Isaías 7
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs VC
1 ಆಹಾಜನು ಯೋಥಾವುನ ಮಗನು. ಯೋಥಾವುನು ಉಜ್ಜೀಯನ ಮಗನು. ರೆಚೀನ್ ಎಂಬವನು ಅರಾಮ್ಯರ ಅರಸನಾಗಿದ್ದನು. ರೆಮಲ್ಯನ ಮಗನಾದ ಪೆಕಹನು ಇಸ್ರೇಲಿನ ಅರಸನಾಗಿದ್ದನು. ಆಗ ಆಹಾಜನು ಯೆಹೂದದ ಅರಸನಾಗಿದ್ದನು. ರೆಚೀನ್ ಮತ್ತು ಪೆಕಹ ಇವರಿಬ್ಬರೂ ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟರು. ಆದರೆ ಆ ನಗರವನ್ನು ಸೋಲಿಸಲು ಅವರಿಂದಾಗಲಿಲ್ಲ.
1 No tempo de Acaz, filho de Joatão, filho de Ozias, rei de Judá, Rasin, rei de Arão, foi com Pecá, filho de Romelia, rei de Israel, contra Jerusalém para lhe dar combate; mas não pôde apoderar-se dela.
2 ದಾವೀದನ ವಂಶದವರಿಗೆ ಒಂದು ಸಂದೇಶವು ಕಳುಹಿಸಲ್ಪಟ್ಟಿತು, “ಅರಾಮ್ಯರ ಸೈನ್ಯ ಮತ್ತು ಎಫ್ರಾಯೀಮ್ಯರ ಸೈನ್ಯ (ಇಸ್ರೇಲ್) ಒಟ್ಟಾಗಿ ಶಿಬಿರ ಹೂಡಿದ್ದಾರೆ” ಎಂಬುದೇ ಆ ಸಂದೇಶ. ಅರಸನಾದ ಆಹಾಜನು ಈ ಸಂದೇಶವನ್ನು ಕೇಳಿದಾಗ, ಅವನೂ ಅವನ ಜನರೂ ಬಹಳವಾಗಿ ಭಯಹಿಡಿದವರಾದರು. ಅಡವಿಯ ಮರಗಳು ಬಿರುಗಾಳಿಗೆ ತತ್ತರಿಸುತ್ತವೋ ಎಂಬಂತೆ ಅವರು ತತ್ತರಿಸಿದರು.
2 Quando se soube, na casa de Davi, que {o exército da} Síria estava acampado em Efraim, o coração do rei e o de seu povo ficaram perturbados como as árvores das florestas agitadas pelos ventos.
3 ಆಗ ಯೆಹೋವನು ಯೆಶಾಯನಿಗೆ, “ನೀನೂ ನಿನ್ನ ಮಗನಾದ ಶೆಯಾರ್ ಯಾಶೂಬನೂ ಆಹಾಜನ ಬಳಿಗೆ ಹೋಗಿ ಮಾತನಾಡಬೇಕು. ನೀರು ಮೇಲಿನ ಕೊಳಕ್ಕೆ ಸೇರುವ ಸ್ಥಳಕ್ಕೆ ಹೋಗು. ಇದು ಅಗಸನ ಹೊಲಕ್ಕೆ ಹೋಗುವ ಮಾರ್ಗದಲ್ಲಿದೆ.
3 Então disse o Senhor a Isaías: Vai ter com Acaz, com Sear-Jasub, teu filho, na extremidade do aqueduto do reservatório superior, no caminho do campo do pisoeiro.
4 “ಆಹಾಜನಿಗೆ ಹೀಗೆ ಹೇಳು: ‘ಶಾಂತನಾಗಿದ್ದು ಜಾಗ್ರತೆಯಿಂದಿರು. ಭಯಪಡಬೇಡ. ರೆಚೀನ್ ಮತ್ತು ರೆಮಲ್ಯನ ಮಗ ಇವರಿಬ್ಬರೂ ಸೇರಿ ನಿನ್ನನ್ನು ಬೆದರಿಸದಂತೆ ನೋಡಿಕೋ. ಅವರಿಬ್ಬರೂ ಸುಟ್ಟುಹೋದ ಕೋಲಿನಂತಿದ್ದಾರೆ. ಹಿಂದೆ ಅವರು ಬೆಂಕಿಯಿಂದ ಉರಿಯುತ್ತಿದ್ದರು. ಆದರೆ ಈಗ ಅವರು ಕೇವಲ ಹೊಗೆಯಾಡುತ್ತಿದ್ದಾರೆ. ರೆಚೀನ್, ಅರಾಮ್ ಮತ್ತು ರೆಮಲ್ಯನ ಮಗ ಕೋಪಗೊಂಡಿದ್ದಾರೆ.
4 E dize-lhe: Tem ânimo, não temas, não vacile o teu coração diante desses dois pedaços de tições fumegantes. {Diante do furor de Rasin, da Síria, e do filho de Romelia}.
5 ಅವರು ನಿನ್ನ ವಿರುದ್ಧವಾಗಿ ಕುತಂತ್ರ ನಡಿಸಿದ್ದಾರೆ.
5 Visto que a Síria decidiu tua perdição, com Efraim e o filho de Romelia, dizendo:
6 ಅವರು, “ನಾವು ಹೋಗಿ ಯೆಹೂದಕ್ಕೆ ವಿರುದ್ಧವಾಗಿ ಯುದ್ಧ ಮಾಡೋಣ. ಯೆಹೂದ ರಾಜ್ಯವನ್ನು ನಾವಿಬ್ಬರೂ ಭಾಗ ಮಾಡಿಕೊಳ್ಳೋಣ ಮತ್ತು ಟಾಬೇಲನ ಮಗನನ್ನು ಯೆಹೂದದ ಹೊಸ ಅರಸನಾಗಿ ಮಾಡೋಣ ಎಂದು ಮಾತಾಡಿಕೊಳ್ಳುತ್ತಿದ್ದಾರೆ.”’”
6 Vamos contra Judá, nós o bateremos, e nos apoderaremos dele, e proclamaremos rei o filho de Tabeel.
7 ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಅವರ ಕುತಂತ್ರವು ನಡೆಯದು. ಅದು ನೆರವೇರದು.
7 Eis o que disse o Senhor Javé: Isso não acontecerá, essas coisas não se realizarão,
8 ದಮಸ್ಕದಲ್ಲಿ ರೆಚೀನನು ಅರಸನಾಗಿರುವಷ್ಟು ಸಮಯ ಅದು ನಡೆಯದು. ಎಫ್ರಾಯೀಮ್ (ಇಸ್ರೇಲ್) ಈಗ ಒಂದು ದೇಶವಾಗಿದೆ. ಆದರೆ ಇನ್ನು ಅರವತ್ತೈದು ವರ್ಷಗಳೊಳಗೆ ಎಫ್ರಾಯೀಮ್ ಒಂದು ದೇಶವಾಗಿರದು.
8 porque a capital da Síria é Damasco, e a cabeça de Damasco é Rasin. {Dentro de sessenta e cinco anos Efraim desaparecerá do rol dos povos.}
9 ಸಮಾರ್ಯವು ಎಫ್ರಾಯೀಮಿನ ರಾಜಧಾನಿಯಾಗಿರುವಷ್ಟು ಕಾಲ ಮತ್ತು ರೆಮಲ್ಯನ ಮಗನು ಸಮಾರ್ಯದಲ್ಲಿ ಅರಸನಾಗಿರುವಷ್ಟು ಕಾಲ ಅವರ ಯೋಜನೆಗಳು ಕೈಗೂಡುವುದಿಲ್ಲ. ನೀನು ಈ ವಾರ್ತೆಯನ್ನು ನಂಬದಿದ್ದರೆ ಜನರು ನಿನ್ನ ಮಾತನ್ನು ನಂಬದಿರಲಿ.”
9 E a capital de Efraim é Samaria, e a cabeça de Samaria é o filho de Romelia. Se não o crerdes, não subsistireis.
10 ಬಳಿಕ ಯೆಹೋವನು ಆಹಾಜನೊಡನೆ ಮಾತನ್ನು ಮುಂದುವರಿಸಿದನು.
10 O Senhor disse ainda a Acaz:
11 ಯೆಹೋವನು ಹೇಳಿದ್ದೇನೆಂದರೆ, “ಇವೆಲ್ಲಾ ಸತ್ಯವೆಂದು ಮನದಟ್ಟು ಮಾಡಿಕೊಳ್ಳಲು ಒಂದು ಗುರುತನ್ನು ಕೇಳಿಕೊ. ನಿನಗೆ ಯಾವ ಗುರುತನ್ನು ಬೇಕಾದರೂ ಕೇಳಿಕೊ. ಆ ಗುರುತು ಆಳವಾದ ನರಕದಿಂದ ಬಂದ ಗುರುತಾದರೂ ಸರಿಯೇ ಅಥವಾ ಉನ್ನತವಾದ ಆಕಾಶದಿಂದ ಬಂದ ಗುರುತಾದರೂ ಸರಿಯೇ, ನಿನಗೆ ದಯಪಾಲಿಸುವೆನು” ಎಂದು ಹೇಳಿದನು.
11 Pede ao Senhor teu Deus um sinal, seja do fundo da habitação dos mortos, seja lá do alto.
12 ಅದಕ್ಕೆ ಆಹಾಜನು, “ಇದು ಸತ್ಯವೆಂಬುದಕ್ಕೆ ನಾನು ಯಾವ ಗುರುತನ್ನೂ ಕೇಳಲಾರೆ. ನಾನು ಯೆಹೋವನನ್ನು ಪರೀಕ್ಷಿಸುವುದಿಲ್ಲ” ಎಂದು ಹೇಳಿದನು.
12 Acaz respondeu: De maneira alguma! Não quero pôr o Senhor à prova.
13 ಆಗ ಯೆಶಾಯನು ಹೇಳಿದ್ದೇನೆಂದರೆ, “ದಾವೀದನ ಮನೆತನದವರೇ, ಕಿವಿಗೊಟ್ಟು ಕೇಳಿರಿ. ನೀವು ಜನರ ತಾಳ್ಮೆಯನ್ನು ಪರೀಕ್ಷಿಸುತ್ತೀರಿ. ಆದರೆ ಅದು ನಿಮಗೆ ದೊಡ್ಡ ವಿಷಯವಲ್ಲ. ಆದರೆ ಈಗ ನೀವು ನನ್ನ ದೇವರ ತಾಳ್ಮೆಯನ್ನು ಪರೀಕ್ಷಿಸುತ್ತಿದ್ದೀರಿ.
13 Isaías respondeu: Ouvi, casa de Davi: Não vos basta fatigar a paciência dos homens? Pretendeis cansar também o meu Deus?
14 ನನ್ನ ಒಡೆಯನಾದ ದೇವರು ನಿಮಗೊಂದು ಗುರುತನ್ನು ಕೊಡುವನು:
14 Por isso, o próprio Senhor vos dará um sinal: uma virgem conceberá e dará à luz um filho, e o chamará Deus Conosco.
15 ಆತನು ಒಳ್ಳೆಯದನ್ನು ಆರಿಸಿಕೊಳ್ಳಲು ಮತ್ತು ಕೆಟ್ಟದ್ದನ್ನು ನಿರಾಕರಿಸಲು ಕಲಿತುಕೊಳ್ಳುವವರೆಗೆ
15 Ele será nutrido com manteiga e mel até que saiba rejeitar o mal e escolher o bem.
16 ಆ ಮಗುವು ಒಳ್ಳೆಯದರ ಬಗ್ಗೆ ಮತ್ತು ಕೆಟ್ಟದ್ದರ ಬಗ್ಗೆ ಕಲಿತುಕೊಳ್ಳುವಷ್ಟು ವಯಸ್ಸಾಗುವ ಮೊದಲೇ
16 Porque antes que o menino saiba rejeitar o mal e escolher o bem, a terra, cujos dois reis tu temes, será devastada.
17 “ಆದರೆ ನೀವು ಯೆಹೋವನಿಗೆ ಭಯಪಡುವವರಾಗಿರಬೇಕು. ಯಾಕೆಂದರೆ ಆತನು ನಿಮಗೆ ಸಂಕಟದ ಕಾಲವನ್ನು ತಂದೊಡ್ಡುವನು. ಅದು ಎಫ್ರಾಯೀಮ್ ಯೆಹೂದದಿಂದ ಅಗಲಿಹೋದ ಸಮಯದಲ್ಲಾದ ಸಂಕಂಟದಂತಿರುವುದು. ಆ ಸಂಕಟವು ನಿಮ್ಮ ಜನಗಳಿಗೂ ನಿಮ್ಮ ಪೂರ್ವಿಕರ ಕುಟುಂಬಕ್ಕೂ ಬರುವದು. ದೇವರು ಏನು ಮಾಡುವನು? ಆತನು ಅಶ್ಶೂರದ ರಾಜನನ್ನು ನಿಮಗೆ ವಿರುದ್ಧವಾಗಿ ಯುದ್ಧಕ್ಕೆ ಬರಮಾಡುವನು.
17 O Senhor fará vir sobre ti, sobre teu povo e sobre a casa de teu pai, dias tais como não houve desde que Efraim se separou de Judá {o rei dos assírios}.
18 “ಆ ಸಮಯದಲ್ಲಿ ಯೆಹೋವನು ನೊಣಗಳನ್ನು ಕರೆಯುವನು. ಆ ನೊಣಗಳು ಈಗ ಈಜಿಪ್ಟಿನ ನದಿಗಳ ಸಮೀಪದಲ್ಲಿವೆ. ಯೆಹೋವನು ದುಂಬಿಗಳನ್ನು ಕರೆಯುವನು. ಆ ದುಂಬಿಗಳು ಈಗ ಅಶ್ಶೂರ್ ದೇಶದಲ್ಲಿವೆ. ಈ ವೈರಿಗಳು ನಿಮ್ಮ ದೇಶಕ್ಕೆ ಬಂದು
18 Naquele dia, o Senhor assobiará às moscas que estão nas margens dos rios do Egito e às abelhas da terra da Assíria.
19 ಮರುಭೂಮಿಯ ಹಳ್ಳಗಳ ಸಮೀಪದಲ್ಲಿರುವ ಬಂಡೆಯ ಸಂದುಗೊಂದುಗಳಲ್ಲಿಯೂ ನೀರಿನ ಬಾವಿಗಳ ಬಳಿಯಲ್ಲಿರುವ ಮುಳ್ಳುಪೊದೆಗಳಲ್ಲಿಯೂ ಶಿಬಿರ ಹಾಕಿಕೊಳ್ಳುವರು.
19 Elas virão pousar em massa nos vales escarpados, nas cavernas dos rochedos, sobre todas as moitas e todas as pastagens.
20 ಯೆಹೋವನು ಅಶ್ಶೂರದವರ ಮೂಲಕ ಯೆಹೂದವನ್ನು ಶಿಕ್ಷಿಸುವನು. ಆತನು ಅಶ್ಶೂರವನ್ನು ಬಾಡಿಗೆಗೆ ತೆಗೆದುಕೊಂಡ ಕ್ಷೌರಿಕನ ಕತ್ತಿಯಂತೆ ತೆಗೆದುಕೊಂಡು ಯೆಹೂದದ ತಲೆಕೂದಲನ್ನೂ ಕೈಕಾಲುಗಳ ರೋಮವನ್ನೂ ಗಡ್ಡವನ್ನೂ ಬೋಳಿಸಿಬಿಡುವನು.
20 Naquele tempo, com uma navalha emprestada do outro lado do rio {com o rei da Assíria} o Senhor vos raspará a cabeça e os pêlos das pernas, assim como a barba.
21 “ಆ ಕಾಲದಲ್ಲಿ ಯಾವನೇ ಆಗಲಿ ಹಸುವನ್ನೂ ಎರಡು ಕುರಿಗಳನ್ನೂ ಸಾಕಿ,
21 Naquele tempo, cada homem manterá uma vaca e duas ovelhas;
22 ಅವು ಕರೆಯುವ ಹಾಲಿನಿಂದ ಮೊಸರನ್ನು ತಿನ್ನುವನು; ದೇಶದಲ್ಲಿರುವ ಪ್ರತಿಯೊಬ್ಬನೂ ಮೊಸರನ್ನೂ ಜೇನುತುಪ್ಪವನ್ನೂ ತಿಂದು ಜೀವಿಸುವನು.
22 comer-se-á a manteiga de todo o leite que elas derem, porque é de manteiga e mel que viverão aqueles que subsistirem na terra.
23 ಒಂದುಸಾವಿರ ದ್ರಾಕ್ಷಾಲತೆಗಳಿರುವ ತೋಟಗಳಿರುತ್ತವೆ. ಪ್ರತಿಯೊಂದು ದ್ರಾಕ್ಷಾಲತೆಯು ಒಂದುಸಾವಿರ ಬೆಳ್ಳಿನಾಣ್ಯಗಳಷ್ಟು ಬೆಲೆಬಾಳುವಂಥದ್ದಾಗಿರುತ್ತದೆ. ಆದರೆ ಅಂಥ ತೋಟಗಳು ಹಣಜಿಗಳಿಂದಲೂ ಮುಳ್ಳುಗಿಡಗಳಿಂದಲೂ ತುಂಬಿಕೊಂಡಿರುವವು.
23 Naquele tempo, todo terreno que contiver mil vides valendo mil siclos de prata será abandonado às sarças e aos espinhos.
24 ದೇಶವು ಕಾಡಾಗುವುದರಿಂದ ಜನರು ಬಿಲ್ಲುಬಾಣಗಳೊಡನೆ ಸಂಚರಿಸುವರು.
24 Ali só se entrará com setas e arcos, porque toda aquela terra estará coberta de sarças e espinhos.
25 ಒಂದು ಕಾಲದಲ್ಲಿ ಜನರು ಈ ಬೆಟ್ಟಗಳ ಮೇಲೆ ವ್ಯವಸಾಯ ಮಾಡಿ ಬೆಳೆಯನ್ನು ಬೆಳೆಯುತ್ತಿದ್ದರು. ಆದರೆ ಆ ಸಮಯದಲ್ಲಿ ಜನರು ಅಲ್ಲಿಗೆ ಹೋಗುವುದಿಲ್ಲ. ದೇಶವು ಹಣಜಿಯಿಂದಲೂ ಮುಳ್ಳುಗಿಡಗಳಿಂದಲೂ ತುಂಬಿರುವದು. ಆ ಸ್ಥಳಗಳಿಗೆ ದನಕುರಿಗಳು ಮಾತ್ರವೇ ಹೋಗುತ್ತವೆ.”
25 Não se voltará mais aos montes que eram cultivados à enxada, por causa das sarças e dos espinhos; será permitido aos bois pastá-los e serão pisados pelos carneiros.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Isaías 7, comparar traduções ou montar um estudo — tudo direto pelo WhatsApp.