Jeremias 43
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NTLH
1 ಯೆರೆಮೀಯನು ದೇವರಾದ ಯೆಹೋವನ ಸಂದೇಶವನ್ನು ಜನರಿಗೆ ಹೇಳಿ ಮುಗಿಸಿದನು. ಯೆಹೋವನು ತನ್ನ ಮೂಲಕ ಹೇಳಿ ಕಳುಹಿಸಿದ ಮಾತುಗಳನ್ನೆಲ್ಲ ಯೆರೆಮೀಯನು ಅವರಿಗೆ ತಿಳಿಸಿದನು.
1 Quando acabei de dizer ao povo tudo o que o Senhor , seu Deus, havia ordenado,
2 ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಮತ್ತು ಇನ್ನೂ ಕೆಲವರು ದುರಹಂಕಾರಿಗಳಾಗಿದ್ದರು ಮತ್ತು ಹಟಮಾರಿಗಳಾಗಿದ್ದರು. ಈ ಜನರು ಯೆರೆಮೀಯನ ಮೇಲೆ ಕೋಪಗೊಂಡು, “ಯೆರೆಮೀಯನೇ, ನೀನು ಸುಳ್ಳು ಹೇಳುತ್ತಿರುವೆ. ನಮ್ಮ ದೇವರಾದ ಯೆಹೋವನು ನಮಗೆ, ‘ನೀವು ಈಜಿಪ್ಟಿಗೆ ವಾಸಮಾಡಲು ಹೋಗಬಾರದು’ ಎಂದು ಹೇಳುವದಕ್ಕಾಗಿ ನಿನ್ನನ್ನು ಕಳುಹಿಸಿಲ್ಲ.
2 Azarias, filho de Hosaías, e Joanã, filho de Careá, e todos os homens orgulhosos me disseram: — Você está mentindo, Jeremias. O
3 ಯೆರೆಮೀಯನೇ, ನೀನು ನಮ್ಮ ವಿರುದ್ಧವಾಗಿರುವಂತೆ ನೇರೀಯನ ಮಗನಾದ ಬಾರೂಕನು ಪ್ರೋತ್ಸಾಹಿಸುತ್ತಿದ್ದಾನೆ ಎಂಬುದು ನಮ್ಮ ಆಲೋಚನೆ. ಅವನು ನಮ್ಮನ್ನು ಬಾಬಿಲೋನಿನ ಜನರ ಕೈಗೆ ಕೊಟ್ಟು ಅವರಿಂದ ಕೊಲ್ಲಿಸಬಯಸುತ್ತಾನೆ ಅಥವಾ ಅವರು ನಮ್ಮನ್ನು ಸೆರೆಹಿಡಿದು ಬಾಬಿಲೋನಿಗೆ ಕೊಂಡೊಯ್ಯುವಂತೆ ಮಾಡಬಯಸುತ್ತಾನೆಂದು ತೋರುತ್ತದೆ” ಎಂದು ಹೇಳಿದರು.
3 Baruque, filho de Nerias, é que está jogando você contra nós para nos entregar nas mãos dos babilônios a fim de sermos mortos ou levados para a Babilônia.
4 ಯೋಹಾನಾನನು, ಸೇನಾಧಿಪತಿಗಳು ಮತ್ತು ಎಲ್ಲಾ ಜನರು ಯೆಹೋವನ ಆಜ್ಞೆಯನ್ನು ಮೀರಿದರು. ಯೆಹೂದದಲ್ಲಿ ಇರಬೇಕೆಂದು ಯೆಹೋವನು ಅವರಿಗೆ ಆಜ್ಞಾಪಿಸಿದನು.
4 Assim Joanã, e os oficiais do exército, e todo o povo não quiseram obedecer à ordem que o Senhor Deus tinha dado para ficar em Judá.
5 ಆದರೆ ಯೆಹೋವನ ಆಜ್ಞೆಯನ್ನು ಉಲ್ಲಂಘಿಸಿ ಯೋಹಾನಾನನು ಮತ್ತು ಸೇನಾಧಿಪತಿಗಳು ಅಳಿದುಳಿದ ಜನರನ್ನು ಯೆಹೂದದಿಂದ ಈಜಿಪ್ಟಿಗೆ ಕರೆದುಕೊಂಡು ಹೋದರು. ಈ ಮುಂಚೆ ಶತ್ರುಗಳು ಆ ಜನರನ್ನು ಬೇರೆ ದೇಶಗಳಿಗೆ ತೆಗೆದುಕೊಂಡು ಹೋಗಿದ್ದರು. ಆದರೆ ಅವರು ಯೆಹೂದಕ್ಕೆ ತಿರುಗಿ ಬಂದಿದ್ದರು.
5 Então Joanã e os oficiais do exército levaram para o Egito todos os que haviam ficado em Judá. Levaram todas as pessoas que viviam em Judá e que tinham voltado das nações onde haviam sido espalhadas:
6 ಈಗ ಯೋಹಾನಾನ ಮತ್ತು ಎಲ್ಲಾ ಸೈನ್ಯಾಧಿಕಾರಿಗಳು, ಎಲ್ಲಾ ಗಂಡಸರು, ಹೆಂಗಸರು ಮತ್ತು ಮಕ್ಕಳನ್ನು ಈಜಿಪ್ಟಿಗೆ ತೆಗೆದುಕೊಂಡು ಹೋದರು. ಆ ಜನಗಳಲ್ಲಿ ರಾಜನ ಹೆಣ್ಣುಮಕ್ಕಳಿದ್ದರು. (ನೆಬೂಜರದಾನನು ಗೆದಲ್ಯನನ್ನು ಆ ಜನರ ಮೇಲಿಬಚಾರಕನನ್ನಾಗಿ ನೇಮಿಸಿದ್ದನು. ನೆಬೂಜರದಾನನು ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು). ಯೋಹಾನಾನನು ಪ್ರವಾದಿಯಾದ ಯೆರೆಮೀಯನನ್ನು ಮತ್ತು ನೇರೀಯನ ಮಗನಾದ ಬಾರೂಕನನ್ನು ತೆಗೆದುಕೊಂಡು ಹೋದನು.
6 homens, mulheres, crianças e as filhas do rei. Levaram todos os que o comandante-geral Nebuzaradã tinha deixado aos cuidados de Gedalias. E Baruque e eu também fomos obrigados a ir.
7 ಆ ಜನರು ಯೆಹೋವನ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಆ ಎಲ್ಲಾ ಜನರು ಈಜಿಪ್ಟಿಗೆ ಹೋದರು. ಅವರು ತಹಪನೇಸ್ ಎಂಬ ಊರಿಗೆ ಸೇರಿದರು.
7 Assim desobedeceram a Deus e foram para o Egito e chegaram até a cidade de Tafnes.
8 ತಹಪನೇಸ್ ಊರಿನಲ್ಲಿ ಯೆರೆಮೀಯನಿಗೆ ಯೆಹೋವನಿಂದ ಈ ಸಂದೇಶ ಬಂದಿತು:
8 Em Tafnes Deus me disse:
9 “ಯೆರೆಮೀಯನೇ, ನೀನು ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದುಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಬಾಗಿಲ ಮುಂದೆ ಹೂಳಿ ಗಾರೆಯಿಂದ ಮುಚ್ಚಿಬಿಡು. ಯೆಹೂದದ ಜನರ ಎದುರಿನಲ್ಲಿಯೇ ಹೀಗೆ ಮಾಡು.
9 — Jeremias, pegue algumas pedras grandes e enterre-as no barro que está no calçamento que fica em frente do palácio do governo, aqui na cidade. E deixe que alguns judeus vejam você fazer isso.
10 ನಿನ್ನನ್ನು ನೋಡುತ್ತಿದ್ದ ಆ ಯೆಹೂದ್ಯರಿಗೆ ಹೀಗೆ ಹೇಳು: ‘ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಇಲ್ಲಿಗೆ ಕರೆಸುತ್ತೇನೆ. ಅವನು ನನ್ನ ಸೇವಕನಾಗಿದ್ದಾನೆ. ನಾನು ಈ ಸ್ಥಳದಲ್ಲಿ ಹೂಳಿದ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಸ್ಥಾಪಿಸುತ್ತೇನೆ. ನೆಬೂಕದ್ನೆಚ್ಚರನು ಈ ಕಲ್ಲುಗಳ ಮೇಲೆ ತನ್ನ ಗುಡಾರವನ್ನು ಹಾಕುವನು.
10 Depois, diga a eles o seguinte: “Eu, o Senhor Todo-Poderoso, o Deus de Israel, mandarei vir o meu servo Nabucodonosor, rei da Babilônia. Ele vai pôr o seu trono em cima dessas pedras que você enterrou e vai armar a barraca real sobre elas.
11 ನೆಬೂಕದ್ನೆಚ್ಚರನು ಇಲ್ಲಿಗೆ ಬಂದು ಈಜಿಪ್ಟಿನ ಮೇಲೆ ಧಾಳಿ ಮಾಡುವನು. ಕೊಲ್ಲಬೇಕೆಂದು ಗೊತ್ತುಮಾಡಿದವರನ್ನು ಕೊಂದುಹಾಕುವನು; ಸೆರೆಹಿಡಿಯಬೇಕೆಂದು ಗೊತ್ತು ಮಾಡಿಕೊಂಡವರನ್ನು ಸೆರೆಹಿಡಿಯುವನು; ಖಡ್ಗದಿಂದ ಕೊಲೆಯಾಗಬೇಕೆಂದು ಗೊತ್ತುಪಡಿಸಿದವರ ಸಲುವಾಗಿ ಅವನು ಖಡ್ಗವನ್ನು ತರುವನು.
11 Nabucodonosor virá e derrotará o Egito. Os que tiverem de morrer de doença morrerão de doença; os que tiverem de cair prisioneiros serão levados como prisioneiros; e os que tiverem de morrer na guerra morrerão na guerra.
12 ಈಜಿಪ್ಟಿನ ಸುಳ್ಳುದೇವರುಗಳ ಆಲಯದಲ್ಲಿ ನೆಬೂಕದ್ನೆಚ್ಚರನು ಬೆಂಕಿಯನ್ನು ಹೊತ್ತಿಸುವನು, ಅವನು ಆಲಯಗಳನ್ನು ಸುಟ್ಟು ಆ ವಿಗ್ರಹಗಳನ್ನು ತೆಗೆದುಕೊಂಡು ಹೋಗುವನು. ಕುರುಬನು ತನ್ನ ಬಟ್ಟೆಗಳಿಂದ ತಿಗಣೆ ಮತ್ತು ಹೇನುಗಳನ್ನು ತೆಗೆದುಹಾಕಿ ಸಬಚ್ಛಗೊಳಿಸುವಂತೆ ನೆಬೂಕದ್ನೆಚ್ಚರನು ಈಜಿಪ್ಟನ್ನು ಬಿಟ್ಟು ಹೋಗುವನು.
12 Eu queimarei os templos dos deuses do Egito; farei com que o rei da Babilônia ponha fogo nesses deuses ou os leve embora. Assim como o pastor cata os piolhos das suas roupas para limpá-las, também o rei da Babilônia limpará a terra do Egito e sairá dali vitorioso.
13 ನೆಬೂಕದ್ನೆಚ್ಚರನು ಈಜಿಪ್ಟಿನ ಸೂರ್ಯ ದೇವಾಲಯದಲ್ಲಿದ್ದ ಸ್ಮಾರಕಸ್ತಂಭಗಳನ್ನು ನಾಶಪಡಿಸುವನು. ಅವನು ಈಜಿಪ್ಟಿನ ಸುಳ್ಳುದೇವರುಗಳ ಆಲಯಗಳನ್ನು ಸುಟ್ಟುಹಾಕುವನು.’”
13 Ele destruirá os monumentos sagrados de Heliópolis, no Egito, e queimará os templos dos deuses egípcios.”
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Jeremias 43, comparar traduções ou montar um estudo — tudo direto pelo WhatsApp.