದೇನೆ” ಎಂದು ಹೇಳಿದನು.
16 Enviai um dentre vós, que traga vosso irmão, mas vós ficareis presos, a fim de serem provadas as vossas palavras, se há verdade convosco; e se não, pela vida de Faraó, vós sois espias.
17 ಆಮೇಲೆ ಯೋಸೇಫನು ಅವರೆಲ್ಲರನ್ನು ಮೂರು ದಿನಗಳವರೆಗೆ ಸೆರೆಮನೆಯಲ್ಲಿಟ್ಟನು.
17 E meteu-os juntos na prisão por três dias.
18 ಮೂರು ದಿನಗಳಾದ ಮೇಲೆ ಯೋಸೇಫನು ಅವರಿಗೆ, “ನಾನು ದೇವರಲ್ಲಿ ಭಯಭಕ್ತಿಯುಳ್ಳವನು. ನೀವು ಈ ಕಾರ್ಯವೊಂದನ್ನು ಮಾಡಿದರೆ ನಾನು ನಿಮ್ಮನ್ನು ಉಳಿಸುತ್ತೇನೆ;
18 Ao terceiro dia disse-lhes José: Fazei isso, e vivereis; porque eu temo a Deus.
19 ನೀವು ಯಥಾರ್ಥವಂತರಾಗಿದ್ದರೆ, ನಿಮ್ಮ ಸಹೋದರರಲ್ಲಿ ಒಬ್ಬನನ್ನು ಸೆರೆಮನೆಯಲ್ಲಿಡುತ್ತೇನೆ; ಉಳಿದವರು ನಿಮ್ಮ ಜನರಿಗಾಗಿ ದವಸಧಾನ್ಯಗಳನ್ನು ತೆಗೆದುಕೊಂಡು ಹೋಗಬಹುದು.
19 Se sois homens de retidão, que fique um dos irmãos preso na casa da vossa prisão; mas ide vós, levai trigo para a fome de vossas casas,
20 ಆಮೇಲೆ ನಿಮ್ಮ ಕಿರಿಯ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬಂದರೆ ನೀವು ಹೇಳುತ್ತಿರುವುದು ಸತ್ಯವೆಂದು ತಿಳಿದುಕೊಳ್ಳುವೆನು” ಎಂದು ಹೇಳಿದನು.
20 e trazei-me o vosso irmão mais novo; assim serão verificadas vossas palavras, e não morrereis. E eles assim fizeram.
21 ಅವರು ಒಬ್ಬರಿಗೊಬ್ಬರು, “ನಾವು ನಮ್ಮ ತಮ್ಮನಾದ ಯೋಸೇಫನಿಗೆ ಮಾಡಿದ ಕೆಟ್ಟಕಾರ್ಯಕ್ಕಾಗಿ ಈ ಶಿಕ್ಷೆಯನ್ನು ಅನುಭವಿಸುತ್ತಿದ್ದೇವೆ. ಪ್ರಾಣಸಂಕಟದಲ್ಲಿದ್ದ ಅವನು ತನ್ನನ್ನು ಕಾಪಾಡುವಂತೆ ನಮ್ಮನ್ನು ಬೇಡಿಕೊಂಡರೂ ನಾವು ಅವನ ಮೊರೆಯನ್ನು ತಿರಸ್ಕರಿಸಿದೆವು. ಆದ್ದರಿಂದ ಈಗ ಪ್ರಾಣಸಂಕಟಕ್ಕೀಡಾಗಿದ್ದೇವೆ” ಎಂದು ಮಾತಾಡಿಕೊಂಡರು.
21 Então disseram uns aos outros: Nós, na verdade, somos culpados no tocante a nosso irmão, porquanto vimos a angústia da sua alma, quando nos rogava, e não o quisemos atender; é por isso que vem sobre nós esta angústia.
22 ಅದಕ್ಕೆ ರೂಬೇನನು ಅವರಿಗೆ, “ಆ ಹುಡುಗನಿಗೆ ಕೇಡು ಮಾಡಬೇಡಿ ಎಂದು ನಾನು ನಿಮಗೆ ಹೇಳಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ. ಆದ್ದರಿಂದ ಈಗ ನಾವು ಅವನ ಮರಣಕ್ಕೆ ತಕ್ಕ ಶಿಕ್ಷೆ ಹೊಂದುತ್ತಿದ್ದೇವೆ” ಎಂದು ಹೇಳಿದನು.
22 Respondeu-lhes Rúben: Não vos dizia eu: Não pequeis contra o menino; Mas não quisestes ouvir; por isso agora é requerido de nós o seu sangue.
23 ಯೋಸೇಫನು ತನ್ನ ಸಹೋದರರೊಂದಿಗೆ ಭಾಷಾಂತರಕಾರನ ಮೂಲಕ ಮಾತಾಡುತ್ತಿದ್ದನು. ಆದ್ದರಿಂದ ಆ ಸಹೋದರರು ತಮ್ಮ ಭಾಷೆ ಯೋಸೇಫನಿಗೆ ಅರ್ಥವಾಗುವುದಿಲ್ಲವೆಂದು ತಿಳಿದುಕೊಂಡಿದ್ದರು. ಆದರೆ ಯೋಸೇಫನಿಗೆ ಅವರ ಮಾತುಗಳೆಲ್ಲಾ ಅರ್ಥವಾಯಿತು.
23 E eles não sabiam que José os entendia, porque havia intérprete entre eles.
24 ಅವರ ಮಾತುಗಳಿಂದ ಅವನಿಗೆ ತುಂಬ ದುಃಖವಾಯಿತು. ಆದ್ದರಿಂದ ಯೋಸೇಫನು ಅವರ ಬಳಿಯಿಂದ ಸ್ವಲ್ಪದೂರ ಹೋಗಿ ಕಣ್ಣೀರು ಸುರಿಸಿ ಹಿಂತಿರುಗಿ ಬಂದನು. ಬಳಿಕ ಸಹೋದರರಲ್ಲಿ ಒಬ್ಬನಾದ ಸಿಮೆಯೋನನನ್ನು ಅವರ ಕಣ್ಣೆದುರಿನಲ್ಲೇ ಬಂಧಿಸಿದನು.
24 Nisto José se retirou deles e chorou. Depois tornou a eles, falou-lhes, e tomou a Simeão dentre eles, e o amarrou perante os seus olhos.
25 ಆಮೇಲೆ ಯೋಸೇಫನು ತನ್ನ ಸೇವಕರಿಗೆ, “ಅವರ ಚೀಲಗಳಿಗೆ ದವಸಧಾನ್ಯಗಳನ್ನು ತುಂಬಿರಿ” ಎಂದು ಹೇಳಿದನು. ಈ ದವಸಧಾನ್ಯಗಳಿಗೆ ಸಹೋದರರು ಹಣವನ್ನು ಪಾವತಿ ಮಾಡಿದರೂ ಯೋಸೇಫನು ಆ ಹಣವನ್ನು ಇಟ್ಟುಕೊಳ್ಳಲಿಲ್ಲ. ಅವನು ಆ ಹಣವನ್ನು ಅವರವರ ದವಸಧಾನ್ಯಗಳ ಚೀಲಗಳಲ್ಲಿ ಇಡಿಸಿದನು. ಅಲ್ಲದೆ ಪ್ರಯಾಣಕ್ಕೆ ಬೇಕಾದ ವಸ್ತುಗಳನ್ನೂ ಅವರಿಗೆ ಕೊಟ್ಟನು.
25 Então ordenou José que lhes enchessem de trigo os sacos, que lhes restituíssem o dinheiro a cada um no seu saco, e lhes dessem provisões para o caminho. E assim lhes foi feito.
26 ಸಹೋದರರು ದವಸಧಾನ್ಯಗಳನ್ನು ಕತ್ತೆಗಳ ಮೇಲೆ ಹೇರಿಸಿಕೊಂಡು ಅಲ್ಲಿಂದ ಹೊರಟರು.
26 Eles, pois, carregaram o trigo sobre os seus jumentos, e partiram dali.
27 ಆ ರಾತ್ರಿ ಸಹೋದರರು ಒಂದು ಸ್ಥಳದಲ್ಲಿ ಇಳಿದುಕೊಂಡರು. ಸಹೋದರರಲ್ಲಿ ಒಬ್ಬನು ಕತ್ತೆಗೋಸ್ಕರ ಸ್ವಲ್ಪ ದವಸಧಾನ್ಯಗಳನ್ನು ತೆಗೆದುಕೊಳ್ಳಲು ತನ್ನ ಚೀಲವನ್ನು ಬಿಚ್ಚಿದಾಗ ತಾನು ಪಾವತಿ ಮಾಡಿದ್ದ ಹಣವು ಚೀಲದಲ್ಲಿರುವುದನ್ನು ನೋಡಿದನು.
27 Quando um deles abriu o saco, para dar forragem ao seu jumento na estalagem, viu o seu dinheiro, pois estava na boca do saco.
28 ಅವನು ತನ್ನ ಉಳಿದ ಸಹೋದರರಿಗೆ, “ನೋಡಿ, ನಾನು ದವಸಧಾನ್ಯಗಳಿಗೆ ಕೊಟ್ಟ ಹಣ ಇಲ್ಲೇ ಇದೆ. ಯಾರೋ ಒಬ್ಬನು ಹಣವನ್ನು ಮತ್ತೆ ನನ್ನ ಚೀಲದಲ್ಲಿ ಇಟ್ಟಿರುವನು” ಎಂದು ಹೇಳಿದನು. ಸಹೋದರರಿಗೆ ತುಂಬ ಭಯವಾಯಿತು. ಅವರು ಒಬ್ಬರಿಗೊಬ್ಬರು, “ದೇವರು ನಮಗೆ ಮಾಡುತ್ತಿರುವುದೇನು?” ಎಂದು ಮಾತಾಡಿಕೊಂಡರು.
28 E disse a seus irmãos: Meu dinheiro foi-me devolvido; ei-lo aqui no saco. Então lhes desfaleceu o coração e, tremendo, viravam-se uns para os outros, dizendo: Que é isto que Deus nos tem feito?
29 ಸಹೋದರರು ಕಾನಾನ್ ದೇಶದಲ್ಲಿದ್ದ ತಮ್ಮ ತಂದೆಯಾದ ಯಾಕೋಬನ ಬಳಿಗೆ ಹೋದರು. ನಡೆದ ಸಂಗತಿಗಳನ್ನೆಲ್ಲಾ ಯಾಕೋಬನಿಗೆ ಹೇಳುತ್ತಾ,
29 Depois vieram para Jacó, seu pai, na terra de Canaã, e contaram-lhe tudo o que lhes acontecera, dizendo:
30 “ಆ ದೇಶದ ರಾಜ್ಯಪಾಲನು ನಮ್ಮನ್ನು ಗೂಢಚಾರರೆಂದು ಭಾವಿಸಿ ನಮ್ಮೊಂದಿಗೆ ಒರಟಾಗಿ ಮಾತನಾಡಿದನು.
30 O homem, o senhor da terra, falou-nos asperamente, e tratou-nos como espias da terra;
31 ನಾವು ಅವನಿಗೆ, ‘ನಾವು ಯಥಾರ್ಥವಂತರು; ಗೂಢಚಾರರಲ್ಲ’ ಎಂದು ಹೇಳಿದೆವು.
31 mas dissemos-lhe: Somos homens de retidão; não somos espias;
32 ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರೆಂದೂ ನಮಗೆ ಒಬ್ಬನೇ ತಂದೆಯೆಂದೂ ಅವನಿಗೆ ಹೇಳಿದೆವು. ನಮ್ಮ ಒಬ್ಬ ತಮ್ಮನು ಸತ್ತುಹೋದನೆಂದೂ ನಮ್ಮ ಕಿರಿಯ ತಮ್ಮನು ಕಾನಾನ್ ದೇಶದಲ್ಲಿರುವ ನಮ್ಮ ಮನೆಯಲ್ಲಿರುವನೆಂದೂ ಅವನಿಗೆ ಹೇಳಿದೆವು.
32 somos doze irmãos, filhos de nosso pai; um já não existe e o mais novo está hoje com nosso pai na terra de Canaã.
33 “ಆಗ ಆ ದೇಶದ ರಾಜ್ಯಪಾಲನು, ‘ನೀವು ಯಥಾರ್ಥವಂತರೆಂದು ತೋರಿಸಬೇಕಾದರೆ ನಿಮ್ಮ ಸಹೋದರರಲ್ಲಿ ಒಬ್ಬನನ್ನು ನನ್ನ ಬಳಿಯಲ್ಲಿ ಬಿಟ್ಟು ನಿಮ್ಮ ಕುಟುಂಬಗಳಿಗೆ ದವಸಧಾನ್ಯಗಳನ್ನು ತೆಗೆದುಕೊಂಡು ಹೋಗಿರಿ.
33 Respondeu-nos o homem, o senhor da terra: Nisto conhecerei que vós sois homens de retidão: Deixai comigo um de vossos irmãos, levai trigo para a fome de vossas casas, e parti,
34 ಆಮೇಲೆ ನಿಮ್ಮ ಕಿರಿಯ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ. ಆಗ ನೀವು ಯಥಾರ್ಥರಾದವರೋ ಗೂಢಚಾರರೋ ಎಂದು ಗೊತ್ತಾಗುವುದು. ನೀವು ಸತ್ಯವನ್ನು ಹೇಳಿದ್ದರೆ ನಿಮ್ಮ ಸಹೋದರನನ್ನು ನಿಮಗೆ ಒಪ್ಪಿಸುವೆನು; ನಮ್ಮ ದೇಶದಲ್ಲಿ ಆಹಾರವನ್ನು ಕೊಳ್ಳಲು ನಿಮಗೆ ಯಾವ ತಡೆಯೂ ಇರುವುದಿಲ್ಲ’ ಎಂದು ಹೇಳಿದನು” ಎಂದರು.
34 e trazei-me vosso irmão mais novo; assim saberei que não sois espias, mas homens de retidão; então vos entregarei o vosso irmão e negociareis na terra.
35 ಬಳಿಕ ಸಹೋದರರು ತಮ್ಮ ಚೀಲಗಳಿಂದ ದವಸಧಾನ್ಯಗಳನ್ನು ತೆಗೆಯಲು ಹೋದಾಗ ಪ್ರತಿಯೊಬ್ಬ ಸಹೋದರನ ಚೀಲದಲ್ಲಿಯೂ ತಾವು ಪಾವತಿ ಮಾಡಿದ್ದ ಹಣವನ್ನು ಕಂಡು ತುಂಬ ಭಯಗೊಂಡರು.
35 E aconteceu que, despejando eles os sacos, eis que o pacote de dinheiro de cada um estava no seu saco; quando eles e seu pai viram os seus pacotes de dinheiro, tiveram medo.
36 ಯಾಕೋಬನು ಅವರಿಗೆ, “ನಾನು ನನ್ನ ಮಕ್ಕಳನ್ನೆಲ್ಲ ಕಳೆದುಕೊಳ್ಳಬೇಕೆಂಬುದು ನಿಮಗೆ ಇಷ್ಟವೇ? ಯೋಸೇಫನು ಇಲ್ಲವಾದನು. ಸಿಮೆಯೋನನೂ ಇಲ್ಲವಾದನು. ಈಗ ಬೆನ್ಯಾಮೀನನನ್ನು ತೆಗೆದುಕೊಂಡು ಹೋಗಬೇಕೆಂದಿರುವಿರಿ” ಎಂದು ಹೇಳಿದನು.
36 Então Jacó, seu pai, disse-lhes: Tendes-me desfilhado; José já não existe, e não existe Simeão, e haveis de levar Benjamim! Todas estas coisas vieram sobre mim.
37 ರೂಬೇನನು ತನ್ನ ತಂದೆಗೆ, “ಅಪ್ಪಾ, ನಾನು ಬೆನ್ಯಾಮೀನನನ್ನು ಕರೆದುಕೊಂಡು ಬರದಿದ್ದರೆ ನೀನು ನನ್ನ ಇಬ್ಬರು ಗಂಡುಮಕ್ಕಳನ್ನು ಕೊಲ್ಲಬಹುದು. ನನ್ನನ್ನು ನಂಬು. ನಾನು ಬೆನ್ಯಾಮೀನನನ್ನು ನಿನ್ನ ಬಳಿಗೆ ಕರೆದುಕೊಂಡು ಬರುವೆನು” ಎಂದು ಹೇಳಿದನು.
37 Mas Rúben falou a seu pai, dizendo: Mata os meus dois filhos, se eu to não tornar a trazer; entrega-o em minha mão, e to tornarei a trazer.
38 ಯಾಕೋಬನು, “ನಾನು ನಿಮ್ಮೊಂದಿಗೆ ಬೆನ್ಯಾಮೀನನನ್ನು ಕಳುಹಿಸಿಕೊಡುವುದಿಲ್ಲ. ಅವನ ಸಹೋದರನು ಸತ್ತುಹೋದನು; ನನ್ನ ಹೆಂಡತಿಯಾದ ರಾಹೇಲಳಲ್ಲಿ ಹುಟ್ಟಿದ ಗಂಡುಮಕ್ಕಳಲ್ಲಿ ಇವನೊಬ್ಬನೇ ಉಳಿದಿರುವುದು. ಈಜಿಪ್ಟಿಗೆ ಪ್ರಯಾಣ ಮಾಡುವಾಗ ಇವನಿಗೆ ಅಪಾಯ ಸಂಭವಿಸಿದರೆ ವಯಸ್ಸಾದ ನಾನು ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣವಾಗುವಿರಿ” ಎಂದು ಹೇಳಿದನು.
38 Ele porém disse: Não descerá meu filho convosco; porquanto o seu irmão é morto, e só ele ficou. Se lhe suceder algum desastre pelo caminho em que fordes, fareis descer minhas cãs com tristeza ao Seol.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Gênesis 42, comparar traduções ou montar um estudo — tudo direto pelo WhatsApp.