João 11

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVT

Sair da comparação
NVT Nova Versão Transformadora
1 ಲಾಜರನೆಂಬ ಒಬ್ಬನು ಅಸ್ವಸ್ಥನಾಗಿದ್ದನು. ಅವನು ಬೆಥಾನಿ ಎಂಬ ಊರಿನಲ್ಲಿ ವಾಸವಾಗಿದ್ದನು. ಮರಿಯಳು ಮತ್ತು ಆಕೆಯ ಸಹೋದರಿಯಾದ ಮಾರ್ಥಳು ಈ ಊರಿನಲ್ಲೇ ವಾಸವಾಗಿದ್ದರು.
1 Um homem chamado Lázaro estava doente. Ele morava em Betânia com suas irmãs, Maria e Marta.
2 ಪ್ರಭುವಿಗೆ (ಯೇಸುವಿಗೆ) ಪರಿಮಳತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೆಕೂದಲಿನಿಂದ ಒರಸಿದವಳೇ ಈ ಮರಿಯಳು. ಅಸ್ವಸ್ಥನಾಗಿದ್ದ ಲಾಜರನು ಮರಿಯಳ ಸಹೋದರನಾಗಿದ್ದನು.
2 Foi Maria, a irmã de Lázaro, que mais tarde derramou perfume caro nos pés do Senhor e os enxugou com os cabelos.
3 ಆದ್ದರಿಂದ ಮರಿಯಳು ಮತ್ತು ಮಾರ್ಥಳು, “ಪ್ರಭುವೇ, ನಿನ್ನ ಪ್ರಿಯ ಸ್ನೇಹಿತನಾದ ಲಾಜರನು ಅಸ್ವಸ್ಥನಾಗಿದ್ದಾನೆ” ಎಂಬ ಸಂದೇಶವನ್ನು ಆತನಿಗೆ ತಿಳಿಸಲು ಒಬ್ಬನನ್ನು ಕಳುಹಿಸಿಕೊಟ್ಟರು.
3 As duas irmãs enviaram um recado a Jesus, dizendo: “Senhor, seu amigo querido está muito doente”.
4 ಯೇಸು ಇದನ್ನು ಕೇಳಿದಾಗ, “ಈ ಕಾಯಿಲೆಯು ದೇವರ ಮತ್ತು ದೇವಕುಮಾರನ ಮಹಿಮೆಗಾಗಿ ಬಂದಿದೆಯೇ ಹೊರತು ಮರಣಕ್ಕಾಗಿಯಲ್ಲ” ಎಂದು ಹೇಳಿದನು.
4 Quando Jesus ouviu isso, disse: “A doença de Lázaro não acabará em morte. Ela aconteceu para a glória de Deus, para que o Filho de Deus receba glória por meio dela”.
5 ಯೇಸು ಮಾರ್ಥಳನ್ನು, ಆಕೆಯ ಸಹೋದರಿಯನ್ನು ಮತ್ತು ಲಾಜರನ್ನು ಪ್ರೀತಿಸುತ್ತಿದ್ದನು.
5 Jesus amava Marta, Maria e Lázaro.
6 ‘ಲಾಜರನು ಅಸ್ವಸ್ಥನಾಗಿದ್ದಾನೆ’ ಎಂಬ ವಾರ್ತೆಯನ್ನು ಆತನು ಕೇಳಿದಾಗ ತಾನಿದ್ದ ಸ್ಥಳದಲ್ಲಿಯೇ ಇನ್ನೂ ಎರಡು ದಿನಗಳವರೆಗೆ ತಂಗಿದನು.
6 Ouvindo, portanto, que Lázaro estava doente, ficou mais dois dias onde estava.
7 ಬಳಿಕ ಆತನು ತನ್ನ ಶಿಷ್ಯರಿಗೆ, “ನಾವು ಜುದೇಯಕ್ಕೆ ಹಿಂತಿರುಗಿ ಹೋಗಬೇಕು” ಎಂದು ಹೇಳಿದನು.
7 Depois, disse a seus discípulos: “Vamos voltar para a Judeia”.
8 ಶಿಷ್ಯರು, “ಗುರುವೇ, ಜುದೇಯದ ಯೆಹೂದ್ಯರು ನಿನ್ನನ್ನು ಕಲ್ಲುಗಳಿಂದ ಕೊಲ್ಲಲು ಪ್ರಯತ್ನಿಸಿದರು. ಅದಾದದ್ದು ಕೇವಲ ಸ್ವಲ್ಪಕಾಲದ ಹಿಂದೆಯಷ್ಟೇ. ಈಗ ನೀನು ಮತ್ತೆ ಅಲ್ಲಿಗೆ ಹೋಗಬೇಕೆನ್ನುವಿಯಾ?” ಎಂದು ಉತ್ತರಕೊಟ್ಟರು.
8 Os discípulos se opuseram, dizendo: “Rabi, apenas alguns dias atrás o povo da Judeia tentou apedrejá-lo. Ainda assim, o senhor vai voltar para lá?”.
9 ಯೇಸು, “ಹಗಲಿಗೆ ಹನ್ನೆರಡು ತಾಸುಗಳಿರುತ್ತವೆ. ಹೌದಲ್ಲವೇ? ಹಗಲಿನಲ್ಲಿ ನಡೆಯುವವನು ಎಡವಿಬೀಳುವುದಿಲ್ಲ. ಏಕೆಂದರೆ ಈ ಲೋಕದ ಬೆಳಕಿನಿಂದ ಅವನು ನೋಡಬಲ್ಲನು.
9 Jesus respondeu: “Há doze horas de claridade todos os dias. Durante o dia, as pessoas podem andar com segurança. Conseguem enxergar, pois têm a luz deste mundo.
10 ಆದರೆ ರಾತ್ರಿಯಲ್ಲಿ ನಡೆಯುವವನು ಎಡವುತ್ತಾನೆ. ಏಕೆಂದರೆ ನೋಡಿಕೊಂಡು ನಡೆಯಲು ಅವನಿಗೆ ಯಾವ ಬೆಳಕೂ ಇರುವುದಿಲ್ಲ” ಎಂದು ಉತ್ತರಕೊಟ್ಟನು.
10 À noite, porém, correm o risco de tropeçar, pois não há luz”.
11 ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ, “ನಮ್ಮ ಸ್ನೇಹಿತನಾದ ಲಾಜರನು ಈಗ ನಿದ್ರಿಸುತ್ತಿದ್ದಾನೆ. ಅವನನ್ನು ಎಬ್ಬಿಸಲು ನಾನು ಅಲ್ಲಿಗೆ ಹೋಗುತ್ತಿದ್ದೇನೆ” ಎಂದು ಹೇಳಿದನು.
11 E acrescentou: “Nosso amigo Lázaro adormeceu, mas agora vou despertá-lo”.
12 ಶಿಷ್ಯರು, “ಪ್ರಭುವೇ, ಅವನು ನಿದ್ರೆ ಮಾಡುತ್ತಿದ್ದರೆ ಆರೋಗ್ಯ ಹೊಂದುವನು” ಎಂದು ಉತ್ತರಕೊಟ್ಟರು.
12 Os discípulos disseram: “Senhor, se ele dorme é porque logo vai melhorar!”.
13 ಲಾಜರನು ಸತ್ತುಹೋಗಿದ್ದಾನೆ. ಎಂಬರ್ಥದಲ್ಲಿ ಯೇಸು ಹೇಳಿದನು. ಆದರೆ ಲಾಜರನು ನಿಜವಾಗಿಯೂ ನಿದ್ರಿಸುತ್ತಿದ್ದಾನೆ ಎಂಬರ್ಥದಲ್ಲಿ ಯೇಸು ಹೇಳಿದನೆಂಬುದಾಗಿ ಶಿಷ್ಯರು ಭಾವಿಸಿಕೊಂಡರು.
13 Pensavam que Jesus falava apenas do repouso do sono, mas ele se referia à morte de Lázaro.
14 ಆದ್ದರಿಂದ ಯೇಸು, “ಲಾಜರನು ಸತ್ತುಹೋಗಿದ್ದಾನೆ.
14 Então ele disse claramente: “Lázaro está morto.
15 ಆದರೆ ನಾನು ಅಲ್ಲಿ ಇಲ್ಲದಿದ್ದ ಕಾರಣ ಸಂತೋಷಿಸುತ್ತೇನೆ. ನಿಮ್ಮ ವಿಷಯದಲ್ಲಿಯೂ ನಾನು ಸಂತೋಷಪಡುತ್ತೇನೆ. ಏಕೆಂದರೆ, ಆಗ ನೀವು ನನ್ನಲ್ಲಿ ನಂಬಿಕೆ ಇಡುವಿರಿ. ಬನ್ನಿ, ಅವನ ಬಳಿಗೆ ಹೋಗೋಣ” ಎಂದು ಸ್ವಷ್ಟವಾಗಿ ಹೇಳಿದನು.
15 E, por causa de vocês, eu me alegro por não ter estado lá, pois agora vocês vão crer de fato. Venham, vamos até ele”.
16 ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಯೇಸುವಿನೊಂದಿಗೆ ಹೋಗಿ ಜುದೇಯದಲ್ಲಿ ಸಾಯೋಣ” ಎಂದು ಹೇಳಿದನು.
16 Tomé, apelidado de Gêmeo, disse aos outros discípulos: “Vamos até lá também para morrer com Jesus”.
17 ಯೇಸು ಬೆಥಾನಿಯಕ್ಕೆ ಬಂದನು. ಈಗಾಗಲೇ ಲಾಜರನು ಸತ್ತು ಸಮಾಧಿಯಾಗಿ ನಾಲ್ಕು ದಿನಗಳಾಯಿತೆಂಬುದು ಯೇಸುವಿಗೆ ತಿಳಿಯಿತು.
17 Quando Jesus chegou a Betânia, disseram-lhe que Lázaro estava no túmulo havia quatro dias.
18 ಬೆಥಾನಿಯು ಜೆರುಸಲೇಮಿನಿಂದ ಸುಮಾರು ಎರಡು ಮೈಲಿಗಳಷ್ಟು ದೂರದಲ್ಲಿತ್ತು.
18 Betânia ficava a cerca de três quilômetros de Jerusalém,
19 ಅನೇಕ ಯೆಹೂದ್ಯರು ಮಾರ್ಥ ಮತ್ತು ಮರಿಯಳ ಬಳಿಗೆ ಬಂದಿದ್ದರು. ಮಾರ್ಥ ಮತ್ತು ಮರಿಯಳನ್ನು ಅವರ ತಮ್ಮನಾದ ಲಾಜರನ ವಿಷಯದಲ್ಲಿ ಸಂತೈಸಲು ಯೆಹೂದ್ಯರು ಬಂದಿದ್ದರು.
19 e muitos moradores da região tinham vindo consolar Marta e Maria pela perda do irmão.
20 ಯೇಸು ಬರುತ್ತಿದ್ದಾನೆ ಎಂಬ ಸುದ್ದಿಯನ್ನು ಕೇಳಿ ಮಾರ್ಥಳು ಆತನನ್ನು ವಂದಿಸಲು ಹೊರಗೆ ಹೋದಳು. ಆದರೆ ಮರಿಯಳು ಮನೆಯಲ್ಲೇ ಇದ್ದಳು.
20 Quando Marta soube que Jesus estava chegando, foi ao seu encontro. Maria, porém, ficou em casa.
21 ಮಾರ್ಥಳು ಯೇಸುವಿಗೆ, “ಪ್ರಭುವೇ, ನೀನು ಇಲ್ಲಿ ಇದ್ದಿದ್ದರೆ, ನನ್ನ ಸಹೋದರನು ಸಾಯುತ್ತಿರಲಿಲ್ಲ.
21 Marta disse a Jesus: “Se o Senhor estivesse aqui, meu irmão não teria morrido.
22 ಆದರೆ ಈಗಲೂ ಸಹ ನೀನು ಏನನ್ನೇ ಕೇಳಿಕೊಂಡರೂ ದೇವರು ನಿನಗೆ ಕೊಡುತ್ತಾನೆ ಎಂಬುದು ನನಗೆ ತಿಳಿದಿದೆ” ಎಂದು ಹೇಳಿದಳು.
22 Mas sei que, mesmo agora, Deus lhe dará tudo que pedir”.
23 ಯೇಸು, “ನಿನ್ನ ಸಹೋದರನು ಮತ್ತೆ ಜೀವಂತವಾಗಿ ಎದ್ದುಬರುವನು” ಎಂದು ಹೇಳಿದನು.
23 Jesus lhe disse: “Seu irmão vai ressuscitar”.
24 ಮಾರ್ಥಳು, “ಅಂತಿಮ ದಿನದಂದು ಪುನರುತ್ಥಾನವಾಗುವಾಗ ಅವನು ಮತ್ತೆ ಎದ್ದುಬರುವನೆಂದು ನನಗೆ ಗೊತ್ತಿದೆ” ಎಂಬುದಾಗಿ ಉತ್ತರ ಕೊಟ್ಟಳು.
24 “Sim”, respondeu Marta. “Ele vai ressuscitar quando todos ressuscitarem, no último dia.”
25 ಯೇಸು ಆಕೆಗೆ, “ನಾನೇ ಪುನರುತ್ಥಾನ. ನಾನೇ ಜೀವ. ನನ್ನನ್ನು ನಂಬುವವನು ತಾನು ಸತ್ತನಂತರವೂ ಮತ್ತೆ ಜೀವವನ್ನು ಹೊಂದುವನು.
25 Então Jesus disse: “Eu sou a ressurreição e a vida. Quem crê em mim viverá, mesmo depois de morrer.
26 ಮತ್ತು ಬದುಕುತ್ತಾ ನನ್ನನ್ನು ನಂಬುವವನು ಎಂದಿಗೂ ಸಾಯುವುದಿಲ್ಲ. ಮಾರ್ಥಳೇ, ನೀನು ಇದನ್ನು ನಂಬುವಿಯಾ?” ಎಂದನು.
26 Quem vive e crê em mim jamais morrerá. Você crê nisso, Marta?”.
27 ಮಾರ್ಥಳು, “ಹೌದು ಪ್ರಭುವೇ, ನೀನು ದೇವರ ಮಗನಾದ ಕ್ರಿಸ್ತನೆಂದು ನಾನು ನಂಬುವೆ. ಈ ಲೋಕಕ್ಕೆ ಬರಬೇಕಾಗಿದ್ದವನು ನೀನೇ” ಎಂದು ಉತ್ತರಕೊಟ್ಟಳು.
27 “Sim, Senhor”, respondeu ela. “Eu creio que o senhor é o Cristo, o Filho de Deus, aquele que veio ao mundo da parte de Deus.”
28 ಮಾರ್ಥಳು ಹೀಗೆ ಹೇಳಿದ ಮೇಲೆ, ತನ್ನ ಸಹೋದರಿಯಾದ ಮರಿಯಳ ಬಳಿಗೆ ಹಿಂತಿರುಗಿ ಹೋದಳು. ಮಾರ್ಥಳು ಮರಿಯಳೊಂದಿಗೆ ಪ್ರತ್ಯೇಕವಾಗಿ ಮಾತಾಡಿ, “ಗುರುವು (ಯೇಸು) ನಿನ್ನನ್ನು ಕರೆಯುತ್ತಿದ್ದಾನೆ” ಎಂದು ತಿಳಿಸಿದಳು.
28 Em seguida, voltou para casa. Chamou Maria à parte e disse: “O Mestre está aqui e quer ver você”.
29 ಇದನ್ನು ಕೇಳಿದ ಕೂಡಲೇ ಮರಿಯಳು ಎದ್ದು ಯೇಸುವಿನ ಬಳಿಗೆ ಬೇಗಬೇಗನೆ ಹೋದಳು.
29 Maria se levantou de imediato e foi até ele.
30 ಯೇಸು ಇನ್ನೂ ಊರೊಳಗೆ ಬಂದಿರಲಿಲ್ಲ. ಮಾರ್ಥಳು ತನ್ನನ್ನು ಸಂಧಿಸಿದ ಸ್ಥಳದಲ್ಲೇ ಆತನಿದ್ದನು.
30 Jesus tinha ficado fora do povoado, no lugar onde Marta havia se encontrado com ele.
31 ಯೆಹೂದ್ಯರು ಮರಿಯಳೊಂದಿಗೆ ಮನೆಯಲ್ಲಿದ್ದರು. ಅವರು ಆಕೆಯನ್ನು ಸಂತೈಸುತ್ತಿದ್ದರು. ಮರಿಯಳು ಎದ್ದು ಬೇಗನೆ ಹೋಗುವುದನ್ನು ಅವರು ಕಂಡರು. ಆಕೆಯು ಅಳುವುದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಿದ್ದಾಳೆಂದು ಅವರು ಭಾವಿಸಿಕೊಂಡು ಆಕೆಯನ್ನು ಹಿಂಬಾಲಿಸಿದರು.
31 Quando as pessoas que estavam na casa viram Maria sair apressadamente, imaginaram que ela ia ao túmulo de Lázaro chorar e a seguiram.
32 ಯೇಸು ಇದ್ದ ಸ್ಥಳಕ್ಕೆ ಮರಿಯಳು ಹೋದಳು. ಆಕೆಯು ಯೇಸುವನ್ನು ಕಂಡಾಗ ಆತನ ಪಾದಗಳಿಗೆ ಅಡ್ಡಬಿದ್ದು, “ಪ್ರಭುವೇ, ನೀನು ಇಲ್ಲಿ ಇದ್ದಿದ್ದರೆ, ನನ್ನ ಸಹೋದರನು ಸಾಯುತ್ತಿರಲಿಲ್ಲ” ಎಂದು ಹೇಳಿದಳು.
32 Assim que chegou ao lugar onde Jesus estava e o viu, caiu a seus pés e disse: “Se o Senhor estivesse aqui, meu irmão não teria morrido”.
33 ಮರಿಯಳ ಮತ್ತು ಆಕೆಯೊಂದಿಗೆ ಬಂದಿದ್ದ ಯೆಹೂದ್ಯರ ಗೋಳಾಟವನ್ನು ಯೇಸು ನೋಡಿದಾಗ, ತನ್ನ ಹೃದಯದಲ್ಲಿ ಬಹಳವಾಗಿ ದುಃಖಗೊಂಡು ತತ್ತರಿಸಿದನು.
33 Quando Jesus viu Maria chorar, e o povo também, sentiu profunda indignação e grande angústia.
34 ಯೇಸು ಅವರಿಗೆ, “ಅವನನ್ನು ಎಲ್ಲಿ ಇಟ್ಟಿದ್ದೀರಿ?” ಎಂದು ಕೇಳಿದನು.
34 “Onde vocês o colocaram?”, perguntou. Eles responderam: “Senhor, venha e veja”.
35 ಯೇಸು ಕಣ್ಣೀರಿಟ್ಟನು.
35 Jesus chorou.
36 ಆಗ ಯೆಹೂದ್ಯರು, “ನೋಡಿ! ಯೇಸು ಅವನನ್ನು ಬಹಳವಾಗಿ ಪ್ರೀತಿಸುತ್ತಿದ್ದನು!” ಎಂದರು.
36 As pessoas que estavam por perto disseram: “Vejam como ele o amava!”.
37 ಆದರೆ ಕೆಲವು ಯೆಹೂದ್ಯರು, “ಯೇಸು ಕುರುಡನ ಕಣ್ಣುಗಳನ್ನು ಗುಣಪಡಿಸಿದನಲ್ಲಾ; ಲಾಜರನಿಗೂ ಸಹಾಯಮಾಡಿ ಅವನನ್ನು ಸಾವಿನಿಂದ ತಪ್ಪಿಸಬಾರದಾಗಿತ್ತೇ?” ಎಂದರು.
37 Outros, porém, disseram: “Este homem curou um cego. Não poderia ter impedido que Lázaro morresse?”.
38 ಯೇಸು ತನ್ನ ಹೃದಯದಲ್ಲಿ ಮತ್ತೆ ಬಹಳವಾಗಿ ದುಃಖಗೊಂಡು, ಲಾಜರನಿದ್ದ ಸಮಾಧಿಯ ಬಳಿಗೆ ಬಂದನು. ಆ ಸಮಾಧಿಯು ಒಂದು ಗವಿಯಾಗಿತ್ತು. ಅದರ ಬಾಯಿಗೆ ದೊಡ್ಡಕಲ್ಲನ್ನು ಮುಚ್ಚಿದ್ದರು.
38 Jesus, sentindo-se novamente indignado, chegou ao túmulo, uma gruta com uma pedra fechando a entrada.
39 “ಆ ಕಲ್ಲನ್ನು ತೆಗೆದುಹಾಕಿರಿ” ಎಂದು ಯೇಸು ಹೇಳಿದನು.
39 “Rolem a pedra para o lado”, ordenou. “Senhor, ele está morto há quatro dias”, disse Marta, a irmã do falecido. “O mau cheiro será terrível.”
40 ಯೇಸು ಮಾರ್ಥಳಿಗೆ, “ನಾನು ನಿನಗೆ ಹೇಳಿದ್ದನ್ನು ಜ್ಞಾಪಿಸಿಕೊಳ್ಳುವಿಯಾ? ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ನಿನಗೆ ಹೇಳಿದೆನು” ಎಂದನು.
40 Jesus respondeu: “Eu não lhe disse que, se você cresse, veria a glória de Deus?”.
41 ಆದ್ದರಿಂದ ಅವರು ಸಮಾಧಿಯ ಬಾಯಿಂದ ಕಲ್ಲನ್ನು ತೆಗೆದುಹಾಕಿದರು. ಆಗ ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ತಂದೆಯೇ, ನನ್ನ ಪ್ರಾರ್ಥನೆಯನ್ನು ಕೇಳಿದರಿಂದ ನಿನ್ನನ್ನು ಕೊಂಡಾಡುತ್ತೇನೆ.
41 Então rolaram a pedra para o lado. Jesus olhou para o céu e disse: “Pai, eu te agradeço porque me ouviste.
42 ನೀನು ಯಾವಾಗಲೂ ನನಗೆ ಕಿವಿಗೊಡುವೆ ಎಂಬುದು ನನಗೆ ತಿಳಿದಿದೆ. ಆದರೆ ಇಲ್ಲಿ ನನ್ನ ಸುತ್ತಲೂ ನೆರೆದಿರುವ ಜನರಿಗೋಸ್ಕರವಾಗಿ ನಾನು ಈ ಸಂಗತಿಗಳನ್ನು ಹೇಳಿದೆನು. ನೀನೇ ನನ್ನನ್ನು ಕಳುಹಿಸಿರುವುದಾಗಿ ಅವರು ನಂಬಬೇಕೆಂದು ನಾನು ಬಯಸುತ್ತೇನೆ” ಎಂದನು.
42 Tu sempre me ouves, mas eu disse isso por causa de todas as pessoas que estão aqui, para que elas creiam que tu me enviaste”.
43 ಬಳಿಕ ಯೇಸು ಗಟ್ಟಿಯಾದ ಧ್ವನಿಯಿಂದ, “ಲಾಜರನೇ, ಹೊರಗೆ ಬಾ!” ಎಂದು ಕರೆದನು.
43 Então Jesus gritou: “Lázaro, venha para fora!”.
44 ಸತ್ತುಹೋಗಿದ್ದವನು (ಲಾಜರನು) ಹೊರಗೆ ಬಂದನು. ಅವನ ಕೈಕಾಲುಗಳನ್ನು ಬಟ್ಟೆಗಳಿಂದ ಸುತ್ತಲಾಗಿತ್ತು. ಅವನ ಮುಖವನ್ನು ಕರವಸ್ತ್ರದಿಂದ ಮುಚ್ಚಲಾಗಿತ್ತು.
44 E o morto saiu, com as mãos e os pés presos com faixas e o rosto envolto num pano. Jesus disse: “Desamarrem as faixas e deixem-no ir!”.
45 ಮರಿಯಳನ್ನು ಸಂದರ್ಶಿಸಲು ಬಂದಿದ್ದ ಅನೇಕ ಯೆಹೂದ್ಯರು ಅಲ್ಲಿದ್ದರು. ಯೇಸು ಮಾಡಿದ ಈ ಕಾರ್ಯವನ್ನು ಕಂಡ ಇವರಲ್ಲಿ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು.
45 Muitos dos judeus que estavam com Maria creram em Jesus quando viram isso.
46 ಆದರೆ ಕೆಲವು ಯೆಹೂದ್ಯರು ಫರಿಸಾಯರ ಬಳಿಗೆ ಹೋಗಿ, ಯೇಸು ಮಾಡಿದ್ದನ್ನು ತಿಳಿಸಿದರು.
46 Alguns, no entanto, foram aos fariseus e contaram o que Jesus tinha feito.
47 ಆಗ ಮಹಾಯಾಜಕರು ಮತ್ತು ಫರಿಸಾಯರು ಯೆಹೂದ್ಯರ ಆಲೋಚನಾಸಭೆಯನ್ನು ಕರೆದು, “ನಾವು ಏನು ಮಾಡಬೇಕು? ಈ ಮನುಷ್ಯನು (ಯೇಸು) ಅನೇಕ ಸೂಚಕಕಾರ್ಯಗಳನ್ನು ಮಾಡುತ್ತಿದ್ದಾನೆ.
47 Então os principais sacerdotes e fariseus reuniram o conselho dos líderes do povo. “Que vamos fazer?”, perguntavam uns aos outros. “Sem dúvida, este homem realiza muitos sinais.
48 ಈ ಕಾರ್ಯಗಳನ್ನು ಮಾಡಲು ನಾವು ಅವನಿಗೆ ಅವಕಾಶ ಕೊಟ್ಟರೆ ಜನರೆಲ್ಲರೂ ಇವನಲ್ಲಿ ನಂಬಿಕೆ ಇಡುವರು. ಆಗ ರೋಮ್ ರಾಜ್ಯದವರು ಬಂದು ನಮ್ಮ ದೇವಾಲಯವನ್ನೂ ನಮ್ಮ ದೇಶವನ್ನೂ ವಶಪಡಿಸಿಕೊಳ್ಳುವರು” ಅಂದರು.
48 Se permitirmos que continue assim, logo todos crerão nele. Então o exército romano virá e destruirá nosso templo e nossa nação.”
49 ಅವರಲ್ಲಿ ಕಾಯಫನೆಂಬ ಒಬ್ಬನಿದ್ದನು. ಅವನು ಆ ವರ್ಷ ಮಹಾಯಾಜಕನಾಗಿದ್ದನು. ಅವನು, “ನಿಮಗೆ ಏನೂ ಗೊತ್ತಿಲ್ಲ!
49 Caifás, o sumo sacerdote naquele ano, disse: “Vocês não sabem o que estão dizendo!
50 ಇಡೀ ಜನಾಂಗವು ನಾಶವಾಗುವುದಕ್ಕಿಂತ ಒಬ್ಬನು ಅವರಿಗೋಸ್ಕರವಾಗಿ ಸಾಯುವುದು ಉತ್ತಮ. ಆದರೆ ನೀವು ಇದನ್ನು ಅರ್ಥಮಾಡಿಕೊಳ್ಳುತ್ತಿಲ್ಲ” ಎಂದು ಹೇಳಿದನು.
50 Não percebem que é melhor para vocês que um homem morra pelo povo em vez de a nação inteira ser destruída?”.
51 ಇದು ಕಾಯಫನ ಸ್ವಂತ ಆಲೋಚನೆಯಾಗಿರಲಿಲ್ಲ. ಅವನು ಆ ವರ್ಷ ಮಹಾಯಾಜಕನಾಗಿದ್ದನು. ಆದ್ದರಿಂದ ಯೆಹೂದ್ಯರಿಗೋಸ್ಕರವಾಗಿ ಯೇಸು ಸಾಯುತ್ತಾನೆಂದು ಅವನು ನಿಜವಾಗಿಯೂ ಪ್ರವಾದಿಸಿದನು.
51 Não disse isso por si mesmo, mas, sendo o sumo sacerdote naquele ano, profetizou que Jesus morreria pela nação inteira.
52 ಹೌದು, ಯೆಹೂದ್ಯರಿಗಾಗಿಯೂ ಲೋಕದಲ್ಲೆಲ್ಲಾ ಚದರಿಹೋಗಿರುವ ದೇವರ ಮಕ್ಕಳನ್ನೆಲ್ಲ ಒಂದುಗೂಡಿಸುವುದಕ್ಕಾಗಿಯೂ ಆತನು ಸಾಯಲಿದ್ದನು.
52 E não apenas por aquela nação, mas para reunir em um só corpo todos os filhos de Deus espalhados ao redor do mundo.
53 ಅಂದಿನಿಂದ ಯೆಹೂದ್ಯನಾಯಕರು ಯೇಸುವನ್ನು ಕೊಲ್ಲಲು ಸಂಚು ಮಾಡಲಾರಂಭಿಸಿದರು.
53 Daquele dia em diante, começaram a tramar a morte de Jesus.
54 ಆದ್ದರಿಂದ ಯೇಸುವು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ಸಂಚರಿಸುವುದನ್ನು ಬಿಟ್ಟುಬಿಟ್ಟನು. ಆತನು ಜೆರುಸಲೇಮನ್ನು ಬಿಟ್ಟು ಮರುಭೂಮಿಯ ಸಮೀಪದಲ್ಲಿದ್ದ ಸ್ಥಳಕ್ಕೆ ಹೋಗಿ ಎಫ್ರಾಯಿಮ್ ಎಂಬ ಊರಿನಲ್ಲಿ ತನ್ನ ಶಿಷ್ಯರ ಸಂಗಡ ಇಳಿದುಕೊಂಡನು.
54 Por essa razão, Jesus parou de andar no meio do povo. Foi para um lugar próximo do deserto, para o povoado de Efraim, onde permaneceu com seus discípulos.
55 ಆಗ ಯೆಹೂದ್ಯರ ಪಸ್ಕಹಬ್ಬವು ಸಮೀಪವಾಗಿತ್ತು. ಪಸ್ಕಹಬ್ಬಕ್ಕಿಂತ ಮೊದಲೇ ತಮ್ಮ ಗ್ರಾಮಗಳಿಂದ ಅನೇಕ ಜನರು ಜೆರುಸಲೇಮಿಗೆ ಹೋಗಿದ್ದರು. ವಿಶೇಷವಾದ ಕಾರ್ಯಗಳನ್ನು ಮಾಡಿ ಪಸ್ಕಹಬ್ಬಕ್ಕಾಗಿ ತಮ್ಮನ್ನು ಶುದ್ಧೀಕರಿಸಿಕೊಳ್ಳಬೇಕೆಂದು ಅವರು ಹೋಗಿದ್ದರು.
55 Faltava pouco tempo para a festa judaica da Páscoa, e muita gente de toda a região chegou a Jerusalém para participar da cerimônia de purificação, antes que a Páscoa começasse.
56 ಅವರು ಅಲ್ಲಿ ಯೇಸುವನ್ನು ಹುಡುಕತೊಡಗಿದರು. ಅವರು ದೇವಾಲಯದಲ್ಲಿ ನಿಂತುಕೊಂಡು, “ಆತನು ಹಬ್ಬಕ್ಕೆ ಬರುವನೇ? ನಿಮ್ಮ ಆಲೋಚನೆ ಏನು?” ಎಂದು ಒಬ್ಬರನ್ನೊಬ್ಬರು ಕೇಳುತ್ತಿದ್ದರು.
56 Continuavam procurando Jesus e, estando eles no templo, perguntavam uns aos outros: “O que vocês acham? Será que ele virá para a Páscoa?”.
57 ಆದರೆ ಮಹಾಯಾಜಕರು ಮತ್ತು ಫರಿಸಾಯರು, ಯೇಸು ಎಲ್ಲಿದ್ದಾನೆಂಬುದು ಯಾರಿಗಾದರೂ ತಿಳಿದು ಬಂದರೆ ತಮಗೆ ತಿಳಿಸಬೇಕೆಂದು ವಿಶೇಷ ಆಜ್ಞೆಯನ್ನು ಪ್ರಕಟಿಸಿದ್ದರು. ಅವರು ಆತನನ್ನು ಬಂಧಿಸಬೇಕೆಂದಿದ್ದರು.
57 Enquanto isso, os principais sacerdotes e fariseus deram ordem para que, se alguém soubesse onde Jesus estava, o denunciasse de imediato, a fim de que o prendessem.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar João 11, comparar traduções ou montar um estudo — tudo direto pelo WhatsApp.