Gênesis 44

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs VC

Sair da comparação
VC Versão Católica
1 ಬಳಿಕ ಯೋಸೇಫನು ತನ್ನ ಸೇವಕನಿಗೆ ಆಜ್ಞೆಮಾಡಿದನು. ಯೋಸೇಫನು, “ಈ ಜನರು ತೆಗೆದುಕೊಂಡು ಹೋಗಬಹುದಾದಷ್ಟು ದವಸಧಾನ್ಯಗಳನ್ನು ಇವರ ಚೀಲಗಳಲ್ಲಿ ತುಂಬಿ ಪ್ರತಿಯೊಬ್ಬನ ಹಣವನ್ನೂ ಧಾನ್ಯದೊಂದಿಗೆ ಚೀಲದಲ್ಲಿಡು.
1 José deu esta ordem ao intendente de sua casa: "Enche de víveres os sacos destes homens tanto quanto possam conter, e põe o dinheiro de cada um na boca do saco.
2 ಕಿರಿಯ ಸಹೋದರನ ಚೀಲದಲ್ಲಿಯೂ ಹಣವನ್ನು ಇಡು. ಅಲ್ಲದೆ ನನ್ನ ವಿಶೇಷವಾದ ಬೆಳ್ಳಿ ಬಟ್ಟಲನ್ನು ಸಹ ಅವನ ಚೀಲದಲ್ಲಿಡು” ಎಂದು ಆಜ್ಞಾಪಿಸಿದನು. ಅಂತೆಯೇ ಸೇವಕನು ಮಾಡಿದನು.
2 Porás minha taça de prata na boca do saco do mais novo, com o preço do seu trigo". E fez o intendente como José lhe mandara.
3 ಮರುದಿನ ಮುಂಜಾನೆ ಸಹೋದರರನ್ನು ಮತ್ತು ಅವರ ಕತ್ತೆಗಳನ್ನು ಅವರ ದೇಶಕ್ಕೆ ಮರಳಿ ಕಳುಹಿಸಲಾಯಿತು.
3 De manhã, ao romper do dia, foram despedidos com seus jumentos.
4 ಅವರು ನಗರವನ್ನು ಬಿಟ್ಟುಹೋದ ಮೇಲೆ, ಯೋಸೇಫನು ತನ್ನ ಸೇವಕನಿಗೆ, “ಹೋಗು, ಆ ಜನರನ್ನು ಹಿಂಬಾಲಿಸು. ಅವರನ್ನು ತಡೆದು ಅವರಿಗೆ, ‘ನಾವು ನಿಮಗೆ ಒಳ್ಳೆಯವರಾಗಿದ್ದೆವು; ಆದರೆ ನೀವು ನಮಗೇಕೆ ಕೆಟ್ಟದ್ದನ್ನು ಮಾಡಿದಿರಿ? ನನ್ನ ಒಡೆಯನ ಬೆಳ್ಳಿ ಬಟ್ಟಲನ್ನು ನೀವೇಕೆ ಕದ್ದುಕೊಂಡು ಬಂದಿರಿ?
4 Deixaram a cidade, mas, não tendo ido ainda muito longe, José disse ao seu intendente: "Levanta-te e persegue estes homens e, quando os tiveres alcançado, dir-lhes-ás: Por que pagastes o bem com o mal?
5 ಈ ಬಟ್ಟಲಿನಲ್ಲಿ ನನ್ನ ಒಡೆಯನು ಕುಡಿಯುತ್ತಾನೆ. ದೇವರಿಗೆ ಪ್ರಶ್ನೆಗಳನ್ನು ಕೇಳಲು ಅವನು ಈ ಬಟ್ಟಲನ್ನೇ ಉಪಯೋಗಿಸುವನು. ನೀವು ಅವನ ಬಟ್ಟಲನ್ನು ಕದ್ದುಕೊಂಡು ತಪ್ಪುಮಾಡಿದಿರಿ’ ಎಂದು ಹೇಳು” ಎಂಬುದಾಗಿ ತಿಳಿಸಿದನು.
5 {A taça que roubastes} é aquela em que bebe o meu senhor e da qual se serve para suas adivinhações. Fizestes muito mal."
6 ಅಂತೆಯೇ ಸೇವಕನು ಸಹೋದರರನ್ನು ಹಿಂಬಾಲಿಸಿ ಅವರನ್ನು ತಡೆದು ನಿಲ್ಲಿಸಿದನು. ಯೋಸೇಫನು ಹೇಳಿದಂತೆಯೇ ಅವನು ಅವರಿಗೆ ಹೇಳಿದನು.
6 O intendente, tendo-os alcançado, falou-lhes desse modo.
7 ಆದರೆ ಸಹೋದರರು ಸೇವಕನಿಗೆ, “ರಾಜ್ಯಪಾಲನು ಈ ರೀತಿ ಹೇಳುವುದೇಕೆ? ನಾವು ಇಂಥಾ ಕೃತ್ಯವನ್ನು ಮಾಡಿಲ್ಲ.
7 Eles responderam-lhe: "Por que fala assim o meu senhor? Longe de teus servos a idéia de fazerem semelhante coisa!
8 ಮೊದಲು ನಮ್ಮ ಚೀಲಗಳಲ್ಲಿ ಸಿಕ್ಕಿದ ಹಣವನ್ನು ನಾವು ಕಾನಾನ್ ದೇಶದಿಂದ ಮತ್ತೆ ತಂದುಕೊಟ್ಟೆವು. ಆದ್ದರಿಂದ ಖಂಡಿತವಾಗಿ ನಾವು ನಿನ್ನ ಒಡೆಯನ ಮನೆಯಿಂದ ಬೆಳ್ಳಿಯನ್ನಾಗಲಿ ಬಂಗಾರವನ್ನಾಗಲಿ ಕದ್ದುಕೊಂಡಿಲ್ಲ.
8 Nós te trouxemos de Canaã o dinheiro que tínhamos encontrado na boca dos sacos. Por que, pois, haveríamos de roubar prata ou ouro na casa de teu senhor?
9 ನೀನು ಬೆಳ್ಳಿಯ ಬಟ್ಟಲನ್ನು ನಮ್ಮ ಯಾರ ಚೀಲಗಳಲ್ಲಿ ಕಂಡರೂ, ಆ ವ್ಯಕ್ತಿಯು ಸಾಯಲಿ, ನೀನು ಅವನನ್ನು ಕೊಲ್ಲಬಹುದು; ನಾವು ನಿನ್ನ ಗುಲಾಮರಾಗಿರುವೆವು” ಎಂದು ಹೇಳಿದರು.
9 Que aquele dos teus servos com quem for encontrada a taça morra, e, ao mesmo tempo, nós nos tornemos escravos do meu senhor".
10 ಕನು, “ನೀವು ಹೇಳಿದಂತೆಯೇ ಆಗಲಿ. ಆದರೆ ನಾನು ಅವನನ್ನು ಕೊಲ್ಲುವುದಿಲ್ಲ. ಯಾರಲ್ಲಿ ಬೆಳ್ಳಿಯ ಬಟ್ಟಲು ಸಿಕ್ಕುತ್ತದೊ ಅವನು ನನ್ನ ಗುಲಾಮನಾಗಿರಬೇಕು; ಉಳಿದವರು ಹೋಗಬಹುದು” ಎಂದು ಹೇಳಿದನು.
10 "Está bem! disse-lhes ele. Seja como dissestes! Aquele com quem for encontrada a taça será meu escravo. Vós outros sereis livres."
11 ಬಳಿಕ ಅವರು ಅವಸರದಿಂದ ತಮ್ಮ ಚೀಲಗಳನ್ನು ನೆಲದ ಮೇಲಿಟ್ಟು ಬಿಚ್ಚಿದರು.
11 E, imediatamente, pôs cada um o seu saco por terra e o abriu.
12 ಸೇವಕನು ಚೀಲಗಳನ್ನು ಪರೀಕ್ಷಿಸಲು ಹಿರಿಯ ಸಹೋದರನಿಂದ ಆರಂಭಿಸಿ, ಕಿರಿಯವನಾದ ಬೆನ್ಯಾಮೀನನ ಚೀಲದಲ್ಲಿ ಆ ಬೆಳ್ಳಿಯ ಬಟ್ಟಲನ್ನು ಕಂಡುಕೊಂಡನು.
12 O intendente revistou-os começando pelo mais velho e acabando pelo mais novo; e a taça foi encontrada no saco de Benjamim.
13 ಸಹೋದರರು ತುಂಬ ದುಃಖದಿಂದ ತಮ್ಮ ಬಟ್ಟೆಗಳನ್ನು ಹರಿದುಕೊಂಡು ತಮ್ಮ ಚೀಲಗಳನ್ನು ಮತ್ತೆ ಕತ್ತೆಗಳ ಮೇಲೇರಿಸಿಕೊಂಡು ನಗರಕ್ಕೆ ಹಿಂತಿರುಗಿದರು.
13 Eles rasgaram suas vestes e, tendo cada um carregado de novo o seu jumento, voltaram para a cidade.
14 ಯೆಹೂದ ಮತ್ತು ಅವನ ಸಹೋದರರು ಯೋಸೇಫನ ಮನೆಗೆ ಹಿಂತಿರುಗಿದಾಗ ಯೋಸೇಫನು ಇನ್ನೂ ಅಲ್ಲೇ ಇದ್ದನು. ಸಹೋದರರು ನೆಲದ ಮೇಲೆ ಬಿದ್ದು ತಲೆಬಾಗಿ ನಮಸ್ಕರಿಸಿದರು.
14 Judá e seus irmãos entraram em casa de José, que estava ainda em sua casa, e prostraram-se por terra diante dele.
15 ಯೋಸೇಫನು ಅವರಿಗೆ, “ನೀವು ಹೀಗೇಕೆ ಮಾಡಿದಿರಿ? ನಾನು ಶಕುನ ನೋಡಿ ರಹಸ್ಯಗಳನ್ನು ತಿಳಿದುಕೊಳ್ಳಬಲ್ಲೆನೆಂಬುದು ನಿಮಗೆ ಗೊತ್ತಿರಲಿಲ್ಲವೇ?” ಎಂದು ಕೇಳಿದನು.
15 José disse-lhes: "Que é isso que fizestes? Não sabíeis que sou um homem dotado da faculdade de adivinhar?"
16 ಯೆಹೂದನು, “ಸ್ವಾಮಿ, ನಾವು ಹೇಳುವಂಥದ್ದು ಏನೂ ಇಲ್ಲ; ವಿವರಿಸಲು ಯಾವ ದಾರಿಯೂ ಇಲ್ಲ; ನಾವು ತಪ್ಪಿತಸ್ಥರಲ್ಲವೆಂದು ತೋರಿಸಲು ಯಾವ ಮಾರ್ಗವೂ ಇಲ್ಲ. ನಾವು ಮಾಡಿದ ಬೇರೊಂದು ಕಾರ್ಯದ ನಿಮಿತ್ತ ದೇವರು ನಮ್ಮನ್ನು ತಪ್ಪಿತಸ್ಥರೆಂದು ನಿರ್ಣಯಿಸಿದ್ದಾನೆ. ಆದ್ದರಿಂದ ನಾವೆಲ್ಲರೂ ಬೆನ್ಯಾಮೀನನೂ ನಿನಗೆ ಗುಲಾಮರಾಗಿರುವೆವು” ಎಂದು ಹೇಳಿದನು.
16 Judá respondeu: "Que podemos dizer a meu senhor? Que falaremos? Como nos justificar? Deus descobriu o crime de teus servos. Somos os escravos do meu senhor, nós e aquele junto de quem foi encontrada a taça."
17 ಆದರೆ ಯೋಸೇಫನು, “ನಾನು ನಿಮ್ಮೆಲ್ಲರನ್ನು ಗುಲಾಮರನ್ನಾಗಿ ಮಾಡುವುದಿಲ್ಲ; ಬಟ್ಟಲನ್ನು ಕದ್ದುಕೊಂಡವನು ಮಾತ್ರ ನನ್ನ ಗುಲಾಮನಾಗಿರಬೇಕು; ಉಳಿದ ನೀವೆಲ್ಲರೂ ನಿಮ್ಮ ತಂದೆಯ ಬಳಿಗೆ ಸಮಾಧಾನದಿಂದ ಹೋಗಬಹುದು” ಎಂದು ಹೇಳಿದನು.
17 "Longe de mim, replicou José, o pensamento de agir dessa forma! Mas aquele em poder de quem foi encontrada a taça, esse será o meu escravo. Vós outros, voltai em paz para junto de vosso pai."
18 ಆಗ ಯೆಹೂದನು ಯೋಸೇಫನ ಬಳಿಗೆ ಹೋಗಿ, “ಸ್ವಾಮಿ, ತಮ್ಮೊಂದಿಗೆ ಬಿಚ್ಚುಮನಸ್ಸಿನಿಂದ ಮಾತನಾಡಲು ದಯವಿಟ್ಟು ಅನುಮತಿಯಾಗಲಿ; ದಯವಿಟ್ಟು ನನ್ನ ಮೇಲೆ ಕೋಪಗೊಳ್ಳಬೇಡಿ. ನೀವು ಸ್ವತಃ ಫರೋಹನಂತೆ ಇರುವಿರೆಂದು ನನಗೆ ತಿಳಿದಿದೆ.
18 Então Judá adiantou-se e disse a José: "Rogo-te, meu senhor, que permitas ao teu servo dizer uma palavra aos ouvidos do meu senhor, e não se acenda a tua ira contra o teu servo, porque tu és como o próprio faraó.
19 ನಾವು ಮೊದಲನೆಯ ಸಲ ಬಂದಿದ್ದಾಗ, ನೀವು ನಮಗೆ, ‘ನಿಮಗೆ ತಂದೆಯಾಗಲಿ ತಮ್ಮನಾಗಲಿ ಇರುವನೇ?’ ಎಂದು ಕೇಳಿದಿರಿ.
19 Meu senhor havia perguntado aos seus servos: Tendes ainda vosso pai? Tendes um irmão?
20 ನಾವು ನಿಮಗೆ, ‘ನಮಗೆ ಒಬ್ಬ ತಂದೆಯಿದ್ದಾನೆ, ಅವನು ವೃದ್ಧನಾಗಿದ್ದಾನೆ; ನಮಗೆ ಪ್ರಾಯದ ತಮ್ಮನಿದ್ದಾನೆ, ನಮ್ಮ ತಂದೆಗೆ ತುಂಬ ವಯಸ್ಸಾಗಿದ್ದಾಗ ಅವನು ಹುಟ್ಟಿದ್ದರಿಂದ ನಮ್ಮ ತಂದೆಯು ಅವನನ್ನು ಪ್ರೀತಿಸುತ್ತಾನೆ. ಆ ಕಿರಿಯ ಮಗನ ಸಹೋದರನು ಸತ್ತುಹೋದನು. ಆದ್ದರಿಂದ ಆ ತಾಯಿಯಲ್ಲಿ ಹುಟ್ಟಿದವರಲ್ಲಿ ಇವನೊಬ್ಬನೇ ಉಳಿದಿದ್ದಾನೆ. ನಮ್ಮ ತಂದೆಯು ಅವನನ್ನು ತುಂಬಾ ಪ್ರೀತಿಸುವನು’ ಎಂದು ಹೇಳಿದೆವು.
20 E nós havíamos respondido ao meu senhor que tínhamos um velho pai e um irmãozinho, filho de sua velhice, do qual o irmão havia morrido; e que, como ele foi deixado o único de sua mãe, seu pai o amava.
21 ಬಳಿಕ ನೀವು ನಮಗೆ, ‘ಹಾಗಾದರೆ ಆ ಸಹೋದರನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ, ನಾನು ಅವನನ್ನು ನೋಡಬೇಕು’ ಎಂದು ಹೇಳಿದಿರಿ.
21 Disseste aos teus servos: Trazei-o para junto de mim, a fim de que o veja com meus olhos.
22 ನಾವು ನಿಮಗೆ ‘ಆ ಯುವಕನು ಬರಲಾರನು. ಅವನು ತನ್ನ ತಂದೆಯನ್ನು ಬಿಟ್ಟುಬರಲಾಗದು. ಅವನ ತಂದೆ ಅವನನ್ನು ಕಳೆದುಕೊಂಡರೆ ತುಂಬ ದುಃಖದಿಂದ ಸತ್ತುಹೋಗುವನು’ ಎಂದು ಹೇಳಿದೆವು.
22 Havíamos respondido ao meu senhor que o menino não podia abandonar o seu pai, pois, se o fizesse, seu pai morreria.
23 ಆದರೆ ನೀವು ನಮಗೆ, ‘ನೀವು ಆ ಕಿರಿಯ ಸಹೋದರನನ್ನು ಕರೆದುಕೊಂಡು ಬರಲೇಬೇಕು; ಇಲ್ಲವಾದರೆ, ನಾನು ನಿಮಗೆ ದವಸಧಾನ್ಯಗಳನ್ನು ಮತ್ತೆ ಮಾರುವುದಿಲ್ಲ’ ಎಂದು ಹೇಳಿದಿರಿ.
23 E disseste aos teus servos: Se vosso irmãozinho não vier convosco, não sereis admitidos na minha presença.
24 ಆದ್ದರಿಂದ ನಾವು ನಮ್ಮ ತಂದೆಯ ಬಳಿಗೆ ಹಿಂತಿರುಗಿ ಹೋಗಿ ನೀವು ಹೇಳಿದ್ದನ್ನು ಅವನಿಗೆ ತಿಳಿಸಿದೆವು.
24 Quando voltamos para a casa do teu servo, nosso pai, referimos-lhe as palavras do meu senhor.
25 “ಸ್ವಲ ಸಮಯದ ನಂತರ ನಮ್ಮ ತಂದೆಯು, ‘ಮತ್ತೆ ಹೋಗಿ ಇನ್ನು ಸ್ವಲ್ಪ ಆಹಾರವನ್ನು ನಮಗಾಗಿ ಕೊಂಡುಕೊಂಡು ಬನ್ನಿ’ ಎಂದು ಹೇಳಿದನು.
25 E, quando nosso pai nos mandou voltar para comprar alguns víveres,
26 ಆದರೆ ನಾವು ನಮ್ಮ ತಂದೆಗೆ, ‘ನಮ್ಮ ಕಿರಿಯ ತಮ್ಮನಿಲ್ಲದೆ ನಾವು ಹೋಗಲು ಸಾಧ್ಯವಿಲ್ಲ. ನಮ್ಮ ಕಿರಿಯ ತಮ್ಮನನ್ನು ನೋಡುವ ತನಕ, ನಮಗೆ ದವಸಧಾನ್ಯಗಳನ್ನು ಮಾರುವುದಿಲ್ಲ ಎಂದು ರಾಜ್ಯಪಾಲರು ಹೇಳಿದ್ದಾರೆ’ ಎಂದು ಹೇಳಿದೆವು.
26 respondemos-lhe: Não podemos descer. Mas, se nosso irmão mais novo nos acompanhar, fá-lo-emos, pois que não seremos admitidos na presença do governador, se nosso irmão não for conosco.
27 ಆಗ ನಮ್ಮ ತಂದೆಯು ನಮಗೆ, ‘ನನ್ನ ಹೆಂಡತಿಯಾದ ರಾಹೇಲಳು ನನಗೆ ಇಬ್ಬರು ಗಂಡುಮಕ್ಕಳನ್ನು ಕೊಟ್ಟಳು.
27 Teu servo, nosso pai, nos replicou: Sabeis que minha mulher me deu dois filhos.
28 ನಾನು ಒಬ್ಬ ಮಗನನ್ನು ಕಳುಹಿಸಿಕೊಟ್ಟಾಗ, ಅವನು ಕ್ರೂರ ಪ್ರಾಣಿಯಿಂದ ಕೊಲ್ಲಲ್ಪಟ್ಟನು; ಇಂದಿನ ತನಕ ನಾನು ಅವನನ್ನು ನೋಡಲಿಲ್ಲ.
28 Um desapareceu de minha casa, e eu disse: Certamente foi devorado. E não mais o revi até hoje.
29 ನೀವು ನನ್ನ ಮತ್ತೊಬ್ಬ ಮಗನನ್ನು ನನ್ನ ಬಳಿಯಿಂದ ಕರೆದುಕೊಂಡು ಹೋಗುವಾಗ ಅವನಿಗೆ ಏನಾದರೂ ಸಂಭವಿಸಿದರೆ, ನಾನು ದುಃಖ ತಾಳಲಾರದೆ ಸತ್ತುಹೋಗುವೆನು’ ಎಂದು ಹೇಳಿದನು.
29 Se me tirais ainda este, e lhe acontecer alguma desgraça, fareis descer os meus cabelos brancos à habitação dos mortos, sob o peso da dor.
30 ನಮ್ಮ ತಂದೆಗಂತೂ ಇವನನ್ನು ಕಂಡರೆ ಪ್ರಾಣಪ್ರೀತಿ. ಆದ್ದರಿಂದ ನಮ್ಮ ಈ ಕಿರಿಯ ತಮ್ಮನಿಲ್ಲದೆ ಹೋದರೆ,
30 Se agora volto para junto de teu servo, meu pai, sem levar conosco o menino, ele, cuja vida está ligada à do menino,
31 ನಮ್ಮ ತಂದೆಯೂ ಆ ಕೂಡಲೇ ಸತ್ತುಹೋಗುವನು; ನಮ್ಮ ತಂದೆ ದುಃಖದಿಂದ ಸಾಯಲು ನಾವೇ ಕಾರಣರಾಗುವೆವು.
31 desde que notar que ele não está conosco, morrerá. E teus servos terão feito descer à habitação dos mortos, sob o peso da aflição, os cabelos brancos do teu servo, nosso pai.
32 “ನಾನು ಈ ಯುವಕನ ಜವಾಬ್ದಾರಿಯನ್ನು ವಹಿಸಿಕೊಂಡೆನು. ನಾನು ನನ್ನ ತಂದೆಗೆ, ‘ನಾನು ಇವನನ್ನು ಹಿಂದಕ್ಕೆ ಕರೆದುಕೊಂಡು ಬರದಿದ್ದರೆ ನನ್ನ ಜೀವಮಾನವೆಲ್ಲಾ ನೀನು ನನ್ನನ್ನು ದೂಷಿಸಬಹುದು’ ಎಂದು ಹೇಳಿದೆನು.
32 Ora, o teu servo respondeu pelo menino junto de meu pai; e disse-lhe que, se ele não lho reconduzisse, seria eternamente culpado para com seu pai.
33 ಆದ್ದರಿಂದ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ಈ ಯುವಕನು ತನ್ನ ಸಹೋದರರೊಂದಿಗೆ ಹಿಂತಿರುಗಿ ಹೋಗಲಿ; ನಾನು ಇಲ್ಲಿ ನಿಮಗೆ ಗುಲಾಮನಾಗಿರುವೆನು.
33 Rogo-te, pois: aceita que teu servo fique escravo de meu senhor em lugar do menino, para que este possa voltar com seus irmãos.
34 ನನ್ನ ಜೊತೆಯಲ್ಲಿ ಈ ಹುಡುಗನಿಲ್ಲದೆ ನಾನು ನನ್ನ ತಂದೆಯ ಬಳಿಗೆ ಹಿಂತಿರುಗಿ ಹೋಗಲು ಸಾಧ್ಯವಿಲ್ಲ. ನಮ್ಮ ತಂದೆಗೆ ಸಂಭವಿಸುವುದನ್ನು ನೋಡಲು ನನಗೆ ತುಂಬ ಭಯವಾಗಿದೆ” ಎಂದು ಹೇಳಿದನು.
34 Como poderia eu apresentar-me diante do meu pai, se o menino não for comigo? Oh, eu não poderia suportar a dor que sobreviria a meu pai!"

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Gênesis 44, comparar traduções ou montar um estudo — tudo direto pelo WhatsApp.