1 ಯೋಬನು ತನ್ನ ಮಾತನ್ನು ಮುಂದುವರಿಸಿದನು:
2 ನಾನು ದೇವರಿಗೆ ಹೀಗೆ ಹೇಳುತ್ತೇನೆ: ‘ನನ್ನನ್ನು ಖಂಡಿಸದೆ ಹೇಳು! ನಾನೇನು ತಪ್ಪುಮಾಡಿರುವೆ?
3 ದೇವರೇ, ನನ್ನನ್ನು ನೋಯಿಸುವುದು ನಿನಗೆ ಸಂತೋಷವೇ?
4 ದೇವರೇ, ನಿನಗೆ ಮನುಷ್ಯರ ಕಣ್ಣುಗಳಿವೆಯೋ?
5 ನಿನ್ನ ಜೀವಿತದ ದಿನಗಳು ನಮ್ಮಂತೆ ಕೊಂಚವಲ್ಲ.
6 ನೀನು ನನ್ನ ತಪ್ಪಿಗಾಗಿ ನೋಡುವೆ;
7 ಆದರೆ ನಾನು ನಿರಪರಾಧಿಯೆಂದು ನಿನಗೆ ಗೊತ್ತದೆ.
8 ನನ್ನನ್ನು ಸೃಷ್ಟಿಸಿದ್ದೂ ನನ್ನ ದೇಹವನ್ನು ರೂಪಿಸಿದ್ದೂ ನಿನ್ನ ಕೈಗಳೇ.
9 ದೇವರೇ, ನೀನು ನನ್ನನ್ನು ಜೇಡಿಮಣ್ಣಿನಂತೆ ಮಾಡಿರುವೆ ಎಂಬುದನ್ನು ಜ್ಞಾಪಿಸಿಕೊ.
10 ನೀನು ನನ್ನನ್ನು ಹಾಲಿನಂತೆ ಸುರಿದುಬಿಟ್ಟಿರುವೆ;
11 ನೀನು ನನ್ನನ್ನು ಎಲುಬುಗಳಿಂದಲೂ ನರಗಳಿಂದಲೂ ಹೆಣೆದು
12 ನೀನು ನನಗೆ ಜೀವವನ್ನು ಕೊಟ್ಟು ದಯೆತೋರಿರುವೆ.
13 ಆದರೆ ನಿನ್ನ ಹೃದಯದಲ್ಲಿ ಮರೆಮಾಡಿಕೊಂಡಿದ್ದು ಇದನ್ನೇ;
14 ನಾನು ಪಾಪ ಮಾಡಿದರೆ ನೀನು ನನ್ನನ್ನು ಗಮನಿಸುವೆ;
15 ನಾನು ದೋಷಿಯಾಗಿದ್ದರೆ,
16 ನಾನು ತಲೆಯೆತ್ತಿದರೆ
17 ನನ್ನನ್ನು ದೋಷಿಯೆಂದು ನಿರೂಪಿಸಲು
18 ದೇವರೇ, ನಾನು ಜನಿಸಲು ನೀನೇಕೆ ಅವಕಾಶ ಕೊಟ್ಟೆ?
19 ಎಂದೂ ಜೀವಿಸಿಲ್ಲದ ವ್ಯಕ್ತಿಯಂತೆ ನಾನಿರಬೇಕಿತ್ತು.
20 ನನ್ನ ಜೀವಿತವು ಬಹುಮಟ್ಟಿಗೆ ಮುಗಿದುಹೋಗಿದೆ.
21 ಯಾರೂ ಮರಳಿ ಬರಲಾಗದಂಥ ಕತ್ತಲೆಯ ಸ್ಥಳಕ್ಕೂ ಮರಣಾಂಧಕಾರದ ಸ್ಥಳಕ್ಕೂ
22 ಆ ಸ್ಥಳವು ಕತ್ತಲೆಯಿಂದಲೂ ಮರಣಾಂಧಕಾರದಿಂದಲೂ ಗಲಿಬಿಲಿಯಿಂದಲೂ ಕೂಡಿದೆ.