Jó 2

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs VC

Sair da comparação
VC Versão Católica
1 ಮತ್ತೊಂದು ದಿನ ಯೆಹೋವನನ್ನು ಭೇಟಿಯಾಗಲು ದೇವದೂತರು ಬಂದರು. ಸೈತಾನನು ಸಹ ಯೆಹೋವನನ್ನು ಭೇಟಿಯಾಗಲು ಅವರೊಂದಿಗೆ ಬಂದನು.
1 Ora, um dia em que os filhos de Deus se apresentaram diante do Senhor, Satanás apareceu também no meio deles na presença do Senhor.
2 ಯೆಹೋವನು ಸೈತಾನನಿಗೆ, “ನೀನು ಎಲ್ಲಿಂದ ಬರುತ್ತಿರುವೆ?” ಎಂದು ಕೇಳಿದನು.
2 O Senhor disse-lhe: De onde vens tu? Andei dando volta pelo mundo, respondeu Satanás, e passeando por ele.
3 ಅದಕ್ಕೆ ಯೆಹೋವನು, “ನನ್ನ ಸೇವಕನಾದ ಯೋಬನನ್ನು ಗಮನಿಸಿದೆಯಾ? ಭೂಮಿಯ ಮೇಲೆ ಅವನಂತೆ ಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ. ನಿಷ್ಕಾರಣವಾಗಿ ಅವನನ್ನು ನಾಶಪಡಿಸುವಂತೆ ನೀನು ನನ್ನನ್ನು ಒತ್ತಾಯಪಡಿಸಿದೆ. ಆದರೆ ಅವನು ನನಗೆ ಇನ್ನೂ ನಂಬಿಗಸ್ತನಾಗಿದ್ದಾನೆ” ಎಂದು ಹೇಳಿದನು.
3 O Senhor disse-lhe: Notaste o meu servo Jó? Não há ninguém igual a ele na terra, íntegro, reto, temente a Deus e afastado do mal. Persevera sempre em sua integridade; foi em vão que me incitaste a perdê-lo.
4 ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ! ಎಂಬಂತೆ ಮನುಷ್ಯನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ತನ್ನ ಸರ್ವಸ್ವವನ್ನೂ ಕೊಡುವನು.
4 Pele por pele!, respondeu Satanás. O homem dá tudo o que tem para salvar a própria vida.
5 ಆದರೆ ನೀನು ಕೈಚಾಚಿ ಅವನ ಮಾಂಸವನ್ನೂ ಮೂಳೆಗಳನ್ನೂ ಹೊಡೆ. ಅವನು ನಿನ್ನ ಮುಖದೆದುರಿಗೆ ನಿನ್ನನ್ನು ಖಂಡಿತವಾಗಿ ದೂಷಿಸುವನು” ಎಂದು ಉತ್ತರಕೊಟ್ಟನು.
5 Mas estende a tua mão, toca-lhe nos ossos, na carne; juro que te renegará em tua face.
6 ಅದಕ್ಕೆ ಯೆಹೋವನು ಸೈತಾನನಿಗೆ, “ಸರಿ, ಯೋಬನನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ; ಆದರೆ ಅವನ ಪ್ರಾಣವನ್ನು ಮಾತ್ರ ತೆಗೆಯಬೇಡ” ಎಂದು ಅಪ್ಪಣೆಕೊಟ್ಟನು.
6 O Senhor disse a Satanás: Pois bem, ele está em teu poder, poupa-lhe apenas a vida.
7 ಆಗ, ಸೈತಾನನು ಯೆಹೋವನ ಬಳಿಯಿಂದ ಹೊರಟುಹೋಗಿ ಯೋಬನಿಗೆ ಬಾಧಿಸುವ ಕುರುಗಳನ್ನು ಹುಟ್ಟಿಸಿದನು. ಯೋಬನ ದೇಹದ ಮೇಲೆಲ್ಲಾ ಅಂದರೆ ಅವನ ಪಾದದಿಂದಿಡಿದು ತಲೆಯ ಮೇಲ್ಭಾಗದವರೆಗೂ ಬಾಧಿಸುವ ಕುರುಗಳು ತುಂಬಿಕೊಂಡವು.
7 Satanás retirou-se da presença do Senhor e feriu Jó com uma lepra maligna, desde a planta dos pés até o alto da cabeça.
8 ಯೋಬನು ಬೂದಿಯಲ್ಲಿ ಕುಳಿತುಕೊಂಡು ತನ್ನ ಕುರುಗಳನ್ನು ಮಡಕೆಯ ಚೂರಿನಿಂದ ಕೆರೆದುಕೊಳ್ಳುತ್ತಿದ್ದನು.
8 E Jó tomou um caco de telha para se coçar, e assentou-se sobre a cinza.
9 ಯೋಬನ ಹೆಂಡತಿಯು ಅವನಿಗೆ, “ನೀನು ಇನ್ನೂ ದೇವರಿಗೆ ನಂಬಿಗಸ್ತನಾಗಿರುವೆಯೋ? ದೇವರನ್ನು ದೂಷಿಸಿ ಸಾಯಿ” ಎಂದು ಹೇಳಿದಳು.
9 Sua mulher disse-lhe: Persistes ainda em tua integridade? Amaldiçoa a Deus, e morre!
10 ಯೋಬನು ತನ್ನ ಹೆಂಡತಿಗೆ, “ನೀನು ಮೂರ್ಖಳಂತೆ ಮಾತಾಡುತ್ತಿರುವೆ! ದೇವರು ಒಳ್ಳೆಯವುಗಳನ್ನು ಕೊಡುವಾಗ ನಾವು ಅವುಗಳನ್ನು ಸ್ವೀಕರಿಸಿಕೊಳ್ಳುತ್ತೇವೆ. ಆತನು ಕೆಟ್ಟದ್ದನ್ನು ಕೊಡುವಾಗ ನಾವು ಸ್ವೀಕರಿಸಿಕೊಳ್ಳಬಾರದೋ?” ಎಂದು ಉತ್ತರಕೊಟ್ಟನು. ಈ ಸಂಕಟದಲ್ಲಿಯೂ ಯೋಬನು ಪಾಪ ಮಾಡಲಿಲ್ಲ ಹಾಗೂ ದೇವರ ವಿರುದ್ಧ ಯಾವ ಮಾತನ್ನು ಆಡಲಿಲ್ಲ.
10 Falas, respondeu-lhe ele, como uma insensata. Aceitamos a felicidade da mão de Deus; não devemos também aceitar a infelicidade? Em tudo isso, Jó não pecou por palavras.
11 ಯೋಬನ ಮೂವರು ಗೆಳೆಯರು ಯಾರೆಂದರೆ: ತೇಮಾನಿನ ಎಲೀಫಜನು, ಶೂಹದ ಬಿಲ್ದದನು ಮತ್ತು ನಾಮಾಥದ ಚೋಫರನು. ಯೋಬನಿಗೆ ಸಂಭವಿಸಿದ ಆಪತ್ತುಗಳ ಬಗ್ಗೆ ಈ ಮೂವರು ಗೆಳೆಯರು ಕೇಳಿದಾಗ ತಮ್ಮ ಮನೆಯಿಂದ ಹೊರಟು ಒಟ್ಟಾಗಿ ಭೇಟಿಯಾದರು. ಯೋಬನ ಬಳಿಗೆ ಹೋಗಿ ಅನುತಾಪ ಸೂಚಿಸಿ ಸಂತೈಸಲು ಒಪ್ಪಿಕೊಂಡರು.
11 Três amigos de Jó, Elifaz de Temã, Bildad de Chua e Sofar de Naama, tendo ouvido todo o mal que lhe tinha sucedido, vieram cada um de sua terra e combinaram ir juntos exprimir sua simpatia e suas consolações.
12 ಆದರೆ ಆ ಮೂವರು ಸ್ನೇಹಿತರು ಬಹು ದೂರದಿಂದ ಯೋಬನನ್ನು ಕಂಡಾಗ ಅವನ ಗುರುತೇ ಹಿಡಿಯಲಾರದೆ ಗಟ್ಟಿಯಾಗಿ ಅಳತೊಡಗಿದರು; ತಮ್ಮ ಮೇಲಂಗಿಗಳನ್ನು ಹರಿದುಕೊಂಡು ಮಣ್ಣನ್ನು ಮೇಲಕ್ಕೆ ತೂರಿ ತಮ್ಮ ತಲೆಗಳ ಮೇಲೆ ಸುರಿಸಿಕೊಂಡರು.
12 Tendo de longe levantado os olhos, não o reconheceram; e puseram-se então a chorar, rasgaram as vestes, e lançaram para o céu poeira, que recaía sobre suas cabeças.
13 ಬಳಿಕ ಆ ಮೂವರು ಸ್ನೇಹಿತರು ಏಳುದಿನ ಹಗಲಿರುಳು ಯೋಬನೊಂದಿಗೆ ನೆಲದ ಮೇಲೆ ಕುಳಿತುಕೊಂಡಿದ್ದರು. ಯೋಬನು ವಿಪರೀತ ನೋವಿನಲ್ಲಿದ್ದ ಕಾರಣ ಅವರು ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ.
13 Ficaram sentados no chão ao lado dele sete dias e sete noites, sem que nenhum lhe dirigisse a palavra, tão grande era a dor em que o viam mergulhado.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Jó 2, comparar traduções ou montar um estudo — tudo direto pelo WhatsApp.