Jeremias 13

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010)

1 ಯೆಹೋವನು ನನಗೆ ಹೀಗೆ ಹೇಳಿದನು, “ಯೆರೆಮೀಯನೇ, ಹೋಗಿ ಒಂದು ನಾರಿನ ನಡುಪಟ್ಟಿಯನ್ನು ಕೊಂಡುಕೊ. ಅದನ್ನು ನಿನ್ನ ಸೊಂಟಕ್ಕೆ ಸುತ್ತಿಕೊ. ಆ ನಡುಪಟ್ಟಿ ನೀರಿನಲ್ಲಿ ನೆನೆಯದಂತೆ ನೋಡಿಕೋ.”

2 ಯೆಹೋವನು ಹೇಳಿದಂತೆ ನಾನು ಒಂದು ನಾರಿನ ನಡುಪಟ್ಟಿಯನ್ನು ಕೊಂಡು ತಂದೆನು. ಅದನ್ನು ನನ್ನ ಸೊಂಟಕ್ಕೆ ಸುತ್ತಿಕೊಂಡೆನು.

3 ಆಗ ಎರಡನೇ ಸಲ ನನಗೆ ಯೆಹೋವನ ಸಂದೇಶ ಬಂದಿತು.

4 ಆ ಸಂದೇಶವಿದು, “ಯೆರೆಮೀಯನೇ, ನೀನು ಕೊಂಡ ತಂದು ಸುತ್ತಿಕೊಂಡ ನಡುಪಟ್ಟಿಯನ್ನು ತೆಗೆದುಕೊಂಡು ಪೆರಾತ್‌ಗೆ ಹೋಗು. ಆ ನಡುಪಟ್ಟಿಯನ್ನು ಬೆಟ್ಟದ ಸಂದಿನಲ್ಲಿ ಬಚ್ಚಿಡು.”

5 ಆದ್ದರಿಂದ ನಾನು ಪೆರಾತ್‌ಗೆ ಹೋದೆ. ಯೆಹೋವನು ಹೇಳಿದ ಪ್ರಕಾರ ನಡುಪಟ್ಟಿಯನ್ನು ಬಚ್ಚಿಟ್ಟೆ.

6 ಬಹಳ ದಿನಗಳಾದ ತರುವಾಯ, ಯೆಹೋವನು ನನಗೆ, “ಯೆರೆಮೀಯನೇ, ಪೆರಾತ್‌ಗೆ ಹೋಗು, ನಾನು ನಿನಗೆ ಅಲ್ಲಿ ಬಚ್ಚಿಡಲು ಹೇಳಿದ ನಡುಪಟ್ಟಿಯನ್ನು ತೆಗೆದುಕೊಂಡು ಬಾ” ಎಂದು ಹೇಳಿದನು.

7 ನಾನು ಪೆರಾತ್‌ಗೆ ಹೋದೆ ಮತ್ತು ನಡುಪಟ್ಟಿಯನ್ನು ಬಚ್ಚಿಟ್ಟ ಬೆಟ್ಟದ ಸಂದಿನಿಂದ ಹೊರತೆಗೆದೆ. ಆದರೆ ಆ ನಡುಪಟ್ಟಿ ಹಾಳಾಗಿಹೋಗಿತ್ತು. ನಾನು ಅದನ್ನು ಧರಿಸಲಾಗಲಿಲ್ಲ. ಅದು ಯಾವುದಕ್ಕೂ ಪ್ರಯೋಜನವಿರಲಿಲ್ಲ.

8 ಆಗ ನನಗೆ ಯೆಹೋವನ ಸಂದೇಶ ಬಂದಿತು.

9 ಯೆಹೋವನು ಹೀಗೆ ಹೇಳಿದನು, “ನಡುಪಟ್ಟಿಯು ಹಾಳಾಗಿ ನಿಷ್ಪ್ರಯೋಜಕವಾಗಿದೆ. ಅಂತೆಯೇ ನಾನು ಯೆಹೂದದ ಮತ್ತು ಜೆರುಸಲೇಮಿನ ಜಂಬದ ಜನರನ್ನು ಹಾಳುಮಾಡುತ್ತೇನೆ.

10 ಯೆಹೂದದಲ್ಲಿ ದುಷ್ಟರೂ ಗರ್ವಿಷ್ಠರೂ ಆಗಿರುವ ಜನರನ್ನು ಹಾಳುಮಾಡುವೆನು. ಅವರು ನನ್ನ ಸಂದೇಶವನ್ನು ಕೇಳುವುದಿಲ್ಲ. ಅವರು ಹಟಮಾರಿಗಳೂ ತಮ್ಮ ಮನಸ್ಸಿಗೆ ಬಂದಂತೆ ಮಾಡುವವರೂ ಆಗಿದ್ದಾರೆ. ಅವರು ಬೇರೆ ದೇವರುಗಳನ್ನು ಅನುಸರಿಸುತ್ತಾರೆ ಮತ್ತು ಪೂಜಿಸುತ್ತಾರೆ. ಯೆಹೂದದ ಜನರು ಈ ನಾರಿನ ನಡುಪಟ್ಟಿಯಂತೆ ಆಗುವರು. ಅವರು ಹಾಳಾಗಿ ನಿಷ್ಪ್ರಯೋಜಕರಾಗುವರು.

11 ಪುರುಷನೊಬ್ಬನು ನಡುಪಟ್ಟಿಯನ್ನು ಬಿಗಿಯಾಗಿ ಸೊಂಟಕ್ಕೆ ಸುತ್ತಿಕೊಳ್ಳುವಂತೆ ನಾನು ಇಸ್ರೇಲಿನ ಎಲ್ಲಾ ವಂಶಗಳನ್ನು ಮತ್ತು ಯೆಹೂದದ ಎಲ್ಲಾ ವಂಶಗಳನ್ನು ನನ್ನ ಸುತ್ತಲೂ ಬಿಗಿದುಕೊಂಡೆನು.” ಇದು ಯೆಹೋವನಿಂದ ಬಂದ ಮಾತು. “ಅವರು ನನ್ನ ಜನರಾಗುವರು ಎಂದುಕೊಂಡು ನಾನು ಹಾಗೆ ಮಾಡಿದೆ. ನನ್ನ ಜನರು ನನಗೆ ಕೀರ್ತಿ, ಸ್ತುತಿ, ಗೌರವ ತರುವರೆಂದು ತಿಳಿದಿದ್ದೆ. ಆದರೆ ನನ್ನ ಜನರು ನನ್ನ ಮಾತನ್ನು ಕೇಳದೆಹೋದರು.”

12 “ಯೆರೆಮೀಯನೇ, ಯೆಹೂದದ ಜನರಿಗೆ, ‘ಇಸ್ರೇಲಿನ ದೇವರಾದ ಯೆಹೋವನು ಪ್ರತಿಯೊಂದು ಚರ್ಮದ ಬುದ್ದಲಿಯು ದ್ರಾಕ್ಷಾರಸದಿಂದ ತುಂಬಿರಬೇಕು ಎಂದು ಹೇಳುತ್ತಾನೆ’ ಎಂದು ಹೇಳು. ಆಗ ಆ ಜನರು ನಕ್ಕು, ‘ಪ್ರತಿಯೊಂದು ಚರ್ಮದ ಬುದ್ದಲಿಯು ದ್ರಾಕ್ಷಾರಸದಿಂದ ತುಂಬಿರಬೇಕೆಂಬುದು ನಮಗೆ ಚೆನ್ನಾಗಿ ಗೊತ್ತು’ ಎಂದು ನಿನಗೆ ಹೇಳುತ್ತಾರೆ.

13 ಆಗ ನೀನು ಅವರಿಗೆ, ‘ಯೆಹೋವನು ಹೀಗೆ ಹೇಳುತ್ತಾನೆ ಎಂದು ಹೇಳು. ಈ ಪ್ರದೇಶದಲ್ಲಿ ವಾಸಮಾಡುವ ಪ್ರತಿಯೊಬ್ಬ ಮನುಷ್ಯನನ್ನು ಕುಡಿದು ಮತ್ತನಾದವನಂತೆ ಅಸಹಾಯಕನನ್ನಾಗಿ ಮಾಡುತ್ತೇನೆ. ನಾನು ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳುವ ರಾಜರ ಬಗ್ಗೆ ಹೇಳುತ್ತಿದ್ದೇನೆ. ನಾನು ಯಾಜಕರ, ಪ್ರವಾದಿಗಳ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಎಲ್ಲಾ ಜನರ ಬಗ್ಗೆಯೂ ಹೇಳುತ್ತಿದ್ದೇನೆ.

14 ಯೆಹೂದದ ಜನರು ಎಡವಿ, ಒಬ್ಬರಮೇಲೊಬ್ಬರು ಬೀಳುವಂತೆ ನಾನು ಮಾಡುವೆನು. ತಂದೆ ಮತ್ತು ಮಕ್ಕಳು ಒಬ್ಬರಮೇಲೊಬ್ಬರು ಬೀಳುವರು.’” ಇದು ಯೆಹೋವನ ನುಡಿ. “‘ನಾನು ಅವರಿಗಾಗಿ ಕನಿಕರಪಡುವದಿಲ್ಲ ಅಥವಾ ಕರುಣೆ ತೋರಿಸುವದಿಲ್ಲ. ಯೆಹೂದದ ಜನರ ವಿನಾಶವನ್ನು ಕರುಣೆಯು ತಡೆಯದಂತೆ ನೋಡಿಕೊಳ್ಳುತ್ತೇನೆ.’”

15 ಕೇಳಿರಿ, ಗಮನ ಕೊಡಿರಿ;

16 ನಿಮ್ಮ ದೇವರಾದ ಯೆಹೋವನು

17 ಯೆಹೂದದ ಜನರಾದ ನೀವು ಯೆಹೋವನ ಮಾತನ್ನು ಕೇಳದಿದ್ದರೆ,

18 ಈ ಸಂಗತಿಗಳನ್ನು ರಾಜನಿಗೂ ರಾಣಿಗೂ ಹೇಳಿರಿ:

19 ನೆಗೆವ್ ಮರುಭೂಮಿಯ ಎಲ್ಲಾ ನಗರಗಳಿಗೆ ಬೀಗ ಹಾಕಲಾಗಿದೆ.

20 ಜೆರುಸಲೇಮೇ, ಮುಖವೆತ್ತಿ ನೋಡು.

21 ಯೆಹೋವನು ನಿನಗೆ ಆ ಮಂದೆಯ ಲೆಕ್ಕವನ್ನೊಪ್ಪಿಸು ಎಂದು ಕೇಳಿದರೆ ಏನು ಹೇಳುವೆ?

22 “ಇಂಥ ಕೇಡು ನನಗೆ ಏಕೆ ಉಂಟಾಯಿತು?”

23 ಕಪ್ಪಗಿರುವವನು ತನ್ನ ಚರ್ಮದ ಬಣ್ಣವನ್ನು ಬದಲಿಸಲಾರನು.

24 “ನಾನು ನಿಮಗೆ ನಿಮ್ಮ ಮನೆಗಳನ್ನು ಬಿಟ್ಟು ಓಡಿಹೋಗುವಂತೆ ಒತ್ತಾಯ ಮಾಡುತ್ತೇನೆ.

25 ನಿಮ್ಮ ಗತಿ ಹೀಗಾಗುವುದು.

26 ಜೆರುಸಲೇಮ್ ನಗರವೇ, ನಾನು ನಿನ್ನ ಲಂಗವನ್ನು ನಿನ್ನ ಮುಖದವರೆಗೆ ಎತ್ತಿಬಿಡುತ್ತೇನೆ.

27 ನೀನು ಮಾಡಿದ ಭಯಾನಕ ಕೃತ್ಯಗಳನ್ನು ನಾನು ನೋಡಿದ್ದೇನೆ.

Ler em outra tradução

Comparar lado a lado

Estude este capítulo no WhatsApp

Peça à IA da Bíblia Fala para explicar Jeremias 13, comparar traduções ou montar um estudo — tudo direto pelo WhatsApp.