João 21
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NTLH
1 ತರುವಾಯ, ಯೇಸು ತನ್ನ ಶಿಷ್ಯರಿಗೆ ತಿಬೇರಿಯ (ಗಲಿಲಾಯ) ಸರೋವರದ ಬಳಿ ಕಾಣಿಸಿಕೊಂಡನು. ಅದು ಹೀಗೆ ನಡೆಯಿತು:
1 Depois disso, Jesus apareceu outra vez aos seus discípulos, na beira do lago da Galileia. Foi assim que aconteceu:
2 ಕೆಲವು ಶಿಷ್ಯರು ಒಟ್ಟಾಗಿ ಸೇರಿದ್ದರು. ಅವರು ಯಾರೆಂದರೆ, ಸೀಮೋನ್ ಪೇತ್ರ, ದಿದುಮನೆಂಬ ತೋಮ, ಗಲಿಲಾಯಕ್ಕೆ ಸೇರಿದ ಕಾನಾ ಊರಿನವನಾದ ನತಾನಿಯೇಲ, ಜೆಬೆದಾಯನ ಇಬ್ಬರು ಗಂಡುಮಕ್ಕಳು ಮತ್ತು ಇನ್ನಿಬ್ಬರು ಶಿಷ್ಯರು.
2 Estavam juntos Simão Pedro e Tomé, chamado “o Gêmeo”; Natanael, que era de Caná da Galileia; os filhos de Zebedeu e mais dois discípulos.
3 ಪೇತ್ರನು ಅವರಿಗೆ, “ನಾನು ಮೀನು ಹಿಡಿಯಲು ಹೋಗುತ್ತಿದ್ದೇನೆ” ಎಂದನು.
3 Simão Pedro disse aos outros: — Eu vou pescar. — Nós também vamos pescar com você! — disseram eles. Então foram todos e subiram no barco, mas naquela noite não pescaram nada.
4 ಅಂದು ಮುಂಜಾನೆಯಾದಾಗ, ಯೇಸು ತೀರದಲ್ಲಿ ನಿಂತುಕೊಂಡಿದ್ದನು. ಆದರೆ ಆತನೇ ಯೇಸು ಎಂಬುದು ಶಿಷ್ಯರಿಗೆ ಗೊತ್ತಿರಲಿಲ್ಲ.
4 De manhã, quando começava a clarear, Jesus estava na praia. Porém eles não sabiam que era ele.
5 ಆಗ ಆತನು ತನ್ನ ಶಿಷ್ಯರಿಗೆ, “ಮಕ್ಕಳೇ, ನಿಮಗೆ ಮೀನು ಸಿಕ್ಕಿತೋ?” ಎಂದು ಕೇಳಿದನು.
5 Então Jesus perguntou: — Nada! — responderam eles.
6 ಯೇಸು, “ನಿಮ್ಮ ದೋಣಿಯ ಬಲಭಾಗದಲ್ಲಿ ನಿಮ್ಮ ಬಲೆ ಬೀಸಿರಿ. ಅಲ್ಲಿ ಕೆಲವು ಮೀನುಗಳು ಸಿಕ್ಕುತ್ತವೆ” ಎಂದು ಹೇಳಿದನು. ಶಿಷ್ಯರು ಹಾಗೆಯೇ ಮಾಡಿದರು. ಬಹಳ ಮೀನುಗಳು ಸಿಕ್ಕಿಕೊಂಡದ್ದರಿಂದ ಅವರು ಬಲೆಯನ್ನು ದೋಣಿಯೊಳಗೆ ಎಳೆದುಕೊಳ್ಳಲಾಗಲಿಲ್ಲ.
6 — Joguem a rede do lado direito do barco, que vocês acharão peixe! — disse Jesus. Eles jogaram a rede e logo depois já não conseguiam puxá-la para dentro do barco, por causa da grande quantidade de peixes que havia nela.
7 ಯೇಸುವಿನ ಪ್ರೀತಿಯ ಶಿಷ್ಯನು ಪೇತ್ರನಿಗೆ, “ಆ ಮನುಷ್ಯನು ಪ್ರಭುವೇ!” ಎಂದು ಹೇಳಿದನು. ಕೂಡಲೇ ಪೇತ್ರನು ತನ್ನ ಅಂಗಿಯನ್ನು ಹಾಕಿಕೊಂಡು, ನೀರಿಗೆ ಧುಮುಕಿದನು. (ಪೇತ್ರನು ಮೀನು ಹಿಡಿಯುವುದಕ್ಕಾಗಿ ತನ್ನ ಅಂಗಿಯನ್ನು ಬಿಚ್ಚಿಟ್ಟಿದ್ದನು.)
7 Aí o discípulo que Jesus amava disse a Pedro: — É o Senhor Jesus! Quando Simão Pedro ouviu dizer que era o Senhor, vestiu a
8 ಉಳಿದ ಶಿಷ್ಯರು ದೋಣಿಯಲ್ಲಿ ತೀರಕ್ಕೆ ಹೋದರು. ಅವರು ಬಲೆತುಂಬ ಮೀನುಗಳನ್ನು ದಡಕ್ಕೆ ಎಳೆದುಕೊಂಡು ಹೋದರು. ಅವರು ದಡದಿಂದ ಬಹುದೂರದಲ್ಲೇನೂ ಇರಲಿಲ್ಲ. ಕೇವಲ ಮುನ್ನೂರು ಅಡಿಗಳಷ್ಟು ದೂರದಲ್ಲಿದ್ದರು.
8 Os outros discípulos foram no barco, puxando a rede com os peixes, pois estavam somente a uns cem metros da praia.
9 ಶಿಷ್ಯರು ದೋಣಿಯಿಂದ ಇಳಿದು ದಡಕ್ಕೆ ಹೋದಾಗ, ಬೆಂಕಿಯ ಕೆಂಡಗಳನ್ನು ಕಂಡರು. ಬೆಂಕಿಯ ಮೇಲೆ ಮೀನುಗಳಿದ್ದವು ಮತ್ತು ಕೆಲವು ರೊಟ್ಟಿಗಳೂ ಅಲ್ಲಿದ್ದವು.
9 Quando saíram do barco, viram ali uma pequena fogueira, com alguns peixes em cima das brasas. E também havia pão.
10 ಬಳಿಕ ಯೇಸು, “ನೀವು ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿರಿ” ಎಂದು ಹೇಳಿದನು.
10 Então Jesus disse:
11 ಸೀಮೋನ್ ಪೇತ್ರನು ದೋಣಿಯೊಳಕ್ಕೆ ಹೋಗಿ ಬಲೆಯನ್ನು ದಡಕ್ಕೆ ಎಳೆದುಕೊಂಡು ಬಂದನು. ಬಲೆಯು ದೊಡ್ಡ ಮೀನುಗಳಿಂದ ತುಂಬಿತ್ತು. ಅದರಲ್ಲಿ 153 ಮೀನುಗಳಿದ್ದವು. ಅವು ಬಹಳ ಭಾರವಾಗಿದ್ದರೂ ಬಲೆಯು ಹರಿದುಹೋಗಲಿಲ್ಲ.
11 Aí Simão Pedro subiu no barco e arrastou a rede para a terra. Ela estava cheia, com cento e cinquenta e três peixes grandes, e mesmo assim não se rebentou.
12 ಯೇಸು ಅವರಿಗೆ, “ಬಂದು ಊಟ ಮಾಡಿ” ಎಂದು ಹೇಳಿದನು. ಶಿಷ್ಯರಲ್ಲಿ ಒಬ್ಬರಾದರೂ, “ನೀನು ಯಾರು?” ಎಂದು ಆತನನ್ನು ಕೇಳಲಿಲ್ಲ. ಆತನು ಪ್ರಭುವೆಂದು ಅವರಿಗೆ ತಿಳಿದಿತ್ತು.
12 Jesus disse: Nenhum deles tinha coragem de perguntar quem ele era, pois sabiam que era o Senhor.
13 ಯೇಸುವು ಸಮೀಪಕ್ಕೆ ಬಂದು ರೊಟ್ಟಿಯನ್ನು ಮತ್ತು ಮೀನುಗಳನ್ನು ತೆಗೆದುಕೊಂಡು ಅವರಿಗೆ ಕೊಟ್ಟನು.
13 Então Jesus veio, pegou o pão e deu a eles. E fez a mesma coisa com os peixes.
14 ಯೇಸು ಪುನರುತ್ಥಾನ ಹೊಂದಿದ ಮೇಲೆ ತನ್ನ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಲ.
14 Foi esta a terceira vez que Jesus, depois de ter sido ressuscitado, apareceu aos seus discípulos.
15 ಅವರು ಊಟಮಾಡಿದ ಮೇಲೆ, ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ಇಲ್ಲಿರುವ ಇವರು ನನ್ನನ್ನು ಪ್ರೀತಿಸುವುದಕ್ಕಿಂತಲೂ ಹೆಚ್ಚಾಗಿ ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು.
15 Quando eles acabaram de comer, Jesus perguntou a Simão Pedro: — Sim, o senhor sabe que eu o amo, Senhor! — respondeu ele. Então Jesus lhe disse:
16 ಎರಡನೆಯ ಸಾರಿ ಯೇಸು ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು.
16 E perguntou pela segunda vez: Pedro respondeu: — Sim, o senhor sabe que eu o amo, Senhor! E Jesus lhe disse outra vez:
17 ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು.
17 E perguntou pela terceira vez: Então Pedro ficou triste por Jesus ter perguntado três vezes: “Você me ama?” E respondeu: — O senhor sabe tudo e sabe que eu o amo, Senhor! E Jesus ordenou:
18 ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ನೀನು ಯೌವನಸ್ಥನಾಗಿದ್ದಾಗ, ನಡುಕಟ್ಟಿಕೊಂಡು ನಿನಗೆ ಇಷ್ಟವಾದ ಕಡೆಗೆಲ್ಲಾ ಹೋದೆ. ಆದರೆ ನೀನು ಮುದುಕನಾದಾಗ, ನಿನ್ನ ಕೈಗಳನ್ನು ಚಾಚುವೆ ಮತ್ತು ಬೇರೊಬ್ಬನು ನಿನ್ನ ನಡುಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ನಡೆಸಿಕೊಂಡು ಹೋಗುವನು” ಎಂದು ಹೇಳಿದನು.
18 Quando você era moço, você se aprontava e ia para onde queria. Mas eu afirmo a você que isto é verdade: quando for velho, você estenderá as mãos, alguém vai amarrá-las e o levará para onde você não vai querer ir.
19 (ದೇವರನ್ನು ಮಹಿಮೆಪಡಿಸುವುದಕ್ಕಾಗಿ ಪೇತ್ರನು ಯಾವ ರೀತಿ ಸಾಯುತ್ತಾನೆ ಎಂಬುದನ್ನು ಸೂಚಿಸಲು ಯೇಸು ಹೀಗೆ ಹೇಳಿದನು.) ಬಳಿಕ ಯೇಸು ಪೇತ್ರನಿಗೆ, “ನನ್ನನ್ನು ಹಿಂಬಾಲಿಸು!” ಎಂದನು.
19 Ao dizer isso, Jesus estava dando a entender de que modo Pedro ia morrer e assim fazer com que Deus fosse louvado. Então Jesus disse a Pedro:
20 ಪೇತ್ರನು ಹಿಂತಿರುಗಿ ನೋಡಿದಾಗ, ಯೇಸುವಿನ ಪ್ರೀತಿಯ ಶಿಷ್ಯನು ತಮ್ಮ ಹಿಂದೆ ನಡೆದುಕೊಂಡು ಬರುತ್ತಿರುವುದನ್ನು ಕಂಡನು. (ರಾತ್ರಿಭೋಜನದ ಸಮಯದಲ್ಲಿ ಯೇಸುವಿನ ಎದೆಯ ಕಡೆಗೆ ಬಾಗಿ, “ಪ್ರಭುವೇ, ನಿನಗೆ ದ್ರೋಹ ಮಾಡುವವನು ಯಾರು?” ಎಂದು ಕೇಳಿದ ಶಿಷ್ಯನೇ ಇವನು.)
20 Então Pedro virou para trás e viu que o discípulo que Jesus amava vinha atrás dele. Este era o mesmo que estava ao lado de Jesus durante o jantar da Páscoa e que havia chegado para mais perto dele e perguntado: “Senhor, quem é o traidor?”
21 ಪೇತ್ರನು ತಮ್ಮ ಹಿಂದೆ ಬರುತ್ತಿದ್ದ ಈ ಶಿಷ್ಯನನ್ನು ಕಂಡಾಗ ಯೇಸುವಿಗೆ, “ಪ್ರಭುವೇ, ಇವನ ವಿಷಯವೇನು?” ಎಂದು ಕೇಳಿದನು.
21 Quando Pedro viu aquele discípulo, perguntou a Jesus: — O que diz, Senhor, a respeito deste aqui?
22 ಯೇಸು, “ನಾನು ಬರುವ ತನಕ ಅವನು ಜೀವದಿಂದ ಇರಬೇಕೆಂಬುದು ನನ್ನ ಇಷ್ಟವಾಗಿದ್ದರೆ ಅದರಿಂದ ನಿನಗೇನು? ನೀನು ನನ್ನನ್ನು ಹಿಂಬಾಲಿಸು!” ಎಂದು ಉತ್ತರಕೊಟ್ಟನು.
22 Jesus respondeu:
23 ಆದ್ದರಿಂದ ಸಹೋದರರ (ಶಿಷ್ಯರ) ಮಧ್ಯೆ ಒಂದು ಕಥೆಯೇ ಹರಡಿಕೊಂಡಿತು. ಯೇಸುವಿನ ಪ್ರೀತಿಯ ಈ ಶಿಷ್ಯನು ಸಾಯುವುದಿಲ್ಲವೆಂದು ಅವರು ಹೇಳುತ್ತಿದ್ದರು. ಆದರೆ ಅವನು ಸಾಯುವುದಿಲ್ಲವೆಂದು ಯೇಸು ಹೇಳಲಿಲ್ಲ. “ನಾನು ಬರುವ ತನಕ ಅವನು ಜೀವದಿಂದ ಇರಬೇಕೆಂಬುದು ನನ್ನ ಇಷ್ಟವಾಗಿದ್ದರೆ ಅದರಿಂದ ನಿನಗೇನು?” ಎಂದಷ್ಟೇ ಆತನು ಹೇಳಿದ್ದನು.
23 Então se espalhou entre os seguidores de Jesus a notícia de que aquele discípulo não ia morrer. Mas Jesus não disse isso. Ele apenas disse: “Se eu quiser que ele viva até que eu volte, o que é que você tem com isso?”
24 ಈ ಸಂಗತಿಗಳನ್ನು ಈಗ ಬರೆದಿರುವವನು ಮತ್ತು ಇವುಗಳ ವಿಷಯವಾಗಿ ಈಗ ಸಾಕ್ಷಿ ಹೇಳಿರುವ ಶಿಷ್ಯನು ಅವನೇ. ಅವನು ಹೇಳುವುದು ಸತ್ಯವೆಂದು ನಮಗೆ ಗೊತ್ತಿದೆ.
24 Este é o discípulo que falou destas coisas e as escreveu. E nós sabemos que o que ele disse é verdade.
25 ಯೇಸು ಇತರ ಅನೇಕ ಕಾರ್ಯಗಳನ್ನು ಮಾಡಿದನು. ಅವುಗಳಲ್ಲಿ ಪ್ರತಿಯೊಂದನ್ನೂ ಬರೆಯುವುದಾದರೆ, ಬರೆಯಲ್ಪಡುವ ಪುಸ್ತಕಗಳನ್ನು ಇಡೀ ಪ್ರಪಂಚವೇ ಹಿಡಿಸಲಾರದೆಂದು ನಾನು ನೆನಸುತ್ತೇನೆ.
25 Ainda há muitas outras coisas que Jesus fez. Se todas elas fossem escritas, uma por uma, acho que nem no mundo inteiro caberiam os livros que seriam escritos.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar João 21, comparar traduções ou montar um estudo — tudo direto pelo WhatsApp.