Hebreus 4

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVT

Sair da comparação
NVT Nova Versão Transformadora
1 ದೇವರು ಆ ಜನರಿಗೆ ನೀಡಿದ ವಾಗ್ದಾನವು ನಮ್ಮಲ್ಲಿ ಇನ್ನೂ ಇದೆ. ನಾವು ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸಬಹುದೆಂಬುದೇ ಆ ವಾಗ್ದಾನ. ಆದ್ದರಿಂದ ನಮ್ಮಲ್ಲಿ ಯಾರೂ ಆ ವಾಗ್ದಾನದ ಫಲವನ್ನು ಪಡೆಯುವದರಲ್ಲಿ ವಿಫಲರಾಗದಂತೆ ಬಹು ಎಚ್ಚರಿಕೆಯಿಂದಿರೋಣ.
1 Assim, uma vez que permanece a promessa de que entraremos no descanso de Deus, devemos ter cuidado para que nenhum de vocês pense que falhou.
2 ರಕ್ಷಣಾಮಾರ್ಗದ ಕುರಿತು ಅವರಿಗೆ ತಿಳಿಸಲ್ಪಟ್ಟಂತೆಯೇ ನಮಗೂ ತಿಳಿಸಲಾಯಿತು. ಅವರು ಆ ಬೋಧನೆಯನ್ನು ಕೇಳಿದರೂ ಅವರಿಗೆ ಪ್ರಯೋಜನವಾಗಲಿಲ್ಲ. ಏಕೆಂದರೆ ಅವರು ಅದನ್ನು ನಂಬಿಕೆಯಿಂದ ಸ್ವೀಕರಿಸಿಕೊಳ್ಳಲಿಲ್ಲ.
2 Porque essas boas-novas também nos foram anunciadas, como a eles, mas a mensagem de nada lhes valeu, pois não a receberam com fé e não se uniram àqueles que ouviram.
3 ನಂಬುವವರಾದ ನಾವು ದೇವರ ವಿಶ್ರಾಂತಿಯಲ್ಲಿ ಸೇರಲು ಸಮರ್ಥರಾಗಿದ್ದೇವೆ. ದೇವರು ಹೇಳಿದಂತೆ:
3 Pois nós, os que cremos, entramos em seu descanso. Quanto aos demais, Deus disse: “Assim, jurei em minha ira: ‘Jamais entrarão em meu descanso’”, embora suas obras estejam prontas desde a criação do mundo.
4 ಪವಿತ್ರ ಗ್ರಂಥದ ಒಂದು ಭಾಗದಲ್ಲಿ ಆತನು ವಾರದ ಏಳನೆಯ ದಿನದ ಬಗ್ಗೆ ಹೀಗೆ ಮಾತಾಡಿದ್ದಾನೆ: “ಆದ್ದರಿಂದ ದೇವರು ತನ್ನ ಕಾರ್ಯಗಳನ್ನೆಲ್ಲ ಮುಗಿಸಿ ಏಳನೆಯ ದಿನ ವಿಶ್ರಾಂತಿ ಹೊಂದಿದನು.”
4 Sabemos que estão prontas por causa da passagem que menciona o sétimo dia: “No sétimo dia, Deus descansou de todo o seu trabalho”.
5 ಪವಿತ್ರ ಗ್ರಂಥದ ಇನ್ನೊಂದು ಭಾಗದಲ್ಲಿ ಆತನು, “ಆ ಜನರು ನನ್ನ ವಿಶ್ರಾಂತಿಯಲ್ಲಿ ಎಂದಿಗೂ ಪ್ರವೇಶಿಸುವುದಿಲ್ಲ” ವೆಂದೂ ಹೇಳಿದ್ದಾನೆ.
5 Mas, em outra passagem, Deus diz: “Jamais entrarão em meu descanso”.
6 ಆದ್ದರಿಂದ ಕೆಲವರು ದೇವರ ವಿಶ್ರಾಂತಿಯಲ್ಲಿ ಸೇರುತ್ತಾರೆಂಬುದು ಇನ್ನೂ ಖಚಿತವಾಗಿದೆ. ಆದರೆ ರಕ್ಷಣಾಮಾರ್ಗವನ್ನು ಮೊದಲು ಕೇಳಿದ ಜನರು ಪ್ರವೇಶಿಸಲಿಲ್ಲ. ಅವರು ವಿಧೇಯರಾಗದೆ ಇದ್ದುದರಿಂದ ಅವರು ಸೇರಲಿಲ್ಲ.
6 Portanto, o descanso está disponível para que alguns entrem nele, mas os primeiros que ouviram essas boas-novas não entraram por causa de sua desobediência.
7 ಆದ್ದರಿಂದ ಆತನು ಮತ್ತೊಂದು ವಿಶೇಷ ದಿನವನ್ನು ಯೋಜಿಸಿದನು. ಅದನ್ನು “ಈ ಹೊತ್ತು” ಎಂದು ಕರೆಯಲಾಗಿದೆ. ಆತನು ಆ ದಿನವನ್ನು ಕುರಿತು ಬಹುಕಾಲದ ನಂತರ ದಾವೀದನ ಮೂಲಕ ತಿಳಿಸಿದನು. ಪವಿತ್ರ ಗ್ರಂಥದ ಈ ಭಾಗವನ್ನು ನಾವು ಮೊದಲೊಮ್ಮೆ ನೋಡಿದೆವು:
7 Por isso Deus estabeleceu outra ocasião para que entrem em seu descanso, e essa ocasião é “hoje”. Ele anunciou isso por meio de Davi muito tempo depois, nas palavras já citadas: “Hoje, se ouvirem sua voz, não endureçam o coração”.
8 ದೇವರು ವಾಗ್ದಾನ ಮಾಡಿದ್ದ ವಿಶ್ರಾಂತಿಗೆ ಯೆಹೋಶುವನು ಜನರನ್ನು ಕರೆದೊಯ್ದಿದ್ದರೆ ವಿಶ್ರಾಂತಿಯ ಮತ್ತೊಂದು ದಿನದ ಕುರಿತು ಹೇಳುತ್ತಿರಲಿಲ್ಲ.
8 Se Josué lhes tivesse dado descanso, Deus não teria falado de outro dia de descanso por vir.
9 ದೇವಜನರಿಗೋಸ್ಕರವಿರುವ ಸಬ್ಬತ್ ಎಂಬ ವಿಶ್ರಾಂತಿಯು ಇನ್ನೂ ಬರಲಿದೆ ಎಂಬುದನ್ನು ಇದು ತೋರ್ಪಡಿಸುತ್ತದೆ.
9 Logo, ainda há um descanso definitivo à espera do povo de Deus.
10 ಆತನು ತನ್ನ ಕಾರ್ಯವನ್ನು ಮುಗಿಸಿದ ನಂತರ ವಿಶ್ರಾಂತಿ ಹೊಂದಿದನು. ಆದ್ದರಿಂದ ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸುವವನು ಆತನು ಮಾಡಿದಂತೆ ತನ್ನ ಕಾರ್ಯವನ್ನು ಮುಗಿಸಿದವನಾಗಿರಬೇಕು.
10 Porque todos que entraram no descanso de Deus descansam de seu trabalho, como Deus o fez após a criação do mundo.
11 ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸಲು ನಮ್ಮಿಂದಾದಷ್ಟು ಪ್ರಯತ್ನಿಸೋಣ. ಆತನಿಗೆ ಅವಿಧೇಯರಾದ ಆ ಜನರನ್ನು ಅನುಸರಿಸಿ ನಮ್ಮಲ್ಲಿ ಯಾರೂ ವಿಫಲರಾಗದಂತೆ ನೋಡಿಕೊಳ್ಳೋಣ.
11 Portanto, esforcemo-nos para entrar nesse descanso. Mas, se desobedecermos, como no exemplo citado, cairemos.
12 ದೇವರ ವಾಕ್ಯವು ಸಜೀವವಾದದ್ದು, ಕಾರ್ಯ ಸಾಧಕವಾದದ್ದು. ಅದು ಅತ್ಯಂತ ಹರಿತವಾದ ಖಡ್ಗಕ್ಕಿಂತಲೂ ಹರಿತವಾಗಿದ್ದು ನಾಟಿಕೊಳ್ಳುತ್ತದೆ. ಆತ್ಮಪ್ರಾಣಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುತ್ತದೆ; ನಮ್ಮ ಹೃದಯದ ಉದ್ದೇಶಗಳನ್ನು ಮತ್ತು ಆಲೋಚನೆಗಳನ್ನು ವಿವೇಚಿಸುತ್ತದೆ.
12 Pois a palavra de Deus é viva e poderosa. É mais cortante que qualquer espada de dois gumes, penetrando entre a alma e o espírito, entre a junta e a medula, e trazendo à luz até os pensamentos e desejos mais íntimos.
13 ದೇವರ ದೃಷ್ಟಿಗೆ ಯಾವುದೂ ಮುಚ್ಚುಮರೆಯಾಗಿಲ್ಲ. ಆತನ ಕಣ್ಣೆದುರಿನಲ್ಲಿ ಪ್ರತಿಯೊಂದೂ ತೆರೆಯಲ್ಪಟ್ಟು ಬಟ್ಟಬಯಲಾಗಿವೆ. ನಾವು ನಮ್ಮ ಜೀವಿತದ ಬಗ್ಗೆ ಲೆಕ್ಕ ಒಪ್ಪಿಸಬೇಕಾಗಿರುವುದು ಆತನಿಗೇ.
13 Nada, em toda a criação, está escondido de Deus. Tudo está descoberto e exposto diante de seus olhos, e é a ele que prestamos contas.
14 ಪರಲೋಕಕ್ಕೆ ಏರಿಹೋದ ಪ್ರಧಾನ ಯಾಜಕನೊಬ್ಬನು ನಮಗಿದ್ದಾನೆ. ಆತನೇ ದೇವರ ಮಗನಾದ ಯೇಸು. ಆದ್ದರಿಂದ ನಮಗಿರುವ ನಂಬಿಕೆಯಲ್ಲೇ ದೃಢವಾಗಿ ಸಾಗೋಣ.
14 Visto, portanto, que temos um grande Sumo Sacerdote que entrou no céu, Jesus, o Filho de Deus, apeguemo-nos firmemente àquilo em que cremos.
15 ನಮ್ಮ ಪ್ರಧಾನ ಯಾಜಕನಾಗಿರುವ ಯೇಸು ನಮ್ಮ ದೌರ್ಬಲ್ಯವನ್ನು ಅರ್ಥಮಾಡಿಕೊಳ್ಳಲು ಸಮರ್ಥನಾಗಿದ್ದಾನೆ. ಆತನು ಈ ಲೋಕದಲ್ಲಿ ಜೀವಿಸಿದ್ದಾಗ, ಸರ್ವವಿಷಯಗಳಲ್ಲಿ ನಮ್ಮಂತೆಯೇ ಶೋಧನೆಗೆ ಗುರಿಯಾದರೂ ಪಾಪಮಾಡಲಿಲ್ಲ.
15 Nosso Sumo Sacerdote entende nossas fraquezas, pois enfrentou as mesmas tentações que nós, mas nunca pecou.
16 ಆದ್ದರಿಂದ ದೇವರ ಕೃಪಾಸಿಂಹಾಸನದ ಬಳಿಗೆ ಸಂಕೋಚಪಡದೆ ಬರೋಣ. ಕೊರತೆಯಲ್ಲಿರುವಾಗ ನಮಗೆ ಬೇಕಾದ ಸಹಾಯಕ್ಕಾಗಿ ಕೃಪೆಯನ್ನೂ ಕರುಣೆಯನ್ನೂ ಅಲ್ಲಿ ಹೊಂದಿಕೊಳ್ಳುವೆವು.
16 Assim, aproximemo-nos com toda confiança do trono da graça, onde receberemos misericórdia e encontraremos graça para nos ajudar quando for preciso.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Hebreus 4, comparar traduções ou montar um estudo — tudo direto pelo WhatsApp.