Jeremias 42
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs VC
1 ಅವರು ಗೇರುಥ್ ಕಿಮ್ಹಾಮಿನಲ್ಲಿಇಳಿದುಕೊಂಡಿದ್ದಾಗ ಯೋಹಾನಾನನೂ ಹೋಷಾಯನ ಮಗನಾದ ಯೆಜನ್ಯನೂ ಪ್ರವಾದಿಯಾದ ಯೆರೆಮೀಯನಲ್ಲಿಗೆ ಹೋದರು. ಯೋಹಾನಾನ ಮತ್ತು ಯೆಜನ್ಯನ ಸಂಗಡ ಎಲ್ಲಾ ಅಧಿಕಾರಿಗಳೂ ಅಪ್ರಮುಖರಿಂದ ಅತಿ ಪ್ರಮುಖವರೆಗಿನ ಎಲ್ಲಾ ಜನರೂ ಹೋದರು.
1 Foram, então, todos os oficiais, Joanã, filho de Carée, e Jesonias, filho de Osaías, bem como o povo, desde os grandes até os pequenos,
2 ಅವರೆಲ್ಲರೂ ಅವನಿಗೆ, “ಯೆರೆಮೀಯನೇ, ನಮ್ಮ ಬೇಡಿಕೆಯನ್ನು ದಯವಿಟ್ಟು ಕೇಳು. ಯೆಹೂದ ಕುಲದಲ್ಲಿ ಅಳಿದುಳಿದ ಎಲ್ಲಾ ಜನರಿಗಾಗಿ ನಿನ್ನ ದೇವರಾದ ಯೆಹೋವನನ್ನು ಪ್ರಾರ್ಥಿಸು. ಯೆರೆಮೀಯನೇ, ನಮ್ಮಲ್ಲಿ ಈಗ ಬಹಳ ಜನ ಉಳಿದಿಲ್ಲವೆಂಬುದು ನಿನಗೆ ಗೊತ್ತಿದೆ. ಒಂದು ಕಾಲದಲ್ಲಿ ನಾವು ಬಹಳ ಜನರಿದ್ದೆವು.
2 dizer ao profeta Jeremias: Ouve a nossa súplica, e intercede por nós, junto ao Senhor, em favor do que resta de nós. De muitos que éramos, bem podes ver a quão poucos fomos reduzidos.
3 ಯೆರೆಮೀಯನೇ, ನಾವು ಎಲ್ಲಿಗೆ ಹೋಗಬೇಕು, ಏನು ಮಾಡಬೇಕು ಎಂಬುದನ್ನು ಹೇಳಬೇಕೆಂದು ನಿನ್ನ ದೇವರನ್ನು ಪ್ರಾರ್ಥಿಸು” ಎಂದರು.
3 Que o Senhor, teu Deus, nos indique o caminho que devemos seguir e o que devemos fazer.
4 ಆಗ ಪ್ರವಾದಿಯಾದ ಯೆರೆಮೀಯನು, “ನಾನು ಏನು ಮಾಡಬೇಕೆಂದು ನೀವು ಬಯಸುವಿರೆಂಬುದು ನನಗೆ ಗೊತ್ತು. ನೀವು ಹೇಳಿದಂತೆಯೇ, ನಿಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸುವೆನು. ಯೆಹೋವನು ಹೇಳಿದ್ದನ್ನೆಲ್ಲವನ್ನು ನಾನು ನಿಮಗೆ ಹೇಳುತ್ತೇನೆ. ನಾನು ನಿಮ್ಮಿಂದ ಏನನ್ನೂ ಮುಚ್ಚಿಡುವದಿಲ್ಲ” ಎಂದನು.
4 Ouço o que me dizeis, respondeu Jeremias, e o que desejais vou solicitar ao Senhor, vosso Deus. O que me disser o Senhor vo-lo transmitirei fielmente.
5 ಆಗ ಅವರು, “ನಿನ್ನ ದೇವರಾದ ಯೆಹೋವನು ಹೇಳಿದ ಎಲ್ಲವನ್ನು ನಾವು ಮಾಡದಿದ್ದಲ್ಲಿ ಯೆಹೋವನು ಸಬತಃ ನಮ್ಮ ವಿರುದ್ಧ ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಲ್ಲಲಿ. ನಾವು ಏನು ಮಾಡಬೇಕೆಂಬುದನ್ನು ತಿಳಿಸಲು ನಿನ್ನ ದೇವರಾದ ಯೆಹೋವನು ನಿನ್ನನ್ನು ಕಳುಹಿಸುತ್ತಾನೆಂದು ನಾವು ಬಲ್ಲೆವು.
5 Clamaram então: Que o Senhor seja testemunha fiel e verdadeira contra nós se não fizermos o que o Senhor, teu Deus, te encarregar de nos transmitir!
6 ಯೆಹೋವನ ಸಂದೇಶವು ನಮಗೆ ಇಷ್ಟವಾಗಲಿ ಅಥವಾ ಇಷ್ಟವಾಗದಿರಲಿ ನಾವು ನಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸುತ್ತೇವೆ. ಯೆಹೋವನ ಸಂದೇಶಕ್ಕಾಗಿ ನಾವು ನಿನ್ನನ್ನು ಆತನಲ್ಲಿಗೆ ಕಳುಹಿಸುತ್ತಿದ್ದೇವೆ. ಆತನು ಹೇಳಿದಂತೆ ನಾವು ನಡೆದುಕೊಳ್ಳುತ್ತೇವೆ. ಆಗ ನಮಗೆ ಒಳ್ಳೆಯದಾಗುತ್ತದೆ. ಹೌದು, ನಮ್ಮ ದೇವರಾದ ಯೆಹೋವನು ಹೇಳಿದಂತೆಯೇ ನಾವು ನಡೆದುಕೊಳ್ಳುತ್ತೇವೆ” ಎಂದು ಹೇಳಿದರು.
6 Seja-nos favorável ou adverso, obedeceremos à ordem do Senhor, nosso Deus, junto ao qual te delegamos a fim de que nos seja propícia a submissão às ordens do Senhor, nosso Deus.
7 ಹತ್ತು ದಿನಗಳ ನಂತರ ಯೆರೆಮೀಯನಿಗೆ ಯೆಹೋವನಿಂದ ಸಂದೇಶ ಬಂದಿತು.
7 Decorridos dez dias, a palavra do Senhor foi dirigida a Jeremias.
8 ಆಗ ಯೆರೆಮೀಯನು ಕಾರೇಹನ ಮಗನಾದ ಯೋಹಾನಾನನನ್ನೂ ಅವನ ಜೊತೆಗಿದ್ದ ಸೇನಾಧಿಪತಿಗಳನ್ನೂ ಕರೆದನು. ಪ್ರಮುಖರು, ಅಪ್ರಮುಖರು ಎನ್ನದೆ ಒಟ್ಟಾಗಿ ಬರಲು ಎಲ್ಲಾ ಜನರನ್ನು ಯೆರೆಮೀಯನು ಕರೆದನು.
8 Convocou este então Joanã, filho de Carée, todos os oficiais e o povo, grandes e pequenos.
9 ಯೆರೆಮೀಯನು ಅವರಿಗೆ ಹೀಗೆ ಹೇಳಿದನು: “ಇಸ್ರೇಲರ ದೇವರಾದ ಯೆಹೋವನು ಹೀಗೆನ್ನುತ್ತಾನೆ. ನೀವು ನನ್ನನ್ನು ಆತನಲ್ಲಿಗೆ ಕಳುಹಿಸಿದಿರಿ. ನೀವು ಕೇಳೆಂದು ನನಗೆ ಹೇಳಿದ್ದನ್ನು ನಾನು ಯೆಹೋವನಿಗೆ ಕೇಳಿದೆ. ಯೆಹೋವನು ಹೀಗೆ ಹೇಳುತ್ತಾನೆ.
9 Eis, disse-lhes Jeremias, o que me falou o Senhor Deus de Israel, junto ao qual me delegastes a fim de apresentar-lhe a vossa súplica:
10 ‘ನೀವು ಯೆಹೂದದಲ್ಲಿ ವಾಸಮಾಡಿದರೆ ನಾನು ನಿಮ್ಮನ್ನು ನಾಶಮಾಡದೆ ಬಲಶಾಲಿಗಳನ್ನಾಗಿ ಮಾಡುತ್ತೇನೆ. ನಾನು ನಿಮ್ಮನ್ನು ನೆಡುತ್ತೇನೆ, ನಿಮ್ಮನ್ನು ಕೀಳುವುದಿಲ್ಲ. ನಾನು ನಿಮಗೆ ಬರಮಾಡಿದ ಭಯಂಕರವಾದ ಕೇಡಿಗಾಗಿ ದುಃಖಿತನಾಗಿದ್ದೇನೆ.
10 se quiserdes permanecer nesta terra, nela vos restaurarei, e não vos destruirei. Plantar-vos-ei e dela não vos arrancarei. Pesa-me o mal que vos fiz.
11 ಈಗ ನೀವು ಬಾಬಿಲೋನಿನ ರಾಜನಿಗೆ ಹೆದರಿದ್ದೀರಿ. ಆದರೆ ಅವನಿಗೆ ಅಂಜಬೇಡಿರಿ.’ ಇದು ಯೆಹೋವನ ನುಡಿ. ‘ಏಕೆಂದರೆ ನಾನು ನಿಮ್ಮೊಂದಿಗಿದ್ದೇನೆ. ನಾನೇ ನಿಮ್ಮನ್ನು ರಕ್ಷಿಸುವೆನು. ನಾನು ನಿಮ್ಮನ್ನು ಕಷ್ಟದಿಂದ ಪಾರು ಮಾಡುವೆನು. ಅವನ ಕೈಗೆ ನೀವು ಸಿಗುವುದಿಲ್ಲ.
11 Não tenhais receio do rei de Babilônia que tanto temeis! Não o temais - oráculo do Senhor -, porque estou convosco para salvar-vos e livrar-vos de suas mãos.
12 ನಾನು ನಿಮಗೆ ದಯೆತೋರುತ್ತೇನೆ. ಬಾಬಿಲೋನಿನ ರಾಜನು ಸಹ ನಿಮಗೆ ದಯೆತೋರುವನು. ಅವನು ನಿಮ್ಮನ್ನು ನಿಮ್ಮ ದೇಶಕ್ಕೆ ಮರಳಿ ತರುವನು.’
12 Conseguir-vos-ei as suas graças, e ele terá piedade de vós, devolvendo-vos a posse de vossa terra.
13 ಆದರೆ ‘ನಾವು ಯೆಹೂದದಲ್ಲಿ ವಾಸಿಸುವದಿಲ್ಲ’ವೆಂದು ನೀವು ಹೇಳಬಹುದು. ನೀವು ಹಾಗೆ ಹೇಳಿದರೆ ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಮೀರಿದಂತಾಗುತ್ತದೆ.
13 Se, porém, desobedecendo à voz do Senhor, disserdes: não permaneceremos aqui;
14 ‘ಇಲ್ಲ, ನಾವು ಈಜಿಪ್ಟಿಗೆ ಹೋಗಿ ಅಲ್ಲಿ ವಾಸಮಾಡುವೆವು. ಅಲ್ಲಿ ನಮಗೆ ಯುದ್ಧದ ಭಯವಿಲ್ಲ. ಯುದ್ಧದ ತುತ್ತೂರಿಗಳ ಶಬ್ಧವು ಕೇಳುವುದಿಲ್ಲ; ಅಲ್ಲಿ ನಮಗೆ ಹಸಿವೆ ಇರುವುದಿಲ್ಲ’ ಎಂದು ನೀವು ಹೇಳಬಹುದು.
14 iremos para o Egito, onde não teremos mais guerras, nem ouviremos mais o som da trombeta e onde o pão não nos faltará mais, e lá nos instalaremos -,
15 ಯೆಹೂದದ ಶ್ರೇಷ್ಠ ಜನಗಳೇ, ನೀವು ಒಂದುವೇಳೆ ಹಾಗೆ ಹೇಳುವುದಾದರೆ ಯೆಹೋವನ ಸಂದೇಶವನ್ನು ಕೇಳಿರಿ: ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ‘ನೀವು ಈಜಿಪ್ಟಿಗೆ ಹೋಗಿ ಅಲ್ಲಿ ವಾಸಮಾಡಬೇಕೆಂದು ತೀರ್ಮಾನಿಸಿದ್ದರೆ ಪರಿಸ್ಥಿತಿ ಹೀಗಾಗುವುದು:
15 então, escutai a palavra do Senhor, sobreviventes de Judá. Eis o que disse o Senhor dos exércitos, Deus de Israel: obstinando-vos em partir para o Egito, a fim de lá habitar,
16 ನೀವು ಯುದ್ಧದ ಖಡ್ಗಕ್ಕೆ ಹೆದರುವಿರಿ. ಆದರೆ ಅದು ನಿಮ್ಮನ್ನು ಅಲ್ಲಿ ಸೋಲಿಸುವುದು. ನಿಮಗೆ ಹಸಿವಿನ ಬಗ್ಗೆ ಯೋಚನೆಯಿದೆ. ಆದರೆ ಈಜಿಪ್ಟಿನಲ್ಲಿ ನೀವು ಹಸಿವಿನಿಂದ ಬಳಲುವಿರಿ. ನೀವು ಅಲ್ಲಿ ಸತ್ತುಹೋಗುವಿರಿ.
16 sereis atingidos no Egito pela espada que temeis, pela fome que vos aterroriza, e lá morrereis.
17 ಈಜಿಪ್ಟಿಗೆ ಹೋಗಿ ಅಲ್ಲಿ ನೆಲೆಸಬೇಕೆಂದು ನಿಶ್ಚಯಿಸಿದವರೆಲ್ಲರೂ ಖಡ್ಗದಿಂದಾಗಲಿ ಹಸಿವಿನಿಂದಾಗಲಿ ಭಯಂಕರ ವ್ಯಾಧಿಯಿಂದಾಗಲಿ ಸತ್ತುಹೋಗುವರು. ಈಜಿಪ್ಟಿಗೆ ಹೋದವರಲ್ಲಿ ಒಬ್ಬನೂ ಬಂದುಕಿರಲಾರ. ನಾನು ಅವರಿಗೆ ಉಂಟುಮಾಡುವ ಪೀಡೆಯಿಂದ ಒಬ್ಬನೂ ತಪ್ಪಿಸಿಕೊಳ್ಳಲಾರ.’
17 Quantos se obstinarem em ir para o Egito perecerão pela espada, fome e peste, e nenhum escapará ao flagelo que contra eles lançarei.
18 “ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನು ಹೀಗೆಂದನು: ‘ನಾನು ಜೆರುಸಲೇಮಿನ ಮೇಲೆ ನನ್ನ ಕೋಪವನ್ನು ತೋರಿಸಿದೆ. ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ನಾನು ದಂಡಿಸಿದೆ. ಅದೇ ರೀತಿ, ಈಜಿಪ್ಟಿಗೆ ಹೋಗುವವರೆಲ್ಲರ ಮೇಲೂ ನಾನು ನನ್ನ ಕೋಪವನ್ನು ತೋರಿಸುವೆನು. ಬೇರೆಯವರಿಗೆ ಕೆಟ್ಟದಾಗಲಿ ಎಂದು ಹೇಳಬೇಕಾದಾಗ ಜನರು ನಿಮ್ಮಂತೆ ಆಗಲಿ ಎಂದು ನಿಮ್ಮ ಉದಾಹರಣೆಯನ್ನು ಕೊಡುವರು. ನೀವು ಒಂದು ಶಾಪದ ಶಬ್ದವಾಗುವಿರಿ. ಜನರು ನಿಮ್ಮಿಂದ ನಾಚಿಕೆಪಟ್ಟುಕೊಳ್ಳುವರು. ಜನರು ನಿಮ್ಮನ್ನು ಅಪಮಾನ ಮಾಡುವರು. ಯೆಹೂದವನ್ನು ಪುನಃ ನೀವು ಎಂದೂ ನೋಡುವದಿಲ್ಲ.’
18 Porquanto, eis o que diz o Senhor dos exércitos, Deus de Israel: assim como o furor de minha cólera se lançou sobre os habitantes de Jerusalém, também contra vós se lançará, se fordes para o Egito. Servireis de exemplo de execração, sereis objeto de horror, de maldição e vergonha, e jamais tornareis a ver esses lugares.
19 “ಯೆಹೂದ್ಯರಲ್ಲಿ ಅಳಿದುಳಿದವರೇ, ಯೆಹೋವನು ನಿಮಗೆ, ‘ಈಜಿಪ್ಟಿಗೆ ಹೋಗಬೇಡಿರಿ.’ ಎಂದು ಹೇಳಿದ್ದಾನೆ, ನಾನು ಈಗಲೇ ನಿಮಗೆ ಮುನ್ನೆಚ್ಚರಿಕೆಯನ್ನು ಕೊಡುತ್ತೇನೆ.
19 Eis o que vos diz o Senhor, sobreviventes de Judá: não entreis no Egito, e sabei que hoje vos dou solene aviso.
20 ನೀವು ನಿಮಗೆ ಮರಣವನ್ನು ಬರಮಾಡುವ ತಪ್ಪನ್ನು ಮಾಡುತ್ತಿದ್ದೀರಿ. ನೀವು ನನ್ನನ್ನು ನಿಮ್ಮ ದೇವರಾದ ಯೆಹೋವನಲ್ಲಿಗೆ ಕಳುಹಿಸಿದಿರಿ. ‘ನಮಗಾಗಿ ಯೆಹೋವನಾದ ನಮ್ಮ ದೇವರನ್ನು ಪ್ರಾರ್ಥಿಸು. ದೇವರು ಮಾಡಬೇಕೆಂದು ಹೇಳಿದ್ದೆಲ್ಲವನ್ನು ನಮಗೆ ಹೇಳು, ನಾವು ಯೆಹೋವನ ಆಜ್ಞೆಯನ್ನು ಪಾಲಿಸುತ್ತೇವೆ’ ಎಂದು ನೀವು ಹೇಳಿದ್ದಿರಿ.
20 Seria enganar-vos a vós mesmos o delegar-me junto ao Senhor, vosso Deus, dizendo: intercedei por nós junto ao Senhor, nosso Deus. Faremos quanto disserdes que nos foi ordenado pelo Senhor, nosso Deus.
21 ಇಂದು, ನಾನು ನಿಮಗೆ ಯೆಹೋವನ ಸಂದೇಶವನ್ನು ತಿಳಿಸಿದ್ದೇನೆ. ಆದರೆ ನೀವು ನಿಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸಲಿಲ್ಲ. ನನ್ನ ಮೂಲಕ ಆತನು ನಿಮಗೆ ಹೇಳಿದ ಯಾವ ಮಾತನ್ನೂ ನೀವು ಕೇಳಲಿಲ್ಲ.
21 Hoje eu vo-lo digo: não escutastes a voz do Senhor, vosso Deus, nem coisa alguma do que me encarregou de transmitir-vos.
22 ಈಗ ನೀವು ಇದನ್ನು ನಿಶ್ಚಿತವಾಗಿ ತಿಳಿದುಕೊಳ್ಳಿ. ನೀವು ಈಜಿಪ್ಟಿನಲ್ಲಿ ವಾಸಮಾಡಲು ಹೋಗಬೇಕೆನ್ನುವಿರಿ. ಆದರೆ ಈಜಿಪ್ಟಿನಲ್ಲಿ ನೀವು ಖಡ್ಗದಿಂದಾದರೂ ಸಾಯುವಿರಿ, ಹಸಿವಿನಿಂದಾದರೂ ಸಾಯುವಿರಿ, ಅಥವಾ ಭಯಂಕರವಾದ ವ್ಯಾಧಿಯಿಂದಾದರೂ ಸಾಯುವಿರಿ.”
22 Sabei, pois, que morrereis pela espada, fome e peste nessa terra onde quereis ir estabelecer-vos.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Jeremias 42, comparar traduções ou montar um estudo — tudo direto pelo WhatsApp.