Gênesis 5
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARIB
1 ಇದು ಆದಾಮನ ಕುಟುಂಬ ಚರಿತ್ರೆ. ದೇವರು ಮನುಷ್ಯನನ್ನು ತನ್ನ ಹೋಲಿಕೆಗೆ ಸರಿಯಾಗಿ ಸೃಷ್ಟಿ ಮಾಡಿದನು.
1 Este é o livro das gerações de Adão. No dia em que Deus criou o homem, à semelhança de Deus o fez.
2 ದೇವರು ಅವರನ್ನು ಗಂಡು ಮತ್ತು ಹೆಣ್ಣುಗಳಾಗಿ ಉಂಟುಮಾಡಿದನು. ಆತನು ಅವರನ್ನು ನಿರ್ಮಿಸಿದ ದಿನದಲ್ಲೇ ಅವರನ್ನು ಆಶೀರ್ವದಿಸಿ ಅವರಿಗೆ, “ಮನುಷ್ಯ” ಎಂದು ಹೆಸರಿಟ್ಟನು.
2 Homem e mulher os criou; e os abençoou, e os chamou pelo nome de homem, no dia em que foram criados.
3 ಆದಾಮನು 130 ವರ್ಷದವನಾದಾಗ ಮತ್ತೊಬ್ಬ ಮಗನನ್ನು ಪಡೆದನು. ಆ ಮಗನು ರೂಪದಲ್ಲಿ ಆದಾಮನಂತಿದ್ದನು. ಆದಾಮನು ಅವನಿಗೆ ಸೇತ ಎಂದು ಹೆಸರಿಟ್ಟನು.
3 Adão viveu cento e trinta anos, e gerou um filho à sua semelhança, conforme a sua imagem, e pôs-lhe o nome de Sete.
4 ಸೇತನು ಹುಟ್ಟಿದ ಮೇಲೆ ಆದಾಮನು 800 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
4 E foram os dias de Adão, depois que gerou a Sete, oitocentos anos; e gerou filhos e filhas.
5 ಹೀಗೆ ಆದಾಮನು ಒಟ್ಟು 930 ವರ್ಷ ಜೀವಿಸಿ ಮರಣಹೊಂದಿದನು.
5 Todos os dias que Adão viveu foram novecentos e trinta anos; e morreu.
6 ಸೇತನು 105 ವರ್ಷದವನಾದಾಗ ಎನೋಷ್ ಎಂಬ ಮಗನನ್ನು ಪಡೆದನು.
6 Sete viveu cento e cinco anos, e gerou a Enos.
7 ಎನೋಷನು ಹುಟ್ಟಿದ ಮೇಲೆ ಸೇತನು 807 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಸೇತನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
7 Viveu Sete, depois que gerou a Enos, oitocentos e sete anos; e gerou filhos e filhas.
8 ಹೀಗೆ ಸೇತನು ಒಟ್ಟು 912 ವರ್ಷ ಜೀವಿಸಿ ಮರಣಹೊಂದಿದನು.
8 Todos os dias de Sete foram novecentos e doze anos; e morreu.
9 ಎನೋಷನು 90 ವರ್ಷದವನಾದಾಗ ಕೇನಾನ ಎಂಬ ಮಗನನ್ನು ಪಡೆದನು.
9 Enos viveu noventa anos, e gerou a Quenã.
10 ಕೇನಾನನು ಹುಟ್ಟಿದ ಮೇಲೆ ಎನೋಷನು 815 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಬೇರೆ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
10 viveu Enos, depois que gerou a Quenã, oitocentos e quinze anos; e gerou filhos e filhas.
11 ಹೀಗೆ ಎನೋಷನು ಒಟ್ಟು 905 ವರ್ಷ ಜೀವಿಸಿ ಮರಣಹೊಂದಿದನು.
11 Todos os dias de Enos foram novecentos e cinco anos; e morreu.
12 ಕೇನಾನನು 70 ವರ್ಷದವನಾದಾಗ ಅವನು ಮಹಲಲೇಲ ಎಂಬ ಮಗನನ್ನು ಪಡೆದನು.
12 Quenã viveu setenta anos, e gerou a Maalalel.
13 ಮಹಲಲೇಲನು ಹುಟ್ಟಿದ ಮೇಲೆ ಕೇನಾನನು 840 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಕೇನಾನನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
13 Viveu Quenã, depois que gerou a Maalalel, oitocentos e quarenta anos, e gerou filhos e filhas.
14 ಹೀಗೆ ಕೇನಾನನು ಒಟ್ಟು 910 ವರ್ಷ ಜೀವಿಸಿ ಮರಣಹೊಂದಿದನು.
14 Todos os dias de Quenã foram novecentos e dez anos; e morreu.
15 ಮಹಲಲೇಲನು 65 ವರ್ಷದವನಾದಾಗ ಯೆರೆದ ಎಂಬ ಮಗನನ್ನು ಪಡೆದನು.
15 Maalalel viveu sessenta e cinco anos, e gerou a Jarede.
16 ಯೆರೆದನು ಹುಟ್ಟಿದ ಮೇಲೆ ಮಹಲಲೇಲನು 830 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
16 Viveu Maalalel, depois que gerou a Jarede, oitocentos e trinta anos; e gerou filhos e filhas.
17 ಹೀಗೆ ಮಹಲಲೇಲನು ಒಟ್ಟು 895 ವರ್ಷ ಜೀವಿಸಿ ಮರಣಹೊಂದಿದನು.
17 Todos os dias de Maalalel foram oitocentos e noventa e cinco anos; e morreu.
18 ಯೆರೆದನು 162 ವರ್ಷದವನಾದಾಗ ಹನೋಕ ಎಂಬ ಮಗನನ್ನು ಪಡೆದನು.
18 Jarede viveu cento e sessenta e dois anos, e gerou a Enoque.
19 ಹನೋಕನು ಹುಟ್ಟಿದ ಮೇಲೆ ಯೆರೆದನು 800 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
19 Viveu Jarede, depois que gerou a Enoque, oitocentos anos; e gerou filhos e filhas.
20 ಹೀಗೆ ಯೆರೆದನು ಒಟ್ಟು 962 ವರ್ಷ ಜೀವಿಸಿ ಮರಣಹೊಂದಿದನು.
20 Todos os dias de Jarede foram novecentos e sessenta e dois anos; e morreu.
21 ಹನೋಕನು 65 ವರ್ಷದವನಾದಾಗ ಮೆತೂಷೆಲಹ ಎಂಬ ಮಗನನ್ನು ಪಡೆದನು.
21 Enoque viveu sessenta e cinco anos, e gerou a Matusalém.
22 ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ದೇವರ ಅನ್ಯೋನ್ಯತೆಯಲ್ಲಿ 300 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
22 Andou Enoque com Deus, depois que gerou a Matusalém, trezentos anos; e gerou filhos e filhas.
23 ಹೀಗೆ ಹನೋಕನು ಒಟ್ಟು 365 ವರ್ಷ ಜೀವಿಸಿದನು.
23 Todos os dias de Enoque foram trezentos e sessenta e cinco anos;
24 ಹನೋಕನು ದೇವರ ಅನ್ಯೋನ್ಯತೆಯಲ್ಲಿ ಜೀವಿಸುತ್ತಿದ್ದಾಗ, ದೇವರು ಅವನನ್ನು ತನ್ನ ಬಳಿಗೆ ಕರೆದುಕೊಂಡನು. ಅಂದಿನಿಂದ ಅವನು ಕಣ್ಮರೆಯಾದನು.
24 Enoque andou com Deus; e não apareceu mais, porquanto Deus o tomou.
25 ಮೆತೂಷೆಲಹನು 187 ವರ್ಷದವನಾದಾಗ ಲೆಮೆಕ ಎಂಬ ಮಗನನ್ನು ಪಡೆದನು.
25 Matusalém viveu cento e oitenta e sete anos, e gerou a Lameque.
26 ಲೆಮೆಕನು ಹುಟ್ಟಿದ ಮೇಲೆ ಮೆತೂಷೆಲಹನು 782 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
26 Viveu Matusalém, depois que gerou a Lameque, setecentos e oitenta e dois anos; e gerou filhos e filhas.
27 ಹೀಗೆ ಮೆತೂಷೆಲಹನು ಒಟ್ಟು 969 ವರ್ಷ ಜೀವಿಸಿ ಮರಣಹೊಂದಿದನು.
27 Todos os dias de Matusalém foram novecentos e sessenta e nove anos; e morreu.
28 ಲೆಮೆಕನು 182 ವರ್ಷದವನಾದಾಗ ಒಬ್ಬ ಮಗನನ್ನು ಪಡೆದನು.
28 Lameque viveu cento e oitenta e dois anos, e gerou um filho,
29 ಲೆಮೆಕನು, “ನಾವು ರೈತರಾಗಿ ಕಷ್ಟಪಟ್ಟು ಕೆಲಸ ಮಾಡುತ್ತೇವೆ, ಯಾಕೆಂದರೆ ದೇವರು ಭೂಮಿಯನ್ನು ಶಪಿಸಿದನು. ಆದರೆ ಈ ಮಗನು ನಮಗೆ ವಿಶ್ರಾಂತಿ ಕೊಡುವನು” ಎಂದು ಹೇಳಿ ಆ ಮಗುವಿಗೆ ನೋಹ ಎಂದು ಹೆಸರಿಟ್ಟನು.
29 a quem chamou Noé, dizendo: Este nos consolará acerca de nossas obras e do trabalho de nossas mãos, os quais provêm da terra que o Senhor amaldiçoou.
30 ನೋಹನು ಹುಟ್ಟಿದ ಮೇಲೆ, ಲೆಮೆಕನು 595 ವರ್ಷ ಜೀವಿಸಿದನು. ಆ ಕಾಲದಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
30 Viveu Lameque, depois que gerou a Noé, quinhentos e noventa e cinco anos; e gerou filhos e filhas.
31 ಹೀಗೆ ಲೆಮೆಕನು ಒಟ್ಟು 777 ವರ್ಷ ಜೀವಿಸಿ ಮರಣಹೊಂದಿದನು.
31 Todos os dias de Lameque foram setecentos e setenta e sete anos; e morreu.
32 ನೋಹನು 500 ವರ್ಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂವರು ಗಂಡುಮಕ್ಕಳನ್ನು ಪಡೆದನು.
32 E era Noé da idade de quinhentos anos; e gerou Noé a Sem, Cam e Jafé.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Gênesis 5, comparar traduções ou montar um estudo — tudo direto pelo WhatsApp.