João 6

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NAA

Sair da comparação
NAA Nova Almeida Atualizada 2017
1 ತರುವಾಯ, ಯೇಸು ಗಲಿಲಾಯ ಸರೋವರವನ್ನು (ತಿಬೇರಿಯ ಸರೋವರ) ದಾಟಿ ಆಚೆಯ ದಡಕ್ಕೆ ಹೋದನು.
1 Depois dessas coisas, Jesus atravessou o mar da Galileia, que é o de Tiberíades.
2 ಅನೇಕ ಜನರು ಯೇಸುವನ್ನು ಹಿಂಬಾಲಿಸಿದರು. ಏಕೆಂದರೆ ಯೇಸು ರೋಗಿಗಳನ್ನು ಗುಣಪಡಿಸುವುದರ ಮೂಲಕ ತನ್ನ ಅಧಿಕಾರವನ್ನು ತೋರಿಸಿದ್ದನು. ಅವರೆಲ್ಲರೂ ಅದನ್ನು ನೋಡಿದ್ದರು.
2 Uma grande multidão o seguia, porque tinham visto os sinais que ele fazia na cura dos enfermos.
3 ಆಗ ಯೇಸು ಬೆಟ್ಟವನ್ನು ಹತ್ತಿ ತನ್ನ ಶಿಷ್ಯರ ಸಂಗಡ ಕುಳಿತುಕೊಂಡನು.
3 Então Jesus subiu ao monte e sentou-se ali com os seus discípulos.
4 ಯೆಹೂದ್ಯರ ಪಸ್ಕಹಬ್ಬವೂ ಬಹು ಸಮೀಪವಾಗಿತ್ತು.
4 Ora, a Páscoa, festa dos judeus, estava próxima.
5 ಯೇಸು ಕಣ್ಣೆತ್ತಿ ನೋಡಿದಾಗ, ತನ್ನ ಬಳಿಗೆ ಬರುತ್ತಿದ್ದ ಜನಸಮೂಹವನ್ನು ಕಂಡು ಫಿಲಿಪ್ಪನಿಗೆ, “ಈ ಜನರಿಗೆಲ್ಲಾ ಸಾಕಾಗುವಷ್ಟು ರೊಟ್ಟಿಯನ್ನು ನಾವು ಎಲ್ಲಿ ಕೊಂಡುಕೊಳ್ಳೋಣ?” ಎಂದು ಕೇಳಿದನು.
5 Então Jesus, erguendo os olhos e vendo que uma grande multidão se aproximava, disse a Filipe:
6 (ಫಿಲಿಪ್ಪನನ್ನು ಪರೀಕ್ಷಿಸುವುದಕ್ಕಾಗಿ ಆತನು ಈ ಪ್ರಶ್ನೆಯನ್ನು ಕೇಳಿದನು. ತಾನು ಮಾಡಲಿದ್ದ ಕಾರ್ಯ ಯೇಸುವಿಗೆ ಮೊದಲೇ ತಿಳಿದಿತ್ತು.)
6 Mas Jesus dizia isto para testá-lo, porque sabia o que estava para fazer.
7 ಫಿಲಿಪ್ಪನು, “ಇಲ್ಲಿರುವ ಪ್ರತಿಯೊಬ್ಬರಿಗೆ ರೊಟ್ಟಿಯ ಒಂದು ತುಂಡನ್ನು ಕೊಡಬೇಕಾದರೆ, ಇನ್ನೂರು ದಿನಾರಿ ನಾಣ್ಯಗಳಾದರೂ ಬೇಕು” ಎಂದು ಉತ್ತರಕೊಟ್ಟನು.
7 Filipe respondeu: — Nem mesmo duzentos denários de pão seriam suficientes para que cada um recebesse um pedaço.
8 ಅಂದ್ರೆಯನೆಂಬ ಮತ್ತೊಬ್ಬ ಶಿಷ್ಯನು ಅಲ್ಲಿದ್ದನು. ಅಂದ್ರೆಯನು ಸೀಮೋನ್ ಪೇತ್ರನ ಸಹೋದರ.
8 Um dos discípulos, chamado André, irmão de Simão Pedro, disse a Jesus:
9 ಅಂದ್ರೆಯನು, “ಇಲ್ಲಿರುವ ಒಬ್ಬ ಹುಡುಗನ ಬಳಿ ಜವೆಗೋಧಿಯ ಐದು ರೊಟ್ಟಿಗಳಿವೆ ಮತ್ತು ಎರಡು ಚಿಕ್ಕ ಮೀನುಗಳಿವೆ. ಆದರೆ ಅವು ಈ ಜನಸಮೂಹಕ್ಕೆ ಸಾಕಾಗುವುದಿಲ್ಲ” ಎಂದು ಹೇಳಿದನು.
9 — Aqui está um menino que tem cinco pães de cevada e dois peixinhos. Mas o que é isto para tanta gente?
10 ಯೇಸು, “ಜನರಿಗೆ ಕುಳಿತುಕೊಳ್ಳಲು ಹೇಳಿರಿ” ಎಂದು ತಿಳಿಸಿದನು. ಆ ಸ್ಥಳದಲ್ಲಿ ಹುಲ್ಲು ಹುಲುಸಾಗಿ ಬೆಳೆದಿತ್ತು. ಅಲ್ಲಿ ಕುಳಿತುಕೊಂಡವರಲ್ಲಿ ಸುಮಾರು ಐದುಸಾವಿರ ಮಂದಿ ಗಂಡಸರಿದ್ದರು.
10 Jesus disse: Havia muita relva naquele lugar. Assim, os homens se assentaram, e eram quase cinco mil.
11 ಬಳಿಕ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ಅವುಗಳಿಗಾಗಿ ದೇವರಿಗೆ ಸ್ತೋತ್ರಸಲ್ಲಿಸಿ, ಕುಳಿತುಕೊಂಡಿದ್ದ ಜನರಿಗೆ ಕೊಟ್ಟನು. ಆತನು ಮೀನುಗಳನ್ನು ಕೊಡುವಾಗಲೂ ಅದೇ ರೀತಿ ಮಾಡಿದನು. ಎಲ್ಲರೂ ತಮಗೆ ಬೇಕಾದಷ್ಟು ತಿಂದರು.
11 Então Jesus pegou os pães e, tendo dado graças, distribuiu-os entre eles; e também igualmente os peixes, tanto quanto queriam.
12 ಅವರೆಲ್ಲರೂ ಊಟ ಮಾಡಿ ತೃಪ್ತರಾದ ಮೇಲೆ ಯೇಸು ತನ್ನ ಶಿಷ್ಯರಿಗೆ, “ಉಳಿದುಹೋದ ರೊಟ್ಟಿ ಮತ್ತು ಮೀನುಗಳ ತುಂಡುಗಳನ್ನು ಒಟ್ಟುಗೂಡಿಸಿರಿ. ಯಾವುದನ್ನೂ ಹಾಳುಮಾಡಬೇಡಿ” ಎಂದು ಹೇಳಿದನು.
12 E, quando já estavam satisfeitos, Jesus disse aos seus discípulos:
13 ಆದ್ದರಿಂದ ಶಿಷ್ಯರು ಉಳಿದುಹೋಗಿದ್ದ ತುಂಡುಗಳನ್ನು ಒಟ್ಟುಗೂಡಿಸಿದರು. ಜನರು ತಿನ್ನಲು ಆರಂಭಿಸಿದಾಗ ಕೇವಲ ಐದು ಜವೆಗೋದಿಯ ರೊಟ್ಟಿಗಳಿದ್ದವು. ಆದರೆ ಶಿಷ್ಯರು ಉಳಿದುಹೋದ ಆಹಾರದ ತುಂಡುಗಳನ್ನು ಒಟ್ಟುಗೂಡಿಸಿದಾಗ ಹನ್ನೆರಡು ದೊಡ್ಡ ಬುಟ್ಟಿಗಳು ತುಂಬಿಹೋದವು.
13 Assim, pois, o fizeram e encheram doze cestos de pedaços dos cinco pães de cevada, que sobraram depois que todos tinham comido.
14 ಯೇಸು ಮಾಡಿದ ಈ ಸೂಚಕಕಾರ್ಯವನ್ನು ಕಂಡ ಜನರು, “ಈ ಲೋಕಕ್ಕೆ ಬರಲಿರುವ ಪ್ರವಾದಿ ನಿಜವಾಗಿಯೂ ಈತನೇ ಇರಬೇಕು” ಎಂದು ಹೇಳತೊಡಗಿದರು.
14 Quando as pessoas viram o sinal que Jesus havia feito, disseram: — Este é verdadeiramente o profeta que devia vir ao mundo.
15 ತನ್ನನ್ನು ಬಲವಂತದಿಂದ ರಾಜನನ್ನಾಗಿ ಮಾಡಲು ಜನರು ಯೋಚಿಸುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅಲ್ಲಿಂದ ತಾನೊಬ್ಬನೇ ಬೆಟ್ಟಕ್ಕೆ ಮತ್ತೆ ಹೋದನು.
15 Jesus ficou sabendo que estavam para vir com a intenção de fazê-lo rei à força. Então ele se retirou outra vez, sozinho, para o monte.
16 ಆ ಸಾಯಂಕಾಲ ಯೇಸುವಿನ ಶಿಷ್ಯರು ಸರೋವರಕ್ಕೆ (ಗಲಿಲಾಯ) ಹೋದರು.
16 Ao final do dia, os discípulos de Jesus desceram para o mar.
17 ಆಗಲೇ ಕತ್ತಲಾಗಿತ್ತು. ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ. ಆದ್ದರಿಂದ ಶಿಷ್ಯರು ದೋಣಿಯನ್ನು ಹತ್ತಿ ಸರೋವರದ ಆಚೆಯ ಕಡೆಯಿದ್ದ ಕಪೆರ್ನೌಮಿಗೆ ಹೊರಟರು.
17 E, entrando num barco, passaram para o outro lado, rumo a Cafarnaum. Já estava escuro, e Jesus ainda não tinha ido até onde eles estavam.
18 ಗಾಳಿಯು ಬಹು ರಭಸವಾಗಿ ಬೀಸುತ್ತಿತ್ತು. ಸರೋವರದ ಅಲೆಗಳು ದೊಡ್ಡದಾಗುತ್ತಿದ್ದವು.
18 E o mar começava a ficar agitado, porque soprava um vento forte.
19 ಅವರು ಹುಟ್ಟುಹಾಕುತ್ತಾ ಸುಮಾರು ಮೂರು ಅಥವಾ ನಾಲ್ಕು ಮೈಲಿಗಳವರೆಗೆ ದೋಣಿಯನ್ನು ನಡೆಸಿದ ನಂತರ ಯೇಸುವನ್ನು ಕಂಡರು. ಆತನು ನೀರಿನ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುತ್ತಿರುವುದನ್ನು ಕಂಡು ಅವರಿಗೆ ಭಯವಾಯಿತು.
19 Os discípulos já tinham navegado uns cinco ou seis quilômetros, quando viram Jesus andando sobre o mar, aproximando-se do barco; e ficaram com medo.
20 ಯೇಸು ಅವರಿಗೆ, “ಹೆದರಬೇಡಿರಿ, ನಾನೇ” ಎಂದು ಹೇಳಿದನು.
20 Mas Jesus lhes disse:
21 ಆಗ ಅವರು ಯೇಸುವನ್ನು ದೋಣಿಯೊಳಗೆ ಬರಮಾಡಿಕೊಳ್ಳಬೇಕೆಂದಿದ್ದರು. ಅಷ್ಟರಲ್ಲೇ, ಅವರು ಹೋಗಬೇಕೆಂದಿದ್ದ ಸ್ಥಳದ ದಡಕ್ಕೆ ದೋಣಿಯು ತಲುಪಿತು.
21 Então eles o receberam com alegria, e logo o barco chegou ao seu destino.
22 ಮರುದಿನವಾಯಿತು. ಕೆಲವು ಜನರು ಸರೋವರದ ಮತ್ತೊಂದು ಕಡೆಯಲ್ಲಿ ಉಳಿದುಕೊಂಡಿದ್ದರು. ಯೇಸು ತನ್ನ ಶಿಷ್ಯರೊಂದಿಗೆ ದೋಣಿಯಲ್ಲಿ ಹೋಗಲಿಲ್ಲ ಎಂಬುದು ಈ ಜನರಿಗೆ ತಿಳಿದಿತ್ತು. ಯೇಸುವಿನ ಶಿಷ್ಯರು ಮಾತ್ರ ದೋಣಿಯಲ್ಲಿ ಹೋದರೆಂಬುದೂ ಮತ್ತು ಅದೊಂದು ದೋಣಿ ಮಾತ್ರ ಅಲ್ಲಿತ್ತೆಂಬುದೂ ಅವರಿಗೆ ಗೊತ್ತಿತ್ತು.
22 No dia seguinte, a multidão que tinha ficado do outro lado do mar notou que ali havia apenas um pequeno barco e que Jesus não tinha entrado nele com os seus discípulos, tendo estes partido sozinhos.
23 ಆದರೆ ಅಷ್ಟರಲ್ಲಿಯೇ, ಕೆಲವು ದೋಣಿಗಳು ತಿಬೇರಿಯಾದಿಂದ ಬಂದವು. ಅವರು ಊಟ ಮಾಡಿದ ಸ್ಥಳಕ್ಕೆ ಸಮೀಪದ ದಡದಲ್ಲಿಯೇ ಆ ದೋಣಿಗಳು ನಿಂತುಕೊಂಡವು. ಪ್ರಭುವು ಸ್ತೋತ್ರ ಮಾಡಿದ ಮೇಲೆ ಅವರು ರೊಟ್ಟಿಯನ್ನು ಆ ಸ್ಥಳದಲ್ಲೇ ತಿಂದಿದ್ದರು.
23 Entretanto, outros barquinhos de Tiberíades se aproximaram do lugar onde a multidão havia comido o pão depois que o Senhor deu graças.
24 ಯೇಸು ಮತ್ತು ಆತನ ಶಿಷ್ಯರು ಅಲ್ಲಿಲ್ಲದಿರುವುದನ್ನು ಜನರು ಕಂಡು ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಹೋದರು. ಅವರು ಯೇಸುವನ್ನು ಕಂಡುಕೊಳ್ಳಬೇಕೆಂದಿದ್ದರು.
24 Quando aquela multidão viu que Jesus não estava ali nem os seus discípulos, entraram nos barcos e partiram para Cafarnaum à procura de Jesus.
25 ಜನರು ಯೇಸುವನ್ನು ಸರೋವರದ ಆಚೆಯ ದಡದಲ್ಲಿ ಕಂಡುಕೊಂಡರು. ಅವರು ಆತನಿಗೆ, “ಗುರುವೇ, ನೀನು ಇಲ್ಲಿಗೆ ಯಾವಾಗ ಬಂದೆ?” ಎಂದು ಕೇಳಿದರು.
25 E, tendo-o encontrado no outro lado do mar, lhe perguntaram: — Mestre, quando o senhor chegou aqui?
26 ಯೇಸು, “ನೀವು ನನ್ನನ್ನು ಏಕೆ ಹುಡುಕುತ್ತಿದ್ದೀರಿ? ನನ್ನ ಅಧಿಕಾರವನ್ನು ನಿರೂಪಿಸುವ ನನ್ನ ಅದ್ಭುತಕಾರ್ಯಗಳನ್ನು ಕಂಡು ನೀವು ನನ್ನನ್ನು ಹುಡುಕುತ್ತಿದ್ದೀರೋ? ಇಲ್ಲ! ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ರೊಟ್ಟಿಯನ್ನು ತೃಪ್ತಿಯಾಗುವಷ್ಟು ತಿಂದಕಾರಣ ನನ್ನನ್ನು ಹುಡುಕುತ್ತಿದ್ದೀರಿ.
26 Jesus respondeu:
27 ಈ ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆ ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು.
27 Trabalhem, não pela comida que se estraga, mas pela que permanece para a vida eterna, a qual o Filho do Homem dará a vocês; porque Deus, o Pai, o confirmou com o seu selo.
28 ಜನರು ಯೇಸುವಿಗೆ, “ನಾವು ಯಾವ ಕಾರ್ಯಗಳನ್ನು ಮಾಡಬೇಕೆಂದು ದೇವರು ಬಯಸುತ್ತಾನೆ?” ಎಂದು ಕೇಳಿದರು.
28 Então lhe perguntaram: — Que faremos para realizar as obras de Deus?
29 ಯೇಸು, “ದೇವರು ಕಳುಹಿಸಿದಾತನನ್ನು ನೀವು ನಂಬಬೇಕು. ಈ ಕಾರ್ಯವನ್ನೇ ದೇವರು ನಿಮ್ಮಿಂದ ಅಪೇಕ್ಷಿಸುತ್ತಾನೆ” ಎಂದು ಉತ್ತರಕೊಟ್ಟನು.
29 Jesus respondeu:
30 ಆದ್ದರಿಂದ ಜನರು, “ದೇವರಿಂದ ಕಳುಹಿಸಲ್ಪಟ್ಟಾತನು ನೀನೇ ಎಂಬುದನ್ನು ನಿರೂಪಿಸುವುದಕ್ಕಾಗಿ ನೀನು ಯಾವ ಸೂಚಕಕಾರ್ಯವನ್ನು ಮಾಡುವೆ?
30 Então eles disseram: — Que sinal o senhor fará para que vejamos e creiamos no senhor? O que o senhor pode fazer?
31 ನಮ್ಮ ಪಿತೃಗಳು ತಮಗೆ ದೇವರು ಮರುಭೂಮಿಯಲ್ಲಿ ಕೊಟ್ಟ ಮನ್ನವನ್ನು (ಆಹಾರವನ್ನು) ತಿಂದರು. ‘ದೇವರು ಅವರಿಗೆ ತಿನ್ನಲು ಪರಲೋಕದಿಂದ ರೊಟ್ಟಿಯನ್ನು ಕೊಟ್ಟನು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಹೇಳಿದರು.
31 Nossos pais comeram o maná no deserto, como está escrito: “Deu-lhes a comer pão do céu.”
32 ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮ ಜನರಿಗೆ ಪರಲೋಕದಿಂದ ರೊಟ್ಟಿಯನ್ನು ಕೊಟ್ಟವನು ಮೋಶೆಯಲ್ಲ. ಆದರೆ ನನ್ನ ತಂದೆಯು ನಿಮಗೆ ಪರಲೋಕದಿಂದ ನಿಜವಾದ ರೊಟ್ಟಿಯನ್ನು ಕೊಡುವನು.
32 Jesus lhes disse:
33 ದೇವರ ರೊಟ್ಟಿ ಯಾವುದು? ಪರಲೋಕದಿಂದ ಇಳಿದುಬಂದು ಈ ಲೋಕಕ್ಕಾಗಿ ಜೀವವನ್ನು ಕೊಡುವಾತನೇ ದೇವರು ಕೊಡುವ ರೊಟ್ಟಿ” ಎಂದು ಹೇಳಿದನು.
33 Porque o pão de Deus é o que desce do céu e dá vida ao mundo.
34 ಜನರು, “ಅಯ್ಯಾ, ಆ ರೊಟ್ಟಿಯನ್ನು ನಮಗೆ ಯಾವಾಗಲೂ ಕೊಡು” ಎಂದು ಕೇಳಿಕೊಂಡರು.
34 Então lhe disseram: — Senhor, dê-nos sempre desse pão.
35 ಅದಕ್ಕೆ ಯೇಸು, “ನಾನೇ ಜೀವಕೊಡುವ ರೊಟ್ಟಿ. ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗದು. ನನ್ನಲ್ಲಿ ನಂಬಿಕೆ ಇಡುವವನಿಗೆ ಎಂದಿಗೂ ಬಾಯಾರಿಕೆಯಾಗದು.
35 Jesus respondeu:
36 ನಾನು ನಿಮಗೆ ಮೊದಲೇ ಹೇಳಿದಂತೆ, ನೀವು ನನ್ನನ್ನು ನೋಡಿದ್ದರೂ ಇನ್ನೂ ನನ್ನನ್ನು ನಂಬುತ್ತಿಲ್ಲ.
36 Porém eu já disse que vocês não creem, embora estejam me vendo.
37 ತಂದೆಯು ನನ್ನ ಜನರನ್ನು ನನಗೆ ಕೊಡುತ್ತಾನೆ. ಆ ಜನರಲ್ಲಿ ಪ್ರತಿಯೊಬ್ಬರೂ ನನ್ನ ಬಳಿಗೆ ಬರುತ್ತಾರೆ. ನನ್ನಲ್ಲಿಗೆ ಬರುವ ಪ್ರತಿಯೊಬ್ಬರನ್ನೂ ನಾನು ಖಂಡಿತವಾಗಿ ಸ್ವೀಕರಿಸಿಕೊಳ್ಳುವೆನು, ಅವರನ್ನು ಎಂದಿಗೂ ತಳ್ಳಿಬಿಡುವುದಿಲ್ಲ.
37 Todo aquele que o Pai me dá, esse virá a mim; e o que vem a mim, de modo nenhum o lançarei fora.
38 ನಾನು ಪರಲೋಕದಿಂದ ಇಳಿದು ಬಂದದ್ದು ದೇವರ ಚಿತ್ತಕ್ಕನುಸಾರವಾಗಿ ಮಾಡುವುದಕ್ಕಾಗಿಯೇ ಹೊರತು ನನ್ನ ಚಿತ್ತಕ್ಕನುಸಾರವಾಗಿಯಲ್ಲ.
38 Porque eu desci do céu, não para fazer a minha própria vontade, mas a vontade daquele que me enviou.
39 ದೇವರು ನನಗೆ ಕೊಟ್ಟಿರುವ ಯಾವ ವ್ಯಕ್ತಿಯನ್ನೂ ನಾನು ಕಳೆದುಕೊಳ್ಳಕೂಡದು. ಅಲ್ಲದೆ ಅಂತಿಮ ದಿನದಂದು ನಾನು ಆ ಜನರನ್ನು ಜೀವಂತವಾಗಿ ಎಬ್ಬಿಸಬೇಕು. ನನ್ನನ್ನು ಕಳುಹಿಸಿದಾತನು ಆ ಕಾರ್ಯವನ್ನೇ ನನ್ನಿಂದ ಅಪೇಕ್ಷಿಸುತ್ತಾನೆ.
39 E a vontade de quem me enviou é esta: que eu não perca nenhum de todos os que ele me deu; pelo contrário, eu o ressuscitarei no último dia.
40 ಮಗನನ್ನು ನೋಡಿ ಆತನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಹೊಂದಿದ್ದಾನೆ. ಅಂತಿಮ ದಿನದಂದು ನಾನು ಆ ವ್ಯಕ್ತಿಯನ್ನು ಜೀವಂತವಾಗಿ ಎಬ್ಬಿಸುವೆನು. ನನ್ನ ತಂದೆಯು ಬಯಸುವುದು ಇದನ್ನೇ” ಎಂದನು.
40 De fato, a vontade de meu Pai é que todo aquele que vir o Filho e nele crer tenha a vida eterna; e eu o ressuscitarei no último dia.
41 ಯೆಹೂದ್ಯರು ಯೇಸುವಿನ ಬಗ್ಗೆ ಗುಣುಗುಟ್ಟಿದರು. “ಪರಲೋಕದಿಂದ ಇಳಿದುಬರುವ ರೊಟ್ಟಿಯೇ ನಾನು” ಎಂದು ಆತನು ಹೇಳಿದ್ದರಿಂದ ಅವರು ಆಕ್ಷೇಪಿಸಿದರು.
41 Então os judeus começaram a murmurar contra ele, porque tinha dito: “Eu sou o pão que desceu do céu.”
42 ಯೆಹೂದ್ಯರು, “ಇವನು ಯೇಸು. ಇವನ ತಂದೆತಾಯಿಗಳನ್ನು ನಾವು ಬಲ್ಲೆವು. ಇವನು ಕೇವಲ ಯೋಸೇಫನ ಮಗನು. ‘ನಾನು ಪರಲೋಕದಿಂದ ಇಳಿದುಬಂದೆನು’ ಎಂದು ಇವನು ಹೇಳುವುದಕ್ಕೆ ಹೇಗೆ ಸಾಧ್ಯ?” ಎಂದರು.
42 E diziam: — Este não é Jesus, o filho de José? Por acaso não conhecemos o pai e a mãe dele? Como é que ele agora diz: “Desci do céu”?
43 ಅದಕ್ಕೆ ಯೇಸು, “ನೀವು ಗುಣುಗುಟ್ಟುತ್ತಿರುವುದನ್ನು ನಿಲ್ಲಿಸಿರಿ.
43 Jesus respondeu:
44 ತಂದೆಯೇ ನನ್ನನ್ನು ಕಳುಹಿಸಿದನು ಮತ್ತು ತಂದೆಯೇ ನನ್ನ ಬಳಿಗೆ ಜನರನ್ನು ಕರೆತರುವನು. ಅಂತಿಮ ದಿನದಂದು ನಾನು ಆ ಜನರನ್ನು ಜೀವಂತವಾಗಿ ಎಬ್ಬಿಸುವೆನು. ತಂದೆಯು ನನ್ನ ಬಳಿಗೆ ಕರೆದುಕೊಂಡು ಬರದ ಹೊರತು ಯಾವನೂ ನನ್ನ ಬಳಿಗೆ ಬರಲಾರನು.
44 Ninguém pode vir a mim se o Pai, que me enviou, não o trouxer; e eu o ressuscitarei no último dia.
45 ‘ದೇವರು ಎಲ್ಲಾ ಜನರಿಗೆ ಉಪದೇಶಿಸುವನು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಜನರು ತಂದೆಗೆ ಕಿವಿಗೊಟ್ಟು ಆತನಿಂದ ಕಲಿತುಕೊಳ್ಳುವರು. ಆ ಜನರು ನನ್ನ ಬಳಿಗೆ ಬರುವರು.
45 Está escrito nos Profetas: “E todos serão ensinados por Deus.” Portanto, todo aquele que ouviu e aprendeu do Pai, esse vem a mim.
46 ತಂದೆಯಿಂದ ಬಂದಿರುವಾತನು ಮಾತ್ರ ತಂದೆಯನ್ನು ನೋಡಿದವನಾಗಿದ್ದಾನೆ. ಬೇರೆ ಯಾವ ವ್ಯಕ್ತಿಯೂ ತಂದೆಯನ್ನು ಎಂದೂ ನೋಡಿಲ್ಲ.
46 Não que alguém tenha visto o Pai, a não ser aquele que vem de Deus; este já viu o Pai.
47 “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನನ್ನು ನಂಬಿರುವವನು ನಿತ್ಯಜೀವವನ್ನು ಹೊಂದಿದ್ದಾನೆ.
47 — Em verdade, em verdade lhes digo: quem crê em mim tem a vida eterna.
48 ನಾನೇ ಜೀವಕೊಡುವ ರೊಟ್ಟಿ.
48 Eu sou o pão da vida.
49 ನಿಮ್ಮ ಪಿತೃಗಳು ತಮಗೆ ದೇವರು ಮರುಭೂಮಿಯಲ್ಲಿ ಕೊಟ್ಟ ಮನ್ನವನ್ನು ತಿಂದರು. ಆದರೆ ಎಲ್ಲಾ ಜನರಂತೆ ಅವರೂ ಸತ್ತುಹೋದರು.
49 Os pais de vocês comeram o maná no deserto e morreram.
50 ಪರಲೋಕದಿಂದ ಇಳಿದುಬರುವ ರೊಟ್ಟಿ ನಾನೇ. ಈ ರೊಟ್ಟಿಯನ್ನು ತಿನ್ನುವವನು ಎಂದಿಗೂ ಸಾಯುವುದಿಲ್ಲ.
50 Este é o pão que desce do céu, para que todo o que dele comer não pereça.
51 ಪರಲೋಕದಿಂದ ಇಳಿದುಬಂದ ಜೀವವುಳ್ಳ ರೊಟ್ಟಿ ನಾನೇ. ಈ ರೊಟ್ಟಿಯನ್ನು ತಿನ್ನುವವನು ಶಾಶ್ವತವಾಗಿ ಜೀವಿಸುವನು. ಈ ರೊಟ್ಟಿಯೇ ನನ್ನ ದೇಹ. ಈ ಲೋಕದಲ್ಲಿರುವ ಜನರು ಜೀವವನ್ನು ಹೊಂದಿಕೊಳ್ಳಲೆಂದು ನಾನು ನನ್ನ ದೇಹವನ್ನೇ ಕೊಡುತ್ತೇನೆ” ಎಂದು ಉತ್ತರಕೊಟ್ಟನು.
51 Eu sou o pão vivo que desceu do céu; se alguém comer deste pão, viverá eternamente. E o pão que eu darei pela vida do mundo é a minha carne.
52 ಆಗ ಯೆಹೂದ್ಯರು, “ಈ ಮನುಷ್ಯನು ತನ್ನ ದೇಹವನ್ನು ನಮಗೆ ತಿನ್ನಲು ಹೇಗೆ ಕೊಡಲಾದೀತು?” ಎಂದು ತಮ್ಮತಮ್ಮೊಳಗೆ ವಾಗ್ವಾದ ಮಾಡತೊಡಗಿದರು.
52 Então os judeus começaram a discutir entre si, dizendo: — Como é que este pode nos dar a sua própria carne para comer?
53 ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಮನುಷ್ಯಕುಮಾರನ ದೇಹವನ್ನು ತಿನ್ನಲೇಬೇಕು. ಆತನ ರಕ್ತವನ್ನು ಕುಡಿಯಲೇಬೇಕು. ನೀವು ಹೀಗೆ ಮಾಡದಿದ್ದರೆ, ನಿಮ್ಮಲ್ಲಿ ನಿಜವಾದ ಜೀವ ಇರುವುದಿಲ್ಲ.
53 Jesus respondeu:
54 ನನ್ನ ದೇಹವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅಂತಿಮ ದಿನದಂದು ನಾನು ಆ ವ್ಯಕ್ತಿಯನ್ನು ಜೀವಂತವಾಗಿ ಎಬ್ಬಿಸುವೆನು.
54 Quem come a minha carne e bebe o meu sangue tem a vida eterna, e eu o ressuscitarei no último dia.
55 ನನ್ನ ದೇಹವು ನಿಜವಾದ ಆಹಾರವಾಗಿದೆ. ನನ್ನ ರಕ್ತವು ನಿಜವಾದ ಪಾನೀಯವಾಗಿದೆ.
55 Pois a minha carne é verdadeira comida, e o meu sangue é verdadeira bebida.
56 ನನ್ನ ದೇಹವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನು ನನ್ನಲ್ಲಿ ವಾಸಿಸುತ್ತಾನೆ. ನಾನು ಅವನಲ್ಲಿ ವಾಸಿಸುತ್ತೇನೆ.
56 Quem come a minha carne e bebe o meu sangue permanece em mim, e eu permaneço nele.
57 “ತಂದೆಯೇ ನನ್ನನ್ನು ಕಳುಹಿಸಿದನು. ತಂದೆಯು ಜೀವಸ್ವರೂಪನಾಗಿದ್ದಾನೆ. ನಾನು ತಂದೆಯಿಂದಲೇ ಜೀವಿಸುತ್ತೇನೆ. ಆದ್ದರಿಂದ ನನ್ನನ್ನು ತಿನ್ನುವವನು ನನ್ನಿಂದಲೇ ಜೀವಿಸುವನು.
57 Assim como o Pai, que vive, me enviou, e igualmente eu vivo por causa do Pai, também quem de mim se alimenta viverá por mim.
58 ನಮ್ಮ ಪಿತೃಗಳು ತಿಂದ ರೊಟ್ಟಿಯಂತಲ್ಲ ನಾನು. ಅವರು ಆ ರೊಟ್ಟಿಯನ್ನು ತಿಂದರೂ ಎಲ್ಲಾ ಜನರಂತೆ ಸತ್ತು ಹೋದರು. ನಾನು ಪರಲೋಕದಿಂದ ಇಳಿದುಬಂದ ರೊಟ್ಟಿ. ಈ ರೊಟ್ಟಿಯನ್ನು ತಿನ್ನುವವನು ಸದಾಕಾಲ ಜೀವಿಸುವನು,” ಎಂದು ಹೇಳಿದನು.
58 Este é o pão que desceu do céu, em nada semelhante àquele que os pais de vocês comeram e, mesmo assim, morreram; quem comer este pão viverá eternamente.
59 ಯೇಸು ಕಪೆರ್ನೌಮಿನ ಸಭಾಮಂದಿರದಲ್ಲಿ ಉಪದೇಶಿಸುತ್ತಿದ್ದಾಗ ಈ ಸಂಗತಿಗಳನ್ನೆಲ್ಲಾ ಹೇಳಿದನು.
59 Jesus disse essas coisas quando ensinava na sinagoga de Cafarnaum.
60 ಇದನ್ನು ಕೇಳಿದ ಆತನ ಶಿಷ್ಯರಲ್ಲಿ ಅನೇಕರು, “ಈ ಉಪದೇಶವು ಕಠಿಣವಾಗಿದೆ. ಇದನ್ನು ಯಾರು ಗ್ರಹಿಸಿಕೊಳ್ಳಬಲ್ಲರು?” ಎಂದರು.
60 Muitos dos seus discípulos, tendo ouvido tais palavras, disseram: — Duro é este discurso; quem pode suportá-lo?
61 ತನ್ನ ಶಿಷ್ಯರು ಆಕ್ಷೇಪಿಸುತ್ತಿರುವುದನ್ನು ತಿಳಿದಿದ್ದ ಯೇಸು, “ಈ ಉಪದೇಶದಿಂದ ನಿಮಗೆ ಬೇಸರವಾಯಿತೇ?
61 Mas Jesus, sabendo por si mesmo que os seus discípulos murmuravam a respeito do que ele havia falado, disse-lhes:
62 ಹಾಗಾದರೆ ಮನುಷ್ಯಕುಮಾರನು ತಾನು ಬಿಟ್ಟುಬಂದ ಸ್ಥಳಕ್ಕೆ ಮರಳಿಹೋಗುವುದನ್ನು ನೀವು ನೋಡುವಾಗ ಬೇಸರಪಡುವಿರಾ?
62 Que acontecerá, então, se virem o Filho do Homem subir para o lugar onde primeiro estava?
63 ಒಬ್ಬನಿಗೆ ಜೀವವನ್ನು ಕೊಡುವಂಥದ್ದು ದೈಹಿಕ ಸಂಗತಿಗಳಲ್ಲ. ಜೀವವನ್ನು ಕೊಡುವಂಥದ್ದು ದೇವರಾತ್ಮ. ನಾನು ನಿಮಗೆ ಹೇಳಿದ ಸಂಗತಿಗಳು ಆತ್ಮಿಕ ಸಂಗತಿಗಳಾಗಿವೆ. ಆದ್ದರಿಂದ ಈ ಸಂಗತಿಗಳೇ ಜೀವವನ್ನು ಕೊಡುತ್ತವೆ.
63 O Espírito é o que vivifica; a carne para nada aproveita. As palavras que eu lhes tenho falado são espírito e são vida.
64 ಆದರೆ ನಿಮ್ಮಲ್ಲಿ ಕೆಲವರು ನಂಬುವುದಿಲ್ಲ” ಎಂದು ಹೇಳಿದನು. (ತನ್ನನ್ನು ನಂಬಿಲ್ಲದವರು ಯಾರೆಂದೂ ತನಗೆ ದ್ರೋಹ ಮಾಡುವವನು ಯಾರೆಂದೂ ಯೇಸುವಿಗೆ ಮೊದಲಿಂದಲೂ ತಿಳಿದಿತ್ತು.)
64 Mas há descrentes entre vocês. Ora, Jesus sabia, desde o princípio, quais eram os que não criam e quem iria traí-lo.
65 ಇದಲ್ಲದೆ ಯೇಸು, “ತಂದೆಯ ಅನುಮತಿ ಇಲ್ಲದೆ ಯಾವನೂ ನನ್ನ ಬಳಿಗೆ ಬರಲಾರನು ಎಂದು ನಾನು ನಿಮಗೆ ಹೇಳಿದ್ದಕ್ಕೆ ಅದೇ ಕಾರಣ” ಎಂದನು.
65 E prosseguiu:
66 ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ ಆತನ ಹಿಂಬಾಲಕರಲ್ಲಿ ಅನೇಕರು ಆತನನ್ನು ತೊರೆದುಬಿಟ್ಟರು. ಅವರು ಆತನನ್ನು ಹಿಂಬಾಲಿಸಲಿಲ್ಲ.
66 Diante disso, muitos dos seus discípulos o abandonaram e já não andavam com ele.
67 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ, “ನೀವು ಸಹ ನನ್ನನ್ನು ಬಿಟ್ಟುಹೋಗಬೇಕೆಂದಿರುವಿರಾ?” ಎಂದು ಕೇಳಿದನು.
67 Então Jesus perguntou aos doze:
68 ಸೀಮೋನ್ ಪೇತ್ರನು ಯೇಸುವಿಗೆ, “ಪ್ರಭುವೇ, ನಾವೆಲ್ಲಿಗೆ ಹೋಗೋಣ? ನಿತ್ಯಜೀವವನ್ನು ಕೊಡುವ ಸಂಗತಿಗಳು ನಿನ್ನಲ್ಲಿವೆ.
68 Simão Pedro respondeu: — Senhor, para quem iremos? O senhor tem as palavras da vida eterna,
69 ನಾವು ನಿನ್ನಲ್ಲಿ ನಂಬಿಕೆ ಇಡುತ್ತೇವೆ. ನೀನು ದೇವರಿಂದ ಬಂದ ಪರಿಶುದ್ಧನೆಂದು ನಮಗೆ ಗೊತ್ತಿದೆ” ಎಂದು ಉತ್ತರಕೊಟ್ಟನು.
69 e nós temos crido e conhecido que o senhor é o Santo de Deus.
70 ಬಳಿಕ ಯೇಸು, “ನಾನು ಆರಿಸಿಕೊಂಡ ಹನ್ನೆರಡು ಮಂದಿ ನೀವೇ. ಆದರೆ ನಿಮ್ಮಲ್ಲಿರುವ ಒಬ್ಬನು ಸೈತಾನನ ಮಗನಾಗಿದ್ದಾನೆ” ಎಂದು ಉತ್ತರಕೊಟ್ಟನು.
70 Então Jesus lhes disse:
71 ಯೇಸು ಸಿಮೋನನ ಮಗನಾದ ಇಸ್ಕರಿಯೋತ ಯೂದನ ಬಗ್ಗೆ ಮಾತಾಡುತ್ತಿದ್ದನು. ಯೂದನು ಹನ್ನೆರಡು ಮಂದಿ ಅಪೊಸ್ತಲರಲ್ಲಿ ಒಬ್ಬನಾಗಿದ್ದನು. ಆದರೆ ಮುಂದೆ ಯೇಸುವಿಗೆ ದ್ರೋಹ ಮಾಡಿದ ವ್ಯಕ್ತಿ ಇವನೇ.
71 Ele se referia a Judas, filho de Simão Iscariotes, porque este, sendo um dos doze, era quem o haveria de trair.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar João 6, comparar traduções ou montar um estudo — tudo direto pelo WhatsApp.