João 18
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARA
1 ಯೇಸು ಪ್ರಾರ್ಥಿಸಿದ ಮೇಲೆ ತನ್ನ ಶಿಷ್ಯರೊಂದಿಗೆ ಹೊರಟನು. ಅವರು ಕಿದ್ರೋನ್ ಕಣಿವೆಯನ್ನು ದಾಟಿಹೋದರು. ಅದರ ಮತ್ತೊಂದು ಕಡೆಯಲ್ಲಿ ಆಲಿವ್ ಮರಗಳ ತೋಟವಿತ್ತು. ಯೇಸು ಮತ್ತು ಆತನ ಶಿಷ್ಯರು ಅಲ್ಲಿಗೆ ಹೋದರು.
1 Tendo Jesus dito estas palavras, saiu juntamente com seus discípulos para o outro lado do ribeiro Cedrom, onde havia um jardim; e aí entrou com eles.
2 ಯೇಸುವಿಗೆ ದ್ರೋಹ ಬಗೆದ ಯೂದನಿಗೂ ಈ ಸ್ಥಳವು ತಿಳಿದಿತ್ತು. ಏಕೆಂದರೆ ಯೇಸು ತನ್ನ ಶಿಷ್ಯರೊಂದಿಗೆ ಆಗಾಗ್ಗೆ ಅಲ್ಲಿಗೆ ಬರುತ್ತಿದ್ದನು.
2 E Judas, o traidor, também conhecia aquele lugar, porque Jesus ali estivera muitas vezes com seus discípulos.
3 ಯೂದನು ಸೈನಿಕರ ಗುಂಪೊಂದನ್ನೂ ಮಹಾಯಾಜಕರ ಮತ್ತು ಫರಿಸಾಯರ ಕಾವಲುಗಾರರಲ್ಲಿ ಕೆಲವರನ್ನೂ ಕರೆದುಕೊಂಡು ತೋಟಕ್ಕೆ ಬಂದನು. ಅವರು ದೀವಟಿಗೆ, ಪಂಜು ಮತ್ತು ಆಯುಧಗಳಿಂದ ಸುಸಜ್ಜಿತರಾಗಿದ್ದರು.
3 Tendo, pois, Judas recebido a escolta e, dos principais sacerdotes e dos fariseus, alguns guardas, chegou a este lugar com lanternas, tochas e armas.
4 ತನಗೆ ಸಂಭವಿಸಲಿದ್ದ ಪ್ರತಿಯೊಂದೂ ಯೇಸುವಿಗೆ ತಿಳಿದಿತ್ತು. ಆತನು ಹೊರಗೆ ಹೋಗಿ, “ನೀವು ಯಾರನ್ನು ಹುಡುಕುತ್ತಿದ್ದೀರಿ?” ಎಂದು ಕೇಳಿದನು.
4 Sabendo, pois, Jesus todas as coisas que sobre ele haviam de vir, adiantou-se e perguntou-lhes: A quem buscais?
5 ಅವರು, “ನಜರೇತಿನ ಯೇಸುವನ್ನು” ಎಂದು ಉತ್ತರಕೊಟ್ಟರು.
5 Responderam-lhe: A Jesus, o Nazareno. Então, Jesus lhes disse: Sou eu. Ora, Judas, o traidor, estava também com eles.
6 ಆತನು, “ನಾನೇ ಯೇಸು” ಎಂದಾಗ ಅವರು ಹಿಂದೆ ಸರಿದು ನೆಲದ ಮೇಲೆ ಬಿದ್ದರು.
6 Quando, pois, Jesus lhes disse: Sou eu, recuaram e caíram por terra.
7 ಯೇಸು ಅವರಿಗೆ ಮತ್ತೆ “ನೀವು ಯಾರನ್ನು ಹುಡುಕುತ್ತಿದ್ದೀರಿ?” ಎಂದು ಕೇಳಿದನು.
7 Jesus, de novo, lhes perguntou: A quem buscais? Responderam: A Jesus, o Nazareno.
8 ಆತನು, “ನಾನೇ ಯೇಸು ಎಂದು ನಿಮಗೆ ಹೇಳಿದೆನಲ್ಲಾ. ನೀವು ನನ್ನನ್ನು ಹುಡುಕುತ್ತಿದ್ದರೆ, ಉಳಿದ ಇವರನ್ನು ಹೋಗಬಿಡಿರಿ” ಎಂದು ಹೇಳಿದನು.
8 Então, lhes disse Jesus: Já vos declarei que sou eu; se é a mim, pois, que buscais, deixai ir estes;
9 “ನೀನು ನನಗೆ ಕೊಟ್ಟ ಜನರಲ್ಲಿ ಯಾರನ್ನೂ ನಾನು ಕಳೆದುಕೊಳ್ಳಲಿಲ್ಲ” ಎಂದು ಯೇಸು ಮೊದಲು ಹೇಳಿದ್ದ ಮಾತು ಹೀಗೆ ನಿಜವಾಯಿತು.
9 para se cumprir a palavra que dissera: Não perdi nenhum dos que me deste.
10 ಸೀಮೋನ್ ಪೇತ್ರನ ಬಳಿ ಒಂದು ಖಡ್ಗವಿತ್ತು. ಅವನು ಆ ಖಡ್ಗವನ್ನು ಹೊರತೆಗೆದು ಪ್ರಧಾನ ಯಾಜಕನ ಸೇವಕನೊಬ್ಬನಿಗೆ ಹೊಡೆದು, ಅವನ ಬಲಗಿವಿಯನ್ನು ಕತ್ತರಿಸಿದನು. (ಆ ಸೇವಕನ ಹೆಸರು ಮಾಲ್ಕ.)
10 Então, Simão Pedro puxou da espada que trazia e feriu o servo do sumo sacerdote, cortando-lhe a orelha direita; e o nome do servo era Malco.
11 ಯೇಸು ಪೇತ್ರನಿಗೆ, “ನಿನ್ನ ಖಡ್ಗವನ್ನು ಒರೆಯಲ್ಲಿ ಹಾಕು! ತಂದೆಯು ನನಗೆ ಕೊಟ್ಟಿರುವ ಸಂಕಟದ ಪಾತ್ರೆಯನ್ನು ನಾನು ಸ್ವೀಕರಿಸಿಕೊಳ್ಳಬೇಕು” ಎಂದು ಹೇಳಿದನು.
11 Mas Jesus disse a Pedro: Mete a espada na bainha; não beberei, porventura, o cálice que o Pai me deu?
12 ಬಳಿಕ ಆ ಸೈನಿಕರು, ಅವರ ಸೇನಾಧಿಪತಿ ಹಾಗೂ ಯೆಹೂದ್ಯ ಕಾವಲುಗಾರರು ಯೇಸುವನ್ನು ಹಿಡಿದು ಕಟ್ಟಿ, ಅನ್ನನ ಬಳಿಗೆ ತಂದರು.
12 Assim, a escolta, o comandante e os guardas dos judeus prenderam Jesus, manietaram-no
13 ಅನ್ನನು ಕಾಯಫನ ಮಾವ. ಆ ವರ್ಷ ಕಾಯಫನು ಪ್ರಧಾನಯಾಜಕನಾಗಿದ್ದನು.
13 e o conduziram primeiramente a Anás; pois era sogro de Caifás, sumo sacerdote naquele ano.
14 ಎಲ್ಲಾ ಜನರಿಗಾಗಿ ಒಬ್ಬನು ಸಾಯುವುದೇ ಮೇಲು ಎಂಬ ಸಲಹೆಯನ್ನು ಕೊಟ್ಟಿದ್ದವನು ಇವನೇ.
14 Ora, Caifás era quem havia declarado aos judeus ser conveniente morrer um homem pelo povo.
15 ಸೀಮೋನ್ ಪೇತ್ರ ಮತ್ತು ಯೇಸುವಿನ ಶಿಷ್ಯರಲ್ಲಿ ಮತ್ತೊಬ್ಬನು ಯೇಸುವಿನೊಂದಿಗೆ ಹೋದರು. ಆ ಮತ್ತೊಬ್ಬ ಶಿಷ್ಯನಿಗೆ ಪ್ರಧಾನಯಾಜಕನ ಪರಿಚಯವಿತ್ತು. ಆದ್ದರಿಂದ ಅವನು ಪ್ರಧಾನ ಯಾಜಕನ ಮನೆಯ ಅಂಗಳದೊಳಗೆ ಹೋದನು.
15 Simão Pedro e outro discípulo seguiam a Jesus. Sendo este discípulo conhecido do sumo sacerdote, entrou para o pátio deste com Jesus.
16 ಆದರೆ ಪೇತ್ರನು ಹೊರಗೆ ಬಾಗಿಲಿನ ಸಮೀಪದಲ್ಲಿ ಕಾದುಕೊಂಡಿದ್ದನು. ಪ್ರಧಾನಯಾಜಕನ ಪರಿಚಯವಿದ್ದ ಶಿಷ್ಯನು ಹೊರಗೆ ಬಂದು ದ್ವಾರಪಾಲಕಿಯೊಂದಿಗೆ ಮಾತಾಡಿ ಪೇತ್ರನನ್ನು ಒಳಗೆ ಕರೆದುಕೊಂಡು ಹೋದನು.
16 Pedro, porém, ficou de fora, junto à porta. Saindo, pois, o outro discípulo, que era conhecido do sumo sacerdote, falou com a encarregada da porta e levou a Pedro para dentro.
17 ದ್ವಾರಪಾಲಕಿಯು ಪೇತ್ರನಿಗೆ, “ಆ ಮನುಷ್ಯನ ಶಿಷ್ಯರಲ್ಲಿ ನೀನೂ ಒಬ್ಬನಲ್ಲವೇ?” ಎಂದು ಕೇಳಿದಳು.
17 Então, a criada, encarregada da porta, perguntou a Pedro: Não és tu também um dos discípulos deste homem? Não sou, respondeu ele.
18 ಆಗ ಚಳಿಯಿದ್ದುದರಿಂದ ಕಾವಲುಗಾರರು ಬೆಂಕಿ ಹಾಕಿ ಅದರ ಸುತ್ತಲೂ ನಿಂತುಕೊಂಡು ತಮ್ಮನ್ನು ಬೆಚ್ಚಗೆ ಮಾಡಿಕೊಳ್ಳುತ್ತಿದ್ದರು. ಪೇತ್ರನು ಅವರೊಂದಿಗೆ ನಿಂತುಕೊಂಡಿದ್ದನು.
18 Ora, os servos e os guardas estavam ali, tendo acendido um braseiro, por causa do frio, e aquentavam-se. Pedro estava no meio deles, aquentando-se também.
19 ಪ್ರಧಾನಯಾಜಕನು ಯೇಸುವಿಗೆ ಆತನ ಶಿಷ್ಯರ ಬಗ್ಗೆಯೂ ಆತನು ಉಪದೇಶಿಸಿದ ಸಂಗತಿಗಳ ಬಗ್ಗೆಯೂ ಪ್ರಶ್ನೆಗಳನ್ನು ಕೇಳಿದನು.
19 Então, o sumo sacerdote interrogou a Jesus acerca dos seus discípulos e da sua doutrina.
20 ಅದಕ್ಕೆ ಯೇಸು, “ನಾನು ಬಹಿರಂಗವಾಗಿ ಜನರೊಂದಿಗೆ ಮಾತಾಡಿದ್ದೇನೆ; ಯಾವಾಗಲೂ ಸಭಾಮಂದಿರಗಳಲ್ಲಿ ಮತ್ತು ದೇವಾಲಯದಲ್ಲಿ ಬೋಧಿಸಿದ್ದೇನೆ. ಯೆಹೂದ್ಯರೆಲ್ಲರೂ ಅಲ್ಲಿಗೆ ಒಟ್ಟಾಗಿ ಸೇರಿಬರುತ್ತಿದ್ದರು. ನಾನು ಯಾವುದನ್ನೂ ರಹಸ್ಯವಾಗಿ ಎಂದೂ ಹೇಳಿಲ್ಲ.
20 Declarou-lhe Jesus: Eu tenho falado francamente ao mundo; ensinei continuamente tanto nas sinagogas como no templo, onde todos os judeus se reúnem, e nada disse em oculto.
21 ಹೀಗಿರಲು, ನೀನು ನನ್ನನ್ನು ಪ್ರಶ್ನಿಸುವುದೇಕೆ? ನನ್ನ ಉಪದೇಶವನ್ನು ಕೇಳಿದ ಜನರನ್ನು ಕೇಳು. ನಾನು ಹೇಳಿದ್ದನ್ನು ಅವರು ಬಲ್ಲರು” ಎಂದು ಉತ್ತರಕೊಟ್ಟನು.
21 Por que me interrogas? Pergunta aos que ouviram o que lhes falei; bem sabem eles o que eu disse.
22 ಯೇಸು ಹೀಗೆ ಹೇಳಿದ ಕೂಡಲೇ, ಅಲ್ಲಿ ನಿಂತಿದ್ದ ಕಾವಲುಗಾರರಲ್ಲಿ ಒಬ್ಬನು ಯೇಸುವಿಗೆ ಹೊಡೆದು, “ನೀನು ಪ್ರಧಾನಯಾಜಕನೊಂದಿಗೆ ಆ ರೀತಿ ಮಾತಾಡಕೂಡದು” ಎಂದನು.
22 Dizendo ele isto, um dos guardas que ali estavam deu uma bofetada em Jesus, dizendo: É assim que falas ao sumo sacerdote?
23 ಯೇಸು, “ನಾನು ತಪ್ಪಾಗಿ ಮಾತಾಡಿದ್ದರೆ, ನಾನು ಹೇಳಿದ್ದು ತಪ್ಪೆಂದು ಎಲ್ಲರಿಗೂ ತೋರಿಸಿಕೊಡು. ಆದರೆ ನಾನು ಹೇಳಿದ್ದು ಸರಿಯಾಗಿದ್ದರೆ ನೀನು ನನ್ನನ್ನು ಹೊಡೆಯುವುದೇಕೆ?” ಎಂದು ಉತ್ತರಕೊಟ್ಟನು.
23 Replicou-lhe Jesus: Se falei mal, dá testemunho do mal; mas, se falei bem, por que me feres?
24 ಆಗ ಅನ್ನನು ಯೇಸುವನ್ನು ಮತ್ತೆ ಕಟ್ಟಿಸಿ, ಪ್ರಧಾನಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.
24 Então, Anás o enviou, manietado, à presença de Caifás, o sumo sacerdote.
25 ಸೀಮೋನ್ ಪೇತ್ರನು ತನ್ನನ್ನು ಬೆಚ್ಚಗೆ ಮಾಡಿಕೊಳ್ಳುತ್ತಾ ಬೆಂಕಿಯ ಸಮೀಪದಲ್ಲಿ ನಿಂತುಕೊಂಡಿದ್ದನು. ಅಲ್ಲಿದ್ದವರು ಪೇತ್ರನಿಗೆ, “ಆ ಮನುಷ್ಯನ ಶಿಷ್ಯರಲ್ಲಿ ನೀನೂ ಒಬ್ಬನಲ್ಲವೇ?” ಎಂದು ಕೇಳಿದರು.
25 Lá estava Simão Pedro, aquentando-se. Perguntaram-lhe, pois: És tu, porventura, um dos discípulos dele? Ele negou e disse: Não sou.
26 ಪ್ರಧಾನಯಾಜಕನ ಸೇವಕರಲ್ಲಿ ಒಬ್ಬನು ಪೇತ್ರನಿಂದ ಕಿವಿ ಕತ್ತರಿಸಿಹಾಕಲ್ಪಟ್ಟ ಸೇವಕನ ಸಂಬಂಧಿಕನಾಗಿದ್ದನು. ಆ ಸೇವಕನು, “ನೀನು ತೋಟದಲ್ಲಿ ಅವನೊಂದಿಗೆ (ಯೇಸುವಿನೊಂದಿಗೆ) ಇದ್ದುದನ್ನು ನಾನು ನೋಡಿದಂತಿದೆ!” ಎಂದು ಹೇಳಿದನು.
26 Um dos servos do sumo sacerdote, parente daquele a quem Pedro tinha decepado a orelha, perguntou: Não te vi eu no jardim com ele?
27 ಆದರೆ ಪೇತ್ರನು ಮತ್ತೆ, “ಇಲ್ಲ, ನಾನು ಆತನೊಂದಿಗೆ ಇರಲಿಲ್ಲ!” ಎಂದನು. ಆ ಕೂಡಲೇ ಕೋಳಿ ಕೂಗಿತು.
27 De novo, Pedro o negou, e, no mesmo instante, cantou o galo.
28 ಬಳಿಕ ಯೆಹೂದ್ಯರು ಯೇಸುವನ್ನು ಕಾಯಫನ ಮನೆಯಿಂದ ರೋಮ್ ರಾಜ್ಯಪಾಲನ ಭವನಕ್ಕೆ ಕರೆದುಕೊಂಡು ಬಂದರು. ಆಗ ಮುಂಜಾನೆಯಾಗಿತ್ತು. ಯೆಹೂದ್ಯರು ಭವನದೊಳಗೆ ಹೋಗಲಿಲ್ಲ. ಅವರು ಪಸ್ಕಹಬ್ಬದ ಊಟಮಾಡ ಬೇಕೆಂದಿದ್ದ ಕಾರಣ ತಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಲು ಇಷ್ಟಪಡಲಿಲ್ಲ.
28 Depois, levaram Jesus da casa de Caifás para o pretório. Era cedo de manhã. Eles não entraram no pretório para não se contaminarem, mas poderem comer a Páscoa.
29 ಆದ್ದರಿಂದ ಪಿಲಾತನು ಆ ಯೆಹೂದ್ಯರ ಬಳಿಗೆ ಬಂದು, “ಈ ಮನುಷ್ಯನ ಮೇಲೆ ನೀವು ಹೊರಿಸುತ್ತಿರುವ ಅಪರಾಧಗಳೇನು?” ಎಂದು ಕೇಳಿದನು.
29 Então, Pilatos saiu para lhes falar e lhes disse: Que acusação trazeis contra este homem?
30 ಯೆಹೂದ್ಯರು, “ಇವನು ಒಬ್ಬ ಕೆಟ್ಟ ಮನುಷ್ಯ. ಆದಕಾರಣ, ನಾವು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬಂದೆವು” ಎಂದು ಉತ್ತರಕೊಟ್ಟರು.
30 Responderam-lhe: Se este não fosse malfeitor, não to entregaríamos.
31 ಪಿಲಾತನು ಯೆಹೂದ್ಯರಿಗೆ, “ಯೆಹೂದ್ಯರಾದ ನೀವೇ ಇವನನ್ನು ಕರೆದುಕೊಂಡು ಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ತೀರ್ಪುಮಾಡಿ” ಎಂದು ಹೇಳಿದನು.
31 Replicou-lhes, pois, Pilatos: Tomai-o vós outros e julgai-o segundo a vossa lei. Responderam-lhe os judeus: A nós não nos é lícito matar ninguém;
32 (ತಾನು ಸಾಯುವ ರೀತಿಯ ಬಗ್ಗೆ ಯೇಸು ಹೇಳಿದ್ದ ಮಾತು ಹೀಗೆ ನಿಜವಾಯಿತು.)
32 para que se cumprisse a palavra de Jesus, significando o modo por que havia de morrer.
33 ಬಳಿಕ ಪಿಲಾತನು, ಭವನದೊಳಗೆ ಹಿಂತಿರುಗಿ ಹೋಗಿ, ಯೇಸುವನ್ನು ಕರೆದು, “ನೀನು ಯೆಹೂದ್ಯರ ರಾಜನೋ?” ಎಂದು ಕೇಳಿದನು.
33 Tornou Pilatos a entrar no pretório, chamou Jesus e perguntou-lhe: És tu o rei dos judeus?
34 ಯೇಸು, “ಇದು ನಿನ್ನ ಪ್ರಶ್ನೆಯೋ? ಅಥವಾ ನನ್ನ ಬಗ್ಗೆ ಬೇರೆ ಜನರು ನಿನಗೆ ತಿಳಿಸಿದರೋ?” ಎಂದನು.
34 Respondeu Jesus: Vem de ti mesmo esta pergunta ou to disseram outros a meu respeito?
35 ಪಿಲಾತನು, “ನಾನು ಯೆಹೂದ್ಯನಲ್ಲ! ನಿನ್ನ ಸ್ವಂತ ಜನರು ಮತ್ತು ಅವರ ಮಹಾಯಾಜಕರು ನಿನ್ನನ್ನು ಕರೆದುಕೊಂಡು ಬಂದು ನನ್ನ ಮುಂದೆ ನಿಲ್ಲಿಸಿದ್ದಾರೆ. ನೀನು ಏನು ಮಾಡಿದೆ?” ಎಂದು ಕೇಳಿದನು.
35 Replicou Pilatos: Porventura, sou judeu? A tua própria gente e os principais sacerdotes é que te entregaram a mim. Que fizeste?
36 ಯೇಸು, “ನನ್ನ ರಾಜ್ಯವು ಈ ಲೋಕಕ್ಕೆ ಸೇರಿದ್ದಲ್ಲ. ಅದು ಈ ಲೋಕಕ್ಕೆ ಸೇರಿದ್ದಾಗಿದ್ದರೆ, ಯೆಹೂದ್ಯರ ಕೈಗೆ ನಾನು ಸಿಗದಂತೆ ನನ್ನ ಸೇವಕರು ಹೋರಾಡುತ್ತಿದ್ದರು. ಆದರೆ ನನ್ನ ರಾಜ್ಯವು ಮತ್ತೊಂದು ಸ್ಥಳದ್ದು” ಎಂದನು.
36 Respondeu Jesus: O meu reino não é deste mundo. Se o meu reino fosse deste mundo, os meus ministros se empenhariam por mim, para que não fosse eu entregue aos judeus; mas agora o meu reino não é daqui.
37 ಪಿಲಾತನು, “ಹಾಗಾದರೆ ನೀನು ರಾಜ!” ಎಂದನು.
37 Então, lhe disse Pilatos: Logo, tu és rei? Respondeu Jesus: Tu dizes que sou rei. Eu para isso nasci e para isso vim ao mundo, a fim de dar testemunho da verdade. Todo aquele que é da verdade ouve a minha voz.
38 ಪಿಲಾತನು, “ಸತ್ಯವೆಂದರೇನು?” ಎಂದು ಕೇಳಿ, ಮತ್ತೆ ಯೆಹೂದ್ಯರ ಬಳಿಗೆ ಹೊರಕ್ಕೆ ಬಂದನು. ಅವನು ಯೆಹೂದ್ಯರಿಗೆ, “ಈ ಮನುಷ್ಯನ ಮೇಲೆ ಅಪವಾದ ಹೊರಿಸಲು ನನಗೆ ಏನೂ ಕಾಣುತ್ತಿಲ್ಲ.
38 Perguntou-lhe Pilatos: Que é a verdade? Tendo dito isto, voltou aos judeus e lhes disse: Eu não acho nele crime algum.
39 ಆದರೆ ಪಸ್ಕಹಬ್ಬದ ಕಾಲದಲ್ಲಿ ನಾನು ನಿಮಗೋಸ್ಕರ ಕೈದಿಗಳಲ್ಲಿ ಒಬ್ಬನನ್ನು ಬಿಡುಗಡೆ ಮಾಡುವುದು ನಿಮ್ಮ ಪದ್ಧತಿಯಾಗಿದೆ. ನಾನು ಯೆಹೂದ್ಯರ ರಾಜನನ್ನು ಬಿಡುಗಡೆ ಮಾಡಬೇಕೆಂದು ನೀವು ಬಯಸುತ್ತೀರಾ?” ಎಂದು ಕೇಳಿದನು.
39 É costume entre vós que eu vos solte alguém por ocasião da Páscoa; quereis, pois, que vos solte o rei dos judeus?
40 ಯೆಹೂದ್ಯರು, “ಇಲ್ಲ, ಅವನನ್ನಲ್ಲ! ಬರಬ್ಬನಿಗೆ ಬಿಡುಗಡೆಯಾಗಲಿ!” ಎಂದು ಕೂಗಿದರು. (ಬರಬ್ಬನು ಒಬ್ಬ ದರೋಡೆಕೋರ.)
40 Então, gritaram todos, novamente: Não este, mas Barrabás! Ora, Barrabás era salteador.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar João 18, comparar traduções ou montar um estudo — tudo direto pelo WhatsApp.