Jeremias 37

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARC

Sair da comparação
ARC Almeida Revista e Corrigida 2009
1 ನೆಬೂಕದ್ನೆಚ್ಚರನು ಬಾಬಿಲೋನಿನ ರಾಜನಾಗಿದ್ದನು. ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನಾದ ಕೊನ್ಯನ ಸ್ಥಾನದಲ್ಲಿ ಚಿದ್ಕೀಯನನ್ನು ಯೆಹೂದದ ರಾಜನನ್ನಾಗಿ ನೇಮಿಸಿದ್ದನು. ಚಿದ್ಕೀಯನು ರಾಜನಾದ ಯೋಷೀಯನ ಮಗನಾಗಿದ್ದನು.
1 E reinou o rei Zedequias, filho de Josias, em lugar de Conias, filho de Jeoaquim, a quem Nabucodonosor, rei da Babilônia, constituiu rei na terra de Judá.
2 ಆದರೆ ಯೆಹೋವನು ಯೆರೆಮೀಯನಿಗೆ ಪ್ರವಾದನೆ ಮಾಡಲು ಹೇಳಿದ ಸಂದೇಶಗಳ ಕಡೆಗೆ ಗಮನ ಕೊಡಲಿಲ್ಲ. ಚಿದ್ಕೀಯನ ಸೇವಕರು ಮತ್ತು ಯೆಹೂದದ ಜನರು ಯೆಹೋವನ ಸಂದೇಶಗಳಿಗೆ ಯಾವ ಗಮನವನ್ನೂ ಕೊಡಲಿಲ್ಲ.
2 Mas nem ele, nem os seus servos, nem o povo da terra deram ouvidos às palavras do Senhor que falou pelo ministério de Jeremias, o profeta.
3 ರಾಜನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನು ಮತ್ತು ಮಾಸೇಯನ ಮಗನಾದ ಯಾಜಕ ಚೆಫನನನ್ನು ಒಂದು ಸಂದೇಶದೊಂದಿಗೆ ಯೆರೆಮೀಯನಲ್ಲಿಗೆ ಕಳುಹಿಸಿದನು. ಯೆರೆಮೀಯನಿಗೆ ಅವರು ತಂದ ಸಂದೇಶ ಹೀಗಿತ್ತು: “ಯೆರಮೀಯನೇ, ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು.”
3 Contudo, mandou o rei Zedequias a Jucal, filho de Selemias, e a Sofonias, filho de Maaseias, o sacerdote, ao profeta Jeremias, para lhe dizerem: Roga, agora, por nós ao Senhor , nosso Deus.
4 (ಆ ಕಾಲದಲ್ಲಿ ಯೆರೆಮೀಯನನ್ನು ಇನ್ನೂ ಕಾರಾಗೃಹದಲ್ಲಿಟ್ಟಿರಲಿಲ್ಲ. ಅವನು ತನ್ನ ಮನಬಂದ ಕಡೆ ಹೋಗಲು ಸಬತಂತ್ರನಾಗಿದ್ದನು.
4 E entrava e saía Jeremias entre o povo, porque não o tinham encerrado na prisão.
5 ಅದಲ್ಲದೆ ಆಗ ಫರೋಹನ ಸೈನ್ಯವು ಈಜಿಪ್ಟಿನಿಂದ ಯೆಹೂದದ ಕಡೆಗೆ ಹೊರಟಿತ್ತು. ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವ ಉದ್ದೇಶದಿಂದ ಬಾಬಿಲೋನ್ ಸೈನ್ಯವು ಜೆರುಸಲೇಮ್ ನಗರಕ್ಕೆ ಮುತ್ತಿಗೆ ಹಾಕಿತ್ತು. ಆಗ ಈಜಿಪ್ಟಿನ ಸೈನ್ಯವು ತಮ್ಮ ಕಡೆ ಬರುತ್ತಿದೆ ಎಂಬ ಸಮಾಚಾರವು ಬಂದಿತು. ಅದನ್ನು ಕೇಳಿ ಬಾಬಿಲೋನಿನ ಸೈನ್ಯವು ಈಜಿಪ್ಟಿನ ಸೈನ್ಯವನ್ನೆದುರಿಸಲು ಜೆರುಸಲೇಮನ್ನು ಬಿಟ್ಟುಹೋಗಿತ್ತು.)
5 Contudo, o exército de Faraó saiu do Egito; ouvindo os caldeus que tinham sitiado Jerusalém esta notícia, retiraram-se de Jerusalém.
6 ಪ್ರವಾದಿಯಾದ ಯೆರೆಮೀಯನಿಗೆ ಯೆಹೋವನಿಂದ ಸಂದೇಶ ಬಂದಿತು:
6 Então, veio a Jeremias, o profeta, a palavra do Senhor , dizendo:
7 “ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ಯೆಹೂಕಲನೇ ಮತ್ತು ಚೆಫನ್ಯನೇ, ಯೆಹೂದದ ರಾಜನಾದ ಚಿದ್ಕೀಯನು ನನಗೆ ಪ್ರಶ್ನೆಗಳನ್ನು ಕೇಳುವದಕ್ಕಾಗಿ ನಿಮ್ಮನ್ನು ನನ್ನಲ್ಲಿಗೆ ಕಳಿಸಿದ್ದಾನೆಂಬುದು ನನಗೆ ಗೊತ್ತು. ರಾಜನಾದ ಚಿದ್ಕೀಯನಿಗೆ ಹೀಗೆ ಹೇಳಿರಿ. ಬಾಬಿಲೋನಿನ ಸೈನ್ಯದ ವಿರುದ್ಧ ನಿಮಗೆ ಸಹಾಯ ಮಾಡಲು ಇಲ್ಲಿಗೆ ಬರುವದಕ್ಕಾಗಿ ಫರೋಹನ ಸೈನ್ಯವು ಈಜಿಪ್ಟಿನಿಂದ ಹೊರಟಿತು. ಆದರೆ ಫರೋಹನ ಸೈನ್ಯವು ಈಜಿಪ್ಟಿಗೆ ಹಿಂದಿರುಗುವುದು.
7 Assim diz o Senhor , Deus de Israel: Assim direis ao rei de Judá, que vos enviou a mim, para se informar: Eis que o exército de Faraó, que saiu em vosso socorro, voltará para a sua terra no Egito.
8 ಬಳಿಕ ಬಾಬಿಲೋನಿನ ಸೈನ್ಯವು ಇಲ್ಲಿಗೆ ಬರುವುದು. ಅವರು ಜೆರುಸಲೇಮಿನ ಮೇಲೆ ಧಾಳಿ ಮಾಡುವರು. ಆಗ ಬಾಬಿಲೋನಿನ ಆ ಸೈನ್ಯವು ಜೆರುಸಲೇಮನ್ನು ವಶಪಡಿಸಿಕೊಂಡು ಅದನ್ನು ಸುಟ್ಟುಹಾಕುವುದು.’
8 E voltarão os caldeus, e pelejarão contra esta cidade, e a tomarão, e a queimarão.
9 ಯೆಹೋವನು ಹೀಗೆನ್ನುತ್ತಾನೆ: ‘ಜೆರುಸಲೇಮ್ ನಿವಾಸಿಗಳೇ “ಬಾಬಿಲೋನ್ ಸೈನಿಕರು ಖಂಡಿತವಾಗಿಯೂ ನಮ್ಮನ್ನು ಬಿಟ್ಟುಹೋಗುವರು” ಎಂದು ನಿಮಗೆ ನೀವೇ ಹೇಳಿಕೊಂಡು ನಿಮ್ಮನ್ನು ಮೂರ್ಖರನ್ನಾಗಿ ಮಾಡಿಕೊಳ್ಳಬೇಡಿ, ಅವರು ನಿಮ್ಮನ್ನು ಬಿಟ್ಟುಹೋಗುವದಿಲ್ಲ.
9 Assim diz o Senhor : Não enganeis a vossa alma, dizendo: Sem dúvida, se irão os caldeus de nós; porque não se irão.
10 ಜೆರುಸಲೇಮಿನ ಜನರೇ, ನಿಮ್ಮ ಮೇಲೆ ಧಾಳಿ ಮಾಡುವ ಬಾಬಿಲೋನಿನ ಎಲ್ಲಾ ಸೈನಿಕರನ್ನು ನೀವು ಸೋಲಿಸಿದರೂ ಅವರ ಗುಡಾರದಲ್ಲಿ ಕೆಲವು ಜನ ಗಾಯಗೊಂಡವರು ಉಳಿದಿರುತ್ತಾರೆ. ಆ ಗಾಯಾಳುಗಳೇ ತಮ್ಮ ಗುಡಾರದಿಂದ ಹೊರಬಂದು ಜೆರುಸಲೇಮನ್ನು ಸುಟ್ಟುಹಾಕುವರು.’”
10 Porque, ainda que ferísseis a todo o exército dos caldeus que peleja contra vós, e ficassem deles apenas homens traspassados, cada um se levantaria na sua tenda e queimaria a fogo esta cidade.
11 ಈಜಿಪ್ಟ್ ದೇಶದ ಫರೋಹನ ಸೈನ್ಯದೊಂದಿಗೆ ಕಾದಾಡಲು ಬಾಬಿಲೋನಿನ ಸೈನ್ಯವು ಜೆರುಸಲೇಮನ್ನು ಬಿಟ್ಟುಹೋದ ಮೇಲೆ
11 E sucedeu que, subindo de Jerusalém o exército dos caldeus, por causa do exército de Faraó,
12 ಯೆರೆಮೀಯನು ಜೆರುಸಲೇಮಿನಿಂದ ಬೆನ್ಯಾಮೀನ್ ಪ್ರದೇಶಕ್ಕೆ ಹೋಗ ಬಯಸಿದನು. ತನ್ನ ಮನೆತನಕ್ಕೆ ಸೇರಿದ ಆಸ್ತಿಯ ವಿಭಜನೆಗಾಗಿ ಅವನು ಹೋಗುತ್ತಿದ್ದನು.
12 saiu Jeremias de Jerusalém, a fim de ir à terra de Benjamim para receber a sua parte no meio do povo.
13 ಆದರೆ ಯೆರೆಮೀಯನು ಜೆರುಸಲೇಮಿನ ಬೆನ್ಯಾಮೀನ್ ಹೆಬ್ಬಾಗಿಲಿನ ಹತ್ತಿರ ಹೋದಾಗ ಪಹರೆದಾರರ ಮುಖ್ಯಸ್ಥನು ಅವನನ್ನು ಹಿಡಿದುಕೊಂಡನು. ಆ ಮುಖ್ಯಸ್ಥನ ಹೆಸರು ಇರೀಯ. ಇರೀಯನು ಶೆಲೆಮ್ಯನ ಮಗನು; ಶೆಲೆಮ್ಯನು ಹನನ್ಯನ ಮಗನು. ಮುಖ್ಯಸ್ಥನಾದ ಇರೀಯನು ಯೆರೆಮೀಯನನ್ನು ಹಿಡಿದುಕೊಂಡು, “ಯೆರೆಮೀಯನೇ, ನೀನು ಬಾಬಿಲೋನಿನ ಕಡೆ ಸೇರಿಕೊಳ್ಳುವದಕ್ಕಾಗಿ ನಮ್ಮನ್ನು ಬಿಟ್ಟುಹೋಗುತ್ತಿರುವೆ” ಎಂದನು.
13 Estando ele à porta de Benjamim, achava-se ali um capitão da guarda, cujo nome era Jerias, filho de Selemias, filho de Hananias, o qual prendeu a Jeremias, o profeta, dizendo: Tu foges para os caldeus.
14 “ಅದು ನಿಜವಲ್ಲ, ಬಾಬಿಲೋನಿನವರ ಕಡೆ ಸೇರಿಕೊಳ್ಳಲು ನಾನು ಬಿಟ್ಟುಹೋಗುತ್ತಿಲ್ಲ” ಎಂದು ಯೆರೆಮೀಯನು ಇರೀಯನಿಗೆ ಹೇಳಿದನು. ಆದರೆ ಇರೀಯನು ಯೆರೆಮೀಯನ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಇರೀಯನು ಯೆರೆಮೀಯನನ್ನು ಬಂಧಿಸಿ ಜೆರುಸಲೇಮಿನ ರಾಜಾಧಿಕಾರಿಗಳ ಬಳಿಗೆ ಕರೆದೊಯ್ದನು.
14 E Jeremias disse: Isso é falso; não fujo para os caldeus. Mas ele não lhe deu ouvidos; e assim Jerias prendeu a Jeremias e o levou aos príncipes.
15 ಆ ಅಧಿಕಾರಿಗಳು ಯೆರೆಮೀಯನ ಮೇಲೆ ತುಂಬಾ ಕೋಪಗೊಂಡರು. ಯೆರೆಮೀಯನನ್ನು ಹೊಡೆಯಬೇಕೆಂದು ಅವರು ಆಜ್ಞೆಯಿತ್ತರು. ಆಮೇಲೆ ಅವರು ಯೆರೆಮೀಯನನ್ನು ಸೆರೆಮನೆಯಲ್ಲಿಟ್ಟರು. ಆ ಸೆರೆಮನೆಯು ಯೆಹೋನಾಥಾನನೆಂಬುವನ ಮನೆಯಲ್ಲಿತ್ತು. ಯೆಹೋನಾಥಾನನು ಯೆಹೂದದ ರಾಜನ ಲಿಫಿಗಾರನಾಗಿದ್ದನು. ಯೆಹೋನಾಥಾನನ ಮನೆಯನ್ನು ಸೆರೆಮನೆಯನ್ನಾಗಿ ಮಾಡಲಾಗಿತ್ತು.
15 E os príncipes se iraram muito contra Jeremias, e o feriram, e o puseram na prisão, na casa de Jônatas, o escrivão; porque a tinham transformado em cárcere.
16 ಅವರು ಯೆರೆಮೀಯನನ್ನು ಯೆಹೋನಾಥಾನನ ನೆಲಮನೆಯ ಒಂದು ಕೋಣೆಯಲ್ಲಿಟ್ಟರು. ಆ ಕೋಣೆಯು ನೆಲಮನೆಯ ಕೆಳಭಾಗದಲ್ಲಿತ್ತು. ಯೆರೆಮೀಯನು ಅಲ್ಲಿ ಬಹಳ ದಿವಸಗಳವರೆಗೆ ಇದ್ದನು.
16 Entrando, pois, Jeremias na casa do calabouço e nas suas celas, ficou ali Jeremias muitos dias.
17 ಆಗ ರಾಜನಾದ ಚಿದ್ಕೀಯನು ಯೆರೆಮೀಯನನ್ನು ತನ್ನ ಅರಮನೆಗೆ ಕರೆತರಿಸಿದನು. ಚಿದ್ಕೀಯನು ಯೆರೆಮೀಯನೊಂದಿಗೆ ರಹಸ್ಯವಾಗಿ ಮಾತನಾಡಿ, “ಯೆಹೋವನಿಂದ ಏನಾದರೂ ಸಂದೇಶವಿದೆಯೊ?” ಎಂದು ಕೇಳಿದನು.
17 E mandou o rei Zedequias soltá-lo. Então, o rei lhe perguntou em sua casa, em segredo, dizendo: Há alguma palavra do Senhor ? E disse Jeremias: Há. E disse ainda: Na mão do rei da Babilônia serás entregue.
18 ಆಮೇಲೆ ಯೆರೆಮೀಯನು ರಾಜನಾದ ಚಿದ್ಕೀಯನನ್ನು ಹೀಗೆ ಕೇಳಿದನು, “ನಾನು ಏನು ತಪ್ಪು ಮಾಡಿದ್ದೇನೆ? ನಾನು ನಿನ್ನ ವಿರುದ್ಧ ಅಥವಾ ನಿನ್ನ ಅಧಿಕಾರಿಗಳ ವಿರುದ್ಧ ಅಥವಾ ಜೆರುಸಲೇಮಿನ ಜನರ ವಿರುದ್ಧ ಯಾವ ಅಪರಾಧವನ್ನು ಮಾಡಿದ್ದೇನೆ? ನೀನು ನನ್ನನ್ನು ಸೆರೆಮನೆಯಲ್ಲಿ ಏಕೆ ಹಾಕಿರುವೆ?
18 Disse mais Jeremias ao rei Zedequias: Em que tenho pecado contra ti, e contra os teus servos, e contra este povo, para que me pusésseis na prisão?
19 ರಾಜನಾದ ಚಿದ್ಕೀಯನೇ, ನಿನ್ನ ಪ್ರವಾದಿಗಳು ಈಗ ಎಲ್ಲಿದ್ದಾರೆ? ಆ ಪ್ರವಾದಿಗಳು ನಿನಗೆ ಸುಳ್ಳುಪ್ರವಾದನೆಯನ್ನು ಮಾಡಿದರು. ‘ಬಾಬಿಲೋನಿನ ರಾಜನು ನಿನ್ನ ಮೇಲಾಗಲಿ ಅಥವಾ ಈ ಯೆಹೂದ ಪ್ರದೇಶದ ಮೇಲಾಗಲಿ ಧಾಳಿ ಮಾಡುವದಿಲ್ಲ’ ಎಂದು ಅವರು ಹೇಳಿದ್ದರು.
19 Onde estão, agora, os vossos profetas que vos profetizavam, dizendo: O rei da Babilônia não virá contra vós nem contra esta terra?
20 ಆದರೆ ಯೆಹೂದದ ರಾಜನಾದ ಚಿದ್ಕೀಯನೇ, ದಯವಿಟ್ಟು ನಾನು ಹೇಳುವದನ್ನು ಕೇಳು. ನನ್ನ ಕೋರಿಕೆಯನ್ನು ದಯವಿಟ್ಟು ಕೇಳು. ನನ್ನನ್ನು ಲಿಪಿಕಾರನಾದ ಯೆಹೋನಾಥಾನನ ಮನೆಗೆ ತಿರುಗಿ ಕಳುಹಿಸಬೇಡ. ಇದೇ ನನ್ನ ಬೇಡಿಕೆ. ನೀನು ನನ್ನನ್ನು ಮತ್ತೆ ಅಲ್ಲಿಗೆ ಕಳುಹಿಸಿದರೆ ನಾನು ಅಲ್ಲಿ ಸತ್ತುಹೋಗುತ್ತೇನೆ” ಎಂದನು.
20 Agora, pois, ó rei, meu senhor, caia a minha súplica diante de ti: não me deixes tornar à casa de Jônatas, o escriba, para que não venha a morrer ali.
21 ಆಗ ರಾಜನಾದ ಚಿದ್ಕೀಯನು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಡಬೇಕೆಂದು ಮತ್ತು ಅವನಿಗೆ ಪೇಟೆಯಿಂದ ರೊಟ್ಟಿಯನ್ನು ತಂದುಕೊಡಬೇಕೆಂದು ಆಜ್ಞೆ ಮಾಡಿದನು. ನಗರದಲ್ಲಿ ರೊಟ್ಟಿ ಇರುವವರೆಗೆ ಯೆರೆಮೀಯನಿಗೆ ರೊಟ್ಟಿಯನ್ನು ಕೊಡಲಾಯಿತು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಬಂಧಿಯಾಗಿದ್ದನು.
21 Então, ordenou o rei Zedequias que pusessem Jeremias no átrio da guarda; e deram-lhe um bolo de pão cada dia, da rua dos padeiros, até que se acabou todo o pão da cidade. Assim, ficou Jeremias no átrio da guarda.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Jeremias 37, comparar traduções ou montar um estudo — tudo direto pelo WhatsApp.